Author: main-admin

ಬೆಂಗಳೂರು : ಬೆಂಗಳೂರಲ್ಲಿ ಸ್ಫೋಟಕ್ಕೆ ಸಂಚಿಸಿದ ಐವರು ಶಂಕಿತ ಉಗ್ರರ ಪ್ರಕರಣವನ್ನು ಸಿಸಿಬಿಯು ಎನ್‌ಐಎಗೆ ಪ್ರಕರಣವನ್ನು ವರ್ಗಾಯಿಸಿದೆ.ಪ್ರಕರಣ ಸಂಬಂಧ ಎನ್​​ಐಎ ಅಧಿಕಾರಿಗಳು ಎಫ್​ಐಆರ್​ (FIR) ದಾಖಲಿಸಿಕೊಂಡಿದ್ದಾರೆ. ಸುಹೇಲ್ ಅಹಮದ್, ಜಾಹೀದ್ ತಬ್ರೇಜ್, ಮುದಾಸೀರ್ ಪಾಷಾ, ಮಹಮ್ಮದ್ ಫೈಜಲ್ ರಬ್ಬಾನಿ ಮತ್ತು ಮಹಮ್ಮದ್ ಉಮರ್‌ ಬಂಧಿತ ಶಂಕಿತ ಉಗ್ರರು. ಸದ್ಯ ಎನ್​ಐಎ ಅಧಿಕಾರಿಗಳು ಸಿಸಿಬಿ ಬಂಧಿಸಿದ್ದ ಆರೋಪಿಗಳನ್ನು ತಮ್ಮ ವಶಕ್ಕೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ. ಈ ಐವರು ಶಂಕಿತ ಉಗ್ರರು ಬೆಂಗಳೂರು ನಗರದಲ್ಲಿ ಸರಣಿ ಸ್ಫೋಟಕ್ಕೆ ಸಂಚಿರೂಪಿಸಿದ್ದರು ಅಲ್ಲದೆ ಇವರು ಗ್ರೈನೆಡ್ ಸೇರಿದಂತೆ ಸ್ಫೋಟಕ ವಸ್ತುಗಳನ್ನು ಸಹ ಸಂಗ್ರಹಿಸಿದ್ದರು.ಇದಕ್ಕೆ ಜೈಲಿನಲ್ಲಿ ಇದ್ದುಕೊಂಡೇ ಉಗ್ರ ಜುನೈದ್ ಇವರಿಗೆ ಮಾರ್ಗದರ್ಶನ ನೀಡುತ್ತಿದ್ದ ಎನ್ನಲಾಗುತ್ತಿತ್ತು. ಆರೋಪಿಗಳು ಸುಲ್ತಾನ್​ ಪಾಳ್ಯದ ಪ್ರಾರ್ಥನಾ ಸ್ಥಳ ಮತ್ತು ಆರ್​.ಟಿ ನಗರದ ಕನಕ ಬಡಾವಣೆಯ ಸೈಯದ್​ ಸುಹೇಲ್​ ಬಾಡಿಗೆ ಮನೆಯಲ್ಲಿ ಸಭೆ ಸೇರಿ ಉಗ್ರ ಚಟುವಟಿಕೆ ಹಾಗೂ ಸ್ಫೋಟ ನಡೆಸುವುದಕ್ಕೆ ಸಂಬಂಧಿಸಿದಂತೆ ಆರೋಪಿಗಳು ಚರ್ಚೆ ನಡೆಸಿದ್ದರು. ಈ ಮಾಹಿತಿ ತಿಳಿದ ಸಿಸಿಬಿ ಪೊಲೀಸರು,…

