Author: main-admin

ಉಡುಪಿ: ಅರಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಸಮುದ್ರದಲ್ಲಿ ಚಂಡಮಾರುತ ಬೀಸುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ (ಅ.20ರವರೆಗೆ) ಕರಾವಳಿ ಸಮುದ್ರದ ತೀರದಲ್ಲಿ ಸಾರ್ವಜನಿಕರು, ಪ್ರವಾಸಿಗರು, ಮಕ್ಕಳು, ಸ್ಥಳೀಯರು ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಎಚ್ಚರಿಕೆ ನೀಡಿದ್ದಾರೆ. ಚಂಡಮಾರುತದ ಅವಧಿಯಲ್ಲಿ ಸಮುದ್ರದ ಅಲೆಗಳ ಎತ್ತರ ಹೆಚ್ಚಾಗಲಿದ್ದು, ಗಾಳಿಯ ವೇಗವು ಗಂಟೆಗೆ 40-45ರಿಂದ 55ಕಿ.ಮೀ. ಇರುವುದರಿಂದ ಸಮುದ್ರ ಪ್ರಕ್ಷುಬ್ಧಗೊಳ್ಳಲಿದೆ. ಹೀಗಾಗಿ ಸಮುದ್ರ ತೀರದಲ್ಲಿ ಓಡಾಡುವುದು ಹಾಗೂ ಆಟವಾಡುವುದನ್ನು ಕೂಡಾ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾವುದೇ ತುರ್ತು ಸಂದರ್ಭದಲ್ಲಿ ಸೇವೆಗಾಗಿ ಶುಲ್ಕ ರಹಿತ:1077 ಅಥವಾ ದೂರವಾಣಿ ಸಂಖ್ಯೆ:0820-2574802ನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

Read More

ನವದೆಹಲಿ : ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.ಹಾಗೂ ಈ ಬಗ್ಗೆ ಅಭಿಪ್ರಾಯ ಕೇಳಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ನೋಟಿಸ್ ನೀಡಿ ಮುಂದಿನ ವಿಚಾರಣೆಯನ್ನು ನವೆಂಬರ್ 7 ಕ್ಕೆ ಮುಂದೂಡಿದೆ. ಕರ್ನಾಟಕ ಹೈಕೋರ್ಟ್ ನ ಜೂನ್ 12 ರ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮನವಿಯ ಮೇರೆಗೆ ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ ತ್ರಿವೇದಿ ಅವರ ನ್ಯಾಯಪೀಠವು ಶಿವಕುಮಾರ್ ಅವರಿಗೆ ನೋಟಿಸ್ ನೀಡಿದೆ.ಈ ತಡೆಯಾಜ್ಞೆಯಿಂದಾಗಿ ಕೇಂದ್ರ ಏಜೆನ್ಸಿಯ ಹೆಚ್ಚಿನ ತನಿಖೆಯನ್ನು ನಿಲ್ಲಿಸಲಾಗಿದೆ.ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು ಅವರು, ಸಿಬಿಐ ತನಿಖೆಯ ಶೇಕಡಾ 90 ರಷ್ಟು ಮುಗಿದಿದೆ ಆದರೆ ಹೈಕೋರ್ಟ್ ನ ಮಧ್ಯಂತರ ತಡೆಯಾಜ್ಞೆಯಿಂದಾಗಿ ಅದು ಮುಂದುವರಿಯುತ್ತಿಲ್ಲ ಎಂದು ಹೇಳಿದರು.ಮಧ್ಯಂತರ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದ ಆದೇಶವನ್ನು ತಡೆಹಿಡಿಯುವಂತೆ ಅವರು ನ್ಯಾಯಪೀಠವನ್ನು ಒತ್ತಾಯಿಸಿದರು. ಶಿವಕುಮಾರ್ ಅವರಿಗೆ ನವೆಂಬರ್ 7ರೊಳಗೆ…

