Author: main-admin

ಬೆಂಗಳೂರು: ಸುಮಾರು 40ರಿಂದ 50 ಕೋಟಿ ರೂ ಮೌಲ್ಯದ ಕಾರಾಗೃಹ ಇಲಾಖೆಯ ಕಟ್ಟಡದ ಮೇಲೆ ಖದೀಮರು ಕಣ್ಣು ಹಾಕಿದ್ದಾರೆ. ಸ್ವತ್ತು ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಅಧೀನದಲ್ಲಿರುವ ಗಾಂಧಿನಗರದ 2ನೇ ಅಡ್ಡರಸ್ತೆಯಲ್ಲಿರುವ ಮೈಸೂರು ಡಿಸ್ಮಾರ್ಜ್ ಪ್ರಿಸನರ್ಸ್ ಏಡ್ ಸೊಸೈಟಿಯ ಆಸ್ತಿಯನ್ನು ಕಬ್ಜ ಮಾಡಲಾಗಿದೆ. ಈ ಬಗ್ಗೆ ಉಪ್ಪಾರ ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ. ಖಾಸಗಿ ವ್ಯಕ್ತಿಗಳ ವಿರುದ್ಧ ದೂರು ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಗೆ ಸೇರಿದ ಆಸ್ತಿಯನ್ನು ಖಾಸಗಿ ವ್ಯಕ್ತಿಗಳಾದ ಖಲಿಂ ಹಾಗೂ ಅನಿಲ್ ಎಂಬುವವರು ಕಳೆದ ಒಂದು ವರ್ಷದಿಂದಲೂ ಬಳಕೆ ಮಾಡುತ್ತಿದ್ದರು. ಶ್ರೀಶೈಲ್​​ ಎಸ್​ ಮೇಟಿ ಎಂಬುವವರು ಇಬ್ಬರ ವಿರುದ್ಧ ದೂರು ನೀಡಿದ್ದಾರೆ. ಕಳೆದ ಒಂದು ವರ್ಷದಿಂದಲೂ ಕಾರಾಗೃಹ ಇಲಾಖೆಯ ಆಸ್ತಿಯನ್ನು ಅನುಮತಿ ಪಡೆಯದೇ ಕಟ್ಟಡದ ಒಂದನೇ ಮಹಡಿಯನ್ನು ಅನಿಲ್ ಅತಿಕ್ರಮಣ ಮಾಡಿದ್ದು, ಖಲಿಂ ಹಳೆಯ ಸಾಮಗ್ರಿಗಳನ್ನು ಕಾರಾಗೃಹ ಇಲಾಖೆಗೆ ಸೇರಿದ ಆಸ್ತಿಯಲ್ಲಿ ತಂದು ಹಾಕಿದ್ದಾನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸದ್ಯ ಇಬ್ಬರಿಗೂ ನೋಟಿಸ್​​…

