Author: main-admin

ಉಳ್ಳಾಲ ಠಾಣಾಗೆ ಡಿವೈಎಫ್ ಐ ಸಂಘಟನೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಜ.16ರ ಮಂಗಳವಾರ ನಡೆದಿದೆ. ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಭಟ್ ವಿರುದ್ಧ ಪ್ರತಿಭಟಿಸಿದ ಡಿವೈಎಫ್ ಐ ಮುಖಂಡರ ಮೇಲೆ ಪ್ರಕರಣ ದಾಖಲು ಮಾಡಿದ ಹಿನ್ನಲೆಯಲ್ಲಿ ಉಳ್ಳಾಲ ಠಾಣಾಗೆ ಡಿವೈಎಫ್ ಐ ಮುತ್ತಿಗೆ ಹಾಕಲು ಯತ್ನಿಸಿದೆ. ಈ ವೇಳೆ ಮುಂಜಾಗ್ರತ ಕ್ರಮವಾಗಿ ಠಾಣೆಗೆ ಬೀಗ ಹಾಕಿ ಪೊಲೀಸರು ಸುರಕ್ಷತೆ ನೀಡಿದ ಘಟನೆಯೂ ನಡೆಯಿತು. ಆರ್ ಎಸ್ಎಸ್ ಹಾಗೂ ಶಾಸಕರ ಚೇಲಾಗಳಂತೆ ಪೊಲೀಸರು ವರ್ತಿಸುತ್ತಿದ್ದಾರೆ ಎಂದು ಡಿವೈಎಫ್ ಐ ಆರೋಪಿಸಿ ಮಾಸ್ತಿಕಟ್ಟೆಯಿಂದ ಉಳ್ಳಾಲ ಠಾಣೆವರೆಗೆ ರ್ಯಾಲಿ ನಡೆಸಿ ಘೋಷಣೆಗಳೊಂದಿಗೆ ಘೋಷಣೆಗಳೊಂದಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ಮುತ್ತಿಗೆ ಹಾಕಿಲು ಯತ್ನಿಸಿದರು. ಡಿವೈಎಫ್ ಐ ಪ್ರತಿಭಟನೆ ಹಿನ್ನಲೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಪೊಲೀಸರು ಉಳ್ಳಾಲ ಠಾಣೆಯ ಸುತ್ತಮುತ್ತ ನಿಯೋಜಿಸಲಾಗಿತ್ತು, ಯಾಉದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Read More

