Author: main-admin

ಕಾರ್ಕಳ ನಗರ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ ಶೃತಿನ್ ಶೆಟ್ಟಿ(35) ನಾಪತ್ತೆಯಾಗಿರುವ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಪು ಜನಾರ್ದನ ದೇವಸ್ಥಾನ ಬಳಿಯಿರುವ ಅಂಗಡಿಮನೆ ನಿವಾಸಿಯಾಗಿರುವ ಶೃತಿನ್ ಶೆಟ್ಟಿ ಗುರುವಾರ ರಾತ್ರಿ 7.30ಕ್ಕೆ ಪತ್ನಿಗೆ ಕರೆ ಮಾಡಿ ನಾನು ನಂದಿಕೂರಿನಲ್ಲಿದ್ದು, ಮನೆಗೆ ಬರುತ್ತಿರುವುದಾಗಿ ಹೇಳಿದ್ದರು. ಬಳಿಕ ಅವರ ಫೋನ್ ಸ್ವಿಚ್ ಆಫ್ ಆಗಿತ್ತು. ರಾತ್ರಿಯಿಡೀ ಮನೆಗೆ ಬಾರದಿರುವ ಹಿನ್ನೆಲೆಯಲ್ಲಿ ಗಾಬರಿಯಾಗಿರುವ ಪತ್ನಿ ಪೂಜಾ ಶೆಟ್ಟಿಯವರು ಶುಕ್ರವಾರ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. 2008ರ ಬ್ಯಾಚಿನಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿದ್ದ ಶೃತಿನ್ ಶೆಟ್ಟಿ ಎರಡು ತಿಂಗಳ ಹಿಂದೆಯಷ್ಟೇ ಬಡ್ತಿಯಾಗಿ ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್‌ಕಾನ್‌ಸ್ಟೆಬಲ್‌ ಆಗಿ ಬಂದಿದ್ದರು. ಅ.17ರಂದು ಕರ್ತವ್ಯಕ್ಕೆ ಹಾಜರಾಗಿದ್ದರು. ಅ.18ಕ್ಕೆ ವಾರದ ರಜೆಯಿತ್ತು ಅ.19ರಂದು ಸಿ.ಎಲ್ ರಜೆ ಹಾಕಿದ್ದರು. ದೃಢಕಾಯ, 178 ಸೆ. ಮೀ. ಎತ್ತರವಿರುವ ಶೃತಿನ್ ಶೆಟ್ಟಿ ಅವರನ್ನು ಕಂಡವರು 0820-2555452 ನಂಬರ್ ನ್ನು ಸಂಪರ್ಕಿಸಲು ಕೋರಲಾಗಿದೆ. ಶೃತಿನ್ ಶೆಟ್ಟಿ ಇಂಗ್ಲಿಷ್, ಕನ್ನಡ, ತುಳು,…

