Author: main-admin

ಮಂಗಳೂರು: ಮನೆಯವರ ಜೊತೆ ಜಗಳದ ಕೋಪಕ್ಕೆ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಲ್ದಾನೆ ಬಳಿ ಮಂಗಳವಾರ ನಡೆದಿದೆ. ನೀರುಮಾರ್ಗ ಸಮೀಪದ ಪಾಲ್ದಾನೆಯ ತೇಜತ್ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಎಸೆಸೆಲ್ಸಿ ಕಲಿಯುತ್ತಿದ್ದ ಈಕೆ ಮಂಗಳವಾರ ಸಂಜೆ ಶಾಲೆಯಿಂದ ಬಂದ ಬಳಿಕ ಕ್ಷುಲ್ಲಕ ಕಾರಣಕ್ಕೆ ಮನೆಯವರ ಜತೆ ಜಗಳ ಮಾಡಿದ್ದಳು ಎನ್ನಲಾಗಿದೆ. ಅದೇ ಕೋಪದಿಂದ ಕೋಣೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಹೊಸದಿಲ್ಲಿ: 9ನೇ ಅಂತರ್ ರಾಷ್ಟ್ರೀಯ ಯೋಗ ದಿನವಾದ ಬುಧವಾರ ದೇಶದ ವಿವಿಧ ಭಾಗಗಳಲ್ಲಿ ಹಲವು ಸಚಿವರು ಹಾಗೂ ಬಿಜೆಪಿ ಮುಖಂಡರು ಯೋಗ ಪ್ರದರ್ಶನ ನೀಡಿ ಯೋಗ ದಿನಾಚರಣೆಯನ್ನು ಆಚರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ರಾಷ್ಟ್ರಪತಿ ಭವನದಲ್ಲಿ ಯೋಗ ಪ್ರದರ್ಶಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೊಚ್ಚಿಯಲ್ಲಿ ಭಾರತದ ಮೊದಲ ಸ್ವದೇಶಿ ವಿಮಾನವಾಹಕ ನೌಕೆ INS ವಿಕ್ರಾಂತ್‌ನಲ್ಲಿ ಭಾರತೀಯ ನೌಕಾಪಡೆಯ ಸಿಬ್ಬಂದಿಗಳೊಂದಿಗೆ ಯೋಗ ಪ್ರದರ್ಶನ ಮಾಡಿದರು. ದಿಲ್ಲಿಯ ಏಮ್ಸ್‌ನಲ್ಲಿ ನಡೆದ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಭಾಗವಹಿಸಿದ್ದರು. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದ ನಾಗ್ಪುರದಲ್ಲಿ ಅಂತರ್ ರಾಷ್ಟ್ರೀಯ ಯೋಗ ದಿನವನ್ನು ಆಚರಿಸಲು ನೂರಾರು ಮಂದಿಯನ್ನು ಸೇರಿಕೊಂಡರು 3 ದಿನಗಳ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ವಿಶ್ವಸಂಸ್ಥೆಯ ನಾಯಕತ್ವದೊಂದಿಗೆ ಯೋಗ ಪ್ರದರ್ಶನ ನೀಡಲಿದ್ದಾರೆ. https://twitter.com/rashtrapatibhvn/status/1671360582560227329?ref_src=twsrc%5Etfw%7Ctwcamp%5Etweetembed%7Ctwterm%5E1671360582560227329%7Ctwgr%5Ec1f19a09e747c7cb25be87a3d593141349ce3c99%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fforyou%3Fmode%3Dpwalaunch%3Dtrue