Read More

ಮಂಗಳೂರು: ಬಡತನ ನಿರ್ಮೂಲನೆ, ಸಮಾಜದಲ್ಲಿ ಸಮಾನತೆಗೆ ಶಿಕ್ಷಣ ಪ್ರಮುಖ ಅಸ್ತ್ರ. ಶಿಕ್ಷಣಕ್ಕೆ ಆದ್ಯತೆ ನೀಡುವ ಕೃಷ್ಣ ಜೆ. ಪಾಲೆಮಾರ್ ಅವರ ಗುಣ ಶ್ಲಾಘನೀಯ ಎಂದು ಆಂಧ್ರಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್ ಹೇಳಿದರು. ಮೇರಿಹಿಲ್ ಪಾಲೆಮಾರ್ ಕನ್ವೆನ್ಶನ್ ಸೆಂಟರ್‌ನಲ್ಲಿ ಶನಿವಾರ ಲ್ಯಾಂಡ್ ಲಿಂಕ್ಸ್ ಸಂಸ್ಥೆ ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾಭವನಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮಾಜಿ ಸಚಿವ ಕೃಷ್ಣ ಪಾಲೆಮಾರ್ ಅವರು ಬಹುಮುಖ ಪ್ರತಿಭೆ. ಕೈಗಾರಿಕೋದ್ಯಮಿ, ಬಿಲ್ಡರ್, ಶಿಕ್ಷಣ ಕ್ಷೇತ್ರ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡಿರುವ ಅವರು ಶೈಕ್ಷಣಿಕ, ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನೆರವಾಗಿದ್ದಾರೆ. ಅರ್ಹರಿಗೆ ಉಚಿತ ಶಿಕ್ಷಣ ನೀಡಿದ್ದಾರೆ. ದುಡಿಯುವ ಕೈಗಳಿಗೆ ಕೆಲಸ ಕಲ್ಪಿಸಿದ್ದಾರೆ ಎಂದರು. ಪಾಲೆಮಾರ್ ಕನ್ವೆನ್ಶನ್ ಸೆಂಟರ್‌ನಲ್ಲಿ ಸಾಮುದಾಯಿಕ ಒಳಗೊಳ್ಳುವಿಕೆ, ವಿಚಾರ ಸಂಕಿರಣಗಳು, ಆರ್ಥಿಕ ಸಂವಾದಗಳು, ಕೌಶಲ್ಯಾಭಿವೃದ್ಧಿ ಕುರಿತಾದ ಕಾರ್ಯಕ್ರಮಗಳು ನಡೆಯಲಿ. ಸಾಮಾಜಿಕ ಜಾಗೃತಿ, ಸೌಹಾರ್ದಾತೆಗೆ ಕೇಂದ್ರವಾಗಲಿ. ಇಲ್ಲಿ ವಿವಾಹಕ್ಕೊಳಗಾದವರಿಗೆ ಶ್ರೇಯಸ್ಸು ಉಂಟಾಗಲಿ ಎಂದು…

Read More

ಬೆಳ್ತಂಗಡಿ : ಗುರುವಾಯನಕೆರೆಯಿಂದ ಮೂಡಬಿದಿರೆ ಕಡೆಗೆ ಕಾರಿನಲ್ಲಿ ನಿಷೇಧಿತ ಎಂಡಿಎಂಎ (MDMA) ಮಾದಕವಸ್ತುವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ವೇಣೂರು ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 40 ಸಾವಿರ ರೂಪಾಯಿ ಮೌಲ್ಯದ ಮಾದಕವಸ್ತು ಹಾಗೂ ಕೃತ್ಯಕ್ಕೆ ಬಳಸಿದ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಮಂಗಳೂರು ತಾಲೂಕಿನ ಪುತ್ತಿಗೆ ಗ್ರಾಮದ ಹಂಡೇಲು ನಿವಾಸಿ ತನ್ವೀರ್ (27) ಹಾಗೂ ಮೂಡಬಿದಿರೆಯ ಕಲ್ಲಬೆಟ್ಟು ನಿವಾಸಿ ಮುಹಮ್ಮದ್ ಸಲ್ವಾನ್ (22) ಎಂದು ಗುರುತಿಸಲಾಗಿದೆ. ಪ್ರಕರಣದ ಮೂರನೇ ಆರೋಪಿ, ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ಹಂಝತ್ ಕರಾರ್ ಎಂಬಾತ ಸದ್ಯ ತಲೆಮರೆಸಿಕೊಂಡಿದ್ದಾನೆ. ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ ಅವರಿಗೆ ಮೇ 27 ರಂದು ಮಾದಕವಸ್ತು ಸಾಗಾಟದ ಕುರಿತು ಖಚಿತ ಮಾಹಿತಿ ದೊರೆತಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಿಎಸ್‌ಐ ಹಾಗೂ ಸಿಬ್ಬಂದಿ ತಂಡ, ಗುರುವಾಯನಕೆರೆ–ಮೂಡಬಿದಿರೆ ರಸ್ತೆಯ ಕಂಬಳದಡ್ಡ ಎಂಬಲ್ಲಿ ನಾಖಾಬಂದಿ (ರಸ್ತೆ ತಡೆ) ಹಾಕಿ ವಾಹನ ತಪಾಸಣೆ ಆರಂಭಿಸಿದರು. ಈ ವೇಳೆ ಅನುಮಾನಾಸ್ಪದವಾಗಿ…

