ಬೆಳ್ತಂಗಡಿ: ಶಾಲಾ ವಿದ್ಯಾರ್ಥಿಯೋರ್ವ ನೀರಿಗೆ ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಹಲೇಜಿ ಎಂಬಲ್ಲಿ ಶನಿವಾರ ಸಂಭವಿಸಿದೆ. ತುರ್ಕಳಿಕೆ ಕರೆಂಕಿತೋಡಿ ನಿವಾಸಿ ಮುಹಮ್ಮದ್ ಮುಸ್ತಾಫ ಎಂಬವರ ಪುತ್ರ ಮಹಮ್ಮದ್ ತಂಝೀರ್ (16) ಮೃತ ಬಾಲಕನಾಗಿದ್ದಾನೆ. ತಂಝೀರ್ ಪುತ್ತಿಲ ಸರಕಾರಿ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದು, ತನ್ನ ಶಾಲಾ ಶಿಕ್ಷಕರೋರ್ವರ ತಾಯಿಯ ಪುಣ್ಯ ತಿಥಿಯಲ್ಲಿ ಭಾಗವಹಿಸಲೆಂದು ಕರಾಯ ಗ್ರಾಮದ ಹಲೇಜಿಗೆ ಹೋಗಿದ್ದ. ಮಧ್ಯಾಹ್ನ ಊಟ ಮಾಡಿ ಹಿಂದಿರುಗುವ ವೇಳೆ, ಸನಿಹದಲ್ಲೇ ಹರಿಯುವ ತೋಡಿನ ನೀರಿಗೆ ಬಿದ್ದು ಕಣ್ಮರೆಯಾಗಿದ್ದ. ಜೊತೆಗಿದ್ದ ಸಹಪಾಠಿಗಳು ಹುಡುಕಾಟ ನಡೆಸಿ ವಿಫಲರಾದಾಗ, ಶಿಕ್ಷಕರ ಮನೆಗೆ ಮಾಹಿತಿ ನೀಡಿದ್ದು, ಶಿಕ್ಷಕರು ಮತ್ತವರ ಸಂಬಂಧಿಕರು ಬಾಲಕ ನೀರಿನಲ್ಲಿ ಮುಳುಗಿದ ಸ್ಥಳಕ್ಕೆ ಧುಮುಕಿ ನೀರಿನಾಳದಿಂದ ಆತನನ್ನು ಹೊರ ತೆಗೆದರಾದರೂ, ಆ ವೇಳೆಗೆ ಆತ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಕಳೆದ ಒಂದು ತಿಂಗಳ ಅಂತರದಲ್ಲಿ ಮಹಮ್ಮದ್ ಮುಸ್ತಾಫರ ತಾಯಿ, ತಮ್ಮನ ಪತ್ನಿ ಮೃತಪಟ್ಟಿದ್ದು, ಇದೀಗ ಅವರ ಪುತ್ರನೂ ಮೃತಪಟ್ಟಿದ್ದಾನೆ. ಘಟನೆಗೆ ಸಂಬಂಧಿಸಿ ಮೃತ…
Author: main-admin
ರಾಜಧಾನಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಆಟೋದಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಕಿರಾತಕರು ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಹೆಚ್ ಎಸ್ ಆರ್ ಲೇಔಟ್ ನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎನ್ನಲಾಗಿದ್ದು, ಸದ್ಯ ಯುವತಿಯನ್ನು ಹೆಬ್ಬಗೋಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೋರಮಂಗಲದ ಪಬ್ ಗೆ ಹೋಗಿದ್ದ ಯುವತಿ ಅಪಘಾತವಾಗಿದೆ. ಬಳಿಕ ಆಟೋದಲ್ಲಿ ಹೋಗುತ್ತಿದ್ದ ವೇಳೆ ಎರಡರಿಂದ ಮೂವರು ಕಾಮುಕರು ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ ಎಸ್ ಆರ್ ಲೇಔಟ್ ನಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಲಾಗಿದೆ.
ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಉಸ್ತಾದ್ ನನ್ನು ಕಾಸರಗೋಡಿನ ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ನಿವಾಸಿ ಇಬ್ರಾಹಿಂರ ಪುತ್ರ ಅಬ್ದುಲ್ ಕರೀಂ(40) ಬಂಧಿತ ಆರೋಪಿಯಾಗಿದ್ದಾನೆ. ಅಬ್ದುಲ್ ಕರೀಂ ಉಸ್ತಾದ್ ಆಗಿದ್ದು ಶನಿವಾರ ಈ ಘಟನೆ ನಡೆದಿದೆ. ಕುಂಬಳೆಯಿಂದ ಬದಿಯಡ್ಕ ಭಾಗಕ್ಕೆ ಬರುತ್ತಿದ್ದ ಖಾಸಗಿ ಬಸ್ಸು ಸೀತಾಂಗೋಳಿ ಸ್ಟಾಪ್ ದಾಟಿದ ಕೂಡಲೇ ಆರೋಪಿ ವಿದ್ಯಾರ್ಥಿನಿಗೆ ಕಿರುಕುಳ ನೀಡಲೆತ್ನಿಸಿದ್ದಾನೆ. ವಿದ್ಯಾರ್ಥಿನಿ ಪ್ರತಿಭಟಿಸಿದಾಗ ಇತರ ಪ್ರಯಾಣಿಕರು ಮದ್ಯ ಪ್ರವೇಶಿ ಆರೋಪಿಯನ್ನು ಹಿಡಿದು ಬದಿಯಡ್ಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಅಬ್ದುಲ್ ಕರೀಂ ನನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರಿಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಯ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಕಾರ್ಯದರ್ಶಿ ಅವಿನಾಶ್ ವಿ ರೈ ಒತ್ತಾಯಿಸಿದ್ದಾರೆ.
ಉಡುಪಿಯಲ್ಲಿ ಕಾರಿನ ಗ್ಲಾಸ್ ಮುಚ್ಚಿ ಮಲಗಿದ್ದ ಚಾಲಕ ಉಸಿರು ಗಟ್ಟಿ ಸಾವನ್ನಪ್ಪಿದ ಘಟನೆ ನಡೆದಿದೆ. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ರಾತ್ರಿ ಕಾರಿನಲ್ಲಿಯೇ ಮಲಗಿದ್ದ ಅವರು, ಬೆಳಗಾಗುವಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಹೌದು ಕಾರಿನಲ್ಲಿ ಉಸಿರುಗಟ್ಟಿ ಸಾವನ್ನಪ್ಪಿರುವ ವ್ಯಕ್ತಿಯನ್ನು ಚಿಕ್ಕಮಗಳೂರು ಮೂಲದ ಆನಂದ (37) ಎಂದು ತಿಳಿದುಬಂದಿದೆ. ರೋಗಿಯೊಬ್ಬರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ಕಾರಿನಲ್ಲಿ ಕರೆದುಕೊಂಡು ಬಂದಿದ್ದರು. ಬಳಿಕ ರೋಗಿಯನ್ನು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲು ಮಾಡಲಾಗಿತ್ತು. ನಂತರ ಮಣಿಪಾಲದಲ್ಲಿ ಉಳಿದುಕೊಳ್ಳಲು ಯಾವುದೇ ರೂಂ ಸಿಗದ ಕಾರಣ, ಮಣಿಪಾಲ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿ ಮಲಗಿದ್ದರು. ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದ ಹಿನ್ನಲೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ನಗರದ ಬಂದರಿನಲ್ಲಿ ಕಾರು ಹಾಗೂ ಅಕ್ಟೀವಾ ನಡುವೆ ನಡೆದ ಅಪಘಾತದಲ್ಲಿ ಶಾಲಾ ಶಿಕ್ಷಕಿಯೋರ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಕಸಬಾ ಬೆಂಗ್ರೆಯ ಖಾಸಗಿ ಶಾಲೆ ಶಿಕ್ಷಕಿ ಕೆ.ಪಿ.ಶಾಹೀದಾ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಶಾಹೀದಾ ಅವರು ತನ್ನ ಮನೆಯಿಂದ ಶಾಲೆಗೆ ತೆರಳುವಾಗ ಬಂದರ್‌ನಲ್ಲಿ ಈ ಅಪಘಾತ ನಡೆದಿತ್ತು. ಅಕ್ಟೀವಾ – ಕಾರು ನಡುವೆ ನಡೆದ ಅಪಘಾತದಲ್ಲಿ ಶಿಕ್ಷಕಿ ಶಾಹೀದಾ ಮೃತಪಟ್ಟಿದ್ದಾರೆ. ಮೂಲತಃ ಪುತ್ತೂರಿನ ಪರ್ಲಡ್ಕ ಸಮೀಪದ ಕುಂಜೂರು ನಿವಾಸಿಯಾಗಿದ್ದ ಪ್ರಸ್ತುತ ಬೆಂಗ್ರೆ ನಿವಾಸಿಯಾಗಿರುವ ಬಹುಃ ಕೆ.ಪಿ.ಇಸ್ಮಾಯಿಲ್ ಉಸ್ತಾದ್ ರವರ ಮಗಳು. ಉಳ್ಳಾಲ ಪೊಲೀಸ್ ಠಾಣೆಯ ASI ಮುಹಮ್ಮದ್ ಅವರ ಪತ್ನಿಯಾಗಿರುವ ಶಾಹಿದಾ ಒಬ್ಬ ಪುತ್ರ ಮತ್ತು ಇಬ್ಬರು ಹೆಣ್ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಇವರು ಸಮಾಜ ಸೇವಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಶಾಲೆಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಸೇರಿಸುವುದು, ಕಲಿಕೆಯಲ್ಲಿ ತೀರಾ ಹಿಂದುಳಿದಿದ್ದ ಮಕ್ಕಳನ್ನು ಗುರುತಿಸಿ ಅವರಿಗೆ ವಿಶೇಷ ತರಬೇತಿ ನೀಡುವುದು, ಆರ್ಥಿಕವಾಗಿ ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವುದು, ವಿದ್ಯಾರ್ಥಿವೇತನ ದೊರಕಿಸಿಕೊಡುವುದು…
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗಿದ್ದು, ರಾಜ್ಯಪಾಲಥಾವರ್ಚಂದ್ಗೆಹ್ಲೋಟ್ಮುಖ್ಯಮಂತ್ರಿಸಿದ್ದರಾಮಯ್ಯವಿರುದ್ಧಪ್ರಾಸಿಕ್ಯೂಷನ್ಗೆಅನುಮತಿನೀಡಿದ್ದಾರೆ. ಇಂದು ರಾಜ್ಯಪಾಲ ಥಾವರ್ಚಂದ್ಗೆಹ್ಲೋಟ್ ಮೈಸೂರುನಗರಾಭಿವೃದ್ಧಿಪ್ರಾಧಿಕಾರ – ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ . ಈ ಮೂಲಕ ಮುಡಾ ಅಕ್ರಮ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಚಾರಣೆ ನಡೆಸಿ ತನಿಖೆ ನಡೆಸಬಹುದು ಎಂದು ರಾಜ್ಯಪಾಲರು ಅನುಮತಿ ನೀಡಿದ್ದಾರೆ . ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಾಹಂನೀಡಿದ್ದದೂರಿಗೆಸಂಬಂಧಿಸಿದಂತೆಸಿಎಂ ಸಿದ್ದರಾಮಯ್ಯ ವಿರುದ್ಧಪ್ರಾಸಿಕ್ಯೂಷನ್ಗೆರಾಜ್ಯಪಾಲರುಅನುಮತಿನೀಡಿದ್ದಾರೆ.
