ಕುಂದಾಪುರ: ಕಾರೊಂದು ಹೆದ್ದಾರಿಯಿಂದ ಸಮುದ್ರಕ್ಕೆ ಬಿದ್ದು ಓರ್ವ ಸಾವನ್ನಪ್ಪಿ, ಮತ್ತೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಶನಿವಾರ ತಡರಾತ್ರಿ ಮರವಂತೆಯಲ್ಲಿ ಸಂಭವಿಸಿದೆ. ವೀರೇಶ್ ಆಚಾರ್ಯ (28) ಮೃತಪಟ್ಟವರು. ಕುಂದಾಪುರದ ಕೋಟೇಶ್ವರ ಬಳಿಯಿಂದ ಬೈಂದೂರು ಕಡೆಗೆ ತೆರಳುತ್ತಿದ್ದ ಕಾರು ಮರವಂತೆಯ ಮಾರಸ್ವಾಮಿ ದೇವಸ್ಥಾನದ ಬಳಿ ಹೆದ್ದಾರಿಯಿಂದ ಸಮುದ್ರಕ್ಕೆ ಬಿದ್ದಿದೆ. ಕಾರಿನಲ್ಲಿ ನಾಲ್ವರು ಪ್ರಯಾಣಿಸುತ್ತಿದ್ದು, ಓರ್ವರು ಸಾವನ್ನಪ್ಪಿದ್ದಾರೆ. ಮತ್ತೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು, ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಗ್ನಿಶಾಮಕ ಸಿಬಂದಿ ಸ್ಥಳಕ್ಕಾಗಮಿಸಿ ಕಾರನ್ನು ಮೇಲಕ್ಕೆತ್ತಿದ್ದಾರೆ. ಗಂಗೊಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Author: main-admin
ಕಾಪು: ರಾಷ್ಟ್ರೀಯ ಹೆದ್ದಾರಿ 66 ಹೆಜಮಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಎದುರು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಖಾಸಗಿ ವೇಗದೂತ ಬಸ್ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಸಣ್ಣಪುಟ್ಟ ಗಾಯಗಳಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಹೆಜಮಾಡಿ ಟೋಲ್ ಸುರಕ್ಷತಾ ಅಧಿಕಾರಿ ಶೈಲೇಶ್ ಶೆಟ್ಟಿ, ಟೋಲ್ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಆಗಮಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರಕ್ಕೆ ಕರೆ ತರುವಲ್ಲಿ ಸಹಕರಿಸಿದ್ದಾರೆ. ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಂಗಳೂರು : ನಗರದಿಂದ ರಾಷ್ಟ್ರದ ರಾಜಧಾನಿ ಡೆಲ್ಲಿ ನಡುವೆ ನೇರ ವಿಮಾನಯಾನ ಸೇವೆ ಪ್ರಾರಂಭಗೊಂಡಿದೆ. ಮಂಗಳೂರು – ಡೆಲ್ಲಿ ನಡುವೆ ವಿಮಾನಯಾನ ಸೇವೆ ಆರಂಭಿಸಬೇಕೆಂಬ ಹಲವು ದಿನಗಳ ಬೇಡಿಕೆ ಕೊನೆಗೂ ಈಡೇರಿದೆ. ಇಂಡಿಗೋ ವಿಮಾನ ಸಂಸ್ಥೆಯು ತನ್ನ ಮೊದಲ ಸಂಚಾರವನ್ನು ಶುಕ್ರವಾರ ಆರಂಭಿಸಿದೆ. ಡೆಲ್ಲಿಯಿಂದ ಪ್ರಯಾಣಿಕರನ್ನು ಹೊತ್ತೊಯ್ದ ವಿಮಾನವು ಬೆಳಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದೆ. ಅದೇ ರೀತಿ 140 ಪ್ರಯಾಣಿಕರನ್ನು ಮಂಗಳೂರು ವಿಮಾನ ನಿಲ್ದಾಣದಿಂದ ಹೊತ್ತೊಯ್ದ ವಿಮಾನವು 10.40ಕ್ಕೆ ಮರಳಿ ಡೆಲ್ಲಿ ತಲುಪಿದೆ. ವಾರದಲ್ಲಿ ಸೋಮವಾರ , ಬುಧವಾರ, ಶುಕ್ರವಾರ ಹಾಗೂ ರವಿವಾರ ಸೇರಿದಂತೆ ವಾರದಲ್ಲಿ ನಾಲ್ಕು ದಿನಗಳಲ್ಲಿ ಈ ವಿಮಾನ ಸಂಚಾರ ಇರಲಿದೆ. ಈಗಾಗಲೇ ಮಂಗಳೂರು-ಪೂನಾ-ಡೆಲ್ಲಿ ನಡುವೆ ವಿಮಾನ ಸಂಚಾರ ನಡೆಯುತ್ತಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನು ಡೆಲ್ಲಿ ನೇರ ವಿಮಾನದಿಂದ ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲವಾಗಲಿದೆ.
