Author: main-admin

ಉಡುಪಿ: ರಂಗಕರ್ಮಿ, ಸಮಾಜಸೇವಕ ಲೀಲಾಧರ ಶೆಟ್ಟಿ ಅವರ ಸಾಕು ಮಗಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಪು ಪೊಲೀಸರು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಆಕೆಯ ಸ್ನೇಹಿತ ಶಿರ್ವ ನಿವಾಸಿ ಗೀರಿಶ್ (20) , ನಾಪತ್ತೆಯಾಗಲು ಸಹಕರಿಸಿದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್ ಎಂದು ಗುರುತಿಸಲಾಗಿದೆ. ಈ ನಾಲ್ವರು ಆರೋಪಿಗಳು ಹಾಗೂ ಲೀಲಾಧರ ಶೆಟ್ಟಿಯವರ ಸಾಕು ಪುತ್ರಿಯನ್ನು ಕಾಸರಗೋಡು ಜಿಲ್ಲೆಯ ಕುಂಬ್ಳೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಲೀಲಾಧರ ಶೆಟ್ಟಿ ದಂಪತಿ ಕಳೆದ ವಾರ ಆತ್ಮಹತ್ಯೆಗೆ ಶರಣಾಗಿದ್ದರು. ಈ ದಂಪತಿ 16 ವರ್ಷಗಳ ಹಿಂದೆ ಹೆಣ್ಣು ಮಗುವನ್ನು ದತ್ತು ಪಡೆದಿದದ್ದು ಆಕೆ ಡಿಸೆಂಬರ್ 11 ರಂದು ಮನೆ ಬಿಟ್ಟು ಹೋಗಿದ್ದು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣದಾಖಲಾಗಿತ್ತು. ಸಾಕು ಮಗಳು ನಾಪತ್ತೆಯಾಗಿರುವುದರಿಂದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಎಲ್ ಶೆಟ್ಟಿಯವರು ಮನನೊಂದು ಮನೆಯಲ್ಲಿ…

Read More

ಮಂಗಳೂರು: ನಗರದ ಕಂಕನಾಡಿಯಲ್ಲಿ ಖೋಟಾ ನೋಟಿನ ಚಲಾವಣೆಗೆ ಯತ್ನಿಸುತ್ತಿದ್ದ ಓರ್ವ ಆರೋಪಿ ಸಿಸಿಬಿ ಬಲೆಗೆ ಬಿದ್ದಿದ್ದಾನೆ. ಕೇರಳ ರಾಜ್ಯದ ಮಂಜೆಶ್ವರದ ಕೀರ್ತೆಶ್ವರ ಬಳಿಯ ಪ್ರಶ್ವಿತ್(25) ಬಂಧಿತ ಆರೋಪಿ. ನಗರದ ಕಂಕನಾಡಿ ಬಳಿಯಲ್ಲಿ ಪ್ರಶ್ವಿತ್ ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದಾನೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಆರೋಪಿ 500 ರೂ. ಮುಖಬೆಲೆಯ, 200 ರೂ. ಮುಖಬೆಲೆಯ ಮತ್ತು 100 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆಗೆ ಯತ್ನಿಸುತ್ತಿದ್ದಾನೆ. ಆರೋಪಿ ಈವರೆಗೆ ಸುಮಾರು 8 ರಿಂದ 9 ಸಾವಿರ ರೂ.‌ ಮೊತ್ತದ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದಾನೆ. ಆರೋಪಿಯಿಂದ ನಕಲಿ ನೋಟುಗಳಾದ 500 ರೂ. ಮುಖಬೆಲೆಯ 3 ನೋಟುಗಳು, 200 ರೂ. ಮುಖಬೆಲೆಯ 2 ನೋಟುಗಳು ಹಾಗೂ 100 ರೂ. ಮುಖಬೆಲೆಯ 3 ನೋಟುಗಳು ಹಾಗೂ ಮೊಬೈಲ್ ಫೋನ್ಅನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯಿಂದ 2,220 ರೂ. ಮೊತ್ತದ 8 ಖೋಟಾ ನೋಟುಗಳು, ಒಂದು ಮೊಬೈಲ್, 4,250 ರೂ.…

