ಬಂಟ್ವಾಳ : ಮೆರೈನ್ ಇಂಜಿನಿಯರಿಂಗ್ ಮಾಡುತ್ತಿರುವ ಯುವಕನಿಗೆ ಇನ್ಸ್ಟಾಗ್ರಾಂ ಮೂಲಕ ಪರಿಚಿತನಾದ ವ್ಯಕ್ತಿಯೊಬ್ಬ ಮೆರೈನ್ ಕ್ಷೇತ್ರದಲ್ಲಿ ಕೆಲಸ ದೊರಕಿಸಿಕೊಡುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಯುವಕ ಇದೀಗ ಪೊಲೀಸರ ಮೊರೆ ಹೋಗಿದ್ದಾನೆ. ಪೆರ್ನೆ ನಿವಾಸಿ ಭವಿತ್ ಕೆ ಎನ್ (23) ವಂಚನೆಗೊಳಗಾದ ಮೆರೈನ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯಾಗಿದ್ದು, ಆರೋಪಿಯನ್ನು ಪ್ರಜ್ವಲ್ ಎಂದು ಹೆಸರಿಸಲಾಗಿದೆ. ಭವಿತ್ ಅವರಿಗೆ ಪ್ರಜ್ವಲ್ ಎಂಬಾತ ಸಾಮಾಜಿಕ ಜಾಲತಣವಾದ ಇನ್ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದು, ಆತನನ್ನು ಕಳೆದ ಜೂನ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಭೇಟಿಯಾಗಿರುತ್ತಾನೆ. ಭೇಟಿ ವೇಳೆ ಮಾತುಕತೆ ನಡೆದು ಮೆರೈನ್ ಕೆಲಸಕ್ಕಾಗಿ 3 ಲಕ್ಷ ಖರ್ಚು ಇದೆ ಎಂದು ಹೇಳಿದಂತೆ ಭವಿತ್ ಅವರು ಜೂನ್ 16 ರಿಂದ ಆಗಸ್ಟ್ 28ರ ಅವಧಿಯಲ್ಲಿ ಹಂತ ಹಂತವಾಗಿ ಪ್ರಜ್ವಲ್ ಖಾತೆಗೆ ಒಟ್ಟು 2.10 ಲಕ್ಷ ರೂಪಾಯಿ ಪಾವತಿಸಿದ್ದಾನೆ. ಬಳಿಕ ಪ್ರಜ್ವಲ್ ನಿಮಗೆ ಕೆಲಸ ಕೊಡಲು ಅಗುವುದಿಲ್ಲ. 10 ದಿನಗಳಲ್ಲಿ ನಿಮ್ಮ ಹಣ ವಾಪಾಸು ನೀಡುತ್ತೇನೆ…
Author: main-admin
ಸುಳ್ಯ: ಕಾಣಿಯೂರು ಖಾಸಗಿ ಶಾಲೆಯ 8ನೇ ತರಗತಿಯ ವಿದ್ಯಾರ್ಥಿ ಲೋಕನಾಥ್ ಎಂಬವರ ಮಗ ಶ್ರೇಯಸ್ (15ವ) ಜ.23 ರಂದು ಬೆಳಿಗ್ಗೆ ನಾಪತ್ತೆಯಾಗಿದ್ದು, ಇದೀಗ ಮಂಗಳೂರಿನಲ್ಲಿ ಪತ್ತೆಯಾಗಿದ್ದಾನೆ. ಬಾಲಕನನ್ನು ಬಂದರು ಪೊಲೀಸರು ಪತ್ತೆ ಹಚ್ಚಿದ್ದು, ಮನೆಯವರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.
