ಬೆಳ್ತಂಗಡಿ: 2012ರಲ್ಲಿ ದುಷ್ಟರ ಅಟ್ಟಹಾಸಕ್ಕೆ ಬಲಿಯಾದ ಧರ್ಮಸ್ಥಳ ಗ್ರಾಮದ ಪಾಂಗಾಳ ನಿವಾಸಿ ಸೌಜನ್ಯಳ 28ನೇ ವರ್ಷದ ಹುಟ್ಟುಹಬ್ಬದಂದು ಆಕೆಯ ಸಮಾಧಿ ಬಳಿಯೇ ಮೂರ್ತಿ ಪ್ರತಿಷ್ಠಾಪನೆಗೊಂಡಿದೆ. ಸೌಜನ್ಯ ಜೀವಂತವಾಗಿದ್ದರೆ ಆಕೆ ತನ್ನ 28ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಳು. ಬುಧವಾರ ಹುಟ್ಟುಹಬ್ಬದ ಪ್ರಯುಕ್ತ ಮೈಸೂರಿನಲ್ಲಿ ನಿರ್ಮಿಸಿದ ಅಂದಾಜು ಒಂದುವರೆ ಅಡಿ ಎತ್ತರದ ಕೂತಿರುವ ಶೈಲಿಯ ಕಲ್ಲಿನ ಪ್ರತಿಮೆ ಪ್ರತಿಷ್ಠಾಪನೆಗೊಳಿಸಿ ನವರಾತ್ರಿ ಪ್ರಯುಕ್ತ 9 ತಂಡದ ಭಜನೋತ್ಸವ ನಡೆಯಿತು. ಸೌಜನ್ಯ ನಿವಾಸದಲ್ಲಿ ಆಕೆಯ ಸಮಾಧಿ ಬಳಿಯೇ ಈ ಪ್ರತಿಮೆಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ. ಆ ಸಂದರ್ಭ ಹಲವು ಸುಳ್ಯ ಭಾಗದ ಒಕ್ಕಲಿಗ ನಾಯಕರು ಪಾಲ್ಗೊಂಡಿದ್ದರು. ಪ್ರಾರ್ಥನೆ ನೆರವೇರಿಸಿದ ಒಕ್ಕಲಿಗ ಹಾಗೂ ಬಿಜೆಪಿ ಮುಖಂಡರಾದ ದಕ್ಷಿಣ ಕನ್ನಡ ಜೇನು ಸಹಕಾರ ಸಂಘದ ಅಧ್ಯಕ್ಷ ಚಂದ್ರ ಕೊಲ್ಚಾರು, ಸೌಜನ್ಯಾ ಚಾಮುಂಡೇಶ್ವರಿಯ ಸ್ವರೂಪವಾಗಿ ಲಕ್ಷಾಂತರ ಜನರಿಗೆ ಅಭಯ ನೀಡುವ ಕೆಲಸವಾಗಲಿ ಎಂದು ಪ್ರಾರ್ಥಿಸಿದರು.
