Author: main-admin

ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಮುಂದೆ ಹೋಗಿ ಎಂದು ಕಂಡೆಕ್ಟರ್ ಮುಂದೆ ತಳ್ಳಿದ ಎಂಬ ಕಾರಣಕ್ಕಾಗಿ ಬಸ್ ನಿಲ್ಲಿಸಿ ದಾಂಧಲೆ ಮಾಡಿದ ಘಟನೆ ಜೂ 17 ರಂದು ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಡೆದಿದ್ದು. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಂಡಕ್ಟರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಎಸ್ಪಿ ರಿಷ್ಯಂತ್ ಬೆಳ್ತಂಗಡಿಯಲ್ಲಿ ತಿಳಿಸಿದ್ದಾರೆ. ಮಂಗಳೂರಿನಿಂದ ಮೂಡಿಗೆರೆಗೆ ಸಂಚಾರಿಸುವ ಸರ್ಕಾರಿ ಬಸ್ಸಿಗೆ ಉಜಿರೆಯಲ್ಲಿ ವಿದ್ಯಾರ್ಥಿಗಳು ಹತ್ತಿದ್ದು ಈ ವೇಳೆ ನಿರ್ವಾಹಕ ವಿದ್ಯಾರ್ಥಿಗಳನ್ನು ಬಸ್ ಒಳಗೆ ಮುಂದೆ ಹೋಗಲು ಕೈ ಹಿಡಿದು ಮುಂದೆ ಕಳುಹಿಸುವ ಸಂದರ್ಭ ಬಸ್ ಕಂಡಕ್ಟರ್ ಹಾಗೂ ಕೆಲವು ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಅದಲ್ಲದೇ ಈ ವಿಚಾರವನ್ನು ವಿದ್ಯಾರ್ಥಿಗಳು ಚಾರ್ಮಾಡಿಯ ಯುವಕರಿಗೆ ತಿಳಿಸಿ ಬಸ್ ಅಡ್ಡ ಹಾಕುವಂತೆ ಸೂಚಿಸಿದ್ದಾರೆ. ಈ ವಿಚಾರವನ್ನು ಬಸ್ಸಿನಲ್ಲಿದ್ದವರು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ತಿಳಿಸಿದ್ದು ತಕ್ಷಣ ಧರ್ಮಸ್ಥಳ ಠಾಣಾ ಇನ್ಸ್ ಪೆಕ್ಟರ್ ಅನಿಲ್ ಕುಮಾರ್ ಚಾರ್ಮಾಡಿ ಚೆಕ್ ಪೋಸ್ಟ್…

Read More

ಕಾರ್ಕಳ : ತೀರ್ಥಹಳ್ಳಿಯ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಈಜಲು ತೆರೆಳಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿರುವ ಘಟನೆ ನಡೆದಿದೆ. ಪುನೀತ್ (38 ) ಮತ್ತು ಬಾಲಾಜಿ (36 ) ಮೃತಪಟ್ಟ ಉಪನ್ಯಾಸಕರು. ಇನ್ನು ಉಪನ್ಯಾಸಕರು ತಮ್ಮ ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದರು. ತೀರ್ಥಹಳ್ಳಿಯ ತೀರ್ಥಮತ್ತೂರು ಮಠದ ಸಮೀಪ ಇರುವ ಹೋಂ ಸ್ಟೇಯಲ್ಲಿ ತಂಗಿದ್ದರು ಎನ್ನಲಾಗಿದೆ. ಉಪನ್ಯಾಸಕರಾದ ಪುನೀತ್, ಬಾಲಾಜಿ ತೀರ್ಥಮತ್ತೂರು ಗ್ರಾಮಕ್ಕೆ ಬಂದಿದ್ದು,ತೀರ್ಥಮತ್ತೂರು ಮಠದ ಬಳಿಯ ಹೋಮ್ ಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ಅವರು ಈಜಾಡಲು ತುಂಗಾ ನದಿಗೆ ಇಳಿದ್ದರು. ನೀರಿನ ಸೆಳೆತಕ್ಕೆ ಸಿಲುಕಿದ ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ.

