Author: main-admin

ನಾಲಂದಾ (ಬಿಹಾರ): ಬಣ್ಣ ಬಣ್ಣದ ವಿದ್ಯುತ್ ದೀಪಗಳು ಹಾಗೂ ಜನರ ಹರ್ಷೋದ್ಗಾರಗಳ ನಡುವೆ ಸಂಭ್ರಮದಿಂದ ನಡೆಯುತ್ತಿದ್ದ ಬಿಹಾರದ ಸುಪ್ರಸಿದ್ಧ ‘ರಾಜಗೀರ್ ಮಲಮಾಸ್ ಮೇಳ’ದಲ್ಲಿ ಸೋಮವಾರ ರಾತ್ರಿ ಭೀಕರ ದುರಂತವೊಂದು ಸಂಭವಿಸಿದೆ. ಅತ್ಯಂತ ವೇಗವಾಗಿ ತಿರುಗುತ್ತಿದ್ದ Swing ನ ಸುರಕ್ಷತಾ ಬೆಲ್ಟ್ ಕಳಚಿದ ಪರಿಣಾಮ, 25 ವರ್ಷದ ಯುವಕನೊಬ್ಬ ಸುಮಾರು 20 ಅಡಿ ಎತ್ತರದಿಂದ ಕೆಳಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾನೆ. ನವಾದಾ ಜಿಲ್ಲೆಯ ನಿವಾಸಿಯಾದ ಅಮಾನ್ ಕುಮಾರ್ (25) ಮೃತಪಟ್ಟ ದುರದೃಷ್ಟಕರ ಯುವಕನಾಗಿದ್ದಾನೆ. ಈ ಭೀಕರ ಅಪಘಾತದ ಲೈವ್ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರ ಎದೆ ನಡುಗಿಸುವಂತಿದೆ. ಮೃತ ಅಮಾನ್ ಕುಮಾರ್ ತನ್ನ ಸ್ನೇಹಿತರೊಂದಿಗೆ ಐತಿಹಾಸಿಕ ರಾಜಗೀರ್ ಮೇಳಕ್ಕೆ ಬಂದಿದ್ದನು. ಮೇಳದ ಪ್ರಮುಖ ಆಕರ್ಷಣೆಯಾಗಿದ್ದ, ಅತ್ಯಂತ ವೇಗವಾಗಿ ಗಾಳಿಯಲ್ಲಿ ಆಡುವ ‘ಸ್ಟ್ರಿಂಗ್ ಜೂಲಾ’ ಕ್ಕೆ ಹತ್ತಿದ್ದನು. ಅದು ಅತಿ ವೇಗವಾಗಿ ಚಲಿಸುತ್ತಿದ್ದಾಗ (ಸುಮಾರು 20 ಅಡಿಗಿಂತಲೂ ಹೆಚ್ಚು ಎತ್ತರದಲ್ಲಿದ್ದಾಗ), ಅಮಾನ್ ಕುಳಿತಿದ್ದ ಸೀಟಿನ ಸುರಕ್ಷತಾ ಬೆಲ್ಟ್ ತಾಂತ್ರಿಕ ದೋಷದಿಂದಾಗಿ ಇದ್ದಕ್ಕಿದ್ದಂತೆ…

Read More

ಉಡುಪಿ : ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಮತ್ತೊಮ್ಮೆ ವಿವಾದದ ಸುಳಿಗೆ ಸಿಲುಕಿದ್ದಾರೆ. ಉಡುಪಿ ಜಿಲ್ಲಾ ಪ್ರವಾಸದ ವೇಳೆ ಅವರು ಮಾಜಿ ರೌಡಿಶೀಟರ್ ಒಬ್ಬರಿಗೆ ಕಾರಿನಲ್ಲೇ ಕುಳಿತು ತಲೆ ಮುಟ್ಟಿ ಆಶೀರ್ವದಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿದೆ. ಇತ್ತೀಚೆಗಷ್ಟೇ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿದ್ದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಅವರು ಜಿಲ್ಲೆಯ ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದರು. ಈ ಪ್ರವಾಸದ ವೇಳೆ ಅವರು ತಮ್ಮ ಕಾರಿನಲ್ಲಿ ಕುಳಿತಿದ್ದ ಸಂದರ್ಭದಲ್ಲಿ, ಎರಡು ಪ್ರಮುಖ ಕ್ರಿಮಿನಲ್ ಪ್ರಕರಣಗಳ ಆರೋಪಿಯಾಗಿರುವ ಸೋನು ಸುಧೀರ್ ಎಂಬಾತನ ತಲೆ ಮುಟ್ಟಿ ಆಶೀರ್ವದಿಸಿದ್ದಾರೆ ಎನ್ನಲಾದ ದೃಶ್ಯಗಳು ಮುನ್ನೆಲೆಗೆ ಬಂದಿವೆ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದಂತೆ ನೆಟ್ಟಿಗರು ಆಯೋಗದ ಅಧ್ಯಕ್ಷರ ನಡೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾರು ಈ ಸೋನು ಸುಧೀರ್?: ಮಹಿಳಾ ಆಯೋಗದ ಅಧ್ಯಕ್ಷರಿಂದ ಆಶೀರ್ವಾದ ಪಡೆದಿರುವ…

