ಮಂಗಳೂರು: ನಗರದ ಕೈಕಂಬ ಸಮೀಪ ಪ್ರಕರಣವೊಂದಕ್ಕೆ ನ್ಯಾಯಾಲಯದಿಂದ 5 ವರ್ಷಗಳ ಶಿಕ್ಷೆಗೆ ಒಳಗಾಗಿದ್ದ ವಿಟ್ಲ ಕರಪಾಡಿ ಗ್ರಾಮದ ಮುಗೋಳಿ ಮನೆಯ ಫಾರೂಕ್ ಯಾನೆ ಫಾರೂಕ್ ಅಹಮ್ಮದ್ (36 ) ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನನ್ನು ಕಾಸರಗೋಡು ಜಿಲ್ಲೆಯ ಉಪ್ಪಳದ ಮುಳಿಗದ್ದೆಯಿಂದ ಬಜಪೆ ಪೊಲೀಸ್ ನಿರೀಕ್ಷಕ ಸಂದೀಪ್ ನೇತೃತ್ವದ ತಂಡ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಮಾರ್ಗದರ್ಶನದಂತೆ, ಡಿಸಿಪಿಯವರಾದ ಸಿದ್ದಾರ್ಥ ಗೋಯೆಲ್ (ಕಾ.ಮತ್ತು ಸು) ಮತ್ತು ದಿನೇಶ್ ಕುಮಾರ್ (ಅಪರಾಧ ಮತ್ತು ಸಂಚಾರ) ನಿರ್ದೇಶನದಂತೆ ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ಮತ್ತು ಪೊಲೀಸ್ ನಿರೀಕ್ಷಕ ಸಂದೀಪ್ ಜಿ.ಎನ್. ನೇತೃತ್ವದಲ್ಲಿ ಪಿಎಸ್‌ಐಗಳಾದ ಗುರಪ್ಪ ಕಾಂತಿ, ರೇವಣ ಸಿದ್ದಪ್ಪ ಮತ್ತು ಸಿಬಂದಿ ವರ್ಗದ ಎ.ಎಸ್.ಐ ರಾಮ ಪೂಜಾರಿ, ಎಚ್‌ಸಿ ಗಳಾದ ಜಗದೀಶ್, ಸುಜನ್ ಪಿಸಿಗಳಾದ ಬಸವರಾಜ್ ಪಾಟೀಲ್, ಕೆಂಚಪ್ಪ ಅವರು ಈ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
Author: main-admin
ನಕಲಿ ದಾಖಲಾತಿ ಸೃಷ್ಟಿಸಿ ಬ್ಯಾಂಕ್‌ನಿಂದ ಸಾಲ ಪಡೆಯಲು ಏಜೆಂಟ್‌ಗಳಿಗೆ ಸಹಕಾರ ನೀಡುತ್ತಿದ್ದ ಆರೋಪದಡಿ ವಿವಿಧ ಬ್ಯಾಂಕ್‌ಗಳ ನಾಲ್ವರು ವ್ಯವಸ್ಥಾಪಕರನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿವಿಧ ಬ್ಯಾಂಕ್‌ಗಳ ವ್ಯವಸ್ಥಾಪಕರಾದ ಮಲ್ಲಿಕಾರ್ಜುನ್, ಮುರಳೀಧರ್, ಶಶಿಕಾಂತ್, ರಾಕೇಶ್ ಬಂಧಿತರು. ನಕಲಿ ದಾಖಲಾತಿ ಸೃಷ್ಟಿಸಿ ಬ್ಯಾಂಕ್‌ನಿಂದ ಸಾಲ ಪಡೆಯುತ್ತಿದ್ದ ಏಜೆಂಟ್‌ಗಳ ವಿರುದ್ಧ ಪುಟ್ಟೇನಹಳ್ಳಿ ಹಾಗೂ ಹುಳಿಮಾವು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸ್ ಇಲಾಖೆ ಹೆಚ್ಚಿನ ತನಿಖೆಗಾಗಿ ಪ್ರಕರಣವನ್ನು ಸಿಸಿಬಿಗೆ ವರ್ಗಾಯಿಸಿತ್ತು. ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಐವರು ಏಜೆಂಟರುಗಳನ್ನು ವಿಚಾರಣೆ ನಡೆಸಿದಾಗ ಏಜೆಂಟರಿಗೆ ಸಾಲ ಪಡೆಯಲು ನೆರವಾಗುತ್ತಿದ್ದ ನಾಲ್ವರು ಬ್ಯಾಂಕ್ ಅಧಿಕಾರಿಗಳ ಸುಳಿವು ಸಿಕ್ಕಿತ್ತು. ಈ ಆಧಾರದ ಮೇಲೆ ನಾಲ್ವರು ಬ್ಯಾಂಕ್ ಅಧಿಕಾರಿಗಳನ್ನು ಬಂಧಿಸಿ ವಿಚಾರಣೆ ಮಾಡಿ ಇದುವರೆಗೆ ಎಷ್ಟು ಪ್ರಮಾಣದಲ್ಲಿ ಅವ್ಯವಹಾರ ನಡೆಸಲಾಗಿದೆ ಎಂಬ ಬಗ್ಗೆ ಸಿಸಿಬಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಒಂಟಿ ವೃದ್ಧರ ಹೆಸರಿನಲ್ಲಿರುವ ನಿವೇಶನ ಅಥವಾ ಮನೆ ಖರೀದಿಸುವ ನೆಪ ಮಾಡಿಕೊಂಡು ಬಂಧಿತ ಏಜೆಂಟರುಗಳು ನಕಲಿ…
ಕುಂದಾಪುರ: ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘ (ರಿ), ಬೆಂಗಳೂರು ಇದರ ಉಡುಪಿ ಜಿಲ್ಲಾ ಹಾಗೂ ಕುಂದಾಪುರ ತಾಲೂಕು ಘಟಕದ ವತಿಯಿಂದ ಹೊಸ ಪಿಂಚಣಿ ಯೋಜನೆಯನ್ನು ಎನ್.ಪಿ.ಎಸ್. ಹಿಂಪಡೆದು ಈ ಹಿಂದಿನಂತೆ ಹಳೆ ಪಿಂಚಣಿ ಯೋಜನೆಯನ್ನು ಒಪಿಎಸ್ ಮರು ಅನುಷ್ಠಾನ ಮಾಡಲು ಶಿಫಾರಸ್ಸು ಮಾಡುವಂತೆ ಬೆಂಬಲ ಕೋರಿ ಕುಂದಾಪುರ ಶಾಸ್ತ್ರೀ ವೃತ್ತದಲ್ಲಿ ಭಾನುವಾರ ಪ್ರತಿಭಟನೆ ನಡೆಯಿತು. ಈ ಸಂದರ್ಭ ಮಾತನಾಡಿದ ಕುಂದಾಪುರ ತಾಲೂಕು ಸರ್ಕಾರೀ ಹೊಸ ಪಿಂಚಣಿ ನೌಕರರ ಸಂಘದ ಅಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಮಾತನಾಡಿ, 2010ರಿಂದ ನಮ್ಮ ಹೋರಾಟ ಶಾಂತಿಯುತವಾಗಿ ನಡೆಯುತ್ತಾ ಬಂದಿದೆ. ಬೆಂಗಳೂರಿನಲ್ಲಿ 15 ದಿನಗಳ ಕಾಲ ಮಾಡು ಇಲ್ಲವೇ ಮಡಿ ಎನ್ನುವ ಹೋರಾಟ ನಡೆದಿದೆ. ರಾಜ್ಯದ 2 ಲಕ್ಷಕ್ಕೂ ಹೆಚ್ಚಿನ ಸರ್ಕಾರೀ ನೌಕರರಿಗೆ ನಿಶ್ಚಿತ ಪಿಂಚಣಿ ಇಲ್ಲದೇ ಅತಂತ್ರವಾಗಿದ್ದು, ನಮ್ಮ ಸಂಧ್ಯಾಕಾಲದಲ್ಲಿ ಜೀವನ ಭದ್ರತೆಯ ಭರವಸೆ ನೀಡಬೇಕು ಎಂದು ಆಗ್ರಹಿಸಿದರು.ಹೊಸ ಪಿಂಚಣಿ ಯೋಜನೆಯಲ್ಲಿ, ನೌಕರರ ಪ್ರತಿ ತಿಂಗಳ ಸಂಬಳದಲ್ಲಿ ಶೇ. 10 ರಷ್ಟು ಕಟಾವಣೆ ಮಾಡಿ,…