Read More

ಬೆಂಗಳೂರು:ಶೀಘ್ರದಲ್ಲೇ 2400 ಪೊಲೀಸ್ ಪೇದೆಗಳನ್ನು ನೇಮಕ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಇಂದು ಮೈಸೂರು ರಸ್ತೆಯ ಸಿಎಆರ್ ಮೈದಾನದಲ್ಲಿ ನಡೆದ ಪೊಲೀಸ್ ಸಂಸ್ಮರಣ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಅವರು ಮಾತನಾಡಿದರು. ಆರು ಮಹಿಳಾ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುತ್ತದೆ‌ ಐದು ಸಂಚಾರಿ ಪೋಲಿಸ್ ಠಾಣೆಯನ್ನು ಸ್ಥಾಪಿಸಲಾಗುವುದು ಎಂದರು. “ಖಾಲಿ ಇರುವ ಹುದ್ದೆಗಳಿಗೆ 2400 ಪೊಲೀಸ್ ಪೇದೆಗಳನ್ನು ನೇಮಕ ಮಾಡಲಾಗುತ್ತದೆ. ಗೃಹ 2025 ಯೋಜನೆ ಅಡಿಯಲ್ಲಿ 2, 225 ಪೊಲೀಸ್ ವಸತಿಗಾಗಿ 450ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ” ಎಂದರು. “ದೇಶದಲ್ಲಿ ರಾಜ್ಯ ಪೊಲೀಸ್ ಇಲಾಖೆ ಉತ್ತಮ ಹೆಸರು ಪಡೆದಿದೆ. ಪೊಲೀಸ್ ಕಾನೂನು ಸುವ್ಯವಸ್ಥೆ ಕಾಪಾಡುವವರು. ಕೆಲಸ ಮಾಡುವಾಗ ಅನೇಕ ಅಪಾಯ ಎದುರಿಸುತ್ತಾರೆ. ಈ ವೇಳೆ ಪ್ರಾಣವನ್ನೂ ಕಳೆದುಕೊಳ್ಳುತ್ತಾರೆ. ಭಾರತದಲ್ಲಿ ಸೆಪ್ಟೆಂಬರ್ 22ರಿಂದ ಆಗಸ್ಟ್​ 23 ರವರೆಗೆ ಸುಮಾರು 189 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಕರ್ತವ್ಯ ನಿರತರಾಗಿದ್ದಾಗ ಮೃತಪಟ್ಟಿದ್ದಾರೆ. ಕರ್ನಾಟಕದಲ್ಲಿ 16 ಜನ ಪೊಲೀಸ್ ಅಧಿಕಾರಿ, ಸಿಬ್ಬಂದಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರೆಲ್ಲರಿಗೂ ಶ್ರದ್ಧಾಂಜಲಿ…

Read More

ಮಂಗಳೂರು: ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿ ಒಟ್ಟು 6.41 ಲಕ್ಷ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶ  ಪಡಿಸಿಕೊಂಡಿದ್ದಾರೆ. ಮಂಗಳೂರು ಹೊರ ವಲಯದ ಉಳ್ಳಾಲ ತಾಲೂಕಿನ ನರಿಂಗಾನದ ತೌಡುಗೋಳಿ ನಿವಾಸಿ ಅಬ್ದುಲ್ ಅಝೀಝ್ ಯಾನೆ ಪೋಕರ್ ಅಝೀಝ್‌ (42)ಬಂಧಿತ ಆರೋಪಿ. ಈ ಹಿಂದೆ ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪ ಎದುರಿಸುತ್ತಿದ್ದ ಅಬ್ಬುಲ್‌ ಅಝೀಝ್ ದೇರಳಕಟ್ಟೆ ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆತನನ್ನು ಹೆಡೆಮುರಿ ಕಟ್ಟಿದ್ದಾರೆ. ಆತನಿಂದ ಒಟ್ಟು 26 ಗ್ರಾಂ ತೂಕದ 1,30,000 ರೂಪಾಯಿ ಮೌಲ್ಯದ ಮಾದಕ ವಸ್ತು ಎಂಡಿಎಂಎ ಮತ್ತು ಅದನ್ನು ಸಾಗಿಸಲು ಉಪಯೋಗಿಸಿದ ಕಾರು, 2 ಮೊಬೈಲ್ ಫೋನ್ ಗಳು, ಡಿಜಿಟಲ್ ತೂಕ ಮಾಪನ ಸೇರಿದಂತೆ ಒಟ್ಟು 6,41,500 ರೂಪಾಯಿ ಮೌಲ್ಯದ ಸೊತ್ತುಗಳನ್ನು…

