ಮಂಗಳೂರು: 11 ವರ್ಷಗಳ ಹಿಂದೆ ಕೊಲೆಯಾದ ಉಜಿರೆ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಪ್ರಕರಣ ಆರೋಪಿಗೆ ನಿರ್ದೋಷಿ ಎಂದು ತೀರ್ಪು ನೀಡಿದ ಹಲವು ತಿಂಗಳ ಬಳಿಕ ಇದೀಗ ಸಿಬಿಐ ಅಧಿಕಾರಿಗಳು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ಆರೋಪಿ ಸಂತೋಷ್ ರಾವ್ ಗೆ ಸಾಕ್ಷದಾರ ಕೊರತೆಯಿಂದ ನಿರ್ದೋಷಿ ಎಂದು ತೀರ್ಪು ನೀಡಿದ್ದು ಇದೀಗ ನವೆಂಬರ್ 5 ಶನಿವಾರದಂದು ಸಿಬಿಐ ತನಿಖಾಧಿಕಾರಿಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಬಗ್ಗೆ ಕೆಲವೇ ದಿನಗಳಲ್ಲಿ ಹೈಕೋರ್ಟ್ ಪ್ರಕರಣ ದಾಖಲಿಸಿದ ದಾವೆಯ CC ಹೊರಡಿಸಲಿದೆ.
Author: main-admin
ನವದೆಹಲಿ : ಮುಖದ ಸೌಂದರ್ಯ ಮತ್ತು ದೇಹದ ವಿನ್ಯಾಸವು ಗಂಡ ಮತ್ತು ಹೆಂಡತಿಯ ಸಂಬಂಧದಲ್ಲಿ ಯಾವುದೇ ಮೌಲ್ಯವನ್ನು ಹೊಂದಿಲ್ಲ ಎಂದು ಹೇಳಲಾಗುತ್ತದೆ, ಇದು ಪ್ರತಿ ತೊಂದರೆ ಮತ್ತು ವಿಪತ್ತುಗಳಲ್ಲಿ ಒಟ್ಟಿಗೆ ಇರಲು ಪ್ರೇರೇಪಿಸುವ ಈ ಜಗತ್ತಿನಲ್ಲಿ ಏಕೈಕ ಸಂಬಂಧವಾಗಿದೆ. ಆದರೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ, ಗಂಡ-ಹೆಂಡತಿ ಸಂಬಂಧದ ಪಾವಿತ್ರ್ಯತೆ ಮತ್ತು ನಂಬಿಕೆಗೆ ಕೇವಲ ಮುಖದ ಸೌಂದರ್ಯದಿಂದ ಅವಮಾನವಾಯಿತು. ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಪತ್ನಿಯೊಬ್ಬಳು ನಾಲ್ಕು ವರ್ಷಗಳ ಹಿಂದೆ ತನ್ನ ಪತಿಯ ಕಪ್ಪು ಮುಖದಿಂದಾಗಿ ಅವನನ್ನು ಕೊಂದಿದ್ದಾಳೆ. ಈ ವೇಳೆ ಪತ್ನಿ ಪತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾಳೆ. ಈ ಪ್ರಕರಣದಲ್ಲಿ 4 ವರ್ಷಗಳ ಕಾಲ ನಡೆದ ವಿಚಾರಣೆಯ ನಂತರ, ಆರೋಪಿ ಪತ್ನಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅದೇ ಸಮಯದಲ್ಲಿ, ನ್ಯಾಯಾಲಯದಲ್ಲಿ ಈ ಕೃತ್ಯವನ್ನು ಮಾಡುವ ಹಿಂದಿನ ಕಾರಣದ ಬಗ್ಗೆ ಹೆಂಡತಿಯನ್ನು ಕೇಳಿದಾಗ, ಅವಳು ತನ್ನ ಮೃತ ಗಂಡನ ಕುಟುಂಬವನ್ನು ಆರೋಪಿಸಿದಳು ಮತ್ತು ನನ್ನನ್ನು ಸಿಲುಕಿಸಲಾಗಿದೆ ಎಂದು ಹೇಳಿದಳು.…
ಕಡಬ: ತಿಂಗಳ ಹಿಂದೆ ಕಡಬ ತಾಲೂಕಿನ ಐತ್ತೂರು ಸಮೀಪ ಕಾಡಾನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಗೇರ್ತಿಲ ನಿವಾಸಿ ಚೋಮ ಅವರು ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 7ರಂದು ಮೃತಪಟ್ಟಿದ್ದಾರೆ. ಮರ್ದಾಳದಿಂದ ತನ್ನ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು ಕೊಣಾಜೆ ರಸ್ತೆಯಲ್ಲಿ ಕಾಡಾನೆ ದಾಳಿ ನಡೆಸಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದೆ ಅವರನ್ನು ಮನೆಗೆ ತರಲಾಗಿತ್ತು. ಚೋಮ ಅವರು ಇಂದು ಬೆಳಗ್ಗಿನ ಜಾವ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಮಂಗಳೂರು : ಮಾದಕ ವಸ್ತು ‘ಎಂಡಿಎಂಎ’ ಮಾರಾಟ ಮಾಡುತ್ತಿದ್ದ ಮಡಿಕೇರಿ ಮೂಲದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 95 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಲಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕೊಯಿನೂರು ರಸ್ತೆಯ ಪ್ರಮೋದ್ ಎಂ.ಜಿ. ಡಿಸ್ಕ್ (30), ಮಡಿಕೇರಿಯ ಕಾನ್ವೆಂಟ್ ಜಂಕ್ಷನ್‌ನ ರಾಶೀದ್ ಎಂ.ಝಡ್ ಯಾನೆ ರಾಶಿ (41), ಮಡಿಕೇರಿಯ ಕಡಗದಾಳು ಗ್ರಾಮದ ದರ್ಶನ್ ಎಸ್.(24) ಬಂಧಿತ ಆರೋಪಿಗಳಾಗಿದ್ದಾರೆ. ನಗರದ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯ ಪಳ್ನೀರು ಎಂಬಲ್ಲಿ ಬ್ಲೂ ಸ್ಟಾರ್ ಲಾಡ್ಜ್‌ವೊಂದರಲ್ಲಿ ಮೂವರು ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಸೋಮವಾರ ದಾಳಿ ನಡೆಸಿ ಬಂಧಿಸಿದರು. ಆರೋಪಿಗಳಿಂದ 75 ಸಾವಿರ ರೂ. ಮೌಲ್ಯದ 15 ಗ್ರಾಂ ನಿಷೇಧಿತ ಮಾದಕ ವಸ್ತು, ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್‌ಗಳನ್ನು ವಶಪಡಿಸಿದ್ದಾರೆ.
ಪುತ್ತೂರು: ಪುತ್ತೂರಿನ ಖ್ಯಾತ ಹುಲಿ ವೇಷ ತಂಡ ಕಲ್ಲೇಗ ಟೈಗರ್ಸ್ ತಂಡದ ಸಾರಥ್ಯ ವಹಿಸಿದ್ಧ ಅಕ್ಷಯ್ ಕಲ್ಲೇಗ(24) ಅವರನ್ನು ನೆಹರೂ ನಗರದಲ್ಲಿ ನ.6ರ ಸೋಮವಾರ ತಡರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರಿನಿಂದ ಕೊಚ್ಚಿ ಕೊಲೆಗೈದ ಘಟನೆ ನಡೆದಿದೆ. ಅಕ್ಷಯ್ ಕಲ್ಲೇಗ ಕಳೆದ 6 ವರ್ಷಗಳಿಂದ ಇವರು ಟೈಗರ್ಸ್ ಕಲ್ಲೇಗ ಎಂಬ ಹುಲಿ ವೇಷ ತಂಡವನ್ನು ಮುನ್ನಡೆಸುತ್ತಿದ್ದರು. ಈ ತಂಡ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನೂ ಬಾಚಿಕೊಂಡಿತ್ತು. ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಅದರ ಮುಂದುವರಿದ ಭಾಗವಾಗಿ ಅಕ್ಷಯ್ ನನ್ನು ಹತ್ಯೆ ಮಾಡಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಅಕ್ಷಯ್ ನನ್ನು ದುಷ್ಕರ್ಮಿಗಳ ತಂಡ ನೆಹರೂ ನಗರಕ್ಕೆ ಬರಲು ಹೇಳಿ ಬಳಿಕ ಅಟ್ಟಾಡಿಸಿಕೊಂಡು ಹತ್ಯೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಕೃತ್ಯ ನಡೆದ ಕೆಲ ಗಂಟೆಯ ಬಳಿಕ ಮನೀಶ್ ಹಾಗೂ ಚೇತು ಎಂಬವರು ಪೊಲೀಸರಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದ್ದು, ಅವರನ್ನು ವಶಕ್ಕೆ ಪಡೆದಿರುವ ಪೊಲೀಸರು…
