ಬಿಹಾರ: ಬಿಹಾರದ ಅರಾ ಜಿಲ್ಲೆಯಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭದಲ್ಲಿ ವೇದಿಕೆಯ ಮೇಲೆ ಆಟವಾಡುತ್ತಿದ್ದ ಆರು ವರ್ಷದ ಬಾಲಕಿ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಳನ್ನು ನೈನಾ ಕುಮಾರಿ ಎಂದು ಗುರುತಿಸಲಾಗಿದೆ. ಮದುವೆ ಸಮಾರಂಭದ ವೇದಿಕೆಯಲ್ಲಿ ಬಾಲಕಿ ಆಟವಾಡುತ್ತಿದ್ದಾಗ ಈ ದುರಂತ ನಡೆದಿದೆ. ನೈನಾ ಕುಮಾರಿ ಕುಟುಂಬದವರು ಡೆಕೊರೇಟ್ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಶುಕ್ರವಾರ ಮಹೇಂದ್ರ ಸಿಂಗ್ ಎಂಬುವರ ಮಗಳು ಆಶಾಕುಮಾರಿಯ ಮದುವೆ ನಡೆದಿದೆ. ಹೂಮಾಲೆ ವಿನಿಮಯ ಮಾಡಿಕೊಂಡ ನಂತರ ದಂಪತಿಗಳು ವೇದಿಕೆಯಿಂದ ಇಳಿದಿದ್ದಾರೆ. ಈ ವೇಳೆ, ಬಾಲಕಿ ಮೇಲಕ್ಕೆ ಹೋಗಿ ಆಟವಾಡುತ್ತಿದ್ದಾಗ ಈ ದುರಂತ ನಡೆದಿದೆ. ಆಟವಾಡುತ್ತಿದ್ದಾಗ ವೇದಿಕೆಯಲ್ಲಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ನೈನಾಗೆ ವಿದ್ಯುತ್ ಸ್ಪರ್ಶವಾಗಿತ್ತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿದ್ದಾರೆ. ಟೆಂಟ್ ಡೆಕೋರೇಟರ್ ಎಸ್ ಕುಮಾರ್ ಕೇಸರಿ ಮತ್ತು ರಂಜಿತ್ ಕುಮಾರ್ ವಿರುದ್ಧ ಮಹೇಂದ್ರ ಸಿಂಗ್ ನಿರ್ಲಕ್ಷ್ಯ ಆರೋಪದ ಮೇಲೆ…
Author: main-admin
ಆಗ್ರಾ: ಒಂದರ ಹಿಂದೊಂದು ರೈಲು ಹಳಿ ತಪ್ಪಿದ ಸುದ್ದಿಗಳು ಮುನ್ನೆಲೆಗೆ ಬರುತ್ತಿವೆ. ಶನಿವಾರ ಬೆಳಗ್ಗೆ ಬಂಸಿ ಪಹಾರ್‌ಪುರ-ರುಬ್ಬಾಸ್ ರೈಲು ವಿಭಾಗದ ಲೆವೆಲ್ ಕ್ರಾಸಿಂಗ್‌ನಲ್ಲಿ ಗೂಡ್ಸ್ ರೈಲು ಟ್ರ್ಯಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದು ಹಳಿತಪ್ಪಿದ್ದು, ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿರುವ ಸುದ್ದಿಯಿದೆ. ರೈಲ್ವೇ ಅಧಿಕಾರಿಗೆ ದೊರೆತ ಮಾಹಿತಿ ಪ್ರಕಾರ, ಎಲ್ ಸಿ ಗೇಟ್ ನಂ.27ರಲ್ಲಿ ಈ ಅವಘಡ ಸಂಭವಿಸಿದೆ. ರೈಲು ಸಂಖ್ಯೆ BXR Spl (LD-42 BCN 01 BV), EP No. 31823 ಟ್ರಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ರೈಲಿನ ಮೊದಲ ನಾಲ್ಕು ಚಕ್ರಗಳು ಹಳಿತಪ್ಪಿದವು. ಈ ಅಪಘಾತದಲ್ಲಿ 6 ಮಂದಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೂ ಟ್ರ್ಯಾಕ್ನಲ್ಲಿ ದುರಸ್ತಿ ಕೆಲಸ ನಡೆಯುತ್ತಿದೆ.
