Author: main-admin

ಅಪರಿಚಿತ ವ್ಯಕ್ತಿಯ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾದ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ನಡೆದಿದೆ. ಸುಮಾರು 35 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕುಡಿದ ನಶೆಯಲ್ಲಿ ಬೆಟ್ಟದಿಂದ ಬಿದ್ದು ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ವಾರದ ಹಿಂದೆ ಮೃತಪಟ್ಟಿರುವ ಸಾಧ್ಯತೆ ಇದ್ದು, ಒಂದು ಕೈ ಮತ್ತು ಕಾಲನ್ನು ಕಾಡು ಪ್ರಾಣಿಗಳು ಎಳೆದೊಯ್ದಿವೆ. ಈ ಘಟನೆಯ ಬಗ್ಗೆ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಸಿದ್ದಾರೆ. ಮೃತ ವ್ಯಕ್ತಿ ಯಾರು? ಈ ಸಾವು ಆಕಸ್ಮಿಕವೋ ಅಥವಾ ಕೊಲೆಯೊ ಎಂಬುದರ ಕುರಿತು ತನಿಖೆಯನ್ನು ನಡೆಸುತ್ತಿದ್ದಾರೆ.

Read More

ಬಂಟ್ವಾಳ: ಮರಳು ಸಾಗಾಟದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಬಂಟ್ವಾಳ ನರಿಂಗಾನ ನಿವಾಸಿ, ಸಿದ್ಧೀಕ್ ಕೆ.ಎಂ. ಬಂಧಿತ. ಈತನನ್ನು ಜ.8 ರಂದು ರಾತ್ರಿ ವಿಟ್ಲ ಠಾಣಾ ಪೊಲೀಸರು ನರಿಂಗಾನ ಗ್ರಾಮದ ಕೆದಂಬಾಡಿ ಜಂಕ್ಷನ್ ನಲ್ಲಿ ಬಂಧಿಸಿದ್ದಾರೆ.ಆರೋಪಿಯ ಬಗ್ಗೆ ಯಾವುದೇ ದಾಖಲೆ/ ಭಾವಚಿತ್ರ ಇಲ್ಲದೇ ಇದ್ದುದರಿಂದ ಆತನ ಬಂಧನಕ್ಕೆ ಸಮಸ್ಯೆಯಾಗಿದ್ದು,, ಲಾರಿಯ ದಾಖಲಾತಿಗಾಗಿ ಆರ್.ಟಿ.ಒ ಕಚೇರಿಗಳಿಂದ ಮತ್ತು ಎಲ್.ಐ.ಸಿ ಕಚೇರಿಯಿಂದ ಆರೋಪಿಗೆ ಸಂಬಂಧ ಪಟ್ಟ ದಾಖಲಾತಿ ಮತ್ತು ಭಾವಚಿತ್ರವನ್ನು ಸಂಗ್ರಹಿಸಿ ಆರೋಪಿಯ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸಿದ್ಧೀಕ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ:126/2017 ಕಲಂ:379 r/w 34 ಐಪಿಸಿ ಪ್ರಕರಣ ದಾಖಲಾಗಿತ್ತು. ಸಿದ್ಧೀಕ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯು ತಪ್ಪು ಒಪ್ಪಿಕೊಂಡಿದ್ದು, ನ್ಯಾಯಾಲಯವು ರೂ. 11.000/- ದಂಡವನ್ನು ವಿಧಿಸಿರುತ್ತದೆ.ಕಾರ್ಯಾಚರಣೆಯಲ್ಲಿ ವಿಟ್ಲ ಠಾಣಾ ಎಎಸ್ಐ ಜಯರಾಮ ಹಾಗೂ ಸಿಬ್ಬಂದಿಗಳಾದ ಪುನೀತ್, ಹೇಮರಾಜ್, ಆಶೋಕ್ ಭಾಗವಹಿಸಿದ್ದರು.