Read More

ಬೆಳ್ತಂಗಡಿ : ಫೇಸ್ಬುಕ್ ಮೂಲಕ ಪರಿಚಯವಾದ ಮಹಿಳೆಯ ಮಾತು ನಂಬಿ ವ್ಯಕ್ತಿಯೋರ್ವ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡ ಘಟನೆ ಉಜಿರೆ ಸಮೀಪ ಗುರಿಪಳ್ಳದಲ್ಲಿ ಸಂಭವಿಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯ ನಿವಾಸಿ ಸತೀಶ್ ಗೌಡ ಹಣ ಕಳೆದುಕೊಂಡ ವ್ಯಕ್ತಿ. ಇವರು ವಿದೇಶದಲ್ಲಿ ಕೆಲಸ ಮಾಡಿಕೊಂಡಿದ್ದು, ಈ ಸಂದರ್ಭದಲ್ಲಿ ಫೇಸ್‌ಬುಕ್ ಮೂಲಕ ಮಹಿಳೆಯೊಬ್ಬರ ಪರಿಚಯವಾಗಿದ್ದು, ಚಾಟಿಂಗ್ ಮೂಲಕ ಅವರ ವಿಶ್ವಾಸ ಗಳಿಸಿ ವಿವಿಧ ಕಾರಣಗಳನ್ನು ನೀಡಿ ಬೇರೆ ಬೇರೆ ಖಾತೆಗಳಿಗೆ ಒಟ್ಟು 6,96,500 ರೂ. ಹಣ ವರ್ಗಾಯಿಸಿಕೊಂಡು ಬಳಿಕ ವಂಚಿಸಿರುವುದಾಗಿ ದ.ಕ. ಜಿಲ್ಲಾ ಸೈಬರ್ ಕೈಂ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಉಡುಪಿ: ಕುಂಜಿಬೆಟ್ಟುವಿನಲ್ಲಿ ನಡೆದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿ, ಲಕ್ಷಾಂತರ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಗಳೂರು ಉತ್ತರಹಳ್ಳಿಯ ಮಂಜುನಾಥ್ ಯಾನೆ ಕಲ್ಕೆರೆ ಮಂಜ (43) ಬಂಧಿತ ಆರೋಪಿ. ಈತ ಅ.8ರಂದು ಕುಂಜಿಬೆಟ್ಟುವಿನ ಅಮ್ಮುಂಜೆ ವಿಠಲ್ದಾಸ್ ನಾಯಕ್ ಅವರ ಮನೆಯ ಬಾಗಿಲು ಮುರಿದು, ಬೆಡ್ ರೂಮ್ ನ ಅಲ್ಮೇರಾದಲ್ಲಿದ್ದ ಸುಮಾರು 66,36,300 ರೂ. ಮೌಲ್ಯದ ಅಂದಾಜು 1882 ಗ್ರಾಂ ತೂಕದ ಚಿನ್ನಾಭರಣ ಹಾಗೂ 6,70,500 ರೂ. ಮೌಲ್ಯದ 7,450 ಗ್ರಾಂ ತೂಕದ ಬೆಳ್ಳಿಯ ಸೊತ್ತುಗಳು ಸಹಿತ ಒಟ್ಟು 73,06,800 ಮೌಲ್ಯದ ಸೊತ್ತುಗಳನ್ನು ಕಳವು ಮಾಡಿಕೊಂಡು ಹೋಗಿದ್ದನು. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆಗಾಗಿ ಪಿಎಸ್ ಐ ಪುನೀತ್ ಕುಮಾರ್ ಬಿ.ಇ. ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಕಾರ್ಯಾಚರಣೆಗೆ ಇಳಿದ ಪೊಲೀಸರು ಅ.31ರಂದು ಉಡುಪಿ ಬಲಾಯಿಪಾದೆಯ ಜಂಕ್ಷನ್ ಬಳಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಒಟ್ಟು 31,55,930 ರೂ. ಮೌಲ್ಯದ 530.909…