ಕುಂದಾಪುರ: ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ವೃದ್ಧರೊಬ್ಬರ ಮೃತದೇಹವು ಕೋಟೇಶ್ವರದ ಶ್ರೀಕೋಟಿಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಜಿ.ಸುರೇಂದ್ರ(70) ಎಂದು ಗುರುತಿಸಲಾಗಿದೆ. ಇವರು ಅನಾರೋಗ್ಯದಿಂದ ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದು ಬಳಿಕ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು. ಎಲ್ಲ ಕಡೆ ಹುಡುಕಾಡಿದರೂ ಅವರು ಪತ್ತೆಯಾಗಿರಲಿಲ್ಲ.ಕೊನೆಗೆ ಕೋಟೇಶ್ವರ ಕೆರೆಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ. ಇವರು ವೈಯಕ್ತಿಕ ಕಾರಣಕ್ಕೆ ಜೀವನದಲ್ಲಿ ಜಿಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿ ಅವರ ತಂದೆ ವಿಧಿವಶರಾಗಿದ್ದಾರೆ. ಪೂರ್ವಾಶ್ರಮದ ತಂದೆ ಅಂಗಡಿಮಾರು ಕೃಷ್ಣಭಟ್ಟ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಹಳೆಯಂಗಡಿ ಬಳಿಯ ಪಕ್ಷಿಕೆರೆಯಲ್ಲಿ ನಿಧನ ಹೊಂದಿದ್ದಾರೆ. ಇವರಿಗೆ 103 ವರ್ಷ ವಯಸ್ಸಾಗಿತ್ತು. ಅಂಗಡಿಮಾರು ಕೃಷ್ಣಭಟ್ಟರು ಹಿರಿಯ ವಿದ್ವಾಂಸ, ತುಳು ಲಿಪಿ ತುಳು ಸೌರ ಪಂಚಾಂಗ ಕರ್ತೃರಾಗಿದ್ದರು. ಐವರು ಪುತ್ರರು, ಆರು ಪುತ್ರಿಯರು
ಉಡುಪಿ : ಕರಾವಳಿಯಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ಗುಡುಗು ಸಿಡಿಲು ಸಹಿತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಜಿಲ್ಲೆಯಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮೋಡ ಕವಿದ ಮಳೆಯಾಗುತ್ತಿದೆ. ರಾತ್ರಿ ಲಘುವಾಗಿ ಭಾನುವಾರ ಮಧ್ಯಾಹ್ನ ಕಾವು ಮತ್ತು ಕಾರ್ಕಳ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಬತ್ತದ ಬೆಳೆ ಬಲಿತಿದ್ದು ಕೊಯ್ಲಿಗೆ ಸಿದ್ಧವಾಗಿದೆ. ಆರಂಭದಲ್ಲಿ ಮಳೆಯ ಕೊರತೆಯಿಂದ ಸಂಕಷ್ಟಕ್ಕೊಳಗಾಗಿದ್ದ ರೈತರು ಈಗ ತಯಾರಿ ನಡೆಸುತ್ತಿರುವಾಗಲೇ ಅಕಾಲಿಕವಾಗಿ ಸುರಿಯುತ್ತಿರುವ ಮಳೆ ರೈತರ ಆತಂಕಕ್ಕೆ ಕಾರಣವಾಗಿದೆ.