Read More

ಕಾಸರಗೋಡು: ನ್ಯಾಯಾಧೀಶ ಎಂಬಂತೆ ನಟಿಸಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲೆತ್ನಿಸಿದ ಹಲವು ಪ್ರಕರಣಗಳ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ತಿರುವನಂತಪುರ ತೇನ್ನಲ ನಿವಾಸಿ ಶಮ್ನಾದ್ (42) ಬಂಧಿತ ಆರೋಪಿಯಾಗಿದ್ದಾನೆ.ನೀಲೇಶ್ವರ ಪೊಲೀಸ್ ಠಾಣೆಗೆ ಜ. 8ರಂದು ಕರೆ ಮಾಡಿ ಪತ್ತನಂತಿಟ್ಟದ ನ್ಯಾಯಾಧೀಶರ ಕಾರು ದಾರಿಯಲ್ಲಿ ಕೈಕೊಟ್ಟು ರಸ್ತೆಯಲ್ಲೇ ಉಳಿದುಕೊಂಡಿದ್ದಾರೆ. ರಾತ್ರಿ ಉಳಿದುಕೊಳ್ಳಲು ಅವರಿಗೆ ಅಗತ್ಯದ ವಸತಿ ಸೌಕರ್ಯ ಏರ್ಪಡಿಸು ವಂತೆ ಫೋನಿನಲ್ಲಿ ತಿಳಿಸಿದರು.ಪೊಲೀಸರು ಅಲ್ಲಿಗೆ ಹೋಗಿ ವಿಚಾರಿಸಿದಾಗ ಅವರ ವರ್ತನೆಯಲ್ಲಿ ಶಂಕೆಗೊಂಡು ಗುರುತುಪತ್ರ ಕೇಳಿದಾಗ ನಿರಾಕರಿಸಿದ. ಆ ಬಳಿಕ ತೀವ್ರ ವಿಚಾರಣೆ ನಡೆಸಿದಾಗ ಆತ ಹಲವು ಪ್ರಕರಣಗಳ ಆರೋಪಿಯೆಂದು ತಿಳಿದು ಆತನನ್ನು ಬಂಧಿಸಲಾಯಿತು.

Read More

ತಾಯಿಯ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳು ಪ್ರಾಯದ ಮಗು ಮೃತಪಟ್ಟ ಘಟನೆ ಮಂಗಳವಾರ ಬಂಬ್ರಾಣದಲ್ಲಿ ನಡೆದಿದೆ. ಮೂಲತಃ ಈಶ್ವರ ಮಂಗಲ ನಿವಾಸಿ , ಪ್ರಸ್ತುತ ಬಂಬ್ರಾಣದಲ್ಲಿ ನೆಲೆಸಿದ್ದ ಅಬ್ದುಲ್ ಅಝೀಝ್-ಖದೀಜಾ ದಂಪತಿ ಪುತ್ರಿ , ಮೂರು ತಿಂಗಳ ಹಸುಳೆ ಅಯಿಶಾ ಮೆಹ್ರಾ ಮೃತಪಟ್ಟಿದೆ. ಮಲಗಿಕೊಂಡು ಎದೆಹಾಲು ಕುಡಿಯುತ್ತಿದ್ದ ಮಗು ರಾತ್ರಿ ಎಷ್ಟು ಹೊತ್ತಾದರೂ ಎಚ್ಚರಗೊಳ್ಳದೆ ಇದ್ದಾ ಗ ಕುಂಬಳೆಯ ಖಾಸಗಿ ಆಸ್ಪ ತ್ರೆ ಗೆ ಕರೆದುಕೊಂಡುಹೋಗಿದ್ದು , ಅದಾಗಲೇ ಮಗು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು. ಕುಂಬಳೆ ಪೊಲೀಸರು ಮಹಜರು ನಡೆಸಿದರು.

