ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ನಿನ್ನೆ ನಡೆದ ಡಬಲ್ ಮರ್ಡರ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರಿಗೆ ಸಿಕ್ಕಿಬಿದ್ದಿರುವ ಆರೋಪಿ ಫಿಲಿಕ್ಸ್ ಕೊಲೆಗೆ ಕಾರಣ ಏನು ಅನ್ನೋದನ್ನ ಬಹಿರಂಗ ಪಡಿಸಿದ್ದಾರೆ. ದುಡ್ಡಿಗಲ್ಲ, ವ್ಯವಹಾರಕ್ಕೆ ಈ ಡಬಲ್ ಮರ್ಡರ್ ನಡೆದಿಲ್ಲ. ಒಂದು ಹುಡುಗಿ ವಿಚಾರಕ್ಕೆ ಹಾಡಹಗಲೇ ಬರ್ಬರ ಹತ್ಯೆ ಮಾಡಲಾಗಿದೆ. ಬನ್ನೇರುಘಟ್ಟದಲ್ಲಿದ್ದ ಜಿ ನೆಟ್ ಕಂಪನಿಯಲ್ಲಿ ಹತ್ಯೆಯಾದ ಫಣಿಂದ್ರ ಹಾಗೂ ಫಿಲಿಕ್ಸ್ ಕೆಲಸ ಮಾಡುತ್ತಿದ್ದರು. ಜಿ ನೆಟ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಹುಡುಗಿ ಜೊತೆ ಫಿಲಿಕ್ಸ್‌ಗೆ ಪ್ರೀತಿಯಾಗಿತ್ತು. ಕೊಲೆಯಾದ ಫಣೀಂದ್ರ ಆ ಹುಡುಗಿಯ ಮೇಲೆ ಕಣ್ಣಾಕ್ಕಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಫಣಿಂದ್ರ ಹಾಗೂ ಫಿಲಿಕ್ಸ್ ಜೊತೆ ಜಗಳ ನಡೆದಿತ್ತು. ನಮ್ಮ ಹುಡುಗಿ ವಿಚಾರಕ್ಕೆ ಬಂದ್ರೆ ನಿನ್ನ ಮುಗಿಸಿಬಿಡ್ತೀನಿ ಅಂತಾ ಫಿಲಿಕ್ಸ್ ಆವಾಜ್ ಹಾಕಿದ್ದನಂತೆ. ಇದೇ ವಿಚಾರಕ್ಕೆ ನಾನು ಕೊಲೆ ಮಾಡಿದ್ದೇನೆ ಅಂತಾ ಪೊಲೀಸರ ಮುಂದೆ ಫಿಲಿಕ್ಸ್ ತಪ್ಪು ಒಪ್ಪಿಕೊಂಡಿದ್ದಾನೆ. ನಿನ್ನೆ ಸಂಜೆ ನಾಲ್ಕು ಗಂಟೆ ಸಮಯ. ಬೆಂಗಳೂರಿನ ಹೆಬ್ಬಾಳ ಸಮೀಪದ ಅಮೃತಹಳ್ಳಿಯ ಪಂಪಾ ಬಡಾವಣೆಯಲ್ಲಿ ಡಬಲ್…
Author: main-admin
ಮಂಗಳೂರು: ನಗರದ ಹಿರಿಯ ವಕೀಲ ಬಿ.ಹರೀಶ್ ಆಚಾರ್ಯ ಅವರ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಮಂಗಳವಾರದಂದು ಬಿಜೈ ಬಾರಬೈಲ್‌ನಲ್ಲಿರುವ ಅವರ ಮನೆಯಲ್ಲಿ ಪತ್ತೆಯಾಗಿದೆ. 60 ವರ್ಷ ವಯಸ್ಸಿನ ಹರೀಶ್ ಆಚಾರ್ಯ ಒಂಟಿಯಾಗಿ ವಾಸಿಸುತ್ತಿದ್ದರು. ಕಳೆದ ಶುಕ್ರವಾರ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಆದರೆ ಸೋಮವಾರದಂದು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನಲೆ, ಅವರ ಕಿರಿಯ ಸಹೋದ್ಯೋಗಿಗಳು ಅವರಿಗೆ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸಿದ ಹಿನ್ನಲೆ ಮಂಗಳವಾರ ಕಿರಿಯ ವಕೀಲರು ಹರೀಶ್ ನಿವಾಸಕ್ಕೆ ಆಗಮಿಸಿದಾಗ ಅವರ ಮನೆಗೆ ಬೀಗ ಹಾಕಲಾಗಿತ್ತು. ನಂತರ ಪೊಲೀಸರು ಬಾಗಿಲು ತೆರೆದು ಒಳಪ್ರವೇಶಿಸಿ ನೋಡಿದಾಗ ಹರೀಶ್ ಆಚಾರ್ಯ ಶವ ಭಾಗಶಃ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಜುಲೈ 9 ರಂದು ಬೆಳಿಗ್ಗೆ 10 ಗಂಟೆ ಮತ್ತು ಜುಲೈ 11 ರಂದು ಬೆಳಿಗ್ಗೆ 11 ಗಂಟೆಯ ಮಧ್ಯಂತರ ಅವಧಿಯಲ್ಲಿ ಹರೀಶ್ ಹೃದಯಾಘಾತ ಅಥವಾ ಇತರ ಕಾರಣಗಳಿಂದ ಸಾವನ್ನಪ್ಪಿರಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಪಾರ್ಥಿವ ಶರೀರವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಶವಗಾರದಲ್ಲಿ ಇರಿಸಲಾಗಿದೆ. ಉರ್ವಾ ಪೊಲೀಸ್ ರಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅವರ ಸಂಬಂಧಿಕರು…
ಬೆಂಗಳೂರು: ಆನ್ ಲೈನ್ ಗೇಮಿಂಗ್ ಆ್ಯಪ್ ಮೂಲಕ ಮಕ್ಕಳು ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದು, ಇವುಗಳ ಬಗ್ಗೆ ತನಿಖೆ ಕೈಗೊಂಡು, ಇಂತಹ ಚಟುವಟಿಕೆಗಳನ್ನು ರದ್ದು ಪಡಿಸುವಂತೆ ಕೋರಿ ವಿಧಾನ ಪರಿಷತ್ ಸದಸ್ಯರಾದ ಅರುಣ್ ಡಿ.ಎಸ್ ಸರ್ಕಾರದ ಗಮನ ಸೆಳೆದರು. ಗೃಹ ಸಚಿವರ ಪರವಾಗಿ ಉತ್ತರಿಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಆನ್ ಲೈನ್ ಗೇಮ್ ಗಳಾದ ಡ್ರೀಮ್ 11. ಮೈ ಸರ್ಕಲ್ ಮುಂತಾದ ಆ್ಯಪ್ ಗಳಿಂದ ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಯುವ ಸಮುದಾಯದವರು ಆನ್ ಲೈನ್ ಗೇಮ್ ಆಡುವ ಹವ್ಯಾಸಿಗಳಾಗಿದ್ದು, ಇವರು ತಮ್ಮ ಉದ್ಯೋಗದ ಬಗ್ಗೆ ಹೆಚ್ಚು ಆಸಕ್ತಿಯನ್ನು ವಹಿಸದೆ ದಕ್ಷತೆಯಿಂದ ಕಾರ್ಯ ನಿರ್ವಹಿಸದೇ, ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಆ ಮೂಲಕ ಆರ್ಥಿಕ ನಷ್ಟ ಹೊಂದಿ ಮಾನಸಿಕ ತೊಂದರೆಗೊಳಗಾಗುತ್ತಿರುತ್ತಾರೆ, ಜೊತೆಗೆ , ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಅನಲೈನ್ ಗೇಮ್ ಆಡುವ ಹವ್ಯಾಸಿಗಳಾಗಿದ್ದು ತಮ್ಮ ವಿದ್ಯಾರ್ಥಿ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ . ಹಾಗಾಗಿ ಸರ್ಕಾರ ಸೋಷಿಯಲ್ ಮಿಡಿಯಾ, ಮಾಧ್ಯಮಗಳು…