ಮಂಗಳೂರು : ವಿಚ್ಛೇದನೆ ನೀಡುವಂತೆ ಒತ್ತಾಯಿಸಿ ಪತಿಗೆ ಪತ್ನಿ ಹಲ್ಲೆಗೈದ ಘಟನೆ ಕುಲಶೇಖರ ಬಳಿ ನಡೆದಿದ್ದು ಪ್ರಕರಣ ದಾಖಲಾಗಿದೆ ಜ.13ರಂದು ತಾನು ರಾತ್ರಿ 9:20ಕ್ಕೆ ತಾನು ಸಿರ್ಲಾಪಡ್ಪು ರಸ್ತೆಯಲ್ಲಿ ತನ್ನ ಮನೆ ಕಡೆಗೆ ಹೋಗುತ್ತಿದ್ದ ವೇಳೆ ಪತ್ನಿ ರೇಣುಕಾ ಆಂಟೋನಿ ಡಿಸೋಜ ಹಾಗೂ ರಾಜೇಶ್” ಎಂಬವರ ಜೊತೆ ಸ್ಕೂಟರ್‌ನಲ್ಲಿ ಆಗಮಿಸಿದರು. ಈ ವೇಳೆ ಪತ್ನಿ ನನ್ನಲ್ಲಿ ವಿಚ್ಚೇದನೆ ವಿಚಾರವಾಗಿ ಮಾತನಾಡಿದಾಗ ತಾನು ನಿರಾಕರಿಸಿದೆ. ಈ ಸಂದರ್ಭ ಪತ್ನಿ ಕಲ್ಲಿನಿಂದ ಹಲ್ಲೆ ನಡೆಸಿ ವಿಚ್ಚೇದನೆ ನೀಡದಿದ್ದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ’ ಎಂದು ಬೆದರಿಕೆ ಹಾಕಿದ್ದಾಳೆ. ಬಳಿಕ ಆಕೆಯ ಜತೆಗಿದ್ದ ರಾಜೇಶ್ ತನ್ನ ಕೈಯಲ್ಲಿದ್ದ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ ಎಂದು ಕುಲಶೇಖರ ನಿವಾಸಿ ಆಂಟೋನಿ ಡಿಸೋಜ ಎಂಬವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಅದರಂತೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಶಾಲಾ ವಾಹನ ಹಾಗೂ ಆಂಬ್ಯುಲೆನ್ಸ್ ನಡುವೆ ಉಂಟಾದ ಅಪಘಾತದಲ್ಲಿ ಆಂಬ್ಯುಲೆನ್ಸ್ ನಲ್ಲಿದ್ದ ರೋಗಿ ಮೃತ ಪಟ್ಟು ಐವರು ವಿದ್ಯಾರ್ಥಿಗಳು ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ಸೋಮವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಶಿರಿಯದಲ್ಲಿ ನಡೆದಿದೆ. ಕಣ್ಣೂರಿನ ಸುರೇಶ್ ಕುಮಾರ್ ಮೃತ ಪಟ್ಟವರು. ಶಿರಿಯದ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ವಾಹನ ಮತ್ತು ಕಣ್ಣೂರಿನಿಂದ ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದಾಗ ಅಪಘಾತ ನಡೆದಿದೆ. ಇನ್ನು ಗಾಯಗೊಂಡ ವಿದ್ಯಾರ್ಥಿಗಳನ್ನು ಕುಂಬಳೆ ಮತ್ತು ಬಂದ್ಯೋಡಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಆಂಬ್ಯುಲೆನ್ಸ್ ನಲ್ಲಿದ್ದ ರೋಗಿಯನ್ನು ಮಂಗಳೂರಿಗೆ ಕೊಂಡೊಯ್ದರೂ ದಾರಿ ಮಧ್ಯೆ ಮೃತ ಪಟ್ಟರು. ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಹೆಬ್ರಿ ತಾಲೂಕಿನ ವರಂಗ ಗ್ರಾಮದಲ್ಲಿ ಮಹಿಳೆಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪುಟ್ಟು (63) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಕಳೆದ ಒಂದು ತಿಂಗಳಿನಿಂದ ಜ. 14ರ ಸಂಜೆ 5 ಗಂಟೆಯ ಮಧ್ಯಾವಧಿಯಲ್ಲಿ ವರಂಗ ಗ್ರಾಮದ ಮುನಿಯಾಲು ನೀರಪಲ್ಕೆಯಲ್ಲಿರುವ ಅವರ ಮನೆಯ ಹತ್ತಿರದ ಸರಕಾರಿ ಹಾಡಿಯಲ್ಲಿ ಮರದ ಕೊಂಬೆಗೆ ಸೀರೆಯನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ರಿ ಶವ ಜ. 14ರಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಕುರಿತು ಹೆಬ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Read More

ಪುತ್ತೂರು : ಮಾಜೀ ಸಿಎಂ ಡಿ.ವಿ.ಸದಾನಂದ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲು ಅವರ ಭಾವಚಿತ್ರವಿದ್ದ ಬ್ಯಾನರ್‌ಗೆ ಶ್ರದ್ಧಾಂಜಲಿ ಬರಹದೊಂದಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವ ಆರೋಪದ ಕುರಿತು ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಪಶ್ಚಿಮ ವಲಯ ಐಜಿಪಿಗೆ ಸೂಚನೆ ನೀಡಿದೆ. ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಡಿ.ವಿ.ಸದಾನಂದ ಗೌಡ ಮತ್ತು ಸಂಸದ ನಳಿನ್ ಭಾವಚಿತ್ರದೊಂದಿಗೆ, ‘ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ’ ಎಂದು ಬರೆದು ಪುತ್ತೂರು ಸರಕಾರಿ ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಲಾಗಿತ್ತು. ಈ ಕುರಿತು ನಗರಸಭೆಯ ಆಯುಕ್ತ ಮಧು ಎಸ್. ಮನೋಹರ್ ಪುತ್ತೂರು ನಗರ ಪೊಲೀಸರಿಗೆ ದೂರು ನೀಡಿದ್ದರು.