Read More

ಉಡುಪಿ: ದೇವಸ್ಥಾನದ ಬಾವಿಗೆ ಬಿದ್ದಿದ್ದ ಬೆಕ್ಕಿನ ಮರಿಯನ್ನು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವತಃ ಬಾವಿಗಿಳಿದು ರಕ್ಷಣೆ ಮಾಡಿದ್ದಾರೆ. ಜೂ.18ರಂದು ದೇವಸ್ಥಾನಕ್ಕೆ ಭೇಟಿ ನೀಡಿದಾಗ ಬೆಕ್ಕಿನ ಮರಿ 40 ಅಡಿ ಆಳದ ಬಾವಿಗೆ ಬಿದ್ದಿರುವುದನ್ನು ಕಂಡ ಸ್ವಾಮೀಜಿ ಹಗ್ಗಕ್ಕೆ ಬಕೆಟ್‌ ಕಟ್ಟಿ ಮೇಲೆತ್ತಲು ಪ್ರಯತ್ನಿಸಿದರಾದರೂ ಭಯಗೊಂಡ ಬೆಕ್ಕಿನ ಮರಿ ಬಕೆಟ್‌ನಲ್ಲಿ ಬರಲಿಲ್ಲ. ನಂತರ ಸ್ವಾಮೀಜಿಯವರೇ ಹಗ್ಗದ ಸಹಾಯದಿಂದ ಬಾವಿಗಿಳಿದು ಬೆಕ್ಕಿನ ಮರಿಯನ್ನು ಮೇಲೆತ್ತಿದರು. ಸ್ವಾಮೀಜಿಯವರ ಈ ನಡೆ ವ್ಯಾಪಕ ಪ್ರಶಂಸೆಗೆ ಪಾತ್ರವಾಗಿದೆ.

Read More

ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಅಲಂಗಾರಿನಲ್ಲಿ ಭಾನುವಾರ ಬೆಳಗ್ಗೆ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೂಡುಬಿದಿರೆ ಎಸ್.ಎನ್.ಎಂ ಪಾಲಿಟೆಕ್ನಿಕ್‌ನ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಪ್ರತಿಭಾನ್ವಿತ ವಿದ್ಯಾರ್ಥಿ ಸಾತ್ವಿಕ್ ಭಂಡಾರಿ(21) ಆತ್ಮಹತ್ಯೆ ಮಾಡಿಕೊಂಡಾತ. ಭಾನುವಾರ ಬೆಳಗ್ಗೆ ಸಾತ್ವಿಕ್‌ನನ್ನು ಆತನ ತಾಯಿ ಎಬ್ಬಿಸುವಾಗ ಕೋಪಗೊಂಡಿದ್ದು, ಕೆಲವು ನಿಮಿಷಗಳ ಬಳಿಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರೇಟ್‌ ವ್ಯಾಪ್ತಿಯ ಉಳ್ಳಾಲ ಠಾಣೆಯ 14 ಸಿಬ್ಬಂದಿ ಹಾಗೂ ಕೊಣಾಜೆ ಠಾಣೆಯ 8 ಮಂದಿ ಸಿಬ್ಬಂದಿಯನ್ನು ದಿಢೀರ್ ವರ್ಗಾವಣೆ ಮಾಡಿ ಮಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿ ಆದೇಶಿಸಿದೆ. ಉಳ್ಳಾಲ ಠಾಣಾ ಹೆಡ್ ಕಾನ್ ಸ್ಟೇಬಲ್ ಪ್ರವೀಣ್‌ ಶೆಟ್ಟಿ ಡಿ.ಬಿ, ಹಾಗೂ ಸಿಪಿಸಿಗಳಾದ ಅಕ್ಬರ್‌ ಯಡ್ರಾಮಿ, ರವಿ ಬಿಲ್ಲೂರು, ಮಾಣೇಕ್‌, ಬಲವಂತು ,ಚಿದಾನಂದ, ಪ್ರವೀಣ್‌ ಸಲೊಟಗಿ, ಸುರೇಶ್‌ ನಗ್ರಾಲ್‌, ಸಿದ್ದಪ್ಪ ಹಿರೇಕುಂಬಿ, ಸತೀಶ್‌ ಕುಮಾರ್, ಹನುಮ ನಾಯ್ಕ್‌, ಕೆಂಪರಾಜು, ಸಾಗರ್‌ ದೇವರಕತ್ತಿ,ದಾಕ್ಷಾಯಿಣಿ ಹಾಗೂ ಕೊಣಾಜೆ ಠಾಣಾ ಹೆಡ್ ಕಾನ್ ಸ್ಟೇಬಲ್ ರವಿಚಂದ್ರ ಹಾಗೂ ಸಿಪಿಸಿಗಳಾದ ಅನಿಲ್‌ ಕುಮಾರ್‌, ಚಂದ್ರಕಾಂತ್‌, ಅನಿಲ ಕುಮಾರ್‌ ವೈ.ಎಂ, ರತ್ನವ್ವ, ಪ್ರಿಯಾ ಬಿರಾದಾರ್‌, ಬರಮಬಡಿಗೇರ್‌, ಪುರುಷೋತ್ತಮ್‌ ಇವರನ್ನು ಕಮೀಷನರೇಟ್‌ ವ್ಯಾಪ್ತಿಯ ವಿವಿಧ ಠಾಣೆಗಳಿಗೆ ವರ್ಗಾವಣೆಗೊಳಿಸಲಾಗಿದೆ.