ಮಣಿಪಾಲ: ಕಾರಿನಲ್ಲೇ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ. ಚಿಕ್ಕಮಗಳೂರು ಮೂಲದ ಆನಂದ (37) ಮೃತಪಟ್ಟ ಚಾಲಕ. ಇವರು ರೋಗಿಯೊಬ್ಬರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿದ ಕಾರಿನಲ್ಲಿ ರಾತ್ರಿ ಮಲಗಿಕೊಂಡಿದ್ದರು. ಕಾರಿನ ಗ್ಲಾಸನ್ನು ಮುಚ್ಚಿಕೊಂಡು ಮಲಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಮೂಡುಬಿದಿರೆ: ಸಾರ್ವಜನಿಕ ಶಾಂತಿ ಭಂಗ ಮತ್ತು ಪೊಲೀಸ್ ಕರ್ತವ್ಯಕ್ಕೆ ಅಡ್ಡಿ ಮಾಡಿದ ಹಿನ್ನೆಲೆಯಲ್ಲಿ ಮೂಡುಬಿದಿರೆ ಪೊಲೀಸರು ಮೂರು ಮಂದಿಯನ್ನು ವಶಕ್ಕೆ ಪಡೆದು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಬಂಧಿತರನ್ನು ಮೂಡುಬಿದಿರೆ ಒಂಟಿಕಟ್ಟೆ ನಿವಾಸಿಗಳಾದ ಮೂಡುಬಿದಿರೆ ಮುಡಾ ಸದಸ್ಯ ಪ್ರಕಾಶ್, ಅಬ್ದುಲ್ ಸತ್ತಾರ್ ಮತ್ತು ವಿಜೇತ್ ಎಂದು ತಿಳಿದು ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಪಿಎಸ್ ಐ ಕೃಷ್ಣಪ್ಪ ಎಂಬವರು ಬಸ್ ನಿಲ್ದಾಣದ ಬಳಿಯ ರಸ್ತೆಯಲ್ಲಿ ವಾಹನಗಳ ಪರಿಶೀಲನೆ ನಡೆಸುತ್ತಿದ್ದ ವೇಳೆ ಹೆಲ್ಮೆಟ್ ಧರಿಸದೇ ತ್ರಿಬಲ್ ರೈಡ್‌ನಲ್ಲಿ ದ್ವಿಚಕ್ರ ಚಲಾಯಿಸುತ್ತಿದ್ದ ಸವಾರರಿಗೆ ಪಿಎಸ್‌ಐ ಬೈದಿದ್ದಾರೆ ಎಂದು ಆರೋಪಿಸಿ ಮೂಡುಬಿದಿರೆ ಮುಡಾ ಸದಸ್ಯ ಪ್ರಕಾಶ್, ಅಬ್ದುಲ್ ಸತ್ತಾರ್ ಮತ್ತು ವಿಜೇತ್ ಎಂಬವರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿದ್ದರು. ಈ ವೇಳೆ ಮೂವರೂ ಪಿಎಸ್‌ಐ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಮೂವರನ್ನು ಠಾಣೆಗೆ ಕರೆದುಕೊಂಡು ಹೋಗಿ ನಂತರ ಪ್ರಕಾಶ್ ಮತ್ತು ವಿಜೇತ್‌ನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಆಗ ಅವರು…
ಮಂಗಳೂರು : ಕೆತ್ತಿಕಲ್ಲು ಭೂಕುಸಿತ ಪ್ರದೇಶದಲ್ಲಿ ಅನಧಿಕೃತವಾಗಿ ಮಣ್ಣು ತೆಗೆದಿರುವ ಭೂಮಾಲಕರು ಮತ್ತು ಎನ್‌ಎಚ್‌ಐನವರು ಅನುಮತಿಸಿದ ಡಿಬಿಎಲ್ ಕಂಪೆನಿಯವರ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಹಾಗೂ ಎಂಎಂಡಿಆರ್ ಕಾಯಿದೆ-1957ರಡಿ ಪ್ರಕರಣ ದಾಖಲಿಸಲಾಗಿದೆ. ಸುರಕ್ಷತೆಗೆ ಅಪಾಯವಿರುವುದರಿಂದ ವೆಟ್‌ವೆಲ್‌ನ ಮನಪಾದಿಂದಲೂ ಕ್ರಿಮಿನಲ್ ಕ್ರಮಕ್ಕಾಗಿ ಪೊಲೀಸ್ ತನಿಖೆಯನ್ನು ನಡೆಸಲು ಪ್ರಕರಣ ದಾಖಲಿಸಲಾಗಿದೆ. ಮಂಗಳೂರು ಸೆಂಟ್ರಲ್ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರನ್ನು ತನಿಖಾಧಿಕಾರಿಯನ್ನಾಗಿ ಪೊಲೀಸ್ ಆಯುಕ್ತರು ನೇಮಿಸಿದ್ದಾರೆ. ಜಿಯೋಲಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ಸಲಹೆಯಂತೆ, ಘಟನಾ ಸ್ಥಳದಲ್ಲಿ ನೀರಿನ ಸಂಗ್ರಹ ಆಗದಂತೆ, ಚರಂಡಿ ಮಾಡಿ ಕಾಂಕ್ರೀಟ್ ಬಾಕ್ಸ್ ಬಳಸಿ, ನೀರು ಮಣ್ಣಿನ ಒಳಗೆ ನುಗ್ಗದೆ, ಹರಿದು ಹೋಗುವ ರೀತಿಯಲ್ಲಿ ಈಗಾಗಲೆ ವ್ಯವಸ್ಥೆ ಮಾಡಲಾಗಿದೆ. 2018 ರಿಂದ 2022 ರ ಅವಧಿಯಲ್ಲಿ ಗರಿಷ್ಠ ಮಣ್ಣು ಅಗೆಯುವಿಕೆ ನಡೆದಿರುವುದಾಗಿ ಎನ್ ಎಚ್ ಎಐ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಹಾಗೂ ಜಿ ಎಸ್ ಐ ಉಪಗ್ರಹದ ಛಾಯಚಿತ್ರಗಳ ಮೂಲಕ…
ಕನ್ನಡ ಚಿತ್ರರಂಗದ ದಶಕಗಳ ರಾಷ್ಟ್ರಪ್ರಶಸ್ತಿ ಬರವನ್ನು ನಟ ರಿಷಬ್ ಶೆಟ್ಟಿ ನೀಗಿಸಿದ್ದಾರೆ. ರಿಷಬ್ ಶೆಟ್ಟಿ ಅವರ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪ್ರಾಪ್ತಿಯಾಗಿದೆ. ‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಯನ್ನು ಪರಿಗಣಿಸಿ ಅವರಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕನ್ನಡ ಸಿನಿಮಾ ನಟರೊಬ್ಬರಿಗೆ ರಾಷ್ಟ್ರಪ್ರಶಸ್ತಿ ದೊರೆತು ದಶಕಗಳೇ ಆಗಿಬಿಟ್ಟಿದ್ದವು. ಆ ಬರವನ್ನು ಈಗ ನೀಗಿದ್ದು, ನಟ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿ ದೊರೆತಿದೆ. ‘ಕಾಂತಾರ’ ಸಿನಿಮಾದ ಅತ್ಯುತ್ತಮ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ದೊರೆತಿದೆ. ಈ ವರ್ಷ ರಿಷಬ್ ಶೆಟ್ಟಿಗೆ ಮಲಯಾಳಂ ನಟ ಮಮ್ಮುಟಿ, ಹಿಂದಿಯ ವಿಕ್ರಾಂತ್ ಮೆಸ್ಸಿ ಇನ್ನೂ ಹಲವು ನಟರಿಂದ ಸ್ಪರ್ಧೆ ಇತ್ತು. ಆದರೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಒಲಿದಿದೆ. ದಶಕಗಳ ಹಿಂದೆ ನಟ ಕಮಲ್ ಹಾಸನ್ ಸಹೋದರ ಚಾರುಹಾಸನ್ ಅವರಿಗೆ ಕನ್ನಡದ ‘ತಬರನ ಕತೆ’ ಸಿನಿಮಾದ ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ದೊರೆತಿತ್ತು. ಅದಾದ ಬಳಿಕ ‘ನಾನು ಅವನಲ್ಲ ಅವಳು’ ಸಿನಿಮಾದ ಅತ್ಯುತ್ತಮ ನಟನೆಗೆ ಸಂಚಾರಿ ವಿಜಯ್ ಅವರಿಗೆ ಅತ್ಯುತ್ತಮ ನಟ…