ಮಂಗಳೂರು: ಇತ್ತೀಚೆಗೆ ಸೈಬರ್ ಫ್ರಾಡ್ ವಿವಿಧ ರೀತಿಯಲ್ಲಿ ನಡೆಯುತ್ತಿದೆ. ಜನರನ್ನು ವಂಚನೆಗೊಳಿಸಿ ಸುಲಭವಾಗಿ ದುಡ್ಡು ಮಾಡುತ್ತಿದ್ದ ಸೈಬರ್ ದಂಧೆಕೋರರು ಇದೀಗ ಮಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿಯೇ ನಕಲಿ ವಾಟ್ಸಾಪ್ ಸೃಷ್ಟಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ವಾಟ್ಸಾಪ್‌ನಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಫೋಟೋವನ್ನೇ ದುರ್ಬಳಕೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಬಳಿಕ ಅನುಪಮ್ ಅಗರ್ವಾಲ್ ಹೆಸರಿನಲ್ಲಿ ಹಲವರಿಗೆ ವಾಟ್ಸಾಪ್ ಸಂದೇಶ ಕಳಿಸಿ, ತಾನು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್. ಆಸ್ಪತ್ರೆಯಲ್ಲಿದ್ದೇನೆ. ಯುಪಿಐ ಕೆಲಸ ಮಾಡುತ್ತಿಲ್ಲ, ಸ್ವಲ್ಪ ಹಣ ಇದ್ದರೆ ಕೊಡಿ, ಒಂದು ಗಂಟೆಯಲ್ಲಿ ವಾಪಾಸ್ ಕೊಡುತ್ತೇನೆ” ಎಂದು ವಾಟ್ಸಾಪ್ ಸಂದೇಶ ಕಳುಹಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ. ಮಂಗಳೂರಿನ ಹಲವರಿಗೆ ಕಮಿಷನರ್ ಹೆಸರಿನಲ್ಲಿ ಇದೇ ರೀತಿಯಲ್ಲಿ ಸಂದೇಶ ರವಾನೆಯಾಗಿದೆ. ಮಂಗಳೂರು ಕಮಿಷನರ್ ಅಧಿಕೃತ ವಾಟ್ಸಾಪ್ ಖಾತೆಯ ಫೋಟೋ ಬಳಸಿ ನಕಲಿ ಖಾತೆ ಸೃಷ್ಟಿಸಲಾಗಿದೆ. 8319051976 ಮೊಬೈಲ್ ಸಂಖ್ಯೆಯಲ್ಲಿ ಈ ನಕಲಿ ವಾಟ್ಸಾಪ್ ಖಾತೆ ಸೃಷ್ಟಿಯಾಗಿದೆ. ನಕಲಿ ಖಾತೆ ಸೃಷ್ಟಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ…
Author: main-admin
ಮಂಗಳೂರು: ಕಾಮುಕನೊಬ್ಬ ಹೆಂಚು ತೆಗೆದು ಬೆಡ್ ರೂಂ ಗೆ ನುಗ್ಗಿ ಮಂಚದಡಿಯಲ್ಲಿ ಅಡಗಿ ಕುಳಿತು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಮಂಗಳೂರಿನ ಕೋಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಹರೇಕಳ ನಿವಾಸಿ ನೌಫಾಲ್ (38) ನನ್ನು ಬಂಧಿಸಲಾಗಿದೆ. ನಿನ್ನೆ ರಾತ್ರಿ ಮನೆಯೊಂದರ ಹಂಚು ತೆಗೆದು ಮನೆಯ ಬೆಡ್ ರೂಂಗೆ ನುಗ್ಗಿದ ನೌಫಾಲ್ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಹೆಂಚು ತೆಗೆದು ಒಳಗೆ ನುಗ್ಗಿದ ನೌಫಾಲ್ ಮಂಚದ ಅಡಿಯಲ್ಲಿ ಮಲಗಿದ್ದ. ರಾತ್ರಿ 10 ರ ಸುಮಾರಿಗೆ ತನ್ನ ಮಕ್ಕಳಿಬ್ಬರ ಜೊತೆ ಮಹಿಳೆ ಮಲಗಿದ್ದರು.