Author: main-admin

ಕಡಬ : ಸವಣೂರು ಗ್ರಾಮದ ಮಾಂತೂರು ಮುಂಡತಡ್ಕ ಎಂಬಲ್ಲಿ ತೋಟವೊಂದರಲ್ಲಿ ಅಕ್ರಮವಾಗಿ ಜಾನುವಾರು ಹತ್ಯೆ ಮಾಡುತ್ತಿದ್ದ ಅಡ್ಡೆಗೆ ಬೆಳ್ಳಾರೆ ಪೊಲೀಸರು ದಿಢೀರ್ ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಮೇ 29ರ ಶುಕ್ರವಾರ ಸಂಜೆ ನಡೆದಿದೆ. ಬೆಳ್ಳಾರೆ ಪೊಲೀಸ್ ಠಾಣೆಯ ಉಪ ನಿರೀಕ್ಷಕರಾದ (SI) ಸಂತೋಷ್ ಬಿ.ಪಿ. ಅವರಿಗೆ ಕಡಬ ಸವಣೂರು ಗ್ರಾಮದ ಮಾಂತೂರು ಮುಂಡತಡ್ಕ ಪರಿಸರದಲ್ಲಿ ಅಕ್ರಮವಾಗಿ ಗೋವಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಎಸ್‌ಐ ಅವರು ತಮ್ಮ ಸಿಬ್ಬಂದಿಗಳೊಂದಿಗೆ ನಿಗದಿಪಡಿಸಿದ ಸ್ಥಳಕ್ಕೆ ತೆರಳಿ ಜಂಟಿ ಕಾರ್ಯಾಚರಣೆ ನಡೆಸಿದರು. ಈ ವೇಳೆ ತೋಟವೊಂದರಲ್ಲಿ ಜಾನುವಾರನ್ನು ವಧೆ ಮಾಡಿ ಮಾಂಸ ಮಾಡುತ್ತಿರುವುದು ಪತ್ತೆಯಾಗಿದೆ. ಪೊಲೀಸರು ಸ್ಥಳಕ್ಕೆ ದಾಳಿ ಮಾಡಿದ ಸಂದರ್ಭದಲ್ಲಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬಂಧಿತರನ್ನು ಕೆ. ಅಬ್ದುಲ್ ರಫೀಕ್ (37 ವರ್ಷ), ಅದ್ರಾಮ ಮಂತೂರು (41 ವರ್ಷ) ಹಾಗೂ ಅಬ್ದುಲ್ ಖಾದರ್ ಪಣೆಮಜಲು (57 ವರ್ಷ) ಎಂದು ಗುರುತಿಸಲಾಗಿದೆ. ಆರೋಪಿಗಳು ಯಾವುದೇ…

Read More

ಫಿರೋಜಾಬಾದ್: ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಶಿಕೋಹಾಬಾದ್‌ನಲ್ಲಿ ಇಡೀ ದೇಶವೇ ತಲೆತಗ್ಗಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಪ್ರೇಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಒಂದೂವರೆ ವರ್ಷದ ಅಮಾಯಕ ಮಗುವನ್ನು ಬೀದಿಯಲ್ಲಿ ಕ್ರೂರವಾಗಿ ಥಳಿಸಿ ಕೊಂದ ದೃಶ್ಯ ಸಿಸಿಟಿವಿಯಲ್ಲಿ ವೈರಲ್ ಆಗಿ ತೀವ್ರ ಆಕ್ರೋಶ ಮೂಡಿಸಿತ್ತು. ಇದೀಗ ಕೊಲೆಯ ಪ್ರಮುಖ ಆರೋಪಿಯನ್ನು ಪೊಲೀಸರು ಭೀಕರ ಎನ್‌ಕೌಂಟರ್ ನಡೆಸಿ ಬಂಧಿಸಿದ್ದಾರೆ. ಮುಖಾಮುಖಿ ಗುಂಡಿನ ಚಕಮಕಿಯಲ್ಲಿ ಆರೋಪಿಯ ಎರಡೂ ಕಾಲುಗಳಿಗೆ ಗುಂಡು ತಗುಲಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಂಧಿತ ಆರೋಪಿಯನ್ನು ಶಿಕೋಹಾಬಾದ್ ಪ್ರದೇಶದಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದ ವಿರಾಜ್ ಅಲಿಯಾಸ್ ಜಿತೇಂದ್ರ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಶುಕ್ರವಾರ ಮಗುವಿನ ತಾಯಿ ತನ್ನ ಸಂಬಂಧಿಕರೊಬ್ಬರನ್ನು ಭೇಟಿ ಮಾಡಲು ಹೋಗಿದ್ದ ಸಂದರ್ಭವನ್ನು ಬಳಸಿಕೊಂಡ ಆರೋಪಿ, ಮಗುವಿಗೆ ಚಾಕಲೇಟ್ ಕೊಡುವ ನೆಪದಲ್ಲಿ ತನ್ನೊಂದಿಗೆ ಕರೆದುಕೊಂಡು ಹೋಗಿದ್ದಾನೆ. ನಂತರ ಅತ್ಯಂತ ಕ್ರೂರವಾಗಿ ಮಗುವನ್ನು ರಸ್ತೆಯ ಮೇಲೆ ಎಸೆದು, ಥಳಿಸಿದ್ದಾನೆ. ತೀವ್ರವಾಗಿ ಗಾಯಗೊಂಡಿದ್ದ ಮಗುವನ್ನು ಕುಟುಂಬಸ್ಥರು ತಕ್ಷಣ ಆಸ್ಪತ್ರೆಗೆ ಸಾಗಿಸಿದರಾದರೂ, ವೈದ್ಯರು…

