Author: main-admin

ಬಂಟ್ವಾಳ: ಗಾಂಜಾ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 9 ವರ್ಷ ಹಿಂದಿನ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರೆ‌. ಮಂಗಳೂರು ಮಂಜನಾಡಿ ಗ್ರಾಮದ ನಾಟೆಕಲ್ ನಿವಾಸಿ ಅಶ್ರಫ್ ಬಂಧಿತ ಆರೋಪಿ. 2015 ರಲ್ಲಿ ಗಾಂಜಾ ಮಾರಾಟ‌ ಮಾಡಿದ್ದ ಆರೋಪದ ಮೇಲೆ ಬಂಧನವಾಗಿ , ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಆರೋಪಿ ಅಶ್ರಫ್ ಅ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದೀಗ ಖಚಿತ ಮಾಹಿತಿ ಪಡೆದ ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್ ಶಿವಕುಮಾರ್ ಅವರ ನೇತ್ರತ್ವದ ಎಸ್.ಐ.ಹರೀಶ್, ಮತ್ತು ಮೂರ್ತಿ ಎಂ.ಅರ್.ಅವರ ಮಾರ್ಗದರ್ಶನ ದಲ್ಲಿ ಸಿಬ್ಬಂದಿಗಳಾದ ಗಣೇಶ್ ಪ್ರಸಾದ್, ಯೋಗೇಶ್, ವಿಜಯಕುಮಾರ್ ಅವರು ದೇರಳಕಟ್ಟೆಯ ಕುತ್ತಾರು ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.ಬಳಿಕ ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರೆ‌.

Read More

ಕುಂದಾಪುರ : ಕುಂದಾಪುರದಲ್ಲಿ ನಡೆದ ರಾಘವೇಂದ್ರ ಶೇರುಗಾರ್ ಆಲಿಯಾಸ್ ಬನ್ಸ್ ರಾಘು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಲಾಗಿದ್ದು, ಇಬ್ಬರಿಗೆ ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ. ಬಂಧಿತರನ್ನು ಶಿವಮೊಗ್ಗ ಮೂಲದ ಶಫಿವುಲ್ಲಾ (40) ಹಾಗೂ ಇಮ್ರಾನ್ (43) ಎಂದು ಗುರುತಿಸಲಾಗಿದೆ. ಆರೋಪಿಗಳು ಕುಂದಾಪುರದ ಚಿಕ್ಕನ್‌ ಸಾಲ್‌ ರಸ್ತೆಯ ಅಂಚೆ ಕಚೇರಿ ಸಮೀಪದ ಡೆಲ್ಲಿ ಬಜಾರ್‌ ಬಳಿ ರವಿವಾರ ಸಂಜೆ ಚೂರಿ ಇರಿದು ಕುಂದಾಪುರದ ನಿವಾಸಿ ರಾಘವೇಂದ್ರ ಶೇರುಗಾರ್‌ (42) ಅಲಿಯಾಸ್ ಬನ್ಸ್ ರಾಘು ಎನ್ನುವರನ್ನು ಚೂರಿ ಇರಿದು ಕೊಲೆಗೆ ಯತ್ನಿಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಬನ್ಸ್ ರಘು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದರು. ರವಿವಾರ ಸಂಜೆ ಕೃತ್ಯ ನಡೆದ ತಕ್ಷಣವೇ ಪೊಲೀಸ್ ಇಲಾಖೆ ಆರೋಪಿ ಬಂಧನಕ್ಕೆ ಕಾರ್ಯಪ್ರವೃತ್ತರಾಗಿದ್ದು ತದನಂತರ ಉಡುಪಿ ಎಸ್ಪಿ ಡಾ. ಅರುಣ್ ಕೆ. ಅವರು ಮೂರು ವಿಶೇಷ ತನಿಖಾ ತಂಡ ರಚಿಸಿದ್ದರು. ಇದೀಗ ಆರೋಪಿಗಳನ್ನು ಬಂಧಿಸಿ ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಪ್ರಕರಣದ ಹೆಚ್ಚಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ…