ರಾತ್ರಿ 12.10 ರ ಸುಮಾರಿಗೆ ಮಹಿಳೆಗೆ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆ ಕಿರುಚುತ್ತಾ ಲೈಟ್ ಹಾಕಿದಾಗ ಮೊಬೈಲ್ ಬಿಟ್ಟು ನೌಫಾಲ್ ಪರಾರಿಯಾಗಿದ್ದಾನೆ. ಮೊಬೈಲ್ ಆಧಾರದ ಮೇಲೆ ಬಂದಿದ್ದು ನೌಫಾಲ್ ಅಂತಾ ಗೊತ್ತಾಗಿದೆ. ಬಳಿಕ ಆತನನ್ನು ಬಂಧಿಸಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಂಗಳೂರು: ಬಿಗ್ ಬಾಸ್ ಸ್ಪರ್ಧಿಯೊಬ್ಬರು ಹುಲಿ ಉಗುರಿನ ಪೆಂಡೆಂಟ್ ಹಾಕಿಕೊಂಡು ಅರೆಸ್ಟ ಆದ ಬಳಿಕ ಇದೀಗ ಅರಣ್ಯ ಸಂರಕ್ಷಣಾ ಕಾಯಿದೆಯ ಬಗ್ಗೆ ಜನರಿಗೆ ಕುತೂಹಲ ಮೂಡಲಾರಂಭಿಸಿದೆ. ಈ ಬಗ್ಗೆ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ಕೂಡ ಜನರಿಗೆ ಅರಣ್ಯ ಕಾಯಿದೆ ಬಗ್ಗೆ ಅರಿವು ಮೂಡಿಸುವ ಅಗತ್ಯ ಇದೆ ಎಂದು ಹೇಳಿದ್ದಾರೆ. ಈ ನಡುವೆ ಹುಲಿ ಉಗುರು ಅಲ್ಲದೆ ಮನೆಯಲ್ಲಿ ನವೀಲು ಗರಿ ಇಟ್ಟುಕೊಳ್ಳುವುದು ಕೂಡ ಅರಣ್ಯ ಸಂರಕ್ಷಣಾ ಕಾಯಿದೆ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಒಂದು ಹುಲಿ ಉಗುರಿನ ಪೆಂಡೆಂಟ್ ಇದೀಗ ರಾಜ್ಯದಲ್ಲಿ ಭಾರೀ ಸದ್ದನ್ನು ಮಾಡಿದ್ದು, ಬಿಗ್ ಬಾಸ್ ಸ್ಪರ್ಧಿ ಅರೆಸ್ಟ್ ಆದ ಬೆನ್ನಲ್ಲೇ ಇದೀಗ ಹಲವು ನಟರು ರಾಜಕರಾಣಿಗಳಿಗೆ ಸಂಕಷ್ಟ ತಂದೊಡ್ಡಿದೆ. ಹಾಗೆಯೇ ವನ್ಯಜೀವಿ ನವಿಲು ಸಾಕುವುದೂ ಅಪರಾಧ. ನವಿಲಿನ ಗರಿಯನ್ನೂ ಇಟ್ಟುಕೊಳ್ಳುವಂತಿಲ್ಲ. ಅರಣ್ಯದಂಚಿನ ಗ್ರಾಮದಲ್ಲಿದ್ದು, ನವಿಲು ಜನರ ಮನೆಯ ಆವರಣಕ್ಕೆ ಸ್ವ ಇಚ್ಛೆಯಿಂದ ಬಂದರೆ ಅಡ್ಡಿಯಿಲ್ಲ. ಆದರೆ, ಅದನ್ನು ಜನ ಸಾಕುವಂತಿಲ್ಲ . 1972ರ ವನ್ಯಜೀವಿ ಕಾಯ್ದೆ…
