ಮಂಗಳೂರು : ಅಕ್ರಮವಾಗಿ ವಿದೇಶದಿಂದ ಚಿನ್ನ ಸಾಗಾಟ ಮಾಡುವ ಸ್ಮಗ್ಲರ್ ಗಳು ಇದೀಗ ಹೊಸ ರೀತಿಯ ಅವಿಷ್ಕಾರ ಮಾಡಿದ್ದು, ಈ ಬಾರಿ ಖೀರ್ ಮಿಕ್ಸ್ ಪಾಕೆಟ್ ಗಳಲ್ಲಿ ಚಿನ್ನ ಇಟ್ಟು ಸಾಗಾಟಕ್ಕೆ ಯತ್ನಿಸಿ ಸಿಕ್ಕಿಬಿದ್ದ ಘಟನೆ ಮಂಗಳೂರು ಅಂತಾರಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ದುಬೈನಿಂದ ಬಜಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನನಿಲ್ದಾಣಕ್ಕೆ (ಎಂಐಎ) ಬಂದಿಳಿದ ಪ್ರಯಾಣಿಕರೊಬ್ಬರು ‘ಖೀರ್ ಮಿಕ್ಸ್’ ಪೊಟ್ಟಣಗಳಲ್ಲಿ ಕಳ್ಳಸಾಗಣೆ ಮಾಡಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆರೋಪಿಯಿಂದ 24 ಕ್ಯಾರೆಟ್‌ನ 347 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ₹ 20 ಲಕ್ಷ ಎಂದು ಅಂದಾಜಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಟ್ವೀಟ್ ಮಾಡಿದೆ. ದುಬೈನಿಂದ ಬಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಶುಕ್ರವಾರ ಎಂಐಎಗೆ ಬಂದಿಳಿದ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿ ಬಳಿ ‘ಕಿಚನ್ ಟ್ರೆಜರ್ಸ್’ ಖೀರ್ ಮಿಕ್ಸ್‌ನ ಐದು ಪೊಟ್ಟಣಗಳಿದ್ದವು. ಸಂದೇಹ ಬಂದಿದ್ದರಿಂದ ಅವುಗಳನ್ನು ತಪಾಸಣೆಗೊಳಪಡಿಸಿದಾಗ ಅದರಲ್ಲಿ ಚಿನ್ನ ಇರುವುದು ಗೊತ್ತಾಯಿತು‘ ಎಂದು ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆ ಮೂಲಗಳು ತಿಳಿಸಿವೆ.
Author: main-admin
ಮುಲ್ಕಿ: ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವರಿಗೆ ಹುಚ್ಚು ನಾಯಿ ಕಡಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಹಳೆಯಂಗಡಿಯ ಕೊಳುವೈಲಿನ ನಿವಾಸಿ ಗ್ರಾಮ ಪಂಚಾಯತ್ ಬಳಿಯ ಟೈಲರ್, ಛಾಯಾ ಚಿತ್ರಗ್ರಾಹಕರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಏಕಾಏಕಿ ಹುಚ್ಚುನಾಯಿ ಕಡಿದಿದ್ದು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹುಚ್ಚುನಾಯಿ ಹಾವಳಿ ವಿಪರಿತವಾಗಿದ್ದು ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ರಾಂಚಿ: ಬಿಹಾರ ಪೊಲೀಸರು ಅಪಘಾತಕ್ಕೀಡಾದ ವ್ಯಕ್ತಿಯ ಶವವನ್ನು ಮುಜಾಫರ್ಪುರದಲ್ಲಿ ಕಾಲುವೆಗೆ ಎಸೆಯುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ವೈರಲ್ ವಿಡಿಯೋ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಾಜಿಪುರ-ಮುಜಾಫರ್ಪುರ ಎನ್‌ಎಚ್-22ರಲ್ಲಿ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸುವ ಬದಲು ಫಕುಲಿಯ ಕಾಲುವೆಗೆ ಎಸೆದಿದ್ದಾರೆ ಎನ್ನಲಾಗಿದೆ. ಈ ಘಟನೆಯನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಮೃತರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಫಕುಲಿ ಒಪಿ ಮುಖ್ಯಸ್ಥ ಮೋಹನ್ ಕುಮಾರ್ ತಿಳಿಸಿದ್ದಾರೆ. “ಅವರ ದೇಹದ ಕೆಲವು ಭಾಗಗಳನ್ನು ಮರಣೋತ್ತರ ಪರೀಕ್ಷೆಗಾಗಿ ಎಸ್ಕೆಎಂಸಿಎಚ್ಗೆ ಕಳುಹಿಸಲಾಗಿದ್ದು, ರಸ್ತೆಗೆ ಅಂಟಿಕೊಂಡಿದ್ದ ಭಾಗವನ್ನು ಕಾಲುವೆಗೆ ಎಸೆಯಲಾಗಿದೆ” ಎಂದು ಕುಮಾರ್ ಹೇಳಿದ್ದಾರೆ.
