Author: main-admin

ಬಂಟ್ವಾಳ: ಕಾರುಡಿಕ್ಕಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಗುರುವಾರ ಸಂಜೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಬಾಯಿಲ ನಿವಾಸಿ ಪಾವನಾ (23) ಮೃತಪಟ್ಟ ಯುವತಿ. ಪಾವನಾ ಬಿ.ಸಿ.ರೋಡಿನ ಸ್ಕ್ಯಾನಿಂಗ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದರು. ಸಂಜೆ ವೇಳೆಗೆ ಕೆಲಸ ಮುಗಿಸಿ ಅವರು ದಾಸಕೋಡಿಯಲ್ಲಿ ಬಸ್ಸಿನಿಂದ ಇಳಿದು ಮನೆಗೆ ಮರಳುತ್ತಿದ್ದರು. ಸಂಜೆ ಸುಮಾರು 6.30ರ ವೇಳೆಗೆ ವೇಗವಾಗಿ ಬಂದ ಕಾರೊಂದು ಅವರಿಗೆ ಡಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಸ್ತೆ ಬದಿಯ ತೋಡಿಗೆ ಪಾವನಾ ಎಸೆಯಲ್ಪಟ್ಟಿದ್ದಾರೆ. ಕಾರು ಕೂಡ ಪಲ್ಟಿಯಾಗಿದೆ. ಅಪಘಾತದ ಪರಿಣಾಮ ಗಂಭೀರವಾಗಿ ಗಾಯಗೊಂಡ ಪಾವನಾ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣವಾಗಿದೆ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.

Read More

ವಿಟ್ಲ : ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿ ಪತ್ತೆಯಾದ ಘಟನೆ ವಿಟ್ಲ ಸಮೀಪದ ಪೆರುವಾಯಿಯಲ್ಲಿ ನಡೆದಿದೆ. ಇಬ್ಬರು ಅನ್ಯಕೋಮಿನ ಯುವಕರೊಂದಿಗೆ ಹಿಂದೂ ಯುವತಿಯೋರ್ವಳು ಪತ್ತೆಯಾಗಿದ್ದು, ಮೂವರೂ ಕೇರಳ ಮೂಲದವರೆನ್ನಲಾಗಿದೆ.ಪೆರುವಾಯಿ ಬಸ್ ನಿಲ್ದಾಣದ ಬಳಿ ಮೂವರು ಅನುಚಿತವಾಗಿ ವರ್ತಿಸುತ್ತಿದ್ದರೆನ್ನಲಾಗುತ್ತಿದ್ದು, ಈ ಬಗ್ಗೆ ಗಮನಿಸಿದ ಸ್ಥಳೀಯರು ಅವರನ್ನು ವಿಚಾರಿಸಿದ್ದು, ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವಿಟ್ಲ ಪೊಲೀಸರು ದೌಡಾಯಿಸಿದ್ದಾರೆಂದು ವರದಿಯಾಗಿದೆ.

Read More

ಮಂಗಳೂರು : ಕಾರಿನಲ್ಲಿ ಆಗಮಿಸಿದ ತಂಡವೊಂದು ನಗರದ ಮೊಬೈಲ್‌ ಅಂಗಡಿಗೆ ನುಗ್ಗಿ ಯುವಕನನ್ನು ಬಲವಂತವಾಗಿ ಅಪಹರಿಸಿ, ತಡೆಯಲು ಬಂದ ತಂದೆಯ ಮೇಲೆ ಹಲ್ಲೆ ನಡೆಸಿದ ಘಟನೆ ಗಡಿ ಭಾಗದ ಕಾಸರಗೋಡು ನಗರದ ಚಕ್ಕರ ಬಝಾರ್‌ನಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಕಾಸರಗೋಡು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕಾಸರಗೋಡು ಕೊಲ್ಲಂಪಾಡಿಯ ಎ.ಶಾನ್‌ನವಾಝ್ (38), ತಳಂಗರೆ ಬಾಂಗೋಡ್‌ನ ಅಬ್ದುಲ್ ಮನಾಫ್ ಎ.ಎಂ.(21), ಅಣಂಗೂರಿನ ಮುಹಮ್ಮದ್ ರಿಯಾಝ್ (25) ಬಂಧಿತ ಆರೋಪಿಗಳು. ಆರೋಪಿಗಳು ಕಾರಿನಲ್ಲಿ ಆಗಮಿಸಿ ಅಂಗಡಿಗೆ ನುಗ್ಗಿ ಮುಟ್ಟತ್ತೋಡಿಯ ಸವಾದ್ ಎಂಬಾತನನ್ನು ಬಲವಂತವಾಗಿ ಕಾರಿನಲ್ಲಿ ಅಪಹರಿಸಿಕೊಂಡೊಯ್ದಿದ್ದು, ತಡೆಯಲೆತ್ನಿಸಿದ ತಂದೆ ವಿ.ಎಂ.ಅಬೂಬಕರ್‌ಗೆ ಹಲ್ಲೆ ನಡೆಸಿದ್ದಾರೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Read More

