ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಲಾಗಿದೆ. ಈ ಬಳಿಕ ಅವರ ವಿರುದ್ಧ ಹುಬ್ಬಳ್ಳಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಬರೋಬ್ಬರಿ 15 ಪ್ರಕರಣಗಳನ್ನು ದಾಖಲಿಸಿರೋದಾಗಿ ತಿಳಇದು ಬಂದಿದೆ. ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣವನ್ನು ಬಿಜೆಪಿಯ ವಿವಿಧ ನಾಯಕರು ಖಂಡಿಸಿದ್ದಾರೆ. ಇದೊಂದು ರಾಜಕೀಯ ಪ್ರೇರಿತ ನಡೆಯೆಂಬುದಾಗಿ ಕಿಡಿಕಾರಿದ್ದಾರೆ. ಈ ಬೆನ್ನಲ್ಲೇ ಶ್ರೀಕಾಂತ್ ಪೂಜಾರಿ ವಿರುದ್ಧ ಹುಬ್ಬಳ್ಳಿಯ ವಿವಿಧ ಪೊಲೀಸ್ ಠಾಣೆಗಳಲ್ಲಿ 15 ಕೇಸ್ ಗಳನ್ನು ದಾಖಲಿಸಲಾಗಿದೆ. ಹಳೇ ಹುಬ್ಬಳ್ಳಿ ಮತ್ತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ 11 ಕೇಸ್ ದಾಖಲಾಗಿದ್ದಾವೆ. ಇನ್ನೂ ಕಸಬಾ ಪೊಲೀಸ್ ಠಾಣೆಯಲ್ಲಿ ಶ್ರೀಕಾಂತ್ ಪೂಜಾರಿ ವಿರುದ್ಧ 3 ಕೇಸ್ ದಾಖಲಾಗಿದ್ರೇ, ಶಹರ ಪೊಲೀಸ್ ಠಾಣೆಯಲ್ಲಿ 1 ಕೇಸ್ ದಾಖಲಾಗಿದೆ. ಶ್ರೀಕಾಂತ್ ಪೂಜಾರಿ ವಿರುದ್ಧ ಹುಬ್ಬಳ್ಳಿಯ ವಿವಿಧ ಠಾಣೆಯಲ್ಲಿ ದಾಖಲಾಗಿರುವಂತ 15 ಕೇಸ್ ಗಳಲ್ಲಿ 11 ಪ್ರಕರಣಗಳು ಅಕ್ರಮ ಸಾರಾಯಿ ಮಾರಾಟ ಕುರಿತು ದಾಖಲಾಗಿರುವಂತ ಪ್ರಕರಣಗಳಾಗಿದ್ದಾವೆ.
Author: main-admin
ಉಡುಪಿ: ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಆಕಸ್ಮಿಕವಾಗಿ ವ್ಯಕ್ತಿ ಓರ್ವ ಸ್ಕೂಟರ್ ಸಮೇತನಾಗಿ ದಕ್ಕೆ ಬಳಿಯ ನೀರಿಗೆ ಬಿದ್ದು ಮುಳುಗಡೆಗೊಂಡು ಕಣ್ಮರೆಯಾಗಿದ್ದಾರೆ. ನೀರಿಗೆ ಬಿದ್ದ ವ್ಯಕ್ತಿ ತಮಿಳುನಾಡು ಮೂಲದ ಮೀನುಗಾರನಾಗಿದ್ದು ಮಲ್ಪೆಯ ಬೋಟು ಒಂದರಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಎನ್ನಲಾಗಿದೆ. ಇನ್ನು ನೀರಿಗೆ ಬಿದ್ದ ಮಾಹಿತಿ ತಿಳಿದು ತಕ್ಷಣ ಈಶ್ವರ್ ಮಲ್ಪೆ ಅವರು ಧಾವಿಸಿ ಬಂದು ನೀರಿಗೆ ಧುಮುಕಿ ಎಲ್ಲ ಕಡೆ ಜಾಲಾಡಿದರೂ ಆತನ ದೇಹ ಸಿಗಲಿಲ್ಲ. ಆದರೆ ಸ್ಕೂಟರ್ ಮಾತ್ರ ಪತ್ತೆಯಾಗಿದ್ದು ಹಗ್ಗದ ಸಹಾಯದಿಂದ ಮೇಲಕ್ಕೆ ತರಲಾಗಿದೆ.
ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38) ಸೋಮವಾರ ಸಂಜೆ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮೃತರು ತಂದೆ ಶಿವಪ್ಪ ನಾಯ್ಕ, ತಾಯಿ ಲಲಿತಾ, ಅಣ್ಣ, ಅಕ್ಕಾ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ಭಾರತೀಯ ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್, ವಿವಿಧ ಇಲಾಖೆಗಳಲ್ಲಿ 400 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಜನವರಿ 9 ಕೊನೆಯ ದಿನವಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯುಪಿಎಸ್ಸಿಯ ಅಧಿಕೃತ ವೆಬ್ಸೈಟ್ upsc.gov.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆ ಡಿಸೆಂಬರ್ 20 ರಿಂದ ಪ್ರಾರಂಭವಾಗಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 9, 2024ರೊಳಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ ಸಂಬಂಧ ಯುಪಿಎಸ್ ಸಿ ಅಧಿಸೂಚನೆಯನ್ನು ಹೊರಡಿಸಿದೆ. ವಯೋಮಿತಿ ಅವಿವಾಹಿತ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಜುಲೈ 2, 2005 ಕ್ಕಿಂತ ಮೊದಲು ಮತ್ತು ಜುಲೈ 1, 2008 ರ ನಂತರ ಜನಿಸಿದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಶುಲ್ಕ ಸಾಮಾನ್ಯ ವರ್ಗದ ಅಭ್ಯರ್ಥಿಗಳು 100 ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಎಸ್ಸಿ/ಎಸ್ಟಿ ಅಭ್ಯರ್ಥಿಗಳು/ಮಹಿಳಾ ಅಭ್ಯರ್ಥಿಗಳು/ಜೆಸಿಒ/ಎನ್ಸಿಒ/ಒಆರ್ಗಳ ವಾರ್ಡ್ಗಳನ್ನು ಹೊಂದಿರುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಅರ್ಜಿ ಶುಲ್ಕವನ್ನು…
ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದ ಆಂಬುಲೆನ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ಇಂದು ಮುಂಜಾನೆ ನಡೆದಿದೆ. ಆಂಬುಲೆನ್ಸ್ ನಲ್ಲಿ ಚಾಲಕನ ಹೊರತು ಬೇರೆ ಯಾರು ಇರಲಿಲ್ಲ. ಲಕ್ಷ್ಮೀಂದ್ರ ನಗರದ ಬಳಿ ಬರುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಇದರ ಪರಿಣಾಮ ಒಮ್ಮೆಗೆ ಬಲಕ್ಕೆ ತಿರುಗಿದ ಆಂಬುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದೆ. ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಚರಂಡಿ ಮೇಲೆ ಹತ್ತಿ ನಿಂತುಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರು ಹೆದ್ದಾರಿ ಬದಿ ಗುಡ್ಡ ಜರಿದು ಬೀಳದಂತೆ ಕಟ್ಟಲಾದ ತಡೆಗೋಡೆಗೆ ಗುದ್ದಿ ಬಳಿಕ ಚರಂಡಿ ಮೇಲೆ ಹತ್ತಿ ನಿಂತುಕೊಂಡಿದೆ. ಘಟನೆಯಿಂದ ಕಾರು ಸಂಪೂರ್ಣ ಜಖಂಗೊಂಡಿದೆ.ಆದರೆ ಅದೃಷ್ಟವಶಾತ್ ಕಾರಿನೊಳಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ.ಗಾಯಗೊಂಡ ವ್ಯಕ್ತಿಗಳ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.ಚಾಲಕ ಸಹಿತ ಮೂವರು ಮಹಿಳೆಯರಿದ್ದು, ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ಅಯೋಧ್ಯೆ: ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠೆ ಜ.22ರಂದು ನಡೆಯಲಿದೆ. ಈ ಮಧ್ಯೆ ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಬಾಂಬ್ ದಾಳಿ ಮೂಲಕ ಸ್ಫೋಟಿಸುವ ಸಂದೇಶವುಳ್ಳ ಇ-ಮೇಲ್ ಬಂದಿದ್ದು ಆತಂಕ ಸೃಷ್ಟಿಯಾಗಿದೆ. ಬಾಂಬ್ ದಾಳಿ ಬೆದರಿಕೆ ಸಂದೇಶದ ಇ-ಮೇಲ್‌ನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಎಸ್‌ಟಿಎಫ್ ಎಡಿಜಿ ಅಮಿತಾಬ್ ಯಶ್ ಅವರ ಬಗ್ಗೆಯೂ ಉಲ್ಲೇಖಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ. ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿ, ತನಗೆ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಜೊತೆ ಸಂಬಂಧ ಇದೆ ಎಂದೂ ಹೇಳಿಕೊಂಡಿದ್ದಾನೆ. ಈ ಪ್ರಕರಣದ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಉತ್ತರ ಪ್ರದೇಶ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಾಂಬ್ ದಾಳಿ ಬೆದರಿಕೆ ಸಂದೇಶವನ್ನು ಭಾರತೀಯ ಕಿಸಾನ್ ಮಂಚ್‌ನ ರಾಷ್ಟ್ರೀಯ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಕಳುಹಿಸಲಾಗಿದೆ. ಮೇಲ್‌ನಲ್ಲಿ ಆಕ್ಷೇಪಾರ್ಹ ಭಾಷೆಯನ್ನು ಬಳಸಲಾಗಿದೆ. ಮೇಲ್ ಕಳುಹಿಸಿದವನು ತನ್ನನ್ನು ಜುಬೈರ್ ಹುಸೇನ್ ಖಾನ್ ಎಂದು ಗುರುತಿಸಿಕೊಂಡಿದೆ.
ಹೊಸ ವರ್ಷದ ಮೊದಲ ದಿನವೇ ಯುವತಿಯೊಬ್ಬಳು ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸುಧಾಮನಗರದಲ್ಲಿ ನಡೆದಿದೆ. ಮೃತರನ್ನು ವರ್ಷಿಣಿ (21) ಎಂದು ಗುರುತಿಸಲಾಗಿದೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬೆಂಗಳೂರು: ಅಡುಗೆ ಅನಿಲ ಸಂಪರ್ಕ ಹೊಂದಿರುವ (LPG Gas ) ಫಲಾನುಭವಿಗಳು, ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಎಂಬ ವದಂತಿಗೆ ಕಿವಿಗೊಡದಿರಿ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ. ಡಿ.31ರ ಒಳಗಾಗಿ ಗ್ಯಾಸ್ ಏಜೆನ್ಸಿಗಳಿಗೆ ಹೋಗಿ ಇ-ಕೆವೈಸಿ ಮಾಡಿಸಿದರೆ ಮಾತ್ರ ಸಬ್ಸಿಡಿ ಸಿಗುತ್ತದೆ ಹಾಗೂ ಸಿಲಿಂಡರ್ ಸರಬರಾಜು ಮಾಡಲಾಗುತ್ತದೆ ಎನ್ನುವ ವದಂತಿ ಮತ್ತು ಇ-ಕೆವೈಸಿ ಕಾರ್ಯಕ್ಕೆ ಹಣ ನೀಡಬೇಕೆಂಬ ವದಂತಿ ಸಾರ್ವಜನಿಕ ವಲಯದಲ್ಲಿ ಗೊಂದಲ ಸೃಷ್ಠಿಗೆ ಕಾರಣವಾಗಿರುತ್ತದೆ. ಜಿಲ್ಲೆಯಲ್ಲಿ ಅಡುಗೆ ಅನಿಲ ಸಂಪರ್ಕ ಹೊಂದಿರುವವರು ಆಧಾರ್ ಬಯೋಮೆಟ್ರಿಕ್ ನೀಡಲು ಕೇಂದ್ರ ಸರ್ಕಾರವು ಯಾವುದೇ ರೀತಿಯ ಕೊನೆಯ ದಿನಾಂಕ ನಿಗದಿಪಡಿಸಿರುವುದಿಲ್ಲ್ಲ. ಸಾರ್ವಜನಿಕರು ತಮ್ಮ ಬಿಡುವಿನ ವೇಳೆಯಲ್ಲಿ ಗ್ಯಾಸ್ ಏಜೆನ್ಸಿಗಳಿಗೆ ತೆರಳಿ ಆಧಾರ್ ಬಯೋಮೆಟ್ರಿಕ್ ನೀಡಬಹುದಾಗಿದೆ ಅಂತ ಹೇಳಿದ್ದಾರೆ. ಜಿಲ್ಲೆಯ ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರು ಅನಾವಶ್ಯಕ ಗೊಂದಲ ಅಥವಾ ತಪ್ಪು ಮಾಹಿತಿಯಿಂದ ಗ್ಯಾಸ್ ಏಜೆನ್ಸಿಗಳ ಬಳಿ ಸರತಿ ಸಾಲಿನಲ್ಲಿ ನಿಲ್ಲುವ…
ಅಯೋಧ್ಯಾ ರಾಮಮಂದಿರ ಉದ್ಘಾಟನೆಗೆ ಇನ್ನು ಕೆಲವೇ ಕೆಲವು ದಿನಗಳಿದ್ದು, ದೇವಸ್ಥಾನದ ಹೆಸರಿನಲ್ಲಿ ವಂಚಕರ ಜಾಲಗಳು ಸಕ್ರಿಯಗೊಂಡಿದೆ. ಮಂದಿರಕ್ಕೆ ದೇಣಿಗೆ ನೀಡುವಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವಂಚಕರು ಸಂದೇಶಗಳು ಹಾಗೂ ಕ್ಯೂಆರ್ ಕೋಡ್ ಹರಿಬಿಡುತ್ತಿದ್ದಾರೆ. ಈ ಬಗ್ಗೆ ಜಾಗರೂಕರಾಗಿ ಇರುವಂತೆ ವಿಎಚ್‌ಪಿ ಮನವಿ ಮಾಡಿದೆ. ದೇವಾಲಯದ ಹೆಸರಿನಲ್ಲಿ ಸೈಬರ್ ಕ್ರಿಮಿನಲ್‌ಗಳು ದೇಣಿಗೆ ಸಂಗ್ರಹಿಸಲು ಸಾಮಾಜಿಕ ಮಾಧ್ಯಮ ಸಂದೇಶಗಳನ್ನು ಹರಿಬಿಡುತ್ತಿದ್ದಾರೆ. ಈ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ವಿಶ್ವ ಹಿಂದೂ ಪರಿಷದ್ ಎಚ್ಚರಿಕೆ ನೀಡಿದೆ. ಈ ಸಂದೇಶಗಳಲ್ಲಿ ಕ್ಯೂಆರ್ ಕೋಡ್ ಕೂಡ ಇರುತ್ತದೆ. ಇದನ್ನು ಸ್ಕ್ಯಾನ್ ಮಾಡಿ ಹಣ ಪಾವತಿಸಿದರೆ ಅದು ವಂಚಕರ ಖಾತೆಗೆ ಸೇರುತ್ತದೆ ಎಂದು ತಿಳಿಸಿದೆ. ಈ ಬಗ್ಗೆ ವಿಎಚ್‌ಪಿ ವಕ್ತಾರ ವಿನೋಬ್ ಬನ್ಸಾಲ್ ಅವರು ಗೃಹ ಸಚಿವಾಲಯ ಮತ್ತು ಉತ್ತರ ಪ್ರದೇಶ ಹಾಗೂ ದಿಲ್ಲಿ ಪೊಲೀಸ್ ಮುಖ್ಯಸ್ಥರಿಗೆ ಮಾಹಿತಿ ನೀಡಿದ್ದಾರೆ. ಮಂದಿರ ನಿರ್ಮಾಣವನ್ನು ನೋಡಿಕೊಳ್ಳುತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಹೊರತಾಗಿ ದೇಣಿಗೆ ಸಂಗ್ರಹಿಸಲು ಯಾರಿಗೂ ಅಧಿಕಾರವಿಲ್ಲ ಎಂದು…










