Author: main-admin

ಮಂಗಳೂರು :  ಮಂಗಳೂರು ದಸರಾದ ಶೋಭಾಯಾತ್ರೆಯಲ್ಲಿ ಧರ್ಮಸ್ಥಳದಲ್ಲಿ ಕೊಲೆಯಾದ ಸೌಜನ್ಯಳ ಭಾವ ಚಿತ್ರ ವಿರುವ ಟ್ಯಾಬ್ಲೋ ಗೆ ಅನುಮತಿ ನಿರಾಕರಿಸಿ ವಶಕ್ಕೆ ಪಡೆದ ಘಟನೆ ಮಂಗಳವಾರ ರಾತ್ರಿ ನಡೆದಿದೆ ದಸರಾ ಸಮಿತಿಯಿಂದ ಟ್ಯಾಬ್ಲೋ ಬಗ್ಗೆ ಆಕ್ಷೇಪ ಬಂದ ಕಾರಣ ಟ್ಯಾಬ್ಲೋವನ್ನು ಉರ್ವಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದರಿಂದ ಕೆಲಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ಕಂಡು ಬಂತು. ಮಾಹಿತಿ ಪಡೆದ ಸೌಜನ್ಯ ಪರ ಹೋರಾಟ ಸಮಿತಿಯ ಪದಾಧಿಕಾರಿಗಳು ಪೊಲೀಸ್ ಠಾಣೆಗೆ ಧಾವಿಸಿ ಬಂದು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುವ ಪ್ರಯತ್ನ ನಡೆಸಿದರೂ ಇದಕ್ಕೆ ಒಪ್ಪದ ಪೊಲೀಸ್ ಅಧಿಕಾರಿಗಳು ಟ್ಯಾಬ್ಲೋ ಗೆ ಹೋಗಲು ಅನುಮತಿ ನಿರಾಕರಿಸಿದರು. ಪೋಲಿಸರ ಈ ನಡವಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೌಜನ್ಯ ಪರ ಹೋರಾಟಗಾರರು ಟ್ಯಾಬ್ಲೋದಲ್ಲಿ ಸೌಜನ್ಯಳ ಭಾವಚಿತ್ರ ಹೊರತು ಪಡಿಸಿ ಆಕ್ಷೇಪಾರ್ಹ ಯಾವುದೇ ಬರಹಗಳು, ಅಥವಾ ಇತರ ವಿಷಯ ಇರಲಿಲ್ಲ, ಈ ಟ್ಯಾಬ್ಲೋ ದಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ವಿರುದ್ದ ಯಾವುದೇ ಮಾನಹಾನಕಾರಕ ವಿಷಯಗಳನ್ನು ಹಾಕಿರಲಿಲ್ಲ. ರಕ್ತ ಬಿಜಾಸುರ…

Read More

ಮಂಗಳೂರು: ಮಂಗಳೂರು ದಸರಾ ಮೆರವಣಿಗೆ ಕಳೆದ ದಿನ(ಅ.24) ಅದ್ದೂರಿಯಾಗಿ ಆರಂಭಗೊಂಡು, ಸಂಪನ್ನಗೊಂಡಿದೆ. ದಸರಾ ಮಹೋತ್ಸವ ನಡೆಯುವ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಸಂಜೆ ಸುಮಾರು 4 ಗಂಟೆಗೆ ದಸರಾ ಮೆರವಣಿಗೆ ಆರಂಭಗೊಂಡಿತು.ವಿಘ್ನವಿನಾಶಕ ಗಣೇಶ, ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾ ಮಾತೆಯ ಬೃಹತ್ ಶೋಭಾಯಾತ್ರೆ ಕೇಂದ್ರದ ಮಾಜಿ ಸಚಿವ ದಸರಾ ಮಹೋತ್ಸವದ ರೂವಾರಿ ಬಿ.ಜನಾರ್ದನ ಪೂಜಾರಿ ನೇತೃತ್ವದಲ್ಲಿ ನಡೆಯಿತು. ಒಂದು ಸಾವಿರ ಆಕರ್ಷಕ ಕೇರಳಾ ಕೊಡೆಗಳು, ನೂರಕ್ಕೂ ಅಧಿಕ ಬ್ಯಾಂಡ್ ಸೆಟ್‌ಗಳು, ಸುಮಾರು 40 ಜಾನಪದ ಕುಣಿತಗಳ ತಂಡ, ಕೇರಳಾ ಚೆಂಡೆವಾದನ, ಕೊಂಬು ಕಹಳೆ, ದೇಶದ ಇತಿಹಾಸವನ್ನು ಬಿಂಬಿಸುವ ಸುಮಾರು 60ಕ್ಕೂ ಹೆಚ್ಚು ಸ್ಥಬ್ದ ಚಿತ್ರಗಳು ಈ ದಸರಾ ಮೆವರಣಿಗೆಗೆ ಮೆರಗು ನೀಡಿತು. ನಗರದ ಸುಮಾರು 7 ಕಿಲೋ ಮೀಟರ್ ದಾರಿಯಲ್ಲಿ ಸಾಗುವ ಈ ಮೆರವಣಿಗೆ ಮುಂಜಾನೆ ಸಮಾಪನಗೊಂಡಿದೆ. ಕುದ್ರೋಳಿ ಕ್ಷೇತ್ರ ಪುಷ್ಕರಣಿಯಲ್ಲಿ ಗಣಪತಿ,ಆದಿಶಕ್ತಿ,ಶಾರದೆ ಹಾಗೂ ನವದುರ್ಗೆಯರ ಮೂರ್ತಿಗಳನ್ನು ಇಂದು ಮುಂಜಾನೆ ನವ ದುರ್ಗೆಯರನ್ನು ಜಲಸ್ಥಂಬನ ಮಾಡುವ ಮುಖೇನ ಸಮಾಪನಗೊಂಡಿತ್ತು. ಮೆರವಣಿಗೆ ಸಾಗುವ…