ಬೆಂಗಳೂರು: ಭಾರತದಲ್ಲಿನ ಅನೇಕ ಮೊಬೈಲ್ ಬಳಕೆದಾರರು ಸರ್ಕಾರದಿಂದ ತುರ್ತು ಎಚ್ಚರಿಕೆಯ ಸಂದೇಶವನ್ನು ಇಂದು ಬೆಳಿಗ್ಗೆ, ಸ್ವೀಕರಿಸಿದ್ದು, ಈ ಸಂಗತಿ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗಿದೆ. ಬೆಳಗ್ಗೆ 11:35ಕ್ಕೆ ಆಂಡ್ರಾಯ್ಡ್ ಮತ್ತು ಐಫೋನ್‌ಗಳಿಗೆ ತುರ್ತು ಸಂದೇಶ ಬಂದಿದ್ದು, ಏನಿದು ಸಂದೇಶ ? ಯಾಕೆ ಬಂತು? ಎನ್ನುವ ಪ್ರಶ್ನೆ ಜಾಲತಾಣದಲ್ಲಿ ಚರ್ಚೆಯಾಗಿದೆ.ಒಂದೆರಡು ಸೆಕೆಂಡ್‌ಗಳ ಕಾಲ ಮೊಬೈಲ್‌ನಲ್ಲಿ ಬೀಪ್ ಸೌಂಡ್ ಬಂದಿದ್ದು, ಈ ಬಗ್ಗೆ ವಿಚಾರ ಗೊತ್ತಿಲ್ಲದವರು ಆತಂಕಗೊಂಡರು. ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆಯೂ ಈ ಬಗ್ಗೆ ಈಗಾಗಲೇ ಸ್ಪಷ್ಟನೆ ನೀಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ನಡೆದ ಸೆಲ್ ಬ್ರಾಡ್‌ಕಾಸ್ಟ್​ ಅಲರ್ಟ್​ ಸಿಸ್ಟಮ್​ ಪರೀಕ್ಷೆಯಾಗಿದೆ. ಈ ಪರೀಕ್ಷೆಯನ್ನು ವಾಸ್ತವವಾಗಿ ಇಂದು ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ಮಾಡಲಾಯಿತಾದರೂ ದೇಶದ ಅನೇಕ ಮಂದಿಗೆ ಈ ಸಂದೇಶ ಬಂದಿದೆ. ಕರ್ನಾಟಕದಲ್ಲಿ ಇಂದು ಸೆಲ್ ಬ್ರಾಡ್‌ಕಾಸ್ಟ್​ ಅಲರ್ಟ್​ ಸಿಸ್ಟಮ್​ ಪರೀಕ್ಷೆಯನ್ನು ಮಾಡುವುದಾಗಿ ರಾಜ್ಯದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿತ್ತು. ರಾಜ್ಯದ ವಿವಿಧೆಡೆಗಳಲ್ಲಿ ಜನತೆಯ ಮೊಬೈಲ್​ಗೆ ತುರ್ತು…

