ಬೆಳ್ತಂಗಡಿ ಕುಕ್ಕೇಡಿ ಸ್ಪೋಟ ಪ್ರಕರಣವನ್ನು ಎನ್.ಐ.ಎ ಗೆ ವಹಿಸಲು ಹಿಂದೂ ಜಾಗರಣ ವೇದಿಕೆ ಆಗ್ರಹ ಮಾಡಿದೆ. ಈ ಬಗ್ಗೆ ಹೇಳಿಕೆ ನೀಡಿರುವ ಹಿಂಜಾವೇ ಜಿಲ್ಲಾ ಸಂಯೋಜಕ ಮೋಹನ್ ದಾಸ್ ಅವರು ಕುಕ್ಕೇಟಿಯಲ್ಲಿ ಭಾನುವಾರ ನಡೆದ ಸ್ಫೋಟದ ತೀವೃತೆ ಅತೀ ಹೆಚ್ಚಾಗಿತ್ತು. ಕೇವಲ ಪಟಾಕಿ ತಯಾರಿಕಾ ಘಟಕದಲ್ಲಿ ಇಂಥಹ ತೀವೃತೆ ಇರಲು ಸಾಧ್ಯವಿಲ್ಲ ಮತ್ತು ಸ್ಫೋಟದ ತೀವೃತೆ 4 ಕಿಲೋಮೀಟರ್ ವರೆಗೂ ವ್ಯಾಪಿಸಿತ್ತು. ಸ್ಪೋಟಕ್ಕೆ ಸಿಲುಕಿದ ಕಾರ್ಮಿಕರ ಮೃತದೇಹ ಛಿದ್ರ ಛಿದ್ರವಾಗಿದೆ. ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟ ಮತ್ತು ಕೇರಳದ ಚರ್ಚ್ ನಲ್ಲಿ ನಡೆದ ಬಾಂಬ್ ಸ್ಪೋಟಕ್ಕೂ ಈ ಘಟನೆಗೂ ಸಾಮ್ಯತೆ ಇರುವ ಸಾಧ್ಯತೆಯಿದೆ ಎಂದು ಶಂಕೆ ವ್ಯಕ್ತಪಡಿಸಿದ ಅವರು ಪ್ರಕರಣದ ಸತ್ಯಾಸತ್ಯತೆಯ ತನಿಖೆಯಾಗಬೇಕು ಮತ್ತು ರಾಷ್ಟ್ರೀಯ ತನಿಖಾ ದಳದಿಂದ ತನಿಖೆ ನಡೆಯಲೇಬೇಕಿದೆ. ಸರಕಾರ ಮತ್ತು ಪೋಲೀಸ್ ಇಲಾಖೆ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
Author: main-admin
ಬೆಂಗಳೂರು: ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್(HSRP) ಇಲ್ಲದ ವಾಹನಗಳಿಗೆ ಫೆಬ್ರವರಿ 17 ರಿಂದ ದಂಡ ಹಾಕಲು ಸಾರಿಗೆ ಇಲಾಖೆ ಅಧಿಕಾರಿಗಳು ನಿರ್ಧಾರ ಕೈಗೊಂಡಿದ್ದಾರೆ. 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಣಿಯಾದ ಎಲ್ಲಾ ಮಾದರಿಯ ವಾಹನಗಳಿಗೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್(ಹೆಚ್.ಎಸ್.ಆರ್.ಪಿ.) ಅಳವಡಿಸಲು ಗಡುವು ಸಮೀಪಿಸುತ್ತಿದೆ. ಹೀಗಿದ್ದರೂ ವಾಹನ ಮಾಲೀಕರು ಆಸಕ್ತಿ ತೋರಿಸುತ್ತಿಲ್ಲ. ಇಂತಹ ವಾಹನ ಮಾಲೀಕರಿಗೆ ಬಿಸಿ ಮುಟ್ಟಿಸಲು ಸಾರಿಗೆ ಇಲಾಖೆ ಮುಂದಾಗಿದ್ದು, ಫೆಬ್ರವರಿ 17 ರಿಂದ ದಂಡಾಸ್ತ್ರ ಪ್ರಯೋಗಿಸಲು ಸಿದ್ಧತೆ ಮಾಡಿಕೊಂಡಿದೆ. HSRP ನಂಬರ್ ಪ್ಲೇಟ್ ಹಾಕಿಸಲು ಸಾರಿಗೆ ಇಲಾಖೆ 2023ರ ನವೆಂಬರ್ 17ರ ಗಡುವು ವಿಧಿಸಿದ್ದು, ಬಳಿಕ 2024ರ ಫೆಬ್ರವರಿ 17ರವರೆಗೆ ವಿಸ್ತರಿಸಲಾಗಿದೆ. ಇನ್ನು ಕೆಲವೇ ದಿನಗಳಷ್ಟೇ ಬಾಕಿ ಇದ್ದರೂ ಇದುವರೆಗೂ ಕೇವಲ 10 ಲಕ್ಷ ವಾಹನಗಳಿಗೆ ಮಾತ್ರ ನಂಬರ್ ಪ್ಲೇಟ್ ಹಾಕಿಸಲಾಗಿದೆ. ಇನ್ನೂ ಭಾರಿ ಸಂಖ್ಯೆಯ ವಾಹನಗಳ ಮಾಲೀಕರು HSRP ನಂಬರ್ ಪ್ಲೇಟ್ ಹಾಕಿಸಿಲ್ಲ. ಗಡುವು ಮುಗಿದ ನಂತರ ವಾಹನಗಳ ಪರಿಶೀಲಿಸಿ ದಂಡ ವಿಧಿಸಲಾಗುವುದು. ದ್ವಿಚಕ್ರ ವಾಹನಗಳಿಗೆ 390…
