Author: main-admin

ವಿಟ್ಲ: ಕುಳ ಗ್ರಾಮದ ನೀರಪಳಿಕೆಯಲ್ಲಿ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಸಿ ಚಿನ್ನ ಲಪಟಾಯಿಸಲು ಯತ್ನಿಸಿದ ಘಟನೆ ನಡೆದಿದೆ. ನೀರಪಳಿಕೆ ಮಹಮ್ಮದ್ ಕುಂಞ ಅವರ ಮನೆಯವರು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳಿದ್ದಾಗ ಮನೆಯಲ್ಲಿ ವೃದ್ಧ ಮಹಿಳೆ ಮಾತ್ರ ಇರುವ ಸಂದರ್ಭ ಮನೆಯ ಮುಖ್ಯ ದ್ವಾರದ ಮೂಲಕ ವ್ಯಕ್ತಿಯೋರ್ವ ಮುಖಕ್ಕೆ ಮಾಸ್ಕ್ ಹಾಕಿ ಒಳ ಪ್ರವೇಶಿಸಿ ಒಳಗಿನಿಂದ ಚಿಲಕ ಹಾಕಿ ಮಹಿಳೆಗೆ ಚಾಕು ತೋರಿಸಿ, ಕಿವಿಯಲ್ಲಿರುವ ಚಿನ್ನ ಕೊಡುವಂತೆ ಕೇಳಿದ್ದಾನೆ.ಇನ್ನು ಬೆದರಿದ ಮಹಿಳೆ ಹಿಂದಿನ ಬಾಗಿಲು ಮೂಲಕ ಹತ್ತಿರದ ಮನೆಯವರನ್ನು ಕೂಗಿ ಕರೆದಾಗ ಆತ ಹಿಂಬದಿಯ ತೋಟದ ದಾರಿಯಾಗಿ ಪರಾರಿಯಾಗಿದ್ದಾನೆ.112ಕ್ಕೆ ಕರೆಮಾಡಿ ಮಾಹಿತಿ ನೀಡಿದಾಗ ತುರ್ತು ಕಾರ್ಯಪಡೆಯ ಪೊಲೀಸ್‌ ತಂಡ ಸ್ಥಳಕ್ಕೆ ಆಗಮಿಸಿದ್ದು, ಬಳಿಕ ವಿಟ್ಲ ಠಾಣೆಗೆ ಮಾಹಿತಿ ನೀಡಲಾಯಿತು.

Read More

ಬೆಳ್ತಂಗಡಿ: ಮನೆಯ ಶೆಡ್‌ನ‌ಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರನ್ನು ಕಳ್ಳತನ ಮಾಡಿದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಭೇದಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆಯಲ್ಲಿ ನಡೆದಿದೆ. ಕಿನ್ನಿಗೋಳಿಯ ತಾಳಿಪಾಡಿ ಗ್ರಾಮದ ಉಮಾ ಅಜಯ್‌ ಶೆಟ್ಟಿ(32), ಬೆಳ್ತಂಗಡಿ ತಾಲೂಕಿನ ಸೋಣಂದೂರು ಗ್ರಾಮದ ಗಾಣದಬೆಟ್ಟು ನಿವಾಸಿ ಸೂರಜ್‌ ಶೆಟ್ಟಿ(23), ಇಳಂತಿಲ ಗ್ರಾಮದ ಎನ್ಮಾಡಿ ನಿವಾಸಿ ಮಂಜುನಾಥ ಪೂಜಾರಿ (30) ಮತ್ತು ಬಂಟ್ವಾಳ ತಾಲೂಕು ಶಂಭೂರು ಗ್ರಾಮದ ಪರೆಕಲ್‌ ನಿವಾಸಿ ಕಿಶೋರ್‌ ಟಿ.(32) ಬಂಧಿತ ಆರೋಪಿಗಳು.ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ಇಸಾಕ್‌ ಅವರ ಅಕ್ಕನ ಮಗ ನೌಫಾಲ್‌ ತನ್ನ ಕಾರ್‌ಶೆಡ್ಡಿನಲ್ಲಿ ನಿಲ್ಲಿಸಿದ್ದ ಇನ್ನೋವಾ ಕಾರನ್ನು ಗೆಳೆಯ ಸೈಫ‌ುದ್ದಿನ್‌ನ ಸ್ನೇಹಿತ ಸೂರಜ್‌ ಶೆಟ್ಟಿ ಮತ್ತು ಅಜಯ್‌ ಶೆಟ್ಟಿ ಅವರು ಬಾಡಿಗೆಗೆ ನೀಡುವಂತೆ ಕೇಳಿದ್ದರು. ಆದರೆ ಕಾರನ್ನು ನೀಡದ ಕಾರಣ ಅವರೇ ಕಳವು ಮಾಡಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಲಾಗಿತ್ತು.ಬೆಳ್ತಂಗಡಿ ಪೊಲೀಸ್‌ ಇನ್ಸ್ ಪೆಕ್ಟರ್‌ ನಾಗೇಶ್‌ ಕದ್ರಿ ಅವರ ಮಾರ್ಗದರ್ಶನದಲ್ಲಿ ಧರ್ಮಸ್ಥಳ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಅನಿಲ್‌…

Read More

ಬೆಂಗಳೂರು: ಬೆಂಗಳೂರು ನಗರದ ಸಿಗ್ನಲ್ ಗಳ ಬ್ಯಾಟರಿ ಕಳವು ಮಾಡಿ ಗುಜರಿಗೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ ಮೂಲದ ಸೈಫ್ ಪಾಷಾ ಮತ್ತು ಸಲ್ಮಾನ್ ಖಾನ್ ಆರೋಪಿಗಳಾಗಿದ್ದು ಇವರನ್ನು ಬಂಧಿಸಲಾಗಿದೆ, ಇವರಿಂದ ಒಟ್ಟು ಐದು ಲಕ್ಷ ಮೌಲ್ಯದ 80 ಬ್ಯಾಟರಿಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಬ್ಯಾಟರಿ ಕಳ್ಳತನ ಮಾಡಿದ ನಂತರ ಅದನ್ನು ಗುಜರಿಗಳಲ್ಲಿ ಮಾರಾಟ ಮಾಡುತ್ತಿದ್ದರು ಮತ್ತು ಬಂದ ಹಣದಿಂದ ಮೋಜು ಮಸ್ತಿ ಮಾಡುತ್ತಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ. ಕಳೆದ ಕೆಲವು ತಿಂಗಳಿಂದ ನಗರದ ಹಲವು ಜಂಕ್ಷನ್​ಗಳಲ್ಲಿ ಸಿಗ್ನಲ್​ಗಳಿಗೆ ಅಳವಡಿಸಿದ್ದ ಬ್ಯಾಟರಿಗಳು ಕಳ್ಳತನವಾಗಿದ್ದವು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಹೈಗ್ರೌಂಡ್ಸ್ ಠಾಣಾ ಪೊಲೀಸರು, ಬರೋಬ್ಬರಿ 120 ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಆರೋಪಿಗಳ ಚಲನವಲನಗಳು ಪತ್ತೆಯಾಗಿವೆ.

Read More

ಮಂಗಳೂರು : ಕೋಟ್ಯಾಂತರ ರೂಪಾಯಿ ಬೆಲೆಬಾಳುವ ತಿಮಿಂಗಿಲದ ವಾಂತಿ (ಅಂಬರ್ ಗ್ರೀಸ್) ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಗಳಿಂದ ಒಟ್ಟು 1,62,80,000 ರೂ ಮೌಲ್ಯದ ಸೊತ್ತು ವಶ ಪಡೆಯಲಾಗಿದೆ.ಚಿಕ್ಕಮಗಳೂರು ತಮಿಳ್ ಕಾಲನಿಯ ಪ್ಯಾರೇಜಾನ್ ಸೇಟು(37), ವಿಟ್ಲದ ಬದ್ರುದ್ದೀನ್ ಬದ್ರು(28 ), ತಮಿಳುನಾಡಿನ ರಾಜೇಶ್.ಆರ್(22) ಬಂಧಿತ ಆರೋಪಿಗಳು.ನ. 25 ರಂದು ಮಂಗಳೂರು ನಗರದ ಪಂಪ್ ವೆಲ್ ಬಳಿಯ ಇಂಡಿಯಾನ ಆಸ್ಪತ್ರೆಯ ಹತ್ತಿರ 4 ಜನ ವ್ಯಕ್ತಿಗಳು ಸ್ವಿಪ್ಟ್ ಕಾರಿನಲ್ಲಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್) ಎಂಬ ಬೆಲೆಬಾಳುವ ವನ್ಯ ಜೀವಿ ಉತ್ಪನ್ನವನ್ನು ಗಿರಾಕಿಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂಬುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಮೂರು ಜನ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.ಆರೋಪಿಗಳಿಂದ 1,57,50,000 ರೂ ಮೌಲ್ಯದ 1.575 ಕೆಜಿ ತಿಮಿಂಗಿಲದ ವಾಂತಿ(ಅಂಬರ್ ಗ್ರೀಸ್), ಕಾರು ಹಾಗೂ ಮೊಬೈಲ್ ಫೋನ್‌ ವಶಪಡಿಸಿಕೊಳ್ಳಲಾಗಿದೆ.ಈ ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರಾದ…