Author: main-admin
ಮಂಗಳೂರು : ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ಬದಿಯ ವಿದ್ಯುತ್ ಕಂಬ ತಲೆಗೆ ಬಡಿದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ಬುಧವಾರ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಕಾಸರಗೋಡು ನಗರ ಹೊರವಲಯದ ಕರಂದಕ್ಕಾಡ್‌ನಲ್ಲಿ ನಡೆದಿದೆ. ಮೃತ ಬಾಲಕನನ್ನು ಮನ್ನಿಪ್ಪಾಡಿಯ ಮನ್ವಿತ್ (15) ಎಂದು ಗುರುತಿಸಲಾಗಿದೆ. ಈತ ಚೆಮ್ನಾಡ್ ಜಮಾಅತ್ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಯಾಗಿದ್ದನು. ಶಾಲೆ ಬಿಟ್ಟು ಮನೆಗೆ ತೆರಳಲು ಮಧೂರಿಗೆ ತೆರಳುವ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಕರಂದಕ್ಕಾಡ್ ಬಳಿ ರಸ್ತೆ ಬದಿಯ ಕಂಬಕ್ಕೆ ತಲೆ ಬಡಿದಿದ್ದು, ಕುಸಿದು ಬಿದ್ದ ಮನ್ವಿತ್ ನನ್ನು ಕೂಡಲೇ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟನು ಎಂದು ತಿಳಿದು ಬಂದಿದೆ. ಈ ಬಗ್ಗೆ ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಬಂಟ್ವಾಳ: ಸ್ಟಾರ್ , ಚಲನಚಿತ್ರ ನಟಿ ರಾಧಿಕಾ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೂಲತಃ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲುಕಿನ ಮಾದನಗಿರಿ ನಿವಾಸಿ ಮಹಾದೇವ ಮಾರಿಪಟಗಾರ್ ಅವರ ಪತ್ನಿ ನಾಗರತ್ನ (33) ಕಾಣೆಯಾದ ಮಹಿಳೆ.ತಾಲೂಕಿನ ಅಮ್ಟೂರು ಗ್ರಾಮದ ರಾಯಪ್ಪನಕೋಡಿ ಎಂಬಲ್ಲಿ ಚಲನ ಚಿತ್ರ ನಟಿ ರಾಧಿಕ ಅವರ ಎಸ್ಟೇಟ್ ನಲ್ಲಿ ಕಳೆದ ಆರು ತಿಂಗಳ ಹಿಂದೆ ಕೆಲಸಕ್ಕೆ ಸೇರಿದ ನಾಗರತ್ನ ಇದೀಗ ಕಾಣೆಯಾಗಿರುವುದು. ನಾಗರತ್ನ ಅವರ ಪತಿ ಮಹಾದೇವ ಮಾರಿಪಟಗಾರ್ ಅವರ ಜೊತೆಯಲ್ಲಿ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದರು. ಅ.13 ರಂದು ಗಂಡ ಹೆಂಡತಿ ಇಬ್ಬರು ಎಸ್ಟೇಟ್ ನಲ್ಲಿ ಕೆಲಸಕ್ಕೆಹೋಗಿದ್ದು, ಅ ದಿನ ಬೆಳಿಗ್ಗೆ 10.30 ರ ವೇಳೆಗೆ ಎಸ್ಟೇಟ್ ನಲ್ಲಿರುವ ಮನೆಗೆ ಚಾ ಕುಡಿಯಲು ಹೋಗಿ ಬರುತ್ತೇನೆ ಎಂದು ಹೋದವಳು ಮತ್ತೆ ಕೆಲಸದ ಕಡೆ ಬಂದಿಲ್ಲ. ಚಹಾ ಕುಡಿಯಲು ಹೋದವಳು ಯಾಕೆ ಬಂದಿಲ್ಲ ಎಂದು ಮನೆ ಕಡೆ…
ಮಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ರಸ್ತೆ ಬದಿಯ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಕಾರು ಹರಿದು ಯುವತಿಯೊಬ್ಬರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಲೇಡಿಹಿಲ್ ನಲ್ಲಿ ನಡೆದಿದೆ. ಕುದ್ರೋಳಿ ದೇವಸ್ಥಾನಕ್ಕೆ ಬಂದು ಹೋಗುತ್ತಿದ್ದವರ ಕಾರು ಎರಗಿದ್ದು ಸ್ಥಳದಲ್ಲಿಯೇ ಓರ್ವ ಯುವತಿ ಮೃತಪಟ್ಟಿದ್ದಾಳೆ. ಸಂಜೆ 4 ಗಂಟೆ ವೇಳೆಗೆ ಘಟನೆ ನಡೆದಿದ್ದು, ಐವರು ಯುವತಿಯರು ಮಣ್ಣಗುಡ್ಡ ಮಹಾನಗರ ಪಾಲಿಕೆ ಸ್ವಿಮಿಂಗ್ ಪೂಲ್ ಬಳಿ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಣ್ಣಗುಡ್ಡದ ಕಮ್ಲೇಶ್ ಬಲ್ ದೇವ್ ಎಂಬಾತ ಮಣ್ಣಗುಡ್ಡ ಜಂಕ್ಷನ್ ನಿಂದ ಲೇಡಿಹಿಲ್ ಕಡೆಗೆ ಹುಂಡೈ ಇಯೋನ್ ಕಾರನ್ನು ಅತಿವೇಗ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಯುವತಿಯರ ಗುಂಪಿಗೆ ಡಿಕ್ಕಿಯಾಗಿ ಸ್ಥಳದಿಂದ ಅದೇ ವೇಗದಲ್ಲಿ ಪರಾರಿಯಾಗಿದ್ದಾನೆ. ನಂತರ ಆತ ಕಾರನ್ನು ಹೊಂಡ ಶೋರೂಂ ಎದುರು ಪಾರ್ಕ್ ಮಾಡಿ ಮನೆಗೆ ತೆರಳಿದ್ದಾನೆ. ಬಳಿಕ ಟ್ರಾಫಿಕ್ ಠಾಣೆಗೆ ತಂದೆ ಬಲದೇವ್ ಅವರೊಂದಿಗೆ ಬಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟ ಯುವತಿ ಸುರತ್ಕಲ್ ಕಾನ ನಿವಾಸಿ ರೂಪಶ್ರೀ…
ಬೆಳ್ತಂಗಡಿ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ವಾಹನವೊಂದು ಬಾಲಕನಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯ ಲಾಯಿಲದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಅರ್ತಿಲಾ ಮನೆಯ ಮಹಮ್ಮದ್ ರಫೀಕ್ ಅವರ ಮಗ ಮಹಮ್ಮದ್ ರಂಝಿನ್ (10) ಶಾಲಾ ರಜೆಯ ಹಿನ್ನಲೆ ಸಂಬಂಧಿಕರ ಮನೆಗೆ ಬಂದಿದ್ದು, ಇಂದು 11:50ರ ಸುಮಾರಿಗೆ ಅಂಗಡಿಗೆ ಹೋಗಿ ವಾಪಾಸ್ ರಸ್ತೆ ದಾಟುವಾಗ ಲಾಯಿಲ ಜಂಕ್ಷನ್ ಬಳಿ ಉಜಿರೆಯಿಂದ ಬೆಳ್ತಂಗಡಿ ಕಡೆಗೆ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾನೆ. ತಕ್ಷಣ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಎಜೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗ ಮಧ್ಯೆ ಬಾಲಕ ಕೊನೆಯುಸಿರೆಳೆದಿದ್ದಾನೆ. ಪಿಕಪ್ ವಾಹನ ಚಾಲಕ ವೇಣೂರಿನ ನಿವಾಸಿ ಜಯ ವಿರುದ್ಧ ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ನಡೆಸಿದ ಕಾಮಗಾರಿ ನಡೆಸಿದ ಬಳಿಕ ಸ್ಥಳದ ಮೆಟೀರಿಯಲ್ ಪರಿಶೀಲನೆ ನಡೆಸಿ ವರದಿ ನೀಡಲು ಬೆಳ್ತಂಗಡಿಯ ಗುತ್ತಿಗೆದಾರನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಮಂಗಳೂರಿನ ಬೋಂದೆಲ್ ನಲ್ಲಿರುವ ಸಹಾಯಕ ಕಾರ್ಯಪಾಲ ಇಂಜಿನಿಯರವರ ಕಛೇರಿ, ಲೋಕೋಪಯೋಗಿ ಇಲಾಖೆ ಗುಣ ಭರವಸೆ ಉಪವಿಭಾಗದ ಇದರ ಕಿರಿಯ ಇಂಜಿನಿಯರ್-2 ಲೋಕಾಯಕ್ತ ಬಲೆಗೆ ಬಿದ್ದ ಘಟನೆ ಇಂದು ನಡೆದಿದೆ. ಮಂಗಳೂರು ಬೋಂದೆಲ್ ನಲ್ಲಿರುವ ಸಹಾಯಕ ಕಾರ್ಯಪಾಲಕ ಇಂಜಿನಿಯರವರ ಕಚೇರಿ ಲೋಕೋಪಯೋಗಿ ಇಲಾಖೆಯ ಗುಣ ಭರವಸೆ ಉಪವಿಭಾಗದ ಕಿರಿಯ ಇಂಜಿನಿಯರ್ -2 ಅಗಿರುವ ರೋನಾಲ್ಡ್ ಲೋಬೋ ಎಂಬಾತ ಬೆಳ್ತಂಗಡಿಯ ಗುತ್ತಿಗೆದಾರರೊಬ್ಬರಿಂದ 20,000/- ಲಂಚದ ಹಣ ಸ್ವೀಕರಿಸುತ್ತಿದ್ದಾಗ ಇಂದು ಮಧ್ಯಾಹ್ನದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಆರೋಪಿ ಕಿರಿಯ ಇಂಜಿನಿಯರ್ ನನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ, ಐಸಿಸ್ ಉಗ್ರಗಾಮಿ ಸಂಘಟನೆಯ ಸಂಚುಕೋರ, ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದ್ದು, ವಿಚಾರಣೆ ವೇಳೆ ಮತ್ತೊಂದು ಭಯಾನಕ ಅಂಶ ಬಾಯಿಬಿಟ್ಟಿದ್ದಾನೆ. ಕರ್ನಾಟಕದಲ್ಲಿ ಮೂರು ಸ್ಥಳಗಳಲ್ಲಿ ಬಾಂಬ್ ಬ್ಲಾಸ್ಟ್ ಮಾಡಲು ಸಂಚು ರೂಪಿಸಿದ್ದೇವು ಎಂದು ಹೇಳಿದ್ದಾನೆ. ಕದ್ರಿ ದೇವಸ್ಥಾನ ಟಾರ್ಗೇಟ್ ಮಾಡಲಾಗಿತ್ತು ಎಂದು ಈ ಹಿಂದೆ ಹೇಳಿದ್ದ. ಇದೀಗ ಉಡುಪಿ ಮಠ, ಚಿಕ್ಕಮಗಳೂರಿನ ಬಿಜೆಪಿ ಕಚೇರಿಯನ್ನೂ ಕೂಡ ಟಾರ್ಗೆಟ್ ಮಾಡಲಾಗಿತ್ತು ಎಂದು ಹೇಳಿದ್ದಾನೆ. ಕದ್ರಿ ಬ್ಲಾಸ್ಟ್ ಸಕ್ಸಸ್ ಆಗಿದ್ದರೇ ನಂತರ ಉಡುಪಿ ಮಠ ಹಾಗೂ ಚಿಕ್ಕಮಗಳೂರು ಬಿಜೆಪಿ ಕಚೇರಿಯನ್ನು ಬ್ಲಾಸ್ಟ್ ಮಾಡುತ್ತಿದ್ದೇವು. ಆದರೆ ಕದ್ರಿ ದೇವಸ್ಥಾನ ತಲುಪುವ ಮುನ್ನವೇ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು. ಹೀಗಾಗಿ ಉಡುಪಿ ಕೃಷ್ಣ ಮಠ ಹಾಗೂ ಚಿಕ್ಕಮಗಳೂರು ಬಿಜೆಪಿ ಕಚೇರಿ ಬ್ಲಾಸ್ಟ್ ಪ್ಲಾನ್ ಪ್ಲಾಫ್ ಆಗಿದೆ ಎಂದು ಹೇಳಿರುವುದು ಎನ್ ಐ ಎ ತನಿಖೆಯಲ್ಲಿ ಬಯಲಾಗಿದೆ ಎಂದು ತಿಳಿದು ಬಂದಿದೆ.
