ಮಂಗಳೂರು: ಉದ್ಯೋಗ ನೀಡುವುದಾಗಿ ನಂಬಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರ ಇ-ಮೇಲ್‌ಗೆ TELEPHONE SKYPE ಎಂಬ ಅಪರಿಚಿತನೋರ್ವ hr@teams-subaru.com ನಿಂದ ಮಾ. 18ರಂದು ವಿದೇಶದಲ್ಲಿ ಉದ್ಯೋಗದ ಬಗ್ಗೆ ಸಂದೇಶ ಕಳುಹಿಸಿದ್ದ. ಅನಂತರ ಆಫರ್ ಲೆಟರ್ ಕಳುಹಿಸಿದ್ದ. ಅನಂತರ ನೇಮಕಾತಿ ಸಂಬಂಧವಾಗಿ ಠೇವಣಿ ಹಣ ನೀಡಬೇಕೆಂದು ತಿಳಿಸಿ ಹಂತ ಹಂತವಾಗಿ ಒಟ್ಟು 1,12,760 ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಲಾಗಿದೆ.
Author: main-admin
ಮಂಗಳೂರು: ಕೊಲೆ ಪ್ರಕರಣವೊಂದರ ಇಬ್ಬರು ಆರೋಪಿಗಳಿಗೆ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕಾಂತರಾಜು ಎಸ್.ವಿ. ಜೀವಾವಧಿ ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದ್ದಾರೆ. ಮಂಗಳೂರು ತಾಲೂಕಿನ ಬಡಗ ಎಡಪದವು ನಿವಾಸಿ ರಮೇಶ್ ಶೆಟ್ಟಿಗಾರ್(41) ಮತ್ತು ನಿತ್ಯಾನಂದ (41) ಶಿಕ್ಷೆಗೊಳಗಾದ ಆರೋಪಿಗಳು. ಇವರು ಬಡಗ ಎಡಪದವಿನ ನವೀನ (28) ಎಂಬವರನ್ನು ಕೊಲೆಗೈದ ಆರೋಪ ಎದುರಿಸುತ್ತಿದ್ದರು.ಹಣದ ವ್ಯವಹಾರಕ್ಕೆ ಸಂಬಂಧಿಸಿದಂತೆ ಆರೋಪಿಗಳು 2019ರ ಮೇ 17ರಂದು ರಾತ್ರಿ 11:50ಕ್ಕೆ ಬಡಗ ಎಡಪದವು ಗ್ರಾಮದ ದೂಮ ಚಡವು ದಡ್ಡಿ ಕ್ರಾಸ್ ಎಂಬಲ್ಲಿ ನವೀನರ ತಲೆಗೆ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದರು ಎನ್ನಲಾಗಿದೆ. ಬಳಿಕ ತಮ್ಮ ಬಟ್ಟೆ ಬರೆಗಳನ್ನು ಕಾಡಿನಲ್ಲಿ ಸುಟ್ಟು ಸಾಕ್ಷ್ಯ ನಾಶ ಮಾಡಿದ್ದರು.ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸ್ ನಿರೀಕ್ಷಕ ಕೆ.ಆರ್.ನಾಯ್ಕ್ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗಳಿಗೆ ಐಪಿಸಿ ಕಲಂ 302ರಡಿ ಜೀವಾವಧಿ ಶಿಕ್ಷೆ, 2 ಲ.ರೂ.ದಂಡ, ದಂಡ ಪಾವತಿಸಲು…