Read More

ಮಂಗಳೂರು; ಸುರತ್ಕಲ್ ನಲ್ಲಿ ಯುವಕನಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗೆ ಜಾಮೀನು ಮಂಜೂರಾಗಿದೆ. ಸುರತ್ಕಲ್ ಜನತಾ ಕಾಲನಿಯಲ್ಲಿ ಗುರುವಾರ ರಾತ್ರಿ ಕಾನ ನಿವಾಸಿ ಮುಹಮ್ಮದ್ ಶಾಫಿ(35)ಎಂಬ ಯುವಕನಿಗೆ ಚೂರಿಯಿಂದ ಇರಿಯಲಾಗಿತ್ತು. ಸ್ಥಳೀಯ ನಿವಾಸಿ ಯುವಕ ತ್ವಾಹಿರ್ (24) ಎಂಬಾತ ಚೂರಿಯಿಂದ ಇರಿದು ಪರಾರಿಯಾಗಿದ್ದ.  ಇದೀಗ ಆರೋಪಿಗೆ ಮಂಗಳೂರಿನ ಎರಡನೇ J M F C ಆರೋಪಿಗೆ ಷರತ್ತು ಬದ್ಧ ಜಾಮೀನನ್ನು ಶನಿವಾರ ನೀಡಿದೆ. ಆರೋಪಿ ಪರ ವಕೀಲರಾದ ಜೀಶಾನ್ ಅಲಿ ಸುರತ್ಕಲ್ ವಾದಿಸಿದ್ದು ತಾಜುದ್ದೀನ್ ಸಹಕರಿಸಿದ್ದರು.

