ಕಡಬ: ಪ್ರಯಾಣಿಕರ ಓವರ್ ಲೋಡ್‌ಗೆ ಭಯಗೊಂಡು ಕೆಎಸ್ಆರ್ ಟಿಸಿ ಬಸ್ ಓಡಿಸಲು ನಿರಾಕರಿಸಿದ ಚಾಲಕ ಘಟನೆ ಕಡಬದಿಂದ ಪುತ್ತೂರಿಗೆ ತೆರಳುವ ಬಸ್ ನಲ್ಲಿ ನಡೆದಿದೆ. ಬಸ್ ಅಲಂಕಾರ್ ತಲುಪಿದಾಗ 130 ಮಂದಿ ಬಸ್ ಹತ್ತಿದ್ದರು. ಇದು ವಾಹನದ ನಿಗದಿತ ಸಾಮರ್ಥ್ಯಕ್ಕಿಂತ ಹೆಚ್ಚಾಗಿತ್ತು. ಅರ್ಧದಷ್ಟು ಪ್ರಯಾಣಿಕರು ಇಳಿಯಬೇಕು ಇಲ್ಲದಿದ್ದರೆ ಬಸ್ ಓಡಿಸಲು ಹೋಗುವುದಿಲ್ಲ ಎಂದು ಚಾಲಕ ಹೇಳಿದರು. ಇತ್ತೀಚೆಗೆ ಕಡಬದಿಂದ ಶಾಂತಿಮುಗೇರು ಮಾರ್ಗವಾಗಿ ಪುತ್ತೂರಿಗೆ ಹೋಗುವ ಬೆಳಗ್ಗಿನ ಸಂಚಾರಿಸುವ ಒಂದು ಬಸ್ಸನ್ನು ನಿಲ್ಲಿಸಲಾಗಿತ್ತು. ಈ ಹಿನ್ನಲೆ ಬೆಳಗ್ಗಿನ ಆರಂಭದ ಬಸ್ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿ ಓವರ್ ಲೋಡ್ ಆಗುತ್ತಿತ್ತು. ಇದರಿಂದ ಇತ್ತೀಚೆಗೆ ಬಸ್ ನ ಟಯರ್ ಬ್ಲಾಸ್ಟ್ ಆದ ಘಟನೆ ನಡೆದಿತ್ತು. ಹೀಗಾಗಿ ಬಸ್ ಚಾಲಕನಿಗೆ 5,000 ದಂಡ ಕೂಡ ವಿಧಿಸಲಾಗಿತ್ತು. ಇತ್ತ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವುದರಿಂದ ಈ ಮಾರ್ಗದಲ್ಲಿ ಹೆಚ್ಚುವರಿ ಬಸ್ ಹಾಕುವಂತೆ ಜನರು ವಿನಂತಿಸಿದರು ಅಧಿಕಾರಿಗಳು ತಲೆಕೆಡಿಸಿಕೊಳ್ಳುತ್ತಿಲ್ಲ ಎಂದು ಪ್ರಯಾಣಿಕರ ಆರೋಪ. ಈ ಬಸ್ಸಿನಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು, ವಿವಿಧ…
Author: main-admin
ಪುತ್ತೂರು: ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ಕುಳಿತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆರೋಪಿಯನ್ನು ಪೊಕ್ಸೊ ಪ್ರಕರಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ ಉದಯ(40) ಎಂದು ಗುರುತಿಸಲಾಗಿದೆ. ಆರೋಪಿ ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿಬಸ್‌ನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಕಿರುಕುಳ ನೀಡಿದ ವಿಚಾರವನ್ನು ಆಕೆ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ತಿಳಿಸಿದ್ದು, ಪ್ರಯಾಣಿಕರು ಆತನನ್ನು ಇಳಿಯಲು ಬಿಡದೆ ತಡೆದಿದ್ದರು. ಬಳಿಕ ಬಸ್ ಅನ್ನು ಪೊಲೀಸ್ ಠಾಣೆಯ ಬಳಿಗೆ ಬಂದು ನಿಲ್ಲಿಸಲಾಯಿತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡರು ಎಂದು ಮೂಲಗಳು ತಿಳಿಸಿವೆ. ಘಟನೆಯ ಸುದ್ದಿ ಹರಡುತ್ತಿದ್ದಂತೆ ಕೆಲವು ಯುವಕರು ಮಹಿಳಾ ಪೊಲೀಸ್ ಠಾಣೆಯ ಮುಂದೆ ಜಯಾಯಿಸಿ, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ಚಿಕ್ಕಮಗಳೂರು: ಸುಧೀರ್ ಅತ್ತಾವರ್ ನಿರ್ದೇಶನದ ‘ಕೊರಗಜ್ಜ’ ಸಿನಿಮಾ ಶೂಟಿಂಗ್ ಪ್ರಾರಂಭದಿಂದಲೇ ಒಂದಲ್ಲ ಒಂದು ವಿವಾದಗಳಿಗೆ ಒಳಗಾಗುತ್ತಲೇ ಇದೆ. ಈ ನಡುವೆ ಕುದುರೆ ಮುಖ ಸಮೀಪದ ಕಳಸದಲ್ಲಿ ‘ಕೊರಗಜ್ಜ’ ಚಿತ್ರದ ಹಾಡಿನ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಕಿಡಿಗೇಡಿಗಳು ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ನಿರ್ದೇಶಕ ಸುಧೀರ್ ಅತ್ತಾವರ್ ಅಕ್ಟೋಬರ್ 27ರಂದು ಶೂಟ್ ನಡೆಯುತ್ತಿತ್ತು. ಬೆಳಿಗ್ಗೆ ಶೂಟ್ ಮಾಡಿದೆವು. ಮಧ್ಯಾಹ್ನ ಊಟದ ನಂತರ ಕೆಲವರು ತಲ್ವಾರ್ ಹಿಡಿದು ಸೆಟ್ಗೆ ಬಂದರು. ಅವರು ಆವೇಶದಲ್ಲಿ ಇದ್ದರು. ನಂತರ ಮತ್ತೊಂದು ತಂಡದವರು ಸೆಟ್ನ ಪರಿಶೀಲಿಸಿದ್ದಾರೆ. ಆ ಬಳಿಕ ಮೂರನೆ ತಂಡ ಕೂಡ ಬಂತು. ಅಲ್ಲಿ ಬಿಜೆಪಿ ನಾಯಕರಿದ್ದರು ಎಂದಿದ್ದಾರೆ. ನಾನು ಪೊಲೀಸರಿಗೆ ದೂರು ಕೊಟ್ಟಿಲ್ಲ. ಗಣೇಶ ಆಚಾರ್ಯರಂತಹ ಖ್ಯಾತ ಕೊರಿಯೋಗ್ರಾಫರ್ ಬಂದಿದ್ದ ವೇಳೆ ಹೀಗಾಯಿತಲ್ಲ ಎಂದು ಬಹಳ ನೋವಾಯಿತು” ಎಂದು ಹೇಳಿದರು. ಖ್ಯಾತ ಬಾಲಿವುಡ್ ಕೊರಿಯೋಗ್ರಾಫರ್ ಗಣೇಶ್ ಆಚಾರ್ಯ, ನಟಿ ಶುಭಾ ಪೂಂಜ ಮೊದಲಾದವರು ಹಾಡಿನ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಅದೃಷ್ಟವಶಾತ್ ಯಾರಿಗೂ ತೊಂದರೆ ಆಗಿಲ್ಲ.…
ಮೂಡುಬಿದಿರೆ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಂತರ್ ಜಿಲ್ಲಾ ಕಳ್ಳರನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. ತುಮಕೂರು ಮೂಲದ ಆಕಾಶ್ ಕಲ್ಕಿ ಹಾಗೂ ವೀರೇಂದ್ರ ಬಂಧಿತ ಆರೋಪಿಗಳು.ಬಂಧಿತರು ಉತ್ತರ ಕನ್ನಡ ಜಿಲ್ಲೆ ಮತ್ತು ದ.