ಮಂಗಳೂರು: ಸಾಮಾಜಿಕ ಜಾಲತಾಣದ ವಾಟ್ಸಪ್, ಫೇಸ್ಬುಕ್, ಇನ್ಸಾ ಗ್ರಾಮ್, ಟ್ವಿಟ್ಟರ್ ಹಾಗೂ ಇನ್ನಿತರ ಅಪ್ಲಿಕೇಶನ್ಗಳಲ್ಲಿ ಧರ್ಮದ ವಿಚಾರ, ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಅಂಶಗಳನ್ನು ಒಳಗೊಂಡ ಸಂದೇಶಗಳು ಹರಿದಾಡುತ್ತಿರುವುದು ಕಂಡು ಬರುತ್ತಿದೆ. ಇಂತಹ ಸಂದೇಶಗಳಿಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈಗಾಗಲೇ 21 ಪ್ರಕರಣಗಳು ದಾಖಲಾಗಿದ್ದು ತನಿಖೆಯಲ್ಲಿರುತ್ತದೆ. ನಗರದ ಎಲ್ಲಾ ಪೊಲೀಸ್ ಠಾಣೆಗಳ ಹಾಗೂ ಸೋಷಿಯಲ್ ಮೀಡಿಯಾ ಸೆಲ್ನಲ್ಲಿ ಧರ್ಮದ ವಿಚಾರವಾಗಿ ಪರ ಮತ್ತು ವಿರೋಧ ಸಂದೇಶಗಳನ್ನು ಪೋಸ್ಟ್, ಶೇರ್ ಮತ್ತು ಕಮೆಂಟ್ ಮಾಡುವ ವ್ಯಕ್ತಿಗಳ ಮೇಲೆ ಸೂಕ್ತ ನಿಗಾ ವಹಿಸುತ್ತಿದ್ದು ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಹಾಗೂ ಇದೇ ರೀತಿಯಲ್ಲಿ ಅಪರಾಧಗಳನ್ನು ಪುನರಾವರ್ತನೆ ಮಾಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತರಾದ ಕುಲದೀಪ್ ಆರ್ ಜೈನ್ ಎಚ್ಚರಿಕೆ ನೀಡಿದ್ದಾರೆ
ಪುತ್ತೂರು: ಪುತ್ತೂರಿನ ಪಡೀಲಿನಲ್ಲಿ ಕಾರ್ಯಾಚರಿಸುತ್ತಿದ್ದ ವಿಶ್ವನಾಥ್ ಎಂಬುವರಿಗೆ ಸೇರಿದ ಬಿ.ಬಿ ಇಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಸೆಂಟರಿನಲ್ಲಿ ಸರ್ಕಾರಿ ದಾಖಲೆಗಳ ನಕಲಿ ಮಾಡಲಾಗುತ್ತಿದೆ ಎಂಬ ಆರೋಪದ ಮೇಲೆ ಪುತ್ತೂರು ತಾಪಂ ಇಒ ನೇತೃತ್ವದ ತಂಡ ದಾಳಿ ನಡೆಸಿ ನಕಲಿ ದಾಖಲೆ, ನಕಲಿ ಸೀಲ್ ವಶಕ್ಕೆ ಪಡೆದುಕೊಂಡಿದೆ. ಸರ್ಕಾರದಿಂದ ಅನುಮತಿ ಪಡೆದ ಗುತ್ತಿಗೆದಾರರು ಇವರಾಗಿದ್ದು, ಮೆಸ್ಕಾಂನ ಗುತ್ತಿಗೆ ಕಾಮಗಾರಿಗಳನ್ನು ನಿರ್ವಹಿಸುತ್ತಿದ್ದರು. ವಿದ್ಯುತ್ ಗುತ್ತಿಗೆ ಕಾಮಗಾರಿ ನಿರ್ವಹಿಸುತ್ತಿದ್ದ ಈ ಅಂಗಡಿಯಲ್ಲಿ, ಪುತ್ತೂರು ನಗರಸಭೆ, ಕಡಬ ತಾಲೂಕು ಪಂಚಾಯತ್ ಹಾಗೂ ಪುತ್ತೂರು ಹಾಗೂ ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತಿಗಳ ಸೀಲ್ ಗಳನ್ನೇ ಹೋಲುವ ನಕಲಿ ಸೀಲ್ ಗಳು ಪತ್ತೆಯಾಗಿವೆ. ದಾಖಲೆ ಪತ್ರಗಳಿಗೆ ಫೋರ್ಜರಿ ಸಹಿ ಹಾಕಿ, ಅದಕ್ಕೆ ನಕಲಿ ಸೀಲ್ ಗಳನ್ನು ಹಾಕಲಾಗುತ್ತಿತ್ತು. ಸಾರ್ವಜನಿಕ ದೂರಿನ ಮೇರೆಗೆ ತಾಪಂ ಇಓ ನವೀನ್ ಭಂಡಾರಿ ನೇತೃತ್ವದ ಅಧಿಕಾರಿಗಳ ತಂಡ ದಾಳಿ ನಡೆಸಿ, ಪರಿಶೀಲಿಸಿದಾಗ ವಂಚನೆ ಜಾಲ ಬೆಳಕಿಗೆ ಬಂದಿದೆ.
ಬೆಳ್ತಂಗಡಿ: ಲಾರಿಯೊಂದು 2 ಬಸ್ಸು ಸೇರಿದಂತೆ ಇತರ 5 ವಾಹನಗಳಿಗೆ ಡಿಕ್ಕಿ ಹೊಡೆದು ರಸ್ತೆ ಬದಿ ನಡೆದುಕೊಂಡು ಹೋಗುತಿದ್ದ ಯುವತಿಯೊಬ್ಬಳು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಉಜಿರೆ ಕಡೆಯಿಂದ ಮರಳು ತುಂಬಿದ ಲಾರಿ ಬೆಳ್ತಂಗಡಿ ಸೇತುವೆ ಬಳಿ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ರಸ್ತೆ ಬದಿ ನಿಲ್ಲಿಸಲಾಗಿದ್ದ ಕಾರು ರಿಕ್ಷಾ ಸೇರಿದಂತೆ ನಡೆದುಕೊಂಡು ಹೋಗುತಿದ್ದ ಯುವತಿಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಯುವತಿ ಗಂಭೀರ ಗಾಯಗೊಂಡಿದ್ದು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.
ಬೆಳ್ತಂಗಡಿ : ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟ ಘಟನೆ, ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ಕಂಡು ಬಂದಿದೆ. ಘಟನ ಸ್ಥಳಕ್ಕೆ ಪೋಲಿಸರು ಆಗಮಿಸಿದ್ದು, ಮುಂಜಾಗ್ರತ ಕ್ರಮವನ್ನು ಕೈಗೊಂಡಿದ್ದಾರೆ. ಬೆಳ್ತಂಗಡಿ -ಬಂಟ್ವಾಳ ತಾಲೂಕು ಗಡಿ ಭಾಗದಲ್ಲಿರುವ ಬಾಡಾರು ಎಂಬಲ್ಲಿ ಈ ಕೊರಗಜ್ಜನ ದೇವಾಸ್ಥಾನವಿದ್ದು, ನೇಮೋತ್ಸನ ನಡೆಯುತ್ತಿತ್ತು ಎನ್ನಲಾಗಿದ್ದು, ದೇವಾಲಯದ ಜಾಗಕ್ಕೆ ಸಂಬಂಧಪಟ್ಟಂತೆ ಆಗಾಗ್ಗಾ ಜಗಳ ನಡೆಯುತ್ತಿತ್ತು, ಎನ್ನಲಾಗಿದೆ. ಈ ನಡುವೆ ಕಿಡಿಗೇಡಿಗಳು ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟಿ ಅಟ್ಟಹಾಸ ಮರೆದಿದ್ದಾರೆ ಎನ್ನಲಾಗಿದೆ. ಈ ನಡುವೆ ಘಟನೆ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದರು, ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.
