Author: main-admin

ಉಡುಪಿ: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ಅಫೇರ್ಸ್ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು ಶ್ರೀ ಕೃಷ್ಣ ದೇವರ ದರ್ಶನ ಪಡೆದರು.ಮಣಿಪಾಲದಲ್ಲಿ ಆಯೋಜಿಸಲಾಗಿದ್ದ ಪಕ್ಷದ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಮೊದಲು ಕೃಷ್ಣಮಠಕ್ಕೆ ಭೇಟಿ ನೀಡಿ ಬಳಿಕ ಅದಮಾರು ಮಠಕ್ಕೆ ತೆರಳಿದರು. ಅಲ್ಲಿ ಅದಮಾರು ಮಠದ ಶ್ರೀ ವಿಶ್ವ ಪ್ರಿಯ ತೀರ್ಥರೊಂದಿಗೆ ಕೆಲಹೊತ್ತು ಮಾತುಕತೆ ನಡೆಸಿದರು.ಅದಮಾರು ಮಠದ ವತಿಯಿಂದ ಕೇಂದ್ರ ಸಚಿವೆಗೆ ಗೌರವಾರ್ಪಣೆ ಮಾಡಲಾಯಿತು.ದೇವಾಲಯ ಭೇಟಿಯ ಬಳಿಕ ಮಣಿಪಾಲದ ಕಂಟ್ರಿ ಇನ್ ಹೋಟೆಲ್ ನಲ್ಲಿ ಪ್ರಬುದ್ಧರ ಸಭೆಯಲ್ಲಿ ಕೇಂದ್ರ ಸಚಿವರು ಭಾಗಿಯಾದರು.

Read More

ಸುಳ್ಯ : ಜಾಗದ ತಕರಾರಿಗೆ ಸಂಬಂಧಿಸಿದಂತೆ ತಮ್ಮಂದಿರು ಸೇರಿ ಅಣ್ಣನನ್ನು ಇರಿದು ಕೊಲೆಗೈದ ಘಟನೆ ಸುಳ್ಯ ಸಂಪಾಜೆಯ ಸಮೀಪದ ಚೆಂಬು ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಕುದ್ರೆಪಾಯ ನಿವಾಸಿ ಉಸ್ಮಾನ್ ಎಂದು ಗುರುತಿಸಲಾಗಿದೆ. ಸತ್ತಾರ್, ರಫೀಕ್, ಇಸುಬು,ಅಬ್ಬಾಸ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಸುಮಾರು 50 ಎಕ್ರೆ ಜಾಗ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವಿತ್ತು. ಶುಕ್ರವಾರ ಇವರು ಚೆಂಬು ಗ್ರಾಮದ ಕುದ್ರೆಪಾಯದ ಸಮೀಪ ಇರುವ ಜಾಗಕ್ಕೆ ಹೋಗಿದ್ದರು. ಈ ವೇಳೆ ಆಸ್ತಿ ವಿಚಾರದಲ್ಲಿ ಸಹೋದರರ ನಡುವೆ ಮಾತಿಗೆ ಮಾತು ಬೆಳೆದಿದೆ. ತೀವ್ರ ಚರ್ಚೆ ನಡೆದು ಕೋಪದ ತೀವ್ರತೆಯಲ್ಲಿ ಸಹೋದರರು ಸೇರಿ ಚೂರಿಯಿಂದ ಇರಿದು ಉಸ್ಮಾನ್ ನನ್ನು ಹತ್ಯೆ ನಡೆಸಿರುವುದಾಗಿ ತಿಳಿದುಬಂದಿದೆ. ಸಂಪಾಜೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Read More

