Author: main-admin

ಮಂಗಳೂರು: “ಜನವರಿ 10ರಂದು ನಗರದ ಪುರಭವನದಲ್ಲಿ ಶ್ರೀ ಲಲಿತೆ ಕಲಾವಿದರು ಹಾಗೂ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ತ್ರಿರಂಗ ಸಂಗಮ ಮುಂಬೈ ಸಂಚಾಲಕತ್ವದಲ್ಲಿ ಗರುಡ ಪಂಚಮಿ 50ರ ಪ್ರದರ್ಶನದ ಸಂಭ್ರಮ ಹಾಗೂ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ ರಂಗ ಕಲಾಬಂಧು ಬಿರುದು ಪ್ರದಾನ ನಡೆಯಲಿದೆ” ಎಂದು ತಂಡದ ಸಂಚಾಲಕ ಲಯನ್ ಡಿ. ಕಿಶೋರ್ ಶೆಟ್ಟಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಕಾರ್ಯಕ್ರಮದ ಉದ್ಘಾಟನೆಯನ್ನು ಕಟೀಲು ಕ್ಷೇತ್ರದ ಅನುವಂಶಿಕ ಅರ್ಚಕ ಅನಂತ ಪದ್ಮನಾಭ ಅಸಣ್ಣ ವಹಿಸಲಿದ್ದು, ಮೇಯರ್ ಸುಧೀರ್ ಶೆಟ್ಟ ಕಣ್ಣೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತುಳು ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಜಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಕಾರ್ಯದರ್ಶಿ ಪುರುಷೋತ್ತಮ್ ಭಂಡಾರಿ, ಯಕ್ಷಧ್ರುವ ಪಟ್ಲ ಫೌಂಡೇಶನ್ ಕೋಶಾಧಿಕಾರಿ ಸಿಎ ಸುದೇಶ್ ರೈ, ಜನನಿ ಕನ್ ಸ್ಟ್ರಕ್ಷನ್ ಮಾಲಕ ಸುಧಾಕರ್ ಪೂಂಜ, ಹೋಟೆಲ್ ಉದ್ಯಮಿ ಶಶಿಕಾಂತ ಶೇಖ, ಲ. ಚಂದ್ರಹಾಸ್ ಶೆಟ್ಟಿ, ಲೀಲಾಕ್ಷ…

Read More

ರಾಕಿಂಗ್ ಸ್ಟಾರ್ ಯಶ್ ಜನ್ಮದಿನದ ಅಂಗವಾಗಿ ಕಟೌಟ್ ನಿಲ್ಲಿಸುವ ವೇಳೆ ವಿದ್ಯುತ್ ತಂತಿ ತಗುಲಿ ಮೂವರ ಸಾವಿಗೀಡಾಗಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ರವಿವಾರ ಮಧ್ಯರಾತ್ರಿ ನಡೆದಿದೆ. ಸೂರಣಗಿ ಗ್ರಾಮದ ಹನುಮಂತ ಮಜ್ಜುರಪ್ಪ ಹರಿಜನ(21), ಮುರಳಿ ನೀಲಪ್ಪ ನಡವಿನಮನಿ(20), ನವೀನ ನೀಲಪ್ಪ ಗಾಜಿ(19) ಮೃತಪಟ್ಟಿದ್ದಾರೆ. ಗಾಯಗೊಂಡ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಲಕ್ಷ್ಮೇಶ್ವರ ಪಟ್ಟಣದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮವಾರ ರಾಕಿಂಗ್ ಸ್ಟಾರ್ ಜನ್ಮದಿನವನ್ನು ಆಚರಿಸಲು ಪ್ಲಾನ್ ಮಾಡಿಕೊಂಡಿದ್ದ ಸೂರಣಗಿ ಗ್ರಾಮದ‌ 10ಕ್ಕೂ ಯುವಕರು 25 ಅಡಿ ಎತ್ತರದ ಬೃಹತ್ ಕಟೌಟ್ ನಿಲ್ಲಿಸುವ ವೇಳೆ ಕಟೌಟ್ ವಿದ್ಯುತ್ ತಂತಿ ತಾಗಿದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಮೃತ ಯುವಕರ ಮನೆಯಲ್ಲಿ ಶೋಕ ಮಡುಗಟ್ಟಿದೆ.

