Author: main-admin

ಉಡುಪಿ: ಕರಾವಳಿಯ ಪ್ರಸಿದ್ಧ ‘ಆಭರಣ’ ಚಿನ್ನದ ಮಳಿಗೆಗಳ ಮೇಲೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ಪ್ರಸಿದ್ಧ ಚಿನ್ನದ ಮಳಿಗೆ ಇದಾಗಿದ್ದು ಹೊರ ಜಿಲ್ಲೆಗಳಲ್ಲೂ ಚಿನ್ನದ ಮಳಿಗೆಗಳನ್ನು ಹೊಂದಿದೆ.ಇಂದು ಬೆಳಿಗ್ಗೆ ಉಡುಪಿ, ಕಾರ್ಕಳ, ಕುಂದಾಪುರ, ಪುತ್ತೂರು, ಪಡುಬಿದ್ರಿ, ಬ್ರಹ್ಮಾವರ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ.ಏಕಕಾಲದಲ್ಲಿ ಆಭರಣದ ಅನೇಕ ಮಳಿಗೆಗಳಿಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬಂಟ್ವಾಳ: ಗ್ರಾಮ ಪಂಚಾಯತ್ ಗೆ ಯಾವುದೇ ಮಾಹಿತಿ ನೀಡದೆ ಗ್ರಾಮಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿದ್ದಲ್ಲದೆ,ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕಾಗಿ ಎಂಟು ಮಂದಿ ಗ್ರಾಮಪಂಚಾಯತ್ ಸದಸ್ಯರ ಮೇಲೆ ಕಾನೂನು ಕ್ರಮಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊರ್ವರು ದೂರು ನೀಡಿದ ಘಟನೆ ಸಜೀಪ ಮುನ್ನೂರು ಎಂಬಲ್ಲಿ ನಡೆದಿದೆ. ಸಜೀಪಮುನ್ನೂರು ಗ್ರಾ.ಪಂ.ನ ಪಿಡಿಒ ಲಕ್ಷ್ಮಣ್ ಎಂಬವರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಇಲ್ಲಿನ ಎಸ್.ಡಿ.ಪಿ.ಈ ಐ.ಬೆಂಬಲಿತ ಎಂಟು ಮಂದಿ ಸದಸ್ಯರುಗಳು ಗ್ರಾಮಪಂಚಾಯತ್ ಗೆ ಯಾವುದೇ ಮುನ್ನೆಚ್ಚರಿಕೆ ನೀಡದೆ ಮುತ್ತಿಗೆ ಹಾಕಿದ್ದರು. ಅಲ್ಲದೆ ಪಂಚಾಯತ್ ಸಿಬ್ಬಂದಿಗಳಾದ ಮೀನಾಕ್ಷಿ, ಮಹಮ್ಮದ್ ಹಾರಿಶ್,ನಳಿನಿ,ಸುಮನಾ ರವರನ್ನು ಕಚೇರಿಯೊಳಗೆ ಹೋಗದಂತೆ ತಡೆ ಹಿಡಿದು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು.ಜೊತೆಗೆ ಕಚೇರಿಯ ಬೀಗದ ಕೀಯನ್ನು ಬಲವಂತವಾಗಿ ಕಸಿದುಕೊಂಡಿರುವುದಾಗಿಯೂ ದೂರಿನಲ್ಲಿ ತಿಳಿಸಿದ್ದಾರೆ.ಗ್ರಾಮ ಪಂಚಾಯತ್ ಸದಸ್ಯರಾದ ಅಬುಬಕ್ಕರ್ ಸಿದ್ದೀಕ್, ಜಮಾಲುದ್ದೀನ್, ಫಾತಿಮಾ ಸೌನ್,ಪೌಝಿಯಾ,ಸಬೀನಾ, ರಜಿಯಾ, ಸಾಜಿದ್, ವಹಿದಾಬಾನು ಎಂಬವರು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಎಲ್ಲರ ಮೇಲೆ ಕಾನೂನು ಕ್ರಮಕೈಗೊಳ್ಳುವಂತೆ ಪಿಡಿಒ ಲಕ್ಷ್ಮಣ್ ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ…