ಮಂಗಳೂರು: ಆಹಾರ ಸುರಕ್ಷತ ಮತ್ತು ಗುಣಮಟ್ಟ ಪ್ರಾಧಿಕಾರ ಪ್ಯಾಕೆಟ್‌ ರೂಪದಲ್ಲಿ ಮೀನಿನ ಸಂಸ್ಕರಿತ ಉತ್ಪನ್ನಗಳ ಮಾರಾಟಕ್ಕೆ ಪರವಾನಿಗೆ ಕಡ್ಡಾಯ ಮಾಡಲು ಚಿಂತನೆ ನಡೆಸಿದೆ. ಮೀನು ಸಂಸ್ಕರಣೆ ಕುರಿತು ಸಾರ್ವಜನಿಕರ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಪ್ರಾಧಿಕಾರವು ಮೀನು ಸಂಸ್ಕರಣ ಘಟಕಗಳ ಮೇಲೆ ನಿಗಾ ವಹಿಸಲಾರಂಭಿಸಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಒಣಮೀನು ಪ್ಯಾಕೆಟ್‌ ಹಾಗೂ ಬಿಡಿಯಾಗಿ ಮಾರಾಟವಾಗುತ್ತಿದೆ. ಹೀಗೆ ಪ್ಯಾಕ್‌ ಮಾಡಿ ಮಾರಬೇಕಿದ್ದರೆ ಪ್ರಾಧಿಕಾರದಡಿ ನೋಂದಾಯಿಸಿ, ಪರವಾನಿಗೆ ಪಡೆಯುವುದನ್ನು ಕಡ್ಡಾಯಗೊಳಿಸಲಿದೆ. ಬಿಡಿ ಮಾರಾಟಗಾರರಿಂದಲೂ ಮಾದರಿ(ಸ್ಯಾಂಪಲ್‌)ಗಳನ್ನು ಸಂಗ್ರಹಿಸಲಿದ್ದು, ಇದರಲ್ಲಿ ಆರೋಗ್ಯದ ಮೇಲೆ ಪರಿಣಾಮ ಬೀರುವಂತಹ ಅಂಶಗಳು ಕಂಡು ಬಂದರೆ ಮಾರಾಟಗಾರರು ಮತ್ತು ಉತ್ಪನ್ನಕಾರರ ಮೇಲೆ ದಂಡ ವಿಧಿಸುವ ಸಂಭವವಿದೆ. ರಾಜ್ಯದ ವಿವಿಧ ಜಿಲ್ಲೆಗಳು, ಹೊರ ರಾಜ್ಯಗಳಿಗೆ ಮಂಗಳೂರಿನಿಂದ ಒಣ ಮೀನು ಪೂರೈಕೆ ಆಗುತ್ತಿದೆ. ಕೆಲವು ಮೀನುಗಾರ ಕುಟುಂಬ ಗಳೂ ಒಣಮೀನು ಉದ್ಯಮ ನಡೆಸುತ್ತಿವೆ. ಈ ಉದ್ಯಮಗಳು ಮೀನು ಸಂಸ್ಕರಣೆಯಲ್ಲಿ ಎಲ್ಲಿಯೂ ಗುಣಮಟ್ಟ ಹಾಗೂ ಸ್ವತ್ಛತೆ ಕುರಿತು ರಾಜಿ ಮಾಡಿಕೊಳ್ಳದಂತೆ ಪ್ರಾಧಿಕಾರ ಎಚ್ಚರ ವಹಿಸಲಾರಂಭಿಸಿದೆ. ಈ ಕುರಿತು ತಿಳುವಳಿಕೆಯನ್ನೂ…

Read More

ಬೆಂಗಳೂರು : ಇತ್ತೀಚಿಗೆ ರಾಜ್ಯದಲ್ಲಿ ಅಪಾರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಎಸ್‌ಪಿ, ಕಮಿಷನರ್ ಗಳಿಗೆ ಎಡಿಜಿಪಿ ಆರ್ ಹಿತೇಂದ್ರ ಖಡಕ್ ಸೂಚನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿವೆ. ಸಮಾಜದಲ್ಲಿ ಪದೇಪದೇ ಅಪರಾಧ ಎಸಗುತ್ತಿರುವವರು ಹಾಗೂ ಸಾರ್ವಜನಿಕರಲ್ಲಿ ಭಯವನ್ನು ಉಂಟು ಮಾಡುತ್ತಿರುವವರು ಅಂತವರ ಹೆಸರನ್ನು ರೌಡಿಶೀಟರ್ ಪಟ್ಟಿಗೆ ಸೇರಿಸಿ. ಕೆಲ ದಿನಗಳಿಂದ ಅಪರಾಧ ಸಂಖ್ಯೆ ಹೆಚ್ಚಳವಾದ್ದರಿಂದ, ಪೊಲೀಸರ ಕಾರ್ಯವೈಖರಿ ಬಗ್ಗೆ ಅಸಮಾಧಾನ ಹಿನ್ನೆಲೆ ರಾಜ್ಯದ ಎಲ್ಲ ಎಸ್. ಪಿ ಹಾಗೂ ಕಮಿಷನರ್ ಗಳಿಗೆ ಎಡಿಜಿಪಿ ಖಡಕ್ ಸೂಚನೆ ನೀಡಿದ್ದಾರೆ.