ಮಂಗಳೂರು: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯಾಗುತ್ತಿರುವ ಹಿನ್ನಲೆ ಜನವರಿ 22 ರಂದು ರಜೆ ಘೋಷಿಸುವಂತೆ ಹಲವಾರು ಬಿಜೆಪಿ ನಾಯಕರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದು, ಇದೀಗ ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಕೂಡ ಶಾಲಾ- ಕಾಲೇಜುಗಳಿಗೆ ರಜೆ ನೀಡುವಂತೆ ಒತ್ತಾಯಿಸಿದ್ದಾರೆ. ತಾನು ಕೂಡ ರಾಮ ಭಕ್ತ ಎಂದು ಹೇಳುಕೊಳ್ಳುವ ಸಿಎಂ ಸಿದ್ಧರಾಮಯ್ಯ ಅವರು ಮಂದಿರ ಉದ್ಘಾಟನೆಯ ದಿನ ಶಾಲಾ ಕಾಲೇಜುಗಳಿಗೆ ರಜೆ ನೀಡಬೇಕು. ಆ ಮಕ್ಕಳು ಅವರವರ ಮನೆಗಳಲ್ಲಿ ಕುಟುಂಬ ಸಮೇತರಾಗಿ ಸಂಭ್ರಮ, ಪೂಜೆ ನೆರವೇರಿಸಲು ಅವಕಾಶ ಮಾಡಿಕೊಡಬೇಕು. ರಾಮನ ಆದರ್ಶ ಬೋಧಿಸುವಂತಹ ಶಿಕ್ಷಣ ಇಲಾಖೆಯು ಜ. 22 ರಂದು ಮಕ್ಕಳು ಕುಟುಂಬ ಸಮೇತ ಪೂಜೆ, ಸಂಭ್ರಮ ಆಚರಿಸಲು ರಾಜ್ಯ ಶಿಕ್ಷಣ ಇಲಾಖೆ ರಜೆ ನೀಡಿಲ್ಲ. ಇದರಿಂದ ರಾಜ್ಯ ಶಿಕ್ಷಣ ಇಲಾಖೆಯು ರಾಮನ ಆದರ್ಶ ಭೋಧಿಸುವ ನೈತಿಕತೆ ಕಳೆದುಕೊಳ್ಳುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇದೀಗ ಇಡೀ ದೇಶದಲ್ಲಿ ಹಬ್ಬದ ಸಂಭ್ರಮವಿದ್ದು, ಮನೆ ಮನೆಯಲ್ಲೂ ದೀಪಾವಳಿ ಅಚರಣೆಗೆ ತಯಾರಿ ನಡೆಯುತ್ತಿದೆ. ಶಿಕ್ಷಣ ಇಲಾಖೆ ಮಾತ್ರ…