Read More

ಬೆಂಗಳೂರು : ಅಪ್ರಾಪ್ತ ಬಾಲಕರಿಗೆ ವಾಹನ ಚಾಲನೆ ಮಾಡುವ ನೀಡುವ ಪೋಷಕರಿಗೆ ಕೋರ್ಟ್ ಬಿಗ್ ಶಾಕ್ ನೀಡಿದ್ದು, ಬರೋಬ್ಬರಿ 20 ಸಾವಿರ ರೂ. ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ಹೌದು, ಅಪ್ರಾಪ್ತ ಬಾಲಕ ಬೈಕ್‌ ಚಾಲನೆ ಮಾಡಿದ ತಪ್ಪಿಗೆ ಪೋಷಕರಿಗೆ 20 ಸಾವಿರ ರೂ. ದಂಡ ವಿಧಿಸಿ ತೀರ್ಥಹಳ್ಳಿ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಥಹಳ್ಳಿಯ ಕುಶಾವತಿ ಬಳಿ ಡಿವೈಎಸ್‌ಪಿ ಗಜಾನನ ವಾಮನ ಸುತರ ವಾಹನ ತಪಾಸಣೆ ‌ನಡೆಸುತ್ತಿದ್ದರು. ವಾಹನ ತಪಾಸಣೆ ವೇಳೆ ಹೆಲ್ಮೆಟ್ ಧರಿಸದೇ ಅಪ್ರಾಪ್ತ ಬೈಕ್ ಚಾಲನೆ ಮಾಡಿರುವುದು ಪತ್ತೆಯಾಗಿದೆ.ಅಪ್ರಾಪ್ತ ಬಾಲಕ ಬೈಕ್‌ ಚಾಲನೆ ಮಾಡಿದ್ದಷ್ಟೇ ಅಲ್ಲ, ಹೆಲ್ಮೆಟ್‌ ಧರಿಸದೇ ಬೈಕ್‌ ಚಲಾಯಿಸಿ ನಿಯಮ ಉಲ್ಲಂಘಿಸಿದ್ದ. ಪರಶೀಲನೆ ವೇಳೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕಳ್ಳಿಗದ್ದೆ ಗ್ರಾಮದ ಪ್ರಮೋದ್ ಎಂಬವರಿಗೆ ಸೇರಿದ ಬೈಕ್ ಆಗಿದ್ದು, ಪೊಲೀಸರು ಘಟನೆ ಬಗ್ಗೆ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ನ್ಯಾಯಾಧೀಶರು ವಿಚಾರಣೆ ನಡೆಸಿದ್ದರು. ಅಪ್ರಾಪ್ತನಿಗೆ ಬೈಕ್ ಕೊಟ್ಟಿದ್ದಕ್ಕೆ ಮಾಲೀಕನಿಗೆ 20…

Read More

ಮಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನ ಭಾಗ್ಯ ಯೋಜನೆ ಅನುಷ್ಟಾನಕ್ಕೆ ಕೇಂದ್ರ ಸರ್ಕಾರ ಅಕ್ಕಿ ಕೊಡಬೇಕು ಎಂದು ಆಗ್ರಹಿಸಿದ ಕಾಂಗ್ರೆಸ್ ಕಾರ್ಯಕರ್ತರು ಅನ್ನದ ಬಟ್ಟಲು ಬಡಿದು ಪ್ರತಿಭಟಿಸಿದರು. ಅಕ್ಕಿ ಕೊಡಲು ಒಪ್ಪಿಕೊಂಡಿದ್ದ ಭಾರತೀಯ ಆಹಾರ ನಿಗಮವು ಕೇಂದ್ರ ಸರ್ಕಾರದ ಒತ್ತಡದಿಂದ ಈಗ ಅಕ್ಕಿ ಕೊಡಲು ನಿರಾಕರಿಸುತ್ತಿದೆ. ಜನರ ಆಹಾರ ಭದ್ರತೆ ಕಸಿಯುವ ಕೆಲಸ ಕೇಂದ್ರ ಸರ್ಕಾರದಿಂದ ಆಗುತ್ತಿದೆ ಎಂದು ಮಾಜಿ ಶಾಸಕ ಜೆ.ಆರ್. ಲೋಬೊ ಆರೋಪಿಸಿದರು. ದುರ್ಬಲ ವರ್ಗದ ಪರವಾಗಿರುವ ಪಕ್ಷ ಕಾಂಗ್ರೆಸ್. ಬಡವರಿಗೆ ಉಚಿತ ಅಕ್ಕಿ ಕೊಡುವ ವ್ಯವಸ್ಥೆಯನ್ನು ಮೊದಲು ಜಾರಿಗೆ ತಂದಿದ್ದು ಸಿದ್ದರಾಮಯ್ಯ. ಹಿಂದೆ ಕಾಂಗ್ರೆಸ್ ಅಧಿಕಾರ ಪಡೆದಾಗ ಈ ಯೋಜನೆ ಪ್ರಥಮ ಬಾರಿಗೆ ಜಾರಿಗೊಂಡಿತು. ಈಗ ಮತ್ತೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ , ಅನ್ನಭಾಗ್ಯ ಯೋಜನೆ ಜಾರಿಗೊಳಿಸಲು ಹೊರಟಿದ್ದು, ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಇದಕ್ಕೆ ಅಡ್ಡಿ ಮಾಡುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದರು. ಶೋಭಕ್ಕ ಎಲ್ಲಿ ಹೋದ್ರಿ? ‘ಆಗ ಬಂಟ್ವಾಳದಲ್ಲಿ ಜೋಳಿಗೆ ಹಿಡಿದು ಅಕ್ಕಿ…