Read More

ಉಡುಪಿ: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ಬ್ಯಾಗ್‌ ಕಿತ್ತುಕೊಂಡು ಪರಾರಿಯಾಗಿದ್ದ ಕಳ್ಳನನ್ನು ರೈಲ್ವೆ ಪೊಲೀಸರು ದೂರು ದಾಖಲಾದ ನಾಲ್ಕೇ ತಾಸಿನೊಳಗೆ ಬಂಧಿಸಿದ್ದಾರೆ. ದಿಲ್ಲಿಯ ನಿವಾಸಿ ಸನ್ನಿ ಮಲ್ಹೋತ್ರಾ (30) ಬಂಧಿತ ಆರೋಪಿಯಾಗಿದ್ದಾನೆ. ಮಹಿಳೆಯ ಬ್ಯಾಗಿನಲ್ಲಿ ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳಿದ್ದವು. ಕಳ್ಳನ ಬಳಿ 6,75,000 ರೂ. ಮೌಲ್ಯದ 93.17 ಗ್ರಾಂ ತೂಕದ ನಾಲ್ಕು ಚಿನ್ನದ ಸರಗಳು, 3,700 ರೂ ನಗದು ಮತ್ತು ಎಟಿಎಂ ಕಾರ್ಡ್ ದೊರೆತಿದೆ. ನೇತ್ರಾವತಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಲ್ಯಾಣಿ ಬಾಲಕೃಷ್ಣನ್ ಎಂಬ ಮಹಿಳೆ ಬುಧವಾರ S7 ಕೋಚ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ಬ್ಯಾಗ್‌ ತೋಕೂರು ನಿಲ್ದಾಣದ ಬಳಿ ಕಳ್ಳತನವಾಗಿತ್ತು. ಈ ಕುರಿತು ಅವರು ರೈಲ್ವೆ ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ಪ್ರಾರಂಭಿಸಿದ ಪೊಲೀಸರಿಗೆ ಉಡುಪಿ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಯುವಕನೊಬ್ಬ ಅನುಮಾನಾಸ್ಪದವಾಗಿ ಕುಲಿತಿರುವುದು ಕಂಡು ಬಂದಿದೆ. ಅವನನ್ನು ಹಿಡಿದು ವಿಚಾರಣೆ ನಡೆಸಿದಾಗ ಆತನೇ ಕಳ್ಳ ಎಂದು ಖಾತರಿಯಾಗಿದ್ದು ಕದ್ದ ಚಿನ್ನಾಭರಣಗಳೂ ಅವನ ಬಳಿಯಿದ್ದವು. ಮಡಗಾಂವ್‌ಗೆ ಪ್ರಯಾಣಿಸಲು ಟಿಕೆಟ್‌ ತೆಗೆದಿದ್ದ ಆತ…

Read More

ಕಾಸರಗೋಡು : ಸ್ಕೂಟರ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಕಾಸರಗೋಡಿನ ಉಪ್ಪಳ ಸೋಂಗಲ್ ಬದರಿಯಾ ಜುಮಾ ಮಸೀದಿ ವ್ಯಾಪ್ತಿಯ ಮಹ್ಮದ್ ಎಂಬವರ ಪುತ್ರ ಇಬ್ರಾಹಿಂ ಖಲೀಲ್ (21) ಮೃತ ಯುವಕನಾಗಿದ್ದಾನೆ . ಇಬ್ರಾಹಿಂ ಖಲೀಲ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯಲ್ಲಿದ್ದರು.ಭಾನುವಾರ ರಾತ್ರಿ 8 ಗಂಟೆಗೆ ನಾರಾಯಣ ಮಂಗಲದಲ್ಲಿ ಸೀತಾಂಗೋಳಿ ಕಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಖಲೀಲ್ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ.ಖಲೀಲ್ ಸಹಿತ ಗಾಯಗೊಂಡಿರುವ ಮಣಿಮುಂಡ ಮೂಲದ ಮೊಹಮ್ಮದ್ ಮಹಸಿಲ್ (24) ಇನ್ನೂ ತೀವ್ರ ನಿಗಾ ಘಟಕದಲ್ಲಿದ್ದಾರೆ. ಮಹ್ಸಿಲ್ ಮಂಗಲ್ಪಾಡಿ ಪಂಚಾಯತ್ ಸದಸ್ಯ ಮಹ್ಮೂದ್ ಅವರ ಪುತ್ರರಾಗಿದ್ದು ಕುಂಬಳೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ.