ಕೇಂದ್ರ ಸರ್ಕಾರ ಅಕ್ಕಿ ನೀಡುವ ವಿಚಾರದಲ್ಲಿ ರಾಜಕೀಯ ಮಾಡಿದೆ ಎಂದು ಆರೋಪಿಸಿದ್ದ ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆಯ ಅನುಷ್ಠಾನದ ಕುರಿತಂತೆ ಇಂದು ಮಹತ್ವದ ಮಾಹಿತಿಯನ್ನು ನೀಡಿದೆ. ಇಂದು ಸಚಿವ ಸಂಪುಟ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಕೆ ಹೆಚ್ ಮುನಿಯಪ್ಪ , ಪಡಿತರದಾರರಿಗೆ ಅಕ್ಕಿಯ ಬದಲು ಹಣ ನೀಡುತ್ತೇವೆ ಎಂದು ಹೇಳಿದ್ದಾರೆ. ಜುಲೈ 1ರಿಂದ 10 ಕೆಜಿ ಆಹಾರಧಾನ್ಯ ನೀಡುವುದಾಗಿ ಭರವಸೆ ನೀಡಿದ್ದೆವು. ಜನರಿಗೆ ನಾವು ನೀಡಿದ ಭರವಸೆಯಂತೆ ಹಣ ನೀಡಲು ನಿರ್ಧರಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯದಲ್ಲಿ ಜನರಿಗೆ ಅಕ್ಕಿಯನ್ನು ನೀಡೋಕೆ ಅಕ್ಕಿಯ ಕೊರತೆಯಿದೆ . ಹೀಗಾಗಿ ಪ್ರತಿ ಕೆಜಿಗೆ 34 ರೂಪಾಯಿಯಂತೆ ಮನೆಯ ಪ್ರತಿಯೊಬ್ಬ ಸದಸ್ಯನಿಗೆ ರಾಜ್ಯ ಸರ್ಕಾರವು 170 ರೂಪಾಯಿಗಳನ್ನು ನೀಡಲಿದೆ. ಅನ್ನಭಾಗ್ಯ ಯೋಜನೆಯ ಬದಲಾಗಿ ಈ ಪರ್ಯಾಯ ವ್ಯವಸ್ಥೆಯನ್ನು ಮಾಡುತ್ತಿದ್ದೇವೆ. ಕಾರ್ಡ್ ಹೋಲ್ಡರ್ ಖಾತೆಗೆ ನೇರವಾಗಿ ಈ ಹಣ ಸಂದಾಯವಾಗಲಿದೆ ಎಂದು ವಿಧಾನಸೌಧದಲ್ಲಿ ಸಚಿವ ಮುನಿಯಪ್ಪ ಹೇಳಿಕೆ ನೀಡಿದ್ದಾರೆ. ಬಿಪಿಎಲ್…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳು ಜೂ. 30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆಯನ್ನು ಜಫ್ತಿ ಮಾಡಲಾಗುವುದೆಂದು ಸುಳ್ಯ ನಗರದಲ್ಲಿ ಧ್ವನಿವರ್ಧಕದ ಮೂಲಕ ಘೋಷಣೆ ಮಾಡಲಾಗಿದೆ. ಎನ್‌ಐಎ ನ್ಯಾಯಾಲಯದ ಅಧಿಕಾರಿಗಳು ಹಾಗೂ ಸುಳ್ಯ ಪೊಲೀಸ್ ಸಿಬ್ಬಂದಿಯವರು ಅನೌನ್ಸ್ ಮಾಡಿದ್ದಾರೆ. ಆರೋಪಿಗಳ ಸುಳಿವು ಕೊಟ್ಟಲ್ಲಿ ನಗದು ಬಹುಮಾನವನ್ನು ನೀಡಲಾಗುವುದು ಎಂದು ಸಾರ್ವಜನಿಕರಲ್ಲಿ ವಿನಂತಿಸಲಾಗುತ್ತಿದೆ. ಸುಳ್ಯದ ಕಲ್ಲುಮುಟ್ಲುನಲ್ಲಿ ವಾಸವಿದ್ದ ಆರೋಪಿ ಉಮ್ಮರ್ ಫಾರೂಕ್ ಅವರ ಮನೆಗೂ ಹೋಗಿ ನ್ಯಾಯಾಲಯದ ಆದೇಶ ಪ್ರತಿಯನ್ನು ಅಂಟಿಸಿ ಬಂದಿದ್ದಾರೆ. ನಿನ್ನೆ ಬೆಳ್ಳಾರೆಯಲ್ಲಿಯೂ ಧ್ವನಿವರ್ಧಕದ ಮೂಲಕ ಎನ್‌ಐಎ ನ್ಯಾಯಾಲಯದ ಆದೇಶವನ್ನು ಉದ್ಘೋಷಣೆ ಮಾಡಿ ಆರೋಪಿ ಮುಸ್ತಫರವರ ಮನೆಗೂ ಹೋಗಿ ಆದೇಶ ಪ್ರತಿ ಅಂಟಿಸಿ ಬಂದಿದ್ದಾರೆಂದು ತಿಳಿದುಬಂದಿದೆ.
ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ನಡೆದು ಬರೋಬ್ಬರಿ ವರ್ಷ ತುಂಬುತ್ತಾ ಬಂದರೂ ಪ್ರಮುಖ ಆರೋಪಿಗಳು ಪತ್ತೆಯಾಗಲೇ ಇಲ್ಲ, ಇದೀಗ ಪ್ರಮುಖ ಆರೋಪಿಗಳ ಪತ್ತೆಗೆ ಮತ್ತೊಮ್ಮೆ NIA ಕಾರ್ಯಾಚರಣೆ ಆರಂಭಿಸಿದೆ. 2022ರ ಜುಲೈ 26 ರಂದು ಬೆಳ್ಳಾರೆಯ ಪ್ರವೀಣ್ ಮಾಲೀಕತ್ವದ ಕೋಳಿ ಫಾರಂ ಮುಂಭಾಗ ತಲವಾರು ದಾಳಿ ನಡೆದು ಭೀಕರ ಹತ್ಯೆ ನಡೆಸಿದ್ದಾರೆ. ಮತ್ತೊಮ್ಮೆ ಆರೋಪಿಗಳ ಪತ್ತೆಗಾಗಿ ಬಹುಮಾನ ಘೋಷಿಸಿರುವ ಪೋಸ್ಟರ್ ಅಂಟಿಸುತ್ತಿದ್ದಾರೆ. ತಲೆ ಮರೆಸಿಕೊಂಡಿರುವ ಆರೋಪಿಗಳ ಮನೆಗೆ ಭೇಟಿ ನೀಡಿ NIA ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಮುಸ್ತಫಾ ಪೈಚಾರ್, ಅಬುಬಕ್ಕರ್ ಸಿದ್ದಿಕ್, ಉಮ್ಮರ್ ಫಾರುಕ್, ತುಫೇಲ್, ಮಸೂದ್ ಅಗ್ನಾಡಿ ಸೇರಿಂದತೆ ಇನ್ನಿತರ ಪ್ರಮುಖ ಆರೋಪಿಗಳಿಗಾಗಿ NIA ತಲಾಶ್ ನಡೆಸುತ್ತಿದೆ. ಬೆಳ್ಳಾರೆ, ಸುಳ್ಯ ಸೇರಿದಂತೆ ಕೊಡಗು ಜಿಲ್ಲೆಯಲ್ಲಿ ತಲೆ ಮರೆಸಿಕೊಂಡಿರುವ ಆರೋಪಿಗಳ ಭಾವ ಚಿತ್ರವಿರುವ ನೋಟಿಸನ್ನು NIA ಅಂಟಿಸಿದೆ.
ಸುಳ್ಯ : ಯುವಕನೋರ್ವ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಉಬರಡ್ಕದಲ್ಲಿ ನಿನ್ನೆ ರಾತ್ರಿ ವರದಿಯಾಗಿದೆ. ಮೃತ ಯುವಕನನ್ನು ಅರಂತೋಡು ಗ್ರಾಮದ ರವಿ ಎಂದು ಗುರುತಿಸಲಾಗಿದೆ. ಈತ ಉಬರಡ್ಕ ಗ್ರಾಮದ ಬೆಳ್ರಂಪಾಡಿ ಎಂಬಲ್ಲಿನ ಗುಡ್ಡದಲ್ಲಿ ಕೋವಿಯಿಂದ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೇಳಲಾಗಿದೆ. ಬೆಳ್ರಂಪಾಡಿಯ ಮನೆಯೊಂದರಲ್ಲಿ ರವಿ ಕೆಲಸಮಯದಿಂದ ಕೆಲಸಕ್ಕಿದ್ದರೆನ್ನಲಾಗಿದ್ದು, ಕಳೆದ ರಾತ್ರಿ ಕೋವಿ ಹಿಡಿದು ಗುಡ್ಡಕ್ಕೆ ಹೋಗಿದ್ದ ರವಿ ಅಲ್ಲಿ ತಲೆಗೆ ಗುಂಡು ಹೊಡೆದುಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಸ್ಥಳಕ್ಕೆ ರಾತ್ರಿಯೇ ಪೋಲೀಸರು ಬಂದು ಮಹಜರು ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೇಲುನೋಟಕ್ಕೆ ಆತ್ಮಹತ್ಯೆ ಪ್ರಕರಣ ಎಂದು ಶಂಕಿಸಲಾಗಿದ್ದು ತನಿಖೆ ನಡೆಸಲಾಗುತ್ತಿದೆ.
ವಿಟ್ಲ: ಬೈಕ್ ನಲ್ಲಿ ಬಂದ ನಾಲ್ವರು ಯುವಕರು ಆಟೋ ರಿಕ್ಷಾ ಅಡ್ಡಗಟ್ಟಿ ಆಟೋದಲ್ಲಿದ್ದವರ ಜತೆ ಜಗಳವಾಡಿ, ಮಹಿಳೆಯ ಮೈ ಮೇಲೆ ಕೈ ಹಾಕಿದ್ದಲ್ಲದೆ, ಅದನ್ನು ತಡೆದ ಆಕೆಯ ಪತಿಯನ್ನು ರಿಕ್ಷಾದಿಂದ ಎಳೆದು ರಸ್ತೆಗೆ ದೂಡಿ ಹಾಕಿ ಮರದ ರೀಪಿನ ತುಂಡಿನಿಂದ ಮುಖಕ್ಕೆ ಹೊಡೆದು ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆ ಒಡ್ಡಿರುವ ಘಟನೆ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮುನ್ನ ಯಾನೆ ಸುದರ್ಶನ, ಶರತ್, ಧನರಾಜ್, ಉದಯ ಆರೋಪಿಗಳಾಗಿದ್ದು, ಈ ಪೈಕಿ ಸುದರ್ಶನ್‌ಮತ್ತು ಧನರಾಜ್ ನನ್ನು ಬಂಧಿಸಲಾಗಿದೆ. ಸಾಲೆತ್ತೂರಿನ ಪಾಲ್ತಾಜೆ ನಿವಾಸಿ ಜಯಂತ (32) ಅವರು ಜೂ. 25ರಂದು ಮಗುವಿನ ಚಿಕಿತ್ಸೆಗೆಂದು ಕ್ಲಿನಿಕ್ ಗೆ ಪತ್ನಿ ಮಧುಶ್ರೀ ಅವರೊಂದಿಗೆ ಶಿವರಾಮ್ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದಾಗ ಸದಾಶಿವ ದೇವಸ್ಥಾನಕ್ಕೆ ಹೋಗುವ ದಾರಿ ಬಳಿ ಸಾಲೆತ್ತೂರು ವೈನ್ ಶಾಪ್ ಕಡೆಯಿಂದ ಎರಡು ಬೈಕ್‌ಗಳಲ್ಲಿ ಮುನ್ನ ಯಾನೆ ಸುದರ್ಶನ್, ಶರತ್, ಧನು ಮತ್ತು ಉದಯ ಬಂದು ಆಟೋ…