Read More

ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯ ನಿರ್ವಾಣ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೇ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ವರದಿ ನೀಡುವಂತೆ ಮಾರತಹಳ್ಳಿ ಎಸ್‌ಪಿ ಪ್ರಿಯದರ್ಶಿನಿ ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬೀ ದಯಾನಂದ್ ಸೂಚನೆ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಈ ಬಗ್ಗೆ ವರದಿ ನೀಡುವಂತೆ ಮಾರತಹಳ್ಳಿ ಎಸ್‌ಪಿಗೆ ಪ್ರಿಯದರ್ಶಿನಿಗೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ ದಯಾನಂದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸ್ಪಾ ಬಗ್ಗೆ ಸಂಪೂರ್ಣ ಮಾಹಿತಿ ಒಳಗೊಂಡ ವರದಿ ನೀಡುವಂತೆ ಸೂಚಿಸಿದ್ದಾರೆ. ಇತ್ತೀಚಿಗೆ ಬೆಂಗಳೂರಿನ ಓಲ್ಡ್ ಮದ್ರಾಸ್ ರಸ್ತೆಯಲ್ಲಿರುವ ನಿರ್ವಾಣ ಸ್ಪಾ ಎಂಬ ಹೆಸರಿನಲ್ಲಿ ವೇಶ್ಯಾವಾಟಿಕೆ ದಂದೆ ನಡೆಯುತ್ತಿರುವ ಮಾಹಿತಿಯನ್ನು ಆಧರಿಸಿ ಸಿಸಿಬಿ ಮಹಿಳಾ ಸಂರಕ್ಷಣಾ ಅಧಿಕಾರಿಗಳು ದಾಳಿ ನಡೆಸಿದರು. ದಾಳಿಯ ವೇಳೆ ಸುಮಾರು 40ಕ್ಕೂ ಹೆಚ್ಚು ಮಹಿಳೆಯರನ್ನು ರಕ್ಷಣೆ ಮಾಡಲಾಗಿದ್ದು 36 ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಬೇರೆ ರಾಜ ಹಾಗೂ ವಿದೇಶದಿಂದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ದಂದೆಡೆಸುತ್ತಿದ್ದ ಸ್ಪಾ ಮಾಲೀಕ ಅನಿಲ್ ಎನ್ನುವವರನ್ನು ಅಧಿಕಾರಿಗಳು ವಶಕ್ಕೆ…