Read More

ಉಪ್ಪಿನಂಗಡಿ: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಈಚರ್ ಲಾರಿಯೊಂದು ಇಳಿಜಾರು ಪ್ರದೇಶದಲ್ಲಿ ತನ್ನಷ್ಟಕ್ಕೆ ಹಿಮ್ಮುಖವಾಗಿ ಚಲಿಸಿ ಬಂದು ಗ್ಯಾರೇಜ್‍ ವೊಂದಕ್ಕೆ ನುಗ್ಗಿದ್ದ ಘಟನೆ ಉಪ್ಪಿನಂಗಡಿ ಪೆರ್ನೆ ಜಂಕ್ಷನ್ ಬಳಿ ಜ 8 ರಂದು ನಡೆದಿದೆ. ಚಂದ್ರಶೇಖರ್ ಎಂಬುವವರಿಗೆ ಈ ಗ್ಯಾರೆಜ್ ಸೇರಿದ್ದು, ಘಟನೆ ನಡೆದ ಸಂದರ್ಭ ಗ್ಯಾರೇಜ್‍ನಲ್ಲಿ ಯಾರೂ ಇಲ್ಲದ್ದರಿಂದ ಅಪಾಯವೇನೂ ಸಂಭವಿಸಿಲ್ಲ. ಆದರೆ ಗ್ಯಾರೇಜ್ ಮುಂದೆ ನಿಲ್ಲಿಸಿದ್ದ ಎರಡು ಬೈಕ್‍ಗಳಿಗೆ ಹಾಗೂ ಗ್ಯಾರೇಜ್‍ಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ. ಇನ್ನು ಗ್ಯಾರೇಜ್‍ಗೆ ಲಾರಿ ನುಗ್ಗಿದ್ದರಿಂದ ಅಲ್ಲಿ ಜನಸಂದಣಿ ಸೇರಿತ್ತು. ಇದೇ ಸಂದರ್ಭ ಉಪ್ಪಿನಂಗಡಿಯಿಂದ ಮಾಣಿ ಕಡೆ ತೆರಳುತ್ತಿದ್ದ ಮಿನಿ ಟೆಂಪೋವೊಂದರ ಬ್ರೇಕ್ ಫೇಲ್ ಆಗಿ ಗ್ಯಾರೇಜ್‍ ಕಡೆ ಸಾಗಿ ಬರುತ್ತಿತ್ತು. ಆದರೆ ಸಮಯ ಪ್ರಜ್ಞೆ ಮೆರೆದ ಮಿನಿ ಟೆಂಪೋ ಚಾಲಕ ಮಿನಿ ಟೆಂಪೋವನ್ನು ಇನ್ನೊಂದು ಬದಿಗೆ ತಿರುಗಿಸಿದ್ದಾರೆ. ಇನ್ನು ಟೆಂಪೋ ತಿರುಗಿಸಿದ ಪರಿಣಾಮ ಪಕ್ಕದ ಗದ್ದೆಗೆ ಉರುಳಿ ಬಿದ್ದಿದೆ. ಅದೃಷ್ಟವಶಾತ್ ಈ ಸಂದರ್ಭ ಟೆಂಪೋ ಚಾಲಕ ಅಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

Read More

ಮಂಗಳೂರು: ನಗರದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 98 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಸೀಝ್ ಮಾಡಿದ್ದಾರೆ. ಜ.8ರಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫ್ಲೈಟ್ IX 816 ನಲ್ಲಿ ಅಬುಧಾಬಿಯಿಂದ ಮಂಗಳೂರಿಗೆ ಬಂದಿಳಿದಿದ್ದಾನೆ. ಈತನ ಅನುಮಾನಾಸ್ಪದ ಚಲನವಲನವನ್ನು ನೋಡಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಆತನನ್ನು ಪರಿಶೀಲನೆ ಮಾಡಿದ್ದಾರೆ. ಆತನ ದೇಹವನ್ನು ಪರೀಕ್ಷಿಸಿದ ವೇಳೆ, ಆತನ ಸೊಂಟದ ಪ್ರದೇಶದಲ್ಲಿ ಬೀಪ್ ಸದ್ದು ಹೊರಹೊಮ್ಮಿದೆ. ಕೂಲಂಕಷವಾಗಿ ಪರಿಶೀಲನೆ ನಡೆಸಿದಾಗ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಹೊಂದಿರುವ 5 ಅಂಡಾಕಾರದ ಆಕಾರದ ವಸ್ತುಗಳು ಆತನ ಗುದನಾಳದಲ್ಲಿ ಪತ್ತೆಯಾಗಿದೆ. ಇದರಲ್ಲಿ 24 ಕ್ಯಾರೆಟ್ ಶುದ್ಧತೆಯ 1579 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ 98,68,750 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಆರೋಪಿಯನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.