ಶಿವಮೊಗ್ಗ:ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಕಾನ್ಸ್ಟೇಬಲ್ಗಳನ್ನು ಅಮಾನತ್ತು ಮಾಡಿ ಶಿವಮೊಗ್ಗ ಗ್ರಾಮಾಂತರ ವೃತ್ತ ನಿರೀಕ್ಷಕ ಅಭಯ ಪ್ರಕಾಶ್ ಆದೇಶಿಸಿದ್ದಾರೆ. ಶಿವಮೊಗ್ಗ ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ವರದಿ ಆಧರಿಸಿ ಕಾಶಿನಾಥ್, ರಂಗನಾಥ, ಶಿವರಾಜ್ ಅಮಾನತುಗೊಳಿಸಲಾಗಿದೆ. ಶಿವಮೊಗ್ಗದಲ್ಲಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 60 ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ . ಮುಂಜಾಗ್ರತಾ ಕ್ರಮವಾಗಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.ವಾಹನಗಳನ್ನು ತಪಾಸಣೆ ಮಾಡಲಾಯಿತು. ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬ ಆಚರಣೆ ವೇಳೆ ದುಷ್ಕರ್ಮಿಗಳಿಂದ ಕಲ್ಲೆಸೆತ ಉಂಟಾಗಿದ್ದು ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಾಗುಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಸೆಲ್ವಮನಿ ಆದೇಶಿಸಿದ್ದರು. ಯಾರೋ ಕಿಡಿಗೇಡಿಗಳು ಮನೆಗಳು ಮತ್ತು ಪೊಲಿಸರ ಮೇಲೆ ಕಲ್ಲು ಎಸೆದಿದ್ದರು.ಇದರಿಂದ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಶಾಂತಿನಗರದಲ್ಲಿ ಲಘು ಲಾಠಿಚಾರ್ಜ್ ಮಾಡಿದ ವೇಳೆ ಕಿಡಿಗೇಡಿಗಳಿಂದ ಪೊಲೀಸರ ಮೇಲೆ ಕಲ್ಲು ತೂರಾಟ ಕೂಡ ನಡೆದಿದೆ.
ಸುಳ್ಯ: ಮನೆಯಲ್ಲಿ ಇನ್ವರ್ಟರ್ ಪ್ಲಗ್ ತೆಗೆಯುವ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ನೆಲ್ಲೂರು ಕೆಮ್ರಾಜೆ ಗ್ರಾಮದ ಬೊಮ್ಮಾರಿನಿಂದ ವರದಿಯಾಗಿದೆ. ಬೊಮ್ಮಾರು ಬಾಬು ಕುಲಾಲ್ ಎಂಬವರ ಪತ್ನಿ ಲಲಿತಾ(55 ಪ್ರಾಯ) ಎಂಬವರೇ ಮೃತ ಪಟ್ಟ ಮಹಿಳೆಯಾಗಿದ್ದಾರೆ. ಲಲಿತಾರವರು ದಿನಂಪ್ರತಿ ಮಲಗುವ ಸಮಯದಲ್ಲಿ ಇನ್ವರ್ಟರ್ ಗೆ ವಿದ್ಯುತ್ ಸಂಪರ್ಕಿಸುವ ಪ್ಲಗ್ ಅನ್ನು ತೆಗೆದು ಮಲಗುತ್ತಿದ್ದರೆನ್ನಲಾಗಿದೆ. ನಿನ್ನೆ ರಾತ್ರಿಯೂ ಸುಮಾರು 10 ಗಂಟೆಯ ವೇಳೆಗೆ ಪ್ಲಗ್ ತೆಗೆಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತದರೂ ಅಷ್ಟಾಗಲೇ ಅವರು ಮೃತಪಟ್ಟರೆಂದು ತಿಳಿದು ಬಂದಿದೆ. ಮೃತರು ಪತಿ, ಇಬ್ಬರು ಪುತ್ರರಾದ ಗೌತಮ್, ಅಖಿಲ್ ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಉಡುಪಿ: ಗಾಂಜಾ ನಶೆಯಲ್ಲಿದ್ದ ಯುವಕರು ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉಡುಪಿ ನಗರದ ಸಿಟಿ ಸೆಂಟರ್ ಮಾಲ್ ಬಳಿ ನಡೆದಿದೆ.ನಶೆಯಲ್ಲಿದ್ದ ಯುವಕರು ಮತ್ತು ಆಟೋ ಚಾಲಕನ ನಡುವೆ ವಾಗ್ವಾದ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಉಡುಪಿ ನಗರ ಪೊಲೀಸರು ಭೇಟಿ ನೀಡಿದ್ದಾರೆ.
ಮಂಗಳೂರು: ನವರಾತ್ರಿ ಸಡಗರ ಹಾಗೂ ದಸರಾ ಸಂಭ್ರಮದ ಹಿನ್ನೆಲೆಯಲ್ಲಿ ಶಾಲೆಗಳಿಗೆ ದಸರಾ ರಜೆ ಈಗಾಗಲೇ ಘೋಷಣೆಯಾಗಿದೆ. ಆದರೆ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಪದವಿ ವಿದ್ಯಾರ್ಥಿಗಳಿಗೆ ದಸರಾ ರಜೆ ಇನ್ನೂ ಅಂತಿಮವಾಗಿಲ್ಲ. ಶಾಸಕ ವೇದವ್ಯಾಸ ಕಾಮತ್ ಅವರು ಈ ಬಗ್ಗೆ ಸರಕಾರದ ಗಮನಸೆಳೆದಿದ್ದು, ‘ಮಂಗಳೂರು ದಸರಾ ಹಬ್ಬಕ್ಕೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಸಂಬಂಧಪಟ್ಟವರನ್ನು ಆಗ್ರಹಿಸುವಂತೆ ಹಲವಾರು ಪೋಷಕರು ಈಗಾಗಲೇ ಮನವಿ ಮಾಡಿದ್ದಾರೆ. ಹೀಗಾಗಿ ಮಂಗಳೂರು ವಿ.ವಿ., ಜಿಲ್ಲಾಡಳಿತ ಹಾಗೂ ಸರಕಾರ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ. ಹಿಂದಿನಬಿಜೆಪಿಸರಕಾರದ ಅವಧಿಯಲ್ಲಿದಸರಾ ಹಬ್ಬದ ರಜೆಯಲ್ಲಿ ಉಂಟಾಗಿದ್ದ ವ್ಯತ್ಯಾಸವನ್ನು ಸರಕಾರದ ಮಟ್ಟದಲ್ಲಿಯೇ ಮಾರ್ಪಾಡುಗೊಳಿಸುವಲ್ಲಿ ಯಶಸ್ವಿಯಾಗಿದ್ದೆ. ಆದರೆ ಪ್ರಸ್ತುತ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದ್ದು ಹಿಂದೂ ಧಾರ್ಮಿಕ ಶ್ರದ್ಧೆ, ಭಾವನೆಗಳಿಗೆ ಬೆಲೆ ನೀಡಬೇಕು. ದಸರಾ ನಾಡಿನ ಅತ್ಯಂತ ಪ್ರಮುಖ ಹಬ್ಬವಾಗಿದ್ದು ಮಂಗಳೂರು ದಸರಾವು ಮೈಸೂರಿನ ಅನಂತರ ಅತ್ಯಂತ ಜನಾಕರ್ಷಣೆ ಗಳಿಸಿದೆ. ಹೀಗಾಗಿ ನವರಾತ್ರಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು, – – ಪೋಷಕರು, ಸೇರಿದಂತೆ ಎಲ್ಲರೂ…
ಮಂಗಳೂರು: ಜಮೀನಿನ ನಕಲಿ ದಾಖಲು ಪತ್ರಗಳನ್ನು ಸಲ್ಲಿಸಿ ಕೆಎಸ್‌ಎಫ್‌ಇಯ ಮಾಲಕಲ್ಲು ಶಾಖೆಯಿಂದ 70 ಲಕ್ಷ ರೂ. ಸಾಲ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಯೂತ್ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಹೊಸದುರ್ಗ ಚಿತ್ತಾರಿ ಪಿ.