ಮಂಗಳೂರು: ದುಬೈಯ ಸಲಾವುದ್ದೀನ್ ಎಂಬಲ್ಲಿ ಕರಾವಳಿ ಮೂಲದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ. ಮೃತರನ್ನು ಕೂಳೂರು ಪಂಜಿಮೊಗರು ವಿದ್ಯಾನಗರ ನಿವಾಸಿ ಮುಹಮ್ಮದ್ ಎಂಬವರು ಪುತ್ರ ಅಖ್ತರ್(27) ಎಂದು ಗುರುತಿಸಲಾಗಿದೆ. ಅಖ್ತರ್ ಕಳೆದ 7 ತಿಂಗಳಿನಿಂದ ದುಬೈಯಲ್ಲಿ ದುಡಿಯುತ್ತಿದ್ದರು.ಭಾನುವಾರ ಕರ್ತವ್ಯ ಮುಗಿಸಿ ರೂಮಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅಖ್ತರ್ ಏಳದಿದ್ದಾಗ ಸಂಗಡಿಗರು ಪರಿಶೀಲಿಸಿದಾದ ಅವರು ನಿಧನರಾಗಿದ್ದರು ಎಂದು ತಿಳಿದುಬಂದಿದೆ.ಮೃತದೇಹವನ್ನು ಊರಿಗೆ ತರುವ ನಿಟ್ಟಿನಲ್ಲಿ ಕೆಸಿಎಫ್ ಸಂಘಟನೆಯ ಪದಾಧಿಕಾರಿಗಳು, ಸೌದಿಯಲ್ಲಿರುವ ಮೃತರ ಸಹೋದರ ಇರ್ಫಾನ್ ಸ್ಥಳಕ್ಕೆ ಆಗಮಿಸಿದ್ದು ಕ್ರಮ ಕೈಗೊಂಡಿದ್ದಾರೆ. ಮೃತರು ತಂದೆ, ತಾಯಿ, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.
ಕಾಪು: ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಕಲ್ಲಟ್ಟ ಎಂಬಲ್ಲಿ ಸಂಭವಿಸಿದೆ. ಕಲ್ಲಟ್ಟ ನಿವಾಸಿ ಆನಂದ ಪೂಜಾರಿ ಅವರ ಪುತ್ರಿ ಅನನ್ಯಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಶಂಕರಪುರ ಸೈಂಟ್ ಜೋನ್ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಈಕೆ ರಾತ್ರಿ ತಂದೆ ತಾಯಿ ಮತ್ತು ಸಹೋದರನೊಂದಿಗೆ ಒಂದೇ ಕೋಣೆಯಲ್ಲಿ ಮಲಗಿದ್ದು, ಬಳಿಕ ಪಕ್ಕದ ಕೋಣೆಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಓದಿನಲ್ಲಿ ಚುರುಕಾಗಿದ್ದ ಅನನ್ಯ ಎಲ್ಲರೊಂದಿಗೂ ಅನ್ನೋನ್ಯವಾಗಿದ್ದು ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾಳೆ. ಕಾಪು ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಉಡುಪಿ: ಮಣಿಪಾಲದಲ್ಲಿ 2020ರ ಸೆಪ್ಟೆಂಬರ್ 10ರಂದು ಗಾಂಜಾ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ಮಣಿಪಾಲ ಪೊಲೀಸರಿಂದ ಬಂಧಿಸಲ್ಪಟ್ಟ ಧಾರವಾಡ ಮೂಲದ ಫಾರೂಕ್ ಶೇಖ್ ಹಾಗೂ ಅಬ್ದುಲ್ ರಜಾಕ್ ಎಂಬ ಆರೋಪಿಗಳಿಗೆ ಉಡುಪಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಾಂತವೀರ ಶಿವಪ್ಪ ಇವರು ಒಂದು ವರ್ಷದ ಕಠಿಣ ಸಜೆ ಹಾಗೂ ತಲಾ 20,000ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಆರೋಪಿಗಳಿಬ್ಬರು 