Read More

ಕುಂದಾಪುರ: 2024ರ ಗಣರಾಜ್ಯೋತ್ಸವಕ್ಕೆ ಕುಂದಾಪುರದ ಬೀದಿ ಬದಿಯ ಚಪ್ಪಲಿ ರಿಪೇರಿ ಕಾರ್ಮಿಕನೊಬ್ಬನಿಗೆ ದೇಶದ ಪ್ರಧಾನಿ ನರೇಂದ್ರ ಮೋದಿ ಆಹ್ವಾನಿಸಿದ್ದಾರೆ. ಆ ಮೂಲಕ ಸಮಾಜದ ಕಟ್ಟಕಡೆಯ ಕಾರ್ಮಿಕನಿಗೂ ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವವನ್ನು ಕಣ್ಣುತುಂಬಿಸಿಕೊಳ್ಳುವ ಅವಕಾಶ ಬಂದಿದೆ.ಕುಂದಾಪುರದ ಶಾಸ್ತ್ರೀ ವೃತ್ತದ ಸಮೀಪ ಕಳೆದ ಎರಡೂವರೆ ದಶಕಗಳಿಂದ ಚಪ್ಪಲಿ, ಕೊಡೆ ರಿಪೇರಿ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ಮಣಿಕಂಠ ಎಂಬುವರೇ ಮುಂದಿನ ಬಾರಿಯ ಗಣರಾಜ್ಯೋತ್ಸವದಲ್ಲಿ ಭಾಗವಹಿಸುವ ಅವಕಾಶ ಗಿಟ್ಟಿಸಿಕೊಂಡವರು.ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಶಾಸ್ತ್ರೀ ಸರ್ಕಲ್‌ನಲ್ಲಿ ಲಿಡ್ಕರ್‌ನ ಪಾದರಕ್ಷೆ ರಿಪೇರಿ ಮಾಡುವ ಪೆಟ್ಟಿಗೆ ಅಂಗಡಿಯಲ್ಲಿ ದುಡಿಯುತ್ತಿರುವ ಮಣಿಕಂಠ ಅವರನ್ನು ಈ ಬಾರಿ ಗಣರಾಜ್ಯೋತ್ಸವಕ್ಕೆ ಆಹ್ವಾನಿಸಿರುವ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.ಮೂಲತಃ ಭದ್ರಾವತಿಯವರಾದ ಅವರ ಅಜ್ಜ ಮುನುಸ್ವಾಮಿ ಸುಮಾರು 50 ವರ್ಷಗಳ ಹಿಂದೆ ಇಲ್ಲಿಗೆ ಬಂದು ಈ ಚಪ್ಪಲಿ ರಿಪೇರಿ ಅಂಗಡಿಯನ್ನು ಆರಂಭಿಸಿದರು. ಸ್ವಲ್ಪ ಸಮಯ ಮಣಿಕಂಠ ಅವರ ತಂದೆ ಇದನ್ನು ಮುಂದುವರಿಸಿದರು, ಅವರ ಅನಾರೋಗ್ಯದ ಮಣಿಕಂಠ ಈ ಕುಲಕಸುಬನ್ನು ಮುನ್ನಡೆಸುತ್ತಿದ್ದಾರೆ.ನಾನು ಸಾಮಾನ್ಯ ಜನರು ಮಾಡುವ ಕೆಲಸವನ್ನು ಮಾಡಿದ್ದೇನೆ.…

Read More

ವಿಟ್ಲ: ಪಿಕಪ್ ಕದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 8 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ಮೂಲದ ರಂಷನ್ ಯಾನೆ ಸಾನು, ಜುನ್ಸಿಫ್, ನೌಫಲ್, ಹಂಸಕ್, ತಬ್ರಿಜ, ಮೊಹಮ್ಮದ್ ಉಸೈನ್, ಹ್ಯಾರಿಸ್, ಮೊಹಮ್ಮದ್ ಅಯೂಬ ಖಾನ್ ಬಂಧಿತರು. ಆರೋಪಿಗಳು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕುಡ್ತಮುಗೇರು ಎಂಬಲ್ಲಿ ನಿಲ್ಲಿಸಲಾಗಿದ್ದ ಪಿಕಪ್‌ ಕಳ್ಳತನ ಮಾಡಿದ್ದರು. ಈ ಕುರಿತಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More