Read More

ಬೋರ್ ವೆಲ್ ಹಾಗೂ ಕಾರು ನಡುವೆ ಭೀಕರ ಢಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮೂರು ಮಂದಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ 33 ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಭಾನುವಾರ (ನ.26 ರಂದು) ಮುಂಜಾನೆ ಸಂಭವಿಸಿದೆ. ಮಂಗಳೂರಿನ ಬಜಪೆ ಮೂಲದ ಕಿಶಾನ್ ಶೆಟ್ಟಿ( 20 ) ದಕ್ಷಿಣ ಕನ್ನಡ ಜಿಲ್ಲೆ ಭಟ್ಟರ ತೋಟ ಗ್ರಾಮದ ಫಿಲೀಪ್ ನೇರಿ ಲೋಬೋ (32) ಮೃತ ದುರ್ಧೈವಿಗಳು ನಿತೀಶ್ ಭಡಾರಿ, ಪ್ರೀತಿ ಲೋಬೋ, ಹರೀಶ್ ತೀವ್ರವಾಗಿ ಗಾಯಗೊಂಡು ಅದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ನಡೆಯುತ್ತಿದ್ದ ಕಂಬಳವನ್ನು ನೋಡಿಕೊಂಡು ತಮ್ಮ ಊರಿಗೆ ಮಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಕುಣಿಗಲ್ ಕಡೆಯಿಂದ ತುಮಕೂರು ಕಡೆಗೆ ಹೊಗುತ್ತಿದ್ದ ಲಾರಿ ಢಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Read More

ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಯಡಿ ಈಗಾಗಲೇ 1.10 ಕೋಟಿ ಮಹಿಳೆಯರಿಗೆ 2,000 ರೂ. ನೀಡಲಾಗುತ್ತಿದ್ದು, ಇದುವರೆಗೆ ಕೆಲವು ಮಹಿಳೆರಿಗೆ ಹಣ ಬಂದಿಲ್ಲ. ಯಜಮಾನಿಯರ ಬ್ಯಾಂಕ್ ಖಾತೆಯಲ್ಲಾದ ಹಲವು ತಾಂತ್ರಿಕ ದೋಷಗಳು ಹಾಗೂ ಕೆಲವು ತಾಂತ್ರಿಕ ತೊಂದರೆಗಳಿಂದ ಇನ್ನೂ ಯಜಮಾನಿಯರ ಖಾತೆಗೆ ಹಣ ಬಂದಿಲ್ಲ. ಈ ಹಿನ್ನೆಲೆ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ಮಹಿಳೆಯರ ಖಾತೆಗೆ ಮಾತ್ರವಲ್ಲದೇ ಮನೆ ಯಜಮಾನನ ಖಾತೆಗೂ ಇನ್ಮುಂದೆ ಹಣ ಬರುತ್ತದೆ. ಮನೆ ಯಜಮಾನಿಯ ಖಾತೆಯಲ್ಲಿ ಸಮಸ್ಯೆ ಇದ್ದರೆ ಎರಡನೇ ಸದಸ್ಯ ಅಥವಾ ಎರಡನೇ ಹಿರಿಯ ಸದಸ್ಯರಿಗೆ ಹಣ ವರ್ಗಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ. ಕುಟುಂಬದ ಮೊದಲ ಯಜಮಾನ ಅಲ್ಲದೇ ಇದ್ದರೆ ಎರಡನೆಯ ಸದಸ್ಯರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ರೇಷನ್ ಕಾರ್ಡ್ ಆಧಾರದ ಮೇಲೆ ಮನೆಯ ಹಿರಿಯ ವ್ಯಕ್ತಿ ಯಾರೆಂದು ಗುರುತಿಸಿ ಅವರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಇನ್ನುಮುಂದೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಮನೆ ಮನೆಗೆ ಬಂದು ಮಹಿಳೆಯರ ಖಾತೆಯಲ್ಲಿ ಇರುವ ಸಮಸ್ಯೆಗಳನ್ನು…