Read More

ಬೆಂಗಳೂರು :  ಅದೃಷ್ಟದ ಪಚ್ಚೆ ಕಲ್ಲನ್ನು ಕಡಿಮೆ ಬೆಲೆಗೆ ಖರೀದಿಸಿ ದುಪ್ಪಟ್ಟು ಹಣಕ್ಕೆ ಮಾರಾಟ ಮಾಡಬಹುದು ಎಂದು ಆಮಿಷವೊಡ್ಡಿ ಸ್ನೇಹಿತ ಉದ್ಯಮಿಯೊಬ್ಬರಿಂದ ₹52 ಲಕ್ಷ ಪಡೆದು ಅವರ ಸ್ನೇಹಿತರೇ ವಂಚಿಸಿದ್ದಾರೆ.ನಗರದ ರಿಚ್ಮಂಡ್ ಟೌನ್ ನಿವಾಸಿ ಶೌಕತ್‌ ಆಲಿ ವಂಚನೆಗೆ ಒಳಗಾಗಿದ್ದು, ಸಂತ್ರಸ್ತ ನೀಡಿದ ದೂರಿನ ಮೇರೆಗೆ ಆಲಿ ಸ್ನೇಹಿತರಾದ ಅಶ್ಪಾಕ್ ಬೇಗ್, ಶಾನವಾಜ್‌ ಮಿರ್ಜಾ ಹಾಗೂ ಸಾಜಿದ್ ವಿರುದ್ಧ ಅಶೋಕ ನಗರ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ ಒಂದೂವರೆ ದಶಕಗಳಿಂದ ಆಲಿ ಹಾಗೂ ಆರೋಪಿಗಳು ಸ್ನೇಹಿತರಾಗಿದ್ದು, ಈ ಗೆಳೆತನದಲ್ಲಿ ಪರಸ್ಪರ ಹಣಕಾಸು ವ್ಯವಹಾರ ಸಹ ನಡೆದಿತ್ತು. ಹೀಗಿರುವಾಗ ಕಳೆದ ಏಪ್ರಿಲ್‌ನಲ್ಲಿ ಆಲಿಗೆ ಕರೆ ಮಾಡಿದ ಸ್ನೇಹಿತರು, ನಮಗೆ ಪರಿಚಯವಿರುವ ವ್ಯಕ್ತಿ ಬಳಿ ಬೆಲೆ ಬಾಳುವ ಪಚ್ಚೆ ಕಲ್ಲು ಇದೆ. ಅದನ್ನು ಆತ ₹52 ಲಕ್ಷಕ್ಕೆ ಮಾರುತ್ತಿದ್ದಾನೆ. ನಾವೇ ಖರೀದಿಸಿದರೆ ಅದನ್ನು ₹1 ಕೋಟಿಗೆ ಮಾರಾಟ ಮಾಡಬಹುದು ಎಂದು ಹೇಳಿದ್ದರು. ಲಾಭದಾಸೆಗೆ ಆಲಿ ಸಹ ಡೀಲ್‌ಗೆ ಸಮ್ಮತಿ ಸೂಚಿಸಿದ್ದರು. ಆನಂತರ ಹಂತ ಹಂತವಾಗಿ…

Read More

ವರದಕ್ಷಿಣೆಗಾಗಿ ಪೀಡಿಸುತ್ತಿದ್ದ ಪತಿ ಮಹಾಶಯ ಪತ್ನಿಯನ್ನು ಹೆಮೆಟ್ ನಿಂದ ಹೊಡೆದು ಕೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಜ.4ರಂದು ದಾವಣಗೆರೆಯ ಚನ್ನಗಿರಿ ತಾಲೂಕಿನ ನುಗ್ಗಿಹಳ್ಳಿ ಕ್ರಾಸ್ ಬಳಿ ಮೂರು ತಿಂಗಳ ಗರ್ಭಿಣಿಯನ್ನು ಪತಿಯೇ ಕೊಲೆಗೈದು ಬಳಿಕ ಅಪಘಾತ ಎಂದು ಬಿಂಬಿಸುವ ನಾಟಕವಾಡಿದ್ದ. 23 ವರ್ಷದ ಯಸೋಧಾ ಮೃತ ಮಹಿಳೆ. ಆರೋಪಿ ಪತಿ ತಿಪ್ಪೇಶ್ (28) ನನ್ನು ಪೊಲೀಸರು ಬಂಧಿಸಿದ್ದಾರೆ. ಯಶೋಧಾ ಹಾಗೂ ತಿಪ್ಪೇಶ್ ಸಂಬಂಧಿಗಳೇ ಆಗಿದ್ದು, ಪ್ರೀತಿಸಿ ಆರುತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ತಿಪ್ಪೇಶ್ ಬಗ್ಗೆ ಯಶೋಧಾ ಮನೆಯವರಿಗೆ ಒಳ್ಳೆ ಅಭಿಪ್ರಾಯವಿರಲಿಲ್ಲ. ಹಾಗಾಗಿ ಮದುವೆಗೆ ಒಪ್ಪಿರಲಿಲ್ಲ. ಆದರೂ ಜೋಡಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಮದುವೆಯಾದ ಕೆಲ ತಿಂಗಳಲ್ಲೇ ತಿಪ್ಪೇಶ್ ವರದಕ್ಷಿಣೆಗಾಗಿ ಕಿರುಕುಳ ನೀಡಲಾರಂಭಿಸಿದ್ದ. ಅಲ್ಲದೇ ಯಶೋಧಾ ಮೂರು ತಿಂಗಳ ಗರ್ಭಿಣಿಯಾಗಿದ್ದಳು. ತವರಿಗೆ ಬಂದಿದ್ದ ಪತ್ನಿಯನ್ನು ತಿಪ್ಪೇಶ್ ವಾಪಾಸ್ ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಜ.4ರಂದು ಅಪಘಾತದಲ್ಲಿ ಯಶೋಧಾ ಸಾವನ್ನಪ್ಪಿದ್ದಾಳೆ ಎಂದು ನಾಟಕವಾಡಿದ್ದ. ಮಗಳ ಮೃತದೇಹ ಕಂಡು ಅನುಮಾನಗೊಂಡ ಯಶೋಧಾ ತಂದೆ ಚಂದ್ರಪ್ಪ,…