ಮಂಗಳೂರು: ಕೊಂಕಣ ರೈಲು ಮಾರ್ಗದಲ್ಲಿ ಮಂಗಳೂರು ಸಮೀಪದ ತೋಕೂರು ನಿಲ್ದಾಣದ ಪಾಯಿಂಟ್ ನಂ.122ರಲ್ಲಿ ಅ.18ರಿಂದ 20ರವರೆಗೆ ಬದಲಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಈ ಮೂರು ದಿನಗಳಂದು ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ಕೊಂಕಣ ರೈಲ್ವೆ ಪ್ರಕಟನೆ ತಿಳಿಸಿದೆ. ಅ.18ರ ಬೆಳಗ್ಗೆ 7:15ರಿಂದ 9:45ರವರೆಗೆ ವಿವಿಧ ಕಾಮಗಾರಿ ನಡೆಯಲಿದ್ದು, ಈ ವೇಳೆ ಅ.17ರಂದು ಮುಂಬೈಯಿಂದ ಹೊರಟ ರೈಲು ನಂ.12619 ಲೋಕಮಾನ್ಯ ತಿಲಕ ಮುಂಬೈ ಹಾಗೂ ಮಂಗಳೂರು ಸೆಂಟ್ರಲ್ ನಡುವಿನ ಮತ್ಸ್ಯಗಂಧ ಎಕ್ಸ್ ಪ್ರೆಸ್‌ನ್ನು 30 ನಿಮಿಷಗಳ ಕಾಲ ಸುರತ್ಕಲ್ ನಿಲ್ದಾಣದಲ್ಲಿ ತಡೆ ಹಿಡಿಯಲಾಗುವುದು. ಅ.19ರ ಮುಂಜಾನೆ 6:40ರಿಂದ 9:10ರವರೆಗೆ ವಿವಿಧ ಕಾಮಗಾರಿ ನಡೆಯಲಿದ್ದು, ಈ ವೇಳೆ ಅ.17ರಂದು ಹೊರಟ ರೈಲು ನಂ.16311 ಗಾಂಧಿ ನಗರ ಹಾಗೂ ಕೊಚ್ಚುವೇಲಿ ಎಕ್ಸ್‌ಪ್ರೆಸ್‌ನ್ನು 30 ನಿಮಿಷ ಸುರತ್ಕಲ್ ನಿಲ್ದಾಣದಲ್ಲಿ ತಡೆ ಹಿಡಿಯಲಾಗುವುದು. ಅ.20ರ ಬೆಳಗ್ಗೆ 6:40ರಿಂದ 9:40ರವರೆಗೆ ಕಾಮಗಾರಿ ಹಾಗೂ ಪರೀಕ್ಷೆಗಳು ನಡೆಯಲಿದ್ದು, ಈ ವೇಳೆ ಅ.19ರಂದು ಮುಂಬೈಯಿಂದ ಹೊರಟ ರೈಲು ನಂ.12619 ಲೋಕಮಾನ್ಯ…
ಉಳ್ಳಾಲ: ಗಾಂಜಾ ಸೇವಿಸಿ ರೌಡಿಸಂ ನಡೆಸಿದ್ದ ಮಾಜಿ ರೌಡಿ ಶೀಟರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೇವಂತಿಗುಡ್ಡೆ ನಿವಾಸಿ ಶಮೀರ್ (41) ಆತ್ಮ ಹತ್ಯೆಕ್ಕೀಡಾದ ವ್ಯಕ್ತಿ.. ಶಮೀರ್ ಕ್ಯಾನ್ಸರ್‌ನಿಂದ ಮೃತಪಟ್ಟ ನಟೋರಿಯಸ್ ರೌಡಿ ಶಬರಿಯ ಸಹಚರನಾಗಿದ್ದು ಉಳ್ಳಾಲ ಠಾಣೆಯಲ್ಲಿ ಹಳೆಯ ರೌಡಿ ಶೀಟರ್ ಆಗಿದ್ದ. ಗಾಂಜಾ, ಮದ್ಯ ವ್ಯಸನಿಯಾಗಿದ್ದ ಶಮೀರ್ ಜೀವನ ನಿರ್ವಹಣೆಗೆ ಇತ್ತೀಚಿಗೆ ಆಟೋ ರಿಕ್ಷಾ ಚಲಾಯಿಸುತ್ತಿದ್ದ. ನಿನ್ನೆ ಸಂಜೆ ಒಳಪೇಟೆಯ ರಿಕ್ಷಾ ಚಾಲಕರಲ್ಲಿ ಗಲಾಟೆ ನಡೆಸಿದ್ದ ಶಮೀರ್ ಯಾರೊಬ್ಬರಿಗೂ ಪಾರ್ಕಲ್ಲಿ ಆಟೋ ರಿಕ್ಷಾ ಪಾರ್ಕ್ ಮಾಡಲು ಬಿಡುವುದಿಲ್ಲವೆಂದು ಆವಾಜ್ ಹಾಕಿದ್ದನಂತೆ. ಶಮೀರನ ತಾಯಿ ಒಂದು ತಿಂಗಳ ಹಿಂದಷ್ಟೆ ಮೃತ ಪಟ್ಟಿದ್ದರಂತೆ. ಕಳೆದ ಮೂರು ದಿನಗಳ ಹಿಂದಷ್ಟೆ ಶಮೀರ್ ಚಲಾಯಿಸುತ್ತಿದ್ದ ಆಟೋ ರಿಕ್ಷಾವೂ ಪಲ್ಟಿ ಹೊಡೆದಿದ್ದು,ರಿಕ್ಷಾದ ಲೋನ್ ಬಾಕಿಯಿತ್ತು. ಮೃತ ಶಮೀರ್‌ಗೆ ಎರಡು ಹೆಣ್ಣು, ಒಂದು ಗಂಡು ಮಕ್ಕಳಿದ್ದು ಪತ್ನಿಯೂ ಅನಾರೋಗ್ಯದಲ್ಲಿ ಬಳಲುತ್ತಿದ್ದರು ಎನ್ನಲಾಗುತ್ತಿದೆ. ನವರಾತ್ರಿ ರಜೆ ಸಿಕ್ಕ ಕಾರಣ ಪತ್ನಿ ,ಮಕ್ಕಳು ತವರು ತೆರಳಿದ್ದರು. ಇಂದು ಬೆಳಿಗ್ಗೆ ಮನೆಯಲ್ಲಿ…
ಪುತ್ತೂರು : ಸಿಡಿಲಾಘಾತಕ್ಕೆ ಫೋಟೋ ಸ್ಟುಡಿಯೋ ಸುಟ್ಟು ಭಸ್ಮವಾದ ಘಟನೆ ಪುತ್ತೂರಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಜಿಎಲ್ ಕಾಂಪ್ಲೆಕ್ಸ್ ನಲ್ಲಿರುವ ಪೊನ್ನಪ್ಪ ಎಂಬವರಿಗೆ ಸೇರಿದ ಅಡ್ಲ್ಯಾಬ್ ಸ್ಟುಡಿಯೋಗೆ ಸಿಡಿಲು ಬಡಿದಿದೆ. ಪರಿಣಾಮ ಪೋಟೊ ಸ್ಟುಡಿಯೋ ಸುಟ್ಟು ಭಸ್ಮವಾಗಿದೆ.ಸ್ಟುಡಿಯೋದಲ್ಲಿದ್ದ ಸಿಬ್ಬಂದಿ ಅದೃಷ್ಟವಶತ್ ಅಪಾಯದಿಂದ ಪಾರಾಗಿದೆ. ಸಿಡಿಲ ಹೊಡೆತಕ್ಕೆ ಸ್ಟುಡಿಯೋದಲ್ಲಿದ್ದ ಕಂಪ್ಯೂಟರ್ ಸಿಸ್ಟಂ, ಫೋಟೊ ಮೆಷಿನರಿ, ಪ್ಯಾನ್, ಫೋಟೊ ಆಲ್ಬಂ, ಇನ್ನಿತರ ವಸ್ತಗಳು ಸುಟ್ಟು ಕರಕಲಾಗಿವೆ. ಘಟನೆಯಲ್ಲಿ ಸುಮಾರು 6 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಘಟನೆಯ ಮಾಹಿತಿ ಪಡೆದ ಅಗ್ನಿಶಾಮಕ ದಳ ಮತ್ತು ಸ್ಥಳೀಯರು ಬೆಂಕಿ ನಂದಿಸಿದ್ದಾರೆ.