Read More

ಮಂಗಳೂರು : ಸರಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ನಾನಾ ರೀತಿಯ ರೀತಿಯ ಸೌಲಭ್ಯಗಳನ್ನು ಜನರಿಗೆ ಮುಟ್ಟಿಸುವ ಕೆಲಸವನ್ನು ಕಾರ್ಯ ಮಾಡುತ್ತಿರುವ ಮಂಗಳೂರು ನಗರದ ಕದ್ರಿಯ ಕರ್ನಾಟಕ ಒನ್ ಕಚೇರಿಯಲ್ಲಿ ಕೆಲಸ ಕಾರ್ಯಗಳಿಗೆ ಹೋಗುವವರಿಗೆ ಗ್ಯಾರಂಟಿ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ಹಿರಿ ಜೀವಿಗಳಿಗೆ ಈ ಕಛೇರಿ ಹೊಕ್ಕರೆ ಉಸಿರಾಟ ಸಮಸ್ಯೆಯಿಂದ ಜೀವಕ್ಕೆ ಸಂಚಕಾರ ಕೂಡ ಇದೆ. ಅವ್ಯವಸ್ಥೆಯ ಆಗರ ವಾಗಿರುವ ಈ ಕೇಂದ್ರ ವಿರುದ್ದ ಸಾಮಾಜಿಕ ಕಾರ್ಯಕರ್ತ ಜೆರಾರ್ಡ್ ಟವರ್ಸ್ ಶನಿವಾರ ಕಚೇರಿಯಲ್ಲೇ ವಿಭಿನ್ನ ರೀತಿಯ ಪ್ರತಿಭಟನೆ ನಡೆಸಿ ಗಮನ ಸೆಳೆದರು.ಬಿಲ್ ಪಾವತಿಗಾಗಿ ಕಚೇರಿ ಒಳ ಹೋದ ಜೆರಾರ್ಡ್ ಟವರ್ಸ್ ಅವರು ಸೂಕ್ತ ಗಾಳಿಯ (ವೆಂಟಿಲೇಶನ್) ವ್ಯವಸ್ಥೆ ಇಲ್ಲದೆ ಮೂರ್ಚೆ ಹೋದಾಗ ಅಲ್ಲಿದ್ದ ಸಾರ್ವಜನಿಕರು ಅವರನ್ನು ನೀರು ಕುಡಿಸಿ ಉಪಚರಿಸಿದರು.ಸಾಮಾಜಿಕ ಹೋರಾಟಗಾರ ಜಿ.ಕೆ. ಭಟ್ ಅವರೂ ಸಾಥ್ ನೀಡಿದರು ಬಳಿಕ ಮಾತನಾಡಿದ ಜೆರಾಲ್ಡ್ ನಾನು ಜನರ ಸಮಸ್ಯೆಗಳಿಗಾಗಿ ಇಂದು ಮೂರ್ಛೆ ಹೋಗುವ ನಾಟಕ ಆಡಬೇಕಾಗಿ ಬಂತು. ಈ ಕಚೇರಿಯಲ್ಲಿ ಕಳೆದ ಹಲವು…