ಬೆಳ್ತಂಗಡಿ: ಮೂವರು ಕಾರ್ಮಿಕರನ್ನು ಬಲಿ ಪಡೆದ ಪಟಾಕಿ ತಯಾರಿಕಾ ಘಟಕದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಾಕಿ ತಯಾರಿಕಾ ಘಟಕದ ಮಾಲೀಕ ಸೈಯದ್ ಬಶೀರ್ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ವೇಣೂರು ಪೊಲೀಸ್ ಠಾಣೆಯ ಕುಕ್ಕೇಡಿ ಗ್ರಾ.ಪಂಚಾಯತ್ ಗೋಳಿಯಂಗಡಿ ಸಮೀಪದ ಕಡ್ತ್ಯಾರು ಎಂಬಲ್ಲಿಸುಡುಮದ್ದು ತಯಾರಿ ಘಟಕದಲ್ಲಿ ಭಾನುವಾರ ಸಂಜೆ ಸ್ಪೋಟ ಸಂಭವಿಸಿ ಮೂವರು ಕಾರ್ಮಿಕರು ಸಾವನಪ್ಪಿದರು. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡಿದ ದೂರಿನ ಮೇಲೆ ಮಾಲೀಕ ಬಶೀರ್ ಮೇಲೆ ಎಫ್ಐಆರ್ ದಾಖಲಾಗಿದೆ.ಪ್ರಕರಣ ಸಂಬಂಧ ಜಾಗ ಹಾಗೂ ಪಟಾಕಿ ತಯಾರಿಕಾ ಮಾಲೀಕ ಸೈಯದ್ ಬಶೀರ್ ಘಟನೆ ಬಳಿಕ ವೇಣೂರಿನಿಂದ ಪರಾರಿಯಾಗಿದ್ದಾಗ ಖಚಿತ ಮಾಹಿತಿ ಮೇರೆಗೆ ಸುಳ್ಯದಲ್ಲಿ ವಶಕ್ಕೆ ಪಡೆದುಕೊಂಡು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.ಭಾನುವರ 5.15ರ ಸುಮಾರಿಗೆ ಈ ದುರಂತ ನಡೆದಿದ್ದು, ಕೇರಳದವರಾದ ಸ್ವಾಮಿ (55), ವರ್ಗೀಸ್ (68), ಹಾಸದ ಅರಸೀಕೆರೆ ಮೂಲದ ಚೇತನ್ (25) ಎಂಬ ಮೂವರು ಮೃತರಾಗಿದ್ದು, ಘಟನೆ ನಡೆದ ಬಳಿಕ ಉಳಿದ ಕಾರ್ಮಿಕರು, ಮಾಲೀಕ ಪರಾರಿಯಾಗಿದ್ದರು
ಪುತ್ತೂರು:ಬಾಲಕಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅನ್ಯಮತೀಯ ಯುವಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಪೋಕ್ಸೋದಡಿ ಪ್ರಕರಣ ದಾಖಲಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು ಮೂಲದ ಅಪ್ರಾಪ್ತ ವಯಸ್ಕ ಬಾಲಕಿ, ಕಂಬಳ ನೋಡಲು ತೆರಳುತ್ತಿದ್ದ ವೇಳೆ ಕಡಬ ಮೂಲದ ಆರೋಪಿ ಶಾಕಿರ್ ಎಂಬಾತ ದಾರಿ ಮಧ್ಯೆ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.ಈ ವೇಳೆ ಘಟನೆಯಿಂದ ಕೇರಳಿದ ಗುಂಪೊಂದು ಆರೋಪಿಯನ್ನು ವಶಕ್ಕೆ ನೀಡುವಂತೆ ಠಾಣೆ ಮುಂಭಾಗದಲ್ಲಿ ಜಮಾಯಿಸಿದೆ.ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾರ ಪುತ್ತಿಲ ಅವರು ಉದ್ರಿಕ್ತರನ್ನು ಸಮಾಧಾನಗೊಳಿಸಿದ ಬಳಿಕ ಪರಿಸ್ಥಿತಿ ತಿಳಿಗೊಂಡಿದೆ ಎಂದು ತಿಳಿದು ಬಂದಿದೆ.