Read More

ಬೆಂಗಳೂರು: ಮಟನ್ ಎಂದು ಹೇಳಿ ಗ್ರಾಹಕರಿಗೆ ಗೋಮಾಂಸ (ಬೀಫ್) ನೀಡುತ್ತಿದ್ದ ಆರೋಪದ ಮೇಲೆ ಪೊಲೀಸರು ಇಬ್ಬರು ಹೋಟೆಲ್​​ ಮಾಲೀಕರನ್ನು ಬಂಧಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬಂಧಿತರನ್ನು ಬ್ಯಾರತಿ ಗ್ರಾಮದ ಜಿಜೂ ಅಲೆಕ್ಸಾಂಡರ್ ಹಾಗೂ ಟಿಪ್ಪಣ್ಣ ಲೇಔಟ್‌ನ ಶಿಬು ಕೆ.ಬಿ. ಎಂದು ಗುರುತಿಸಲಾಗಿದೆ. ಕೇರಳ ಮೂಲದವರಾದ ಇವರು ಭೈರತಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಆರೋಪಿಗಳು ಬೊಮ್ಮನಹಳ್ಳಿಯಲ್ಲಿರುವ ಐಸಿರಿ ಹಬ್ ಕಾಯಲೋರಂ ರೆಸ್ಟೋರೆಂಟ್‌ನ ಮಾಲೀಕರು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ಕಾಯಲೋರಂ ರೆಸ್ಟೋರೆಂಟ್‌ನಲ್ಲಿ ಮಟನ್ ಎಂದು ಹೇಳಿ ಬೀಫ್ ನೀಡಲಾಗುತ್ತಿದೆ ಎಂಬ ಆರೋಪದ ಕುರಿತು ಗ್ರಾಹಕರಿಂದ ಹಲವು ದೂರುಗಳು ಬಂದಿದ್ದವು. ರೆಸ್ಟೋರೆಂಟ್‌ನ ಮೆನು ಕಾರ್ಡ್‌ನಲ್ಲಿ ಎಲ್ಲಿಯೂ ಬೀಫ್ ಉಲ್ಲೇಖಿಸಿರಲಿಲ್ಲ. ಆದರೆ ಮಟನ್ ಖಾದ್ಯಗಳನ್ನು ಆರ್ಡರ್ ಮಾಡಿದಾಗ ಗೋಮಾಂಸವನ್ನು ನೀಡಲಾಗುತ್ತಿದೆ ಎಂದು ಅನೇಕರು ದೂರಿದ್ದರು. ಈ ದೂರುಗಳ ಆಧಾರದ ಮೇಲೆ ಸಿವಿಲ್ ಉಡುಪಿನಲ್ಲಿದ್ದ ಪೊಲೀಸ್ ಅಧಿಕಾರಿಯನ್ನು ಗ್ರಾಹಕರ ಸೋಗಿನಲ್ಲಿ ಕಳುಹಿಸಲಾಗಿತ್ತು. ಅವರು ಖರೀದಿಸಿ ತಂದಿದ್ದ ಮಟನ್​​ ಖಾದ್ಯಗಳನ್ನು ಪರಿಶೀಲಿಸಿದಾಗ ಅದು ಮಟನ್ ಅಲ್ಲ, ಗೋಮಾಂಸ…