ವಿ. ರಸ್ತೆಯ ಕೆ.ವಿ.ಹೌಸ್ ನ ಎಂ. ಇಸ್ಮಾಯಿಲ್(37)ನನ್ನು ಗಡಿ ಭಾಗದ ಕಾಸಗೋಡು ಜಿಲ್ಲೆಯ ರಾಜಪುರಂ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಇಸ್ಮಾಯಿಲ್ ಸಹಿತ 8 ಮಂದಿ ವಿರುದ್ಧ ರಾಜಪುರಂ ಪೊಲೀಸರು ಕೇಸು ದಾಖಲಿಸಿದ್ದಾರೆ. ಉಪ್ಪಳ ಗ್ರಾಮದ ಐದು ಎಕ್ರೆ ಜಮೀನಿನ ದಾಖಲು ಪತ್ರಗಳನ್ನು ನಕಲಿಯಾಗಿ ಸೃಷ್ಟಿಸಿ ಅದಕ್ಕೆ ಗ್ರಾಮಾಧಿಕಾರಿಯ ಡಿಜಿಟಲ್ ಸಹಿಹಾಕಿ ನೀಡಿ ಕೆಎಸ್‌ಎಫ್‌ಇ ಚಿಟ್ ಫಂಡ್‌ನಿಂದ ಆರೋಪಿಗಳು 70 ಲಕ್ಷರೂ. ಸಾಲ ಪಡೆದು ವಂಚಿಸಿದ್ದಾಗಿ ಪೊಲೀಸರಿಗೆ ದೂರು ನೀಡಲಾಗಿತ್ತು. ಸಾಲವನ್ನು ಮರುಪಾವತಿಸದೆ ಇದ್ದಾಗ ಆರೋಪಿಗಳು ಸಲ್ಲಿಸಿದ ಭೂದಾಖಲು ಪತ್ರಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ ಅದು ನಕಲಿ ಎಂಬುದು ತಿಳಿದು ಬಂದಿದೆ ಎಂದು ಕೆಎಸ್‌ಎಫ್‌ಇಯ ಶಾಖಾ ಮೆನೇಜರ್ ಪೊಲೀಸರಿಗೆ ದೂರು ನೀಡಿದ್ದರು. ಇದರಂತೆ ಪೊಲೀಸರು ಕೇಸು ದಾಖಲಿಸಿ ಆರೋಪಿಗಳನ್ನು…
ಮಂಗಳೂರು: ಆರು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಹೋಮ್ ನರ್ಸ್‌ಗೆ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್‌ಟಿ ಎಸ್‌ಸಿ-2 ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ. ಹಾವೇರಿ ಜಿಲ್ಲೆಯ ನೆಲೋಗಲ್ ಗ್ರಾಮ ಮೂಲದ ಬೆನಕರಾಜ್ ಲಮಾಣಿ (25) ಶಿಕ್ಷೆಗೊಳಗಾದ ಆರೋಪಿ. ಸುರತ್ಕಲ್ ಪರಿಸರವಾಸಿ ಸಂತ್ರಸ್ತ ಬಾಲಕಿಯ ಅಸೌಖ್ಯದಿಂದಿದ್ದ ಅಜ್ಜನನ್ನು ನೋಡಿಕೊಳ್ಳಲು ಹೋಮ್ ನರ್ಸ್ ಆಗಿದ್ದ ಆರೋಪಿಯನ್ನು ನೇಮಿಸಲಾಗಿತ್ತು. 2022ರ ಜನವರಿಯಲ್ಲಿ ಒಂದು ದಿನ ಬಾಲಕಿಯ ತಾಯಿ ಔಷಧ ತರಲೆಂದು ಮನೆಯಿಂದ ಹೊರಗೆ ಹೋಗಿದ್ದರು. ಈ ವೇಳೆ ಆರೋಪಿ ಬಾಲಕಿ ಮೇಲೆ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ಮಂಗಳೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್ ಎಸ್.