ಮಂಗಳೂರು : ಕ್ರಿಕೆಟ್ ವರ್ಲ್ ಕಪ್ ಹಂಗಾಮ ಪ್ರಾರಂಭವಾಗಿದ್ದು, ಇದರ ಬೆನ್ನಲ್ಲೇ ಇದೀಗ ಬೆಟ್ಟಿಂಗ್ ದಂಧೆಯೂ ನಡೆಯುತ್ತಿದೆ. ಇದೇ ರೀತಿಯ ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯನ್ನಿ ನಿರತವಾಗಿದ್ದ ಇಬ್ಬರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ದೀಪಕ್(33) ಮತ್ತು ಸಂದೀಪ್ ಶೆಟ್ಟಿ(38) ಎಂದು ಗುರುತಿಸಲಾಗಿದೆ. ಆರೋಪಿಗಳು ಮಂಗಳೂರು ನಗರದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳ್ಯಾರು ಪರಿಸರದಲ್ಲಿ ಹಾಗೂ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಅ್ಯಪ್ ಉಪಯೋಗಿಸಿಕೊಂಡು ಕ್ರಿಕೆಟ್ಲ ವಿಶ್ವಕಪ್ ಪಂದ್ಯದ ವೇಳೆ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಎರಡು ಕಡೆ ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ ರೂ. 31,000/- ನಗದು ಹಾಗೂ 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 1,11,000/- ಆಗಬಹುದು. ಈ ಬಗ್ಗೆ ಸುರತ್ಕಲ್ ಹಾಗೂ ಕಾವೂರು…

Read More

ಮಂಗಳೂರು: ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ, 2016ರಲ್ಲಿ ನಡೆದ ದೊಂಬಿ, ಗಲಾಟೆ ಗಲಭೆಯ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿ, ನಗರಕ್ಕೆ ಕರೆ ತಂದಿದ್ದಾರೆ. ಮಂಗಳೂರಿನ ಬಜಾಲ್ ಪೈಜಲ್ ನಗರದ ನಿವಾಸಿ ತೌಸೀಫ್(27) ಬಂಧಿತ ಆರೋಪಿಯಾಗಿದ್ದಾನೆ. ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2016ರಲ್ಲಿ ದೊಂಬಿ, ಗಲಾಟೆ ಹಾಗೂ ಮಾರಣಾಂತಿಕ ಹಲ್ಲೆಯಂತಹ ಮೂರು ಪ್ರಕರಣದಲ್ಲಿ ಭಾಗಿಯಾದ ಆರೋಪ ಹೊತ್ತಿದ್ದ ತೌಸೀಫ್, ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ. ವಿದೇಶದಲ್ಲಿ ನೆಲೆಸಿರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಈತನ ವಿರುದ್ಧ ಲುಕ್ ಔಟ್ ನೋಟೀಸ್ (ಎಲ್‌ಒಸಿ) ಹೊರಡಿಸಲಾಗಿತ್ತು. ರಿಯಾದ್ ನಿಂದ ಮುಂಬೈ ನ ಛತ್ರಪತಿ ಶಿವಾಜಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಾಹಿತಿ ಸಿಕ್ಕಿದ ಪ್ರಕಾರ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ಮಂಗಳೂರಿಗೆ ಕರೆ ತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Read More