Read More

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಆಟೋ ರಿಕ್ಷಾದಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ ನೀಡಿದ ಆರೋಪದ ಮೇಲೆ ಇಬ್ಬರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿರುವ ಘಟನೆ ನಡೆದಿದೆ. ಆಟೋ ರಿಕ್ಷಾ ಚಾಲಕ ಸಾದಿಕ್ ಮತ್ತು ಸ್ಥಳೀಯ ನಿವಾಸಿ ಕರೀಂ ಅವರನ್ನು ಪೊಲೀಸರು ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನೆರೋಲ್ದಪಲ್ಕೆ ಎಂಬಲ್ಲಿ ಜೂನ್ 18 ರಂದು ಬಾಲಕಿ ತನ್ನ ತಾಯಿ ಪಡೆದ ಸಾಲದ ಕಂತು ಪಾವತಿಸಲು ಸ್ವಸಹಾಯ ಸಂಘದ ಕಡೆಗೆ ನಡೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಬಾಲಕಿಯ ಕುಟುಂಬಕ್ಕೆ ಪರಿಚಯವಿರುವ ಕರೀಂ ಬಾಲಕಿಯನ್ನು ರಿಕ್ಷಾಗೆ ಹತ್ತಿಸಿದ್ದಾನೆ. ಬಳಿಕ ಆಟೋ ಚಾಲಕ ಸಾದಿಕ್ ಜೊತೆ ಸೇರಿ ಕರೀಂ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದಾನೆ. ಕರೀಂ ಸಂತ್ರಸ್ತ ಬಾಲಕಿಗೆ 200 ರೂ ನೀಡಿ ತನ್ನೊಂದಿಗೆ ಆಟೋ ರಿಕ್ಷಾದಲ್ಲಿ ಬೆಳ್ತಂಗಡಿಗೆ ಬರುವಂತೆ ಆಮಿಷ ಒಡ್ಡಿ ಕಿರುಕುಳ ನೀಡಿದ್ದಾನೆ. ಸಂತ್ರಸ್ತ ಬಾಲಕಿ ಇದನ್ನು ವಿರೋಧಿಸಿ ಆಟೋ ರಿಕ್ಷಾದಿಂದ ಜಿಗಿದಿದ್ದಾಳೆ.ಈ ವೇಳೆ…