ಎಚ್.ಭಜಂತ್ರಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶೆ ಮಂಜುಳಾ ಇಟ್ಟಿ ಶುಕ್ರವಾರ ತೀರ್ಪು ನೀಡಿದ್ದಾರೆ. ಆರೋಪಿ ಮೇಲಿನ ಅಪರಾಧ ಸಾಬೀತಾಗಿರುವ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 376 ಮತ್ತು…
ಉಳ್ಳಾಲ: ಅಕ್ಟೋಬರ್ 6 ಗಣಿತ ಪರೀಕ್ಷೆಯಲ್ಲಿ ಕಳಪೆ ಫಲಿತಾಂಶ ಪಡೆದಿದ್ದ ಆರನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಸಹಪಾಠಿಯೊಂದಿಗೆ ಸೇರಿ ಪೇಪರ್ ತಿದ್ದಿದ್ದ ಶಿಕ್ಷಕಿಯ ನೀರಿನ ಬಾಟಲಿಗೆ ಅವಧಿ ಮುಗಿದಿದ್ದ ಮಾತ್ರೆಗಳನ್ನ ಹಾಕಿ ಸೇಡು ತೀರಿಸಿದ್ದರ ಪರಿಣಾಮ ನೀರನ್ನ ಕುಡಿದಿದ್ದ ಇಬ್ಬರು ಶಿಕ್ಷಕಿಯರು ಅಸ್ವಸ್ಥಗೊಂಡ ಘಟನೆ ಉಳ್ಳಾಲ ತಾಲೂಕಿನ ಖಾಸಗಿ ಶಾಲೆಯೊಂದರಲ್ಲಿ ನಡೆದಿದ್ದು ಘಟನೆಗೆ ಕಾರಣರಾದ ವಿದ್ಯಾರ್ಥಿನಿಯರಿಬ್ಬರಿಗೆ ಟಿ.ಸಿ ನೀಡಲು ಶಾಲಾಡಳಿತ ಮಂಡಳಿ ನಿರ್ಧರಿಸಿರುವುದಾಗಿ ತಿಳಿದುಬಂದಿದೆ. ಶಾಲಾ ಯುನಿಟ್ ಟೆಸ್ಟ್‌ನ ಗಣಿತ ವಿಷಯದಲ್ಲಿ ಆರನೇ ತರಗತಿ ವಿದ್ಯಾರ್ಥಿನಿಗೆ ಕಡಿಮೆ ಅಂಕ ಬಂದಿತ್ತು. ಪೇಪರ್ ತಿದ್ದಿದ್ದ ಗಣಿತ ಶಿಕ್ಷಕಿ ಸರಿಯಿದ್ದ ಉತ್ತರಕ್ಕೆ ತಪ್ಪು ಹಾಕಿದ್ದಾರೆ ಅನ್ನುವ ಬಾವನೆ ವಿದ್ಯಾರ್ಥಿನಿಯಲ್ಲಿ ಹುಟ್ಟಿತ್ತು. ಶಿಕ್ಷಕಿಯ ವಿರುದ್ಧ ಸೇಡು ತೀರಿಸಲು ತನ್ನ ಸಹಪಾಠಿಯ ಸಹಾಯ ಪಡೆದುಕೊಂಡ ವಿದ್ಯಾರ್ಥಿನಿ ಸ್ಟಾಫ್ ರೂಮ್‌ನಲ್ಲಿ ಯಾರೂ ಇಲ್ಲದ ಸಂದರ್ಭ ಬಳಸಿಕೊಂಡು ತಾನು ತಂದಿದ್ದ ಅವಧಿ ಮೀರಿದ್ದ ಮಾತ್ರೆಗಳನ್ನ ಗಣಿತ ಶಿಕ್ಷಕಿ ಬಳಸುತ್ತಿದ್ದ ನೀರಿನ ಬಾಟಲಿಗೆ ಹಾಕಿದ್ದಾಳೆ. ಗಣಿತ ಶಿಕ್ಷಕಿಯು ಬಾಟಲಿ ನೀರನ್ನು ಕುಡಿದು ಅಸ್ವಸ್ಥಗೊಂಡಿದ್ದು,ಅದೇ…