Read More

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರೊಂದು ಪತ್ತೆಯಾಗಿದ್ದು, ಕಾರನ್ನು ಚಲಾಯಿಸಿಕೊಂಡು ಬಂದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಕಾರನ್ನು ಪರಿಶೀಲಿಸಿದಾಗ ಚಿಕ್ಕಮಗಳೂರು ಜಿಲ್ಲೆಯ ವ್ಯಕ್ತಿಯೊಬ್ಬರ ಕೆಲವು ಗುರುತಿನ ಕಾರ್ಡ್‌ಗಳು ಕಂಡು ಬಂದಿವೆ. ಚಿಕ್ಕಮಗಳೂರಿನ ಮುಗುಳಬಳ್ಳಿಗೋಕುಲ್ ಫಾರ್ಮ್ ನಿವಾಸಿ ಬಿ.ಎಸ್ ಶಂಕರಗೌಡ ಎಂಬವರ ಪುತ್ರ ಪ್ರಸನ್ನ (37) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ . ಸೋಮವಾರ ಮಧ್ಯಾಹ್ನ ವೇಳೆ ತೊಕ್ಕೊಟ್ಟು ಕಡೆಯಿಂದ ಬಂದು ರಾ.ಹೆ.66 ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.ಘಟನೆಯನ್ನು ಪ್ರತ್ಯಕ್ಷ ಕಂಡವರು ತಕ್ಷಣ ರಕ್ಷಣೆಗೆ ಓಡಿದರೂ ಅದಾಗಲೇ ನೀರುಪಾಲಾಗಿದ್ದರು ಎಂದು ಹೇಳಲಾಗಿದೆ ಘಟನಾ ಸ್ಥಳದಲ್ಲಿ ಕುತೂಹಲಿಗರು ಜಮಾಯಿಸಿದ್ದರಿಂದ ರಸ್ತೆ ಸಂಚಾರದಲ್ಲಿ ಕೆಲಕಾಲ ಅಡಚಣೆಯುಂಟಾಯಿತು.ಮನೆ ಮಂದಿ ಬಂದ ಬಳಿಕ ವಾಸ್ತವಾಂಶ ತಿಳಿಯಬಹುದಾಗಿದೆ ಎಂದು ಕಂಕನಾಡಿ ನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