Read More

ರಾಯಚೂರು : ರಾಜ್ಯದಲ್ಲಿ ಜಲ ದುರಂತಗಳ ಸರಣಿ ಮುಂದುವರಿದಿದ್ದು, ಮಂತ್ರಾಲಯ ಸಮೀಪದ ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐವರು ನೀರುಪಾಲಾದ ಹೃದಯವಿದ್ರಾವಕ ಘಟನೆ ನಡೆದಿದೆ. ಘಟನೆಯಲ್ಲಿ ಐವರು ಮೃತಪಟ್ಟಿದ್ದು, ಮತ್ತೋರ್ವ ಯುವತಿ ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೃತರನ್ನು ಹೈದರಾಬಾದ್ ಮೂಲದ ಯುವನ ಚಂದ್ರ (5), ಸತೀಶ್ (35), ಮಂತ್ರಾಲಯ ಗ್ರಾಮದ ರಾಘವೇಂದ್ರ (25), ಧನುಷ್ (23) ಹಾಗೂ ಉರವಕೊಂಡದ ಸಂಧ್ಯಾ (22) ಎಂದು ಗುರುತಿಸಲಾಗಿದೆ. ಅಪರ್ಣಾ ಎಂಬ ಯುವತಿ ಕೊನೆಯ ಕ್ಷಣದಲ್ಲಿ ರಕ್ಷಿಸಲ್ಪಟ್ಟಿದ್ದಾರೆ. ಮಾಹಿತಿಯ ಪ್ರಕಾರ, ಸಂಬಂಧಿಕರ ಮನೆಯಲ್ಲಿ ನಡೆದ ಸತ್ಯನಾರಾಯಣ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದಿದ್ದವರು ಪೂಜೆ ಮುಗಿದ ಬಳಿಕ ತುಂಗಭದ್ರಾ ನದಿಗೆ ಈಜಲು ತೆರಳಿದ್ದರು. ನದಿಯ ಆಳ ಹಾಗೂ ನೀರಿನ ಹರಿವಿನ ತೀವ್ರತೆಯ ಬಗ್ಗೆ ಅರಿವಿಲ್ಲದೆ ನೀರಿಗೆ ಇಳಿದ ಪರಿಣಾಮ ದುರಂತ ಸಂಭವಿಸಿದೆ ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ರಾಘವೇಂದ್ರ ಮತ್ತು ಸಂಧ್ಯಾ ಅವರ ಮೃತದೇಹಗಳು ಪತ್ತೆಯಾಗಿದ್ದು, ಉಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಮೀನುಗಾರರು ಹಾಗೂ ರಕ್ಷಣಾ ತಂಡಗಳು ನದಿಯಲ್ಲಿ ನಿರಂತರ…

Read More

ಮಂಗಳೂರು: ಕರಾವಳಿ ಜನತೆಯ ಬಹುದಿನಗಳ ಕನಸಾದ ಬೆಂಗಳೂರು-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರ ಕೊನೆಗೂ ಆರಂಭವಾಗುತ್ತಿದ್ದು, ಜೂನ್ 1 ರಿಂದ ಪ್ರಾಯೋಗಿಕ ಸಂಚಾರ ಆರಂಭವಾಗಲಿದೆ. ಪ್ರಸ್ತುತ ಶಿರಾಡಿ ಘಾಟ್ ರಸ್ತೆಯ ಮೂಲಕ ರಾಜ್ಯ ರಾಜಧಾನಿ ಮತ್ತು ಮಂಗಳೂರಿಗೆ ಪ್ರಯಾಣಿಸಲು ಬೇಕಾಗುವ 8 ರಿಂದ 10 ಗಂಟೆಗಳ ಸಮಯವನ್ನು, ಈ ವಂದೇ ಭಾರತ್ ರೈಲಿನಿಂದ ಕೇವಲ 5 ಗಂಟೆಗಳಿಗೆ ಇಳಿಕೆಯಾಗಲಿದೆ.ಸ್ಪೀಡ್ ಪ್ರಾಯೋಗಿಕ ಕಾರ್ಯಾಚರಣೆಯನ್ನು ನಡೆಸಲಿದೆ. ಸುಮಾರು ಒಂದು ವಾರದ ಅವಧಿಯಲ್ಲಿ ಲೋಡ್ ಟ್ರಯಲ್ಸ್ ಮತ್ತು ತಾಂತ್ರಿಕ ಮೌಲ್ಯಮಾಪನಗಳು ನಡೆಯಲಿದ್ದು, ಆ ಬಳಿಕ ವಾಣಿಜ್ಯ ಕಾರ್ಯಾಚರಣೆಗೆ ಅಂತಿಮ ಅನುಮತಿ ಸಿಗುವ ನಿರೀಕ್ಷೆಯಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಮೇ 23 ರಂದು ಮಂಗಳೂರಿಗೆ ಭೇಟಿ ನೀಡಿದ್ದ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು, ‘ನಾವು ಜೂನ್‌ನಲ್ಲಿ ವಂದೇ ಭಾರತ್ ರೈಲು ಕಾರ್ಯಾಚರಣೆ ಆರಂಭಿಸುತ್ತೇವೆ’ ಎಂದು ಹೇಳಿಕೆ ನೀಡಿದ್ದರು. ಇದೀಗ ಮೈಸೂರು ವಿಭಾಗದ ಡಿಆರ್‌ಎಂ ಮುದಿತ್ ಮಿತ್ತಲ್ ಅವರೂ ಸಹ…

