Author: main-admin

ಉಡುಪಿ: ಅಕ್ರಮವಾಗಿ ವೇಶ್ಯಾವಾಟಿಕೆ ನಡೆಸುತ್ತಿದ್ದ ವಸತಿಗೃಹದ ಮೇಲೆ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಉಡುಪಿ ನಗರ ಠಾಣೆಯ ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಬಂಧಿತರನ್ನು ಮಧು ಹಾಗೂ ರೂಂ ಬಾಯ್ ಸುಕುಮಾರ್ ಎಂದು ಗುರುತಿಸಲಾಗಿದೆ. ಮೂಡನಿಡಂಬೂರು ಗ್ರಾಮದ ಮೀನು ಮಾರ್ಕೆಟ್ ಬಳಿ ವಾಣಿಜ್ಯ ಕಟ್ಟಡದಲ್ಲಿರುವ ಲಾಡ್ಜ್ ರೂಂಗೆ ಮಹಿಳೆಯರನ್ನು ಕರೆಸಿ ಅಕ್ರಮವಾಗಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ದೊರೆತ ಮಾಹಿತಿಯಂತೆ ದಾಳಿ ನಡೆಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 03/2024 , ಕಲಂ: 370 ಐಪಿಸಿ & 3,4,5,6,7 ಐಟಿಪಿ ಆಕ್ಟ್ ರಂತೆ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ನಗರದ ಮಾದಕ ವಸ್ತು ಗಾಂಜಾ ಸೆವನೆ ಮಾಡಿದ ಆರೋಪದಲ್ಲಿ ಇಬ್ಬರನ್ನು ಕಂಕನಾಡಿ ಹಾಗೂ ಬಂದರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ ‌ ಬಂಧಿತ ಆರೋಪಿಗಳನ್ನು ಉಡುಪಿ ಬೆಳಪು ಪಣಿಯೂರು ನಿವಾಸಿ ರಕ್ಷಿತ್ (30) ಹಾಗೂ ಮಂಗಳೂರು ಕೂಳೂರು ತೋಟಬೆಂಗ್ರೆ ನಿವಾಸಿ ದೀಕ್ಷಿತ್ (24) ಎಂದು ಗುರುತಿಸಲಾಗಿದೆ. ಬಂಧಿತರಲ್ಲಿ ರಕ್ಷಿತ್ ಎಂಬಾತ ನಗರ ಹೊರವಲಯದ ಅಡ್ಯಾರ್ ನಲ್ಲಿ ಗಾಂಜಾ ಸೇವನೆ ಮಾಡಿದ್ದು, ಆತನನ್ನು ಕಂಕನಾಡಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹಾಗೂ ದೀಕ್ಷಿತ್ ಎಂಬಾತ ನಗರದ ಕೋರ್ಟ್ ಆವರಣದ ಬಳಿ ಗಾಂಜಾ ಸೇವಿಸಿ ತೂರಾಡುತ್ತಿದ್ದು, ಆತನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಯಲಾಗಿದೆ.

Read More

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಬೆಳಗಿನ ಜಾವ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಶಿರಾಡಿ ಘಾಟ್ ನಲ್ಲಿ ರಸ್ತೆ ಬದಿ ಪಲ್ಟಿಯಾಗಿ ಕಾಂಕ್ರೀಟ್ ತಡೆಗೋಡೆಗೆ ವಾಲಿ ನಿಂತಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ನೆಲ್ಯಾಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ನವದೆಹಲಿ. ಭಾರತೀಯ ಎಲೆಕ್ಟ್ರಿಕ್ ಮಾರುಕಟ್ಟೆಯು ಚೀನಾದ ಉತ್ಪನ್ನಗಳಿಂದ ತುಂಬಿದೆ. ಎಲ್ಲಾ ನಿರ್ಬಂಧಗಳು ಮತ್ತು ಅಭಿಯಾನಗಳ ಹೊರತಾಗಿಯೂ, ಮಾರುಕಟ್ಟೆಯಲ್ಲಿ ಕಳಪೆ ಎಲೆಕ್ಟ್ರಿಕ್ ಉತ್ಪನ್ನಗಳ ಮಾರಾಟ ನಿಲ್ಲುತ್ತಿಲ್ಲ. ಕಳಪೆ ಗುಣಮಟ್ಟದ ಸರಕುಗಳಿಂದಾಗಿ, ಮನೆಗಳಲ್ಲಿ ವಿದ್ಯುತ್ ಗೆ ಸಂಬಂಧಿಸಿದ ಅಪಘಾತಗಳು ಆಗಾಗ್ಗೆ ಸಂಭವಿಸುತ್ತವೆ. ಇದನ್ನು ತಡೆಯಲು ಸರ್ಕಾರ ಕಠಿಣ ನಿಯಮಗಳನ್ನು ಮಾಡಿದೆ. ಈಗ ಅಂಗಡಿಯವರು ಕಳಪೆ ಗುಣಮಟ್ಟದ ಸರಕುಗಳನ್ನು ಮಾರಾಟ ಮಾಡುವುದು ಕಂಡುಬಂದರೆ, ಅಥವಾ ಕಂಪನಿಯು ಉತ್ಪಾದನೆಯನ್ನು ಮಾಡಿದರೆ, ಅವರನ್ನು ದಂಡದೊಂದಿಗೆ ಜೈಲಿಗೆ ಕಳುಹಿಸಲು ಸಹ ಕ್ರಮ ಕೈಗೊಳ್ಳಲಾಗುವುದು. ಕಳಪೆ ಗುಣಮಟ್ಟದ ವಸ್ತುಗಳ ಆಮದನ್ನು ತಡೆಯಲು ಮತ್ತು ಈ ವಸ್ತುಗಳ ದೇಶೀಯ ಉತ್ಪಾದನೆಯನ್ನು ಉತ್ತೇಜಿಸಲು ಸರ್ಕಾರವು ಸ್ವಿಚ್-ಸಾಕೆಟ್-ಔಟ್ಲೆಟ್ಗಳು ಮತ್ತು ಕೇಬಲ್ ಟ್ರಂಕಿಂಗ್ನಂತಹ ವಿದ್ಯುತ್ ಸರಕುಗಳಿಗೆ ಕಡ್ಡಾಯ ಗುಣಮಟ್ಟದ ಮಾನದಂಡಗಳನ್ನು ಹೊರಡಿಸಿದೆ. ಈ ನಿಟ್ಟಿನಲ್ಲಿ, ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (ಡಿಪಿಐಐಟಿ) ಎಲೆಕ್ಟ್ರಿಕಲ್ ಬಿಡಿಭಾಗಗಳ (ಗುಣಮಟ್ಟ ನಿಯಂತ್ರಣ) ಆದೇಶ 2023 ಅನ್ನು ಹೊರಡಿಸಿದೆ. ಡಿಪಿಐಐಟಿ ಪ್ರಕಾರ, ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (ಬಿಐಎಸ್) ಗುರುತು…

Read More

ಮಂಗಳೂರು : ಮದುವೆಯ ವೇಳೆ ಮದುಮಗನ ಮಾಜಿ ಪ್ರೇಯಸಿ ಪೊಲೀಸರೊಂದಿಗೆ ಎಂಟ್ರಿ ಕೊಟ್ಟು ಹೈಡ್ರಾಮಾ ಕ್ರಿಯೆಟ್ ಮಾಡಿದ ಘಟನೆ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ. ಆರೋಪಿ ಕೇರಳ ಮೂಲದ ಅಕ್ಷಯ್ ಎಂದು ಗುರುತಿಸಲಾಗಿದೆ. ಕೇರಳ ಮೂಲದ ಅಕ್ಷಯ್ ಎಂಬಾತನ ಮದುವೆ ಮಂಗಳೂರು ಮೂಲದ ಯುವತಿ ಜೊತೆ ನಡೆಯುತ್ತಿದ್ದಾಗ ಮೈಸೂರು ಮೂಲದ ಮಾಜಿ ಪ್ರೇಯಸಿ ಕಲ್ಯಾಣ ಮಂಟಪಕ್ಕೆ ಎಂಟ್ರಿಕೊಟ್ಟು ಹೈಡ್ರಾಮ ನಡೆಸಿದ್ದಾಳೆ. ಇತ ಒಂದೂವರೆ ವರ್ಷದ ಹಿಂದೆ ಮೈಸೂರಿನ ಯುವತಿಯನ್ನು ಶಾದಿ ಡಾಟ್ ಕಾಮ್ ಮೂಲಕ ಪರಿಚಯ ಮಾಡಿಕೊಂಡಿದ್ದನು. ನಂತರ ವಿವಾಹವಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿದ್ದಾನೆ. ನಂತರ ವರಸೆ ಬದಲಾಯಿಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಈ ನಡುವೆ ಯುವತಿ ಡಿಸೆಂಬರ್ 26 ರಂದು ಅಕ್ಷಯ್ ವಿರುದ್ಧ ಕೇರಳದ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರದ ದೂರು ದಾಖಲಿಸಿದ್ದಾಳೆ. ಇನ್ನು ಪ್ರಕರಣ ಸಂಬಂಧ ಅರೋಪಿ ಅಕ್ಷಯ್​ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ವಜಾಗೊಳಿಸಿತ್ತು. ಈ ನಡುವೆ ಮಂಗಳೂರಿನ ಯುವತಿ ಜೊತೆ ಅಕ್ಷಯ್​ಗೆ ವಿವಾಹ…