Read More

ಹೋಟೆಲ್ ನಲ್ಲಿ ತನ್ನ ಸ್ವಂತ ಮಗುವನ್ನೇ ಕೊಂದು ಸೂಟ್ ಕೇಸ್ ನಲ್ಲಿ ಶವ ತುಂಬಿ ರವನಿಸುತ್ತಿದ್ದ ಸ್ಟಾರ್ಟ್ ಅಪ್ ಫೌಂಡರ್ ಹಾಗೂ ಸಿಇಓ ಓರ್ವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಐಮಂಗಲ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸ್ಟಾರ್ಟ್ ಅಪ್ ಫೌಂಡರ್ ಹಾಗೂ ಸಿಇಓ ಸುಚನಾ ಸೇಠ್ ಬಂಧಿತ ಆರೋಪಿ. ಸುಚನಾ ಸೇಠ್ ತನ್ನ ಪುಟ್ಟ ಮಗನೊಂದಿಗೆ ಗೋವಾದ ಹೋಟೆಲ್ ಗೆ ಬಂದಿದ್ದರು. ಈ ವೇಳೆ ಹೋಟೆಲ್ ರೂಮ್ ನಲ್ಲಿ ಮಗನ ಹತ್ಯೆ ಮಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹೋಟೆಲ್ ರೂಂ ಖಾಲಿ ಮಾಡಿ ಬೆಂಗಳೂರಿಗೆ ಹೊರಡಲು ಸಿದ್ಧರಾಗಿದ್ದ ಸುಚನಾ ಟ್ಯಾಕ್ಸಿಯತ್ತ ಸೂಟ್ ಕೇಸ್ ಹಿಡಿದು ಸಾಗುತ್ತಿದ್ದಾಗ ಅನುಮಾನಗೊಂಡ ಹೋಟೆಲ್ ಸಿಬ್ಬಂದಿ, ನಿಮ್ಮ ಜೊತೆ ಬಂದಿದ್ದ ಮಗು ಎಲ್ಲಿ ಎಂದು ವಿಚಾರಿಸಿದ್ದಾರೆ. ಆಗ ಸುಚನಾ ಮಗುವನ್ನು ಸಂಬಂಧಿಕರ ಮನೆಗೆ ಕಳುಹಿಸಿದ್ದೇನೆ ಎಂದು ಹೇಳಿ ಟ್ಯಾಕ್ಸಿ ಹತ್ತಿ ಬೆಂಗಳೂರಿಗೆ ಹೊರಟಿದ್ದಾರೆ. ಸಿಬ್ಬಂದಿಗಳಿಗೆ ಅನುಮಾನ ಹೆಚ್ಚಾಗಿದೆ. ತಕ್ಷಣ ಅವರು ತಂಗಿದ್ದ ಹೋಟೆಲ್ ರೂಮ್ ಗೆ ಸ್ವಚ್ಛತೆಗೆ…

Read More

ಮಂಗಳೂರು: “ಜನವರಿ 11ರಂದು ಸಂಜೆ 5 ಗಂಟೆಗೆ ಅಡ್ಯಾರ್ ಗಾರ್ಡನ್ ನಲ್ಲಿ ಜನಮೆಚ್ಚುಗೆ ಪಡೆದಿರುವ “ಶಿವದೂತೆ ಗುಳಿಗೆ” ನಾಟಕದ 555ನೇ ಪ್ರದರ್ಶನದ ಸಂಭ್ರಮ ಕಾರ್ಯಕ್ರಮ ಏರ್ಪಡಿಸಲಾಗಿದ್ದು ಕೊಪ್ಪ ಗೌರಿಗದ್ದೆಯ ಅವಧೂತ ವಿನಯ್ ಗುರೂಜಿ ಅವರು ದೀಪ ಪ್ರಜ್ವಲನೆಗೈಯಲಿದ್ದಾರೆ” ಎಂದು ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. “ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಪರಮಾನಂದ ಸಾಲಿಯಾನ್ ಅವರಿಗೆ ದಿ. ವನಿತಾ ಆನಂದ ಶೆಟ್ಟಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಹಿರಿಯ ಚಲನಚಿತ್ರ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ಖ್ಯಾತ ನಟ ರಕ್ಷಿತ್ ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್, ನಿರೂಪಕಿ ಅನುಶ್ರೀ ಉಪಸ್ಥಿತರಿರಲಿದ್ದಾರೆ. ಅಧ್ಯಕ್ಷತೆಯನ್ನು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ವಹಿಸಲಿದ್ದು, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ, ಶಶಿಧರ್ ಶೆಟ್ಟಿ ಬರೋಡ, ಆರ್.ಕೆ. ನಾಯರ್, ಪದ್ಮರಾಜ್ ಆರ್., ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್, ಬಿ. ನಾಗರಾಜ್…

Read More

ಮಂಗಳೂರು: ನಗರದ ಬೈಕಂಪಾಡಿ ಬಳಿಯ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಪರ್ಮ್ಯೂಮ್ ಫ್ಯಾಕ್ಟರಿಯಲ್ಲಿ ‌ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ. ನಿನ್ನೆ ತಡರಾತ್ರಿ ಸುಮರು 1 ಘಂಟೆ ಸುಮಾರಿಗೆ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಪರ್ಮ್ಯೂಮ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿದ್ದು ಇದನ್ನು ಗಮನಿಸಿದ ಸಾರ್ವನಿಕರು ಹಾಗು ಸಂಸ್ಥೆಯ ಸೆಕ್ಯೂರಿಟಿ ಅಗ್ನಿಶಾಮಕ ದಳ ಕರೆ ಮಾಡಿದ್ದಾರೆ. ಸ್ಥಳಕ್ಕೆ ಪಾಂಡೇಶ್ವರ, ಕದ್ರಿ, ಎಮ್ ಆರ್ ಪಿ ಎಲ್ ನ ಅಗ್ನಿಶಾಮಕ ಸಿಬ್ಬಂದಿಗಳು ಬರಬೇಕಾಯಿತು. ಬಾರಿ ದೊಡ್ಡ ಪ್ರಮಾಣದಲ್ಲಿ ಬೆಂಕಿ ಆವರಿಸಿದ್ದರಿಂದ ಸುಮಾರು ಎರಡು ಮೂರು ಘಂಟೆ ಬೆಂಕಿ ನಂದಿಸುವಲ್ಲಿ ಹರಸಾಹಸ ಪಡಬೇಕಾಯಿತು, ಇವರುಗಳ ಜೊತೆ ಸಾರ್ವಜನಿಕರು ಸಹಕರಿಸಿದ್ದಾರೆ.

Read More

ಪುತ್ತೂರು: ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿಯಾಗಿದ್ದ ಪ್ರೊಫೆಸರ್ ಎ.ಎಸ್. ರಾಮಕೃಷ್ಣರವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಶಿಕ್ಷೆಗೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಯವರಿಗೆ ಸುಪ್ರೀಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ. ನ್ಯಾಯಾಲಯಕ್ಕೆ ಶ್ಯೂರಿಟಿ ಕೊಟ್ಟ ಬಳಿಕ ಅವರು ಬಿಡುಗಡೆಯಾಗಲಿದ್ದು, ನಾಳೆ ಅದು ನಡೆಯುವ ಸಾಧ್ಯತೆ ಇದೆ. ಕಳೆದ ಅಕ್ಟೋಬರ್ 5ರಂದು ಆಕಾಶಭವನ ಶರಣ್ ಹೊರತುಪಡಿಸಿ ಡಾ. ರೇಣುಕಾಪ್ರಸಾದ್ ಮತ್ತು ಇತರ ಆರೋಪಿಗಳ ಬಂಧನವಾಗಿತ್ತು. ಮೂರು ತಿಂಗಳು ಕಳೆದ ಹಿನ್ನಲೆಯಲ್ಲಿ ಎಲ್ಲಾ ಬಂಧಿತರಿಗೂ ಜಾಮೀನು ದೊರೆತಿರುವುದಾಗಿ ತಿಳಿದು ಬಂದಿದೆ.

Read More