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ವರ್ಷಗಳಿಂದ ಗೊಂದಲದ ಗೂಡಾಗಿದ್ದ ಗನ್ ಲೈಸೆನ್ಸ್ ನವೀಕರಣ ಪ್ರಕ್ರಿಯೆಗೆ ಕೊನೆಗೂ ಡಿಜಿಟಲ್ ರೂಪ ನೀಡಲಾಗುತ್ತಿದ್ದು, ಜೂನ್ 1 ರಿಂದ ಹೊಸ ಆನ್‌ಲೈನ್ ಟ್ರ‍್ಯಾಕಿಂಗ್ ವ್ಯವಸ್ಥೆಯನ್ನು ಪರಿಚಯಿಸಲಾಗುತ್ತಿದೆ. ಈ ಹೊಸ ವ್ಯವಸ್ಥೆಯು ಹೊಸ ಲೈಸೆನ್ಸ್ ಅರ್ಜಿಗಳು ಹಾಗೂ ನವೀಕರಣಗಳ ಸ್ವೀಕಾರ, ಪರಿಶೀಲನೆ ಮತ್ತು ಟ್ರ‍್ಯಾಕಿಂಗ್ ಪ್ರಕ್ರಿಯೆಯನ್ನು ಹೆಚ್ಚು ಸುಲಭ ಹಾಗೂ ಪಾರದರ್ಶಕಗೊಳಿಸಲಿದೆ. ಸುಮಾರು 15 ರಿಂದ 20 ದಿನಗಳ ಕಾಲ ನಡೆಸಲಾದ ಲೋಡ್ ಟೆಸ್ಟಿಂಗ್ ಪ್ರಕ್ರಿಯೆಯ ನಂತರ ಆನ್‌ಲೈನ್ ವ್ಯವಸ್ಥೆ ಸಂಪೂರ್ಣವಾಗಿ ಸಿದ್ಧಗೊಂಡಿದೆ. ಹೊಸ ವ್ಯವಸ್ಥೆಯಡಿ, ಗನ್ ಲೈಸೆನ್ಸ್ ಮತ್ತು ನವೀಕರಣದ ಅರ್ಜಿಗಳನ್ನು ೬೦ ದಿನಗಳ ಒಳಗಾಗಿ ಪ್ರಕ್ರಿಯೆಗೊಳಿಸಿ ವಿಲೇವಾರಿ ಮಾಡಲಾಗುತ್ತದೆ.ಈ ಪೋರ್ಟಲ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಅವರಿಗೆ ಪ್ರತ್ಯೇಕ ಲಾಗಿನ್ ಇರಲಿದೆ. ಇದರ ಮೂಲಕ ಅಧಿಕಾರಿಗಳು ಒಟ್ಟು ಸ್ವೀಕೃತವಾದ ಅರ್ಜಿಗಳ ಸಂಖ್ಯೆ ಮತ್ತು ಯಾವುದೇ ಅರ್ಜಿ ಯಾವ ಹಂತದಲ್ಲಿ ಬಾಕಿ ಉಳಿದಿದೆ ಎಂಬುದನ್ನು ಸುಲಭವಾಗಿ ಪತ್ತೆಹಚ್ಚಬಹುದು.ಜಿಲ್ಲೆಯಲ್ಲಿ ಇದುವರೆಗೆ…