ಕೊಚ್ಚಿ: ಹೊಟ್ಟೆ ನೋವೆಂದು ಆಸ್ಪತ್ರೆಗೆ ಹೋದ ಬಾಲಕಿ ಗರ್ಭಿಣಿಯಾಗಿರುವ ಸುದ್ದಿ ಹೊರಬೀಳುತ್ತಿದ್ದಂತೆಯೇ ಪೊಲೀಸ್ ಅಧಿಕಾರಿಯೊಬ್ಬರನ್ನು ಅರ್ಯಾಂಕೋಡ್ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಕೇರಳದ ವೆಲ್ಲರಾಡದಲ್ಲಿ ನಡೆದಿದೆ. ಬಂಧಿತರನ್ನು ಮರಯೂರ್ ಠಾಣಾ ಸಿಪಿಒ ದಿಲೀಪ್ (43) ಎಂದು ಗುರುತಿಸಲಾಗಿದೆ. 9ನೇ ತರಗತಿಯ ಸಂತ್ರಸ್ತೆ ಕಳೆದ ಕೆಲವು ದಿನಗಳಿಂದ ಹೊಟ್ಟೆ ನೋವು ಅನುಭವಿಸುತ್ತಿದ್ದು, ಇತ್ತೀಚೆಗೆ ಹೊಟ್ಟೆನೋವು ಜಾಸ್ತಿಯಾಗಿದ್ದರಿಂದ ಪಾಲಕರು ಬಾಲಕಿಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಆಕೆ ಗರ್ಭಿಣಿ ಎಂಬುವುದು ಬೆಳಕಿಗೆ ಬಂದಿದೆ. ಆಕೆಯನ್ನು ವಿಚಾರಿಸಿದಾಗ ತನ್ನ ದೂರದ ಸಂಬಂಧಿಯೇ ಆಗಿರುವ ಆರೋಪಿ ದಿಲೀಪ್ ನ ಕಾಮಕಾಂಡವನ್ನು ಬಿಚ್ಚಿಟ್ಟಿದ್ದು, ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.
ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ ಕುರಿತ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ.
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಸಂಸದ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ವಿಧಾನಸಭೆ ಚುನಾವಣೆ ಸೋಲಿನ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ ಎಂದು ನಳಿನ್ ಕುಮಾರ್ ಹೇಳಿದ್ದಾರೆ. ಚುನಾವಣೆ ಸೋಲಿನ ಬಳಿಕ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಕೆ ಮಾಡಿದ್ದೇನೆ ಎಂದು ಹೇಳಿದ್ದಾರೆ. ಚುನಾವಣೆಯಲ್ಲಿ ಯಾವುದೇ ಒಳ ಒಪ್ಪಂದ ಆಗಿಲ್ಲ. ಹೊಂದಾಣಿಕೆ ಮಾಡಿಕೊಂಡಿದ್ದರೆ ಕನಕಪುರದಲ್ಲಿ ಡಿಕೆಶಿ ವಿರುದ್ಧ ಅಶೋಕ್ ಹಾಗೂ ವರುಣದಲ್ಲಿ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.ರಾಜೀನಾಮೆ ನೀಡಿರುವ ಬಗ್ಗೆ ನಳಿನ್ ಕುಮಾರ್ ಕಟೀಲ್ ಬಳ್ಳಾರಿಯಲ್ಲಿ ಮಾಹಿತಿ ನೀಡಿದ್ದಾರೆ.ಕಳೆದ ಆಗಸ್ಟ್ ಗೆ ನಳಿನ್ ಅವರ ಅವಧಿ ಮುಗಿದಿತ್ತು.ಚುನಾವಣೆ ಹಿನ್ನೆಲೆ ಅಧ್ಯಕ್ಷಾವಧಿ ಮುಂದುವರಿಸಲಾಗಿತ್ತು.