ಕುಂದಾಪುರ: ಕುಂದಾಪುರ ಸಂಚಾರಿ ಪೊಲೀಸರು ಮಂಗಳವಾರ ವಾಹನ ಚಾಲಕರಿಗೆ ಸಂಚಾರ ಜಾಗೃತಿ ಮೂಡಿಸಿದ್ದಾರೆ. ನಿಯಮ ಮೀರಿ ಸಂಚರಿಸಿದರೆ ಯಮನ ಪಾದ ಸೇರಬೇಕಾಗುತ್ತದೆ ಎನ್ನುವ ಸೂಚನೆ ನೀಡಲು ಸ್ವತಃ ಯಮನ ಪಾತ್ರಧಾರಿಯನ್ನೂ ಪಕ್ಕದಲ್ಲಿಯೇ ನಿಲ್ಲಿಸಿಕೊಂಡು ಚಾಲಕರಿಗೆ ಹೂ ಕೊಟ್ಟು ಜಾಗೃತಿ ಮೂಡಿಸಲಾಯಿತು. ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ನಡೆದ ಈ ಜಾಗೃತಿ ಕಾರ್ಯಕ್ರಮದಲ್ಲಿ ಕುಂದಾಪುರದ ಶಾಸ್ತ್ರೀ ವೃತ್ತದಲ್ಲಿ ಪೊಲೀಸ್ ವೃತ್ತ ನಿರೀಕ್ಷಕ ನಂದಕುಮಾರ್, ನಗರ ಠಾಣೆ ಉಪನಿರೀಕ್ಷಕರ ವಿನಯ್ ಕೊರ್ಲಹಳ್ಳಿ, ಸಂಚಾರಿ ಉಪನಿರೀಕ್ಷಕ ಸುಬ್ಬಣ ಸೇರಿದಂತೆ ಪೊಲೀಸರು ಜಾಗೃತಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.ಅತೀ ವೇಗದ ಚಾಲನೆ, ವಾಹನ ನಿಲ್ಲುವ ಮೊದಲೇ ಹತ್ತುವುದು ಅಥವಾ ಇಳಿಯುವುದು ರಸ್ತೆ ಪಕ್ಕದಲ್ಲಿ ಗುಂಪಾಗಿ ಸಂಚರಿಸುವುದು, ಚಾಲನೆ ಸಂದರ್ಭ ಮೊಬೈಲ್ ಬಳಸುವುದು, ಅವಕಾಶವಿಲ್ಲದ ಸ್ಥಳದಲ್ಲಿ ಸಂಚಾರ, ಕರ್ಕಶ ಹಾರ್ನ್ ಇತ್ಯಾದಿ ನಿಯಮಗಳ ಉಲ್ಲಂಘನೆಗಳ ಬಗ್ಗೆ ಮಾಹಿತಿ ನೀಡಿದರು. ಸಂದರ್ಭ ಕರಪತ್ರಗಳು ಹಾಗೂ ಆಟೋ ರಿಕ್ಷಾದಲ್ಲಿ ಧ್ವನಿವರ್ಧಕಗಳ ಮೂಲಕವೂ ಜಾಗೃತಿ ಮೂಡಿಸಲಾಯಿತು.
ಬ್ರಹ್ಮಾವರ:ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಜನವರಿ. 21 ರಂದು ಉಡುಪಿಯ ಬ್ರಹ್ಮಾವರದ ಕುಮ್ರ ಗೋಡು ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಸಾದ ಕುಮಾರ್, ಆರೋನ್, ಸಂತೋಷ ಎಂಬವರನ್ನು ಬಂಧಿಸಲಾಗಿದೆ.ಬಂಧಿತರಿಂದ ಕೋಳಿ ಅಂಕಕ್ಕೆ ಬಳಸಲಾದ ಒಂದು ಕೋಳಿ ಮತ್ತು ಏಳು ಬೈಕ್ ಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮಂಗಳೂರು: ಕಾರು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು, ಪೊಲೀಸ್ ಸಿಬ್ಬಂದಿ ಗಾಯಗೊಂಡ ಘಟನೆ ನಗರದ ಹೊರವಲಯದ ಪಡೀಲ್ ಪೊಲೀಸ್ ಚೆಕ್ ಪೋಸ್ಟ್ ಬಳಿ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಒರಿಸ್ಸಾ ಮೂಲದ ಮಾಲಿಕ್ (48) ಇಂದು ಗುರುತಿಸಲಾಗಿದೆ. ಮಂಗಳೂರು ನಗರದ ಹೊರವಲಯದ ಪಡೀಲ್ ಚೆಕ್ ಪೋಸ್ಟ್ ಬಳಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಈ ಸಂದರ್ಭ ಹರೀಶ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಬಿ.ಸಿ.ರೋಡ್ ಕಡೆಯಿಂದ ತೀರಾ ನಿರ್ಲಕ್ಷ್ಯದಿಂದ ಚಲಾಯಿಸಿಕೊಂಡು ಬಂದ ಕಾರು ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3064 ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಜ. 28 ಬೆಳಿಗ್ಗೆ 11 ರಿಂದ 12.30 ಗಂಟೆವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ. ಅರ್ಹ ಅಭ್ಯರ್ಥಿಗಳಿಗೆ ಎಸ್‌ಎಂಎಸ್ ಮೂಲಕ ಕರೆಪತ್ರದ ಬಗ್ಗೆ ಎಸ್‌ಎಂಎಸ್ ಮೂಲಕ ಮಾಹಿತಿ ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್‌ಅನ್ನು ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಡಿಐಜಿಪಿ ನೇಮಕಾತಿ ಹಾಗೂ ಸಮನ್ವಯಾಧಿಕಾರಿ ಎಪಿಸಿ ನೇಮಕಾತಿ ಸಮಿತಿ ಡೈರಕ್ಟರ್‌ಜನರಲ್ ಆಫ್ ಪೊಲೀಸ್ ನೇಮಕಾತಿ, ಬೆಂಗಳೂರು ಇವರು ಪ್ರಕಟಣೆ ಹೊರಡಿಸಿದ್ದಾರೆ.