Read More

ಮಂಗಳೂರು : ಮಂಗಳೂರು ನಗರದ ಪಾಂಡೇಶ್ವರದಲ್ಲಿ ಧಾರ್ಮಿಕ ಕ್ಷೇತ್ರಕ್ಕೆ ಮೊಟ್ಟೆ ಎಸೆದ ಘಟನೆಯೊಂದು ವಿಕೋಪಕ್ಕೆ ಹೋಗುವುದನ್ನು ತಪ್ಪಿಸುವ ಮೂಲಕ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಮಯಪ್ರಜ್ಞೆ ಮೆರೆದ ಘಟನೆ ಬೆಳಕಿಗೆ ಬಂದಿದೆ. ಸೋಮವಾರ ಮಂಗಳೂರಿನಲ್ಲಿ ನಡೆದ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಶೌರ್ಯ ಜಾಗರಣಾ ರಥಯಾತ್ರೆ ಮತ್ತು ಸಮಾವೇಶ ಆಯೋಜನೆಗೊಂಡಿತ್ತು. ಸಂಜೆ ವೇಳೆ ಸುಮಾರಿಗೆ ಪಾಂಡೇಶ್ವರದ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಕಂಪೌಂಡ್‌ಗೆ ಯಾರೋ ಕೋಳಿ ಮೊಟ್ಟೆ ಹಾಗೂ ತೆಂಗಿನಕಾಯಿ ಎಸೆದಿದ್ದಾರೆ. ಈ ಸೂಕ್ಷ್ಮಾ ವಿಚಾರನ್ನು ಸ್ಥಳೀಯರು ಕೂಡಲೇ ಶಾಸಕ ವೇದವ್ಯಾಸ್ ಕಾಮತ್ ಗಮನಕ್ಕೆ ತಂದಿದ್ದಾರೆ. ಕೂಡಲೇ ಶಾಸಕರು ಪೊಲೀಸ್ ಕಮಿಷನರ್ ಗೆ ಫೋನ್ ಮಾಡಿ ಯಾವುದೇ ಕಾರಣಕ್ಕೂ ಪರಿಸ್ಥಿತಿ ಕದಡದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ಕೂಡಲೇ ಘಟನೆಯ ಸ್ಥಳಕ್ಕೆ ಧಾವಿಸಿದ ಡಿಸಿಪಿ ಸಿದ್ಧಾರ್ಥ ಗೋಯಲ್ ತಂಡ ಪರಿಶೀಲನೆ ನಡೆಸಿದಾಗ, ಅದು ದೇವಸ್ಥಾನದ ಎದುರಿನ ಪ್ಲ್ಯಾಟ್ ನಿಂದ ಅನ್ಯ ಸಮುದಾಯದ ಇಬ್ಬರು ಪುಟಾಣಿಗಳು ಮಾಡಿದ ಮಕ್ಕಳಾಟ ಎಂಬುದು ಗೊತ್ತಾಗಿತ್ತು. 10 ವರ್ಷದೊಳಗಿನ ಈ ಮಕ್ಕಳು…

