ನವದೆಹಲಿ: ಸಿಮ್ ಕಾರ್ಡ್‌ಗಳ ಖರೀದಿ ಮತ್ತು ಮಾರಾಟದ ನಿಯಮಗಳನ್ನು ಬದಲಾಯಿಸಲು ಭಾರತ ಸರ್ಕಾರ ಸಜ್ಜಾಗಿದೆ ಎಂದು ವರದಿಯಾಗಿದೆ. ಈ ವರ್ಷ 2023 ರಲ್ಲಿ ಸ್ಪ್ಯಾಮ್, ವಂಚನೆಗಳು ಮತ್ತು ಆನ್‌ಲೈನ್ ವಂಚನೆಗಳ ಹೆಚ್ಚುತ್ತಿರುವ ಪ್ರಕರಣಗಳಿಗೆ ಸಾಕ್ಷಿಯಾದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. SIM ಕಾರ್ಡ್ ಸ್ವಾಧೀನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ತರುವ ಮೂಲಕ ಹೊಸ ನಿಯಂತ್ರಣವನ್ನು ಜನವರಿ 1, 2024 ರಿಂದ ಜಾರಿಗೆ ತರಲಾಗುತ್ತದೆ. ಆನ್‌ಲೈನ್ ವಂಚನೆಯಿಂದ ಬಳಕೆದಾರರನ್ನು ರಕ್ಷಿಸಲು ಹೊಸ ನಿಯಮ ಭಾರತದಲ್ಲಿ ಸ್ಮಾರ್ಟ್‌ಫೋನ್ ಬಳಕೆ ಹೆಚ್ಚಾದಂತೆ, ಆನ್‌ಲೈನ್ ವಂಚನೆ ಮತ್ತು ವಂಚನೆಗಳು ಹೆಚ್ಚಿವೆ ಮತ್ತು ಸಮಾನಾಂತರ ಹೆಚ್ಚಳವನ್ನು ಕಂಡಿವೆ. ಈ ಸಮಸ್ಯೆಗಳಿಗೆ ಕಡಿವಾಣ ಹಾಕಲು ಸರ್ಕಾರ ನಿರ್ಣಾಯಕ ನಿಲುವು ತಳೆಯುತ್ತಿದೆ. ನಕಲಿ ಸಿಮ್‌ಗಳಿಗೆ ಕಾನೂನು ಪರಿಣಾಮಗಳು ಹೊಸ ದೂರಸಂಪರ್ಕ ಮಸೂದೆಯ ಪ್ರಕಾರ, ನಕಲಿ ಸಿಮ್ ಕಾರ್ಡ್‌ಗಳನ್ನು ಖರೀದಿಸುವ ವ್ಯಕ್ತಿಗಳು ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಮತ್ತು ಅಪರಾಧಿಗಳಿಗೆ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 50 ಲಕ್ಷ ರೂಪಾಯಿ ಮೌಲ್ಯದ ದಂಡವನ್ನು…
Author: main-admin
ಮಂಗಳೂರು: ಕೋಣೆಯೊಳಗೆ ಬಾಕಿಯಾದ ಮಗುವನ್ನು ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ರಕ್ಷಣೆ ಮಾಡಿದ ಘಟನೆ ಮಂಗಳೂರಿನ ಕೊಡಿಯಾಲ್ ಗುತ್ತಿನ ಫ್ಲ್ಯಾಟ್ ವೊಂದರಲ್ಲಿ ಸೋಮವಾರ ನಡೆದಿದೆ. ಸುಮಾರು 3 ವರ್ಷದ ಮಗು ಆಟವಾಡುತ್ತಾ ನಾಲ್ಕನೇ ಮಹಡಿಯ ಫ್ಲ್ಯಾಟ್ ನ ಕೋಣೆಯ ಬಾಗಿಲಿನ ಚಿಲಕವನ್ನು ಹಾಕಿಕೊಂಡಿದೆ. ಗಾಬರಿಗೊಂಡ ಪೋಷಕರು ಎಷ್ಟೇ ಪ್ರಯತ್ನಿಸಿದರು ಬಾಗಿಲು ತೆಗೆಯಲು ಸಾಧ್ಯವಾಗಿರಲಿಲ್ಲ. ಬಳಿಕ ಪಾಂಡೇಶ್ವರ ಠಾಣೆಯ ಅಗ್ನಿಶಾಮಕ ಅಧಿಕಾರಿ ರಾಜಾ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಅವರು ಹಗ್ಗದ ಮೂಲಕ 4ನೇ ಮಹಡಿಯ ಮೇಲಿನಿಂದ ಮಗುವಿದ್ದ ಕೋಣೆಯ ಒಳಗೆ ತೆರಳಿ ಮಗುವನ್ನು ರಕ್ಷಣೆ ಮಾಡಿದ್ದಾರೆ.