Read More

ಮಂಗಳೂರು: ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕನೋರ್ವ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಡಿ.14 ರಂದು ಆಗಮಿಸಿದ ಪ್ರಯಾಣಿಕ ಅಕ್ರಮವಾಗಿ ಸಾಗಿಸುತ್ತಿದ್ದ 17,73,200 ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈತ ಪ್ಯಾಂಟ್ ನಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟು ಸಾಗಿಸುತ್ತಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Read More

ಮಂಗಳೂರು : ದಾಖಲೆಗಳಿಲ್ಲದೆ ಸಾಗಾಟ ಮಾಡುತ್ತಿದ್ದ ಸುಮಾರು 20 ಲಕ್ಷ ರೂ. ಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದ ಕಾಸರಗೋಡು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ. ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿ ನಗರದಲ್ಲಿ ಕಾರನ್ನು ತಡೆದು ತಪಾಸಣೆ ನಡೆಸಿದಾಗ 20 ಲಕ್ಷ ರೂ. ಕರೆನ್ಸಿ, ಐದು ಲಕ್ಷ ರೂ. ಮುಖ ಬೆಲೆಯ ಅಮೆರಿಕನ್ ಡಾಲರ್ ಹಾಗೂ ದಿರ್‌ಹಂ ಪತ್ತೆಯಾಗಿದೆ. ಎರಿಯಾಲ್ ನಿವಾಸಿ ಮುಸ್ತಫ ಎಂಬಾತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Read More

ಮಂಗಳೂರು : ವ್ಯಕ್ತಿಯೋರ್ವರು ಕಳೆದುಕೊಂಡಿದ್ದ ಮೊಬೈಲ್ ನ್ನು ಬಳಸಿ ಇನ್ನೋರ್ವ ವ್ಯಕ್ತಿ ಫೋನ್ ಪೇ ಮೂಲಕ ಹಣ ವರ್ಗಾಯಿಸಿ ವಂಚಿಸಿದ್ದಾನೆ. ದೂರುದಾರರು ಡಿಸೆಂಬರ್ 3ರಂದು ಕಣ್ಣೂರಿಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಎರಡು ಮೊಬೈಲ್ ಹ್ಯಾಂಡ್ ಸೆಟ್ ಗಳನ್ನು ಕಳೆದುಕೊಂಡಿದ್ದರು. ಈ ಬಗ್ಗೆ ಮರುದಿನ ಕಂಕನಾಡಿ ಠಾಣೆಗೆ ದೂರು ನೀಡಿದ್ದರು. ದೂರು ನೀಡಿದ ಎರಡು ದಿನಗಳ ಅನಂತರ ಒಂದು ಮೊಬೈಲ್‌ ಸಿಮ್ ಆನ್ ಆಗಿತ್ತು. ಅದಕ್ಕೆ ಸಂಬಂಧಿಕರ ಪೋನ್ ಮೂಲಕ ಸಂಪರ್ಕಿಸಿದಾಗ ಕರೆ ಸ್ವೀಕರಿಸಿದ ವ್ಯಕ್ತಿ ಹಿಂದಿ ಭಾಷೆಯಲ್ಲಿ ಮಾತನಾಡಿ ಮಂಗಳೂರಿನ ಪಡೀಲ್‌ನಲ್ಲಿ ಮೊಬೈಲ್ ಫೋನ್ ಸಿಕ್ಕಿದ್ದು ತಾನು ಕಡಬದಲ್ಲಿದ್ದೇನೆ ಎಂದು ತಿಳಿಸಿದ್ದಾನೆ. ಮಾತ್ರವಲ್ಲದೆ ನಾಲ್ಕು ದಿನ ಕಳೆದು ಮಂಗಳೂರಿಗೆ ಬಂದು ಮೊಬೈಲ್ ತಂದುಕೊಡುವುದಾಗಿಯೂ ಹೇಳಿದ್ದ. ಆದರೆ ಆತ ತಂದುಕೊಡಲಿಲ್ಲ. ಹಾಗಾಗಿ ದೂರುದಾರರು ಡಿಸೆಂಬರ್ 12ರಂದು ತನ್ನ ಹಳೆಯ ನಂಬರ್‌ನ ಮೊಬೈಲ್ ಸಿಮ್ ಅನ್ನು ಬ್ಲಾಕ್ ಮಾಡಿ ಹೊಸ ಸಿಮ್ ಖರೀದಿಸಿದ್ದರು. ಆರೋಪಿಗಳು ಡಿಸೆಂಬರ್ 12ರಂದು ದೂರುದಾರರ ಮೊಬೈಲ್‌ನ ಫೋನ್ ಪೇ ಮೂಲಕ 1.82…