Read More

ಕಾಪು: ತಾಲೂಕಿನ ಬೆಳಪು ಕೆಐಎಡಿಬಿ ಯೋಜನಾ ಪ್ರದೇಶದ ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಬೆಳಪು ವಸತಿ ಬಡಾವಣೆಯ ಕಸ್ತೂರಿ ಅವರ ಪುತ್ರ ಇನ್ನಂಜೆ ಎಸ್‌ ಎಸ್ ಆಂಗ್ಲಮಾಧ್ಯಮ ಶಾಲೆ ಏಳನೇ ತರಗತಿ ವಿದ್ಯಾರ್ಥಿ ವಿಶ್ವಾಸ್ ನಾಯಕ್ (11) ಮೃತ ಬಾಲಕ. ಗುರುವಾರ ಸಂಜೆ ಶಾಲೆಯಿಂದ ಬಂದ ವಿಶ್ವಾಸ್ ನೆರೆಮನೆಯ ಶಶಾಂಕ್ ಮತ್ತು ನೌಷಾದ್‌ ಜತೆಗೆ ಮನೆ ಹಿಂಬದಿಯಲ್ಲಿರುವ ಕೆರೆಗೆ ಈಜಲೆಂದು ತೆರಳಿದ್ದನು. ಈಜುತ್ತಿದ್ದ ವಿಶ್ವಾಸ್ ಮುಳುಗಿ ಅಸ್ವಸ್ಥಗೊಂಡಿದ್ದು ಅದನ್ನು ಗಮನಿಸಿದ ಸ್ನೇಹಿತರಿಬ್ಬರು ಮೇಲಕ್ಕೆ ಬಂದು ಮಹಿಳೆಯೊಬ್ಬರಿಗೆ ವಿಷಯ ತಿಳಿಸಿದರು. ಮಕ್ಕಳು ಮತ್ತು ಮಹಿಳೆಯರ ಬೊಬ್ಬೆ ಕೇಳಿ ಸ್ಥಳೀಯರು ಧಾವಿಸಿ ಬಂದು ಬಾಲಕನನ್ನು ಮೇಲಕ್ಕೆತ್ತಿದ್ದರು. ತತ್ ಕ್ಷಣ ಬಾಲಕನನ್ನು ಉಡುಪಿಯ ಆಸ್ಪತ್ರೆಗೆ ಕೊಂಡೊಯ್ಯಲು ಯತ್ನಿಸಲಾಯಿತಾದರೂ ದಾರಿಯಲ್ಲಿ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Read More

ಕಾರ್ಕಳ: ವೇಗವಾಗಿ ಸಾಗುತಿದ್ದ ವಾಹನ ಡಿಕ್ಕಿ ಹೊಡೆದು ಚಿರತೆಯೊಂದು ಸಾವಿಗೀಡಾದ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಕಾರ್ಕಳ ರಸ್ತೆಯ ಭಕ್ರೆ ಮಠ ಕ್ರಾಸ್ ಬಳಿ ಗುರುವಾರ ಸಂಜೆ ನಡೆದಿದೆ.ಕಾರ್ಕಳದಿಂದ ಮುದ್ರಾಡಿ ಕಡೆಗೆ ಅತ್ಯಂತ ವೇಗವಾಗಿ ಸಾಗುತ್ತಿದ್ದ ಇನ್ನೋವಾ ಕಾರು ಚಿರತೆಗೆ ಢಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ‌ನಡೆಸಿದರು. ಡಿಕ್ಕಿ ಹೊಡೆದು ಪರಾರಿಯಾದ ವಾಹನ ಪತ್ತೆಗೆ ಪೊಲೀಸರು ಯತ್ನಿಸಿದ್ದಾರೆ.

Read More

ಉಡುಪಿ : ಮಹಿಷ ಮಂಡಲವನ್ನಾಳಿದ ದ್ರಾವಿಡ ದೊರೆ ಮಹಿಷಾಸುರನ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಅಕ್ಟೋಬರ್ 15 ರಂದು ಉಡುಪಿಯಲ್ಲಿ ಮೊದಲ ಬಾರಿಗೆ ಮಹಿಷ ದಸರಾ ಹಾಗೂ ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬವನ್ನು ಆಚರಿಸಲಾಗುವುದು ಎಂದು ಉಡುಪಿ ಜಿಲ್ಲಾ ಅಂಬೇಡ್ಕರ್‌ಯುವ ಸೇನೆ ಜಿಲ್ಲಾಧ್ಯಕ್ಷ ಹರೀಶ್‌ ಕೋಟ್ಯಾನ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮಹಿಷಾಸುರ ಒಬ್ಬ ದುಷ್ಟ ಪ್ರಜಾಕಂಟಕ ಎಂಬಂತೆ ಚಿತ್ರಿಸಲಾಗಿದೆ. ಆದರೆ ಮಹಿಷಾಸುರ ಈ ದೇಶದ ಅಸುರ ಸಾಮ್ರಾಜ್ಯದ ನಾಯಕರಲ್ಲಿ ಅಗ್ರಗಣ್ಯನಾಗಿದ್ದ ಎಂದರು. ಅಕ್ಟೋಬರ್ 15ರಂದು ಬೆಳಗ್ಗೆ ಮಹಿಷ ರಾಜನ ಸ್ತಬ್ಧ ಚಿತ್ರವನ್ನು ಉಡುಪಿ ಅಜ್ಜರಕಾಡಿನ ಹುತಾತ್ಮ ಸ್ಮಾರಕದಿಂದ ಆದಿವುಡುಪಿಯ ಅಂಬೇಡ್ಕರ್‌ಭವನದವರೆಗೆ ಜಾಥಾ ನಡೆಸಲಾಗುತ್ತದೆ. ಬಳಿಕ ‘ಮಹಿಷಾಸುರ ಯಾರು’ ಎಂಬ ವಿಚಾರಸಂಕಿರಣವನ್ನು ಕಲಬುರಗಿಯ ಸಂಶೋಧಕ ಡಾ.ವಿಠಲ ವಗ್ಗನ್ ಕಾರ್ಯಕ್ರಮ ಉದ್ಘಾಟಿಸಿ ವಿಚಾರ ಮಂಡನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ದಲಿತ ಚಿಂತಕ ನಾರಾಯಣ ಮಣೂರು ಹಾಗೂ ಪ್ರಗತಿಪರ ಚಿಂತಕ ಶ್ರೀರಾಮ ದಿವಾಣ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

Read More

ಬೆಂಗಳೂರು : ಹನ್ನೆರಡು ವರ್ಷಗಳ ಹಿಂದೆ ನಡೆದ ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ರಾಜ್ಯ ಹೈಕೋರ್ಟ್ ತೀರ್ಪು ಪ್ರಕಟಿಸಿದೆ. ಐದು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಹೈಕೋರ್ಟ್ ನ್ಯಾಯಾಧೀಶರು ಇಂದು ತೀರ್ಪು ಪ್ರಕಟಿಸಿದ್ದಾರೆ. ಪ್ರೊ.ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪನ್ನು ವಾರದ ಹಿಂದೆ ರದ್ದುಗೊಳಿಸಿದ್ದ ಹೈಕೋರ್ಟ್ ಆರೋಪಿಗಳು ದೋಷಿಗಳೆಂದು ತೀರ್ಪು ನೀಡಿತ್ತು. ಡಾ.ರೇಣುಕಾ ಪ್ರಸಾದ್ ಕೆ.ವಿ. ಸೇರಿದಂತೆ ಏಳು ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ ಐದನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದು ಕೋರಿ ಸರಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಶೀಲಿಸಿದ ನ್ಯಾಯಮೂರ್ತಿ ಶ್ರೀನಿವಾಸ್, ಹರೀಶ್ ಕುಮಾರ್ ಅವರಿದ್ದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಸೆ.27ರಂದು ಈ ಆದೇಶ ನೀಡಿತ್ತು. ಡಾ.ರೇಣುಕಾಪ್ರಸಾದ್ ಹಾಗೂ ಇತರೆ ಐವರು ಆರೋಪಿಗಳು ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವುದು ಸಾಕ್ಷ್ಯಾಧಾರಗಳ ಸಮೇತ ದೃಢಪಟ್ಟಿದೆ ಎಂದು ತೀರ್ಮಾನಿಸಿದ್ದ ಹೈಕೋರ್ಟ್ ಎಲ್ಲರನ್ನೂ ಕೊಲೆ, ಒಳಸಂಚು,…