Read More

ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಕ್ಲಿಕ್ಕಿಸುತ್ತಿದ್ದ ಅಮಾನವೀಯ ಘಟನೆ ನಡೆದಿದ್ದು, ಈ ಘಟನೆಗೆ ರಾಜ್ಯ ಮಹಿಳಾ ಆಯೋಗ ಘಟನೆ ಸಂಬಂಧಿಸಿದಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ವರದಿ ನೀಡುವಂತೆ ಆರೋಗ್ಯ ಇಲಾಖೆಗೆ ಕೇಳಿದೆ. ಬೀದರ್‌ ಜಿಲ್ಲೆಯ ಬ್ರಿಮ್ಸ್‌ ಆಸ್ಪತ್ರೆಯ ಶವಾಗಾರದಲ್ಲಿ ಅಟೆಂಡರ್‌ ಮುನೀರ್‌ ಅಹಮದ್‌ ಎಂಬಾತ ಸತ್ತ ಮಹಿಳೆಯರ ಬೆತ್ತಲೆ ಫೋಟೋಗಳನ್ನ ಶೂಟ್‌ ಮಾಡಿ ವಿಕೃತಿ ಮೆರೆದಿರುವ ಅಮಾನುಷ ಕೃತ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವರದಿಯಾಗಿದೆ. ಈ ಪ್ರಕರಣದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ ಮುನೀರ್‌ ಅಹಮದ್‌ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ವರದಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿದೆ ಎಂದು ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬ್ರಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಸತ್ತ ಮಹಿಳೆಯರ ಬೆತ್ತಲೆ ಫೋಟೋ ಶೂಟ್ ಮಾಡಿ ವಿಕೃತಿ ಮೆರೆದಿದ್ದಾನೆ. ಶವಾಗಾರ ಕೋಣೆಯ ಅಟೆಂಡರ್ ಮುನೀರ್ ಅಹ್ಮದ್ ಎಂಬಾತನಿಂದ ಈ ಹೀನ ಕೃತ್ಯವಾಗಿದೆ. ಪಿಎಂಇ ಮಾಡುವ…

Read More

ಮಂಗಳೂರು: ಮುಡಿಪುವಿನಲ್ಲಿ ತನ್ನ ಕೆಲಸದ ಸ್ಥಳದಿಂದ ಹೊರಟ ಬಳಿಕ ನಾಪತ್ತೆಯಾಗಿರುವ 23 ವರ್ಷದ ವ್ಯಕ್ತಿಯ ಬಗ್ಗೆ ಮಾಹಿತಿ ಕೋರಿ ಕೊಣಾಜೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪೀರಪ್ಪ ಸಲ್ಲಿಸಿರುವ ದೂರಿನ ಪ್ರಕಾರ, ಅವರ ಕಿರಿಯ ಸಹೋದರ ಸುರೇಶ್ ಮಂಗಳೂರಿನ ಮುಡಿಪುವಿನಲ್ಲಿ ಶ್ರೀ ಶುಭ ಸೇಲ್ಸ್ ವಾಟರ್ ಸಪ್ಲೈನಲ್ಲಿ ನೀರು ಶುದ್ಧೀಕರಣ ಕೆಲಸದಲ್ಲಿ ಕೆಲಸ ಮಾಡುತ್ತಿದ್ದರು. ಮೇ 16 ರ ಸಂಜೆ, ಸುರೇಶ್ ತನ್ನ ಸಹೋದ್ಯೋಗಿ ಫಕೀರಪ್ಪ ಅವರಿಗೆ ತನ್ನ ಊರಿಗೆ ಹೋಗುತ್ತಿರುವುದಾಗಿ ತಿಳಿಸಿದ್ದರು.ಮರುದಿನ, ಮೇ 17 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ, ಸುರೇಶ್ ಫೋನ್ ಮಾಡಿ ವಿಜಯಪುರ ತಲುಪಿರುವುದಾಗಿ ತಿಳಿಸಿದರು. ಆದರೆ, ನಂತರ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು, ಮತ್ತು ಅವರು ಮನೆಗೆ ಹಿಂತಿರುಗಲಿಲ್ಲ ಅಥವಾ ಫೋನ್ ಮೂಲಕವೂ ಸಂಪರ್ಕಕ್ಕೆ ಸಿಗಲಿಲ್ಲ.ಕುಟುಂಬ ಸದಸ್ಯರು ಮತ್ತು ಸಂಬಂಧಿಕರು ವ್ಯಾಪಕವಾಗಿ ಹುಡುಕಾಡಿದರೂ ಸುರೇಶ್ ಇದುವರೆಗೆ ಪತ್ತೆಯಾಗಿಲ್ಲ. ದೂರಿನ ಆಧಾರದ ಮೇಲೆ ಕೊಣಾಜೆ ಪೊಲೀಸರು ಕೊಣಾಜೆ ಪೊಲೀಸ್ ಠಾಣೆ ಅಪರಾಧ ಸಂಖ್ಯೆ 59/2026 ರ ಅಡಿಯಲ್ಲಿ…