Read More

ಮಂಗಳೂರು : ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ ಪರಿಣಾಮ ಬಸ್ ನಿಂದ ಬಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಮಂಗಳುರು ಹೊರವಲಯದ ಬೈಕಂಪಾಡಿ ಜೋಕಟ್ಟೆ ಬಳಿ ಸಂಭವಿಸಿದೆ. ಮೃತ ಮಹಿಳೆಯನ್ನು ಈರಮ್ಮ (65) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸುಮಾರು ‌10 ಗಂಟೆಗೆ ಈರಮ್ಮ ತನ್ನ ಮಗಳ ಜೊತೆ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದಾಗ ನಿಯಂತ್ರಣ ಕಳಕೊಂಡು ರಸ್ತೆಗೆ ಬಿದ್ದ ಈರಮ್ಮ ಅವರ ಮೇಲೆ ಬಸ್ಸಿನ ಹಿಂಬದಿಯ ಟಯರ್‌ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 08/2024 ರ ಅಡಿಯಲ್ಲಿ 304 ಎ, 279 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read More

ಕುಂದಾಪುರ : ಡೀಸೆಲ್ ಹಾಕಲು ಬಂದ ಜೀಪೊಂದು ಪೆಟ್ರೋಲ್ ಬಂಕಿನಲ್ಲಿ ಬೈಕಿಗೆ ತಾಗಿದೆ ಎನ್ನುವ ಕಾರಣಕ್ಕೆ ಮಾತಿಗೆ ಮಾತು ಬೆಳೆದು, ಬಳಿಕ ಮನೆ ಸಮೀಪ ಬಂದು ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಜಡ್ಕಲ್ ಗ್ರಾಮ ಪಂಚಾಯತ್ ನ ಬೀಸಿನ ಪಾರೆ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ ಜಡ್ಕಲ್ ಗ್ರಾಮ ಪಂಚಾಯತ್ ನ ಬೀಸಿನಪಾರೆ ವಾರ್ಡಿನ ಚಂದ್ರಮೋಹನ ನಾಯ್ಕ್ ಎಂಬುವರೇ ಗಂಭಿರ ಗಾಯಗೊಂಡು ಆಸ್ಪತ್ರೆ ಸೇರಿದವರು.ಚಂದ್ರಮೋಹನ್ ನಾಯ್ಕ್ ಭಾನುವಾರ ಸಂಜೆ ಇಡೂರು ಕುಂಜ್ಞಾಡಿಯಲ್ಲಿರುವ ಪೆಟ್ರೋಲ್ ಬಂಕೊಂದಕ್ಕೆ ಡೀಸೆಲ್ ಹಾಕಿಸಿಕೊಳ್ಳಲು ತಮ್ಮ ಜೀಪಿನಲ್ಲಿ ಹೋಗಿದ್ದರು. ಈ ವೇಳೆ ಬಂಕ್‌ನಲ್ಲಿ ನಿಲ್ಲಿಸಿದ್ದ ಬೈಕೊಂದಕ್ಕೆ ಚಂದ್ರಮೋಹನ್ ಅವರ ಜೀಪ್ ತಾಗಿದೆಯೆನ್ನಲಾಗಿದೆ. ಆಗ ಚಂದ್ರಮೋಹನ ಬೈಕ್ ಚಾಲಕನಲ್ಲಿ ಕ್ಷಮೆ ಕೇಳಿದ್ದಾರೆ.ಆದರೆ ಅದನ್ನೇ ಗಂಭಿರವಾಗಿ ತೆಗೆದುಕೊಂಡಿದ್ದ ಬೈಕ್ ಚಾಲಕ ಅವಾಚ್ಯವಾಗಿ ಬೈದು ಗಲಾಟೆ ನಡೆಸಿದ್ದು, ಜೀಪ್ ಚಾಲಕ ಚಂದ್ರಮೋಹನ್ ಡೀಸೆಲ್ ತುಂಬಿಸಿಕೊಂಡು ಬೀಸಿನಪಾರೆಯಲ್ಲಿರುವ ತಮ್ಮ ಮನೆಗೆ ಬಂದಿದ್ದರು. ಬಳಿಕ ಮನೆಯಲ್ಲಿ…