Read More

ಬೆಂಗಳೂರು: ಎಂಟು ವರ್ಷಗಳಿಂದ ಜೊತೆಯಲ್ಲೇ ಇದ್ದು, ಒಂದೇ ಮನೆಯಲ್ಲೇ ವಾಸವಾಗಿದ್ದ ಅಂಧ ಮಹಿಳೆಯೊಬ್ಬರ ಕಪಾಟಿನಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ಭಾರಿ ಮೊತ್ತದ ನಗದನ್ನು ಕಳವು ಮಾಡಿದ್ದ ಹೈ ಪ್ರೊಫೈಲ್ ದಂಪತಿಯನ್ನು ಬೆಂಗಳೂರು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಬೆಂಗಳೂರಿನ ಬಿಇಎಂಎಲ್ (BEML) ಲೇಔಟ್ ನಿವಾಸಿಗಳಾದ ಎಂಬಿಎ ಪದವೀಧರೆ ಶರ್ಮಿಳಾ ಶೇಷಾದ್ರಿ (50) ಮತ್ತು ಆಕೆಯ ಪತಿ ಡಿಪ್ಲೊಮಾ ಪದವೀಧರ ಗಣೇಶ್ ಕುಮಾರ್ (52) ಬಂಧಿತ ಆರೋಪಿಗಳಾಗಿದ್ದಾರೆ.ದೃಷ್ಟಿ ದೋಷವಿರುವ ಸಂತ್ರಸ್ತ ಮಹಿಳೆಯು ಕಳೆದ ಎಂಟು ವರ್ಷಗಳಿಂದ ಬಿಇಎಂಎಲ್ ಲೇಔಟ್‌ನಲ್ಲಿರುವ ಈ ದಂಪತಿಯ ಮನೆಯಲ್ಲೇ ವಾಸವಾಗಿದ್ದರು. ಜೂನ್ 2024 ರಲ್ಲಿ ಸಂತ್ರಸ್ತೆಯು ತನ್ನ ಚಿನ್ನಾಭರಣಗಳನ್ನು ಒಂದು ಬ್ಯಾಂಕ್ ಲಾಕರ್‌ನಿಂದ ಮತ್ತೊಂದು ಲಾಕರ್‌ಗೆ ಶಿಫ್ಟ್ ಮಾಡುವ ಸಲುವಾಗಿ ಮನೆಗೆ ತಂದಿದ್ದರು. ಒಟ್ಟು ಚಿನ್ನಾಭರಣಗಳ ಜೊತೆಗೆ ಭಾರಿ ಮೊತ್ತದ ₹49.50 ಲಕ್ಷ ರೂಪಾಯಿ ನಗದನ್ನು ಅವರು ತಮ್ಮ ಕೋಣೆಯ ಕಪಾಟಿನಲ್ಲಿ ಸುರಕ್ಷಿತವಾಗಿ ಇಟ್ಟಿದ್ದರು.