Read More

ಬೆಳ್ತಂಗಡಿ: ಇಂಜಿನಿಯರಿಂಗ್ ವ್ಯಾಸಂಗ ಮಾಡಿದ ಪದವೀಧರನೊಬ್ಬ ತನ್ನ ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇಂಜಿನಿಯರಿಂಗ್ ಮುಗಿಸಿದ ಯುವಕನೊಬ್ಬ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದು ಜ.6 ರಂದು ಕುತ್ತಿಗೆಗೆ ಚೂರಿ ಇರಿದು ಆತ್ಮಹತ್ಯೆಗೆ ಯತ್ನಿಸಿದ್ದು, ಸಾರ್ವಜನಿಕರ ಮಾಹಿತಿಯ ಮೇರೆಗೆ ಪೊಲೀಸರು ರಕ್ಷಣೆ ಮಾಡಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಮಾದಾವರ ನಿವಾಸಿ ನಾರಾಯಣಪ್ಪ ಮಗ ಹಿತೇಶ್ (24) ಎಂಬ ಯುವಕ ಎನ್.ಕೆ.ಐ.ಡಿ ಯಲ್ಲಿ ಸಿವಿಲ್ ಇಂಜಿನಿಯರಿಂಗ್ ಮುಗಿಸಿದ್ದಾನೆ. 2022 ರಲ್ಲಿ ಆರು ತಿಂಗಳ ಐಟಿ ಕೋರ್ಸ್ ಮಾಡಿ, ಐ.ಎನ್.ಸಿ ಯಲ್ಲಿ ಉದ್ಯೋಗಕ್ಕೆ ಸೇರಿಕೊಂಡರು ಕೂಡ ಸರಿಯಾದ ಸಂಬಳ ಸಿಗಲಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಸ್ ಮೂಲಕ ಜ.6 ರಂದು ಬೆಳಗ್ಗೆ ಬಂದು ಧರ್ಮಸ್ಥಳ – ಕೊಕ್ಕಡ ರಸ್ತೆಯ ಕಲ್ಲೇರಿ ಪೆಟ್ರೋಲ್ ಪಂಪ್ ಬಳಿಯ ರಸ್ತೆ ಪಕ್ಕದಲ್ಲಿ ಹೋಗಿ ಬ್ಯಾಗ್ ನಲ್ಲಿ ತಂದಿದ್ದ ಚೂರಿಯಿಂದ ಕುತ್ತಿಗೆಯನ್ನು ಇರಿದುಕೊಂಡು…