ಮಂಗಳೂರು: ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಸಂದರ್ಭ ಜ.21ರಂದು ರಾತ್ರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಸಕ ವಿ. ಸುನಿಲ್ ಕುಮಾರ್ ಹಾಗೂ ಚಲನಚಿತ್ರ ನಟ ವಿಘ್ನೇಶ್ ಎಂ. ಉಪಸ್ಥಿತರಿರಲಿದ್ದಾರೆ. ಈ ಸಂದರ್ಭ ರಕ್ಷಿತ್ ಪಡ್ರೆ ಅವರು ಅಭಿನಯಿಸುವ ಶ್ವೇತಕುಮಾರ ಚರಿತ್ರೆ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.ಬಪ್ಪನಾಡು, ಸಸಿಹಿತ್ಲು, ಹೊಸನಗರ, ಎಡನೀರು ಮೇಳದಲ್ಲಿ ಕಲಾಸೇವೆ ಮಾಡಿ ಈಗ ಹನುಮಗಿರಿ ಮೇಳದಲ್ಲಿ ತಿರುಗಾಟ ಮಾಡುತ್ತಿರುವ ನಾಟ್ಯ ಮಯೂರ, ಯಕ್ಷ ಚೈತನ್ಯ ಬಿರುದಾಂಕಿತ ಪಡ್ರೆ ಅವರು, 20 ಕಡೆ ಮಕ್ಕಳಿಗಾಗಿ ಯಕ್ಷಗಾನ ತರಗತಿ ನಡೆಸುವ ಮೂಲಕ ಯಕ್ಷಗಾನ ಉಳಿಸಿ, ಬೆಳೆಸುವ ಕೈಂಕರ್ಯದಲ್ಲೂ ತೊಡಗಿಕೊಂಡಿದ್ದಾರೆ.ಸುದರ್ಶನ, ಅಭಿಮನ್ಯು, ಮೇನಕೆ, ಭ್ರಮರ ಕುಂತಳೆ, ಸುಭದ್ರೆ, ಪ್ರಭಾವತಿ, ಕೃಷ್ಣ, ಶ್ರೀದೇವಿ, ಅಶ್ವತ್ಥಾಮ, ಸೀತೆ, ಮೋಹಿನಿ, ಮೀನಾಕ್ಷಿ ಇವರಿಗೆ ಪ್ರಸಿದ್ಧಿ ತಂದುಕೊಟ್ಟ…
ಮಂಗಳೂರು: ಮಂಗಳೂರಿನ ಕಡಲತೀರದಲ್ಲಿ ಮೊದಲಬಾರಿಗೆ ಕಡಲತೀರಕ್ಕೆ ಬಂದು ಮೊಟ್ಟೆಗಳನ್ನಿಟ್ಟು ಹೋಗುವ ವಿಶಿಷ್ಟ ಬದುಕಿನ ಆಲಿವ್ ರಿಡ್ಲೆ ಕಡಲಾಮೆ ಮೊಟ್ಟೆಗಳು ಮಂಗಳೂರಿನಲ್ಲಿ ಪತ್ತೆಯಾಗಿವೆ. ಸುರತ್ಕಲ್ ಆಸುಪಾಸಿನ ಕಡಲತೀರದ ಬಳಿಯ ಮೂರು ಕಡೆಗಳಲ್ಲಿ ಆಲಿವ್ ರಿಡ್ಲೆ ಅಮೆಗಳು ಬಂದು ಮೊಟ್ಟೆ ಇರಿಸಿ ಹೋಗಿರುವುದನ್ನು ಅರಣ್ಯ ಇಲಾಖೆ ಸಿಬಂದಿ ಪತ್ತೆ ಮಾಡಿದ್ದು, ಸಂರಕ್ಷಣೆಗೂ ಕ್ರಮ ತೆಗೆದುಕೊಳ್ಳಲಾಗಿದೆ. ಈ ಮೊದಲು ಮಂಗಳೂರಿನಲ್ಲಿ ಎಲ್ಲಿಯೂ ಆಲಿವ್ ರಿಡ್ಲೆ ಮೊಟ್ಟೆಗಳು ಕಂಡು ಬರಲಿಲ್ಲ ಆದ್ದರಿಂದ ಹಾಗಾಗಿ ಅರಣ್ಯ ಇಲಾಖೆ ಈ ಬಾರಿ ಮೂರು ಸಮುದ್ರಗಳಲ್ಲಿ ಮಾನವ ಚಟುವಟಿಕೆ ಮೇಲೆ ನಿಯಂತ್ರಣ ಇದ್ದ ಕಾರಣ ಅದೇ ಸಮುದ್ರದಲ್ಲಿ ಮೊಟ್ಟೆ ಇರಿಸಿರುವುದು ಪತ್ತೆಯಾಗಿದೆ. ಅವುಗಳಲ್ಲಿ ಎರಡು ಕಡೆ ಜೋರಾದ ಅಲೆಗಳು ಬಡಿಯುವ ಕಾರಣ ಅವುಗಳನ್ನು ಅಲ್ಲಿಂದ ಸುರಕ್ಷಿತ ಜಾಗಕ್ಕೆ ಸ್ಥಳಾಂತರಿಸಲಾಗಿದೆ.