Read More

ಸುಳ್ಯ: ಅಡಿಕೆಯ ಹಳದಿ ರೋಗಕ್ಕೆ ಔಷಧ ಸಿಂಪಡಿಸಿದರೂ ಕಡಿಮೆಯಾಗದ ಕಾರಣ ಮನನೊಂದು ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯ ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಕೃಷಿಕರನ್ನು ಆಲೆಟ್ಟಿ ಗ್ರಾಮದ ಬಡ್ಡಡ್ಕ ಚಳ್ಳಂಗಾರ್‌ ರಾಮಣ್ಣ ಅವರ ಪುತ್ರ ಜಗದೀಶ್‌ (56) ಎಂದು ಗುರುತಿಸಲಾಗಿದೆ. ಜಗದೀಶ್‌ ಜ.3 ರಂದು ಮನೆಯಿಂದ ಸುಳ್ಯಕ್ಕೆಂದು ಹೋದವರು ಮನೆಗೆ ಮರಳಿ ಬರದ ಹಿನ್ನಲೆಯಲ್ಲಿ ಮನೆಯವರು ಜ.4ರಂದು ರಂದು ಆಲೆಟ್ಟಿ ಗ್ರಾಮದ ಗೂಡಿಂಜದ ಅರಣ್ಯ ಪ್ರದೇಶದಲ್ಲಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಅವರು ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡ ಜಗದೀಶ್‌ ಹೊಟ್ಟೆನೋವಿನಿಂದಲೂ ಬಳಲುತ್ತಿದ್ದರು. ಒಂದು ವರ್ಷದಿಂದ ತೋಟಕ್ಕೆ ಹಳದಿರೋಗ ಬಂದಿದ್ದು, ಎಷ್ಟೇ ಔಷಧ ಸಿಂಪಡಿಸಿದರೂ ನಿಯಂತ್ರಣಕ್ಕೆ ಬಂದಿರಲಿಲ್ಲ. ಇದರಿಂದಾಗಿ ಭವಿಷ್ಯದ ಬಗ್ಗೆ ಚಿಂತೆಗೀಡಾಗಿ ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ. ಇನ್ನು ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸಕಲೇಶಪುರದ ಬೈಕರವಳ್ಳಿ ಗ್ರಾಮದಲ್ಲಿ ನವಜಾತ ಶಿಶುವನ್ನು ಅಕ್ರಮವಾಗಿ ಮಾರಾಟ ಮಾಡಲಾಗಿದೆ ಎಂಬ ದೂರಿನ ಮೇರೆಗೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರಲ್ಲಿ ಮಗುವಿನ ತಾಯಿ ಮತ್ತು ಆಶಾ ಕಾರ್ಯಕರ್ತೆ ಸೇರಿದ್ದಾರೆ. ಆರೋಪಿಗಳನ್ನು ಹರಗವಳ್ಳಿಯ ಮಗುವಿನ ತಾಯಿ ಗಿರಿಜಾ, ಹಿರಿಯೂರು ಕೂಡಿಗೆಯ ಸುಮಿತ್ರಾ, ಹೊಸಳ್ಳಿಯ ಸುಬ್ರಮಣಿ, ಅವರ ಮಗ ಶ್ರೀಕಾಂತ್ ಮತ್ತು ಚಿಕ್ಕಮಗಳೂರಿನ ಉಷಾ ಎಂದು ಗುರುತಿಸಲಾಗಿದೆ. ಒಂದು ದಿನದ ಹಸುಳೆಯನ್ನು ಮಾರಾಟ ಮಾಡಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಏತನ್ಮಧ್ಯೆ, ಉದ್ದೇಶದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಪೋಷಕರಿಗೆ ಮಗುವನ್ನು ನೋಡಿಕೊಳ್ಳಲು ಸಾಧ್ಯವಾಗದೆ ಮಗುವನ್ನು ಮಾರಾಟ ಮಾಡಲಾಗಿದೆಯೇ ಅಥವಾ ಇನ್ನಾವುದೇ ಕಾರಣಕ್ಕಾಗಿ ಮಗುವನ್ನು ಮಾರಾಟ ಮಾಡಲಾಗಿದೆಯೇ ಎಂಬ ಬಗ್ಗೆ ತನಿಖೆ ಕೇಂದ್ರೀಕರಿಸಿದೆ ಎಂದು ಅವರು ಹೇಳಿದರು. ಪೊಲೀಸರ ಪ್ರಕಾರ, ಗಿರಿಜಾ ಮತ್ತು ಆಕೆಯ ಪತಿ ಸೋಮಶೇಖರ್, ಸುಬ್ರಮಣಿ ಕಾಫಿ ಎಸ್ಟೇಟ್‌ನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ದಂಪತಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದು, ನ.13ರಂದು…