Read More

ಬೆಂಗಳೂರು: 68 ನೇ ಕನ್ನಡ ರಾಜ್ಯೋತ್ಸವ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರಿ ಶಾಲೆಗೆ ಬಂಪರ್ ಗಿಫ್ಟ್ ಘೋಷಣೆ ಮಾಡಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಕುಡಿಯುವ ನೀರು ನೀಡುವುದಾಗಿ ಘೋಷಿಸಿದ್ದಾರೆ. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿಗಳು, ರಾಜ್ಯದ ಜನತೆಯನ್ನುದ್ದೇಶಿಸಿ ಭಾಷಣ ಮಾಡಿದರು. ಕನ್ನಡಿಗರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿಶಾಲಿಗಳನ್ನಾಗಿ ಮಾಡುವ ಜತೆಗೆ ಶಿಕ್ಷಣದ ಗುಣಮಟ್ಟ ಹೆಚ್ಚಿಸುವ, ಕನ್ನಡ ಶಾಲೆಗಳ ಮೂಲಭೂತ ಸವಲತ್ತುಗಳನ್ನು ಹೆಚ್ಚಿಸಲು ನಮ್ಮ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ ಎಂದು ಹೇಳಿದರು. ದೇವರಾಜು ಅರಸು ಅವರು ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರಿಟ್ಟು 50 ವರ್ಷಗಳು ತುಂಬಿವೆ. ಈ ದಿನ ನಾವು ಒಂದು ಪ್ರತಿಜ್ಞೆ ಮಾಡೋಣ. ಕನ್ನಡದಲ್ಲೇ ವ್ಯವಹರಿಸುವ ಪ್ರತಿಜ್ಞೆಯನ್ನು ನಾವು ಮಾಡುವ ಮೂಲಕ ನಮ್ಮ ತಾಯ್ನೆಲದ ಋಣ ತೀರಿಸುವ ಕೆಲಸ ಮಾಡೋಣ. ಇಲ್ಲಿ ವಾಸ ಮಾಡುವ ಪ್ರತಿಯೊಬ್ಬರೂ ಕನ್ನಡದ…

Read More

ಲಕ್ನೋ: ಗುಂಪೊಂದು ಸಬ್‌ ಇನ್ಸ್ ಪೆಕ್ಟರ್‌ ನ್ನು ರಸ್ತೆಯಲ್ಲೇ ಥಳಿಸಿರುವ ಘಟನೆ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ಸೋಮವಾರ(ಅ.31 ರಂದು) ನಡೆದಿದೆ. ಯುಪಿ ಪೊಲೀಸ್‌ನ ಸಬ್-ಇನ್ಸ್‌ಪೆಕ್ಟರ್ (ಎಸ್‌ಐ) ರಾಮ್ ಅವತಾರ್ ಅವರಿಗೆ ಗುಂಪೊಂದು ಥಳಿಸಿರುವ ಘಟನೆಯ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿದೆ. ಘಟನೆ ಹಿನ್ನೆಲೆ: ಮಹೋಬಾದ ಪನ್ವಾರಿ ಪ್ರದೇಶದಲ್ಲಿ 13 ವರ್ಷದ ಬಾಲಕ ಬಸ್ಸಿನಡಿ ಸಿಲುಕಿ ಸಾವನ್ನಪ್ಪಿದ್ದ. ಇದಕ್ಕೆ ಸಂಬಂಧಿಸಿ ಮೃತನ ಬಾಲಕನ ಸಂಬಂಧಿಗಳು ಹಾಗೂ ಕೆಲ ಸ್ಥಳೀಯರು ರಸ್ತೆಯಲ್ಲಿ ನಿಂತು ಚಾಲಕನ ವಿರುದ್ಧ ಕ್ರಮಕ್ಕೆ ಹಾಗೂ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಯ ಕಾರಣದಿಂದ ರಸ್ತೆಯಲ್ಲಿ ಸಂಚಾರ ದಟ್ಟನೆ ಉಂಟಾಗಿತ್ತು. ಇದರಿಂದ ಟ್ರಾಫಿಕ್‌ ಕ್ಲಿಯರ್‌ ಮಾಡಲು ಸ್ಥಳಕ್ಕೆ ಸಬ್-ಇನ್ಸ್‌ಪೆಕ್ಟರ್ ರಾಮ್ ಅವತಾರ್ ತನ್ನ ತಂಡದೊಂದಿಗೆ ಆಗಮಿಸಿದ್ದರು. ಈ ವೇಳೆ ಎಸ್‌ ಐ ಹಾಗೂ ಮೃತ ಬಾಲಕನ ಸಂಬಂಧಿಕರ ನಡುವ ಮಾತಿನ ಚಕಮಕಿ ಉಂಟಾಗಿದ್ದು, ಮೊದಲೇ ಸಿಟ್ಟಾಲಿದ್ದ ಜನ ಸಬ್-ಇನ್ಸ್‌ಪೆಕ್ಟರ್ ರಾಮ್ ಅವತಾರ್ ಅವರ ಮೇಲೆ ಹಲ್ಲೆ ಮಾಡಲು ಶುರು ಮಾಡಿದ್ದಾರೆ. ರಾಮ್‌…