Read More

ಮಂಗಳೂರು: ಕೆನಡಾದಲ್ಲಿ ಉದ್ಯೋಗ ನೇಮಕಾತಿ ಮಾಡಿಸಿಕೊಡುವುದಾಗಿ ಹೇಳಿ ಹಣ ಪಡೆದು ವಂಚಿಸಿರುವ ಘಟನೆ ನಡೆದಿದೆ. ವ್ಯಕ್ತಿಯೋರ್ವರು ವಿದೇಶದಲ್ಲಿ ಉದ್ಯೋಗಾವಕಾಶದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ಮಾ. 28ರಂದು ಇನ್‌ಸ್ಟಾಗ್ರಾಂ ಖಾತೆಯ ಮೂಲಕ ವಿಲಿಯಂ ಪೌಲ್‌ ಆಯಂಟನಿಯ ಪರಿಚಯವಾಗಿತ್ತು. ಆತ ತಾನು ಕೆನಡಾ ದೇಶದ ಪ್ರಜೆಯಾಗಿದ್ದು, ಇಮಿಗ್ರೇಷನ್‌ ಅಧಿಕಾರಿಯಾಗಿರುವುದಾಗಿ ಪರಿಚಯಿಸಿಕೊಂಡು ಕೆನಡಾ ದೇಶದಲ್ಲಿ ಉದ್ಯೋಗ ಒದಗಿಸಿಕೊಡುವುದಾಗಿ ನಂಬಿಸಿದ್ದ. ಅನಂತರ ವಾಟ್ಸ್‌ಆಯಪ್‌ ಮೂಲಕ ನಿರಂತರ ಸಂಪರ್ಕದಲ್ಲಿದ್ದ. ಉದ್ಯೋಗ ನೇಮಕಾತಿಯ ಬಗ್ಗೆ ವಿವಿಧ ದಾಖಲೆಗಳನ್ನು ಕಳುಹಿಸುತ್ತಿದ್ದ. ನೇಮಕಾತಿಯ ಬಗ್ಗೆ ವಿವಿಧ ಕಾರಣಗಳನ್ನು ನೀಡಿ ಮಾ. 28ರಿಂದ ಜೂ. 9ರ ನಡುವೆ ಹಂತ ಹಂತವಾಗಿ 4.80 ಲ.ರೂ.ಗಳನ್ನು ವರ್ಗಾಯಿಸಿಕೊಂಡು ಬಳಿಕ ಉದ್ಯೋಗ ಒದಗಿಸದೆ ವಂಚಿಸಿದ್ದಾನೆ. ಈ ಬಗ್ಗೆ ಮಂಗಳೂರಿನ ಸೆನ್‌ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ರಾಜ್ಯ ಸರ್ಕಾರ, ಮತಾಂತರ ನಿಷೇಧ ಕಾಯ್ದೆ ಹಾಗೂ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ವಾಪಸ್ ಪಡೆಯಲು ಮುಂದಾಗಿರುವುದಕ್ಕೆ ಪೇಜಾವರ ಮಠದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ವಿರೋಧ ವ್ಯಕ್ತಪಡಿಸಿದ್ದು, ಸರ್ಕಾರದ ಈ ಕ್ರಮ ಕಳವಳಕಾರಿಯಾಗಿದೆ ಎಂದು ಹೇಳಿದ್ದಾರೆ. ಮತಾಂತರದ ಕಾರಣಕ್ಕೆ ಕುಟುಂಬಗಳು ಛಿದ್ರವಾಗುತ್ತಿರುವುದನ್ನು ಮನಗಂಡು ಈ ಹಿಂದಿನ ಬಿಜೆಪಿ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೊಳಿಸಿದ್ದು, ಗೋ ಹತ್ಯೆ ತಡೆಯುವ ಸಲುವಾಗಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿತ್ತು ಎಂದು ಅವರು ತಿಳಿಸಿದ್ದಾರೆ. ಆದರೆ ಈ ಎರಡೂ ಕಾಯ್ದೆಗಳನ್ನು ಈಗಿನ ಕಾಂಗ್ರೆಸ್ ಸರ್ಕಾರ ಹಿಂಪಡೆಯಲು ತೀರ್ಮಾನಿಸಿರುವುದು ಕಳವಳಕಾರಿಯಾಗಿದೆ ಎಂದು ಹೇಳಿರುವ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಜನಾಭಿಪ್ರಾಯ ಪಡೆದು ಇವುಗಳನ್ನು ಹಿಂಪಡೆಯದೆ ಮುಂದುವರೆಸಿಕೊಂಡು ಹೋಗಬೇಕು ಎಂದು ಒತ್ತಾಯಿಸಿದ್ದಾರೆ.