Read More

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಇವರ ವತಿಯಿಂದ ಪ್ರಭಾವತಿ ಹಾಗೂ ಉಡುಪಿ ವಿಶ್ವನಾಥ್ ಶೆಣೈ ಪ್ರಾಯೋಜಿತ ‘ವಿಶ್ವಪ್ರಭಾ ಪುರಸ್ಕಾರ – 2024 ‘ನ್ನು ಕನ್ನಡದ ಪ್ರಸಿದ್ಧ ಸಾಹಿತಿ ಜಯಂತ್ ಕಾಯ್ಕಿಣಿ ಅವರಿಗೆ ನೀಡಿ ಪುರಸ್ಕರಿಸಲಾಗುವುದು. ಈ ಪುರಸ್ಕಾರವು ಪ್ರಶಸ್ತಿ ಪತ್ರ , ಫಲಕ ಹಾಗೂ ಒಂದು ಲಕ್ಷ ರೂಪಾಯಿ ನಗದು ಒಳಗೊಂಡಿರುತ್ತದೆ.ಜನವರಿ ತಿಂಗಳ 24 ರಂದು ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ್ಣ ಮಂಟಪದಲ್ಲಿ ನಡೆಯುವ ಸಂಸ್ಕೃತಿ ಉತ್ಸವದಲ್ಲಿ ಪುರಸ್ಕಾರ ಪ್ರದಾನ ಮಾಡಲಾಗುವುದು.

Read More

ಉಡುಪಿ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ವೇಳೆ ರಿಕ್ಷಾ ಚಾಲಕನಿಗೆ ಹೃದಯಾಘಾತವಾಗಿದ್ದು, ನಿಯಂತ್ರಣ ತಪ್ಪಿದ ರಿಕ್ಷಾ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆ ಜನವರಿ 4ರಂದು ಅಜ್ಜರಕಾಡು ಸಮೀಪ ನಡೆದಿದೆ. ಹೃದಯಾಘಾತಕ್ಕೀಡಾದ ರಿಕ್ಷಾ ಚಾಲಕ ಕಾಡಬೆಟ್ಟು ನಿವಾಸಿ ಸುರೇಶ್ ಅಜ್ಜರಕಾಡು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಜ್ಜರಕಾಡು ಕಡೆಯಿಂದ ನಗರದ ಬಸ್ ನಿಲ್ದಾಣಕ್ಕೆ ರಿಕ್ಷಾದಲ್ಲಿ ಪ್ರಯಾಣಿಕರನ್ನು ಕರೆದು ಕೊಂಡು ಹೋಗುತ್ತಿದ್ದಾಗ ಚಾಲಕ ಹಠಾತ್ ಕುಸಿದು ಬಿದ್ದರೆನ್ನಲಾಗಿದೆ. ಇದರಿಂದ ನಿಯಂತ್ರಣ ತಪ್ಪಿದ ರಿಕ್ಷಾ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ಇಬ್ಬರು ಮಹಿಳಾ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Read More

ದೆಹಲಿಯಲ್ಲಿ ಪೊಲೀಸರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಓರ್ವ ಉಗ್ರನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ . ದೆಹಲಿಯಲ್ಲಿ ಕಾರ್ಯಾಚರಣೆ ನಡೆಸಿದ ದೆಹಲಿ ವಿಶೇಷ ಪೊಲೀಸ್ ಪಡೆ ಮೋಸ್ಟ್ ವಾಂಟೆಡ್ ಉಗ್ರ ಜಾವೇದ್ ಅಹ್ಮದ್ ಮಟ್ಟೂನನ್ನು ಬಂಧಿಸಿದೆ. ಈ ಸುದ್ದಿ ಈಗಷ್ಟೇ ಬ್ರೇಕ್ ಆಗಿದ್ದು, ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.

Read More