Read More

2005ರ ಸೆಪ್ಟೆಂಬರ್ 9ರ ಮೊದಲು ಹಿಂದೂ ಉತ್ತರಾಧಿಕಾರ ಕಾಯ್ದೆಗೆ ತಿದ್ದುಪಡಿ ತಂದು ಹೆಣ್ಣು ಮಕ್ಕಳಿಗೆ ಸಹಜ ಹಕ್ಕುಗಳನ್ನು ನೀಡುವ ಮೂಲಕ ಮಹಿಳೆ ಮೃತಪಟ್ಟಿದ್ದಾಳೆ ಎಂಬ ಕಾರಣಕ್ಕೆ ಆಕೆಯ ಪಿತ್ರಾರ್ಜಿತ ಆಸ್ತಿಯ ಕಾನೂನುಬದ್ಧ ವಾರಸುದಾರರ ಹಕ್ಕುಗಳನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪಿನಲ್ಲಿ ಅಭಿಪ್ರಾಯಪಟ್ಟಿದೆ. ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ನಿವಾಸಿ ಚನ್ನಬಸಪ್ಪ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್, ವಿನೀತಾ ಶರ್ಮಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ನ ವಿಸ್ತೃತ ಪೀಠವು ಈ ನಿಲುವನ್ನು ಸ್ಪಷ್ಟಪಡಿಸಿದೆ ಎಂದು ಗಮನಿಸಿದರು. ಈ ತೀರ್ಪು ಲಿಂಗ ಸಮಾನತೆಯನ್ನು ಒತ್ತಿಹೇಳುತ್ತದೆ ಮತ್ತು ಮಗಳು ಯಾವಾಗ ನಿಧನರಾದರು ಎಂಬುದನ್ನು ಲೆಕ್ಕಿಸದೆ ಹೆಣ್ಣುಮಕ್ಕಳು ಮತ್ತು ಅವರ ವಾರಸುದಾರರು ಪಿತ್ರಾರ್ಜಿತ ಆಸ್ತಿಯಲ್ಲಿ ತಮ್ಮ ಸರಿಯಾದ ಪಾಲನ್ನು ಪಡೆಯುವುದನ್ನು ಖಚಿತಪಡಿಸುತ್ತದೆ. ಮಗಳು ಯಾವಾಗ ನಿಧನರಾದರು ಎಂಬುದನ್ನು ಲೆಕ್ಕಿಸದೆ, ಹೆಣ್ಣುಮಕ್ಕಳು ಮತ್ತು ಅವರ ಕಾನೂನುಬದ್ಧ ವಾರಸುದಾರರಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಪುತ್ರರಂತೆಯೇ ಹಕ್ಕುಗಳನ್ನು ನೀಡುವ ಮೂಲಕ ಈ ತೀರ್ಪು ಐತಿಹಾಸಿಕ…

Read More

ಮೂಡುಬಿದಿರೆ: ಕಲ್ಲಮುಂಡ್ಕೂರು ಗ್ರಾ.ಪಂ. ಸಿಬಂದಿ ಚಂದ್ರಹಾಸ (29) ಶನಿವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್‌ ಕಚೇರಿಯತ್ತ ನಡೆದುಕೊಂಡು ಹೋಗುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಅವರು ಕಲ್ಲಮುಂಡ್ಕೂರು ಗ್ರಾ.ಪಂ. ವ್ಯಾಪ್ತಿಯ ಬರ್ಕಬೆಟ್ಟು ನಿವಾಸಿ ದಿ| ದಾದು ಅವರ ಪುತ್ರ. ಮನೆಯಿಂದ ನೂರು ಮೀಟರ್‌ ದೂರದಲ್ಲಿ ಕುಸಿದು ಬಿದ್ದ ಚಂದ್ರಹಾಸ ಅವರನ್ನು ಮೂಡುಬಿದಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅದಾಗಲೇ ಅವರು ಕೊನೆಯುಸಿರೆಳೆದಿದ್ದರು. ಉತ್ತಮ ಆಟಗಾರಕಳೆದ 10 ವರ್ಷಗಳಿಂದ ಪಂಚಾ ಯತ್‌ನಲ್ಲಿ ಸಿಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅತ್ಯುತ್ತಮ ಕ್ರಿಕೆಟ್‌ ಆಟಗಾರರಾಗಿದ್ದ ಚಂದ್ರಹಾಸ್‌ ಅವರು ಸ್ಥಳೀಯ ಕೆಎಫ್‌ಸಿ ತಂಡದ ಸದಸ್ಯರಾಗಿದ್ದರು. ಅಲ್ಲದೆ ಉತ್ತಮ ಚಿತ್ರಕಲಾವಿದರೂ ಆಗಿದ್ದರು. ಜನರ ಜಮಾವಣೆಅವರ ಸಾವಿನ ವಿಷಯ ತಿಳಿದೊಡನೆ ಸಾವಿರಾರು ಮಂದಿ ಪಂಚಾಯತ್‌ ಕಚೇರಿಯಲ್ಲಿ ಜಮಾಯಿಸಿ ಮೃತರ ಅಂತಿಮ ದರ್ಶನ ಪಡೆದರು. ಪೇಟೆ ಬಂದ್‌ ಮಾಡಿ ಸಂತಾಪಕಲ್ಲಮುಂಡ್ಕೂರು ಪೇಟೆಯನ್ನು ಸುಮಾರು 2 ತಾಸು ಬಂದ್‌ ಮಾಡಿ ಮೃತರಿಗೆ ಗೌರವ ಸಲ್ಲಿಸಲಾಯಿತು. ಪಂಚಾಯತ್‌ ಅಧ್ಯಕ್ಷರು, ಸದಸ್ಯರು, ಸಿಬಂದಿ, ನಾಗರಿಕರ ಸಹಿತ ಕೆಎಫ್‌ಸಿ ತಂಡದವರು ಚಂದ್ರಹಾಸ ಅವರ…

Read More

ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಅಂಜುಟಗಿ -ಇಂಡಿ ರಸ್ತೆಯಲ್ಲಿ ವ್ಯಕ್ತಿಯೊಬ್ಬ ತಾನೇ ಪೂಜಿಸಿಕೊಂಡು ನಂತರ ನೇಣಿಗೆ ಶರಣಾಗಿದ್ದಾನೆ. ಅಡಿವೆಪ್ಪ ಘಾಯಿ(43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮದ್ಯವ್ಯಸನಿಯಾಗಿದ್ದ ಅಡಿವೆಪ್ಪ 39 ಎಕರೆ ಜಮೀನು ಮಾರಿದ್ದ. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊರಳಿಗೆ ನಿಂಬೆಹಣ್ಣು, ಹಸಿಮೆಣಸಿನಕಾಯಿ ಕಟ್ಟಿಕೊಂಡು ತಾನೇ ಪೂಜಿಸಿಕೊಂಡು ನಂತರ ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಝಳಕಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕಾಸರಗೋಡು: ರೈಲಿನಿಂದ ಬಿದ್ದು ಯುವತಿಯೊರ್ವರು ಮೃತಪಟ್ಟ ಘಟನೆ ಪಳ್ಳಿಕೆರೆಯಲ್ಲಿ ನಡೆದಿದೆ. ಕಲ್ಪಟ್ಟ ಕಾವುಮಂದದ ಐಶ್ವರ್ಯ ಜೋಸೆಫ್ (30) ಮೃತಪಟ್ಟವರು. ಪಳ್ಳಿಕೆರೆ ಮಾಸ್ತಿ ಗುಡ್ಡೆಯ ರೈಲ್ವೆ ಹಳಿ ಸಮೀಪ ಮೃತ ದೇಹಪತ್ತೆಯಾಗಿದೆ. ರಾತ್ರಿ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಬೆಳಿಗ್ಗೆ ಪರಿಸರವಾಸಿಗಳು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದರು. ಮೃತ ದೇಹದ ಬಳಿ ಲಭಿಸಿದ ಪರ್ಸ್‌ನಲ್ಲಿದ್ದ ಗುರುತು ಚೀಟಿಯಿಂದ ಯುವತಿಯ ಗುರುತು ಪತ್ತೆ ಹಚ್ಚಲಾಯಿತು. ಯುವತಿಯು ಕೋಜಿಕ್ಕೊಡ್ ನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಳು. ಉದ್ಯೋಗದ ನಿಮಿತ್ತ ನೇತ್ರಾವತಿ ರೈಲಿನಲ್ಲಿ ಮಂಗಳೂರಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಈ ಘಟನೆ ಬಗ್ಗೆ ಸಂಬಂಧಿಕರಿಗೆ ಮಾಹಿತಿ ನೀಡಲಾಗಿದೆ.

Read More