Read More

ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುದ್ದಿ ಸುಳ್ಳು, ವದಂತಿ ಹಬ್ಬಿಸದಂತೆ ತಿಮ್ಮಕ್ಕನವರ ದತ್ತುಪುತ್ರ ಉಮೇಶ್‌ ಮನವಿ ಮಾಡಿದರು. ತಿಮ್ಮಕ್ಕನವರು ನಿಧನರಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದೆಲ್ಲಾ ವದಂತಿ ನಂಬಬೇಡಿ ಎಂದಿದ್ದಾರೆ. ಸದ್ಯ ಸಾಲುಮರದ ತಿಮ್ಮಕ್ಕ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಿದರು. ಆಸ್ಪತ್ರೆಯಲ್ಲಿರುವ ತಿಮ್ಮಕ್ಕನವರ ವಿಡಿಯೋವನ್ನು ಉಮೇಶ್‌ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡು, ಅವರ ಆರೋಗ್ಯದ ಬಗ್ಗೆ ಹರಡುತ್ತಿರುವ ವದಂತಿಗೆ ಸ್ಪಷ್ಟ ಮಾಹಿತಿ ನೀಡಿದ್ದಾರೆ. ಎಲ್ಲಿಯೂ ಸುಳ್ಳು ಸುದ್ದಿ ಹರಡದಂತೆ ಈ ಮೂಲಕ ಮನವಿ ಮಾಡಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಲಳುತ್ತಿರುವ ತಿಮ್ಮಕ್ಕನವರು ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Read More

ಮಂಗಳೂರು: ಬೀದಿ ಬದಿ ವ್ಯಾಪಾರಸ್ಥರ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿ ಬೀದಿ ಬದಿ ವ್ಯಾಪಾರಸ್ಥರ ಸಂಘದ ವತಿಯಿಂದ ಮಂಗಳೂರು ಪಾಲಿಕೆಗೆ ಗುರುವಾರ ಮುತ್ತಿಗೆ ಹಾಕಲಾಯಿತು. ನೂರಾರು ಸಂಖ್ಯೆಯಲ್ಲಿ ಆಗಮಿಸಿದ ವ್ಯಾಪಾಸ್ಥರು ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಪ್ರಮಾಣ ಪತ್ರ ನೀಡುವಂತೆ ಒತ್ತಾಯಿಸಿದರು. ಬೀದಿ ಬದಿ ವ್ಯಾಪಾರದ ಗುರುತಿನ ಚೀಟಿ ಮತ್ತು ಪ್ರಮಾಣ ಪತ್ರ ನೀಡಿರುವ ಐಡಿ ಮುದ್ರಣಗೊಂಡಿದ್ದರೂ ವ್ಯಾಪಾರಸ್ಥರಿಗೆ ದೊರಕದೆ ಇರುವುದರಿಂದ ಬಿಡಿ ಬದಿ ವ್ಯಾಪಾರಸ್ಥರು ಆಕ್ರೋಶಗೊಂಡಿದ್ದಾರೆ. ಈ ವೇಳೆ ಮಾತನಾಡಿದ ಆಯುಕ್ತ ಆನಂದ್ ಸಿಎಲ್, ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಐಡಿ ಕಾರ್ಡ್ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ ಒಂದು ವೇಳೆ ಐಡಿ ಕಾರ್ಡ್‌ ವಿತರಿಸದಿದ್ದರೆ ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬರುವ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಹೋರಾಟಗಾರ ಬಿ.ಕೆ.‌ಇಮ್ತಿಯಾಜ್ ಎಚ್ಚರಿಕೆ ನೀಡಿದ್ದಾರೆ.

Read More