Read More

ಮಂಗಳೂರು: ಉಳಾಯಿಬೆಟ್ಟು ಗ್ರಾಮದ ಇಡ್ಮ ಎಂಬಲ್ಲಿ ಫ‌ಲ್ಗುಣಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಗುರುವಾರ ರಾತ್ರಿ ದಾಳಿ ನಡೆಸಿ ಟಿಪ್ಪರ್‌ ಲಾರಿ ಮತ್ತು ಮರಳನ್ನು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ರಾತ್ರಿ 10.45ರ ಸುಮಾರಿಗೆ ದಾಳಿ ನಡೆಸಿದ್ದು ಈ ವೇಳೆ ಇಬ್ಬರು ವ್ಯಕ್ತಿಗಳು ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ಟಿಪ್ಪರ್‌ ಲಾರಿ ಹಾಗೂ ಒಂದು ಲೋಡ್‌ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Read More

ಬಂಟ್ವಾಳ: ದನಗಳನ್ನು ಕಡಿದು ಮಾಂಸ ಮಾಡಿದ ಬಳಿಕ ಉಳಿದ ತ್ಯಾಜ್ಯ ವಸ್ತುಗಳನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೆಲಿಂಜ ಬಸ್ ನಿಲ್ದಾಣದ ಬಳಿ ನಡೆದಿದೆ. ಕಲ್ಲಡ್ಕ – ವಿಟ್ಲ ರಸ್ತೆಯ ಮಧ್ಯ ಭಾಗದ ಕೆಲಿಂಜ ಎಂಬಲ್ಲಿ ಬಸ್ ನಿಲ್ದಾಣದ ಬಳಿ ರಸ್ತೆಯ ಬದಿಯಲ್ಲಿ ದನದ ಬೇರೆ ಬೇರೆ ಭಾಗವನ್ನು ಎಸೆದು ಹೋದ ಘಟನೆ ನಡೆದಿದ್ದು, ಇದನ್ನು ನೋಡಿದ ಸ್ಥಳೀಯರು ಗ್ರಾ.ಪಂ.ಸದಸ್ಯರಿಗೆ ಮಾಹಿತಿ ನೀಡಿದ್ದಾರೆ.ಗ್ರಾ.ಪಂ.ಸದಸ್ಯರು ವಿಟ್ಲ ಪೋಲೀಸರಿಗೆ ಮಾಹಿತಿ ನೀಡಿದ್ದು,ಸ್ಥಳಕ್ಕೆ ವಿಟ್ಲ ಪೋಲಿಸರು ‌ಬೇಟಿ ನೀಡಿ ತ್ಯಾಜ್ಯ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಮೇಲ್ನೋಟಕ್ಕೆ ದನಗಳ ಕೈ ಕಾಲು,ಚರ್ಮ,ಹಲ್ಲು,ತಲೆಯ ಭಾಗದಂತೆ ಕಂಡು ಬಂದಿದ್ದು ಹೆಚ್ಚಿನ ಮಾಹಿತಿಯನ್ನು ತನಿಖೆಯ‌ಬಳಿಕ ಪೊಲೀಸರು ತಿಳಿಸಬೇಕಾಗಿದೆ.ಈ ಸ್ಥಳದಲ್ಲಿ ಇದು ಮೊದಲ ಬಾರಿ ಎಸೆದು ಹೋಗಿರುವ ಪ್ರಸಂಗ ಅಲ್ಲ.ಅನೇಕ ಬಾರಿ ಇದೇ ರೀತಿ ತ್ಯಾಜ್ಯವನ್ನು ಎಸೆದು ಹೋಗಿದ್ದಾರೆ ಎಂಬ ವಿಚಾರವನ್ನು ಸ್ಥಳೀಯರು ತಿಳಿಸಿದ್ದಾರೆ. ಇಂತಹ ಸಮಾಜಘಾತುಕ ಕಾರ್ಯವನ್ನು ಯಾರು ಮಾಡುತ್ತಿದ್ದಾರೆ ಎಂಬುದರ ತನಿಖೆ ಮಾಡುತ್ತೇವೆ, ಅಂತಹವರ…