ಪುತ್ತೂರು: KSRTC ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಅರ್ಚಕ ಸುಬ್ರಹ್ಮಣ್ಯ ಭಟ್ ನನ್ನು ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ತಾಲೂಕಿನ ಕಬಕದ ಮುರ ಗ್ರಾಮದ ಬಳಿ ಗುರುವಾರ ಕನ್ಯಾನ ಸಮೀಪದ ಯುವತಿಯೊಬ್ಬಳು ಉಪ್ಪಳ-ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತನ್ನ ತಾಯಿಯೊಂದಿಗೆ ಬೆಳಿಗ್ಗೆ 11 ಗಂಟೆ ಸುಮಾರಿಗೆ ಪುತ್ತೂರಿಗೆ ಪ್ರಯಾಣಿಸುತ್ತಿದ್ದಳು. ಈ ವೇಳೆ ಯುವತಿಯ ಹಿಂದೆ ಕುಳಿತಿದ್ದ ಅರ್ಚಕ ಸುಬ್ರಹ್ಮಣ್ಯ ಭಟ್ ತನ್ನನ್ನು ಮುಟ್ಟಿದ್ದಾಗಿ ಯುವತಿ ದೂರು ನೀಡಿದ್ದಾಳೆ. ಅರ್ಚಕ ತನ್ನ ಕೈಗಳನ್ನು ಸೀಟುಗಳ ನಡುವೆ ಇಟ್ಟು ಯುವತಿಯ ಸೊಂಟದ ಕೆಳಗೆ ಮುಟ್ಟಿದ್ದಾನೆ. ಯುವತಿ ಬೊಬ್ಬೆ ಹಾಕಿದಾಗ ಆತ ಪುತ್ತೂರಿನ ಬೊಳ್ವಾರ್ ಬಳಿ ಬಸ್ ನಿಂದ ಇಳಿದು ಹೋಗಿದ್ದ. ನಂತರ ಸಂಜೆ 5.30ರ ಸುಮಾರಿಗೆ ಮಹಿಳೆ ಮಹಿಳಾ ಪೊಲೀಸ್ ಠಾಣೆಗೆ ಬಂದು ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಈ ಕುರಿತು ದಕ್ಷಿಣ ಕನ್ನಡ ಪೊಲೀಸರು ಐಪಿಸಿ ಸೆಕ್ಷನ್ 354ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗೆ ನ್ಯಾಯಾಲಯ ಜಾಮೀನು ನೀಡಿರುವುದಾಗಿ ತಿಳಿದು…
ಕಡಬ : ಮೂರು ದಿನದ ಹಿಂದೆ ಮಿದುಳು ರಕ್ತಸ್ರಾವ (ಬ್ರೈನ್ ಹ್ಯಾಮರೇಜ್)ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕಡಬ ಆಲಂಕಾರಿನ ಆಟೋ ಚಾಲಕರೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ನೆಕ್ಕಿಲಾಡಿ ನಿವಾಸಿ, ಆಲಂಕಾರು ಆದರ್ಶ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಕಮಲಾಕ್ಷ ಗೌಡ(44ವ.)ಮೃತಪಟ್ಟವರಾಗಿದ್ದಾರೆ. ಜೂ.20ರಂದು ಬೆಳಿಗ್ಗೆ ಮನೆಯಲ್ಲಿ ಕಮಲಾಕ್ಷರವರು ಬ್ರೈನ್ ಎಮರೇಜ್‌ಗೆ ತುತ್ತಾಗಿ ಏಕಾಏಕಿ ಅನಾರೋಗ್ಯಕ್ಕೆ ಒಳಗಾಗಿದ್ದರು. ತಕ್ಷಣ ಅವರ ಸಹೋದರ ಆಲಂಕಾರಿನ ಕ್ಲಿನಿಕ್‌ಗೆ ಕರೆತಂದು ಬಳಿಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿನ ವೈದ್ಯರ ಸಲಹೆಯಂತೆ ಅದೇ ದಿನ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಕಮಲಾಕ್ಷ ಗೌಡರವರು ಚಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಕಮಲಾಕ್ಷ ಗೌಡರವರು ಕಳೆದ 5 ವರ್ಷಗಳಿಂದ ಆಲಂಕಾರಿನಲ್ಲಿ ಬಾಡಿಗೆ ರಿಕ್ಷಾ ಓಡಾಟ ನಡೆಸುತ್ತಿದ್ದರು.