Read More

ನವದೆಹಲಿ : ನವೆಂಬರ್ ತಿಂಗಳ ಮೊದಲ ದಿನವೇ ಜನತೆಗೆ ಬಿಗ್ ಶಾಕ್, ಎಲ್ ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 103 ರೂ. ಏರಿಕೆ ಮಾಡಲಾಗಿದೆ. ಇಂದು, 19 ಕೆಜಿ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 103 ರೂ. ಹೆಚ್ಚಿಸಲಾಗಿದೆ. ದೆಹಲಿಯಲ್ಲಿ ಇಂದಿನಿಂದ 19 ಕೆಜಿ ಎಲ್ಪಿಜಿ ಸಿಲಿಂಡರ್ 1833 ರೂ.ಗೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ 1943.00 ರೂ., ಮುಂಬೈನಲ್ಲಿ 1785.50 ರೂ., ಚೆನ್ನೈನಲ್ಲಿ 1999.50 ರೂ. 32 ದಿನಗಳಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆ 310 ರೂ. ಅಕ್ಟೋಬರ್ 1 ರಂದು ವಾಣಿಜ್ಯ ಸಿಲಿಂಡರ್ಗಳ ಬೆಲೆಯನ್ನು ಸುಮಾರು 209 ರೂ.ಗೆ ಹೆಚ್ಚಿಸಲಾಯಿತು. ಅಂದರೆ, ಒಂದು ತಿಂಗಳಲ್ಲಿ, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಗಳ ಬೆಲೆ 310 ರೂ. ಹೆಚ್ಚಳವಾಗಿದೆ. ಕಳೆದ ತಿಂಗಳು ಕೋಲ್ಕತ್ತಾದಲ್ಲಿ ಬೆಲೆ 203.50 ರೂ., ಈ ತಿಂಗಳು 103.50 ರೂ. 31 ದಿನಗಳಲ್ಲಿ ಸಿಲಿಂಡರ್ ಬೆಲೆ 307 ರೂ.ಗಳಷ್ಟು ದುಬಾರಿಯಾಗಿದೆ. ಮುಂಬೈನಲ್ಲಿ ಇಂದು ಅದು 101.50 ರೂ. ಒಂದು ತಿಂಗಳಲ್ಲಿ ಸಿಲಿಂಡರ್…

Read More

ಮಂಜೆಶ್ವರ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಸಂಬಂಧ ಚುನಾವಣಾ ಕರ್ತವ್ಯದಲ್ಲಿದ್ದ ಉಪತಹಶೀಲ್ದಾರ್‌ಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಸಹಿತ ನಾಲ್ವರಿಗೆ ಕಾಸರಗೋಡು ಜ್ಯುಡೀಶಿಯಲ್ ಪ್ರಥಮ ದರ್ಜೆ ನ್ಯಾಯಾಲಯವು ಒಂದು ವರ್ಷ ಜೈಲು ಶಿಕ್ಷೆ ಮತ್ತು 20,000 ರೂ. ದಂಡ ವಿಧಿಸಿ ಆದೇಶ ನೀಡಿದೆ.ಜೊತೆಗೆ ಮೂರು ತಿಂಗಳ ಜೈಲು ಶಿಕ್ಷೆಯನ್ನು ವಿಧಿಸಿದ್ದೂ, ಶಿಕ್ಷೆಯನ್ನು ಏಕಕಾಲದಲ್ಲಿ ಅನುಭವಿಸಲು ನ್ಯಾ. ಅಬ್ದುಲ್ ಬಾಸಿತ್ ಆದೇಶಿಸಿದ್ದಾರೆ. ಬಶೀರ್, ಅಬ್ದುಲ್ ಖಾದರ್ ಮತ್ತು ಅಬ್ದುಲ್ಲಾ ಶಿಕ್ಷೆಗೊಳಗಾದ ಇತರರು. ಪ್ರಕಣವೇನು: ಘಟನೆ ನಡೆದಿರುವುದು 2010ರಲ್ಲಿ‌. ತಾಂತ್ರಿಕ ಕಾರಣದಿಂದ ಮತದಾರರೋರ್ವರ ಹೆಸರು ಪಟ್ಟಿಗೆ ಸೇರ್ಪಡೆಗೊಳಿಸದೇ ಪೆಂಡಿಂಗ್ ಇಡಲಾಗಿತ್ತು. ಈ ವಿಚಾರವಾಗಿ ಅಂದು ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದ ಎಕೆಎಂ ಅಶ್ರಫ್ ಮತ್ತು ಇತರ ಮೂವರು ಮಂಜೇಶ್ವರ ಬ್ಲಾಕ್ ಪಂಚಾಯತ್ ಕಚೇರಿಯಲ್ಲಿ ಚುನಾವಣಾ ಕರ್ತವ್ಯದಲ್ಲಿ ಇದ್ದ ಉಪ ತಹಶೀಲ್ದಾರ್ ದಾಮೋದರನ್ ಅವರನ್ನು ಪ್ರಶ್ನಿಸಿದ್ದರು. ತಾಂತ್ರಕ ಸಮಸ್ಯೆ ಪರಿಹಾರಗೊಂಡ ಬಳಿಕವಷ್ಟೇ ಮತದಾರರ ಪಟ್ಟಿಗೆ ಹೆಸರು ಸೇರಿಸುತ್ತೇನೆ. ಈ ಕುರಿತಾದ ದಾಖಲೆ ಸಲ್ಲಿಸಿ…

Read More

ಪುತ್ತೂರು :  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ 4 ಅಡಿಕೆ ಕಳ್ಳರನ್ನು ಬಂಧಿಸಿದ್ದು ಕಾವು ಕೊಯ್ಲ ನಿವಾಸಿ ಶ್ರವಣ್ ಕೆ, ಜಯಚಂದ್ರ,ಅಶೋಕ, ಪುನೀತ್ ಬಂಧಿತ ಆರೋಪಿಗಳಾಗಿದ್ದಾರೆ. ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿರುವ ನವೀನ ಕುಮಾರ ರೈ ರವರ ಹಳೆಯ ಮನೆಯ ಕೊಟ್ಟಿಗೆಯ ಅಟ್ಟದಲ್ಲಿದ್ದ ಎನ್ ಕೆ ಆರ್ ಎಂದು ಮಾರ್ಕ್ ಮಾಡಿರುವ ಸುಮಾರು 23 ಗೋಣಿ ಸುಲಿಯದ ಅಡಿಕೆಯನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣಾ ಅ ಕ್ರ 105/2023 ಕಲಂ:454, 457, 380 ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು. ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಖಚಿತ ಮಾಹಿತಿ ಮೇರೆಗೆ ಪತ್ತೆ ಹಚ್ಚಿದ್ದು, ಆರೋಪಿಗಳನ್ನು ಬಂದಿಸಿ, ಸುಮಾರು ರೂ 1,55,925/- ಮೌಲ್ಯದ ಅಡಿಕೆ ಹಾಗೂ ಕಳವು ಮಾಡಲು ಉಪಯೋಗಿಸಿದ ಸ್ವಿಪ್ಟ್ ಕಾರು ಮತ್ತು ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿರುತ್ತಾರೆ. ವಶಪಡಿಸಿಕೊಂಡಿರುವ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ರೂ 4,15,925/- ಆಗಿರುತ್ತದೆ.ಈ ಪ್ರಕರಣವನ್ನು…