Read More

ಉಳ್ಳಾಲ : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಹರೇಕಳ ಗ್ರಾಮದ ರಾಜಗುಡ್ಡೆ ಎಂಬಲ್ಲಿ ನಡೆಯುತ್ತಿದ್ದ ಇಸ್ಪೀಟ್ ಜೂಜು ಅಡ್ಡೆಗೆ ಕೊಣಾಜೆ ಠಾಣಾ ಪಿಎಸ್ಐ ಅಶೋಕ್ ನೇತೃತ್ವದ ತಂಡ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಅಂಬ್ಲ ಮೊಗರುವಿನ ಅನಿಲ್ ಡಿಸೋಜಾ(45), ಉಳ್ಳಾಲ ಕೋಡಿ ಡೌನ್ ರಸ್ತೆಯ ಹನೀಫ್ ಮಹಮ್ಮದ್(32), ಜಪ್ಪಿನ ಮೊಗರುವಿನ ಮಹಮ್ಮದ್ ನಾಜೀಮ್ (20) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಆರು ಪ್ಯಾಕೇಟ್ ಇಸ್ಪೀಟ್ ಎಲೆಗಳು, 6,750 ನಗದು ಹಣ, ಟರ್ಪಾಲ್, ಮೋಬೈಲ್ ಪೋನ್ ಮತ್ತು ಒಂದು ಸ್ಕೂಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 63,750 ಎಂದು ಅಂದಾಜಿಸಲಾಗಿದೆ.ಕೊಣಾಜೆ ಪೊಲೀಸ್ ಠಾಣಾ ಪ್ರಭಾರ ಪೊಲೀಸ್ ನಿರೀಕ್ಷಕರಾದ ಬಾಲಕೃಷ್ಣ ಹೆಚ್ ಎನ್, ಪೊಲೀಸ್ ಉಪ ನಿರೀಕ್ಷಕರಾದ ನಾಗರಾಜ್ ಎಸ್, ಪುನೀತ್ ಗಾಂವಕಾರ್, ಅಶೋಕ್, ವಿನೋದ್, ಎಎಸ್ಐ ಸಂಜೀವ್ ಸಿಬ್ಬಂದಿಗಳಾದ, ಹೆಡ್ ಕಾನ್ಸ್ಟೇಬಲ್ ಗಣೇಶ್, ರೇಷ್ಮಾ, ಸಂತೋಷ್ ಕೆ.ಸಿ, ಸುರೇಶ್ ತಳವಾರ್, ಪ್ರಶಾಂತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು

Read More

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್, ನೀರು ಪೂರೈಸಲು ಆದೇಶ ಹೊರಡಿಸಲಾಗಿದೆ. ನವೆಂಬರ್ 1ರಂದು ಶಾಲಾ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲೆ, ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್, ನೀರು ಸೌಲಭ್ಯ ಕಲ್ಪಿಸುವುದಾಗಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಾಲಾ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್, ನೀರು ಒದಗಿಸಿದರೆ ಇದಕ್ಕೆ ವಹಿಸುವ ಅನುದಾನ ಬಳಸಿಕೊಂಡು ಶಾಲೆಗಳನ್ನು ಅಭಿವೃದ್ಧಿಪಡಿಸಿ ಮಕ್ಕಳ ದಾಖಲಾತಿ ಹೆಚ್ಚಿಸಬಹುದಾಗಿದೆ ಎಂದು ಶಿಕ್ಷಣ ಇಲಾಖೆ ಕೋರಿದ್ದು, ಇದಕ್ಕೆ ಆರ್ಥಿಕ ಇಲಾಖೆ ಸಮ್ಮತಿಸಿದೆ. 2023 -24ನೇ ಸಾಲಿನ ಅಂತ್ಯದವರೆಗೆ ರಾಜ್ಯದ ಎಲ್ಲಾ ಸರ್ಕಾರಿ ಶಾಲೆ, ಪಿಯು ಕಾಲೇಜುಗಳಲ್ಲಿ ವಿದ್ಯುತ್, ನೀರಿನ ಶುಲ್ಕ ಪಾವತಿಗೆ ಅಗತ್ಯವಿರುವ ಅನುದಾನದ ಪ್ರಸ್ತಾವನೆಯನ್ನು ಜಿಲ್ಲಾವಾರು ಸಲ್ಲಿಸುವಂತೆ ಸರ್ಕಾರ ಶಿಕ್ಷಣ ಇಲಾಖೆಗೆ ಸೂಚಿಸಿದೆ. ಇಂಧನ ಮತ್ತು ನಗರಾಭಿವೃದ್ಧಿ ಇಲಾಖೆಗಳಿಂದ ನೇರವಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿ ಅಗತ್ಯವಿರುವ ಅನುದಾನ ಪಡೆಯಲು ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.