ಸುಳ್ಯ: ಆಟೋರಿಕ್ಷಾಕ್ಕೆ ಓಮ್ನಿ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನ.5ರಂದು ರಾತ್ರಿ ಸಂಭವಿಸಿದೆ. ಮೃತರನ್ನು ಜಾಲ್ಸೂರು ಗ್ರಾಮದ ಅರಿಯಡ್ಕದ ಬಾಬು ಪಾಟಾಳಿ ಎಂದು ಗುರುತಿಸಲಾಗಿದೆ.ಜಾಲ್ಸೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು ಬಿಟ್ಟು ಹಿಂತಿರುಗುತ್ತಿದ್ದ ಬಾಬು ಪಾಟಾಳಿ ಚಲಾಯಿಸುತ್ತಿದ್ದ ಅಟೋರಿಕ್ಷಾ ಹಳೆಗೇಟು ಪೆಟ್ರೋಲ್ ಪಂಪ್ ಬಳಿ ಮುಂಭಾಗದಿಂದ ಬರುತ್ತಿದ್ದ ಓಮ್ನಿಗೆ ಢಿಕ್ಕಿ ಹೊಡೆದಿದೆ. ಗಂಭೀರ ಗಾಯಗೊಂಡ ಚಾಲಕ ಬಾಬು ಪಾಟಾಳಿ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.ಸಹ ಪ್ರಯಾಣಿಕ ಗಣಪತಿ ಭಟ್ ಎಂಬವರು ಗಾಯಗೊಂಡಿದ್ದು, ಸುಳ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ಬೆಳ್ತಂಗಡಿ: ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಬೆಳ್ತಂಗಡಿ – ಧರ್ಮಸ್ಥಳ 33 ಕೆ.ವಿ ವಿದ್ಯುತ್ ಸಂಪರ್ಕದ ಮುಖ್ಯ ಲೈನ್ ನ ಟವರ್ ಕುಸಿದು ಬಿದ್ದು ಒಂದು ಕಾರು ಹಾಗೂ ದ್ವಿಚಕ್ರ ವಾಹನಕ್ಕೆ ಹಾನಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ. ಭಾನುವಾರ ಸಂಜೆ ಜಡಿಮಳೆಗೆ ಕಿರಿಯಾಡಿ ಬಳಿ ಬೆಳ್ತಂಗಡಿ-ಧರ್ಮಸ್ಥಳ 33 ಕೆ.ವಿ ವಿದ್ಯುತ್ ಸಂಪರ್ಕದ ಮುಖ್ಯ ಲೈನ್ ವಿದ್ಯುತ್ ಟವರ್ ನೆಲದತ್ತ ಭಾಗುತ್ತಿರುವುದನ್ನು ಗಮನಿಸಿದ ಮೆಸ್ಕಾಂ ಪವರ್ ಮ್ಯಾನ್ ಕೂಡಲೇ ಉಜಿರೆ ಉಪವಿಭಾಗಕ್ಕೆ ಮಾಹಿತಿ ನೀಡಿದರು. ಕೂಡಲೇ ಮೆಸ್ಕಾಂ ಅಧಿಕಾರಿಗಳು ದೊಂಡೋಲೆಯ ಪವರ್ ಪ್ರಾಜೆಕ್ಟ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಸ್ಥಳಕ್ಕೆ ತೆರಳಿದ್ದರು. ಪವರ್ ಪ್ರೊಜೆಕ್ಟ್ ನ ಅಧಿಕಾರಿಗಳು ಒಂದು ಕಾರು ಮತ್ತು ಬೈಕ್ ನಲ್ಲಿ ಬಂದು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದರು. ವಾಲಿಕೊಂಡು ಬರುತ್ತಿದ್ದ ಟವರ್ ಕಾರು ಹಾಗೂ ಬೈಕ್ ನ ಮೇಲೆಯೇ ಬಿದ್ದಿತ್ತೇನ್ನಲಾಗಿದೆ. ಕಾರಿನಲ್ಲಿ ಪವರ್ ಪ್ರಾಜೆಕ್ಟ್ ನ ಗಣೇಶ್ ಎಂಬವರಿದ್ದು, ಸಣ್ಣ ಪುಟ್ಟ ಗಾಯಕ್ಕೊಳಗಾಗಿ ಅಪಾಯದಿಂದ ಪಾರಾಗಿದ್ದಾರೆ. ಮೆಸ್ಕಾಂನ…