ಮಂಗಳೂರು: ವಿಶ್ವವಿಖ್ಯಾತ ಮಂಗಳೂರು ದಸರಾದ ಹಿನ್ನಲೆಯಲ್ಲಿ ನಗರದ ಶ್ರೀಕ್ಷೇತ್ರ‌ ಕುದ್ರೋಳಿಯ ಕೊರಗಪ್ಪ ಸಭಾಂಗಣದಲ್ಲಿ ಶ್ರೀ ಶಾರದಾ ಮಾತೆ, ಶ್ರೀ ಮಹಾಗಣಪತಿ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆ ರವಿವಾರ ಬೆಳಗ್ಗೆ ನೆರವೇರಿತು. ಶ್ರೀಕ್ಷೇತ್ರ ಕುದ್ರೋಳಿಯ ಅಭಿವೃದ್ಧಿ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ಉಪಸ್ಥಿತಿಯಲ್ಲಿ ಶಾರದಾಮಾತೆಯ ಪ್ರತಿಷ್ಠಾಪನೆ ನೆರವೇರಿತು. ಕರ್ಣಾಟಕ ಬ್ಯಾಂಕ್ ಸಿಇಒ ಪ್ರದೀಪ್ ಕುಮಾರ್ ಮಂಗಳೂರು ದಸರಾಕ್ಕೆ ಚಾಲನೆ ನೀಡಿದರು. ಈ ಬಾರಿ ಕಣ್ಮನ ಸೆಳೆಯುವ ದಸರಾ ದರ್ಬಾರ್ ಮಂಟಪ ಎಲ್ಲರ ವಿಶೇಷವಾಗಿದೆ. ಶಿಲಾಬಾಲಿಕೆಯರು, ವಿವಿಧ ದೇವರುಗಳ ಕಲಾಕೃತಿಗಳು ದರ್ಬಾರ್ ಮಂಟಪದ ಕಂಬಕಂಬಗಳಲ್ಲಿ ರಾರಾಜಿಸುತ್ತಿದ್ದಾರೆ. ಸಾಮಾನ್ಯ ನವದುರ್ಗೆಯರನ್ನು ಮಂಟಪದೊಳಗಡೆ ಪ್ರತಿಷ್ಠಾಪಿಸಲಾಗುತ್ತಿತ್ತು. ಆದರೆ ಈ ಬಾರಿ ಪ್ರತ್ಯೇಕ ಗುಡಿಗಳನ್ನು ನಿರ್ಮಿಸಿ ಅದರೊಳಗಡೆ ನವದುರ್ಗೆಯರನ್ನು ಪ್ರತಿಷ್ಠಾಪಿಸಲಾಗಿದೆ. ಮಂಟಪದ ಮೇಲ್ಗಡೆ ಸ್ವಯಂಚಾಲಿತವಾಗಿ ತಿರುಗುವ ಮೇಲ್ಛಾವಣಿಯನ್ನು ಅತ್ಯಾಕರ್ಷಕವಾಗಿ ರಚಿಸಲಾಗಿದೆ. ದರ್ಬಾರ್ ಮಂಟಪ ಹೊಕ್ಕುವಂತೆಯೇ ಎಡಬಲ ಬದಿಗಳಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಹಾಗೂ ಶ್ರೀ ಗೋಕರ್ಣನಾಥ ದೇವರ ಬೃಹತ್ ಭಾವಚಿತ್ರಗಳನ್ನು ಅಳವಡಿಸಲಾಗಿದೆ. ಸುಮಾರು 50 ಅಧಿಕ ಬೃಹತ್ ಗಾತ್ರದ…

