ಉಪ್ಪಿನಂಗಡಿ : ಹೃದಯಾಘಾತಕ್ಕೆ 34 ನೆಕ್ಕಿಲಾಡಿ ಗ್ರಾಮ ಪಂಚಾಯತ್ ನಲ್ಲಿ ಪ್ರಭಾರ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಕುಮಾರಯ್ಯ (46) ನಿಧನರಾಗಿದ್ದಾರೆ. ಬೆಳ್ತಂಗಡಿಯ ಕುದ್ರಡ್ಕದ ನಿವಾಸಿಯಾಗಿರುವ ಇವರು ಒಂದೂವರೆ ವರ್ಷಗಳ ಹಿಂದೆ ಗ್ರಾಮಪಂಚಾಯತ್ ಕಾರ್ಯದರ್ಶಿಯಾಗಿ ಬಡ್ತಿ ಹೊಂದಿದ್ದರು. ಕುಮಾರಯ್ಯ ಅವರಿಗೆ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು ಈ ಹಿನ್ನಲೆ ರಜೆಯಲ್ಲಿದ್ದರು. ಆದರೆ ಭಾನುವಾರ ಎದೆನೋವು ಕಾಣಿಸಿಕೊಂಡಿದ್ದು, ಮನೆಯವರು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸೋಮವಾರ ಬೆಳಗ್ಗಿನ ಜಾವ ನಿಧರಾಗಿದ್ದಾರೆ.
Author: main-admin
ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯ ಬಂಡೆಗಳ ಮೇಲೆ ಪ್ರವಾಸಿಗರರು ಹುಚ್ಚಾಟ ಹೆಚ್ಚಾಗಿದೆ. ಹೀಗಾಗಿ ಇದಕ್ಕೆ ಕಡಿವಾಣ ಹಾಕಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ವಾಹನ ಸವಾರರು ಮನವಿ ಮಾಡಿದ್ದಾರೆ. ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರು ಆಡಿದ್ದೇ ಆಟ, ಹೇಳೋರಿಲ್ಲ-ಕೇಳೋರಿಲ್ಲ ಅನ್ನೋವಂತಾಗಿದೆ. ಜಾರುವ ಬಂಡೆಗಳ ಮೇಲೆ ಪ್ರವಾಸಿಗರು ಹತ್ತಿ ಮೋಜು – ಮಸ್ತಿ ಮಾಡುತ್ತಿದ್ದಾರೆ. ಹೀಗಾಗಿ ರಸ್ತೆ ಮಧ್ಯೆ ಟ್ರಾಫಿಕ್ ಜಾಮ್ ಮಾಡ್ಕೊಂಡು ಟೂರಿಸ್ಟ್ ಗಳು ಡ್ಯಾನ್ಸ್ ಮಾಡುವ ಮೂಲಕ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿದ್ದಾರೆ. ಕೆಲ ಪ್ರವಾಸಿಗರು ಜಾರುವ ಬಂಡೆಗಳ ಮೇಲೆ ಹತ್ತಿ ಫೋಟೋಗೆ ಪೋಸ್ ಕೊಡುತ್ತಿದ್ದಾರೆ. ಈ ವೇಳೆ ಸ್ವಲ್ಪ ಯಾಮಾರಿ ಜಾರಿ ಬಿದ್ದರೂ ಕೈ-ಕಾಲುಗಳಿಗೆ ಗಾಯಗಳಾಗುವ ಸಾಧ್ಯತೆಗಳಿವೆ. ಈ ಹಿಂದೆ ಬಿದ್ದು ಕೈ-ಕಾಲು ಮುರ್ಕೊಂಡು, ತಲೆ ಹೊಡೆದುಕೊಂಡಿರುವ ಹಾಗೂ ಪ್ರಾಣವೂ ಹೋದ ಉದಾಹರಣೆಗಳು ಸಾಕಷ್ಟಿವೆ. ರಸ್ತೆ ಮಧ್ಯೆ ಯುವಕ-ಯುವತಿಯ ಮೋಜು-ಮಸ್ತಿಗೆ ವಾಹನ ಸವಾರರು ಬೇಸತ್ತು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುವಂತೆ ವಾಹನ ಸವಾರರು ಮನವಿ ಮಾಡಿದ್ದಾರೆ.
