ಬೆಳ್ತಂಗಡಿ: ಸರಕಾರಿ ಕರ್ತವ್ಯದ ವೇಳೆ ಅಡ್ಡಿಪಡಿಸಿದ್ದಲ್ಲದೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮದ್ದಡ್ಕದಲ್ಲಿ ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರು ಜ.18 ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗದ ಒತ್ತುವರಿಯಾಗಿರುವ ಬಗ್ಗೆ ಪರಿಶೀಲನೆಗಾಗಿ ಕಂದಾಯ ನಿರೀಕ್ಷಕರು, ಗ್ರಾಮ ಅಭಿವೃದ್ಧಿ ಅಧಿಕಾರಿಯವರೊಂದಿಗೆ ಸದ್ರಿ ಜಾಗಕ್ಕೆ ಸರಕಾರಿ ವಾಹನದಲ್ಲಿ ತೆರಳಿ ಪರಿಶೀಲನೆ ನಡೆಸುತ್ತಿದ್ದರು.ಈ ಸ್ಥಳವನ್ನು ಒತ್ತುವರಿಸಿದ ನಸೀರ್ ಮತ್ತು ರೌಫ್ ಎಂಬವರುಗಳು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿರುತ್ತಾರೆ ಹಾಗೂ ಸ್ಥಳದಲ್ಲಿದ್ದ ಕಂದಾಯ ನಿರೀಕ್ಷಕರ ಪ್ರತೀಶ್ ಗೆ ಅವಾಚ್ಯ ಶಬ್ದಗಳಿಂದ ಬೈದು ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟು ಮಾಡಿರುತ್ತಾರೆ.ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೀಡಿದ ದೂರಿನ ಮೇರೆಗೆ ಜ.19 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಐಪಿಸಿ 353, 504…
Author: main-admin
ಉಡುಪಿ: ಪುತ್ತಿಗೆ ಪರ್ಯಾಯ ಮಹೋತ್ಸವದ ಹಿನ್ನೆಲೆ ಕೊರಂಗ್ರಪಾಡಿ ವಾಸುಕಿ ನಗರದ ಶರೀನ ಬೇಗಂ ಎಂಬವರು ತನ್ನ ಪುತ್ರಿ ಅನ್ಹ(4) ಜೊತೆಗೆ ಉಡುಪಿ ಶ್ರೀಕೃಷ್ಣ ಮಠದ ರಥಬೀದಿಗೆ ಬಂದಿದ್ದು, ಕನಕ ಗೋಪುರದ ಹತ್ತಿರವಿರುವ ಅಂಗಡಿಯಲ್ಲಿ ಸಾಮಗ್ರಿಗಳನ್ನು ನೋಡುತ್ತಿದ್ದಾಗ 30-35 ವರ್ಷದ ಪ್ರಾಯದ ಅಪರಿಚಿತರಿಬ್ಬರು, ಅನ್ಹ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಎಳೆದು ಪರಾರಿಯಾದ ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ. ಕಳವಾದ ಚಿನ್ನದ ಸರದ ಮೌಲ್ಯ 50,000 ರೂ. ಆಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು ಸಿಸಿಬಿ ಪೊಲೀಸರ ತಂಡ ಮಿಂಚಿನ ಕಾರ್ಯಾಚರಣೆ ನಡೆಸಿ ಆಟೋ ರಿಕ್ಷಾದಲ್ಲಿ ನಿಷೇಧಿತ ಮಾದಕ ಪದಾರ್ಥ MDMA ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳೂರು ಬಜಾಲ್ ನಿವಾಸಿ ತೌಸೀಫ್ @ ತೌಚಿ(23) ಬಂಧಿತ ಆರೋಪಿಯಾಗಿದ್ದಾನೆ, ಬಂಧಿತನಿಂದ ಒಟ್ಟು 5,11,000/- ರೂ ಮೌಲ್ಯದ ಸೊತ್ತು ವಶಕ್ಕೆ ಪಡೆದಿದ್ದಾರೆ. ಜನವರಿ 18 ರಂದು ನಗರದ ಪಳ್ನೀರ್ ನ ಎಸ್.