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಕನ್ನಾಜೆ ಎಂಬಲ್ಲಿ ಮನೆಯಲ್ಲಿದ್ದ ಮಗು ಆಟವಾಡುತ್ತಾ ತೋಟದಲ್ಲಿದ್ದ ಕೆರೆ ಬಳಿ ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ರೋಷನ್ ಡಿಸೋಜಾ ಮತ್ತು ಉಷಾ ಡಿಸೋಜಾ ದಂಪತಿಗಳ ಒಬ್ಬನೇ ಮಗ ರೇಯನ್ ಡಿಸೋಜಾ(1ವರ್ಷ 11 ತಿಂಗಳು) ಜ.22 ರಂದು ಬೆಳ್ತಂಗಡಿ ಮನೆಯ ತೋಟದಲ್ಲಿರುವ ಕೆರೆಗೆ ಬಿದ್ದು ಸಾವನ್ನಪ್ಪಿದೆ. ಇನ್ನು ತಕ್ಷಣ ಮನೆಯವರು ಮತ್ತು ಸ್ಥಳೀಯರ ಸಹಕಾರದಲ್ಲಿ ಲಾಯಿಲ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದರೂ ಮಗು ಸಾವನ್ನಪ್ಪಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ತಂದೆ ರೋಷನ್ ದೂರು ನೀಡಿದ್ದಾರೆ.
ಐದು ವರ್ಷದ ಬಾಲಕಿಯೊಬ್ಬಳು ಮೊಬೈಲ್‌ನಲ್ಲಿ ಕಾರ್ಟೂನ್ ನೋಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಹಸನ್‌ಪುರ ಕೊತ್ವಾಲಿಯ ಹತೈಖೇಡಾದಲ್ಲಿ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಕಾಮಿನಿ (5) ಎಂದು ಗುರುತಿಸಲಾಗಿದೆ. ಬಾಲಕಿ ತನ್ನ ತಾಯಿಯ ಪಕ್ಕದಲ್ಲಿ ಮಲಗಿ ಕಾರ್ಟೂನ್ ನೋಡುತ್ತಿದ್ದಳು. ಈ ವೇಳೆ ಇದ್ದಕ್ಕಿದ್ದಂತೆ ಅವಳ ಕೈಯಿಂದ ಫೋನ್ ಬಿದ್ದಿತು ಮತ್ತು ಮಗು ಪ್ರಜ್ಞೆ ತಪ್ಪಿತು. ಕೂಡಲೇ ಆಕೆಯನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಆಕೆಯ ಸಾವಿಗೆ ಹೃದಯ ಸ್ತಂಭನವೇ ಕಾರಣ ಎಂದು ಹಸನ್‌ಪುರ ಸಮುದಾಯ ಆರೋಗ್ಯ ಕೇಂದ್ರದ ಉಸ್ತುವಾರಿ ಧ್ರುವೇಂದ್ರ ಕುಮಾರ್ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಹಸ್ತಾಂತರಿಸುವಂತೆ ವೈದ್ಯರು ಮತ್ತು ಅಧಿಕಾರಿಗಳು ಕುಟುಂಬಕ್ಕೆ ಮನವಿ ಮಾಡಿದರು ಆದರೆ ಅವರು ನಿರಾಕರಿಸಿದರು. ಸಾವಿಗೆ ಹೃದಯಾಘಾತವೇ ಕಾರಣವೇ ಅಥವಾ ಬೇರೆ ಯಾವುದಾದರೂ ಕಾಯಿಲೆಯೇ ಎಂಬುದು ತನಿಖೆಯ ಅಗತ್ಯವಿದೆ ಎಂದು ಅಮ್ರೋಹಾ ಮುಖ್ಯ ವೈದ್ಯಾಧಿಕಾರಿ ಸತ್ಯಪಾಲ್ ಸಿಂಗ್ ಹೇಳಿದ್ದಾರೆ.