ಉಡುಪಿ : ಮಲ್ಪೆ ಬೀಚ್‌ನಲ್ಲಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಮಹಿಳೆಯೊಬ್ಬರನ್ನು ಲೈಫ್‌ಗಾರ್ಡ್ ತಂಡ ರಕ್ಷಿಸಿರುವ ಘಟನೆ ಇಂದು ಸಂಜೆ ನಡೆದಿದೆ. 30 ವರ್ಷ ಪ್ರಾಯದ ಮಹಿಳೆಯೊಬ್ಬರು ಮಲ್ಪೆ ಬೀಚ್‌ಗೆ ತನ್ನ ಮಗನೊಂದಿಗೆ ಬಂದಿದ್ದು, ಅಲ್ಲಿ ಆತ್ಮಹತ್ಯೆ ಮಾಡುವ ಉದ್ದೇಶದಿಂದ ಆ ಮಹಿಳೆ ಸಮುದ್ರದ ನೀರಿನತ್ತ ಓಡುತ್ತಿದ್ದರೆನ್ನಲಾಗಿದೆ. ಇದನ್ನು ಸ್ಥಳದಲ್ಲಿದ್ದ ಜೀವರಕ್ಷಕ ದಳದವರು ಗಮನಿಸಿದ್ದು, ತಕ್ಷಣವೇ ಆ ಮಹಿಳೆಯನ್ನು ರಕ್ಷಿಸಿ ತೀರಕ್ಕೆ ಕರೆತಂದರು. ಘಟನೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಬಳಿಕ ಆ ಮಹಿಳೆ ಮತ್ತು ಮಗನನ್ನು ಜೀವರಕ್ಷಕ ದಳದವರು ಮಲ್ಪೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಉಪ್ಪಿನಂಗಡಿ; ಪೋಕ್ಸೋ ಪ್ರಕರಣದ ಆರೋಪಿ ಕಲ್ಲೇರಿ ನಿವಾಸಿ ಮೈಸೂರಿನಲ್ಲಿ ಅರೆಸ್ಟ್ ಉಪ್ಪಿನಂಗಡಿ; ಫೋಕ್ಸೋ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೈಸೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಲ್ಲೇರಿ ಜನತಾ ಕಾಲೋನಿ ನಿವಾಸಿ ಮುನಾಸಿರ್(21) ಎಂದು ಗುರುತಿಸಲಾಗಿದೆ. ಮುನಾಸಿರ್ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.
ಮಂಗಳೂರು: ಮಂಗಳೂರಿನ ಉಚ್ಚಿಲ ಬಟ್ಟಪಾಡಿ ಬಳಿ ಅರಬ್ಬಿ ಸಮುದ್ರದಲ್ಲಿ ವಿದೇಶಿ ಸರಕು ಸಾಗಣೆ ಹಡಗು ಮುಳುಗಡೆಯಾಗಿದ್ದು, ತೈಲ ಸೋರಿಕೆ ಆತಂಕ ಎದುರಾಗಿದೆ. ಸಿರಿಯಾದ ಎಂಬಿ ಪ್ರಿನ್ಸೆಸ್ ಮಿರಲ್ ವ್ಯಾಪಾರಿ ಹಡಗು ಚೀನಾದಿಂದ ಲೆಬನಾನ್ ಗೆ ಸ್ಟೀಲ್ ಕಾಯಿಲ್ ಸಾಗಿಸುತ್ತಿತ್ತು. ಸುಮಾರು 8 ಸಾವಿರ ಟನ್ ಸ್ಟೀಲ್ ಕಾಯಿಲ್ ಸಾಗಿಸುತ್ತಿದ್ದ ವೇಳೆ ತಾಂತ್ರಿಕ ದೋಷದಿಂದಾಗಿ ಅರಬ್ಬಿ ಸಮುದ್ರದಲ್ಲಿ ಜೂನ್ 23ರಂದು ಮುಳುಗಿದೆ. ಇಂಡಿಯನ್ ಕೋಸ್ಟ್ ಗಾರ್ಡ್ ನಿಂದ 15 ಸಿಬ್ಬಂದಿಗಳನ್ನು ರಕ್ಷಿಸಲಾಗಿದೆ. ಆದರೆ ಇದೀಗ ಹಡಗಿನಿಂದ ತೈಲ ಸೋರಿಕೆಯಾಗುವ ಆತಂಕ ಎದುರಾಗಿದೆ. ಇದರಿಂದ ಮತ್ಸ್ಯ ಸಂಕುಲ ನಾಶವಾಗುವ ಭೀತಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಕೋಸ್ಟ್ ಗಾರ್ಡ್ ಕಟ್ಟೆಚ್ಚರ ಘೋಷಣೆ ಮಾಡಿದೆ. ಮತ್ತೊಂದೆಡೆ ತೈಲ ಸೋರಿಕೆಯಾದರೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸಭೆ ನಡೆಸಲಾಗುತ್ತಿದೆ.