Read More

ಉಜಿರೆ : ಅಪ್ಪ ಮತ್ತು ಮಗನ ನಡುವೆ ನಡೆದ ಗಲಾಟೆ ಅಪ್ಪ ಮಗನನ್ನು ಚೂರಿ ಇರಿದು ಕೊಲೆ ಮಾಡಿದ ಘಟನೆ ಉಜಿರೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರ್(75) ಅವರ ಪುತ್ರ ಜಗದೀಶ್(30) ಎಂದು ಗುರುತಿಸಲಾಗಿದ್ದು,ಕೊಲೆ ಮಾಡಿದ ಆರೋಪಿ ಕಷ್ಣಯ್ಯ ಆಚಾರ್. ಯಾವುದೋ ವಿಚಾರಕ್ಕೆ ತಂದೆ-ಮಗನ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತೆರಳಿ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ ಮಗ ಜಗದೀಶ ಕಾಲಿನಿಂದ ತುಳಿದು ಬಾಗಿಲು ತೆಗೆಯಲು ಪ್ರಯತ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಕೃಷ್ಣಯ್ಯ ಆಚಾರ್ ಅಲ್ಲೇ ಕಪಾಟಿನಲ್ಲಿದ್ದ ಚೂರಿಯನ್ನು ತೆಗೆದು ಹೊರಬಂದು ಜಗದೀಶನಿಗೆ ಎಡ ಭುಜಕ್ಕೆ ಹಾಗೂ ಎಡ ಎದೆ ಭಾಗಕ್ಕೆ ಚೂರಿಯಿಂದ ಇರಿದಿದ್ದಾರೆ. ಇರಿತಕ್ಕೆ ಒಳಗಾಗಿ ಕುಸಿದು ಬಿದ್ದು ಜಗದೀಶ್ ಮೃತಪಟ್ಟಿದ್ದಾರೆನ್ನಲಾಗಿದೆ.<br>ಈ ಬಗ್ಗೆ ಜಗದೀಶನ ಅಣ್ಣ ಗಣೇಶ್ ನೀಡಿರುವ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ: ವಾಣಿಜ್ಯ ತೆರಿಗೆ ಅಧಿಕಾರಿಯ ಕುಂದಾಪುರದ ಮನೆ ಮೇಲೆ ಇಂದು(ಅ.30) ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಕುಂದಾಪುರದ ಎಲ್.ಐ.ಸಿ. ರಸ್ತೆಯಲ್ಲಿರುವ ವಾಣಿಜ್ಯ ತೆರಿಗೆ ಸಹಾಯಕ ಅಭಿಯಂತರ ಅಧಿಕಾರಿ ರಾಜೇಶ್ ಬೆಳಕೇರಿ ಎಂಬುವರ ಮನೆಗೆ ನಸುಕಿನಲ್ಲಿಯೇ ದಾಳಿ ನಡೆಸಿರುವ ಲೋಕಾ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆ ಅಂಕೋಲದ ರಾಜೇಶ್ ಬೆಳ್ಕೆರೆಯವರಾಗಿತುವ ರಾಜೇಶ್ ಕುಂದಾಪುರದ ಎಲ್.ಐ.ಸಿ. ರಸ್ತೆಯ ವಡೇರಹೋಬಳ ಅಡ್ಡರಸ್ತೆಯಲ್ಲಿ ಜಾಗ ಖರೀದಿಸಿ ಬೃಹತ್ ಮನೆ ನಿರ್ಮಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಒಟ್ಟು ಎರಡು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದು, ಅಂಕೋಲದ ಬೇಳ್ಕೆರೆಯಲ್ಲಿಯೂ ದಾಳಿ ನಡೆಸಿದ್ದಾರೆ.

Read More

ಮೂಡುಬಿದಿರೆ: ಉತ್ತರ ಕನ್ನಡ ಮುರುಡೇಶ್ವರ ಠಾಣಾ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡದ ಮೂಡುಬಿದಿರೆಯಿಂದ ಬೈಕ್‌ ಕಳವು ಮಾಡಿರುವ ಅಂತರ್‌ ಜಿಲ್ಲಾ ಚೋರರನ್ನು ಮೂಡುಬಿದಿರೆ ಪೊಲೀಸ್‌ ನಿರೀಕ್ಷಕ ಸಂದೇಶ್‌ ಪಿ.ಜಿ. ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಆರೋಪಿಗಳಿಂದ ಕಳವು ಮಾಡಿದ 2 ಬೈಕುಗಳು ಸೇರಿ ಒಟ್ಟು 1.80 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ತುಮಕೂರು ಜಿಲ್ಲೆಯ ಆಕಾಶ್‌ ಕಲ್ಕಿ ಹಾಗೂ ವೀರೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ. ಮಹಾವೀರ ಕಾಲೇಜಿನ ಎದುರು ವಾಹನ ತಪಾಸಣೆ ನಡೆಸುತ್ತಿರುವ ಸಂದರ್ಭ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಇಬ್ಬರನ್ನು ನಿಲ್ಲಿಸಲು ಹೇಳಿದಾಗ ನಿಲ್ಲಿಸದೇ ಮರಳಿ ಹೋಗುವ ಯತ್ನದ ವೇಳೆ ಪೊಲೀಸ್‌ ನಿರೀಕ್ಷಕ ಸಂದೇಶ್‌ ಹಾಗೂ ಸಿಬಂದಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಆಗ ಮುರುಡೇಶ್ವರ ಮತ್ತು ಜೈನ್‌ ಪಿ.ಯು. ಕಾಲೇಜಿನ ಎದುರು ನಿಲ್ಲಿಸಿದ ಮೋಟಾರು ಬೈಕ್‌ ಕಳ್ಳತನ ಮಾಡಿರುವುದು ಬೆಳಕಿಗೆ ಬಂತು. ಈ ಎರಡು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್ವಾಲ್‌ ಇವರ ಮಾರ್ಗದರ್ಶನದಂತೆ,…