Read More

ಮಂಗಳೂರು: ಬಾಡಿಗೆಗೆ ಕಾರು ಪಡೆದು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ತಾಲೂಕಿನ ವಗ್ಗ ನಿವಾಸಿ ಹರೀಶ್‌ ಯಾನೆ ಹರಿ (32) ಎಂಬಾತನನ್ನು ನಗರದ ಬಂದರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ನಗರದ ಫಳ್ನೀರ್ ಸಂಸ್ಥೆಯೊಂದರಿಂದ ಬಂಟ್ವಾಳದ ಯಕ್ಷಿತ್ ಎಂಬವರ ಕಾರನ್ನು ಆನ್‌ಲೈನ್ ಮೂಲಕ ಕಾಯ್ದಿರಿಸಿ, 25 ಸಾವಿರ ರೂ. ಆನ್‌ಲೈನ್ ಮೂಲಕ ಪಾವತಿಸಿದ್ದಾರೆ. ಬಾಕಿ 50 ಸಾವಿರ ರೂ. ನಗದು ನೀಡಿ ಅದರೊಂದಿಗೆ ಆಧಾರ್ ಕಾರ್ಡ್, ಚಾಲನಾ ಪರವಾನಿಗೆ ಮತ್ತು 3 ಬ್ಯಾಂಕ್‌ ಚೆಕ್‌ಗಳನ್ನು ನೀಡಿ 15 ದಿನಗಳಿಗೆ ಕಾರು ಬಾಡಿಗೆಗೆ ತೆಗೆದುಕೊಂಡು ಹೋಗಿದ್ದಎಂದುಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಲಾಗಿತ್ತು. ಬುಕ್ಕಿಂಗ್ ಅವಧಿ ಮುಗಿದಿದ್ದರೂ ಕಾರನ್ನು ಹಿಂತಿರುಗಿಸದ ಕಾರಣ ಸಂಸ್ಥೆಯ ಮಾಲಕ ಮುಹಮ್ಮದ್ ಹುಸೈನಾ‌ರ್ ಕರೆ ಮಾಡಿದಾಗ ಆರೋಪಿಗಳು ಸ್ಪಂದಿಸಿರಲಿಲ್ಲ. ಜಿಪಿಎಸ್‌ ಮೂಲಕ ಪರಿಶೀಲಿಸಿದಾಗ ಕಾರು ವಿಜಯಪುರದಲ್ಲಿರುವುದು ಕಂಡು ಬಂದಿದೆ. ಯಕ್ಷಿತ್ ಮತ್ತು ಹರೀಶ್ ಎಂಬವರು ಆಧಾರ್ ಕಾರ್ಡ್‌ನ್ನು ನಕಲು ಮಾಡಿ ವಿಜಯಪುರದ ವ್ಯಕ್ತಿಯೊಂದಿಗೆ ಮಾರಾಟದ ಒಪ್ಪಂದ ಮಾಡಿ ಕೊಂಡು 7 ಲಕ್ಷ…

Read More

ವಿಟ್ಲ: ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮನೆ ಮೇಲೆ ಬಿದ್ದು, ಗಂಭೀರ ಗಾಯಗೊಂಡ ಮಹಿಳೆ ಮನೆಯೊಳಗೆ ಸಿಲುಕಿ ಹಾಕಿಕೊಂಡ ಘಟನೆ ಪರಿಯಲ್ತಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಕೂರೇಲು ಮದ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿರುವ ಮನೆ ಸಂಪೂರ್ಣ ಹಾನಿಯಾಗಿದೆ. ಘಟನೆಯ ವೇಳೆ ಮನೆಯೊಳಗೆ ಮಹಿಳೆ ಮಲಗಿದ್ದರು ಎನ್ನಲಾಗಿದ್ದು, ಗಂಭೀರ ಪರಿಸ್ಥಿಯಲಿದ್ದಾರೆ ಎಂದು ತಿಳಿದು ಬಂದಿದೆ. ವಾಹನವನ್ನು ತೆರವು ಮಾಡದೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದ್ದು, ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