ಎಲ್ ಮಥಾಯಿಸ್ ರಸ್ತೆಯ ಕೊಯಿಲೊ ಲೇನ್ ಬಳಿ ಆಟೋ ರಿಕ್ಷಾದಲ್ಲಿ ಒಬ್ಬ ವ್ಯಕ್ತಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾನೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ. ಆರೋಪಿತನಿಂದ 45 ಸಾವಿರ ರೂ ಮೌಲ್ಯದ 9 ಗ್ರಾಂ ನಿಷೇಧಿತ MDMA ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್ ಹಾಗೂ ಆಟೋರಿಕ್ಷಾ ಸೇರಿ ಒಟ್ಟು 5,11,000/- ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿರುತ್ತಾರೆ.ಮಂಗಳೂರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ರೀ ಶ್ಯಾಮ್ ಸುಂದರ್…
ಮಂಗಳೂರು : ಕದ್ರಿ ಪಾರ್ಕ್ ಗೆ ಬಂದಿದ್ದ ಕಾಲೇಜು ವಿದ್ಯಾರ್ಥಿಗಳ ಮೇಲೆ ಇಂದು ಬೆಳಗ್ಗೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಕದ್ರಿ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಅಪ್ರಾಪ್ತ ಸೇರಿದಂತೆ ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪಿಗಳಾದ ಬಂಟ್ವಾಳ ನಿವಾಸಿಗಳಾದ ನಿತಿನ್ ಹರ್ಷ ಸೇರಿದಂತೆ ಪೆರ್ಮುದೆಯ ಕಾನೂನಿನ ಸಂಘರ್ಷಕ್ಕೊಳಗಾದ ಬಾಲಕನೊಬ್ಬನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನಂತೂರಿನ ಕಾಲೇಜಿನಲ್ಲಿ ಜರ್ನಲಿಸಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಅಖಿಲ್ ಚಾಕೋ ಹಾಗೂ ದೇರಳಕಟ್ಟೆಯ ಕಾಲೇಜೊಂದರಲ್ಲಿ ನರ್ಸಿಂಗ್ ಮಾಡುತ್ತಿದ್ದ ವಿದ್ಯಾರ್ಥಿನಿಯ ಮೇಲೆ ತಂಡವೊಂದು ನೈತಿಕ ಪೊಲೀಸ್ ಗಿರಿ ನಡೆಸಿದೆ. ಇಂದು ಬೆಳಗ್ಗೆ ದೇರಳಕಟ್ಟೆಯಿಂದ ಈ ಜೋಡಿ ಬಸ್ ನಲ್ಲಿ ಆಗಮಿಸಿ ಜ್ಯೋತಿಯಲ್ಲಿ ಇಳಿದಿದೆ. ಬಸ್ ನಲ್ಲಿದ್ದಾಗಲೇ ಹಿಂಬಾಲಿಸಿಕೊಂಡು ಬಂದ ಐದಾರು ಮಂದಿಯ ಯುವಕರ ತಂಡ ಇವರು ಕದ್ರಿ ಪಾರ್ಕ್ ಗೆ ಬರುತ್ತಿದ್ದಾಗ ಪಾರ್ಕ್ ರಸ್ತೆಯಲ್ಲೇ ತಡೆದು ನೈತಿಕ ಪೊಲೀಸ್ ಗಿರಿ ನಡೆಸಿದೆ. ಕದ್ರಿ ಪಾರ್ಕ್ ರಸ್ತೆಯಲ್ಲಿ ಜೋಡಿಯನ್ನು ತಡೆದು ವಿಚಾರಿಸಿದ ಯುವಕರ ತಂಡ ಹಲ್ಲೆಗೆತ್ನಿಸಿದೆ.…