ವಾರಣಾಸಿ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಪಕ್ಷಿಯೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ. ಇದಾದ ಬಳಿಕ ವಾರಣಾಸಿಯ ಪೊಲೀಸ್ ಲೈನ್ ನಲ್ಲಿ ಸಿಎಂ ಯೋಗಿ ಇದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಲಾಗಿದೆ. ಹೆಲಿಕಾಪ್ಟರ್ ಪೊಲೀಸ್ ಲೈನ್ ನಿಂದ ಸುಲ್ತಾನ್ ಪುರಕ್ಕೆ ಟೇಕ್ ಆಫ್ ಆಗಿತ್ತು, ಆದರೆ ಪಕ್ಷಿ ಡಿಕ್ಕಿ ಹೊಡೆದ ನಂತರ, ಪೊಲೀಸ್ ಲೈನ್ ನಲ್ಲಿಯೇ ತುರ್ತು ಲ್ಯಾಂಡಿಂಗ್ ಮಾಡಲಾಯಿತು. ಹೆಲಿಕಾಪ್ಟರ್ ನ ತಾಂತ್ರಿಕ ಪರೀಕ್ಷೆ ನಡೆಸಲಾಗಿದೆ. ವಿಶೇಷ ವಿಮಾನ ಲಕ್ನೋದಿಂದ ವಾರಣಾಸಿಗೆ ತಲುಪಿದ ನಂತರ ಸಿಎಂ ಯೋಗಿ ಪ್ರಯಾಣ ಮುಂದುವರೆಸಿದ್ದಾರೆ. ಸಿಎಂ ಯೋಗಿ ಹೆಲಿಕಾಪ್ಟರ್ ಸುರಕ್ಷಿತವಾಗಿ ಲ್ಯಾಂಡ್ ಆದ ನಂತರ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ ಎಂದು ಹೇಳಲಾಗಿದೆ.