Read More

ಪುತ್ತೂರು: ಬ್ಯಾಂಕ್ ಲೋನ್ ಇಎಂಐ (EMI) ಗೊಂದಲ ಬಗೆಹರಿಸುವ ನೆಪದಲ್ಲಿ ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ ಸೋಗಿನಲ್ಲಿ ಕರೆ ಮಾಡಿದ ಸೈಬರ್ ಕಳ್ಳರು, ಮಹಿಳೆಯೊಬ್ಬರ ಮೊಬೈಲ್ ಆ್ಯಪ್ ಮೂಲಕ ಬರೋಬ್ಬರಿ 2,92,000/- ರೂಪಾಯಿ ಹಣವನ್ನು ಲೂಟಿ ಮಾಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ವಂಚನೆಗೊಳಗಾದ 40 ವರ್ಷದ ಮಹಿಳೆಯೊಬ್ಬರು ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.ಪಿರ್ಯಾದಿದಾರ ಮಹಿಳೆಯು ದಿನಾಂಕ 22-05-2026 ರಂದು ಪುತ್ತೂರಿನ ಕೋರ್ಟ್ ರೋಡ್‌ನಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಶಾಖೆಯಿಂದ ₹2,94,000/- ಚಿನ್ನದ ಸಾಲ (Gold Loan) ಪಡೆದಿದ್ದರು. ಜೂನ್ ತಿಂಗಳಿಂದ ಪ್ರತಿ ತಿಂಗಳು ₹6,000/- ಇಎಂಐ ಕಟ್ಟಾಗುವಂತೆ ಅವರು ಬ್ಯಾಂಕ್ ವ್ಯವಸ್ಥಾಪಕರಿಗೆ ಸೂಚಿಸಿದ್ದರು. ಆದರೆ, ಲೋನ್ ಪಡೆದ ದಿನವೇ (ಮೇ 22) ಅವರ ಖಾತೆಯಿಂದ ₹6,000/- ಕಟ್ಟಾಗಿತ್ತು. ಈ ತಪ್ಪಾಗಿ ಕಟ್ಟಾದ ಹಣವನ್ನು ವಾಪಸ್ ಪಡೆಯುವ ಸಲುವಾಗಿ ಮಹಿಳೆಯು ಗೂಗಲ್‌ನಲ್ಲಿ ಎಸ್‌ಬಿಐ ಕೋರ್ಟ್ ರೋಡ್ ಶಾಖೆಯ ಫೋನ್ ನಂಬರನ್ನು ಹುಡುಕಿ ಕರೆ ಮಾಡಿದ್ದರು. ಆದರೆ ಆ ಕಡೆಯಿಂದ…

Read More

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಆರು ಸ್ಥಳಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊಸದಾಗಿ ಅಳವಡಿಸಲಾದ ಸುಧಾರಿತ ವೇಗದ ರಾಡಾರ್ ಕ್ಯಾಮೆರಾಗಳ ಮೂಲಕ ಒಂದು ವಾರದೊಳಗೆ ಒಟ್ಟು 47,709 ಸಂಚಾರ ನಿಯಮ ಉಲ್ಲಂಘನೆಗಳು ಪತ್ತೆಯಾಗಿವೆ. ಈ ಪೈಕಿ 243 ಪ್ರಕರಣಗಳಲ್ಲಿ ಈಗಾಗಲೇ ಚಲನ್ ನೀಡಲಾಗಿದೆ.ಪೊಲೀಸರ ಮಾಹಿತಿಯ ಪ್ರಕಾರ, ಮೇ 21 ರಿಂದ 26 ರವರೆಗೆ, 3,99,319 ವಾಹನಗಳನ್ನು ಸ್ಪೀಡ್ ರಾಡಾರ್ ಕ್ಯಾಮೆರಾ ವ್ಯವಸ್ಥೆಯಿಂದ ಮೇಲ್ವಿಚಾರಣೆ ಮಾಡಲಾಗಿದೆ. ಸೀಟ್ ಬೆಲ್ಟ್ ಧರಿಸದ 12,440 ಪ್ರಕರಣಗಳು, ಹೆಲ್ಮೆಟ್ ಇಲ್ಲದೆ ಸವಾರಿ ಮಾಡಿದ 11,509 ಪ್ರಕರಣಗಳು, ರಾಂಗ್‌ ಸೈಡ್‌ ಚಾಲನೆಯ 2,783 ಪ್ರಕರಣಗಳು, ಟ್ರಿಪಲ್ ರೈಡಿಂಗ್ 2,438 ಪ್ರಕರಣಗಳು, ಹೆವಿ ಮೋಟಾರ್ ವೆಹಿಕಲ್ (HMV) ವೇಗ ಉಲ್ಲಂಘನೆ 2,346 ಮತ್ತು ವೇಗಕ್ಕೆ ಸಂಬಂಧಿಸಿದ 1,110 ಇತರ ಅಪರಾಧಗಳು ದಾಖಲಾಗಿವೆ.ಗಂಗೊಳ್ಳಿಯ ತ್ರಾಸಿಯಲ್ಲಿ 29, ಬೈಂದೂರಿನ ನಾಯಕನಕಟ್ಟೆಯಲ್ಲಿ 36, ಕೋಟದ ತೆಕ್ಕಟ್ಟೆಯಲ್ಲಿ 35, ಕಾಪು ದಂಡತೀರ್ಥದಲ್ಲಿ 42, ಪಡುಬಿದ್ರಿಯ ಉಚ್ಚಿಲದಲ್ಲಿ 59, ಕಾರ್ಕಳದ ದೂಪದಕಟ್ಟೆಯಲ್ಲಿ 34 ಪ್ರಕರಣಗಳು ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು…