Read More

ಕಾರ್ಕಳ : ಬೈಲೂರಿನ ವಿವಾದಿತ ಪರಶುರಾಮ ಮೂರ್ತಿಯ ಅಸಲಿ ಬಣ್ಣ ಇದೀಗ ಬಯಲಾಗಿದ್ದು, ಪರುಶುರಾಮ ಮೂರ್ತಿ ಇದೀಗ ಇದ್ದಕ್ಕಿದ್ದಂತೆ ಕಾಣೆಯಾಗಿದ್ದು, ಮೂರ್ತಿಯ ಸುತ್ತ ಕಪ್ಪು ಪ್ಲಾಸ್ಟಿಕ್ ಹೊದಿಕೆ ಹಾಕಲಾಗಿದ್ದು, ಇದೀಗ ಡ್ರೋಣ್ ಕ್ಯಾಮರಾದಲ್ಲಿ ಕಪ್ಪು ಪ್ಲ್ಯಾಸ್ಟಿಕ್ ಹೊದಿಕೆಯ ಒಳಗಿನ ಪರುಶುರಾಮ ಮುೂರ್ತಿ ಅಸಲಿ ಬಣ್ಣ ಬಯಲಾಗಿದ್ದು, ಇದೀಗ ಪರುಶುರಾಮನ ಪಾದ ಮತ್ತು ಕಾಲು ಬಿಟ್ಟು ಉಳಿದ ಭಾಗ ಮಾಯವಾಗಿರುವುದು ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರ್ಕಳದ ಬೈಲೂರಿನಲ್ಲಿ ನಿರ್ಮಿಸಲಾಗಿರುವ ಪರುಶುರಾಮನ ಮೂರ್ತಿ ನಕಲಿ ಎನ್ನುವುದು ಇದೀಗ ಸಾಬೀತಾಗಿದ್ದು, ಇದೀಗ ಪರುಶುರಾಮ ಮೂರ್ತಿಯ ನಕಲಿ ಎಂಬ ವಿರುದ್ದ ಹೋರಾಟ ನಡೆಸಿದ ಹೋರಾಟಗಾರರು ಮೂರ್ತಿ ಕಾಣೆಯಾಗಿದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ಪರುಶುರಾಮ ಮೂರ್ತಿ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಉಮ್ಮಿಕಲ್ ಬೆಟ್ಟಕ್ಕೆ ಕಾಂಗ್ರೆಸ್‌ ಮುಖಂಡ ಉದಯ ಕುಮಾರ್‌ ಶೆಟ್ಟಿ ಭೇಟಿ ಶನಿವಾರ ಭೇಟಿ ನೀಡಿದರು. ಈ ಸಂದರ್ಭ ಪ್ರತಿಕ್ರಿಯಿಸಿದ ಅವರು, ಪರಶುರಾಮನ ಕಂಚಿನ ಮೂರ್ತಿಯ ಕಾಲಿನ ಭಾಗ ಮಾತ್ರವಿದ್ದು, ದೇಹದ ಉಳಿದ ಭಾಗಗಳನ್ನು ತೆರವುಗೊಳಿಸಲಾಗಿದೆ.…

Read More

ಮುಂಬೈ: ಪೋಷಕರು ಒಪ್ಪಿಗೆ ನೀಡಿದರೆ ಶಾಲಾ ವಿದ್ಯಾರ್ಥಿಗಳು ಶೀಘ್ರದಲ್ಲೇ ತಮ್ಮದೇ ಆದ ವಿಶಿಷ್ಟ ಗುರುತಿನ ಸಂಖ್ಯೆಯನ್ನು ಹೊಂದಲಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020 ರ ಭಾಗವಾಗಿ, ಕೇಂದ್ರ ಶಿಕ್ಷಣ ಸಚಿವಾಲಯವು ಪೂರ್ವ ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ ಪ್ರತಿ ವಿದ್ಯಾರ್ಥಿಗೆ ‘ಸ್ವಯಂಚಾಲಿತ ಶಾಶ್ವತ ಶೈಕ್ಷಣಿಕ ಖಾತೆ ನೋಂದಣಿ (ಎಪಿಎಎಆರ್) ಎಂಬ ‘ಒನ್ ನೇಷನ್, ಒನ್ ಸ್ಟೂಡೆಂಟ್ ಐಡಿ’ ರಚಿಸಲು ಯೋಜಿಸಿದೆ ಎನ್ನಲಾಗಿದೆ. APAAR ID,, ಎಜುಕೇಶನ್ ಇಕೋಸಿಸ್ಟಮ್ ರಿಜಿಸ್ಟ್ರಿ ಅಥವಾ ಎಜುಲಾಕರ್ ಅನ್ನು ಆಜೀವ ಐಡಿ ಸಂಖ್ಯೆ ಎಂದು ಪರಿಗಣಿಸಲಾಗುತ್ತದೆ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಯಾಣ ಮತ್ತು ಸಾಧನೆಗಳನ್ನು ಟ್ರ್ಯಾಕ್ ಮಾಡುತ್ತದೆ. ವಿದ್ಯಾರ್ಥಿಗಳಿಗೆ ಎಪಿಎಆರ್ ಐಡಿಗಳನ್ನು ರಚಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ಶಿಕ್ಷಣ ಸಚಿವಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ. “ಎಪಿಎಎಆರ್ ಮತ್ತು ನ್ಯಾಷನಲ್ ಕ್ರೆಡಿಟ್ ಫ್ರೇಮ್ವರ್ಕ್ ಭಾರತದಾದ್ಯಂತ ಕಲಿಯುವವರಿಗೆ ಕ್ಯೂಆರ್ ಕೋಡ್ ಆಗಿರುತ್ತದೆ. ಅವರು ತೆಗೆದುಕೊಳ್ಳುವ ಪ್ರತಿಯೊಂದು ಕೌಶಲ್ಯವನ್ನು ಇಲ್ಲಿ ಕ್ರೆಡಿಟ್ ಮಾಡಲಾಗುತ್ತದೆ ” ಎಂದು ಎಐಸಿಟಿಇ…