ಉಳ್ಳಾಲ: ಪ್ರವಾಸಕ್ಕೆಂದು ಬೆಂಗಳೂರಿನಿಂದ ಬಂದ ತಂಡಗಳೆರಡು ಕುಡಿದ ಅಮಲಿನಲ್ಲಿ ಪರಸ್ಪರ ಹೊಡೆದಾಡಿಕೊಂಡು ಸ್ಥಳೀಯ ಮನೆಗೆ ನುಗ್ಗಿ ತೊಂದರೆ ನೀಡಿದ ಘಟನೆ ಉಚ್ಚಿಲ ಬಟ್ಟಪ್ಪಾಡಿಯ ಖಾಸಗಿ ಗೆಸ್ಟ್ ಹೌಸ್‌ನಲ್ಲಿ ನಡೆದಿದೆ.ಗೆಸ್ಟ್‌ಹೌಸ್‌ನಲ್ಲಿ ತಡರಾತ್ರಿಯವರೆಗೂ ಪಾರ್ಟಿ ನಡೆಯುತ್ತಿತ್ತು. ಇದಕ್ಕಾಗಿ ಎರಡು ಬಸ್‌ಗಳಲ್ಲಿ ಬೆಂಗಳೂರಿನಿಂದ ಜನರು ಬಂದಿದ್ದರು. ಪಾರ್ಟಿ ನಡೆಸಿ ಕೊನೆಗೆ ಬಂದಿದ್ದ ಜನರು ಎರಡು ತಂಡಗಳಾಗಿ ಹೊಡೆದಾಡಿಕೊಂಡಿದ್ದಾರೆ. ಈ ಹೊಡೆದಾಟವು ಗೆಸ್ಟ್‌ಹೌಸ್ ಒಳಗಿನಿಂದ ಹೊರಭಾಗಕ್ಕೂ ಬಂದಿದ್ದು, ಈ ವೇಳೆ ಕುಡಿತದ ಅಮಲಿನಲ್ಲಿದ್ದವರು ಸ್ಥಳೀಯ ಮನೆಯೊಂದಕ್ಕೆ ನುಗ್ಗಿ ಮನೆಯವರಿಗೆ ತೊಂದರೆ ನೀಡಿದ್ದಾರೆ.ಪಾರ್ಟಿ, ಕುಡಿತದ ಅಮಲಿನಲ್ಲಿದ್ದವರು ಮನೆಗೆ ನುಗ್ಗಿ ತೊಂದರೆ ನೀಡಿದ್ದನ್ನು ವಿರೋಧಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ ಘಟನೆಯೂ ನಡೆಯಿತು.
ಕೋಲ್ಕತ: ಚಿಕಿತ್ಸೆಗೆ ಹೆದರಿ ಅವಿತು ಕೂತ ರೋಗಿಯೊಬ್ಬ ಆಸ್ಪತ್ರೆಯ ಏಳನೇ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾನೆ. ನೆಲಕ್ಕೆ ಬೀಳುವ ಮೊದಲು ಕಟ್ಟಡದ ಗೋಡೆಯ ಅಂಚಿಗೆ ಎರಡು ಸಲ ತಾಗಿದ್ದರಿಂದ ಈತನ ತಲೆಬುರುಡೆ, ಪಕ್ಕೆಲುಬು ಮತ್ತು ಕೈಗಳಿಗೆ ಗಂಭಿರ ಗಾಯಗಳಾಗಿವೆ. ಪಶ್ಚಿಮಬಂಗಾಳದ ಕೋಲ್ಕತದ ಮುಲ್ಲಿಕ್ಬಜಾರ್ ಎಂಬಲ್ಲಿನ ಖಾಸಗಿ ಮಾನಸಿಕ ಆಸ್ಪತ್ರೆಯೊಂದರಲ್ಲಿ ಈ ಅವಘಡ ಸಂಭವಿಸಿದೆ. ಸುಜಿತ್ ಅಧಿಕಾರಿ ಎಂಬಾತನೇ ಕೆಳಕ್ಕೆ ಬಿದ್ದ ರೋಗಿ. ಈತ ಚಿಕಿತ್ಸೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಶನಿವಾರ ಬೆಳಗ್ಗೆ ಏಳನೇ ಮಹಡಿಯಲ್ಲಿದ್ದ ವಾರ್ಡ್ನ ಕಿಟಕಿಯಿಂದ ಹೊರಗೆ ಬಂದು ಅಂಚಿನಲ್ಲಿ ಸುಮಾರು ಎರಡು ಗಂಟೆ ಕೂತಿದ್ದ. ಹೈಡ್ರಾಲಿಕ್ ಏಣಿ ಬಿಟ್ಟು ಅದರಿಂದ ಇಳಿ ಎಂದರೂ ಇಳಿಯದ ಈತನನ್ನು ರಕ್ಷಿಸಲು ಆಸ್ಪತ್ರೆಯವರು ಹಾಗೂ ಇತರರು ಎಷ್ಟೇ ಮನವೊಲಿಸಲು ಯತ್ನಿಸಿದರೂ ಪ್ರಯೋಜನ ಆಗಲಿಲ್ಲ. ಬಳಿಕ ರಕ್ಷಣಾ ತಂಡದವರು ಕೆಳಗ್ಗೆ ನೆಟ್ ಹಾಕಿ ಈತನನ್ನು ಬಚಾವ್ ಮಾಡಲು ಪ್ರಯತ್ನಿಸಿದ್ದರು. ಅಷ್ಟರಲ್ಲಿ ಆತ ಕೈಜಾರಿ ಕೆಳಕ್ಕೆ ಬಿದ್ದಿದ್ದು, ಬೀಳುವ ಎರಡು ಕಡೆ ಕಟ್ಟಡದ ಭಾಗ ತಾಗಿದ್ದು, ತಲೆಬುರುಡೆ ಪಕ್ಕೆಲುಬು, ಕೈಗಳು…
ಬ್ರಹ್ಮಾವರ: ಬ್ರಹ್ಮಾವರ ಠಾಣೆ ವ್ಯಾಪ್ತಿಯ ಮಾಬುಕಳ ಸೇತುವೆಯ ಸಮೀಪ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾರೆ. ಕಾರು ಚಾಲಕ ಅತಿ ವೇಗದಿಂದ ಕುಂದಾಪುರದಿಂದ ಉಡುಪಿಯತ್ತ ಕಾರು ಚಲಾಯಿಸಿಕೊಂಡು ಬರುತ್ತಿದ್ದಾಗ ನಿಯಂತ್ರಣ ಸಿಗದೆ ರಸ್ತೆ ವಿಭಜಕ ದಾಟಿ ಕುಂದಾಪುರದತ್ತ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಿಂದ ಕಾರು ನಜ್ಜುಗುಜ್ಜಾಗಿದೆ. ಅಪಘಾತದ ತೀವ್ರತೆಗೆ ಕಾರು ಚಾಲಕನ ಕೈ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ರಹ್ಮಾವರ ಠಾಣೆಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಸಾಲುಮರದ ತಿಮ್ಮಕ್ಕಗೆ ಬಿಡಿಎ ನಿವೇಶನ ಮಂಜೂರು ಮಾಡಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಮ್ಮಕ್ಕಗೆ ನಿವೇಶನ ಕ್ರಯಪತ್ರವನ್ನು ಹಂಚಿಕೆ ಮಾಡಿದರು. ಕೆಲ ದಿನಗಳ ಹಿಂದಷ್ಟೇ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಸಾಲುಮರದ ತಿಮ್ಮಕ್ಕ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ನಂತರ ಸಿಎಂ ಸೂಚನೆ ಮೇರೆಗೆ ಬಿಡಿಎ ನಿವೇಶನ ಹಂಚಿಕೆ ಪತ್ರವನ್ನು ತಿಮ್ಮಕ್ಕನಿಗೆ ನೀಡಿತ್ತು.ಇಂದು ಬೆಳಗ್ಗೆ ರೇಸ್ ಕೋರ್ಸ್ ನಿವಾಸದಲ್ಲಿ ಸಾಲುಮರದ ತಿಮ್ಮಕ್ಕ ಹಾಗೂ ಆಕೆಯ ಸಾಕು ಪುತ್ರನಿಗೆ ಕರಾರು ಪತ್ರವನ್ನು ಸಿಎಂ ನೀಡಿದರು. ಇನ್ನು ಮುಖ್ಯಮಂತ್ರಿ ಬೊಮ್ಮಾಯಿ ಅವರ ಸೂಚನೆ ಮೇರೆಗೆ ಕೆಂಪೇಗೌಡ ಬಡಾವಣೆಯ 7ನೇ ಬ್ಲಾಕ್ ನಲ್ಲಿ ನಿವೇಶನವನ್ನು ಗುರುತಿಸಿ ವಿತರಿಸಲಾಗುತ್ತಿದೆ ಎಂದು ಬಿಡಿಎ ಅಧ್ಯಕ್ಷ ವಿಶ್ವನಾಥ್ ಹೇಳಿದ್ದಾರೆ. ತಿಮ್ಮಕ್ಕನಿಗೆ 50#80 ಚದರ ಅಡಿಯ ನಿವೇಶನ ಹಂಚಿಕೆ ಮಾಡಲಾಗಿದೆ ಎಂದರು.