Read More

ಮಂಗಳೂರು : ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಆನಂದ ಆಳ್ವ ಇಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. 106 ವರ್ಷ ಪ್ರಾಯದ ಆನಂದ ಆಳ್ವ ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರೀಯಾಶೀಲರಾಗಿ ಗುರುತಿಸಿಕೊಂಡಿದ್ದರು. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಮುಂಚೂಣಿಯಲ್ಲಿ ಭಾಗವಹಿಸುವ ಕೆಲವೇ ಮಂದಿಗಳಲ್ಲಿ ಆನಂದ ಆಳ್ವರೂ ಒಬ್ಬರಾಗಿದ್ದಾರೆ. ಮಕ್ಕಳಾದ ಸೀತಾರಾಮ, ಬಾಲಕೃಷ್ಣ, ಡಾ.ಮೋಹನ್ ಆಳ್ವ, ಮೀನಾಕ್ಷಿ ಸೇರಿದಂತೆ ಅಸಂಖ್ಯಾತ ಬಂಧು-ಮಿತ್ರರನ್ನು ಅಗಲಿರುವ ಆನಂದ ಆಳ್ವ ನಿಧನಕ್ಕೆ ಗಣ್ಯರು ಕಂಬನಿ ಮಿಡಿದ್ದಾರೆ. ದೇವಸ್ಥಾನಗಳ ಜೀರ್ಣೋದ್ಧಾರ ಸೇರಿದಂತೆ ಹಲವು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಆನಂದ ಆಳ್ವ ಮೂಡಬಿದಿರೆ ಪರಿಸರದಲ್ಲಿ ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದರು. ಪ್ರಗತಿಪರ ರೈತರೂ ಆಗಿದ್ದ ಆನಂದ ಆಳ್ವ ಕಷ್ಟಗಳಿಗೆ ಯಾವಾಗಲೂ ವಿಚಲಿತರಾಗಿರಲಿಲ್ಲ 1974 ರಲ್ಲಿ ಜಾರಿಗೆ ಬಂದ ಭೂ ನ್ಯಾಯಮಂಡಳಿ ಕಾಯಿದೆಯು ಕೃಷಿ ಕೈಗಳ ತೀವ್ರ ಕೊರತೆಯನ್ನು ಉಂಟುಮಾಡಿತು. ಆ ಸಮಯದಲ್ಲಿ, ಅವರು 15 ಜೋಡಿ…

Read More

ಕಾರ್ಕಳ: ಹಿರಿಯ ಪತ್ರಕರ್ತ ,ಸಾಹಿತಿ ಶೇಖರ್ ಅಜೆಕಾರ್(54) ಅವರಿಂದು ಹೃದಯಾಘಾತದಿಂದ ನಿಧನರಾದರು. ಅವರು 22 ಪುಸ್ತಕಗಳನ್ನು ಬರೆದಿದ್ದಾರೆ. ಮಕ್ಕಳ ಸಾಹಿತ್ಯ ಸಮ್ಮೇಳನಗಳನ್ನು ಸಂಘಟಿಸಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿದ್ದರು. ಶೇಖರ್ ಅವರು ಕುಂದಪ್ರಭ ವಾರಪತ್ರಿಕೆಯಲ್ಲಿ ಬರಹಗಾರರಾಗಿ ತಮ್ಮ ಪ್ರಯಾಣ ಪ್ರಾರಂಭಿಸಿದರು. ಮುಂಬೈನ ‘ಕರ್ನಾಟಕ ಮಲ್ಲ’, ಜನವಾಹಿನಿ, ಡೈಜಿವರ್ಲ್ಡ್, ಕನ್ನಡಪ್ರಭ ಮತ್ತು ಉಷಾ ಕಿರಣಗಳಲ್ಲೂ ಸೇವೆ ಸಲ್ಲಿಸಿದ್ದಾರೆ. 10 ವರ್ಷಗಳ ಕಾಲ ಪತ್ರಕರ್ತರ ವೇದಿಕೆ ಬೆಂಗಳೂರಿನ ಉಡುಪಿ ಶಾಖೆಯ ಉಪಾಧ್ಯಕ್ಷರೂ ಆಗಿದ್ದರು. ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪ್ರಶಸ್ತಿ 2019, ವಿಶ್ವ ದರ್ಶನ ಸಾಹಿತ್ಯ ಪ್ರಶಸ್ತಿ 2019, ಶಿಖಾ ಭಾರತ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಗಾಗಿ 1995 ರಲ್ಲಿ ಪ್ರಶಸ್ತಿ ಲಭಿಸಿದೆ.

Read More