ಬೆಳ್ತಂಗಡಿ: ಗೋಳಿಯಂಗಡಿ ಸಮೀಪದ ಕಡ್ತ್ಯಾರು ಸಮೀಪ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡು ಮೂವರು ಕಾರ್ಮಿಕರು ಸಾವನ್ನಪ್ಪಿ ಅನೇಕ ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ. ಕೇರಳದ ಸ್ವಾಮಿ(55) , ಕೇರಳದ ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಮೃತಪಟ್ಟಿದ್ದು, ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಗಾಯಗೊಂಡವರು. ಕುಚ್ಚೋಡಿ ಸಮೀಪದ ನಿವಾಸಿ ಬಶೀರ್ ಎಂಬವರ ಜಮೀನಿನಲ್ಲಿ ಪಟಾಕಿ ತಯಾರಿಸುತ್ತಿದ್ದು, ಇಲ್ಲಿ ಒಟ್ಟು 9 ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು ಎನ್ನಲಾಗಿದೆ. ಮೃತಪಟ್ಟ ಮೂವರು ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟಕ ತಯಾರಿಸುತ್ತಿದ್ದರು. ಈ ಪೈಕಿ ಓರ್ವನ ಮೃತದೇಹ ದೊರೆತಿದ್ದು, ಇನ್ನಿಬ್ಬರ ದೇಹ ಸ್ಫೋಟದ ಸುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ಛಿದ್ರವಾಗಿ ಬಿದ್ದಿದೆ. ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬಂದಿ ತಕ್ಷಣ ಬೆಂಕಿನಂದಿಸಿ ಅರೆ ಜೀವಾವಸ್ಥೆಯಲ್ಲಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಿದರೂ, ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಬಂಟ್ವಾಳ: ಗುಡ್ಡವೊಂದರಲ್ಲಿ ಹುಲ್ಲುಗಾವಲಿಗೆ ಬೆಂಕಿ ಇಡಲು ಹೋದ ಪತಿ ಪತ್ನಿ ಇಬ್ಬರೂ ಸಜೀಹ ದಹನಗೊಂಡ ಘಡನೆ ಬಂಟ್ವಾಳ ತಾಲೂಕಿನ ಲೋರೆಟ್ಟೋ ಸಮೀಪದ ತುಂಡು ಪದವು ಎಂಬಲ್ಲಿ ಇಂದು ಮಧಾಹ್ನ ವೇಳೆ ನಡೆದಿದೆ. ಲೊರೆಟ್ಟೊಪದವು ತುಂಡುಪದವು ನಿವಾಸಿ, ಕ್ರಿಸ್ಟಿನ್ ಕಾರ್ಲೋ(51) ಹಾಗೂ ಗಿಲ್ಬರ್ಟ್ ಕಾರ್ಲೊ (65) ಮೃತಪಟ್ಟವರು. ಇವರ ಮನೆಯ ಸಮೀಪದಲ್ಲಿ ರುವ ಗುಡ್ಡದ ಲ್ಲಿರುವ ಮುಳಿ ಹುಲ್ಲು ತೆಗೆಯುವ ಉದ್ದೇಶದಿಂದ ಅದಕ್ಕೆ ಬೆಂಕಿ ನೀಡಿದ್ದರು. ಮಧ್ಯಾಹ್ನ ಅಗಿದ್ದ ಕಾರಣ ಬೆಂಕಿಯ ಜ್ವಾಲೆ ಇವರಿಗೆ ಹತ್ತಿಕೊಂಡಿರಬೇಕು ಎಂದು ಹೇಳಲಾಗಿದೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ;