ಇಂಫಾಲ: ಮಣಿಪುರದ ನೋನಿ ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿ ಮೃತಪಟ್ಟವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಪ್ರಾಂತೀಯ ಸೇನೆಯ ತೂಪುಲ್ ರೈಲ್ವೆ ನಿರ್ಮಾಣ ಕಾಮಗಾರಿ ಶಿಬಿರದ ಬಳಿ ಬೆಟ್ಟ ಕುಸಿದು ದುರಂತ ಸಂಭವಿಸಿದ್ದು, ಇನ್ನೂ ಹಲವರು ಸಿಲುಕಿರುವ ಶಂಕೆ ಇದೆ. ಅವರನ್ನು ಹೊರತೆಗೆಯುವ ಕಾರ್ಯಾಚರಣೆ ಮುಂದುವರೆದಿದೆ. ಜಿರಿಬಾಂಬ್‍ನಿಂದ ಇಂಫಾಲವರೆಗಿನ ರೈಲ್ವೆ ಹಳಿ ಕಾವಲಿಗೆ ನಿಯೋಜಿಸಲಾಗಿದ್ದ ಭಾರತೀಯ ಸೇನೆಯ 107 ಟೆರಿಟೋರಿಯಲ್ ಆರ್ಮಿ ಶಿಬಿರಕ್ಕೆ ಗುಡ್ಡಕುಸಿತದಿಂದ ವ್ಯಾಪಕ ಹಾನಿಯಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‍ಡಿಆರ್‍ಎಫ್) ಮತ್ತು ಎಸ್‍ಡಿಆರ್‍ಎಫ್ ಹೆಚ್ಚುವರಿ ತಂಡಗಳು ಸಿಲ್ವರ್ ಮತ್ತು ಕೊಯಮಾದಿಂದ ಆಗಮಿಸಿದ್ದು, ಸ್ಥಳೀಯ ಶೋಧನಾ ತಂಡಗಳ ಜತೆ ಕಾರ್ಯಾಚರಣೆ ಮುಂದುವರೆಸಿವೆ ಎಂದು ಉಪವಿಭಾಗಾಧಿಕಾರಿ ಸೋಲಮನ್ ಎಲ್.ಫಿಮೆಟ್ ಹೇಳಿದ್ದಾರೆ. ಇದು ರಾಜ್ಯದ ಇತಿಹಾಸದಲ್ಲಿ ಭೀಕರ ಭೂ ಕುಸಿತದ ಪ್ರಕರಣವಾಗಿದ್ದು, 2ಕಿ.ಮೀ. ವ್ಯಾಪ್ತಿಯಲ್ಲಿ ಹರಡಿದೆ ಎಂದು ತಿಳಿಸಿದ್ದಾರೆ. ಇದುವರೆಗೂ 13 ಮಂದಿ ಸೇನಾ ಸಿಬ್ಬಂದಿ, 5 ಮಂದಿ ನಾಗರಿಕರನ್ನು ರಕ್ಷಿಸಲಾಗಿದೆ. ನಾಪತ್ತೆಯಾಗಿರುವ 29 ಮಂದಿ ನಾಗರಿಕರಿಗೆ ಶೋಧಕಾರ್ಯ ಮುಂದುವರೆಸಲಾಗಿದೆ. ಈ…
ಕಾಸರಗೋಡು: ಜಿಲ್ಲೆಯ ಕಳೆದ ಎರಡು ಮೂರು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಅಲ್ಲಲ್ಲಿ ಅಪಾರ ನಾಶ ನಷ್ಟ ಉಂಟಾಗಿದ್ದು, ಜನ ಜೀವನ ಅಸ್ಥವ್ಯಸ್ಥಗೊಂಡಿದೆ . ಶುಕ್ರವಾರ ರಾತ್ರಿ ಸುರಿದ ಬಾರಿ ಮಳೆಗೆ ಒಡೆಯಂಚಾಲ್ ಚೆರುಪ್ಪುಯದಲ್ಲಿ ಗುಡ್ಡಕುಸಿತ ಉಂಟಾಗಿದೆ. ಚೆರುಪ್ಪುಯ ಒಡೆಯಂಚಾಲ್ ನಲ್ಲಿ ರಸ್ತೆ ಮೇಲೆ ಗುಡ್ಡ ಜರಿದು ಬಿದ್ದಿದ್ದು , ಇದರಿಂದ ಸಂಚಾರ ಅಸ್ತವ್ಯಸ್ಥಗೊಂಡಿದೆ. ಮಣ್ಣು ತೆರೆವುಗೊಳಿಸುವ ಕಾರ್ಯ ನಡೆಯುತ್ತಿದೆ. ಇನ್ನೊಂದೆಡೆ ಮನೆಯ ಹಿಂಬದಿಯ ಗುಡ್ಡ ಕುಸಿದು ಬಿದ್ದ ಘಟನೆಯೂ ನಡೆದಿದೆ. ಮನೆಗೆ ಭಾಗಶಃ ಹಾನಿ ಉಂಟಾಗಿದೆ . ಜಿಲ್ಲೆಯಲ್ಲಿ ನದಿಗಳು ಉಕ್ಕಿ ಹರಿಯುತ್ತಿದೆ. ತಗ್ಗು ಪ್ರದೇಶದ ಹಲವು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಲವು ರಸ್ತೆಗಳು ಹಾನಿಗೊಂಡಿದೆ.
ಬೆಂಗಳೂರು;ಮೂರುವರೆ ವರ್ಷದ ಮಗುವಿನ ಕುತ್ತಿಗೆಗೆ ಶಾಲ್ ಬಿಗಿದು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನ ಆರ್ ಆರ್ ನಗರದಲ್ಲಿ ನಡೆದಿದೆ. ಮಗು ರಿಯಾಳನ್ನು ಕೊಂದ ತಾಯಿ ದೀಪಾ (31) ನೇಣು ಬಿಗಿದುಕೊಂಡಿದ್ದಾರೆ. ಸ್ಥಳದಲ್ಲಿ ಡೆತ್ ನೋಟು ಸಿಕ್ಕಿದ್ದು, ನನ್ನ ಸಾವಿಗೆ ಯಾರೂ ಕಾರಣರಲ್ಲ ಸಾರಿ ಅಮ್ಮ ಎಂದು ಬರೆದಿರುವುದು ಪತ್ತೆಯಾಗಿದೆ. ಮೂಲತಃ ಬ್ರಹ್ಮಾವರದ ದೀಪಾ ಅವರು RR ನಗರದ ಅಪಾರ್ಟೆಂಟ್ ನಲ್ಲಿ ಪತಿ ಜೊತೆ ವಾಸವಾಗಿದ್ದರು. ಕಳೆದ ಒಂದು ವಾರದಿಂದ ಜ್ವರ ಮತ್ತು ಹೊಟ್ಟೆ ನೋವಿನಿಂದ ದೀಪಾ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಜ್ವರ ಮತ್ತು ಹೊಟ್ಟೆ ನೋವು ಹಿನ್ನೆಲೆ ಚಿಕಿತ್ಸೆ ಕೂಡಾ ಪಡೆಯುತ್ತಿದ್ದರು. ಆದರೆ ರಾತ್ರಿ ಎಲ್ಲರೂ ಮಲಗಿದ್ದ ವೇಳೆ ಮಗುವಿನ ಕುತ್ತಿಗೆಗೆ ವೇಲ್ ಬಿಗಿದು ನೇಣು ಹಾಕಿ ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬ್ರಹ್ಮಾವರ: ಮನೆಯೊಂದಕ್ಕೆ ನುಗ್ಗಿದ ಕಳ್ಳರು 90,000 ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿರುವ ಘಟನೆ ತಾಲೂಕಿನ ಹೇರಾಡಿಯಲ್ಲಿ ನಡೆದಿದೆ. ಸಹಕಾರಿ ಸಂಘವೊಂದರಲ್ಲಿ ಕ್ಲರ್ಕ್ ಆಗಿ ಉದ್ಯೋಗ ಮಾಡಿಕೊಂಡಿರುವ, ಹೇರಾಡಿ ಗ್ರಾಮದ ಬಾರ್ಕೂರಿನ ಸಂಗೀತಾ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದ್ದು, ನಿನ್ನೆ ಬೆಳಿಗ್ಗೆ ಸಂಗೀತಾ ಅವರು ಮನೆಗೆ ಬೀಗ ಹಾಕಿ ಕೆಲಸಕ್ಕೆ ಹೋಗಿದ್ದರು. ಸಂಜೆ ವೇಳೆ ಕೆಲಸ ಮುಗಿಸಿ ಮನೆಗೆ ಬಂದಾಗ ಮನೆಯಲ್ಲಿ ಕಳ್ಳತನ ನಡೆದಿರುವುದು ಗಮನಕ್ಕೆ ಬಂದಿದೆ. ಮನೆಯ ಬಾಗಿಲಿನ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು ಮನೆಯಲ್ಲಿದ್ದ ಕಬ್ಬಿಣದ ಟ್ರಂಕ್ ನ ಬೀಗ ಒಡೆದು ಅದರ ಒಳಗೆ ಇದ್ದ ಅಂದಾಜು 90,000 ರೂ. ಮೌಲ್ಯದ ಚಿನ್ನ ಹಾಗೂ ಬೆಳ್ಳಿಯ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ: ಕೆಂಪು ಮಳೆ ಬಿದ್ದಿರುವ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಎಂಬಲ್ಲಿ ನಡೆದಿದೆ. ಶಿರ್ಲಾಲು ನಿವಾಸಿ ಸೂರ್ಯನಾರಾಯಣ ಭಟ್ ಅವರ ಮನೆಯಲ್ಲಿ ಬಕೆಟ್, ಡ್ರಮ್ ಗಳಲ್ಲಿ ಕೆಂಪು ನೀರು ತುಂಬಿಕೊಂಡಿರುವುದು ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಈ ನೀರನ್ನು ಪರೀಕ್ಷೆ ನಡೆಸಲು ಕಳುಹಿಸಲಾಗಿದೆ. ಪರಿಸರದಲ್ಲಿ ಒಂದೇ ಮನೆ ಇದ್ದು, ಒಂದು ಕಿ.ಮೀ.ದೂರದಲ್ಲಿ ಇರುವ ಶಿರ್ಲಾಲು ಪೇಟೆಯಲ್ಲಿ ಇಟ್ಟಿರುವ ಬಕೆಟ್‌ನಲ್ಲಿ ಕೆಂಪು ನೀರು ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ. ಇದೀಗ ಅಳದಂಗಡಿ ಪರಿಸರದ ವಿವಿಧೆಡೆಗಳಲ್ಲಿಯೂ ಕೆಂಪು ಮಳೆ ಬಂದಿರುವುದಾಗಿ ತಿಳಿದು ಬಂದಿದೆ. ಇದಕ್ಕೆ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ.