ಕ. ಜಿಲ್ಲೆಯ ಮೂಡುಬಿದಿರೆಯಿಂದ ಬೈಕ್ ಕಳವು ಮಾಡಿದ್ದು, ಆರೋಪಿಗಳಿಂದ ಒಟ್ಟು ಅಂದಾಜು 1.8 ಲಕ್ಷ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಅ.27 ರ ಮುಂಜಾನೆಯ ಜಾವ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಾಂತ ಗ್ರಾಮದ ಕೊಡಂಗಲ್ಲು ಮಹಾವೀರ ಕಾಲೇಜಿನ ಎದರು ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ಸಂದರ್ಭ ದ್ವಿ ಚಕ್ರ ವಾಹನದಲ್ಲಿ ಬರುತ್ತಿದ್ದ ಇಬ್ಬರನ್ನು ವಾಹನ ನಿಲ್ಲಿಸಲು ಹೇಳಿದಾಗ ವಾಹನ ನಿಲ್ಲಿಸದೇ ಹಿಂತಿರುಗಲು ಪ್ರಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅ.10 ರಂದು ಉತ್ತರಕನ್ನಡ ಜಿಲ್ಲೆಯ ಮುರುಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ಒಂದು ಬೈಕ್ ಮತ್ತು ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರ್ಪಾಡಿ ಗ್ರಾಮದ ಖಾಸಗಿ ಕಾಲೇಜಿನ ಎದುರು ಇರುವ ಅಪಾರ್ಟ್ಮೆಂಟ್ ಒಂದರ ಪಾರ್ಕಿಂಗ್…
ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಟೈಪಿಸ್ಟ್, ಸ್ಟೆನೋಗ್ರಾಫರ್, ಜವಾನ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಶೀಘ್ರ ಲಿಪಿಗಾರ, ಜವಾನ ಸೇರಿದಂತೆ ಒಟ್ಟು 54 ಹುದ್ದೆಗಳ ನೇಮಕಾತಿ ನಡೆಸಲಾಗುವುದು. ಅರ್ಹ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಕುರಿತು ಅರ್ಜಿ ಸಲ್ಲಿಕೆ ಸೇರಿದಂತೆ ಸಂಪೂರ್ಣ ಮಾಹಿತಿ ಇಲ್ಲಿದೆ.. ಹುದ್ದೆ ವಿವರ: ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಮಾಹಿತಿ ಇಲ್ಲಿದೆ. ಶೀಘ್ರ ಲಿಪಿಗಾರ ಹುದ್ದೆ- 10 ಬೆರಳಚ್ಚುಗಾರ ಹುದ್ದೆ 6 ಬೆರಳಚ್ಚು-ನಕಲುಗಾರ ಹುದ್ದೆ- 2 ಜವಾನ ಹುದ್ದೆಗಳು -36 ವಿದ್ಯಾರ್ಹತೆ: ಶೀಘ್ರ ಲಿಪಿಗಾರ, ಬೆರಳಚ್ಚುಗಾರ ಮತ್ತು ನಕಲಿಗಾರ ಹುದ್ದೆಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮಾ ಇನ್ ಕರ್ಮಷಿಯಲ್ ಪ್ರಾಕ್ಟೀಸ್ ವಿದ್ಯಾರ್ಹತೆ ಹೊಂದಿರಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಶೀಘ್ರ ಲಿಪಿ ಮತ್ತು ಬೆರಳಚ್ಚಿನಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ…