Read More

ಮಂಗಳೂರು: ಅನಾಥ ರೋಗಿಗಳಿಗೆ ಸಹಾಯ ಮಾಡುತ್ತಿದ್ದ ಮುಲ್ಕಿ ನಿವಾಸಿ ಆಪತ್ಥಾಂಧವ ಎಂದೇ ಗುರುತಿಸಲ್ಪಟ್ಟಿದ್ದ ಆಸಿಫ್ ಅವರನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಗರದ ವೆನ್ಲಾಕ್ ಆಸ್ಪತ್ರೆಯ ಮಹಿಳಾ ಸೆಕ್ಯುರಿಟಿ ಸಿಬ್ಬಂದಿಗೆ ಹಲ್ಲೆ ನಡೆಸಿರುವ ಆರೋಪದ ಮೇರೆಗೆ ಬಂಧಿಸಿದ್ದಾರೆ. ಆಸಿಫ್ ಬುಧವಾರ ಸಂಜೆ ವೆಸ್ಲಾಕ್ ಆಸ್ಪತ್ರೆಗೆ ಇಬ್ಬರು ರೋಗಿಗಳನ್ನು ಕರೆತಂದಿದ್ದರು ಎನ್ನಲಾಗಿದೆ. ಈ ಸಂದರ್ಭ ಸೆಕ್ಯುರಿಟಿ ಗಾರ್ಡ್ ವಾಹನವನ್ನು ಹೊರಗೆ ಒಯ್ಯುವಂತೆ ಸೂಚಿಸಿದಾಗ ತಾನು ರೋಗಿಗಳನ್ನು ಅಡ್ಮಿಷನ್ ಮಾಡಿಸುತ್ತಿದ್ದೇನೆ, ಸ್ವಲ್ಪ ಹೊತ್ತು ಕಾಯಿರಿ ಎಂದು ಆಸಿಫ್ ಹೇಳಿದ್ದಾರೆ. ಆದರೆ ಕೆಲವು ಹೊತ್ತಿನ ಬಳಿಕವೂ ಆ್ಯಂಬುಲೆನ್ಸ್ ತೆರವು ಮಾಡದಿದ್ದಾಗ ಮಹಿಳಾ ಸಿಬ್ಬಂದಿ ಆಕ್ಷೇಪಿಸಿದರು. ಈ ಸಂದರ್ಭ ಆಸಿಫ್ ಮತ್ತು ಮಹಿಳಾ ಸಿಬ್ಬಂದಿಯ ಮಧ್ಯೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ತನ್ನನ್ನು ದೂಡಿ ಹಾಕಿ ಆಸಿಫ್ ಹಲ್ಲೆ ಮಾಡಿದ್ದಾರೆ ಎಂದು ಮಹಿಳಾ ಸಿಬ್ಬಂದಿ ನೀಡಿದ ದೂರಿನ ಮೇರೆಗೆ ಪೊಲೀಸರು ಆಸಿಫ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪಾಟ್ನಾ: ದೆಹಲಿ- ಕಾಮಾಕ್ಯ ನಾರ್ತ್‌ ಈಸ್ಟ್ ಸೂಪರ್‌ಫಾಸ್ಟ್ ರೈಲಿನ ಆರು ಬೋಗಿಗಳು ಬುಧವಾರ ಬಿಹಾರದ ಬಕ್ಸರ್ ಸಮೀಪ ಹಳಿ ತಪ್ಪಿ ಉಂಟಾದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೇರಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಈ ಸೂಪರ್‌ಫಾಸ್ಟ್ ರೈಲು ರಾತ್ರಿ 9.35ರ ಸುಮಾರಿಗೆ ರಘುನಾಥಪುರ ನಿಲ್ದಾಣದ ಬಳಿ ಹಳಿ ತಪ್ಪಿದೆ. ಎರಡು ಎಸಿ 3 ಟೈರ್ ಬೋಗಿಗಳು ಬುಡಮೇಲಾಗಿದ್ದು, ಇತರ ನಾಲ್ಕು ಬೋಗಿಗಳು ಹಳಿಯಿಂದ ಆಚೆಗೆ ಎಸೆಯಲ್ಪಟ್ಟಿವೆ. “ಆನಂದ್ ವಿಹಾರ್ ಟರ್ಮಿನಲ್ ನಿಂದ ಕಾಮಾಕ್ಯಗೆ ತೆರಳುತ್ತಿದ್ದ ರೈಲುಗಾಡಿ ಸಂಖ್ಯೆ 12506 ನಾರ್ತ್ಈಸ್ಟ್ ಎಕ್ಸ್ಪ್ರೆಸ್ ರೈಲಿನ ಕೆಲ ಬೋಗಿಗಳು ರಾತ್ರಿ 9.35ರ ವೇಳೆಗೆ ದಾನಾಪುರ ವಿಭಾಗದ ರಘುನಾಥಪುರ ನಿಲ್ದಾಣ ಬಳಿ ಹಳಿತಪ್ಪಿವೆ. ಸಹಾಯವಾಣಿ ಸಂಖ್ಯೆ ಪಿಎನ್ ಬಿಇ-9771449971, ಡಿಎನ್ಆರ್- 8905697493, ಎಆರ್ಎ- 8306182542, ಸಿಓಎಂಎಲ್ ಸಿಎಲ್ಎಲ್- 7759070004” ಎಂದು ಉತ್ತರ ರೈಲ್ವೆ ಹೇಳಿಕೆ ನೀಡಿದೆ.“ನಾಲ್ಕು ಸಾವುಗಳು ದೃಢಪಟ್ಟಿವೆ… 21 ಬೋಗಿಗಳು ಹಳಿ ತಪ್ಪಿವೆ” ಎಂದು ಪೂರ್ವ ಕೇಂದ್ರ ರೈಲ್ವೆ ಪ್ರಧಾನ ವ್ಯವಸ್ಥಾಪಕ ತರುಣ್…