Read More

ಉಡುಪಿ: ಸಮಾಜಿಕ ಭದ್ರತೆ ಮತ್ತು ಪಿಂಚಣಿಗಳ ನಿರ್ದೇಶನಾಲಯದ ನಿರ್ದೇಶನದಂತೆ ಮಾಸಿಕ ಪಿಂಚಣಿ ಯೋಜನೆಗಳಾದ ವೃದ್ಧಾಪ್ಯ ವೇತನ, ಅಂಗವಿಕಲ ವೇತನ, ವಿಧವಾ ವೇತನ, ಸಂಧ್ಯಾಸುರಕ್ಷಾ ವೇತನ, ಮನಸ್ವಿನಿ ಮತ್ತು ಮೈತ್ರಿ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಮಾಸಿಕ ಪಿಂಚಣಿ ವಿತರಣೆಯನ್ನು ಆಧಾರ್ ಆಧಾರಿತ ನೇರ ಹಣ ಸಂದಾಯ ವ್ಯವಸ್ಥೆಯಡಿ ಫಲಾನುಭವಿಗಳ ಬ್ಯಾಂಕ್/ಅಂಚೆ ಉಳಿತಾಯ ಖಾತೆಗೆ ನೇರವಾಗಿ ಜಮಾ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಈ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಎಲ್ಲಾ ಪಿಂಚಣಿದಾರರು ಪಿಂಚಣಿ ಪಾವತಿ ಖಾತೆಗೆ ಕಡ್ಡಾಯವಾಗಿ ಆಧಾರ್ ಜೋಡಣೆ ಮತ್ತು ಎನ್‌ಪಿಸಿಐ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು ಎಂದರು. ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಹಾಗೂ ಮ್ಯಾಪಿಂಗ್ ಮಾಡಿಸಿಕೊಳ್ಳದಿದ್ದರೆ ಮುಂದಿನ ನವೆಂಬರ್ ತಿಂಗಳನಿಂದ ಅವರ ಖಾತೆಗೆ ಪಿಂಚಣಿ ದುಡ್ಡು ಜಮೆಯಾಗುವುದಿಲ್ಲ.ಪಿಂಚಣಿ ಪಾವತಿ ಸ್ಥಗಿತಗೊಳ್ಳುವುದು. ಹೀಗಾಗಿ ಎಲ್ಲಾ ಫಲಾನುಭವಿ ಪಿಂಚಣಿದಾರರು ಆಧಾರ್ ಜೋಡಣೆ, ಮ್ಯಾಪಿಂಗ್ ಮಾಡುವಂತೆ ಡಾ.ವಿದ್ಯಾಕುಮಾರಿ ಮನವಿ ಮಾಡಿದರು. ಎನ್‌ಪಿಸಿಐ…

Read More

ಬೆಂಗಳೂರು: ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ಜೊತೆಗೆ ಉಳಿದ 5 ಕೆಜಿ ಅಕ್ಕಿ ಬದಲಿಗೆ ಹಣ ನೀಡುವುದನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಬಿಪಿಎಲ್ ಕುಟುಂಬದ ಪ್ರತಿ ಸದಸ್ಯರಿಗೆ 10 ಕೆಜಿ ಹೊಂದಿಸಲು ಸಾಧ್ಯವಾಗದ ಕಾರಣ 5 ಕೆಜಿ ಅಕ್ಕಿ ಹಾಗೂ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಹಣ ನೀಡುವುದನ್ನು ಮುಂದುವರಿಸಲಾಗುತ್ತದೆ. ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತಾಗಿ ನಿರ್ಧಾರ ಕೈಗೊಳ್ಳಲಾಗುವುದು. ಆಹಾರ ಇಲಾಖೆ ಸಚಿವ ಕೆಎಸ್ ಮುನಿಯಪ್ಪ ಇತ್ತೀಚೆಗೆ ಅಕ್ಟೋಬರ್ ನಿಂದ 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದರು. ಸದ್ಯಕ್ಕೆ 10 ಕೆಜಿ ಅಕ್ಕಿ ಇಲ್ಲ. 5 ಕೆಜಿ ಅಕ್ಕಿ ಹಣ ಖಾತೆಗೆ ಜಮಾ ಮಾಡಲಾಗುವುದು.