Read More

ಲಕ್ನೋ: ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದೆ. ದೆಹಲಿಯಿಂದ ಬಿಹಾರಕ್ಕೆ ತೆರಳುತ್ತಿದ್ದ ಡಬಲ್ ಡೆಕ್ಕರ್ ಎಸಿ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 6 ಮಂದಿ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ.ಉನ್ನಾವೋ ಜಿಲ್ಲೆಯ ಔರಾಸ್ ಪೊಲೀಸ್ ಠಾಣೆ ವ್ಯಾಪ್ತಿಯ ನಿಭಾ ಖೇಡಾ ಗ್ರಾಮದ ಸಮೀಪ, ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ ವೇಯಲ್ಲಿ ಬೆಳಗ್ಗೆ ಸುಮಾರು 5:15ರ ವೇಳೆಗೆ ಅಪಘಾತ ಸಂಭವಿಸಿದೆ. ಬಸ್‌ನಲ್ಲಿ ಸುಮಾರು 50 ಪ್ರಯಾಣಿಕರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಪೋಲಿಸ್ ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ ಅತಿವೇಗದಲ್ಲಿ ಸಂಚರಿಸುತ್ತಿದ್ದು, ಈ ವೇಳೆ ಚಾಲಕ ನಿದ್ರೆಗೆ ಜಾರಿದ್ದಾನೆ. ಪರಿಣಾಮ ಬಸ್ ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಕೆಲ ಪ್ರಯಾಣಿಕರು ಕಿಟಕಿಗಳ ಮೂಲಕ ಹೊರಗೆ ಬಿದ್ದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರು ಪೊಲೀಸ್ ಸಿಬ್ಬಂದಿ ಸೇರಿ ಹಲವರನ್ನ ಲಖ್ನೋ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೆ ಜಿಲ್ಲಾ…

Read More

​ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ ಜಾಲದಲ್ಲಿ ಬೀಳಿಸಿ, ಲಾಡ್ಜ್‌ಗೆ ಕರೆದೊಯ್ದು ಸರಣಿ ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ವಂಚಿಸಿರುವ ಅತ್ಯಂತ ಗಂಭೀರ ಹಾಗೂ ಪೈಶಾಚಿಕ ಪ್ರಕರಣವೊಂದು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.​ಪ್ರಕರಣಕ್ಕೆ ಸಂಬಂಧಿಸಿದಂತೆ ತೆಕ್ಕಟ್ಟೆಯ ಜಿತೇಂದ್ರ ಶೆಟ್ಟಿ (ಆರೋಪಿ-1) ಹಾಗೂ ಸುಶಾನ್ ಪೂಜಾರಿ (ಆರೋಪಿ-2) ಎಂಬ ಇಬ್ಬರು ಆರೋಪಿಗಳ ವಿರುದ್ಧ ಪೋಕ್ಸೋ (POCSO) ಮತ್ತು ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಬಂದಿಸಲಾಗಿದೆ.ಘಟನೆ ವಿವರ:​ಸ್ನಾಪ್‌ಚಾಟ್‌ನಲ್ಲಿ ಶುರುವಾದ ಪರಿಚಯ, ಲಾಡ್ಜ್‌ನಲ್ಲಿ ಅತ್ಯಾಚಾರ:​ಪೊಲೀಸ್ ಮೂಲಗಳ ಪ್ರಕಾರ, ಕೊಡವೂರು ಮಲ್ಪೆ ನಿವಾಸಿಯಾದ 17 ವರ್ಷದ ಅಪ್ರಾಪ್ತ ಬಾಲಕಿಗೆ ಕಳೆದ ಮಾರ್ಚ್ ತಿಂಗಳಲ್ಲಿ ‘ಸ್ನಾಪ್‌ಚಾಟ್’ (Snapchat) ಸಾಮಾಜಿಕ ಜಾಲತಾಣದ ಮೂಲಕ ಎರಡನೇ ಆರೋಪಿ ಸುಶಾನ್ ಪೂಜಾರಿ ಪರಿಚಯವಾಗಿದ್ದನು. ಈತನ ಮೂಲಕ ಮೊದಲನೇ ಆರೋಪಿ ಜಿತೇಂದ್ರನ ಪರಿಚಯವಾಗಿದೆ. ಬಾಲಕಿಯ ಮುಗ್ಧತೆಯನ್ನು ಬಂಡವಾಳ ಮಾಡಿಕೊಂಡ ಜಿತೇಂದ್ರ, ದಿನಾಂಕ 25/03/2026 ರಂದು ಆಕೆಯನ್ನು ಪುಸಲಾಯಿಸಿ ಬ್ರಹ್ಮಾವರ ತಾಲೂಕಿನ ಬಾರ್ಕೂರು-ಮಂದಾರ್ತಿ ರಸ್ತೆಯಲ್ಲಿರುವ ‘ರಶ್ಮಿ ಲಾಡ್ಜ್‌’ಗೆ…