ಮಂಗಳೂರು: ಕುಚ್ಚಲಕ್ಕಿ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕೆ.ಜಿ.ಗೆ 15ರಿಂದ 20 ರೂ. ಹೆಚ್ಚಳವಾಗಿ 48 ರಿಂದ 50 ರೂ. ನಲ್ಲಿ ಮಾರಾಟವಾಗುತ್ತಿರುವ ಹಿನ್ನಲೆಯಲ್ಲಿ ಕರಾವಳಿಯ ಜನತೆ ಕಂಗಾಲಾಗಿದ್ದಾರೆ. ಕುಚ್ಚಲಕ್ಕಿ ಬೆಲೆಯಲ್ಲಿ ಭಾರೀ ಹೆಚ್ಚಳವಾದರೂ, ಭತ್ತದ ಬೆಲೆ ಕೆ.ಜಿ.ಗೆ 2-3 ರೂ. ಮಾತ್ರ ಏರಿಕೆಯಾಗಿದೆ ಎಂದು ರೈತರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನ್ನು ಖಾಸಗಿ ಮಿಲ್‌ಗಳಲ್ಲಿ ಸ್ಥಳೀಯ ಭತ್ತಕ್ಕೆ ಕ್ವಿಂಟಾಲ್‌ಗೆ 2,500-2,600 ರೂ. ಇದೆ. ಕಟಾವು ಚುರುಕುಗೊಂಡ ತಕ್ಷಣ ಬೆಲೆ ಇಳಿಮುಖವಾಗುವ ಭೀತಿಯೂ ಎದುರಾಗಿದೆ.ಕರಾವಳಿ ಸೇರಿದಂತೆ ಮಲೆನಾಡು, ಬಯಲುಸೀಮೆ ಭಾಗದಲ್ಲೂ ಕಾರ್ಮಿಕರ ಕೊರತೆ, ಬೆಲೆಯ ಅಸ್ಥಿರತೆ ಇತ್ಯಾದಿ ಕಾರಣಕ್ಕೆ ಭತ್ತದ ಬೇಸಾಯ ಕುಸಿತ ಕಂಡಿದ್ದು, ಇದರಿಂದಾಗಿ ಕುಚ್ಚಲಕ್ಕಿ ಬೆಲೆ ಏರಿಕೆಯಾಗಿದೆ. ಆದರೆ ಮಧ್ಯವರ್ತಿಗಳು ಭತ್ತದ ಬೆಳೆಯನ್ನು ಏರದಂತೆ ತಡೆಯುತ್ತಿದ್ದಾರೆ ಎಂದು ರೈತರು ಆರೋಪವನ್ನು ಮಾಡುತ್ತಿದ್ದಾರೆ. ಭತ್ತ ಹಾಗೂ ಅಕ್ಕಿ ನಡುವಿನ ಬೆಲೆ ವ್ಯತ್ಯಾಸವನ್ನು ಸರಿಪಡಿಸಿ ರೈತರಿಗೆ ನ್ಯಾಯ ಒದಗಿಸಲು ಸರಕಾರ ಮಧ್ಯಪ್ರವೇಶಿಸಿ ಕೂಡಲೇ ಭತ್ತಕ್ಕೆ ಹೆಚ್ಚಿನ ಬೆಂಬಲ ಬೆಲೆ ನಿಗದಿಪಡಿಸಬೇಕು. ಅದಕ್ಕಿಂತ ಕಡಿಮೆ ಬೆಲೆಯಲ್ಲಿ…
ಸುಳ್ಯ : ಯುವಕನೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಗುತ್ತಿಗಾರಿನಲ್ಲಿ ನಡೆದಿದೆ.ಸುಳ್ಯ ಗುತ್ತಿಗಾರಿನ ಆಚಳ್ಳಿಯ ಸಿರಿಯಾಕ್ ಮ್ಯಾಥ್ಯೂ ಎಂಬವರ ಮಗ ಸೈಬಿನ್ ಆತ್ಮಹತ್ಯೆಗೆ ಮಾಡಿಕೊಂಡ ಯುವಕ.ಸೈಬಿನ್ ನಿನ್ನೆ ಗುತ್ತಿಗಾರು ಪೇಟೆಗೆ ಆಗಮಿಸಿದ್ದು, ಎಲ್ಲರ ಜೊತೆ ಸಂತೋಷದಿಂದ ಮಾತನಾಡಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಸೈಬಿನ್ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಅವರ ಹಳೆ ಮನೆಯ ಪಕ್ಕ ಜಮಾಯಿಸಿದ್ದು, ಪೊಲೀಸರು ಆಗಮಿಸಿ ಜನರನ್ನು ಚದುರಿಸಿದರು ಎಂದು ವರದಿಯಾಗಿದೆ.