Read More

ಬಂಟ್ವಾಳ: ಹೆಸರಾಂತ ಬಿಲ್ಡರ್ ಓರ್ವರ ಮನೆಯ ಕೆಲಸಕ್ಕಿದ್ದ ವ್ಯಕ್ತಿಯೋರ್ವ ಲಕ್ಷಾಂತರ ರೂ ಮೌಲ್ಯದ ನಗ ಹಾಗೂ ನಗದನ್ನು ಕಳುವು ಮಾಡಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆ ಎಂಬಲ್ಲಿ ನಡೆದಿದೆ. ತಾಲೂಕಿನ ಪುದು ಗ್ರಾಮದ ಕೋಡಿಮಜಲು ನಿವಾಸಿಯಾಗಿರುವ ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಮನೆಯ ಕಪಾಟಿನೊಳಗೆ ಇರಿಸಲಾಗಿದ್ದ ಲಕ್ಷಾಂತರ ಬೆಲೆ ಬಾಳುವ ಚಿನ್ನಾಭರಣ ಸಹಿತ ಲಕ್ಷಾಂತರ ರೂ ಹಣವನ್ನು ಮನೆಯ ಕೆಲಸದಾತನೇ ಕದ್ದುಕೊಂಡು ಹೋಗಿರುವುದಾಗಿ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.ಸುಮಾರು 27,50,000 ರೂ ನಗದು ಹಾಗೂ 4,96,000 ರೂ.  ಮೌಲ್ಯದ ವಿವಿಧ ಬಗೆಯ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ ಎಂದು ತಿಳಿಸಿದ್ದಾರೆ.ಘಟನೆ ನಡೆದಿದ್ದು ಹೇಗೆ ಮತ್ತು ಯಾವಾಗ?ಇಮಾದ್ ಬಿಲ್ಡರ್ ಮಾಲಕ ಮೊಹಮ್ಮದ್ ಝಫರುಲ್ಲಾ ಎಂಬವರ ಜೊತೆ ಸುಮಾರು 8 ತಿಂಗಳ ಹಿಂದೆ ಕಟ್ಟಡ ಕಾಮಗಾರಿಯ ಕೆಲಸಕ್ಕೆ ಮಂಜೇಶ್ವರ ಮೂಲದ ಆಲಿ ಎಂಬಾತ ಸೇರಿದ್ದ. ಆತನಿಗೆ ಫರಂಗಿಪೇಟೆ ಎಂಬಲ್ಲಿನ ಹುಡುಗಿಯ ಜೊತೆ ವಿವಾಹವಾಗಿದ್ಸು, ಮಾಲಕರ ಜೊತೆ…