ಉಡುಪಿ: ಟಾಸ್ಕ್ ನೀಡಿ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿರುವ ಮತ್ತೊಂದು ಪ್ರಕರಣ ನಡೆದಿದ್ದು ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳ್ತೂರಿನ ಪ್ರತ್ಯಕ್ಷ (31) ಎಂಬವರಿಗೆ ಅಪರಿಚಿತ ವ್ಯಕ್ತಿಗಳು ರಿವಿವ್ ಟಾಸ್ಕ್ ಹಾಗೂ ಕ್ರಿಪ್ಟೋ ಕರೆನ್ಸಿಯಿಂದ ಹೆಚ್ಚಿನ ಲಾಭಾಂಶ ಪಡೆಯಬಹುದೆಂದು ಆಸೆ ತೋರಿಸಿ, ಟೆಲಿಗ್ರಾಂ ಆ್ಯಪ್‌ನ ಲಿಂಕ್ ಕಳುಹಿಸಿದ್ದರು. ಹೆಚ್ಚಿನ ಲಾಭಾಂಶವನ್ನು ನೀಡುವುದಾಗಿ ನಂಬಿಸಿ ಆರೋಪಿಗಳು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಾಗೂ ಯುಪಿಐ ಐಡಿಗಳಿಗೆ ಜನವರಿ 13ರಿಂದ ಹಂತ ಹಂತವಾಗಿ ಒಟ್ಟು 6,16,500ರೂ. ಹಣವನ್ನು ಪಾವತಿಸಿದ್ದರು. ಆದರೆ ಪ್ರತ್ಯಕ್ಷ ಹೂಡಿಕೆ ಮಾಡಿದ ಹಣವನ್ನಾಗಲಿ ಅಥವಾ ಲಾಭಾಂಶವನ್ನು ನೀಡದೇ ನಂಬಿಸಿ, ಮೋಸ ಮಾಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಮಂಗಳೂರು: ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಜನವರಿ 22ರಂದು ಶ್ರೀರಾಮನ ಮೂರ್ತಿ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದ ರೀತಿಯಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಈ ಕೆಳಕಂಡ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಂಗಳೂರು ನಗರದಲ್ಲಿ ದೇವಸ್ಥಾನ ಮತ್ತು ಮಂದಿರಗಳಲ್ಲಿ ಒಟ್ಟು 196 ಕಡೆಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯಕ್ರಮ ನಡೆಯುವ ಸ್ಥಳಗಳನ್ನು ಗುರುತಿಸಲಾಗಿದೆ. 131 ಸೂಕ್ಷ್ಮ ಪ್ರದೇಶಗಳಲ್ಲಿ ಹಗಲು ರಾತ್ರಿ ಪಿಕೆಟಿಂಗ್ ನೇಮಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ನಗರದಾದ್ಯಂತ 57 ಸೆಕ್ಟರ್ ಮೊಬೈಲ್ 24 ಗಂಟೆ ಹಗಲು ರಾತ್ರಿ ಗಸ್ತಿನಲ್ಲಿರುವ ವ್ಯವಸ್ಥೆಯನ್ನು ಮಾಡಲಾಗಿದೆ. 14 ಸ್ಥಳಗಳಲ್ಲಿ ಚೆಕ್ ಪಾಯಿಂಟ್ ಗಳನ್ನು ನಿಯೋಜಿಸಲಾಗಿದೆ. 9 ಸಿಎಆರ್ ಮತ್ತು 3 ಕೆಎಸ್ಆರ್ ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ತಡರಾತ್ರಿ ಮತ್ತು ಮುಂಜಾನೆ ವಿಶೇಷ ಗಸ್ತುಗಳನ್ನು ಆಯೋಜಿಸಲಾಗಿದೆ. ಮಂಗಳೂರು ನಗರದ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ವಿಧ್ವಂಸಕ ತಪಾಸಣಾ ತಂಡದಿಂದ ತಪಾಸಣೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ…