Read More

ಕೊಣಾಜೆ: ಶಾಲಾ ಪರಿಸರದಲ್ಲಿ ಬಾರ್ ಅಂಡ್ ರೆಸ್ಟೋರೆಂಟ್ ನಡೆಸಲು ಅನುಮತಿ ನೀಡಿದ ಬಾಳೆಪುಣಿ ಗ್ರಾಮ ಪಂಚಾಯತ್ ಕಚೇರಿಗೆ ಶಾಲಾ ವಿದ್ಯಾರ್ಥಿಗಳು ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಮಂಗಳೂರು ತಾಲೂಕಿನ ಕೊಣಾಜೆ ಬಳಿಯ ಬಾಳೆಪುಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಳೆಪುಣಿ ಶಾರದಾ ಗಣಪತಿ ವಿದ್ಯಾಲಯದ ನೂರಾರು ವಿದ್ಯಾರ್ಥಿಗಳ ಕಾನೂನು ಉಲ್ಲಂಘಿಸಿ ಪಂಚಾಯತ್ ಪರವಾನಗಿ ನೀಡಿರುವ ವಿಚಾರವಾಗಿ ಪ್ರತಿಭಟನೆ ನಡೆಸಿದ್ದಾರೆ.

Read More

ಮಂಗಳೂರು: ಮಂಗಳೂರಿನಲ್ಲಿ ಮತ್ತೊಂದು ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ.ತಡರಾತ್ರಿ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗೆ ಕನ್ನ‌ ಹಾಕಿದ ಖದೀಮರು ಮಾರಾಟಕ್ಕೆ ನಿಲ್ಲಿಸಿದ್ದ ಎರಡು ಕಾರು ಸಹಿತ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ವರದಿಯಾಗಿದೆ. ಮಂಗಳೂರು ತಾಲೂಕಿನ ಸುರತ್ಕಲ್ ಹೊಸಬೆಟ್ಟು ಜಂಕ್ಷನ್ ಬಳಿಯಲ್ಲಿ ಈ ಘಟನೆ ನಡೆದಿದ್ದು, ಸಿಸಿ ಟಿವಿ ದೃಶ್ಯಾವಳಿ ಲಭ್ಯವಾಗಿದೆ.ಅಬಿದ್ ಅಹಮ್ಮದ್ ಸುರಲ್ಪಾಡಿ ಎಂಬವರಿಗೆ ಸೇರಿದ್ದ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಕಚೇರಿ ಇದಾಗಿದ್ದು,ತಡರಾತ್ರಿ ಕಚೇರಿಗೆ ಎಂಟ್ರಿ ಕೊಟ್ಟಿದ್ದ ಖದೀಮರ ತಂಡವೊಂದು ಕಚೇರಿ ಮುಂಭಾಗದ ಡೋರಿನ ಗ್ಲಾಸ್ ಮುರಿದು ಒಳ ಪ್ರವೇಶಿಸಿದ್ದಾರೆ. ಕಚೇರಿ ಪೂರ್ತಿ ಹುಡುಕಾಡಿ ಡ್ರಾವರ್ ನಲ್ಲಿದ್ದ ಕಾರುಗಳ ಕೀಯನ್ನು ಪಡೆದು ಕಚೇರಿ ಮುಂಭಾಗ ಮಾರಾಟಕ್ಕೆ ನಿಲ್ಲಿಸಿದ್ದ ಎರಡು ಕಾರುಗಳನ್ನು ಲಪಟಾಯಿಸಿದ್ದಾರೆ.6 ಲಕ್ಷ ಮೌಲ್ಯದ ಸ್ವಿಫ್ಟ್ ಕಾರು ಹಾಗೂ 9 ಲಕ್ಷ ಮೌಲ್ಯದ ಕ್ರೇಟಾ ಕಾರು ಸಮೇತ ಕಚೇರಿಯ ಒಳಗಿದ್ದ ಲ್ಯಾಪ್ ಟಾಪ್, ಪ್ರಿಂಟರ್, ಮೊಬೈಲ್, ಕಾರುಗಳ ದಾಖಲಾತಿ ಪತ್ರಗಳನ್ನು ಕೂಡ ಖದೀಮರು…