ಕಡಬ ತಾಲೂಕಿನ ಕಲ್ಲುಗುಡ್ಡೆಯ ಆರ್ಲ ನಿವಾಸಿ ಸೈನಿಕ ಅಝೀಝ್ ಅವರ ಪತ್ನಿ ಫೌಝಿಯಾ ಮೇಲೆ ಹಲ್ಲೆ ನಡೆದ ಘಟನೆ ನಡೆದಿದೆ. ಆರ್ಲ ನಿವಾಸಿ ಸೈನಿಕ ಅಝೀಝ್ ಅವರ ಪತ್ನಿ ಫೌಝಿಯಾ ಮೇಲೆ ಹಲ್ಲೆ ನಡೆದಿದ್ದು, ಜಾಗದ ತಕರಾರಿನ ವಿಚಾರದಲ್ಲಿ ಪಕ್ಕದ ಮನೆಯ ನಾಲ್ವರಿಂದ ಫೌಝಿಯಾ ಮೇಲೆ ಹಲ್ಲೆ ಮಾಡಿದ್ದಾರೆ. ನಿತ್ಯ ಜಾಗದ ವಿಚಾರದಲ್ಲಿ ವಿನಾಕಾರಣ ಪುಂಡರ ಗ್ಯಾಂಗ್ ವೊಂದು ಜಗಳವಾಡುತ್ತಿದ್ದರು. ಕಲ್ಲುಗುಡ್ಡೆಯಲ್ಲಿ ತಂದೆಯ ಮನೆಗೆ ಫೌಝಿಯಾ ಹೋಗಿದ್ದರು, ಈ ಸಂದರ್ಭ ತಂದೆ ಹಾಗೂ ಮಗಳು ಫೌಝಿಯಾ ಮೇಲೆ ಪುಂಡರ ಗ್ಯಾಂಗ್ ಹಲ್ಲೆ ಮಾಡಿದೆ. ಕಡಬ ಸರ್ಕಾರಿ ಆಸ್ಪತ್ರೆಗೆ ಫೌಝಿಯಾ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುಬ್ರಹ್ಮಣ್ಣ: ಕುಕ್ಕೆ ಕ್ಷೇತ್ರದಿಂದ ಅನತಿ ದೂರದಲ್ಲಿರುವ ನೂಚಿಲದ ಗುಡ್ಡ ಕುಸಿಯುವ ಭೀತಿ ಇರುವ ಹಿನ್ನೆಲೆಯಲ್ಲಿ ಅಲ್ಲಿನ 8 ಕುಟುಂಬಗಳನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂರಿಸಲಾಗಿದೆ. ಯಾವುದೇ ಸಮಯದಲ್ಲಿ ಈ ಗುಡ್ಡ ಕುಸಿಯುವ ಸಂಭವವಿದ್ದು ಮುಂಜಾಗ್ರತೆ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಅಭಯ ಪ್ರವಾಸಿ ಮಂದಿರದಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ 8 ಕುಟುಂಬಗಳನ್ನು ಸ್ಧಳಾಂತರಿಸಲಾಗಿದೆ. ಗೀತಾ ಸತೀಶ್ ನೂಚಿಲ, ಪದ್ದಯ್ಯ ನೂಚಿಲ, ದುಗ್ಗಣ್ಣ ನೂಚಿಲ, ದಿನೇಶ್ ನೂಚಿಲ, ಶೋಭಾ ಭಾಸ್ಕರ ನೂಚಿಲ, ದೇವಕಿ ಬಾಲಕೃಷ್ಣ, ಶೋಭಾ ಪ್ರಮೋದ್ ಕುಮಾರ್ ಮತ್ತು ಬಿ.