Read More

ಬಂಟ್ವಾಳ: ಇಂಟರ್‌ಲಾಕ್ ಬ್ಲಾಕ್‌ಗಳನ್ನು ಸಾಗಿಸುತ್ತಿದ್ದ ಸರಕು ಲಾರಿಯೊಂದು ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ನಂತರ ಪಲ್ಟಿಯಾದ ಘಟನೆ ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕೊಪ್ಪಲದಲ್ಲಿ ನಡೆದಿದೆ. ಬಿ.ಸಿ. ರೋಡ್‌ -ಪೊಳಲಿ ರಸ್ತೆಯಲ್ಲಿ ರಾತ್ರಿ ವೇಳೆ ಈ ಘಟನೆ ಸಂಭವಿಸಿದ್ದು, ಇಂಟರ್‌ಲಾಕ್ ಬ್ಲಾಕ್‌ಗಳನ್ನು ತುಂಬಿದ್ದ ಸರಕು ಲಾರಿ ಬಿ.ಸಿ. ರೋಡ್‌ ರಸ್ತೆ ಕಡೆಯಿಂದ ಚಲಿಸುತ್ತಿದ್ದಾಗ ಜೆಫ್ರಿ ಫೆರ್ನಾಂಡಿಸ್ ಅವರ ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.ಲಾರಿಯಲ್ಲಿ ತುಂಬಿದ್ದ ಇಂಟರ್‌ಲಾಕ್ ಸಿಮೆಂಟ್ ಬ್ಲಾಕ್‌ಗಳು ಮನೆಯ ಛಾವಣಿ ಮತ್ತು ಅಂಗಳಕ್ಕೆ ಬಿದ್ದ ಪರಿಣಾಮ, ಮನೆಯ ಗೋಡೆ, ಕಿಟಕಿಗಳು, ಬಾಗಿಲುಗಳು, ಕಾಂಪೌಂಡ್, ಕಬ್ಬಿಣದ ಗೇಟ್, ಲೈಟ್ ಕಂಬ, ಮರದ ಛಾವಣಿಯ ರಾಫ್ಟ್ರ್‌ಗಳು, ಟೈಲ್ಸ್, ಡಿಟಿಎಚ್ ಆಂಟೆನಾ, ನೀರಿನ ಪೈಪ್ ಮತ್ತು ಅಡುಗೆಮನೆ ಶೀಟ್‌ಗೆ ಹಾನಿಯಾಗಿದೆ.ಸುಮಾರು 2.50 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅಪಘಾತದಲ್ಲಿ ಲಾರಿ ಕೂಡ ಹಾನಿಗೊಳಗಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬಂಟ್ವಾಳ: ಬಂಟ್ವಾಳ ಪಟ್ಟಣ ಪೊಲೀಸರು ಸಜಿಪಮೂಡ ಗ್ರಾಮದ ಪಂಜಾಜೆಯಲ್ಲಿ ಅಕ್ರಮ ಗೋಹತ್ಯೆ ಜಾಲವನ್ನು ಭೇದಿಸಿ, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಆರು ಜೀವಂತ ದನಗಳು, ಕೊಂದ ಮಾಂಸ, ಒಂದು ಕಾರು ಮತ್ತು ಚಟುವಟಿಕೆಗೆ ಬಳಸಲಾಗಿದೆ ಎನ್ನಲಾದ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.ಆರೋಪಿಗಳಾದ ಬಂಟ್ವಾಳ ಸಜಿಪಮೂಡ ನಿವಾಸಿ ಮುಸ್ತಾಪ (33) ಹಾಗೂ ಬಂಟ್ವಾಳ ಬಿ ಕಸಬಾ ನಿವಾಸಿ ಮಹಮ್ಮದ್‌ ಸಾದೀಕ್‌ (30) ಎಂದು ಗುರುತಿಸಲಾಗಿದೆ.ಬಂಟ್ವಾಳ ಪಟ್ಟಣ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸಂದೀಪ್ ಕುಮಾರ್ ಶೆಟ್ಟಿಗಾರ್ ಅವರಿಗೆ ಅಕ್ರಮವಾಗಿ ಗೋಹತ್ಯೆ ನಡೆಯುತ್ತಿರುವ ಬಗ್ಗೆ ವಿಶ್ವಾಸಾರ್ಹ ಮಾಹಿತಿ ದೊರೆತ ನಂತರ ಮೇ 27 ರ ರಾತ್ರಿ ದಾಳಿ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.ಖಚಿತ ಸುಳಿವಿನ ಮೇರೆಗೆ ಕ್ಷಿಪ್ರವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ, ಪೊಲೀಸ್ ಸಿಬ್ಬಂದಿಯೊಂದಿಗೆ ಸಜಿಪಮೂಡ ಗ್ರಾಮದ ಪಂಜಾಜೆಯಲ್ಲಿರುವ ಆವರಣದ ಮೇಲೆ ದಾಳಿ ನಡೆಸಿದರು. ತಪಾಸಣೆಯ ಸಮಯದಲ್ಲಿ, ಮನೆಯ ಹಿಂದೆ ಇರುವ ಶೆಡ್‌ನಲ್ಲಿ ಮಾಂಸವನ್ನು ಕತ್ತರಿಸುತ್ತಿರುವುದು ಅಧಿಕಾರಿಗಳಿಗೆ ಕಂಡುಬಂದಿದೆ ಎಂದು ವರದಿಯಾಗಿದೆ.ವಿಚಾರಣೆಯ ಸಮಯದಲ್ಲಿ, ಆರೋಪಿಗಳು ಅಗತ್ಯವಿರುವ ಪರವಾನಗಿ ಅಥವಾ…