ಅಯ್ಯೋಧೆ: ಕೆಲ ನಿಮಿಶಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ರಾಮಮಂದಿರ, ರಾಮಲಲ್ಲಮೂರ್ತಿಯನ್ನು ಲೋಕಾರ್ಪಣೆ ಮಾಡಿದ್ದು, ಈ ಮೂಲಕ ಐದು ಶತಮಾನಗಳ ಕಾಯುವಿಕೆ ಅಂತ್ಯವಾಗಿದೆ. ರಾಮ್ ಲಲ್ಲಾ ವಿಗ್ರಹ ಪ್ರತಿಷ್ಠಾಪನಾ ಆಚರಣೆಗಾಗಿ ಪ್ರಧಾನಿ ಮೋದಿ ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದರು. ದೇವಲಾಯದ ಅವರಣದಲ್ಲಿ ನೇರವೇರಿದ ಆಚರಣೆಗಳಲ್ಲಿ ಅವರು ಭಾಗವಹಿಸಿದರು. ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರ ಪ್ರದೇಶ ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ದೇವಾಲಯದ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಸೇರಿದಂತೆ ಇತರ ಗಣ್ಯರ ಸಮ್ಮುಖದಲ್ಲಿ ಈ ಕಾರ್ಯಕ್ರಮ ನೇರವೇರಿದೆ. ಕ್ರಿಕೆಟ್ ದಂತಕಥೆಗಳಾದ ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್ ಕೊಹ್ಲಿ, ಎಂಎಸ್ ಧೋನಿ, ಬಾಲಿವುಡ್ ಸೂಪರ್ಸ್ಟಾರ್ಗಳಾದ ಅಮಿತಾಬ್ ಬಚ್ಚನ್, ರಜನಿಕಾಂತ್, ಅನುಷ್ಕಾ ಶರ್ಮಾ, ಆಲಿಯಾ ಭಟ್, ರಣಬೀರ್ ಕಪೂರ್ ಮತ್ತು ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿ ಸೇರಿದಂತೆ 7,000 ಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ…
ಸುಳ್ಯ : ಯಕ್ಷಗಾನ ಕಲಾವಿದರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ನಡೆದಿದೆ.ಮೃತರನ್ನು ಯಕ್ಷಗಾನದ ಹಿಮ್ಮೇಳದಲ್ಲಿ ಚೆಂಡೆ, ಮದ್ದಳೆ ವಾದಕರಾಗಿ ಪ್ರಸಿದ್ಧರಾಗಿದ್ದ, ಕೃಷಿಕ ನಾರಾಯಣ ನಾಯಕ್ ತೋಟಚಾವಡಿ (52) ಎಂದು ಗುರುತಿಸಲಾಗಿದೆ. ಮರ್ಕಂಜ ಗ್ರಾಮದ ತೋಟಚಾವಡಿ ನಾರಾಯಣ ನಾಯಕ್ ಅವರು ಮುಂಜಾನೆ ವೇಳೆ ತುಂಬಾ ಹೊತ್ತು ಮನೆಯಲ್ಲಿ ಬಾಗಿಲು ಹಾಕಿಕೊಂಡಿರುವುದನ್ನು ಗಮನಿಸಿದ ಪಕ್ಕದ ಮನೆಯವರು ಮನೆ ಬಳಿ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಇವರಿಗೆ ಇಬ್ಬರು ಪುತ್ರಿಯರಿದ್ದು,ಇಬ್ಬರಿಗೂ ಮದುವೆಯಾಗಿತ್ತು. ಇವರ ಪತ್ನಿ ಮಗಳ ಮನೆಗೆ ಹೋಗಿದ್ದ ಸಂದರ್ಭದಲ್ಲಿ ಈ ಕೃತ್ಯವೆಸಗಿದ್ದಾರೆಂದು ತಿಳಿದು ಬಂದಿದೆ.ಸುಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.