Read More

ಬೆಂಗಳೂರು: ರಿಷಬ್‌ ಶೆಟ್ಟಿ ಅವರ ʼಕಾಂತಾರʼ ಸಿನಿಮಾದ ಪ್ರೀಕ್ವೆಲ್ ಬಗ್ಗೆ ಹೊಂಬಾಳೆ ಫಿಲ್ಮ್ಸ್‌ ಶನಿವಾರ(ನ.25 ರಂದು) ಬಿಗ್‌ ಅಪ್ಡೇಟ್‌ ವೊಂದನ್ನು ನೀಡಿದೆ. ರಿಷಬ್‌ ಶೆಟ್ಟಿ ಬರೆದು ನಿರ್ದೇಶನ ಮಾಡಿರುವ ‘ಕಾಂತಾರ’ ತುಳುನಾಡಿನ ದೈವದ ಆಚರಣೆ ಹಾಗೂ ಸಂಪ್ರದಾಯದ ಸುತ್ತ ಸಾಗಿದ ಕಥೆಯನ್ನು ಒಳಗೊಂಡಿತ್ತು. ಕನ್ನಡದಲ್ಲಿ ಬಿಡುಗಡೆಯಾಗಿ ಪ್ರಾದೇಶಿಕ ಭಾಷೆಯಲ್ಲಿ ರಿಮೇಕ್ ಆಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡಿದ ಹೊಸ ಬಾಳೆ ಫಿಲ್ಮ್ಸ್ ನ ‘ಕಾಂತಾರ’ ಬಾಕ್ಸ್ ಆಫೀಸ್‌ನಲ್ಲಿ 400 ಕೋಟಗೂ ಅಧಿಕ ಗಳಿಕೆ ಕಂಡಿತ್ತು. ಮೊದಲ ಭಾಗ ಹಿಟ್ ಆದ ಬಳಿಕ ಸಿನಿಮಾದ ಎರಡನೇ ಭಾಗ ಅಂದರೆ ಪ್ರೀಕ್ವೆಲ್ ರಿಲೀಸ್ ಮಾಡುವುದಾಗಿ ರಿಷಬ್ ಸಿನಿಮಾದ ಶತದಿನದ ಸಂಭ್ರಮದಂದು ಹೇಳಿದ್ದರು. ಅದರಂತೆ ಸ್ಕ್ರಿಪ್ಟ್ ಹಾಗೂ ಲೋಕೇಷನ್ ಹುಡುಕಾಟದ ಬಳಿಕ ಸಿನಿಮಾದ ಬಗ್ಗೆ ಒಂದೊಂದು ಅಪ್ಡೇಟ್ ಗಳು ನಿಧಾನವಾಗಿ ಬರುತ್ತಲೇ ಹೋಯಿತು. ಪ್ರೀಕ್ವೆಲ್‌ ನಲ್ಲಿ ಪಂಜುರ್ಲಿ ದೈವದ ಹುಟ್ಟು ಹಾಗೂ ಮೂಲದ ಕಥೆ ಇರಲಿದೆ ಎನ್ನಲಾಗಿದೆ. ಇದೇ ತಿಂಗಳ ಕೊನೆಯಲ್ಲಿ ಸಿನಿಮಾದ ಮುಹೂರ್ತ ಉಡುಪಿಯಲ್ಲಿ ನಡೆಯಲಿದೆ…

Read More

ಮಂಗಳೂರು: ಎಂಡೋಸಲ್ಫಾನ್ ಸಂತ್ರಸ್ತರ ಸಮಸ್ಯೆಗಳನ್ನು ಸ್ಥಳೀಯವಾಗಿಯೇ ಪರಿಹರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದ್ದಾರೆ.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಂಡೋಸಲ್ಫಾನ್ ಸಂತ್ರಸ್ತರ ಪುನರ್ವಸತಿ ಕಾರ್ಯಕ್ರಮದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಆಯಾ ಆರೋಗ್ಯ ಕೇಂದ್ರ ಮಟ್ಟದಲ್ಲಿ ಎಂಡೋ ಸಂತ್ರಸ್ತರು, ಅವರ ಪೆÇೀಷಕರು, ವೈದ್ಯಾಧಿಕಾರಿಗಳು, ಪಿಡಿಓ, ವಿ.ಎ. ಅವರನ್ನೊಳಗೊಂಡ ತಂಡ ರಚಿಸಬೇಕು. ಎಂಡೋಸಲ್ಫಾನ್ ಬಾಧಿತ ಮಕ್ಕಳು ಮಾನಸಿಕ ಅಂಗವೈಕಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಇನ್ನಿತರ ಸಮಸ್ಯೆಗಳಿಂದ ನರಳುತ್ತಾರೆ. ಅವರನ್ನು ಗುರುತಿಸಿ, ಜಿಲ್ಲಾ ಆಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆ ಅಧಿಕಾರಿಗಳು ಗ್ರಾಮವಾರು ಎಂಡೋಸಲ್ಫಾನ್ ಸಂತ್ರಸ್ತರ ಪಟ್ಟಿಯನ್ನು ತಯಾರಿಸಿ ಅವರಿಗೆ ಅಗತ್ಯವಿರುವ ಔಷಧಗಳು ಹಾಗೂ ಸರಕಾರದಿಂದ ಸಿಗುವ ಸೌಲಭ್ಯಗಳನ್ನು ತಪ್ಪದೇ ನೀಡಬೇಕು . ಅವರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ಅವರು ಹೇಳಿದರು.ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಯಲ್ಲಿ ಎಂಡೋಸಲ್ಫಾನ್ ಪೀಡಿತರ ಮಾಹಿತಿ ಪಟ್ಟಿ ನೋಂದಣಿಯಾಗಿರುತ್ತದೆ. ಆರೋಗ್ಯ ಕೇಂದ್ರಗಳ ಮೂಲಕ ಔಷಧÀಗಳ ವಿತರಣೆಯನ್ನು ಸಂತ್ರಸ್ತರ ಮನೆ ಮನೆಗೆ ತಲುಪಿಸಲು ಕ್ರಮವಹಿಸುವಂತೆ ಸಂಬಂಧಪಟ್ಟವರಿಗೆ ಜಿಲ್ಲಾಧಿಕಾರಿಗಳು…