Read More

ಪರ್ಭಾನಿ: ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯ ಮನ್ವತ್ ಪಟ್ಟಣದ ಬಳಿ ಶುಕ್ರವಾರ ರಾತ್ರಿ ಪರ್ಭಾನಿಯಿಂದ ಪುಣೆಗೆ ಹೋಗುತ್ತಿದ್ದ ಖಾಸಗಿ ಬಸ್ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ನಾಲ್ವರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೋಟಾರ್ ಸೈಕಲ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪರ್ಭಾನಿ-ಪತ್ರಿ ಹೆದ್ದಾರಿಯಲ್ಲಿ ರಾಹುಲ್ ಗಿನ್ನಿಂಗ್ ಬಳಿಯ ಅಂಧರ್ವಾಡ್ ಮಾರುತಿ ದೇವಸ್ಥಾನ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಖಾಸಗಿ ಬಸ್ ಪುಣೆ ಕಡೆಗೆ ಪ್ರಯಾಣಿಸುತ್ತಿದ್ದಾಗ, ಎದುರುಗಡೆಯಿಂದ ಬರುತ್ತಿದ್ದ ಬೈಕ್​ಗೆ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಡಿಕ್ಕಿಯು ಆ ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿತ್ತು, ಜೋರಾದ ಡಿಕ್ಕಿ ಶಬ್ದ ಕೇಳಿದ ನಂತರ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಧಾವಿಸಿದರು. ಡಿಕ್ಕಿಯ ರಭಸಕ್ಕೆ ಸವಾರರು ಬೈಕ್​ನಿಂದ ಕೆಳಗೆ ಬಿದ್ದಿದ್ದರು, ಮಾರಣಾಂತಿಕ ಗಾಯಗಳಾಗಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Read More

ಬೆಂಗಳೂರು: ಮಳೆಗೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಜನರು ಸಾವನಪ್ಪಿದ ಬೆನ್ನಲ್ಲೇ, ಇದೀಗ ನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಇಂದು ಸುರಿದ ಭಾರೀ ಮಳೆಗೆ ಕ್ಲಬ್‌ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವನ್ನಪ್ಪಿರುವಂತಹ ಘಟನೆ ವಿಜಯನಗರದಲ್ಲಿ ನಡೆದಿದೆ.ಗಂಗೊಂಡನಹಳ್ಳಿಯ ನಿವಾಸಿ ಶಿವಬೋರಯ್ಯ(56) ಮೃತ ಆಟೋ ಚಾಲಕ. ಸದ್ಯ ಶಿವಬೋರಯ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಬೆಂಗಳೂರಿನಲ್ಲಿ ಇಂದು ಸಂಜೆ ಮತ್ತೆ ಎಂಟ್ರಿಕೊಟ್ಟಿದ್ದ ಮಳೆರಾಯ ರಾಜಧಾನಿಯ ದಶದಿಕ್ಕಿನಲ್ಲೂ ಅಬ್ಬರಿಸಿ ಬೊಬ್ಬಿರಿದಿದ್ದ. ಅಂಡರ್​ಪಾಸ್ ಜಲಾವೃತ ಸೇರಿದಂತೆ ಸಾಲು ಸಾಲು ಮರಗಳು ಧರೆಗುರುಳಿದು ಅವಾಂತರಗಳು ಸಂಭವಿಸಿವೆ. ಈ ಮಧ್ಯೆ ಬಲಿ ಕೂಡ ಪಡೆದಿದೆ. ವಿಜಯನಗರ ಕ್ಲಬ್‌ ಕಾಂಪೌಂಡ್ ಪಕ್ಕದಲ್ಲೇ ನಿಲ್ಲಿಸಿದ್ದ ಆಟೋ ಮೇಲೆ ಕಾಂಪೌಂಡ್ ಕುಸಿದು ಬಿದ್ದು ಆಟೋ ಚಾಲಕ ಸಾವನ್ನಪ್ಪಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ವಿಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದರು.

Read More