ಎನ್. ರಾಧಾಕೃಷ್ಣ ಅವರ ಮನೆಗಳು ಬೆಟ್ಟದ ತಪ್ಪಲ್ಲಿನಲ್ಲಿವೆ. ಕಡಬ ತಹಶೀಲ್ದಾರ್ ರಮೇಶ್ ಬಾಬು ಅವರು ಈ ಕುಟುಂಬಗಳಿಗೆ ನೋಟಿಸ್ ಜಾರಿ ಮಾಡಿದ್ದು, ತಕ್ಷಣವೇ ಮನೆಗಳಿಂದ ತೆರವುಗೊಳಿಸಿ ಬೇರೆ ಕಡೆ ವಾಸ್ತವ್ಯ ಹೂಡಬೇಕು ಅಥವಾ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಸೂಚಿಸಿದ್ದಾರೆ. ಸುಬ್ರಹ್ಮಣ್ಯದ ನೂಚಿಲದಲ್ಲಿ ಬೆಟ್ಟದ ತಪ್ಪಲಿನಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಮನೆಗಳನ್ನು ಮಳೆಗಾಲ ಮುಗಿಯುವವರೆಗೆ ಬಳಸದಂತೆಯೂ ಸೂಚನೆ ನೀಡಲಾಗಿದೆ. ಎಸ್‌ಡಿಆರ್‌ಎಫ್ ತಂಡ ಸ್ಥಳ ಪರಿಶೀಲಿಸಿ…
ಬಜ್ಪೆ: ನೀರಿನ ಸಮಸ್ಯೆಯನ್ನು ಪರಿಹರಿಸಿ ಕೊಡುವಂತೆ ಕಂದಾವರ ಪಂಚಾಯತ್ ನ ಮೆಂಬರ್ ಸವಿತಾ ಎಂಬವರಿಗೆ ಯುವತಿಯೊಬ್ಬರು ಮನವಿ ಮಾಡಿದ್ದು, ಆದರೆ ಅವರು ಪುರುಷನೋರ್ವನಿಗೆ ಆ ಯುವತಿಯ ನಂಬರ್ ನೀಡಿ ಕರೆ ಮಾಡಿಸಿ ಕಿರುಕುಳ ನೀಡಿದ ಗಂಭೀರ ಆರೋಪ ಕೇಳಿ ಬಂದಿದೆ. ಹೌದು..! ಘಟನೆ ಸಂಬಂಧ ಯುವತಿಯ ಸಹೋದರ ಹಾಗೂ ಸ್ಥಳೀಯರು ಸೇರಿ ಬಜ್ಪೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ದೂರು ದಾಖಲಿಸಿಕೊಂಡು ತಕ್ಷಣದಲ್ಲಿ ಕ್ರಮಕೈಗೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿರುವ ಗ್ರಾಮಸ್ಥರು ಪೊಲೀಸ್ ಠಾಣೆ ಬಳಿ ಜಮಾಯಿಸಿ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಯುವತಿಯ ಸಹೋದರ ಚರಣ್ ಎಂಬವರು ಈ ಬಗ್ಗೆ ಮಾತನಾಡಿದ್ದು, ನಾನು ಮುಂಡಾಲ ಸಮುದಾಯದ ಯುವಕನಾಗಿದ್ದೇನೆ, ನಮ್ಮ ಗ್ರಾಮದಲ್ಲಿ ಹಲವು ಸಮಯಗಳಿಂದಲೂ ನೀರಿನ ಸಮಸ್ಯೆ ಇದೆ. ಇದರ ಬಗ್ಗೆ ನನ್ನ ತಂಗಿ ಪಂಚಾಯತ್ ಸದಸ್ಯೆ ಸವಿತಾ, ಗ್ರಾಮ ಪಂಚಾಯತ್ ಅಧ್ಯಕ್ಷೆ ಹಾಗೂ ಪಿಡಿಓಗೆ ಕರೆ ಮಾಡಿ ತಿಳಿಸಿದ್ದಾಳೆ. ಆದ್ರೆ ಸವಿತಾ ಅವರು, ನನ್ನ ತಂಗಿಯ ನಂಬರ್ ಸುದರ್ಶನ್ ಎಂಬ ವ್ಯಕ್ತಿಯೋರ್ವನಿಗೆ…