ಕುಂದಾಪುರ: ಸಪ್ಲಿಮೆಂಟರಿ ಪರೀಕ್ಷೆ ಬರೆದ ವಿದ್ಯಾರ್ಥಿನಿ ಫಲಿತಾಂಶ ಬರುವ ಮೊದಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.30 ರ ಗುರುವಾರ ಶಂಕರನಾರಾಯಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಂಕರನಾರಾಯಣ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿ, ಕುಂದಾಪುರ ತಾಲೂಕು ಶಂಕರನಾರಾಯಣ ಗ್ರಾಮ ದ ಒಡ್ಡನಗದ್ದೆ ಬಾಬಣ್ಣ ಕುಲಾಲರ ಮಗಳು ಮಾನಸ (17) ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದಾಳೆ. ಎಪ್ರಿಲ್ ತಿಂಗಳ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದು ಮನೆಯಲ್ಲಿಯೇ ಇದ್ದು ಜೂನ್ ತಿಂಗಳ ಸಪ್ಲಿಮೆಂಟರಿ ಪರೀಕ್ಷೆಗೆ ಕಟ್ಟಿದ್ದು, ಜೂನ್ ೩೦ ರಂದು ಪ್ರಥಮ ಪಿಯುಸಿಯ ಫಲಿತಾಂಶವಾಗಿದ್ದರಿಂದ ಮಾನಸಳು ತಾನು ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಬಹುದು ಎಂದು ಭಯಪಟ್ಟೂ ಗುರುವಾರ ಮನೆಯಲ್ಲಿ ಯಾರೂ ಇಲ್ಲದ ಸಮಯ ತನ್ನ ಮನೆಯ ಬಳಿ ಇರುವ ಹುಲ್ಲು ಹಾಕುವ ಕೊಟ್ಟಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಳ್ಯ ತಾಲೂಕಿನ ಹಲವೆಡೆ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಮಧ್ಯ ರಾತ್ರಿ 1.15 ರ ಸುಮಾರಿಗೆ ಗಾಢ ನಿದ್ರೆಯಲ್ಲಿದ್ದ ಜನರನ್ನು ಕಂಪನ ಹಾಗೂ ಶಬ್ದ ಬಡಿದೆಬ್ಬಿಸಿ ಆತಂಕಕ್ಕೆ ನೂಕುವಂತೆ ಮಾಡಿದೆ. ಕಳೆದೊಂದು ವಾರದಿಂದ ಮೂರು ಬಾರಿ ಭೂಮಿ ಕಂಪಿಸಿ ಆತಂಕ ಸೃಷ್ಟಿಯಾದ ಅದೇ ಪರಿಸರದಲ್ಲಿ ಶುಕ್ರವಾರ ಶನಿವಾರದ ನಡುವಿನ ಮಧ್ಯರಾತ್ರಿ ವೇಳೆಗೆ ಮತ್ತೆ ಭೂಕಂಪನವಾಗಿದೆ.ಮಧ್ಯ ರಾತ್ರಿ 1.15 ರ ಸುಮಾರಿಗೆ ಈ ಕಂಪನ ಉಂಟಾಗಿದ್ದು ಆರಂಭದಲ್ಲಿ ದೊಡ್ಡ ಶಬ್ದ ಕೇಳಿತು. ಬೆನ್ನಿಗೇ ಅಲುಗಾಡಿದ ಅನುಭವವಾಯಿತು ಎಂದು ಜನ ಹೇಳಿಕೊಂಡಿದ್ದಾರೆ. ಕೆಲವರಿಗೆ ಒಂದೆರಡು ಸೆಕೆಂಡುಗಳ ವ್ಯತ್ಯಾಸದಲ್ಲಿ ಎರಡು ಬಾರಿ ಈ ಅನುಭವವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.ಸಂಪಾಜೆ, ಚೆಂಬು, ತೊಡಿಕಾನ, ಪೆರಾಜೆ, ಬಡ್ಡಡ್ಕ, ಸುಳ್ಯ, ಉಬರಡ್ಕ, ಎಲಿಮಲೆ, ಗುತ್ತಿಗಾರು ಪರಿಸರಗಳಲ್ಲಿ ಈ ಕಂಪನದ ಅನುಭವವಾಗಿದೆ.ಕಳೆದ ಎರಡು ವಾರಗಳಲ್ಲಿ ಇದು ನಾಲ್ಕನೇ ಬಾರಿಯ ಕಂಪನವಾಗಿದ್ದು ಕಂಪನದ ತೀವ್ರತೆ ಇನ್ನಷ್ಟೇ ತಿಳಿದು ಬರಬೇಕಾಗಿದೆ.