Read More

ಮಂಗಳೂರು: ಕಾನೂನು ವಿದ್ಯಾರ್ಥಿನಿಯ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಕೀಲ ಕೆಎಸ್‌ಎನ್ ರಾಜೇಶ್ ವಿರುದ್ಧ ದಾಖಲಾಗಿರುವ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದಂತೆ ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣೆ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ. ಮಂಗಳೂರು ಮಹಿಳಾ ಠಾಣೆಯ ಪೊಲೀಸರು ದಾಖಲಿಸಿದ ಎಫ್‌ಐಆರ್ ಮತ್ತು 3ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣೆ ರದ್ದುಪಡಿಸಲು ಕೋರಿ ವಕೀಲ ಕೆ.ಎಸ್‌.ಎನ್ ರಾಜೇಶ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಿದೆ. ಅತ್ಯಾಚಾರ, ಅತ್ಯಾಚಾರ ಯತ್ನ ಮತ್ತು ಅತ್ಯಾಚಾರಕ್ಕೆ ತಯಾರಿ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ವೇಳೆಯಲ್ಲಿ ಕಂಡು ಬಂದಿದೆ. ತನಿಖಾಧಿಕಾರಿಗಳು ವಶಪಡಿಸಿಕೊಂಡ ಸಿಸಿಟಿವಿ ದೃಶ್ಯಾವಳಿಗಳು, ಆರೋಪಿ ಮತ್ತು ದೂರುದಾರರ ನಡುವೆ ನಡೆದ ಮಾತುಕತೆಯ ವೈಜ್ಞಾನಿಕ ವರದಿಗಳು ಮತ್ತು ಘಟನಾ ಸಂದರ್ಭ ಆರೋಪಿಯ ಉದ್ದೇಶ, ಅತ್ಯಾಚಾರಕ್ಕೆ ಯತ್ನ ಮತ್ತು ಅತ್ಯಾಚಾರ ನಡೆದಿದೆಯೋ ಇಲ್ಲವೋ ಎಂಬ ವಿಷಯಕ್ಕೆ ಸಾಕ್ಷ್ಯ ವಿಚಾರಣೆ ವೇಳೆ ತಿಳಿಯುವುದೆಂದು ಮತ್ತು ನ್ಯಾಯಾಲಯ ಈ ವಿಷಯದಲ್ಲಿ ಮಧ್ಯ ಪ್ರವೇಶಿಸಿದರೆ ಕಾನೂನು ವಿದ್ಯಾರ್ಥಿನಿಯರಿಗೆ…

Read More

ವಿಟ್ಲ: ಆಲ್ಟೊ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಂಗಾಯಿ ಮೈತ್ರೇಯಿ ಗುರುಕುಲದ ಬಳಿ ಈ ಅಪಘಾತ ಸಂಭವಿಸಿದೆ. ಕಡಂಬು ನಿವಾಸಿಗಳಾದ ಸಿನಾನ್ ಮತ್ತು ಫೈಜಲ್ ಬೈಕ್ ಸವಾರರು ಎಂದು ತಿಳಿದು ಬಂದಿದೆ. ವಾಹನಗಳ ಡಿಕ್ಕಿಯ ರಭಸಕ್ಕೆ ಬೈಕ್ ಸವಾರರೊಬ್ಬನ ತಲೆ ಕಾರಿನ ಗಾಜಿಗೆ ತಾಗಿ ಗಾಜು ಪುಡಿಪುಡಿಯಾಗಿ ಗಂಭೀರ ಗಾಯವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕಾರು ಚಾಲಕ ಸುಳ್ಯ ಸಮೀಪದ ಕನಕಮಜಲು ನಿವಾಸಿ ಗೋಪಾಲಕೃಷ್ಣ ಎಂದು ಗುರುತಿಸಲಾಗಿದೆ. ಇವರು ತನ್ನ ಪುತ್ರಿಯನ್ನು ಮುಡಿಪು ನವೋದಯ ವಸತಿ ಶಾಲೆಗೆ ದಾಖಲಿಸಿ ವಾಪಾಸಾಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಸ್ಥಳೀಯ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Read More