ಬೆಳ್ತಂಗಡಿ: ಕಾಂಕ್ರೀಟ್ ಮಿಕ್ಸಿಂಗ್ ಲಾರಿಯೊಂದು ವಿದ್ಯುತ್ ತಂತಿಗಳಿಗೆ ಸಿಲುಕಿದ ಘಟನೆ ನಾಲ್ಕೂರು ಗ್ರಾಮದ ಸೂಳಬೆಟ್ಟು ಎನ್ನುವಲ್ಲಿ ಬುಧವಾರ ತಡರಾತ್ರಿ ನಡೆದಿದೆ. ವೇಣೂರು- ಅಳದಂಗಡಿ ರಸ್ತೆಯಲ್ಲಿನ ಸೂಳಬೆಟ್ಟು ಎಂಬಲ್ಲಿ ಲಾರಿಯ ಚಾಲಕ ಮೇಲ್ಭಾಗದಲ್ಲಿದ್ದ ವಿದ್ಯುತ್ ತಂತಿಗಳನ್ನು ಗಮನಿಸದೆ ಚಲಾಯಿಸಿದ್ದರಿಂದ ತಂತಿಗಳು ವಾಹನಕ್ಕೆ ಸಿಲುಕಿವೆ. ಅದು ಚಾಲಕನ ಗಮನಕ್ಕೆ ಬಾರದೆ ಆತ ಏಕಾಏಕಿ ಮುಂದೆ ಸಾಗಿದ್ದಾನೆ. ಇದರಿಂದ ತಂತಿಗಳೊಂದಿಗೆ ಎರಡು ಜೋಡಿ ಕಂಬಗಳು ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದವು. ತಂತಿಗಳ ಘರ್ಷಣೆಯಿಂದ ಭಾರೀ ಬೆಂಕಿ ಕಾಣಿಸಿತ್ತು. ಕಾರ್ಕಳದ ಗುತ್ತಿಗೆ ಕಂಪೆನಿಯೊಂದರ ಲಾರಿಯಾಗಿದ್ದು, ಅದನ್ನು ಅಳದಂಗಡಿಯಲ್ಲಿ ತಡೆಹಿಡಿಯಲಾಗಿದೆ. ಚಾಲಕ ಕುಷ್ಟಗಿಯ ಕುಮಾರ್‌ನನ್ನು ವೇಣೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಯಿತು. ಸ್ಥಳಕ್ಕೆ ಮೆಸ್ಕಾಂ ಎಂಜಿನಿಯರ್, ವೇಣೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನಗಳ ಸಂಚಾರಕ್ಕೆ ಅಡಚಣೆಘಟನೆಯಿಂದಾಗಿ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. 15 ವಿದ್ಯುತ್ ಪರಿವರ್ತಕಗಳ ವ್ಯಾಪ್ತಿಯ 800ಕ್ಕಿಂತ ಅಧಿಕ ಗ್ರಾಹಕರಿಗೆ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಯಿತು. ಘಟನೆ ರಾತ್ರಿ ನಡೆದ ಕಾರಣ ಹಾಗೂ ತತ್‌ಕ್ಷಣ ವಿದ್ಯುತ್…
ಉಳ್ಳಾಲ: ಮಂಗಳೂರು ಸಮೀಪದಲ್ಲಿ ಮಾದಕ ವಸ್ತು ಅಕ್ರಮ ಸಾಗಾಟ ನಡೆಸುತ್ತಿದ್ದ ಉಳ್ಳಾಲ ಚೆಂಬುಗುಡ್ಡೆ ನಿವಾಸಿ ಸಿಯಾಮು(26)ನನ್ನು ಎಸಿಪಿ ಧನ್ಯಾ ಎನ್. ನಾಯಕ್ ನೇತೃತ್ವದ ಆ್ಯಂಟಿ ಡ್ರಗ್ ಟೀಮ್ ಬಂಧಿಸಿದ್ದು, ಆತನಿಂದ 1.05 ಗ್ರಾಂ ಎಂಡಿಎಂಎ ಮಾದಕ ವಸ್ತು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಲ್ಲಾಪು ಯುನಿಟಿ ಹಾಲ್ ಬದಿಯ ಮೈದಾನದ ಬಳಿ ದಾಳಿ ನಡೆಸಿ ಸಿಯಾಮುನನ್ನು ಬಂಧಿಸಲಾಗಿದೆ. ಆ್ಯಂಟಿ ಡ್ರಗ್ ಟೀಮ್ ರಚನೆಯಾದ ಬಳಿಕ 4 ದೊಡ್ಡ ಪ್ರಕರಣ ಸೇರಿದಂತೆ 65 ಪ್ರಕರಣಗಳು ದಾಖಲಾಗಿದ್ದು, 6 ಆರೋಪಿಗಳು ಜೈಲು ಪಾಲಾಗಿದ್ದು, ಲಕ್ಷಾಂತರ ಮೌಲ್ಯದ ಗಾಂಜಾ, ಎಂಡಿಎಂಎ, ಎಲ್‌ಎಸ್‌ಡಿ ಸ್ಟಿಕ್ಕರ್‌ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ಉಪ ಆಯುಕ್ತರಾದ ಸಿದ್ಧಾರ್ಥ ಗೋಯಲ್, ದಿನೇಶ್ ಕುಮಾರ್ ನಿರ್ದೇಶನದಲ್ಲಿ ಎಸಿಪಿ ಧನ್ಯಾ ನಾಯಕ್ ಮತ್ತು ಇನ್‌ಸ್ಪೆಕ್ಟರ್ ಬಾಲಕೃಷ್ಣ ಎಚ್.ಎನ್. ನೇತೃತ್ವದಲ್ಲಿ ಉಳ್ಳಾಲ ಪಿಎಸ್‌ಐ ಧನರಾಜ್ ಎಸ್., ಆ್ಯಂಟಿ ಡ್ರಗ್ ಟೀಮ್‌ನ ಶಾಜು ನಾಯರ್, ಮಹೇಶ್,…
ಪೊಲೀಸ್ ಕ್ವಾರ್ಟರ್ಸ್ ನಲ್ಲಿಯೇ ಕಾನ್ಸ್ ಟೇಬಲ್ ಓರ್ವರು ನೇಣಿಗೆ ಕೊರಳೊಡ್ಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಸೋಮಶೇಖರ್ (39) ಮೃತರು. ಸಕಲೇಶಪುರದಲ್ಲಿ 112 ಪೊಲೀಸ್ ವಾಹನ ಚಾಲಕರಾಗಿ ಕಾನ್ಸ್ ಟೇಬಲ್ ಕಾರ್ಯನಿರ್ವಹಿಸುತ್ತಿದ್ದರು. ಪತಿ ಸೋಮಶೇಖರ್ ವಿರುದ್ಧ ಕಿರುಕುಳ ಆರೋಪ ಮಾಡಿ ಪತ್ನಿ ಡಿವೈಎಸ್ ಪಿಗೆ ದೂರು ನೀಡಿದ್ದಳು. ಇದರಿಂದ ಮನನೊಂದ ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಕಲೇಶಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಳದಂಗಡಿ ಸಮೀಪದ ಕುಬಲಾಜೆಯಲ್ಲಿ ನಡೆದಿದೆ. ಉದ್ಯಮಿ ಸುನಿಲ್ ಅವರ ಪತ್ನಿ ಕಾವ್ಯ(32) ಆತ್ಮಹತ್ಯೆಗೆ ಶರಣಾದವರು.ಮೃತರು ಪತಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ತಾಯಿ ಹಾಗೂ ತನ್ನ ಇಬ್ಬರು ಮಕ್ಕಳ ಶವವಾಗಿ ಪತ್ತೆಯಾಗಿದ್ದು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಬಳಿಯ ಕೆರೆಯೊಂದರಲ್ಲಿ ಮೂವರು ಶವವಾಗಿ ಪತ್ತೆಯಾಗಿದ್ದಾರೆ. ಕೆರೆಯಲ್ಲಿ ಶವಗಳು ತೇಲಾಡುತ್ತಿದ್ದನ್ನು ಕಂಡ ಸ್ಥಳೀಯರು ಪೊಲೀಸರು ಹಾಗೂ ಆಗ್ನಿಶಾಮಕ ದಳ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸದ್ಯ ತಾಯಿ ಹಾಗೂ ಇಬ್ಬರ ಮಕ್ಕಳ ಮೃತದೇಹ ಮೇಲೆತ್ತಲಾಗಿದ್ದು, ಮೃತ ತಾಯಿ ಚಿಂತಾಮಣಿ ತಾಲೂಕು ಯಗವಕೋಟೆ ನಿವಾಸಿ ರಾಧ ಎಂದು ತಿಳಿದುಬಂದಿದೆ. ಮಕ್ಕಳನ್ನು 4 ವರ್ಷದ ಮಗಳು ಪೂರ್ವಿತಾ ಎಂದು ಗುರುತಿಸಲಾಗಿದ್ದು, ಒಂದೂವರೆ ವರ್ಷದ ಮತ್ತೊಬ್ಬ ಮಗಳಿಗೆ ಇನ್ನೂ ಹೆಸರಿಟ್ಟಿಲ್ಲ.ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ನಿಖರವಾಗಿ ತಿಳಿದಿಲ್ಲ. ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮಂಗಳೂರು, ಜ.18: ಮರಳು ಮಾಫಿಯಾಗಳೊಂದಿಗೆ ಶಾಮೀಲಾಗಿದ್ದಾರೆ ಮತ್ತು ಮೇಲಧಿಕಾರಿಗಳ ಜೊತೆಗೆ ಉಡಾಫೆಯಾಗಿ ವರ್ತಿಸಿದ್ದಾರೆಂದು ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಎಸ್.ಎಚ್. ಭಜಂತ್ರಿ ಅವರನ್ನು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಕರ್ತವ್ಯದಿಂದ ಅಮಾನತು ಮಾಡಿದ್ದಾರೆ. ಇತ್ತೀಚೆಗೆ ಜಪ್ಪಿನಮೊಗರು ಕಡೆಕಾರಿನಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದಾಗ ಎಸಿಪಿ ಧನ್ಯಾ ನಾಯಕ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ತಲಪಾಡಿ ಗ್ರಾಪಂ ಸದಸ್ಯ, ಕಾಂಗ್ರೆಸ್ ಪುಢಾರಿಗೆ ಸೇರಿದ್ದೆನ್ನಲಾದ ಎಂಟು ಟಿಪ್ಪರ್ ಗಳನ್ನು ಪೊಲೀಸರು ವಶಕ್ಕೆ ಪಡೆದು ಕೇಸು ದಾಖಲಿಸಿದ್ದರು. ಮರಳು ಮತ್ತು ಟಿಪ್ಪರ್ ವಾಹನಗಳನ್ನು ಮುಂದಿನ ತನಿಖೆಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಹಸ್ತಾಂತರ ಮಾಡಿದ್ದರು. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ವ್ಯಾಪಕ ಮರಳುಗಾರಿಕೆ ನಡೆಯುತ್ತಿದ್ದರಿಂದ ಎಸಿಪಿ ಧನ್ಯಾ ನಾಯಕ್ ಕಾರ್ಯಾಚರಣೆ ನಡೆಸಲು ಸೂಚಿಸಿದ್ದರೂ, ಇನ್ಸ್ ಪೆಕ್ಟರ್ ಭಜಂತ್ರಿ ನಿರ್ಲಕ್ಷ್ಯ ವಹಿಸಿದ್ದರು. ಈ ವೇಳೆ, ಭಜಂತ್ರಿಯವರು ತನ್ನ ಮೇಲಧಿಕಾರಿ ಎಸಿಪಿ ಜೊತೆಗೆ ಉಡಾಫೆಯಿಂದ ಮಾತನಾಡಿದ್ದರು ಎನ್ನಲಾಗಿದೆ. ಮರಳು ಮಾಫಿಯಾಗಳೊಂದಿಗೆ ಶಾಮೀಲಾಗಿರುವುದು ಮತ್ತು ತನ್ನೊಂದಿಗೆ ಉಡಾಫೆಯಾಗಿ ವರ್ತಿಸಿದ ಬಗ್ಗೆ…