Read More

ಮಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ಜಿಲ್ಲೆಯ ಹಲವು ಠಾಣೆಗಳಲ್ಲಿ ಅರೆಸ್ಟ್ ವಾರಂಟ್ ಎದುರಿಸುತ್ತಿದ್ದ ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ, ಪೈವಳಿಕೆ ನಿವಾಸಿ ಮೊಹಮ್ಮದ್ ಹನೀಫ್ ಯಾನೆ ಅಲಿ ಮುನ್ನಾನನ್ನು ಮಂಗಳೂರು ದಕ್ಷಿಣ ಉಪವಿಭಾಗ ಎಸಿಪಿ ಧನ್ಯಾ ನಾಯಕ್ ನೇತೃತ್ವದ ತಂಡ ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ನಟೋರಿಯಸ್ ಶಾರ್ಪ್ ಶೂಟರ್ ಭೂಗತ ಪಾತಕಿ ರವಿ ಪೂಜಾರಿಯ ಕುಕೃತ್ಯಗಳಿಗೆ ಕರಾವಳಿಯ ಪ್ರತಿನಿಧಿಯಾಗಿದ್ದ ಶೂಟರ್ ಹನೀಫ್ ಯಾನೆ ಅಲಿ ಮುನ್ನಾ ಹಲವು ಶೂಟೌಟ್, ದರೋಡೆ, ಬೆದರಿಕೆ ಪ್ರಕರಣದಲ್ಲಿ ರಾಜ್ಯದ ಅನೇಕ ಠಾಣೆಗಳಿಂದ ಅರೆಸ್ಟ್ ವಾರಂಟ್ ಎದುರಿಸುತ್ತಿದ್ದನು. ಈತನ ವಿರುದ್ಧ ಕೊಣಾಜೆ, ಮಂಗಳೂರು ಉತ್ತರ, ಪುತ್ತೂರು, ಬರ್ಕೆ, ವಿಟ್ಲ ಉಳ್ಳಾಲ, ಬೆಂಗಳೂರು ವಿಮಾನ ನಿಲ್ದಾಣ ಠಾಣೆಯಲ್ಲಿ ಹಲವಾರು ಪ್ರಕರಣ ದಾಖಲಾಗಿದೆ. 2010 ಮತ್ತು 2013ರಲ್ಲಿ ಕಾಸರಗೋಡು ಜಿಲ್ಲೆಯ ಬೇವಿಂಜ ಪಿಡಬ್ಲ್ಯುಡಿ ಗುತ್ತಿಗೆದಾರರ ಶೂಟೌಟ್ ಪ್ರಕರಣ, ಮಂಜೇಶ್ವರದಲ್ಲಿ ಕಳ್ಳತನ, ಕುಂಬಳೆ ಹಾಗೂ ವಿದ್ಯಾನಗರ ಠಾಣೆಯಲ್ಲೂ ಪ್ರಕರಣ ದಾಖಲಾಗಿತ್ತು. ಮಂಗಳೂರು ಉತ್ತರ…

Read More

ಮಂಗಳೂರು: ಹುಲಿಕುಣಿತದ ವೇಳೆ ಹುಲಿ ವೇಷಧಾರಿಯೊಬ್ಬರು ಆಯತಪ್ಪಿ ಬಿದ್ದು ಗಾಯಗೊಂಡ ಘಟನೆ ಮಂಗಳಾದೇವಿ ದೇವಸ್ಥಾನದ ವಠಾರದಲ್ಲಿ ನಡೆದಿದೆ. ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಮಂಗಳಾದೇವಿಯ ಎದುರು ಹುಲಿವೇಷ ಧರಿಸಿ ಪ್ರದರ್ಶನದ ವೇಳೆ ಘಟನೆ ನಡೆದಿದ್ದು, ಮುಳಿಹಿತ್ಲು ಎಂಬಲ್ಲಿನ ಹುಲಿವೇಷ ತಂಡದ ಕುಣಿತದ ವೇಳೆ ದುರ್ಘಟನೆ ನಡೆದಿದೆ. ಹುಲಿವೇಷಧಾರಿಯೊಬ್ಬರು ಕಸರತ್ತು ಪ್ರದರ್ಶನದ ವೇಳೆ ರಿವರ್ಸ್ ಪಲ್ಟಿ ಹೊಡೆಯುತ್ತಿದ್ದರು. ಈ ವೇಳೆ ಆಯ ತಪ್ಪಿ ತಲೆ ನೆಲಕ್ಕೆ ಬಡಿದು ಅನಾಹುತ ನಡೆದಿದೆ. ತಲೆ ನೆಲಕ್ಕೆ ಬಡಿದು ಕತ್ತು ಉಳುಕಿದ ಪರಿಣಾಮ ಹುಲಿವೇಷಧಾರಿಗೆ ಗಾಯವಾಗಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿ ಹುಲಿವೇಷಧಾರಿ ಯುವಕನಿಗೆ ಚಿಕಿತ್ಸೆ ನೀಡಲಾಗಿದೆ. ಸದ್ಯ ಸಣ್ಣ ಗಾಯಗಳೊಂದಿಗೆ ಅಪಾಯದಿಂದ ಯುವಕ ಪಾರಾಗಿದ್ದಾರೆ. ಸದ್ಯ ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Read More