ಮಂಗಳೂರಿನ ಸೋಮೇಶ್ವರ ದೇವಸ್ಥಾನ ಬಳಿ ನಿಂತಿದ್ದ ಕೇರಳ ಮೂಲದ ಅನ್ಯಕೋಮಿನ ವಿದ್ಯಾರ್ಥಿಗಳ ತಡೆದು ಸ್ಥಳೀಯ ಯುವಕರು ವಿಚಾರಣೆ ನಡೆಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಉಳ್ಳಾಲ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ನಾಲ್ವರು ರಜೆ ಹಿನ್ನಲೆ ಉಳ್ಳಾಲ ಸೋಮೇಶ್ವರ ದೇವಸ್ಥಾನಕ್ಕೆ ತೆರಳಿ ಸುತ್ತಮುತ್ತ ಓಡಾಡುತ್ತಿದ್ದರು. ಈ ತಂಡದಲ್ಲಿ ಇಬ್ಬರು ಹಿಂದೂ ಯುವತಿಯರು, ಓರ್ವ ಹಿಂದೂ ಯುವಕ ಮತ್ತು ಓರ್ವ ಮುಸ್ಲಿಂ ಯುವಕ ಇದ್ದಿದ್ದು, ದೇವಸ್ಥಾನಕ್ಕೆ ಆಗಮಿಸಿ ಸ್ಥಳೀಯವಾಗಿ ಸುತ್ತಾಡುತ್ತಿದ್ದ ಅವರನ್ನು ಸ್ಥಳೀಯರು ತಡೆದು ಪ್ರಶ್ನೆ ಮಾಡಿದ್ದಾರೆ. ಈ ವೇಳೆ ಮುಸ್ಲಿಂ ಯುವಕನ ಜೊತೆ ಇದ್ದ ಹಿಂದೂ ಯುವತಿಯ ತಡೆದು ಪ್ರಶ್ನೆ ಮಾಡಿದ ವೇಳೆ ಮುಸ್ಲಿಂ ಯುವಕ ದೇವಸ್ಥಾನಕ್ಕೆ ತೆರಳಿ ಹಣೆಗೆ ಗಂಧ ಹಚ್ಚಿಕೊಂಡು ಬಂದಿರುವುದು ತಿಳಿದು ಬಂದಿದೆ. ಈ ವೇಳೆ ಅನ್ಯಕೋಮಿನ ಜೋಡಿ ಎಂದು ಗೊತ್ತಾದ ಹಿನ್ನೆಲೆ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿ ಪೊಲೀಸರು ಯುವಕ-ಯುವತಿಯನ್ನ ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸಿ…
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು 3000 ಧನಸಹಾಯ ನೀಡಲಾಗುತ್ತಿದೆ. ಆದ್ರೇ ಅನೇಕ ಮಹಿಳೆಯರಿಗೆ ತಾಂತ್ರಿಕ ಸಮಸ್ಯೆಯಿಂದಾಗಿ ಈ ಹಣ ತಲುಪಿಲ್ಲ. ಹೀಗಾಗಿ ಡಿ.27ರ ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಮಸ್ಯೆ ನಿವಾರಣೆಗೆ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ಹಂಚಿಕೊಂಡಿದ್ದು, ರಾಜ್ಯದ ಅನೇಕ ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಕೆಲವರಿಗೆ ಯೋಜನೆಯಡಿ ಸಹಾಯಧನ ಸೌಲಭ್ಯ ದೊರೆತಿದ್ದರೇ, ಮತ್ತೆ ಕೆಲವರಿಗೆ ಸಿಕ್ಕಿಲ್ಲ. ಹೀಗಾಗಿ ತಾಂತ್ರಿಕ ಸಮಸ್ಯೆ ನಿವಾರಿಸಲು ಡಿಸೆಂಬರ್.27ರಿಂದ 29ರವರೆಗೆ ಮೂರು ದಿನಗಳ ಕಾಲ ಎಲ್ಲಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಂತ ಮಹಿಳೆಯರು ಹೊಸ ಬ್ಯಾಂಕ್ ಖಾತೆ ಆರಂಭ, ಆಧಾರ್ ಜೋಡಣೆ, ಬ್ಯಾಂಕಿಗೆ ಸಂಬಂಧಿಸಿದಂತ ಸಮಸ್ಯೆ ಸೇರಿದಂತೆ ವಿವಿಧ…
ಸುರತ್ಕಲ್: ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಬೈಕಂಪಾಡಿಯ ಎಪಿಎಂಸಿಯಲ್ಲಿ ಹಲವು ವರ್ಷಗಳಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಕಾರ್ಮಿಕನ ಮೃತದೇಹ ಎಪಿಎಂಸಿ ಬಳಿ ಅನುಮಾನಸ್ಪಾದವಾಗಿ ಪತ್ತೆಯಾಗಿದೆ.ಮೃತ ವ್ಯಕ್ತಿಯನ್ನು ಓಡಿಸಾ ರಾಜ್ಯದ ಜಾವಪುರ್ ಜಿಲ್ಲೆಯ ರಶ್ಮಿ ರಂಜನ್ (44) ಎಂದು ಗುರುತಿಸಲಾಗಿದೆ. ಮೃತದೇಹದ ಬಲಕಾಲಿನ ಮಂಡಿಯ ಕೆಳಭಾಗದಲ್ಲಿ ಲಘುವಾಹನ ಗುದ್ದಿದ ಗುರುತುಗಳಿದ್ದು, ಹಿಟ್ ಅಂಡ್ ರನ್ ಕೇಸ್ ಇದಾಗಿರುವ ಸಾಧ್ಯತೆಗಳಿದ್ದು ಯಾವುದೋ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾಗಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. ತೀವ್ರ ಗಾಯಗೊಂಡ ರಂಜನ್ ಅಪಘಾತಕ್ಕೀಡಾಗಿ ಮೃತ ಪಟ್ಟಿರಬಹುದು ಎಂದು ಶಂಕಿಸಲಾಗಿದೆ. ಸದ್ಯ ಸ್ಥಳಕ್ಕೆ ಪಣಂಬೂರು ಮತ್ತು ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ: ಬ್ರಹ್ಮಗಿರಿ ಜಂಕ್ಷನ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ ಎಸ್. ಗೌತಮ್ ( 24), ಕುಕ್ಕಿಕಟ್ಟೆ ಮೀನು ಮಾರುಕಟ್ಟೆಯ ಬಳಿ ಗೌರವ ಜೆ. (26), ಶಾಂತಿನಗರದ ಬಳಿ ಜಗದೀಶ್ (31)ನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಫಾರೆನ್ಸಿಕ್ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ. ಉಡುಪಿ ಸೆನ್ ಹಾಗೂ ಮಣಿಪಾಲ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ದೂರು ನೀಡಲು ಬಂದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಠಾಣೆಯ ಪಿಎಸ್ ಐ ಓರ್ವರನ್ನು ಅಮಾನತುಮಾಡಲಾಗಿದೆ. ಸಂಕೇಶ್ವರ ಪೊಲೀಸ್ ಠಾಣೆಯ ಪಿಎಸ್ ಐ ನರಸಿಂಹರಾಜು ಜೆ.