Read More

ಬೆಂಗಳೂರು : ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶ ಹೊರಡಿಸಿದೆ. ಈ ಮೂಲಕ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಐಎಎಸ್ ಅಧಿಕಾರಿ ಜಾವೇದ್ ಅಖ್ತರ್ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೆಡಿಕಲ್ ಎಜುಕೇಷನ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಹೊಣೆಗಾರಿಕೆ ವಹಿಸಿದೆ. ಇನ್ನೂ ಬಿಸಿ ಸತೀಶ ಅವರನ್ನು ಕೊಡಗು ಜಿಲ್ಲಾಧಿಕಾರಿಯಿಂದ ವರ್ಗಾವಣೆ ಮಾಡಿ, ಸುವರ್ಣ ಆರೋಗ್ಯ ಟ್ರಸ್ ಇಡಿಯಾಗಿ ನೇಮಿಸಿದೆ. ಹುದ್ದೆಯ ನಿರೀಕ್ಷೆಯಲ್ಲಿದ್ದಂತ ಡಾ.ಗೋಪಾಲ್ ಕೃಷ್ಣ ಅವರನ್ನು ಕರ್ನಾಟಕ ಮುನಿಸಿಪಲ್ ಡಾಡಾ ಸೊಸೈಟಿಯ ಜೆಡಿ ಹುದ್ದೆಗೆ ನೇಮಕ ಮಾಡಿದೆ. ಡಾ.ಶಿವಶಂಕರ್ ನ್ ಅವರನ್ನು ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಟ್ ನ ಎಂಡಿ ಸ್ಥಾನದಿಂದ ವರ್ಗಾವಣೆ ಮಾಡಿ, ಬೆಂಗಳೂರು ಗ್ರಾಮಾಂತರ ಡಿಸಿಯಾಗಿ ನೇಮಕ ಮಾಡಿದೆ. ಅಕ್ರಮ…

Read More

ಕೊಟ್ಟಾಯಂ: ಎಂಟು ತಿಂಗಳ ಮಗುವೊಂದು ಹೃದಯಾಘಾತಕ್ಕೆ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ನಿರ್ಲಕ್ಷ್ಯವನ್ನು ಆರೋಪಿಸಿ ಮಗುವಿನ ಕುಟುಂಬಸ್ಥರು ಆರೋಗ್ಯ ಸಚಿವರಿಗೆ ದೂರು ನೀಡಿದ್ದಾರೆ. ಘಟನೆ ಹಿನ್ನೆಲೆ: ಮೇ.11 ರಂದು ಕೇರಳದ ಕೊಟ್ಟಾಯಂ ಮನಾರ್ಕಾಡ್ ಮೂಲದ ಎಬಿ – ಜಾನ್ಸಿ ದಂಪತಿಯ 8 ತಿಂಗಳ ಮಗು ಜೋಶ್ ಎಬಿಗೆ ಜ್ವರ ಕಾಣಿಸಿಕೊಂಡ ಕಾರಣ ಮಗುವನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜಿನ ವಿಭಾಗದ ಮಕ್ಕಳ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಮಗುವನ್ನು ಮೇ.29 ರಂದು ಐಸಿಯುಗೆ ದಾಖಲಿಸಿದ್ದಾರೆ. ರಾತ್ರಿ ವೈದ್ಯರು ಇನ್ಫ್ಲಿಕ್ಸಿಮಾಬ್ (infliximab injection) ಚುಚ್ಚು ಮದ್ದನ್ನು ನೀಡಿದ್ದಾರೆ. ಕೆಲ ಸಮಯದ ಬಳಿಕ ಮಗುವಿನ ಉಸಿರಾಟದಲ್ಲಿ ತೊಂದರೆ ಉಂಟಾಗಿದೆ. ಆ ಬಳಿಕ ಮಗುವಿನ ಆರೋಗ್ಯ ಹದಗೆಟ್ಟಿದೆ. ಮಗುವನ್ನು ಪರೀಕ್ಷಿಸಿದ ವೈದ್ಯರು ಮಗುವಿಗೆ ಹೃದಯಾಘಾತವಾಗಿದೆ ಎಂದು ಹೇಳಿದ್ದಾರೆ. ಹೈಡೋಸ್ ಚುಚ್ಚು ಮದ್ದನ್ನು ನೀಡಿದ ಬಳಿಕ ಮಗುವಿನ ಆರೋಗ್ಯದ ನಿಗಾವಿಡಲು ಯಾವ ವೈದ್ಯರು ಬರಲಿಲ್ಲ. ಚುಚ್ಚು ಮದ್ದು ಹೃದಯಕ್ಕೆ ಪರಿಣಾಮವಿದ್ದರೂ ಅದನ್ನು ಆಸ್ಪತ್ರೆಯವರು ಕಡೆಗಣಿಸಿದ್ದಾರೆ. ಇದರಿಂದ ಮಗುವಿಗೆ ಹೃದಯಾಘಾತವಾಗಿದೆ ಎಂದು…