Read More

ಮಂಗಳೂರು: ನಗರದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಸಾಗಾಟದ 11 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಮಂಗಳೂರು ವಿಮಾನ ವಿಮಾನದಲ್ಲಿ ಬಂದಿಳಿದ ಇಬ್ಬರು ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ, ಇವರು ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಈ ವಿಮಾನದಲ್ಲಿದ್ದ ಮುಖ ಗವಸು ಧರಿಸಿದ್ದ ಪುರುಷ ಪ್ರಯಾಣಿಕನೊಬ್ಬನ ಕೆನ್ನೆಯ ಭಾಗ ಅಸಹಜವಾಗಿ ಕಂಡು ಬರುತ್ತಿತ್ತು. ಅದರಂತೆ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತನ ಬಾಯಲ್ಲಿ ಎರಡು ಚಿನ್ನದ ತುಂಡುಗಳು ಪತ್ತೆಯಾಗಿದೆ‌. ಈತ ಚಿನ್ನವನ್ನು ಅಡಗಿಸಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದನು. ಅದೇ ರೀತಿ ಮಹಿಳಾ ಪ್ರಯಾಣಿಕೆಯೊಬ್ಬಳು ತನ್ನ ಕೂದಲನ್ನು ಕಟ್ಟಿರುವ ಹ್ಯಾರ್ ಬ್ಯಾಂಡ್‌ನೊಳಗಡೆ ಚಿನ್ನವನ್ನು ಮರೆಮಾಡಿ ಸಾಗಾಟ ಮಾಡುತ್ತಿದ್ದಳು. ಎರಡು ಪ್ರಕರಣಗಳಲ್ಲಿ, ಒಟ್ಟು 191 ಗ್ರಾಂ ತೂಕದ 24 ಕ್ಯಾರೆಟ್ ಪರಿಶುದ್ಧತೆಯ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ 11,44,090 ರೂ. ಎಂದು ಅಂದಾಜಿಸಲಾಗಿದೆ. ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ…

Read More

ಮಂಗಳೂರು: ಅತಿವೇಗದಿಂದ ಚಾಲನೆ ಮಾಡಿಕೊಂಡು ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಹೊಂಡಕ್ಕಿಳಿದ ಘಟನೆ ನಗರದ ಹೊರವಲಯದ ಗುರುಪುರದ ಬಳಿ ನಡೆದಿದೆ. ಬಂಟ್ವಾಳ ಕೈಕಂಬ ಜೋಡುಮಾರ್ಗ ನಿವಾಸಿ ಪಿ‌.ಎಸ್.ಮೊಹಮ್ಮದ್ ಎಂಬವರು ಅತಿವೇಗದಿಂದ ಕಾರು ಚಲಾಯಿಸಿಕೊಂಡು ಹೋಗುತ್ತಿದ್ದರು‌. ಗುರುಪುರ ತಲುಪುತ್ತಿದ್ದಂತೆ ಕಾರು ರಸ್ತೆ ತೊರೆದು ಅತಿ ವೇಗದಿಂದ ರಸ್ತೆ ಬದಿಯ ಹೊಂಡಕ್ಕಿಳಿದಿದೆ. ಆದರೆ ಕಾರಿನಲ್ಲಿದ್ದವರಿಗೆ ಏನೂ ಗಾಯವಾಗದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಎದೆ ಝಲ್ಲೆನಿಸುವ ಈ ಸಂಪೂರ್ಣ ಘಟನೆಯು 8ಸೆಕೆಂಡ್ ನ ವೀಡಿಯೋದಲ್ಲಿ ಸೆರೆಯಾಗಿದೆ. ಈ ಘಟನೆ ಅಕ್ಟೋಬರ್ 15ರಂದು ನಡೆದಿದ್ದು, ಇಂದು ವೀಡಿಯೋ ವೈರಲ್ ಆಗಿದೆ. ಇದೀಗ ಈ ಬಗ್ಗೆ ಪ್ರಕರಣ ದಾಖಲಿಸಿರುವ ಬಜ್ಪೆ ಠಾಣಾ ಪೊಲೀಸರು ಅತೀ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆ ಪ್ರಕರಣ ದಾಖಲಿಸಿ ವಾಹನ ಚಾಲಕನಿಗೆ 3 ಸಾವಿರ ರೂ. ದಂಡ ವಿಧಿಸಿದ್ದಾರೆ.