Read More

ಬೆಂಗಳೂರು: ಸೈಬರ್​​ ವಂಚಕರ ಕೈಚಳಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮೊದಲು ಸಾಮಾನ್ಯ ಜನರೇ ಇವರ ಟಾರ್ಗೆಟ್​ ಆಗಿತ್ತು. ಆದರೆ ಇದೀಗ ಸೆಲೆಬ್ರಿಟಿಗಳನ್ನು ಬಿಡುತ್ತಿಲ್ಲ. ಈಗ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪುರಸ್ಕೃತರನ್ನೂ ಬಿಡದೆ ವಂಚಿಸಿರುವ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಪ್ಯಾರಾ ಅಥ್ಲೀಟ್ ಕೆ. ವೈ. ವೆಂಕಟೇಶ್ ಅವರ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಸೈಬರ್ ಖದೀಮರು, ಸುಮಾರು 90 ಸಾವಿರ ರೂಪಾಯಿ ಹಣವನ್ನು ಲೂಟಿ ಮಾಡಿದ್ದಾರೆ.ಹುಟ್ಟಿನಿಂದಲೇ ಅಕೊಂಡ್ರೋಪ್ಲಾಸಿಯಾ ( ಕುಬ್ಜತೆ) ಸಮಸ್ಯೆಯಿಂದ ಬಳಲುತ್ತಿದ್ದರೂ, ಅದನ್ನೇ ಸವಾಲಾಗಿ ಸ್ವೀಕರಿಸಿದ ಕೆ. ವೈ. ವೆಂಕಟೇಶ್ ಅವರು ದೇಶ ಕಂಡ ಅಪರೂಪದ ಪ್ಯಾರಾ ಅಥ್ಲೀಟ್ ಆಗಿದ್ದಾರೆ. 50ಕ್ಕೂ ಹೆಚ್ಚು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ದೇಶಕ್ಕೆ ಕೀರ್ತಿ ತಂದಿರುವ ಇವರ ಸಾಧನೆಯನ್ನು ಗುರುತಿಸಿ ಕೇಂದ್ರ ಸರ್ಕಾರವು 2021ರಲ್ಲಿ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು.ಇದೀಗ ಅವರ ಮೇಲೆಯೂ ಈ ವಂಚಕರ ಜಾಲದ ದೃಷ್ಟಿ ಬಿದ್ದಿದೆ. ಕಳೆದ ಕೆಲವು ದಿನಗಳ ಹಿಂದೆ…