ರಾಮನಗರ: ಹೆದ್ದಾರಿಯಲ್ಲಿ ಪೊಲೀಸರು ಸಮವಸ್ತ್ರದಲ್ಲಿ ಕಾಣಿಸುತ್ತಿಲ್ಲ. ನಮ್ಮ ಸಿಬ್ಬಂದಿ ಕಂಡರೆ, ವಾಹನ ಸವಾರರಿಗೆ ಒಂದು ಭಯ ಇರುತ್ತದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರು- ಮೈಸೂರು ದಶಪಥ ಎಕ್ಸ್‌ಪ್ರೆಸ್ ಹೆದ್ದಾರಿ ಅಪಘಾತದ ಸ್ಥಳಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ, ಅಧಿಕಾರಿಗಳಿಗೆ ಈ ನಿರ್ದೇಶನ ನೀಡಿದರು. ಬೆಂಗಳೂರಿನಿಂದ ಬೆಳಗಾವಿವರೆಗೆ ಹೋದರೂ ಒಬ್ಬ ಸಿಬ್ಬಂದಿ ಸಹ ಸಮವಸ್ತ್ರದಲ್ಲಿ ಕಾಣುವುದಿಲ್ಲ. ಸಿಬ್ಬಂದಿ ಕೇವಲ ರಿಫ್ಲೆಕ್ಟ್ ಜಾಕೆಟ್ ಹಾಕಿಕೊಂಡು ಇದ್ದರೆ ಸಾಕು. ಜನ ಭಯದಿಂದ ವಾಹನದ ವೇಗ ತಗ್ಗಿಸುತ್ತಾರೆ ಎಂದರು. ದಾವಣಗೆರೆಯಲ್ಲಿ ನಾನು ಎಸ್ ಪಿ ಇದ್ದಾಗ ಹೆದ್ದಾರಿಯಲ್ಲಿ ಪಹರೆ ಮಾಡಿಯೇ, ಶೇ 40ರಷ್ಟು ಅಪಘಾತ ತಗ್ಗಿಸಿದ್ದೆವು. ಎಲ್ಲಾ ಹೆದ್ದಾರಿಗಳಲ್ಲಿ ಗಸ್ತು ಆರಂಭಿಸಬೇಕು ಎಂದು ಸೂಚಿಸಿದರು. ಹೆದ್ದಾರಿ ಪಹರೆಗೆ ನಿಯೋಜಿಸಿರುವ ಗಸ್ತು ವಾಹನಗಳನ್ನು ಪರಿಶೀಲಿಸಿದ ಅವರು, ಅಪಘಾತ ತಡೆಗೆ ಹೆದ್ದಾರಿ ವ್ಯಾಪ್ತಿಯ ಪೊಲೀಸ್ ಠಾಣೆಗಳ ಸಿಬ್ಬಂದಿ ಕೈಗೊಂಡಿರುವ ಕ್ರಮಗಳನ್ನು ವಿಚಾರಿಸಿದರು. ಅಪಘಾತದ ಮಾಹಿತಿ ಪುಸ್ತಕವನ್ನು ಪರಿಶೀಲಿಸಿದರು. ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ,…
ಲಖನೌ : ಎರಡು ಡಜನ್‌ಗೂ ಅಧಿಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಕ್ರಿಮಿನಲ್‌ನನ್ನು ಎನ್‌ಕೌಂಟರ್‌ನಲ್ಲಿ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಹತ್ಯೆ ಮಾಡಲಾಗಿದೆ. ಕೊಲೆ ಹಾಗೂ ಡಕಾಯತಿ ಸೇರಿದಂತೆ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಗುಫ್ರಾನ್ ಎಂಬ ಕ್ರಿಮಿನಲ್, ಉತ್ತರ ಪ್ರದೇಶ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಕೌಶಂಬಿ ಜಿಲ್ಲೆಯಲ್ಲಿ ವಿಶೇಷ ಕಾರ್ಯ ಪಡೆಯು ಜಿಲ್ಲೆಯ ಮಾಂಝನ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಸಮ್ದಾ ಶುಗರ್ ಮಿಲ್ ರಸ್ತೆ ಸಮೀಪ ಬೆಳಗಿನ ಜಾವ 5.30ರ ಸುಮಾರಿಗೆ ರೇಡ್ ನಡೆಸುತ್ತಿತ್ತು. ಆಗ ಪೊಲೀಸ್ ತಂಡಕ್ಕೆ ಮುಖಾಮುಖಿಯಾದ ಗುಫ್ರಾನ್, ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಕೂಡ ಗುಂಡಿನ ದಾಳಿಯ ಉತ್ತರ ನೀಡಿದ್ದಾರೆ. ಪರಸ್ಪರ ಗುಂಡಿನ ಚಕಮಕಿಯಲ್ಲಿ ಆತನಿಗೆ ಬುಲೆಟ್ ತಗುಲಿ ಗಾಯಗಳಾಗಿವೆ. ಗುಫ್ರಾನ್‌ನನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ತೀವ್ರ ಗಾಯಗಳಿಂದ ಮೃತಪಟ್ಟಿದ್ದಾನೆ ಎಂದು ಉತ್ತರ ಪ್ರದೇಶ ಪೊಲೀಸರು ಹೇಳಿದ್ದಾರೆ. ಉತ್ತರ ಪ್ರದೇಶದ ಪ್ರತಾಪಗಡ ಹಾಗೂ ಇತರೆ ಜಿಲ್ಲೆಗಳಲ್ಲಿ ಕೊಲೆ, ಕೊಲೆ ಪ್ರಯತ್ನ…
ಬರೇಲಿ: ಬರೇಲಿಯ ಆಸ್ಪತ್ರೆಯೊಂದರಲ್ಲಿ 3 ವರ್ಷದ ಬಾಲಕನಿಗೆ ಸುನ್ನತಿ ಮಾಡಿದ ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು, ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಸೂಚನೆ ಮೇರೆಗೆ ಎಂ ಖಾನ್ ಆಸ್ಪತ್ರೆಯ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ಶನಿವಾರ ಈ ಬಗ್ಗೆ ಟ್ವೀಟ್ ಮಾಡಿರುವ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್, “ದೂರು ಸರಿಯಾಗಿದ್ದರೆ, ತಪ್ಪಿತಸ್ಥ ವೈದ್ಯರು ಮತ್ತು ಆಸ್ಪತ್ರೆಯ ಆಡಳಿತದ ವಿರುದ್ಧ ಎಫ್‌ಐಆರ್ ದಾಖಲಿಸಲು, ತಕ್ಷಣದಿಂದಲೇ ಜಾರಿಗೆ ಬರುವಂತೆ ಆಸ್ಪತ್ರೆಯ ನೋಂದಣಿಯನ್ನು ರದ್ದುಗೊಳಿಸಲು ಮತ್ತು ಸಂಪೂರ್ಣ ವರದಿಯನ್ನು ನೀಡಲು ಬರೇಲಿಯ ಸಿಎಂಒಗೆ ಆದೇಶ ನೀಡಲಾಗಿದೆ” ಎಂದು ಪಾಠಕ್ ಹೇಳಿದ್ದಾರೆ. ಜೂನ್ 23ರಂದು ಸ್ಟೇಡಿಯಂ ರಸ್ತೆಯ ಎಂ ಖಾನ್ ಆಸ್ಪತ್ರೆಯಲ್ಲಿ ಮೂರು ವರ್ಷದ ಬಾಲಕನಿಗೆ ನಾಲಿಗೆ ಶಸ್ತ್ರಚಿಕಿತ್ಸೆ ಮಾಡುವ ಬದಲು ಸುನ್ನತಿ ಮಾಡಲಾಗಿತ್ತು. ಘಟನೆ ಬಳಿಕ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ಸಾರ್ವಜನಿಕವಾಗಿ ತಿಳಿಯುತ್ತಿದ್ದಂತೆಯೇ ಹಲವು ಹಿಂದೂ ಸಂಘಟನೆಗಳು ಸ್ಥಳಕ್ಕೆ ಆಗಮಿಸಿ ಸುನ್ನತಿ ವಿರೋಧಿಸಿ ಪ್ರತಿಭಟನೆ ನಡೆಸಿದರು. ಘಟನೆ ಬಗ್ಗೆ ಮಾಹಿತಿ ಪಡೆದ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್, ಈ ಬಗ್ಗೆ ತನಿಖೆ…