ಮಂಗಳೂರು: ಕುಂದಾಪುರದಿಂದ ಮೈಸೂರು- ಮಂಡ್ಯಕ್ಕೆ ತೆರಳುವ ಖಾಸಗಿ ಮೋಟಾಸ್೯ ಬಸ್ ಚಾಲಕನ ಧಾವಂತಕ್ಕೆ ಒಂದು ಹಸು ಸಾವನ್ನಪ್ಪಿ, ಇನ್ನೊಂದು ಗಂಭೀರ ಗಾಯಗೊಂಡಿರುವ ಘಟನೆ ಕೋಡಿಕಲ್ ಜಂಕ್ಷನ್‌ನಲ್ಲಿ ಶುಕ್ರವಾರ ತಡರಾತ್ರಿ ವೇಳೆ ಸಂಭವಿಸಿದೆ. ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ವಾಹನ ಸವಾರರು ಬಸ್ ತಡೆದು ಚಾಲಕನನ್ನು ತರಾಟೆಗೆತ್ತಿಕೊಂಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಮಂಗಳೂರು : ದಶಕಗಳ ಬಳಿಕ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರ ಕನಸು ನನಸಾಗುತ್ತಿದೆ. ಇದುವರೆಗೆ ಬಾಡಿಗೆ ಕಟ್ಟಡಗಳಲ್ಲೇ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಠಾಣೆ ಇದೀಗ ಸ್ವಂತ ಕಟ್ಟಡಕ್ಕೆ ಸ್ಥಳಾಂತರವಾಗುತ್ತಿದೆ. ಮಂಗಳೂರು ಹೊರವಲಯದ ವಾಮಾಂಜೂರಿನಲ್ಲಿ ಸುಸಜ್ಜಿತ ಸ್ವಂತ ಕಟ್ಟಡ ನಿರ್ಮಾಣಗೊಂಡಿದ್ದು. ಇದೇ ಅಕ್ಟೋಬರ್ 29 ರಂದು ಭಾನುವಾರದಂದು ನೂತನ ಪೊಲೀಸ್ ಠಾಣಾ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ, ರಾಜ್ಯ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್, ಜಿಲ್ಲಾ ಉಸ್ತುವರಿ ಸಚಿವರಾದ ದಿನೇಶ್ ಗುಂಡೂರಾವ್, ವಿಧಾನ ಸಭಾ ಸಭಾಪತಿ ಯು ಟಿ ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ,ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವೇದವ್ಯಾಸ್ ಕಾಮತ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಲೋಕ್ ಮೋಹನ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪಶ್ಚಿಮ ವಲಯ ಐಜಿಪಿ ಡಾ, ಚಂದ್ರಗುಪ್ತಾ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ , ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಸಹಿತ…
ಬೆಳ್ತಂಗಡಿ: ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಯಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. 2022 ಜುಲೈ 26ರಂದು ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ನಂಬರ್ 23 ಆಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್(32) ಎಂಬಾತ ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಲು ಸಹಕರಿಸಿದ ಹಿನ್ನೆಲೆಯಲ್ಲಿ ಎನ್.ಐ.ಎ ಅಧಿಕಾರಿಗಳು ಈ ಮೊದಲೇ ಪಡಂಗಡಿಯಲ್ಲಿರುವ ಮನೆಗೆ ದಾಳಿ ಮಾಡಿದ್ದರು.ಈ ವೇಳೆ ನೌಷದ್ ಪ್ರಕರಣ ನಡೆದ ಬಳಿಕ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು.ಎನ್.ಐ.ಎ ಅಧಿಕಾರಿಗಳು ನೋಟಿಸ್ ನೀಡಿ ಹೋಗಿದ್ದರು. ಇದೀಗ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ನೌಷದ್ ಬಗ್ಗೆ ಸುಳಿವು ನೀಡಿದವರಿಗೆ ಎನ್.ಐ.ಎ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಲ್ಲಿ ಮಾಹಿತಿ ಗೌಪ್ಯವಾಗಿಟ್ಟು ಆ ವ್ಯಕ್ತಿಗೆ ಎರಡು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿರುವುದಾಗಿ ಎನ್.ಐ.ಎ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.