Read More

ಮಂಗಳೂರು: ಇಸ್ರೇಲ್ ಮೇಲೆ ದಾಳಿ ನಡೆಸಿ ಸಾವು – ನೋವುಗಳಿಗೆ ಕಾರಣವಾದ ಹಮಾಸ್ ಬಂಡುಕೋರರನ್ನು ಬೆಂಬಲಿಸಿದ ಮಂಗಳೂರಿನ ವ್ಯಕ್ತಿಯನ್ನು ಪೊಲೀಸರು ಸುಮೋಟೊ ಪ್ರಕರಣದಲ್ಲಿ ಬಂಧಿಸಿದ್ದಾರೆ. ಹಮಾಸ್ ಉಗ್ರರನ್ನು ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಯಬಿಟ್ಟಿದ್ದ ಮಂಗಳೂರು ಬಂದರಿನ ಝಾಕಿರ್ ನನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ಯಾಲೆಸ್ತೈನ್ ಹಾಗೂ ಇಸ್ರೇಲ್‌ ಮಧ್ಯೆ ನಡೆಯುತ್ತಿರುವ ಯುದ್ಧಕ್ಕೆ ಸಂಬಂಧಿಸಿದಂತೆ ಹಮಾಸ್ ಬಂಡುಕೋರರ ಬಗ್ಗೆ ಎಲ್ಲರೂ ಪ್ರಾರ್ಥನೆ ಮಾಡಬೇಕೆಂದು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ವಾಟ್ಸಾಪ್‌ನಲ್ಲಿ ಹರಿಯಬಿಟ್ಟಿದ್ದ. ಈ ವೀಡಿಯೋ ವ್ಯಾಪಕವಾಗಿ ವೈರಲ್ ಆಗಿತ್ತು‌. ಆದ್ದರಿಂದ ಕೋಮುಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆಯಿದ್ದು, ಮಂಗಳೂರು ಉತ್ತರ ಠಾಣಾ ಪೊಲೀಸ್ ಉಪನಿರೀಕ್ಷಕ ವಿನಾಯಕ ತೋರಗಲ್ ಸುಮೋಟೊ ಪ್ರಕರಣ ದಾಖಲಿಸಿ ಆರೋಪಿ ಜಾಕಿರ್ ನನ್ನು ದಸ್ತಗಿರಿ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿಯ ಮೇಲೆ ಈ ಹಿಂದೆಯೂ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಸುಮಾರು 7 ಪ್ರಕರಣಗಳು ದಾಖಲಾಗಿದೆ.

Read More