Read More

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಮುಂದೆ ಹೋಗಿ ಎಂದು ಕಂಡೆಕ್ಟರ್ ಮುಂದೆ ತಳ್ಳಿದ ಎಂಬ ಕಾರಣಕ್ಕಾಗಿ ಬಸ್ ನಿಲ್ಲಿಸಿ ದಾಂಧಲೆ ಮಾಡಿದ ಘಟನೆ ಜೂ 17 ರಂದು ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಡೆದಿದ್ದು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಂಡಕ್ಟರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಎಸ್ಪಿ ರಿಷ್ಯಂತ್ ಬೆಳ್ತಂಗಡಿಯಲ್ಲಿ ತಿಳಿಸಿದ್ದಾರೆ. ಮಂಗಳೂರಿನಿಂದ ಮೂಡಿಗೆರೆಗೆ ಸಂಚಾರಿಸುವ ಸರ್ಕಾರಿ ಬಸ್ಸಿಗೆ ಉಜಿರೆಯಲ್ಲಿ ವಿದ್ಯಾರ್ಥಿಗಳು ಹತ್ತಿದ್ದು ಈ ವೇಳೆ ನಿರ್ವಾಹಕ ವಿದ್ಯಾರ್ಥಿಗಳನ್ನು ಬಸ್ ಒಳಗೆ ಮುಂದೆ ಹೋಗಲು ಕೈ ಹಿಡಿದು ಮುಂದೆ ಕಳುಹಿಸುವ ಸಂದರ್ಭ ಬಸ್ ಕಂಡಕ್ಟರ್ ಹಾಗೂ ಕೆಲವು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಅದಲ್ಲದೇ ಈ ವಿಚಾರವನ್ನು ವಿದ್ಯಾರ್ಥಿಗಳು ಚಾರ್ಮಾಡಿಯ ಯುವಕರಿಗೆ ತಿಳಿಸಿ ಬಸ್ ಅಡ್ಡ ಹಾಕುವಂತೆ ಸೂಚಿಸಿದ್ದಾರೆ. ಈ ವಿಚಾರವನ್ನು ಬಸ್ಸಿನಲ್ಲಿದ್ದವರು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ತಿಳಿಸಿದ್ದು ತಕ್ಷಣ ಧರ್ಮಸ್ಥಳ ಠಾಣಾ ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಚಾರ್ಮಾಡಿ ಚೆಕ್ ಪೋಸ್ಟ್…

Read More