2020ರ ಸೆಪ್ಟೆಂಬರ್ 10ರಂದು ಸಂಜೆ 4ಗಂಟೆ ಸುಮಾರಿಗೆ ಮಣಿಪಾಲದ ಶಿಂಬ್ರಾ ಎಂಬಲ್ಲಿರುವ ಬಾಬಾ ಪಾಯಿಂಟ್ ಕ್ರಾಸ್ ಬಳಿ ಕಾರು ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡುತಿದ್ದಾಗ ಮಾಹಿತಿ ಪಡೆದು ಸ್ಥಳಕ್ಕೆ ದಾಳಿ ನಡೆಸಿದ ಮಣಿಪಾಲ ಠಾಣೆ ಪಿಎಸ್‌ಐ ರಾಜಶೇಖರ್ ವಂದಲಿ ಇವರಿಂದ ಬಂಧಿಸಲ್ಪಟ್ಟಿದ್ದರು. ಈ ವೇಳೆ ಅವರ ಬಳಿ ಎರಡು ಕೆ.ಜಿ.7ಗ್ರಾಂ ತೂಕದ ಗಾಂಜಾ ಪತ್ತೆಯಾಗಿತ್ತು. ಗಾಂಜಾದೊಂದಿಗೆ ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು ಕಾರನ್ನು ವಶಪಡಿಸಿಕೊಂಡಿದ್ದರು. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸಿದ ಮಣಿಪಾಲ ವೃತ್ತ ನಿರೀಕ್ಷಕ ಮಂಜುನಾಥ ಆರೋಪಿಗಳಿಬ್ಬರ…
ಮೂಲ್ಕಿ : ರೈಲ್ವೆ ಮೇಲ್ಸೆತುವೆ ಮೇಲೆ ನಡೆದ ಆತ್ಮಹತ್ಯೆ ಪ್ರಕರಣದ ತನಿಖೆಗೆ ಪೊಲೀಸರು ತೆರಳಿದ್ದ ವೇಳೆ ರೈಲೊಂದು ಹಾದು ಹೋದ ಘಟನೆ ನಡೆದಿದ್ದು, ಪೊಲೀಸರು ಹಳಿಯ ಬದಿಗೆ ಹಾರಿ ಜೀವ ಉಳಿಸಿಕೊಂಡಿದ್ದಾರೆ. ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕುಬೆವೂರು ರೈಲ್ವೇ ಮೇಲ್ವೇತುವೆಯ ಕೆಳಗಡೆ ಮೂಲ್ಕಿ ರೈಲ್ವೇ ಸ್ಟೇಷನ್ ಸಿಬ್ಬಂದಿ ಕುಮಾರ್ ಎಂಬವರ ಪುತ್ರನಾದ ಮೂಲತಃ ತಮಿಳುನಾಡು ನಿವಾಸಿ ವಿಶ್ಲೇಶ್ (26) ಭಾನುವಾರ ರಾತ್ರಿ 8:30 ಸುಮಾರಿಗೆ ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಶ್ಲೇಶ್ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿ ಸುರತ್ಕಲ್ ಎನ್‌ಐಟಿಕೆ ಯಲ್ಲಿ ತರಬೇತಿ ಮಾಡುತ್ತಿದ್ದರು ಎನ್ನಲಾಗಿದ್ದು, ಕೆಲಸ ಇಲ್ಲದೆ ಇರುವ ಚಿಂತೆ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ. ಈ ನಡುವೆ ಯುವಕನ ಆತ್ಮಹತ್ಯೆಯ ತೀವ್ರ ಇಕ್ಕಟ್ಟಾಗಿರುವ ಕುಬೆವೂರು ರೈಲ್ವೆ ಮೇಲ್ವೇತುವೆ ಕೆಳಗಡೆ ನಡೆದಿದ್ದು, ತನಿಖೆಗೆ ಹೋದ ನಾಲ್ವರು ಮೂಲ್ಕಿ ಪೊಲೀಸ್ ಠಾಣೆಯ ಅಧಿಕಾರಿಗಳಾದ ಎಎಸ್‌ಐ ಸಂಜೀವ, ಚಂದ್ರಶೇಖರ್, ಶಂಕರ್ ಬಸವರಾಜ್ ತನಿಖೆ…