Read More

ಉಪ್ಪಿನಂಗಡಿ: ಸಾಮಾಜಿಕ ಜಾಲತಾಣದಲ್ಲಿ ಕ್ರಿಶ್ಚಿಯನ್‌ ಧರ್ಮದ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಹಾಕಿದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ದ ದೂರು ದಾಖಲಾಗಿದೆ.ಕಡಬ ತಾಲೂಕಿನ ಇಚ್ಲಂಪಾಡಿಯ ಪುರುಷೋತ್ತಮ ಓ ದವಳಗಿರಿ ಎಂಬವರ ವಿರುದ್ದ ಆರೋಪ ಕೇಳಿಬಂದಿದೆ.ಪುರುಷೋತ್ತಮ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಕ್ರಿಶ್ಚಿಯನ್‌ ಧರ್ಮದ ಬಗ್ಗೆ ಅವಹೇಳ ಮಾಡುವಂಥಹ ಪೋಸ್ಟ್‌ ಹಾಕಿರುವುದಾಗಿ ಆರೋಪಿಸಿ ಇಚ್ಲಂಪಾಡಿ ಬರಮಾರು ಕೈಪನಡ್ಕ ನಿವಾಸಿ ಮೇಹಿಜಾರ್ಜ್ ಎಂಬವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಈಗ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Read More

ಮಂಗಳೂರು: ಬೈಕಂಪಾಡಿ ಕೈಗಾರಿಕಾ ಪ್ರದೇಶದ ಖಾಸಗಿ ಪೆಟ್ರೋ ಕೆಮಿಕಲ್ ಕಂಪನಿಯೊಂದರಲ್ಲಿ ವೆಲ್ಡಿಂಗ್‌ ಮಾಡುತ್ತಿರುವ ಸಂದರ್ಭ ಅಗ್ನಿ ಅವಘಡ ಉಂಟಾಗಿ ಕಾರ್ಮಿಕ ರೊನಾಲ್ಡ್‌ ಪೌಲ್‌ ತೀವ್ರಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜ.13ರಂದು ನಡೆದಿದೆ. ರೊನಾಲ್ಡ್ ಪಾಲ್ ಇತರ ಆರು ಕಾರ್ಮಿಕರೊಂದಿಗೆ ಖಾಲಿ ಇದ್ದ ತೈಲ ಟ್ಯಾಂಕ್‌ನಲ್ಲಿ ವೆಲ್ಡಿಂಗ್ ಕೆಲಸದಲ್ಲಿ ತೊಡಗಿದ್ದಾಗ, ರೊನಾಲ್ಡ್ ಪಾಲ್ ಟ್ಯಾಂಕ್ ಮೇಲೆ ನಿಂತಿದ್ದರು. ಅದೇ ಸಮಯದಲ್ಲಿ, ಇತರ ಕಾರ್ಮಿಕರು ನೆಲದ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.ಪೌಲ್ ಟ್ಯಾಂಕ್‌ ಮೇಲೆ ಇದ್ದುದರಿಂದ ಒಮ್ಮೆಲೆ ಬೆಂಕಿ ಕೆನ್ನಾಲಿಗೆ ಆವರಿಸಿ ತೀವ್ರ ಸುಟ್ಟ ಗಾಯಕ್ಕೊಳಗಾಗಿ 20 ಅಡಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡರು. ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಇತರ ಕಾರ್ಮಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಕೇಸು ದಾಖಲಾಗಿದೆ.