Read More

ಧರ್ಮಸ್ಥಳ : ಇಲ್ಲಿನ ಪ್ರಸಿದ್ಧ ಕ್ಷೇತ್ರ ಧರ್ಮಸ್ಥಳದ ದೇವಸ್ಥಾನದ ಮುಖ್ಯದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ವೃದ್ಧೆಯೊಬ್ಬರಿಗೆ ಮತ್ತು ಬರಿಸುವ ಪಾನೀಯ ನೀಡಿ ಅಸ್ವಸ್ಥಗೊಳಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ ಘಟನೆ ಮೇ 25 ರಂದು ರಾತ್ರಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ನಿವಾಸಿ ಶ್ರೀಮತಿ ಪ್ರೇಮಾ ಕೆ (70) ಎಂಬುವರೇ ದರೋಡೆಗೊಳಗಾದ ದುರ್ದೈವಿ. ಇವರಿಂದ 112 ಗ್ರಾಂ ತೂಕದ ಚಿನ್ನದ ಆಭರಣಗಳು ಮತ್ತು 7,000/- ರೂಪಾಯಿ ನಗದನ್ನು ಕಳವು ಮಾಡಲಾಗಿದ್ದು, ಕಳವಾದ ಸೊತ್ತುಗಳ ಒಟ್ಟು ಮೌಲ್ಯ ಸುಮಾರು 10,00,700/- ರೂಪಾಯಿ ಎಂದು ಅಂದಾಜಿಸಲಾಗಿದೆ. ಘಟನೆಯ ವಿವರ:ದಿನಾಂಕ 25-05-2026 ರಂದು ಮಧ್ಯಾಹ್ನ ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದ ಪ್ರೇಮಾ ಅವರು ದೇವರ ದರ್ಶನ ಮುಗಿಸಿದ್ದರು. ರಾತ್ರಿ ವಾಪಾಸು ಬೆಂಗಳೂರಿಗೆ ಹೋಗುವ ಸಲುವಾಗಿ ದೇವಸ್ಥಾನದ ಮುಖ್ಯದ್ವಾರದ ಮುಂಭಾಗದಲ್ಲಿರುವ ಬಸ್‌ ನಿಲ್ದಾಣಕ್ಕೆ ಬಂದು ಬಸ್ಸಿಗಾಗಿ ಕಾಯುತ್ತಾ ಕುಳಿತಿದ್ದರು. ಈ ವೇಳೆ ಅವರ ಬಳಿ…

Read More

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಮೂಲಕ ಅಧಿಕಾರದಿಂದ ಕೆಳಗೆ ಇಳಿದಿದ್ದಾರೆ. ರಾಜ್ಯಪಾಲರು ಪ್ರಸ್ತುತ ರಾಜಧಾನಿಯಲ್ಲಿ ಇಲ್ಲದ ಕಾರಣ, ಅವರ ಅನುಪಸ್ಥಿತಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಹಸ್ತಾಂತರಿಸಿದರು. ರಾಜೀನಾಮೆ ಪತ್ರವನ್ನು ಕಾರ್ಯದರ್ಶಿಗಳು ಸ್ವೀಕರಿಸಿದ್ದರೂ, ಸಂವಿಧಾನದ ನಿಯಮಾವಳಿಗಳ ಪ್ರಕಾರ ರಾಜ್ಯಪಾಲರು ಖುದ್ದಾಗಿ ಸಹಿ ಮಾಡಿದ ಬಳಿಕವೇ ರಾಜೀನಾಮೆ ಅಧಿಕೃತವಾಗಿ ಅಂಗೀಕಾರವಾಗಲಿದೆ. ಮೂಲಗಳ ಪ್ರಕಾರ ರಾಜ್ಯಪಾಲರು ನಾಳೆ ಬೆಂಗಳೂರಿಗೆ ಮರಳುವ ಸಾಧ್ಯತೆಯಿದೆ. ಹೀಗಾಗಿ ರಾಜ್ಯಪಾಲರು ಮರಳಿದ ಬಳಿಕವಷ್ಟೇ ರಾಜೀನಾಮೆ ಅಂಗೀಕಾರದ ಔಪಚಾರಿಕ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ. ಈ ಮೂಲಕ ಐದು ದಶಕಗಳ ಸುದೀರ್ಘ ರಾಜಕೀಯ ಚರಿತ್ರೆಯ ದಣಿವರಿಯದ ಹೋರಾಟಗಾರ ಸಿದ್ದರಾಮಯ್ಯ ಅವರ ಎರಡನೇ ಅವಧಿಯ ಮುಖ್ಯಮಂತ್ರಿ ಆಡಳಿತ ಅಂತ್ಯ ಕಂಡಿದೆ.

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮತ್ತು ಚರ್ಚೆಗಳಿಗೆ ಕಾರಣವಾಗಿದ್ದ ರಾಜಕೀಯ ಬೆಳವಣಿಗೆಗಳು ಇದೀಗ ಅಂತಿಮ ಹಂತಕ್ಕೆ ತಲುಪಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ತಮ್ಮ ಕಾವೇರಿ ನಿವಾಸದಲ್ಲಿ ಹಮ್ಮಿಕೊಂಡಿದ್ದ ಸಚಿವರ ಮಹತ್ವದ ‘ಬ್ರೇಕ್ ಫಾಸ್ಟ್’ (ಉಪಾಹಾರ) ಸಭೆಯಲ್ಲಿ ತಾವೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ಈ ದಿಢೀರ್ ಬೆಳವಣಿಗೆಯು ರಾಜ್ಯ ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಕಾವೇರಿ ನಿವಾಸದಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದ ಸಹೋದ್ಯೋಗಿಗಳೊಂದಿಗೆ ಪ್ರಸಕ್ತ ರಾಜಕೀಯ ಪರಿಸ್ಥಿತಿಯ ಕುರಿತು ಸುದೀರ್ಘವಾಗಿ ಚರ್ಚಿಸಿದರು. ಆ ಬಳಿಕ ಸಿಎಂ ತಮ್ಮ ನಿರ್ಧಾರವನ್ನು ಪ್ರಕಟಿಸಿದ್ದು, “ನಾನು ನನ್ನ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ” ಎಂದು ಸಚಿವರಿಗೆ ತಿಳಿಸಿದರು. ಸಿಎಂ ಅವರ ಈ ದಿಢೀರ್ ನಿರ್ಧಾರದಿಂದ ಸಭೆಯಲ್ಲಿದ್ದ ಹಲವು ಸಚಿವರು ಅಚ್ಚರಿ ಮತ್ತು ಆಘಾತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,…