Read More

ಹರ್ಯಾಣ: ಪೊಲೀಸರ ವಶದಲ್ಲಿದ್ದ ಆರೋಪಿಯೊಬ್ಬ ಪೊಲೀಸರ ವಾಹನವನ್ನೇ ಬಳಸಿ ಎಸ್ಕೇಪ್ ಆಗಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ಕೌಟುಂಬಿಕ ಕಲಹದ ದೂರೊಂದನ್ನು ಸ್ವೀಕರಿಸಿದ ಪೊಲೀಸರು ಸ್ಥಳಕ್ಕೆ ತೆರಳುತ್ತಿದ್ದರು. ಇದೇ ವೇಳೆ ರಸ್ತೆ ಬದಿಯಲ್ಲಿ ಜಗಳವಾಡುತ್ತಿದ್ದ ಗುಂಪನ್ನು ನೋಡಿದ ಪೊಲೀಸರು ಮಧ್ಯಪ್ರವೇಶಿಸಿ, ಘಟನೆಯಲ್ಲಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದು ಅದೇ ಪೊಲೀಸ್ ಕಾರಿನಲ್ಲಿ ಕರೆದುಕೊಂಡು ಹೋದರು. ಇದಾದ ಬಳಿಕ ಕೌಟುಂಬಿಕ ಕಲಹದ ದೂರು ಬಂದಿದ್ದ ಖುರ್ದಿ ಗ್ರಾಮಕ್ಕೆ ತೆರಳಿದ ಪೊಲೀಸರು ವಾಹನದಿಂದ ಕೆಳಗಿಳಿದು ದೂರು ಬಂದ ಮನೆಯತ್ತ ಹೋಗಿದ್ದಾರೆ. ಆದರೆ ಪೊಲೀಸರು ಈ ವೇಳೆ ವಾಹನದ ಕೀಯನ್ನು ಬಿಟ್ಟು ಹೋಗಿದ್ದಾರೆ. ಪೊಲೀಸರು ಪ್ರಕರಣವನ್ನು ಬಗೆಹರಿಸಲು ಯತ್ನಿಸುತ್ತಿರುವಾಗ ಇತ್ತ ವಾಹನದಲ್ಲಿ ವ್ಯಕ್ತಿ ಪೊಲೀಸ್‌ ವಾಹನವನ್ನೇ ಬಳಸಿಕೊಂಡು ಅಲ್ಲಿಂದ ಪರಾರಿ ಆಗಿದ್ದಾನೆ. ಕೂಡಲೇ ಬೈಕ್​ನಲ್ಲಿ ಚೇಸ್​ ಮಾಡಿದ ಪೊಲೀಸರ ಕಣ್ತಪ್ಪಿಸಿದ ವ್ಯಕ್ತಿ, ಕಾರನ್ನು ಘಟನಾ ಸ್ಥಳದಿಂದ 10 ಕಿ.ಮೀ ದೂರದ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿ, ಪರಾರಿಯಾಗಿದ್ದಾನೆ. ಕಾರು ಪತ್ತೆಯಾದರು, ಕಾರಿನ ಕೀ ಕಾಣೆಯಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ವಾಹನವನ್ನು…

Read More

ಬೆಳ್ತಂಗಡಿ: ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಜಿನ‌ ಭಜನಾ ಸ್ಪರ್ಧೆಗೆ ತರಬೇತಿ ಪಡೆಯುತ್ತಿದ್ದಾಗ ವ್ಯಕ್ತಿಯೊರ್ವ ಸ್ಥಳಕ್ಕೆ ತೆರಳಿ ಅವಾಚ್ಯ ಶಬ್ದಗಳಿಂದ ಬೈದಿರುವುದಲ್ಲದೆ, ಮಚ್ಚು ತೋರಿಸಿ ಜೀವ ಬೆದರಿಕೆ ಹಾಕಿರುವುದಾಗಿ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಸಂಬಂಧ ಮುಂಡೂರಿನ ಆನಂದ ಆಚಾರ್ಯ (38 ವರ್ಷ) ಎಂಬಾತ ಮೇಲೆ ಪ್ರಕರಣ ದಾಖಲಾಗಿದೆ. ಈತ ವೇಣೂರು ಬಾಹುಬಲಿ ಕ್ಷೇತ್ರದಲ್ಲಿ ವಲಯ ಮಟ್ಟದ ಜಿನ ಭಜನಾ ಸ್ಪರ್ಧೆಗೆ ಮಹಿಳೆಯರು, ಮಕ್ಕಳು ಸೇರಿ ಸುಮಾರು 70 ಮಂದಿ ಅಭ್ಯಾಸ ನಡೆತ್ತಿದ್ದರು. ಈ ವೇಳೆ ಪ್ರವಾಸಿಗರೂ ಕೂಡ ಇದ್ದರು. ಈ ಸಂದರ್ಭ ಅಲ್ಲಿಗೆ ತೆರಳಿದ ಆರೋಪಿ ಮಚ್ಚು ತೋರಿಸಿ, ಬೆದರಿಕೆ ಹಾಕಿದ್ದಾನೆ. ಕೂಡಲೇ ಸ್ಥಳೀಯರು ವೇಣೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಚ್ಙನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಪಣಂಬೂರು: ಮಡಿಕೇರಿ ಮೂಲದ ವ್ಯಕ್ತಿಯೊಬ್ಬರು ನಗರ ಹೊರವಲಯದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬು ಸ್ವಾಮಿ ದೈವಸ್ಥಾನದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ. ಮೃತರನ್ನು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಗೋಪಾಲ (64) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗೋಪಾಲ ಅವರು ಮಡಿಕೇರಿಯಿಂದ ಸೋಮವಾರ ತಣ್ಣೀರು ಬಾವಿ ಬೀಚ್ ಗೆ ಬಂದಿದ್ದು, ಬಳಿಕ ದೈವಸ್ಥಾನದ ಪ್ರಾಂಗಣದಲ್ಲಿ ನೈಲಾನ್ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ಘಟನೆಗೆ ಸಂಬಂಧಿಸಿ ಪಣಂಬೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Read More