ಡಿ ಅಮಾನತುಗೊಂಡವರು. ಕರ್ತವ್ಯ ಲೋಪ, ಅಶಿಸ್ತು, ದುರ್ನಡತೆ ಹಿನ್ನೆಲೆಯಲ್ಲಿ ಬೆಳಗಾವಿ ಎಸ್ ಪಿ, ನರಸಿಂಹರಾಜು ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕೆಲ ದಿನಗಳ ಹಿಂದೆ ಮಹಿಳೆಯೊಬ್ಬರು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪತಿ ವಿರುದ್ಧ ದೂರು ನೀಡಲು ಬಂದಿದ್ದರು. ಈ ವೇಳೆ ಈ ವೇಳೆ ಪಿಎಸ್ ಐ ನರಸಿಂಹರಾಜು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೇ, ಆಕೆಯ ಮೊಬೈಲ್ ನಂಬರ್ ಪಡೆದು ಕಿರುಕುಳ ನೀಡುತ್ತಿದ್ದ. ಇದರಿಂದ ನೊಂದ ಮಹಿಳೆ ಎಸ್ ಪಿ ಅವರಿಗೆ ದೂರು ನೀಡಿದ್ದರು. ಇದೀಗ ಪಿಎಸ್ ಐ ನರಸಿಂಹ ರಾಜು ಅವರನ್ನು ಸಸ್ಪೆಂಡ್ ಮಾಡಲಾಗಿದೆ.
ಮಂಗಳೂರಿನ ಪ್ರಮುಖ ರಸ್ತೆಯಾದ ಕೆಎಸ್ ರಾವ್ ರಸ್ತೆಯ ಸಿಟಿ ಸೆಂಟರ್ ಸಮೀಪ ಭೂಗತ ಕೆಬಲ್ ಆಳಡಿಸಲು ತೋಡಿದ್ದ ಗುಂಡಿಗೆ ಬೈಕ್ ಸವಾರನೊಬ್ಬ ಬೈಕ್ ಸಮೇತ ಬಿದ್ದು ಸಣ್ಣಪುಟ್ಟ ಗಾಯಗಳಿಂದ ಪಾರಾದ ಘಟನೆ ನಡೆದಿದೆ. ಸ್ಮಾರ್ಟ್ ಸಿಟಿಯಾದ ಮಂಗಳೂರಿನಲ್ಲಿ ರೋಡ್ ಗಳು ಸ್ಮಾರ್ಟ್ ಆದರೂ ಇನ್ನೂ ಕಾಂಕ್ರಿಟ್ ರಸ್ತೆ ಅಗೆದು ಕೇಬಲ್ ಆಳವಡಿಸುವ ಕಾರ್ಯ ನಡೆಯುತ್ತಿದೆ. ಮೆಸ್ಕಾಂ ಅವರ ಭೂಗತ ಕೇಬಲ್ ಆಳವಡಿಸುವ ಕಾರ್ಯ ನಗರಾದ್ಯಂತ ನಡೆಯುತ್ತಿದ್ದು, ಕೆಲವು ಕಡೆಗಳಲ್ಲಿ ರಸ್ತೆಗಳನ್ನು ಅಗೆದು ಯಾವುದೇ ಸುರಕ್ಷತೆ ಇಲ್ಲದೆ ಹಾಗೆ ಬಿಟ್ಟಿದ್ದಾರೆ. ಅಂತಹುದೇ ಒಂದು ಗುಂಡಿ ಮಂಗಳೂರಿನ ಸಿಟಿ ಸೆಂಟರ್ ಬಳಿ ಇದ್ದು, ಈ ಗುಂಡಿಗೆ ಬೈಕ್ ಸವಾರನೊಬ್ಬ ಬೈಕ್ ಸಮೇತ ಬಿದ್ದಿದ್ದಾನೆ. ಅದೃಷ್ಠವಶಾತ್ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆದಿದ್ದಾರೆ. ನಗರದ ಜನನಿಬಿಡ ರಸ್ತೆಯಲ್ಲೇ ಈ ರೀತಿ ಅವೈಜ್ಞಾನಿಕವಾಗಿ ಗುಂಡಿ ತೋಡಿದ್ದು, ರಾತ್ರಿ ಸರಿಯಾಗಿ ಕಾಣೆದೆ ವಾಹನ ಸವಾರರು ಹೊಂಡಕ್ಕೆ ಬೀಳುವ ಸಾಧ್ಯತೆ ಇದೆ. ಸಂಬಂಧಪಟ್ಟವರು ಅದರ ಕಡೆ ಗಮನಹರಿಸಬೇಕೆಂದು ಸ್ಥಳೀಯರು…