Read More

ಬ್ರಹ್ಮಾವರ: ದಿಢೀರ್ ಬಂದ ಬಾರೀ ಸಿಡಿಲು ಮಳೆ ಸಂದರ್ಭ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿ, ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್ ಶೆಟ್ಟಿ ( 24) ಮೃತ ಯುವಕ. ಈತ ಮನೆಯ ಹೊರೆಗೆ ಮೊಬೈಲ್‌ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದು, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಯುವಕ ಬ್ರಹ್ಮಾವರದ ಬಟ್ಟೆ ಯಂಗಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸೌಮ್ಯ ಸ್ವಭಾವದ ನಾಗಿದ್ದ ಈತ ವಾಲಿಬಾಲ್ ಮುಂತಾದ ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿದ್ದ. ಇಬ್ಬರು ಸಹೋದರರನ್ನು ಅಗಲಿದ್ದಾನೆ.

Read More

ಕೊಚ್ಚಿ : ಕೇರಳದ ಕೊಚ್ಚಿಯಲ್ಲಿ ಕ್ರಿಶ್ಚಿಯನ್ ಧಾರ್ಮಿಕ ಕೂಟದಲ್ಲಿ ನಡೆದ ತ್ರಿವಳಿ ಬಾಂಬ್ ಸ್ಪೋಟವನ್ನು ತಾನೇ ಮಾಡಿದ್ದೇನೆ ಎಂದು ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿದ್ದಾರೆ. ಅಲ್ಲದೆ ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾನೆ. ಪೊಲೀಸರಿಗೆ ಶರಣಾದ ವ್ಯಕ್ತಿಯನ್ನು ಡೊಮಿನಿಕ್ ಮಾರ್ಟಿನ್ ಎಂದು ಗುರುತಿಸಲಾಗಿದೆ. ಕೇರಳದ ಕೊಚ್ಚಿಯ ಕಲಮಸ್ಸೇರಿ ಧಾರ್ಮಿಕ ಸಮಾವೇಶದ ಸಂದರ್ಭದಲ್ಲಿ ಇಂದು ಬೆಳಿಗ್ಗೆ ತ್ರಿವಳಿ ಬಾಂಬ್ ಸ್ಪೋಟ್ ಸಂಭವಿಸಿದೆ. ಈ ಘಟನೆಯಲ್ಲಿ ಓರ್ವ ಮಹಿಳೆ ಸಾವನಪ್ಪಿದ್ದು. 40ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇದೀಗ ಪೊಲೀಸರಿಗೆ ಶರಣಾದ ವ್ಯಕ್ತಿಯನ್ನು 44 ವರ್ಷದ ಡೊಮಿನಿಕ್ ಮಾರ್ಟಿನ್ ಎಂದು ಗುರುತಿಸಲಾಗಿದ್ದು, ಈತ ಕ್ರಿಶ್ಚಿಯನ್ ಧಾರ್ಮಿಕ ಗುಂಪಿನ ಅನುಯಾಯಿ ಎಂದು ಹೇಳಿಕೊಂಡಿದ್ದಾನೆ ಎಂದು ಕಾನೂನು ಮತ್ತು ಸುವ್ಯವಸ್ಥೆಯ ಎಡಿಜಿಪಿ ಎಂ ಆರ್ ಅಜಿತ್ ಕುಮಾರ್ ತಿಳಿಸಿದ್ದಾರೆ. ಡೊಮಿನಿಕ್ ಮಾರ್ಟಿನ್ ಸ್ಫೋಟದ ಹೊಣೆ ಹೊತ್ತುಕೊಂಡಿದ್ದು, ಅವನು ತನ್ನ ವಾದವನ್ನು ಬೆಂಬಲಿಸುವ ಸಾಕ್ಷ್ಯವನ್ನು ಸಹ ನೀಡಿದ್ದಾನೆ. ಶರಣಾಗುವ ಮೊದಲು, ಡೊಮಿನಿಕ್ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಪೋಸ್ಟ್ ಮಾಡಿದ್ದು…