Read More

ಕಡಬ: ಕಡಬದಲ್ಲಿ ಮತ್ತೆ ಕಾಡಾನೆಗಳು ತಮ್ಮ ಪ್ರತಾಪ ತೋರಿಸಲು ಆರಂಭಿಸಿದೆ. ಶನಿವಾರ ಮುಂಜಾನೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಕೊಣಾಜೆ ರಬ್ಬರ್ ತೋಟದಲ್ಲಿ ರಬ್ಬರ್ ಟಾಪಿಂಗ್ ಮಾಡುತ್ತಿದ್ದ ಕಾರ್ಮಿಕರನ್ನು ಕಾಡಾನೆಗಳ ಹಿಂಡು ಅಟ್ಟಿಸಿಕೊಂಡು ಬಂದಿದೆ. ಪರಿಣಾಮ ಮೂವರು ಗಾಯಗೊಂಡಿದ್ದಾರೆ. ರಬ್ಬರ್ ನಿಗಮದ ಟ್ಯಾಪಿಂಗ್ ಕಾರ್ಮಿಕ ರಾಜಗೋಪಾಲ್ (49), ಮೇಸ್ತ್ರಿಗಳಾದ ನಾಗಪ್ಪ (53) ಹಾಗೂ ಶಿವರಾಜ್ (43) ಗಾಯಗೊಂಡವರು. ಅವರಿಗೆ ತರಚು ಗಾಯಗಳಾಗಿದ್ದು, ಅವರಿಗೆ ಕಡಬ ಸಮುದಾಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗಿದೆ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದಾಗ ಆನೆಗಳು ಕಾಣಿಸಿಕೊಂಡಿವೆ. ಭಯಭೀತರಾದ ಅವರು ಓಡಿ ತಪ್ಪಿಸಿಕೊಳ್ಳುವ ವೇಳೆ ಬಿದ್ದು ತರಚಿದ ಗಾಯಗಳಾಗಿವೆ. ಓಡುವ ವೇಳೆ ಆನೆಗಳು ಅವರನ್ನು ಬೆನ್ನಟ್ಟಿವೆ ಎಂದು ಗಾಯಾಳುಗಳು ತಿಳಿಸಿದ್ದಾರೆ. ಸುದ್ದಿ ತಿಳಿದ ಅರಣ್ಯ ಸಿಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಕೆಲ ತಿಂಗಳುಗಳ ಹಿಂದೆ ಕಾಡಾನೆಗಳ ಹಿಂಡು ದಾಳಿ ಮಾಡಿ ಇಬ್ಬರನ್ನು ಕೊಂದು ಹಾಕಿತ್ತು . ಬಳಿಕ ಜನರ ಪ್ರತಿಭಟನೆಗೆ ಹೆದರಿ ದುಬಾರೆಯಿಮದ ಸಾಕಾನೆಗಳನ್ನು ತಂದು ಒಂದು ಕಾಡಾನೆಯನ್ನು ಬಂಧಿಸಿದ್ದರು .…

Read More

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಪರ ಸಂಘಟನೆಯ ನಾಯಕರಿಗೆ ಮತ್ತೊಂದು ಶಾಕ್ ನೀಡಿದ ಜಿಲ್ಲಾಡಳಿತ, ಇದೀಗ ಮತ್ತೋರ್ವ ಕಾರ್ಯಕರ್ತನಿಗೆ ಗಡಿಪಾರು ನೋಟೀಸ್ ಜಾರಿ ಮಾಡಲಾಗಿದೆ. ನೆಟ್ಟಣಿಗೆ ಮುಡ್ನೂರು ನಿವಾಸಿ ಪ್ರವೀಶ್ ಕುಮಾರ್ ನಾಯರ್ ವಿರುದ್ಧ ಪುತ್ತೂರು ಸಹಾಯಕ ಆಯುಕ್ತರು ಗಡಿಪಾಡು ಯಾಕೆ ಮಾಡಬಾರದು ಎಂದು ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ಪ್ರಸ್ತುತ ಅಯ್ಯಪ್ಪ ಮಾಲಾಧಾರಿಯಾಗಿರುವ ಪ್ರವೀಶ್ ಕುಮಾರ್ ಹಿಂದೂ ಜಾಗರಣ ವೇದಿಕೆಯ ಸಕ್ರೀಯ ಕಾರ್ಯಕರ್ತನಾಗಿದ್ದು ಎರಡು ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಡಿಸೆಂಬರ್ 20 ರಂದು ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯದ ಮುಂದೆ ಹಾಜರಾಗಲು ಸೂಚಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ನಡೆಗೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More

ಬೆಂಗಳೂರು: ಉದ್ಯಮಿಯನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಪತಿ ಸೇರಿ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಅತಿವುಲ್ಲಾ ಎಂಬುವವರನ್ನು ಹನಿಟ್ರ್ಯಾಪ್ ಮಾಡಿ ಆರೋಪಿಗಳು ಹಣ ದೋಚಿದ್ದರು. ಪ್ರಕರಣ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ಖಲೀಮ್, ಸಭಾ, ಓಬೆದ್ ರಕಿಂ, ಅತೀಕ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಲ್ಲಿ ಖಲೀಮ್ ಹಾಗೂ ಸಭಾ ಇಬ್ಬರೂ ಗಂಡ-ಹೆಂಡತಿ. ಪತ್ನಿ ಸಭಾಳನ್ನು ವಿಧವೆ ಎಂದು ಉದ್ಯಮಿಗೆ ಪರಿಚಯ ಮಾಡಿಸಿಕೊಟ್ಟಿದ್ದ. ಬಳಿಕ ಆರ್.ಅರ್.ನಗರದಲ್ಲಿ ರೂಮ್ ಬುಕ್ ಮಾಡಲು ಉದ್ಯಮಿಯನ್ನು ಸಭಾ ಕರೆದಿದ್ದಳು. ಆಧಾರ್ ಕಾರ್ಡ್ ಜೊತೆ ಬರುವಂತೆ ಅತಿವುಲ್ಲಾಗೆ ತಿಳಿಸಿದ್ದಳು. ರೂಮ್ ಬುಕ್ ಮಾಡಿದ ಕೆಲ ಹೊತ್ತಲ್ಲೇ ಇತರ ಆರೋಪಿಗಳು ಎಂಟ್ರಿ ಕೊಟ್ಟಿದ್ದರು. ಏಕಾಏಕಿ ಎಂಟ್ರಿಕೊಟ್ಟು ಸೀನ್ ಕ್ರಿಯೇಟ್ ಮಾಡಿ ಈ ವಿಚಾರ ನಿಮ್ಮ ಮನೆಯವರಿಗೆ ಹೇಳ್ತೀವಿ ಎಂದು 6 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಇದೇ ವೇಳೆ ಮಾಹಿತಿ ಪಡೆದು ದಾಳಿ ನಡೆಸಿದ್ದ ಸಿಸಿಬಿ ಪೊಲೀಸರು ಹನಿಟ್ರ್ಯಾಪ್ ವೇಳೆ ರೆಡ್ ಹ್ಯಾಂಡ್ ಆಗಿ ನಾಲ್ವರು…

Read More