Read More

ಬೆಂಗಳೂರು : 2019ರ ಏಪ್ರಿಲ್ 1ಕ್ಕಿಂತ ಮೊದಲು ನೊಂದಾಯಿಸಲಾದ ಎಲ್ಲಾ ವಾಹನಗಳು 2024 ಫೆಬ್ರವರಿ 17ರ ಒಳಗಾಗಿ ಹೈ-ಸೆಕ್ಯೂರಿಟಿ ನಂಬರ್ ಪ್ಲೇಟ್ಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಲು ಸೂಚನೆ ನೀಡಿದ್ದು, ಫೆಬ್ರವರಿ 17 ಕೊನೆಯ ದಿನಾಂಕವಾಗಿದೆ.ಹೆಚ್.ಎಸ್.ಆರ್.ಪಿ ಎಂಬುದು ವಾಹನಗಳ ನೋಂದಣಿ ನಂಬರ್ ಪ್ಲೇಟ್ ಆಗಿದ್ದು, ಅಲ್ಯೂಮಿನಿಯಂ ಲೋಹದಲ್ಲಿ ತಯಾರಿಸಲಾಗಿದ್ದು, ಇದರಲ್ಲಿ ಲೇಸರ್ ಕೋಡ್ ಇದ್ದು ಸ್ಕ್ಯಾನ್ ಮಾಡಿದಾಗ ವಾಹನದ ಸಂಪೂರ್ಣ ಮಾಹಿತಿ ಹಾಗೂ ಅಶೋಕಚಕ್ರದ ಚಿತ್ರವನ್ನು ಒಳಗೊಂಡಿದೆ. ನಕಲಿ ನಂಬರ್ ಪ್ಲೇಟ್ ಅಳವಡಿಸುವುದನ್ನು ತಪ್ಪಿಸಲು ಈ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಏನಿದು ‘HSRP’…? ಏನೇನಿರುತ್ತದೆ..?ಎಚ್‌ಎಸ್‌ಆರ್ಪಿ ಎಂದರೆ ಅತಿ ಸುರಕ್ಷಿತ ನೋಂದಣಿ ಫಲಕವಾಗಿದೆ. ಇವುಗಳನ್ನು ಅಲ್ಯೂಮಿನಿಯಂ ಲೋಹದಿಂದ ಮಾಡಿರುತ್ತಾರೆ. ವಾಹನದ ಇಂಜಿನ್ ಸಂಖ್ಯೆ, ಚಾಸ್ಸಿ ನಂಬರ್, ರಿಜಿಸ್ಟ್ರೇಷನ್ ನಂಬರ್, ಇನ್ಶೂರೆನ್ಸ್, ಮಾಲೀಕರ ಮಾಹಿತಿ ಹಾಗೂ ಪ್ರತ್ಯೇಕ ಗುರುತಿಸಿನ ಸಂಖ್ಯೆ ಹೊಂದಿರುತ್ತದೆ . ಅಶೋಕ ಚಕ್ರ ಚಿಹ್ನೆಯ ಕ್ರೋಮಿಯಂ ಸ್ಟಿಕ್ಕರ್ ಕೂಡ ಹೊಂದಿರುತ್ತದೆ.HSRP ನೋಂದಣಿ ಫಲಕಗಳು ಅತ್ಯಂತ ಸುರಕ್ಷಿತವಾಗಿದ್ದು ಇವುಗಳನ್ನು ಬದಲಿಸುವುದು, ವಿರೂಪಗೊಳಿಸುವುದು ಸಾಧ್ಯವಿಲ್ಲ. ನಂಬರ್‌ ಪ್ಲೇಟ್‌ನ ಒಂದು…

Read More