Read More

ಕೇರಳ: ಎರ್ನಾಕುಲಂನ ಪ್ರಾರ್ಥನಾ ಮಂದಿರವೊಂದರಲ್ಲಿ ಸುಧಾರಿತ ಐಇಡಿ ಸ್ಪೋಟಕವನ್ನು ಸ್ಪೋಟಿಸಿ, ಸರಣಿ ಸ್ಪೋಟಕವನ್ನು ನಡೆಸಲಾಗಿತ್ತು. ಇಂತಹ ಕನ್ವೆನ್ಷನ್ ಸೆಂಟರ್ ನಲ್ಲಿ ಬಾಂಬ್ ಇಟ್ಟಿದ್ದು ನಾನೇ ಅಂತ ತಪ್ಪೊಪ್ಪಿಕೊಂಡಿರುವಂತ ವ್ಯಕ್ತಿಯೋರ್ವ, ಪೊಲೀಸರಿಗೆ ಶರಣಾಗಿರೋದಾಗಿ ತಿಳಿದು ಬಂದಿದೆ. ಕೇರಳದ ಎರ್ನಾಕುಲಂ ಬಳಿಯಲ್ಲಿ ಕ್ರೈಸ್ತ ಸಮುದಾಯದವರ ಪ್ರಾರ್ಥನೆಯ ವೇಳೆಯಲ್ಲಿ ಸರಣಿ ಸ್ಪೋಟಕ ಪ್ರಕರಣ ಸಂಭವಿಸಿತ್ತು. ಈ ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿ 28ಕ್ಕೆ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹೀಗೆ ಚಿಕಿತ್ಸೆ ಪಡೆಯುತ್ತಿರುವಂತ ಅನೇಕರ ಸ್ಥಿತಿ ಕೂಡ ಗಂಭೀರಗೊಂಡಿದೆ ಎನ್ನಲಾಗುತ್ತಿದೆ. ಈ ಸರಣಿ ಸ್ಪೋಟಕ ಪ್ರಕರಣದ ನಂತ್ರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನಾಳೆ ಘಟನೆ ಕುರಿತಂತೆ ಮಹತ್ವದ ಚರ್ಚೆ ನಡೆಸೋದಕ್ಕೆ ಬೆಳಗ್ಗೆ 10 ಗಂಟೆಗೆ ಸರ್ವಪಕ್ಷಗಳ ಸಭೆಯನ್ನು ಕರೆಯಲಾಗಿದೆ. ಮತ್ತೊಂದೆಡೆ ಸಿಎಂ ಪಿಣರಾಯಿ ವಿಜಯನ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಕರೆ ಮಾಡಿ, ಸ್ಪೋಟಕ ಪ್ರಕರಣ ಸಂಬಂಧ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ…

Read More

ಮಂಗಳೂರು: ಮಂಗಳೂರು ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿನ ವಿವಿಧ ಪೊಲೀಸ್ ಠಾಣೆ ಕಟ್ಟಡಗಳು ಉದ್ಘಾಟನೆಗೊಂಡಿತು. ಪಿಲಿಕುಳದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಜ್ಪೆ ಪೊಲೀಸ್ ಠಾಣೆ, ಮಂಗಳೂರು ಗ್ರಾಮಾಂತರ ಠಾಣೆ ಮತ್ತು ಸಿಎಆರ್ ಕಚೇರಿ ಕಟ್ಟಡಗಳನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಉದ್ಘಾಟಿಸಿದರು. ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮತ್ತು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Read More