ಮೂಡಬಿದ್ರಿಯಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ. ಮೂಡಬಿದ್ರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನಲ್ಲಿ ಇಂದು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಮನೋಜ್(18) ಎಂಬ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ನಡೆದಿದೆ. ಮೃತ ಮನೋಜ್ ಗದಗ ಜಿಲ್ಲೆಯ ಮುಂಡರಗಿ ತಾಲೂಕಿ ತರ್ಚಿಹಾಳ ಗ್ರಾಮದ ಮಲ್ಲಪ್ಪ ಎಂಬುವರ ಪುತ್ರ ಎಂಬುದಾಗಿ ತಿಳಿದು ಬಂದಿದೆ. ಈ ವಿಷಯ ತಿಳಿದು ಪೋಷಕರು ನಾವು ಸ್ಥಳಕ್ಕೆ ಆಗಮಿಸೋವರೆಗೆ ಪುತ್ರನ ಶವವನ್ನು ಇಳಿಸದಂತೆ ಆಗ್ರಹಿಸಿದ್ದಾರೆ. ಈ ವಿಷಯ ತಿಳಿದು ಮೂಡಬಿದ್ರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ. ಮನೋಜ್ ಸಾವಿನ ಬಗ್ಗೆ ಪೋಷಕರು ಅನುಮಾನವನ್ನು ವ್ಯಕ್ತಪಡಿಸಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಯಜಮಾನಿಯರಿಗೆ 2,000 ರೂ. ನೀಡಲಾಗುತ್ತಿದ್ದು, ಯಾರ ಖಾತೆಗೆ ಹಣ ಬಂದಿಲ್ಲ ಅವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಗೃಹಲಕ್ಷ್ಮಿ ಯೋಜನೆಗಳ ಸಮಸ್ಯೆ ನಿವಾರಿಸಲು ಸರ್ಕಾರ ಬಿಗ್ ಪ್ಲ್ಯಾನ್ ಮಾಡಿದ್ದು, ಡಿ.27 ರಿಂದ ಡಿ.29 ರವರೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್ ನಡೆಸಲು ಸುತ್ತೋಲೆ ಹೊರಡಿಸಲಾಗಿದೆ. ಪಿಡಿಒಗಳ ನೇತೃತ್ವದಲ್ಲಿ ಕ್ಯಾಂಪ್ ಆಯೋಜನೆಯಾಗಲಿದ್ದು, ಈ ಕ್ಯಾಂಪ್ ನಲ್ಲಿ ಫಲಾನುಭವಿಗಳ ಸಮಸ್ಯೆ ಸರಿಪಡಿಸಲಾಗುತ್ತದೆ.ಪ್ರತಿ ಗ್ರಾಮ ಪಂಚಾಯತ್ ನಲ್ಲಿ ಕ್ಯಾಂಪ್ ನಡೆಯಲಿದ್ದು, ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಕಂಪ್ಯೂಟರ್ ಆಪರೇಟರ್ ಗಳು, ಅಂಗನವಾಡಿ ಕಾರ್ಯಕರ್ತರು ಭಾಗಿಯಾಗುವಂತೆ ಸೂಚಿಸಲಾಗಿದೆ. ಪ್ರತಿ ಗ್ರಾಮ ಪಂಚಾಯತ್ ನಲ್ಲಿ ಡಿ.27 ರಿಂದ ಡಿ. 29 ರವರೆಗೆ ಬೆಳಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಕ್ಯಾಂಪ್ ಆಯೋಜಿಸುವಂತೆ ಸೂಚನೆ ನೀಡಲಾಗಿದೆ.