Read More

ನವದೆಹಲಿ: ಕಳೆದ ಕೆಲವು ವರ್ಷಗಳಲ್ಲಿ ಭಾರತದಲ್ಲಿ ಗ್ಯಾಸ್ ಸಿಲಿಂಡರ್ಗಳ ಬೆಲೆಗಳು ಗಣನೀಯ ಏರಿಕೆಯನ್ನು ಕಾಣುತ್ತಿವೆ, ಇದರಿಂದಾಗಿ ಮಧ್ಯಮ ವರ್ಗದ ಜನರು ಮತ್ತು ಬಡ ಜನರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಗ್ಯಾಸ್ ಸಿಲಿಂಡರ್ಗಳ ಬೆಲೆ ಏರಿಕೆಯಿಂದಾಗಿ, ಮಾಸಿಕ ವೆಚ್ಚಗಳು ಗಮನಾರ್ಹವಾಗಿ ಹೆಚ್ಚಾಗುತ್ತವೆ, ಇದು ಸಾಮಾನ್ಯ ಜನರಿಗೆ ಸಾಕಷ್ಟು ಸಮಸ್ಯೆಗಳನ್ನು ಉಂಟುಮಾಡುತ್ತದೆ. ಮಾಧ್ಯಮ ಮೂಲಗಳ ಪ್ರಕಾರ, ಈಗ ದೇಶದ ಮಹಿಳೆಯರು ಗ್ಯಾಸ್ ಸಿಲಿಂಡರ್ಗಳ ಬೆಲೆ ಏರಿಕೆಯಿಂದ ಸ್ವಾತಂತ್ರ್ಯ ಪಡೆಯಬಹುದು ಎನ್ನಲಾಗಿದೆ. ಹೌದು, ಗ್ಯಾಸ್ ಸಿಲಿಂಡರ್ಗಳ ಬೆಲೆ ಏರಿಕೆಯಿಂದ ಮಧ್ಯಮ ವರ್ಗ ಮತ್ತು ಬಡ ಜನರು ಹೆಚ್ಚು ತೊಂದರೆಗೀಡಾಗಿದ್ದಾರೆ. ಅವರಿಗೆ, ಸರ್ಕಾರವು ಅನಿಲ ಬೆಲೆಗಳನ್ನು ಕಡಿತಗೊಳಿಸಲು ನಿರ್ಧರಿಸಿದೆ, ಇದರಿಂದ ಆರ್ಥೀಕವಾಗಿ ಸಹಾಯವಾಗಲಿದೆ. ಈಗ ನೀವು ಕೇವಲ 500 ರೂ.ಗೆ ದೇಶೀಯ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆಯುತ್ತೀರಿ. ಈಗ ಕೇಂದ್ರ ಸರ್ಕಾರವು ನಿಮಗೆ ₹ 500 ಕ್ಕೆ ಗ್ಯಾಸ್ ಸಿಲಿಂಡರ್ ಅನ್ನು ಒದಗಿಸಲಿದೆ . ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಉಜ್ವಲ ಯೋಜನೆ(3ನೇ ಹಂತ)ಯಡಿ ಬಡ ಕುಟುಂಬಗಳ…

Read More