Read More

ಮೊಹಮ್ಮದ್ ಅಶ್ರಫ್ @ ಅಜ್ಜು @ ನಿಜಾಮ್ @ ಅಡ್ಡು @ ಸಮೀರ್, ಮಾವಿನಕಟ್ಟೆ, ಅಜಿಲಮೊಗರು, ಬೆಳ್ತಂಗಡಿ. ಎಂಬಾತ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ “ಬಿ” ರೌಡಿ ಶೀಟರ್ ಆಗಿದ್ದು, ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ದ ಹಲವು ಪ್ರಕರಣಗಳು ದಾಖಲಾಗಿದೆ. ಆರೋಪಿತನು ಪ್ರಕರಣಕ್ಕೆ ಸಂಬಂದಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು ಈತನಿಗೆ ವಾರೆಂಟ್ ಜಾರಿಗೊಳಿಸಿತ್ತು. ಈತನ ವಿರುದ್ದ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಅ.ಕ್ರ.ಸಂ: 136/2018, ಅ.ಕ್ರ.ಸಂ: 119/2024, ಅ.ಕ್ರ.ಸಂ: 130/2024, ಅ.ಕ್ರ.ಸಂ: 119/2024 ರಂತೆ ನಾಲ್ಕು ಪ್ರಕರಗಳು ದಾಖಲಾಗಿ, ಎಲ್ ಪಿ ಸಿ ವಾರಂಟ್ ಜಾರಿಯಾಗಿತ್ತು. ಈತನ ವಿರುದ್ದ ಉಪ್ಪಿನಂಗಡಿ ಪೊಲೀಸ್ ಠಾಣಾ ಅ.ಕ್ರ,ಸಂ: 232/2017ರ ಪ್ರಕರಣದಲ್ಲಿಯೂ ನ್ಯಾಯಾಲಯವು ವಾರೆಂಟ್ ಹೊರಡಿಸಿರುತ್ತದೆ. ಸುರತ್ಕಲ್ ಪೊಲೀಸ್ ಠಾಣಾ ಅ.ಕ್ರ.ಸಂ: 63/2025 ಈ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದನು. ಸುಮಾರು ಎರಡು ವರ್ಷಗಳಿಂದ ಈತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ದಿನಾಂಕ 26-05-2026 ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ಅಧಿಕಾರಿಗಳು ಮತ್ತು…

Read More

ಮಂಗಳೂರು: ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾತ್ರಿ ಬೀಟ್ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳಕ್ಕೆ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮೇ 24ರಂದು ಬೆಳಗಿನ ಜಾವ ಸುಮಾರು 2:10 ಗಂಟೆಗೆ ಕೋಡಿಕಲ್‌ನ ನಾರಾಯಣಗುರು ಸಮುದಾಯ ಭವನ ರಸ್ತೆಯ ಎದುರು ಬೀಟ್ ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಕೆಂಪು ಬಣ್ಣದ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಬಂದ ಇಬ್ಬರು ಯುವಕರು ಹಲ್ಲೆ ನಡೆಸಿದ್ದರು. ಸ್ಕೂಟರ್‌ನ ಹಿಂಬದಿ ಸವಾರ ಸಿಮೆಂಟ್ ಶೀಟ್ ತುಂಡಿನಿಂದ ಪೊಲೀಸ್ ಸಿಬ್ಬಂದಿಯ ತಲೆಗೆ ಹೊಡೆದ ಪರಿಣಾಮ ಗಾಯವಾಗಿದ್ದು, ಘಟನೆಗೆ ಸಂಬಂಧಿಸಿ ಉರ್ವ ಪೊಲೀಸ್ ಠಾಣೆಯಲ್ಲಿ ಅ.ಕ್ರ 57/2026 ಕಲಂ 121(1), 109, 132, 3(5) ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಸಿಸಿಬಿ ಪೊಲೀಸರು ಖಚಿತ ಮಾಹಿತಿಯ ಆಧಾರದಲ್ಲಿ ಆರೋಪಿಗಳನ್ನು ಕೇರಳ ರಾಜ್ಯದ ಕಾಂಞಿಗಾಡ್ ಪ್ರದೇಶದಲ್ಲಿ ಮೇ 26ರಂದು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಗಳನ್ನು ಮುಂದಿನ ಕ್ರಮಕ್ಕಾಗಿ ಉರ್ವ ಪೊಲೀಸ್…

Read More