ಮಂಗಳೂರು; ಕೆಲಸಕ್ಕೆಂದು ತೆರಳಿದ್ದ ಯುವಕ ನಾಪತ್ತೆಯಾಗಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಕೃಷ್ಣಾಪುರ ಕಾಟಿಪಳ್ಳ ನಿವಾಸಿ ಸುರೇಂದ್ರ ದೇವಾಡಿಗ (31) ನಾಪತ್ತೆಯಾದ ಯುವಕ. ಸುರೇಂದ್ರ ಅವರು ಅ.20ರಂದು ಕೆಲಕ್ಕೆ ಹೋಗುವುದಾಗಿ ಮನೆಯಿಂದ ತೆರಳಿರುವವರು ಮನೆಗೆ ಹಿಂದಿರುಗಿ ಬಾರದೆ ನಾಪತ್ತೆಯಾಗಿದ್ದಾರೆ. ಅವರು ನಾಪತ್ತೆಯಾಗಿರುವ ಕುರಿತು ಸಂಬಂಧಿಕರು ಮತ್ತು ಸ್ನೇಹಿತರಲ್ಲಿ ವಿಚಾರಿಸಿದ್ದು. ಎಲ್ಲೂ ಪತ್ತೆಯಾಗಿಲ್ಲ. ನಾಪತ್ತೆಯಾದ ದಿನದಿಂದ ಅವರ ಮೊಬೈಲ್‌ ಸ್ವಿಚ್ ಆಫ್‌ ಆಗಿದೆ ಎಂದು ಅವರ ಅಣ್ಣ ಪ್ರಸಾದ್‌ ಎಂಬವರು ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read More

ವಿಟ್ಲ: ಸ್ಕೂಟಿ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಆಟೋ ಪ್ರಯಾಣಿಕ ಮೃತಪಟ್ಟ ಘಟನೆ ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ನಡೆದಿದೆ. ಆಟೋ ಪ್ರಯಾಣಿಕ ಪೆರುವೋಡಿ ನಿವಾಸಿ ನಾಗೇಶ್ ಮೃತ ದುರ್ದೈವಿ.ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟಿ ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಆಟೋ ಪ್ರಯಾಣಿಕ ನಾಗೇಶ್ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Read More

ಮಂಗಳೂರು: ಖಾಸಗಿ ಬಸ್‌ನ ಧಾವಂತಕ್ಕೆ ಪಾದಚಾರಿಯೊಬ್ಬರು ಬಸ್ ನಡಿ ಬಿದ್ದು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ನಗರದ ಸ್ಟೇಟ್‌ಬ್ಯಾಂಕ್ ಬಳಿಯ ರಾವ್ ಆ್ಯಂಡ್ ರಾವ್ ಸರ್ಕಲ್‌ನಲ್ಲಿ ಸಂಭವಿಸಿದೆ. ಕೊಣಾಜೆಯ ಹೂಹಾಕುವ ಕಲ್ಲು ಎಂಬಲ್ಲಿಗೆ ತೆರಳುತ್ತಿದ್ದ 54 ಸಂಬರ್‌ನ ಖಾಸಗಿ ಬಸ್ ರಾವ್ ಆ್ಯಂಡ್ ರಾವ್ ಸರ್ಕಲ್ ಬಳಿ ತಿರುವು ಪಡೆಯುತ್ತಿತ್ತು. ಈ ವೇಳೆ ವ್ಯಕ್ತಿಯೊಬ್ಬರು ರಸ್ತೆ ದಾಟುತ್ತಿದ್ದರು. ಆಗ ನೇರವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಮುಂದಿನ ಚಕ್ರದಡಿಗೆ ಬಿದ್ದು ಸಾವನ್ನಪ್ಪಿದ್ದಾರೆ. ವ್ಯಕ್ತಿಯ ತಲೆ ಸಂಪೂರ್ಣ ಛಿದ್ರಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮುಖವೂ ಛಿದ್ರಗೊಂಡ ಪರಿಣಾಮ ಅವರ ಮುಖ ಪರಿಚಯವೂ ಸಾಧ್ಯವಾಗಿಲ್ಲ. ಖಾಸಗಿ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದು ಪಾಂಡೇಶ್ವರ ಪೊಲೀಸರು ಸೆಕ್ಷನ್ 304 ಅಡಿ ಕೊಲೆಗೆ ಸಮಾನ ಆಗಬಲ್ಲ ಅಪರಾಧ ಎಸಗಿದ್ದಾಗಿ ಪ್ರಕರಣ ದಾಖಲಿಸಿದ್ದಾರೆ. ಬಸ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ವ್ಯಕ್ತಿ 40-42 ವಯಸ್ಸಿನವರು ಎನ್ನಲಾಗುತ್ತಿದ್ದು ಅಪರಿಚಿತನ ಪತ್ತೆಗಾಗಿ ಸಂಶಯ ಇದ್ದವರು…