ನಾಗ್ಪುರ: ನಾಗ್ಪುರದಲ್ಲಿ ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ 36 ವರ್ಷಗಳ ಕಾಲ ಗರ್ಭ ಧರಿಸಿದ್ದು, ಆತನ ಹೊಟ್ಟಯಲ್ಲಿ ಅವಳಿ ಮಕ್ಕಳಿರುವುದು ಕಂಡುಬಂದಿದೆ. ನಾಗ್ಪುರದ ವ್ಯಕ್ತಿಯ ಉಬ್ಬಿದ ಹೊಟ್ಟೆಯನ್ನು ನೋಡಿದ ಜನರು ವಿಚಿತ್ರವಾಗಿ ನೋಡುತ್ತಿದ್ದರು. ಆದರೆ, ಆತನ ಹೊಟ್ಟೆಯೊಳಗೆ ನಿಜವಾಗಿಯೂ ಮಕ್ಕಳು ಇದ್ದಾರೆ ಎಂದು ಯಾರೂ ನಿರೀಕ್ಷಿಸಿರಲಿಲ್ಲ. ವರದಿ ಪ್ರಕಾರ, ನಾಗ್ಪುರದ ನಿವಾಸಿ ಸಂಜು ಭಗತ್ ಹೊಟ್ಟೆಯಲ್ಲಿ ಈ ಮಕ್ಕಳು ಕಂಡುಬಂದಿವೆ. ಬಾಲ್ಯದಲ್ಲಿ, ಭಗತ್ ತುಂಬಾ ಆರಾಮದಾಯಕ ಜೀವನವನ್ನು ನಡೆಸಿದ್ದಾನೆ. ಆದರೆ ಅವನ ಹೊಟ್ಟೆಯು ಸಾಮಾನ್ಯ ಮಕ್ಕಳಿಗಿಂತ ಸ್ವಲ್ಪ ಹೆಚ್ಚು ಉಬ್ಬುತ್ತಿತ್ತು. ಈ ಊತದ ಬಗ್ಗೆ ಅವರು ಎಂದಿಗೂ ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ, ಕ್ರಮೇಣ ಇದು ಹೆಚ್ಚಾದಾಗ, ಕುಟುಂಬ ಸದಸ್ಯರು ಅದರ ಬಗ್ಗೆ ಚಿಂತಿಸತೊಡಗಿದರು. ಮೊದಮೊದಲು ಭಗತ್‌ಗೆ ಹೊಟ್ಟೆ ಉಬ್ಬರಿಸಿದ್ದನ್ನು ನೋಡಿಯೇ ವಿಚಿತ್ರ ಅನ್ನಿಸುತ್ತಿತ್ತು. ಆದರೆ 1999 ರ ಹೊತ್ತಿಗೆ ಅದು ತುಂಬಾ ಊದಿಕೊಂಡಿತು. ಅವನಿಗೆ ಉಸಿರಾಡಲು ಸಹ ಕಷ್ಟವಾಗತೊಡಗಿತು. ಅಂತಿಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ಇಲ್ಲಿ ವೈದ್ಯರಿಗೆ ಗೆಡ್ಡೆಯ…
ನವದೆಹಲಿ: ದೇಶದ ಗಡಿ ನುಸುಳಲು ಯತ್ನಿಸುತ್ತಿದ್ದ 4 ಭಯೋತ್ಪಾದಕರನ್ನು ಗಡಿ ಭದ್ರತಾ ಪಡೆಗಳು ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ ಹತ್ಯೆಗೈದಿದ್ದಾರೆ ಎಂದು ವರದಿಯಾಗಿದೆ. ಈ ಭಯೋತ್ಪಾದಕರ ಯತ್ನವನ್ನು ವಿಫಲಗೊಳಿಸಿದ ಗಡಿ ಭದ್ರತಾ ಪಡೆಗಳು ಈ ನಾಲ್ವರು ಭಯೋತ್ಪಾದಕರನ್ನು ಕುಪ್ವಾರದಲ್ಲಿ ಹತ್ಯೆಗೈದಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದಿಂದ ಒಳನುಸುಳಲು ಯತ್ನಿಸುತ್ತಿದ್ದ ನಾಲ್ವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ಕುಪ್ವಾರದ ಮಚ್ಚಲ್ ಸೆಕ್ಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಈ ಸುದ್ದಿ ಈಗಷ್ಟೇ ಬಂದಿದ್ದು, ಹೆಚ್ಚಿನ ಮಾಹಿತಿಯನ್ನು ಶೀಘ್ರದಲ್ಲೇ ಅಪ್‌ಡೇಟ್ ಮಾಡಲಾಗುವುದು.
ಮಂಜೇಶ್ವರ: ಮನೆಗೆ ನುಗ್ಗಿದ ಕಳ್ಳರು ಸುಮಾರು 60 ಪವನ್ ಚಿನ್ನಾಭರಣ ಮತ್ತು 50 ಸಾವಿರ ರೂ.ನಗದು ಕಳವು ಮಾಡಿರುವುದಾಗಿ ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ. ಮಂಜೇಶ್ವರ ರಾಗಂ ಜಂಕ್ಷನ್ ನ ಹಮೀದ್ ತಂಘಲ್ ರವರ ಮನೆಯಲ್ಲಿ ಈ ಕಳವು ನಡೆದಿದೆ. ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿ ಕಳ್ಳರು ಕಪಾಟನ್ನು ಮುರಿದು ಈ ಕೃತ್ಯ ನಡೆಸಿದ್ದಾರೆ.ಹಮೀದ್ ರವರ ಕುಟುಂಬ ಮನೆಗೆ ಬೀಗ ಹಾಕಿ ಎರಡು ದಿನಗಳ ಹಿಂದೆ ಏರ್ವಾಡಿಗೆ ತೆರಳಿದ್ದರು.ಗುರುವಾರ ಸಂಜೆ ಮರಳಿ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.ಇನ್ನು ಮಂಜೇಶ್ವರ ಪೊಲೀಸರಿಗೆ ದೂರು ನೀಡಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.