ಕಡಬ ಮೂಲದ ಶಾಕೀರ್ ವಶದಲ್ಲಿರುವ ವ್ಯಕ್ತಿ. ಪುತ್ತೂರು ಮೂಲದ ಅಪ್ರಾಪ್ತ ಬಾಲಕಿ, ಕಂಬಳ ನೋಡಲು ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಆರೊಪಿ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ. ಆರೋಪಿಯನ್ನು ತಮ್ಮವಶಕ್ಕೆ ನೀಡಬೇಕೆಂದು ತಂಡವೊಂದು ಠಾಣೆಯ ಮುಂದೆ ಜಮಾಯಿಸಿತ್ತು. ಉದ್ರಿಕ್ತರನ್ನು ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾರ ಪುತ್ತಿಲ ಸಮಾಧಾನಗೊಳಿಸಿದರು. ಆರೋಪಿಯ ವಿರುದ್ದ ಪೊಕ್ಸೋ ಪ್ರಕರಣ ದಾಖಲಿಸಲಾಗಿದೆ. ಪುತ್ತೂರು: ಅನ್ಯಮತೀಯ ಯುವಕನೂಬ್ಬ ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಘಟನೆ ಪುತ್ತೂರು ನಗರದಲ್ಲಿ ಜ 27ರ ತಡ ರಾತ್ರಿ ನಡೆದಿದೆ. ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಡಬ ಮೂಲದ ಶಾಕೀರ್ ವಶದಲ್ಲಿರುವ ವ್ಯಕ್ತಿ. ಪುತ್ತೂರು ಮೂಲದ ಅಪ್ರಾಪ್ತ ಬಾಲಕಿ, ಕಂಬಳ ನೋಡಲು ತೆರಳುತ್ತಿದ್ದ ವೇಳೆ ದಾರಿ ಮಧ್ಯೆ ಆರೊಪಿ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ. ಆರೋಪಿಯನ್ನು ತಮ್ಮವಶಕ್ಕೆ ನೀಡಬೇಕೆಂದು ತಂಡವೊಂದು ಠಾಣೆಯ ಮುಂದೆ ಜಮಾಯಿಸಿತ್ತು. ಉದ್ರಿಕ್ತರನ್ನು ಪುತ್ತಿಲ ಪರಿವಾರ ಸಂಸ್ಥಾಪಕ ಅರುಣ್ ಕುಮಾರ ಪುತ್ತಿಲ ಸಮಾಧಾನಗೊಳಿಸಿದರು. ಆರೋಪಿಯ ವಿರುದ್ದ ಪೊಕ್ಸೋ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ‘ಗ್ಯಾರಂಟಿ’ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣೆಗೆ ರಾಜ್ಯ ಮತ್ತು ಜಿಲ್ಲಾಮಟ್ಟದಲ್ಲಿ ‘ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ’ಗಳು ಹಾಗೂ ತಾಲ್ಲೂಕು ಮತ್ತು ಬಿಬಿಎಂಪಿ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ’ಗಳನ್ನು ರಚಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ. ಮೂಲಗಳ ಪ್ರಕಾರ, ರಾಜ್ಯದ ಜಿಲ್ಲೆಗಳನ್ನು ಐದು ವಿಭಾಗಗಳಾಗಿ ಮಾಡಿ, ರಾಜ್ಯಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಐವರು ಉಪಾಧ್ಯಕ್ಷರಿಗೆ ಪ್ರತಿ ವಿಭಾಗಗಳ ಜವಾಬ್ದಾರಿಯನ್ನು ನೀಡಬೇಕು ಎಂದು ಸದಸ್ಯ ಕಾರ್ಯದರ್ಶಿ ಆದೇಶ ಹೊರಡಿಸಲಿದ್ದಾರೆ. ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದಲ್ಲಿ ಒಬ್ಬ ಸದಸ್ಯ ಅಧ್ಯಕ್ಷ ಆಗಿರುತ್ತಾರೆ, ಉಳಿದಂತೆ ಐವರು ಉಪಾಧ್ಯಕ್ಷರು, 15 ಸದಸ್ಯರು ಇರಲಿದ್ದಾರೆ. ಉಳಿದಂತೆ ಆಯಾ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಸದಸ್ಯ ಕಾರ್ಯದರ್ಶಿ ಆಗಿರುತ್ತಾರೆ. ಇನ್ನು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಒಬ್ಬ ಸದಸ್ಯ ಅಧ್ಯಕ್ಷ, 14 ಸದಸ್ಯರು ಇರಲಿದ್ದಾರೆ. ಕಾರ್ಯನಿರ್ವಹಣಾಧಿಕಾರಿ…
ಮಂಗಳೂರು:ಮಾದಕ ದ್ರವ್ಯ ಸೇವನೆ ಮಾಡಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಮಂಗಳೂರಿನ ಬಂದರು ಹಾಗು ಕದ್ರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳದ ಎರ್ನಾಕುಲಂ ಜಿಲ್ಲೆಯ ಅಡ್ಸನ್ ಜಾರ್ಜ್ (19) ಮತ್ತು ಅದೇ ಜಿಲ್ಲೆಯ ಎಲ್ವಿನ್ ಶಿಜು (19)ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ.ಆರೋಪಿಗಳಲ್ಲಿ ಅಡ್ಸನ್ ಜಾರ್ಜ್ ಎಂಬಾತ ಸೆಂಟ್ರಲ್ ಮಾರ್ಕೆಟ್ ಬಳಿ ಗಾಂಜಾ ಸೇವಿಸುತ್ತಿದ್ದಾಗ ಮತ್ತು ಎಲ್ವಿನ್ ಶಿಜು ಎಂಬಾತ ಬಲ್ಮಠದ ಬಳಿ ಗಾಂಜಾ ಸೇವಿಸಿ ತಿರುಗಾಡುತ್ತಿದ್ದಾಗ ಗಸ್ತು ನಿರತ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಬಂಟ್ವಾಳ: ಅಕ್ರಮ ಮರಳು ಸಾಗಾಟದ ಲಾರಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ವಶಕ್ಕೆ ಪಡೆದ ಘಟನೆ ಜ. 25ರಂದು ರಾ.ಹೆ.75ರ ತುಂಬೆಯಲ್ಲಿ ನಡೆದಿದೆ. ಲಾರಿ ಮಾಲಕ ಸಂತೋಷ್ ಕೋಟ್ಯಾನ್ ಹಾಗೂ ಚಾಲಕ ಪ್ರಕಾಶ್ ಆರೋಪಿಗಳೆಂದು ಗುರುತಿಸಲಾಗಿದೆ.ಬಂಟ್ವಾಳ ಗ್ರಾಮಾಂತರ ಪಿಎಸ್‌ಐ ಹರೀಶ್ ಎಂ.ಆರ್. ನೇತೃತ್ವದ ತಂಡ ಮುಂಜಾನೆ 5ರ ಸುಮಾರಿಗೆ ಗಸ್ತು ತಿರುಗುತ್ತಿದ್ದ ವೇಳೆ ಲಾರಿಯೊಂದನ್ನು ತಡೆದು ವಿಚಾರಿಸಿದಾಗ ಅಕ್ರಮ ಮರಳು ಸಾಗಾಟ ಬೆಳಕಿಗೆ ಬಂದಿದೆ. ಪೊಲೀಸರು ಸುಮಾರು 4 ಲಕ್ಷ ರೂ. ಮೌಲ್ಯದ ಲಾರಿ ಮತ್ತು 7 ಸಾವಿರ ರೂ. ಮೌಲ್ಯದ ಮರಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.