Read More

ಭಟ್ಕಳ: ಚಲಿಸುತ್ತಿದ್ದ ರೈಲನ್ನು ಏರಲು ಹೋದ ಪ್ರಯಾಣಿಕನೋರ್ವ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ರೈಲಿಗೆ ಸಿಲುಕುವ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಕೊಂಕಣ ರೈಲ್ವೆ ಸಿಬ್ಬಂದಿ ತಕ್ಷಣವೇ ಅವರನ್ನು ಹಿಡಿದು ಅಪಾಯದಿಂದ ಪಾರು ಮಾಡಿದ್ದಾರೆ. ರೈಲ್ವೆ ನಿಲ್ದಾಣದ ಸಿಸಿ ಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಗೋವಾದ ಮಡಗಾಂವ್‌ನಿಂದ ಎರ್ನಾಕುಲಂ ಕಡೆಗೆ ಸಾಗುತಿದ್ದ ರೈಲು ಸಂಖ್ಯೆ 10215 ಭಟ್ಕಳದಲ್ಲಿ ನಿಲುಗಡೆಯಾಗಿತ್ತು. ರೈಲು ಪುನಃ ಹೊರಡುವಾಗ ಓರ್ವ ಪ್ರಯಾಣಿಕ ರೈಲು ಏರುವಾಗ ಎಡವಿದಂತೆ ತೋರಿದರು. ಇದನ್ನು ಅರಿತ ಕೊಂಕಣ ರೈಲ್ವೆ ಪಾಯಿಂಟ್ಸಮನ್ ಮಣ್ಕುಳಿಯ ಯೋಗೇಶ ನಾಯ್ಕ ಅವರನ್ನು ರೈಲು ಏರಿಸಲು ಪ್ರಯತ್ನಿಸಿದರೂ ಸಾಧ್ಯವಾಗದೇ ಅವರ ಒಂದು ಕಾಲು ರೈಲಿನಿಂದ ಕೆಳಗೆ ಜಾರಿತು. ರೈಲಿನ ಕೆಳಗಡೆ ಸಿಲುಕುವಷ್ಟರಲ್ಲಿ ಯೋಗೇಶ ನಾಯ್ಕ ತಮ್ಮ ಸಮಯಪ್ರಜ್ಞೆಯಿಂದ ಅವರನ್ನು ಪ್ಲಾಟ್‌ಫಾರಂ ಕಡೆಗೆ ಎಳೆದು ಜೀವ ರಕ್ಷಿಸಿದ್ದಾರೆ. ನಂತರ ರೈಲು ನಿಲುಗಡೆಗೆ ಸಿಗ್ನಲ್ ತೋರಿಸಿ ಪ್ರಯಾಣಿಕನನ್ನು ಪುನಃ ರೈಲು ಹತ್ತಿಸಿ ಕಳುಹಿಸಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಅಪಾಯಕಾರಿ ಸನ್ನಿವೇಶದಲ್ಲಿ ಸಮಯಪ್ರಜ್ಞೆಯಿಂದ ತನ್ನನ್ನು ಪಾರು ಮಾಡಿದ…

Read More