Read More

ಕೊಯಮತ್ತೂರು: ಸುಲೂರಿನಲ್ಲಿ 10 ವರ್ಷದ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಪ್ರಕರಣವನ್ನು ತಮಿಳುನಾಡು ಸರ್ಕಾರ ನಿರ್ವಹಿಸಿದ ರೀತಿಗೆ ಸಂಬಂಧಿಸಿದಂತೆ ಎರಡು ದೊಡ್ಡ ವಿವಾದಗಳು ಮುನ್ನೆಲೆಗೆ ಬಂದಿದ್ದು, ಹೊಸದಾಗಿ ಆಯ್ಕೆಯಾಗಿರುವ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಸರ್ಕಾರವನ್ನು ತೀವ್ರ ಸಂಕಷ್ಟಕ್ಕೆ ಸಿಲುಕಿಸಿವೆ.ಮಗುವಿನ ಹತ್ಯೆಯ ಇಂತಹ ಸೂಕ್ಷ್ಮ ಪ್ರಕರಣದ ಕುರಿತು ಮಾತನಾಡುವಾಗ ಕೈಗಾರಿಕಾ ಸಚಿವೆ ಎಸ್. ಕೀರ್ತನಾ ಹಾಗೂ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳು ಜಂಟಿ ಪತ್ರಿಕಾಗೋಷ್ಠಿಯಲ್ಲಿ ನಗುತ್ತಾ ಬೇಜವಾಬ್ದಾರಿತನ ಪ್ರದರ್ಶಿಸಿರುವುದು ಸಾರ್ವಜನಿಕರು ಹಾಗೂ ವಿರೋಧ ಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.ಸಚಿವೆ ಮತ್ತು ಐಪಿಎಸ್ ಅಧಿಕಾರಿಗಳ ನಗು ಸೋಷಿಯಲ್ ಮೀಡಿಯಾದಲ್ಲಿ ವೈರಲ್:ಮೊದಲನೆಯದಾಗಿ, ಬಾಲಕಿಯ ಕೊಲೆ ಪ್ರಕರಣದ ಬಗ್ಗೆ ಪ್ರಶ್ನಿಸಿದಾಗ ತಮಿಳುನಾಡು ಕೈಗಾರಿಕಾ ಸಚಿವೆ ಎಸ್. ಕೀರ್ತನಾ ಅವರು ನಗುತ್ತಿರುವುದು ಮಾಧ್ಯಮಗಳಲ್ಲಿ ಪ್ರಸಾರವಾಗಿ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದರು. ತದನಂತರ, ಮಾಧ್ಯಮ ಸಂವಾದ ಮುಗಿದ ಬಳಿಕ ತಾನು ನಕ್ಕಿದ್ದಾಗಿ ಸಚಿವೆ ಸ್ಪಷ್ಟನೆ ನೀಡಿದ್ದಾರೆ. ಆದರೆ, ವಿವಾದ ಇಲ್ಲಿಗೆ ನಿಲ್ಲದೆ, ಪ್ರಕರಣದ ತನಿಖೆ…

Read More

ಚೆನ್ನೈ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಅಪರಾಧಿಗೆ ತಮಿಳುನಾಡಿನ ತೂತುಕುಡಿ ಜಿಲ್ಲೆಯ ಪೋಕ್ಸೋ ನ್ಯಾಯಾಲಯ ಮರಣದಂಡನೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.ಧರ್ಮ ಮುನೀಶ್ವರನ್ ಶಿಕ್ಷೆಗೆ ಗುರಿಯಾದ ಅಪರಾಧಿ. ಅಪರಾಧಿಯು ಕೃತ್ಯ ಎಸಗಿದ 77 ದಿನಗಳಲ್ಲೇ ಆತನಿಗೆ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ. ಲೈಂಗಿಕ ದೌರ್ಜನ್ಯ ಹಾಗೂ ಕೊಲೆ, ಎರಡೂ ಪ್ರಕರಣದಲ್ಲೂ ಆತ ಅಪರಾಧಿ ಎಂದು ಸಾಬೀತಾಗಿದ್ದು, ಪ್ರತ್ಯೇಕವಾಗಿ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ. ವಿಲಾತಿಕುಲಂನ 12 ನೇ ತರಗತಿಯ ೧೭ ವರ್ಷದ ವಿದ್ಯಾರ್ಥಿನಿ ಈ ವರ್ಷ ಮಾರ್ಚ್‌ನಲ್ಲಿ ನಾಪತ್ತೆಯಾಗಿದ್ದಳು. ಆಕೆಯ ಶವ ಮನೆಯ ಸಮೀಪವಿರುವ ಕುರುಚಲು ಪ್ರದೇಶದಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಅಪರಾಧಿಯನ್ನು ಪತ್ತೆ ಹಚ್ಚಲು ಪೊಲೀಸರು ಅಪರಾಧ ನಡೆದ ಸ್ಥಳದ ಬಳಿ ಸಿಸಿಟಿವಿ ಕ್ಯಾಮೆರಾಗಳಿಲ್ಲದ ಕಾರಣ, 10 ವಿಶೇಷ ತಂಡಗಳು ಇತರ ಸ್ಥಳಗಳಲ್ಲಿ 98 ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದರು. ಟವರ್ ಡಂಪ್ ವಿಧಾನವನ್ನು ಬಳಸಿಕೊಂಡು 2,574 ಫೋನ್ ಸಂಖ್ಯೆಗಳನ್ನು ಪರಿಶೀಲಿಸಲಾಗಿತ್ತು. ಅಪರಾಧ ನಡೆದ ಸ್ಥಳದ ಬಳಿ…

Read More