ಪುತ್ತೂರು: 12 ವರ್ಷಗಳ ಹಿಂದೆ ಕ್ರಿಮಿನಲ್ ಒಳಸಂಚು ಮತ್ತು ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಎಂಬಾತನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದ ನಿವಾಸಿ ಮೋಹನ್ ಕುಮಾರ್ ಹೆಗ್ಡೆ ಯಾನೆ ಮೋಹನ್ (38) ಬಂಧಿತ ಆರೋಪಿ.ಆರೋಪಿಯನ್ನುಶುಕ್ರವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. 2012 ರಲ್ಲಿ ಕ್ರಿಮಿನಲ್ ಒಳಸಂಚು ಮತ್ತು ಮಾರಕಾಯುಧಗಳಿಂದ ಹಲ್ಲೆ ನಡೆಸಿದ ಪ್ರಕರಣ ಕುರಿತಂತೆ ಪುತ್ತೂರು ಗ್ರಾಮಾಂತರ ಪೊಲೀಸರು ಕೇಸು ದಾಖಲಾಗಿತ್ತು.ಆಗ ಆರೋಪಿ ಬಂಧಿತನಾಗಿದ್ದರೂ ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದನು.ಪೊಲೀಸ್ ನಿರೀಕ್ಷಕ ರವಿ ಬಿ ಎಸ್ ಮತ್ತು ಉಪನಿರೀಕ್ಷಕ ಜಂಬೂರಾಜ್ ಮಹಾಜನ್ ಅವರ ಮಾರ್ಗದರ್ಶನದಲ್ಲಿ, ಹೆಡ್ ಕಾನ್ಸ್ ಟೆಬಲ್ ಮಧು ಕೆ. ಎನ್, ಹಾಗೂ ಹಕೀಂ ಅವರು ಕಾರ್ಯಾಚರಣೆ ನಡೆಸಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಶುಕ್ರವಾರ ಪುತ್ತೂರಿನಲ್ಲಿ ವಶಕ್ಕೆ ಪಡೆದು ಬಂಧಿಸಿದ್ದಾರೆ.
ಮಂಗಳೂರು: ಕೋಚಿಮುಲ್ ನೇಮಕಾತಿಯಲ್ಲಿ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ವಿಶ್ವವಿದ್ಯಾಲಯದ ಅಧಿಕಾರಿಗಳಿಂದ ಪ್ರಶ್ನೆಪತ್ರಿಕೆ ಮಾರಾಟ ಶಂಕೆ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಮಂಗಳೂರು ವಿಶ್ವವಿದ್ಯಾಲಯದ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿರುವ ಇಡಿ ಅಧಿಕಾರಿಗಳು ಎರಡು ದಿನಗಳ ಕಾಲ ಪರಿಶೀಲನೆ ನಡೆಸಿದ್ದಾರೆ. ಕಳೆದ 6 ತಿಂಗಳ ಹಿಂದೆಯೇ ನಡೆದಿದ್ದ ನೇಮಕಾತಿಗೆ ಪರೀಕ್ಷೆ, ಫಲಿತಾಂಶ ಪ್ರಕಟ ಹೊಣೆಯನ್ನು ಮಂಗಳೂರು ವಿವಿ ಹೊತ್ತಿತ್ತು. ಈ ಹಿನ್ನೆಲೆಯಲ್ಲಿ ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ.ರಾಜುಕೃಷ್ಣ ಚಲನ್ನವರ್ ಅವರನ್ನು ವಿಚಾರಣೆ ಮಾಡಲಾಗುತ್ತಿದೆ. ನೇಮಕಾತಿ ಪರೀಕ್ಷೆಯ ಜವಾಬ್ದಾರಿ ವಹಿಸಿಕೊಂಡಿದ್ದ ಪ್ರೊ.ರಾಜುಕೃಷ್ಣ ಪರೀಕ್ಷೆಗೂ ಮುನ್ನ ಅಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಮಾರಾಟ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕೋಚಿಮುಲ್ ನೇಮಕಾತಿ ಅಕ್ರಮದಲ್ಲಿ ಮಂಗಳೂರು ವಿವಿ ಭಾಗಿಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ತಿಂಗಳ ಹಿಂದೆಯೇ ಕುಲಸಚಿವರಿಗೆ ಇಡಿ ಅಧಿಕಾರಿಗಳು ನೋಟಿಸ್ ನೀಡಿದ್ದರು. ಇದೀಗ ವಿವಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ.