Read More

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದ ಕಡಲತೀರದಲ್ಲಿ ಮುಳುಗುತ್ತಿದ್ದ ಮೂವರು ಯುವಕರ ರಕ್ಷಣೆ ಮಾಡಿರುವಂತಹ ಘಟನೆ ನಡೆದಿದೆ.ಬಾಗಲಕೋಟೆಯ ಬಸವನಗೌಡ ಪಾಟೀಲ್, ಶರಣು, ರವಿಚಂದ್ರನ್ ರಕ್ಷಣೆಗೊಳಗಾದವರು.ಲೈಫ್‌ಗಾರ್ಡ್ ಸಿಬ್ಬಂದಿ ಶಶಿ, ಪಾಂಡು, ರಾಮಚಂದ್ರ ಮೂವರ ರಕ್ಷಣೆ ಮಾಡಿದ್ದು, ಅಸ್ವಸ್ಥಗೊಂಡ ಪ್ರವಾಸಿಗನಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಮೂವರು ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ..

Read More

ಉಡುಪಿ : ಉಡುಪಿಯಲ್ಲಿ ನಾಪತ್ತೆಯಾಗಿದ್ದ ಪೊಲೀಸ್ ಕಾನ್ಸ್ ಟೇಬಲ್ ಶವವಾಗಿ ಪತ್ತೆಯಾಗಿದ್ದಾರೆ. ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಶೃತಿನ್ ಶೆಟ್ಟಿ (35) ಮೃತ ದೇಹ ಕಾರ್ಕಳ ಪುಲ್ಕೇರಿ ಸಮೀಪದ ಬಾವಿಯಲ್ಲಿ ಪತ್ತೆಯಾಗಿದ್ದು ಅಸಹಜ ಸಾವೆಂದು ಪೊಲೀಸರಿಉ ಪ್ರಕರಣ ದಾಖಲು ಮಾಡಿದ್ದಾರೆ. ಅಕ್ಟೋಬರ್ 19 ಕ್ಕೆ ಶೃತಿನ್ ಶೆಟ್ಟಿ ನಾಪತ್ತೆಯಾಗಿದ್ದರು. ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ ಕಾನ್‌ಸ್ಟೇಬಲ್, ಕಾಪು ಜನಾರ್ದನ ದೇವಸ್ಥಾನ ಬಳಿಯ ಅಂಗಡಿಮನೆ ನಿವಾಸಿ ಶೃತಿನ್ ಶೆಟ್ಟಿ (35) . ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅವರ ಪತ್ನಿ ಪೂಜಾ ಶೆಟ್ಟಿ ಶುಕ್ರವಾರದಂದು ದೂರು ದಾಖಲಿಸಿದ್ದಾರೆ.ಕಾರ್ಕಳ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶೃತಿನ್ ಶೆಟ್ಟಿ ಅಕ್ಟೋಬರ್ 16ರಂದು ರಜೆ ಹಾಕಿದ್ದು ತಾನು ಮನೆಗೆ ಬರುತ್ತಿರುವುದಾಗಿ ಪತ್ನಿಗೆ ಮೊಬೈಲ್ ಮೂಲಕ ತಿಳಿಸಿದ್ದರು. ಆದರೆ ಮನೆಗೂ ಬಾರದೆ, ಕಾರ್ಕಳ ನಗರ ಠಾಣೆಗೂ ಹೋಗದೆ ಶೃತಿನ್ ಶೆಟ್ಟಿ ನಾಪತ್ತೆಯಾಗಿದ್ದರು. ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಭಡ್ತಿಗೊಂಡು ಕಾರ್ಕಳ ನಗರ ಪೊಲೀಸ್…

Read More