ಕಾಸರಗೋಡು: ಮಂಜೇಶ್ವರ ಚುನಾವಣಾ ಲಂಚ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ರಾಜ್ಯ ಅಧ್ಯಕ್ಷ ಕೆ. ಸುರೇಂದ್ರ ನ್ ಸೇರಿದಂತೆ ಎಲ್ಲಾ ಆರೋಪಿಗಳು ಬುಧವಾರ ಕಾಸರಗೋಡು ಪ್ರಿನ್ಸಿಪಲ್ ಸೆಶನ್ಸ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಆರೋಪಿಗಳಿಗೆ ಜಾಮೀನು ನೀಡಲಾಗಿದ್ದು, ಮುಂದಿನ ವಿಚಾರಣೆಯನ್ನು ನ.15ಕ್ಕೆ ಮುಂದೂಡಲಾಗಿದೆ. ಯುವ ಮೋರ್ಚಾ ರಾಜ್ಯ ಕೋಶಾಧಿಕಾರಿ ಸುನಿಲ್ ನಾಯ್ಕ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಕೆ. ಸುರೇಶ್ ನಾಯ್ಕ್ , ಮಣಿಕಂಠ ರೈ, ಲೋಕೇಶ್ ನೋಂಡಾ ಇತರರು ಈ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ. ಈ ಹಿಂದೆ ಮೂರು ಬಾರಿ ನ್ಯಾಯಾಲಯ ಹಾಜರಾಗಲು ನೋಟಿಸ್ ನೀಡಿತ್ತು. ಆದರೆ ಆರೋಪಿಗಳು ಹಾಜರಾಗಿರಲಿಲ್ಲ.ಬುಧವಾರ ನಡೆದ ವಿಚಾರಣೆ ವೇಳೆ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿದ್ದರು. 2021 ರ ವಿಧಾನಸಭಾ ಚುನಾವಣೆಯಲ್ಲಿ ಮಂಜೇಶ್ವರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಕೆ. ಸುರೇಂದ್ರ ನ್ ಬಿ ಎಸ್ಪಿ ಅಭ್ಯರ್ಥಿಯಾಗಿದ್ದ ಕೆ. ಸುಂದರರಿಂದ ನಾಮಪತ್ರ ಹಿಂತೆಗೆಯಲು ಎರಡೂವರೆ ಲಕ್ಷ ರೂ. ಹಾಗೂ ಮೊಬೈಲ್ ಫೋನ್ ನೀಡಿ ನಾಮಪತ್ರ ಹಿಂಪಡೆಯಲಾಗಿತ್ತು. ಚುನಾವಣೆ ಬಳಿಕ ಪ್ರಕರಣ ಬಳಿಕ…
ಬೆಂಗಳೂರು: ಸೆಲೆಬ್ರೆಟಿಗಳಿಗೆ ಈಗ ಹುಲಿ ಉಗುರು ಧರಿಸಿದ ಸಂಬಂಧ ಸಂಕಷ್ಟ ಎದುರಾಗಿದೆ. ಸಾಲು ಸಾಲು ನಟರ ವಿರುದ್ಧ ದೂರು ದಾಖಲಾದ ಬೆನ್ನಲ್ಲೇ, ಅರಣ್ಯ ಇಲಾಖೆಯ ಅಧಿಕಾರಿಗಳು ಅಲರ್ಟ್ ಆಗಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿರೋದಲ್ಲದೇ, ಅವರ ನಿವಾಸದ ಮೇಲೆ ರೇಡ್ ಕೂಡ ಮಾಡಿ, ಪರಿಶೀಲನೆಯಲ್ಲಿ ತೊಡಗಿದ್ದಾರೆ. ಹೌದು ನಟ ಜಗ್ಗೇಶ್, ಛಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ನಿರ್ಮಾಪಕ, ನಟ ರಾಕ್ ಲೈನ್ ವೆಂಕಟೇಶ್ ಅವರು ಹುಲಿ ಉಗುರು ಧರಿಸಿದ ಸಂಬಂಧ ಅರಣ್ಯ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಹುಲಿ ಉಗುರು ಧರಿಸಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಿ ಮಾಹಿತಿಯನ್ನು ವಿಚಾರಣಾಧಿಕಾರಿಗಳ ಮುಂದೆ ನೀಡುವಂತೆ ನೋಟಿಸ್ ನಲ್ಲಿ ಸೂಚಿಸಲಾಗಿದೆ. ಇನ್ನೂ ಇದಷ್ಟೇ ಅಲ್ಲದೇ ಮಲ್ಲೇಶ್ವರಂನಲ್ಲಿರುವಂತ ನಟ ಜಗ್ಗೇಶ್ ನಿವಾಸ, ಆರ್ ಆರ್ ನಗರದಲ್ಲಿರುವಂತ ನಟ ದರ್ಶನ್ ಮನೆ ಹಾಗೂ ಮಹಾಲಕ್ಷ್ಮೀ ಲೇಔಟ್ ನಲ್ಲಿ ಇರುವಂತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರ ನಿವಾಸದ ಮೇಲೆ ಅರಣ್ಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆಯನ್ನು ನಡೆಸುತ್ತಿದ್ದಾರೆ.…
2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಪೊಲೀಸ್ ಕಾನ್ಸ್ಟೇಬಲ್ಸ್ (ಸಿವಿಲ್) ಪುರುಷ ಮತ್ತು ಮಹಿಳೆ, ತೃತೀಯ ಲಿಂಗ ಪುರುಷ ಮತ್ತು ಮಹಿಳೆ ಹಾಗೂ ಸೇವಾನಿರತ, ಬ್ಯಾಕ್ಲಾಗ್ – 454 ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆಯು ನ.05 ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30 ರವರೆಗೆ ಬಳ್ಳಾರಿ ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ ಎಂದು ಪೊಲೀಸ್ ಸೂಪರಿಂಟೆಂಡೆಂಟ್ ಅವರು ತಿಳಿಸಿದ್ದಾರೆ. ಪರೀಕ್ಷಾ ಕೇಂದ್ರಗಳ ಹೆಸರು ಮತ್ತು ವಿಳಾಸ ಗಾಂಧಿನಗರ 2ನೇ ಕ್ರಾಸ್ನ ಬಾಲ ಭಾರತಿ ಶಾಲೆ, ಸಿರುಗುಪ್ಪ ರಸ್ತೆಯ ಕುರಿಹಟ್ಟಿಯ ಬಳ್ಳಾರಿ ಬಿಸಿನೆಸ್ ಕಾಲೇಜು, ಪಟೇಲ್ ನಗರದ ಬಸವರಾಜೇಶ್ವರಿ ಪಬ್ಲಿಕ್ ಸ್ಕೂಲ್ ಮತ್ತು ಕಾಲೇಜು, ರಿಸರ್ವ್ ಪೆÇಲೀಸ್ ಮೈದಾನ ಎದುರಿನ ಎಂ.ಜಿ.ಎಂ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪಟೇಲ್ ನಗರದ ನಂದಿ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮತ್ತು ಸೈನ್ಸ್ ಕಾಲೇಜು, ಹವಂಭಾವಿಯ ನ್ಯೂ ಶ್ರೀ ಚೈತನ್ಯ ಪಿ.ಯು.ಕಾಲೇಜು, ಕಂಟೋನ್ಮೆಂಟ್ನ ರಾವ್ ಬಹದ್ದೂರ್ ವೈ.ಮಹಾಬಲೇಶ್ವರ ಎಂಜಿನಿಯರಿಂಗ್ ಕಾಲೇಜು, ವೈ.ನಾಗೇಶ ಶಾಸ್ತ್ರಿ ನಗರದ ಎಸ್ಜಿ ಪದವಿ…