Read More

ಮೂಡುಬಿದಿರೆ: ಮುಂಬೈ ಬಾಂದ್ರಾ ವೆಸ್ಟ್ ನ ಪಾಲಿ ಹಿಲ್‌ನ ಜನತಾ ಬಾರ್ ಆಯಂಡ್ ರೆಸ್ಟೋರೆಂಟ್ ಮಾಲಕ, ಮೂಡುಬಿದಿರೆ ಕಡಂದಲೆ ಪರಾರಿ ಮನೆತನದ ಲೋಕೇಶ್ ಶೆಟ್ಟಿ (67) ಶನಿವಾರ ನಿಧನ ಹೊಂದಿದರು. ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನಲ್ಲಿ ಬಿಎಸ್‌ಸಿ ಓದಿದ್ದ ಅವರು ಮುಂಬೈಯಲ್ಲಿ ತಂದೆ ಶಿಮಂತೂರು ಮಜಲಗುತ್ತು ಗೋಪಾಲ ಶೆಟ್ಟಿ ಅವರು ನಡೆಸುತ್ತಿದ್ದ ಹೋಟೆಲ್ ಉದ್ಯಮದಲ್ಲಿ ತೊಡಗಿಸಿಕೊಂಡು ಬಳಿಕ ಸ್ವಂತ ಹೋಟೆಲ್ ನಡೆಸುತ್ತಿದ್ದರು. ಮುಂಬೈನ ಖಾರ್ ವೆಸ್ಟ್ ನಲ್ಲಿ ವಾಸವಾಗಿದ್ದ ಅವರು ಮಹಾವೀರ ಕಾಲೇಜು ಬಳಿ ಕೃಷಿಯಲ್ಲೂ ತೊಡಗಿಸಿಕೊಂಡಿದ್ದರು. ಗುರು ಶ್ರೀ ಸತ್ಯಸಾಯಿಬಾಬಾ ಅವರ ಭಕ್ತನಾಗಿ, ಬಹಳ ಆಧ್ಯಾತ್ಮಿಕ ಜೀವಿಯಾಗಿ ಬದುಕಿದ್ದು , ದಾನಿಯಾಗಿ, ಬಹಳಷ್ಟು ಮಂದಿಗೆ ಉಪಕಾರಿಯಾಗಿದ್ದರು. ಮಹಾವೀರ ಕಾಲೇಜು ಹಳೆವಿದ್ಯಾರ್ಥಿ ಸಂಘ ಲೋಕೇಶ್ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿದೆ. ಮೃತರು ಪತ್ನಿ, ಪುತ್ರಿಯನ್ನು ಅಗಲಿದ್ದಾರೆ.

Read More

ಮೈಸೂರು: ಖೋಖೋ ಆಟದ ವೇಳೆ ವಿದ್ಯಾರ್ಥಿಯೊರ್ವ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹರದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶಶಾಂಕ್(13) ಮೃತ ವಿದ್ಯಾರ್ಥಿ. ಗ್ರಾಮದ ಎಚ್. ಎಸ್ ಪಾಪಣ್ಣ ಮತ್ತು ಕುಮಾರಿ ದಂಪತಿ ಪುತ್ರನಾದ ಮೃತ ಶಶಾಂಕ್ ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ. ಇನ್ನು ಶಾಲಾ ಅವಧಿ ಮುಗಿದ ನಂತರ ವಿದ್ಯಾರ್ಥಿಗಳು ಖೋಖೋ ಅಭ್ಯಾಸ ಮಾಡುತ್ತಿದ್ದರು. ಈ ವೇಳೆ ಶಶಾಂಕ್ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನ ಹೆಚ್​.ಡಿ ಕೋಟೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶಶಾಂಕ್ ಸಾವನ್ನಪ್ಪಿದ್ದಾನೆ. ಈ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಕಾಂಗ್ರೆಸ್ ನ ಗ್ಯಾರೆಂಟಿಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಪಡೆಯಲು ಇಂದಿನಿಂದಲೇ ಅರ್ಜಿ ಸಲ್ಲಿಕೆ ಆಂರಭಗೊಳ್ಳಲಿದೆ. ಗ್ರಾಹಕರು ಅರ್ಜಿ ಸಲ್ಲಿಕೆಗೆ ಸೈಬರ್ ಗಳಿಗೆ ಎಂದೇ ಹೋಗ ಬೇಕೆಂದಿಲ್ಲ,ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ ಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಗ್ರಾಹಕರು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಕೂಡ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಇದಲ್ಲದೇ ಗ್ರಾಮ ಪಂಚಾಯಿತಿ, ನಾಡಕಚೇರಿ ಅಥವಾ ಎಲ್ಲಾ ವಿದ್ಯುತ್ ಕಚೇರಿಗಳಲ್ಲಿ ಕೂಡ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಧಾರ್ ಕಾರ್ಡ್, ವಿದ್ಯುತ್ ಬಿಲ್ ಬೇಕು.ನೋಂದಣಿ ಮಾಡುವಾಗ ಆಧಾರ್ ಸಂಖ್ಯೆ, ವಿದ್ಯುತ್ ಬಿಲ್‌‌ನ ಖಾತೆ ಸಂಖ್ಯೆ ನೋಂದಾವಣಿ ಮಾಡಬೇಕಿದೆ. 200 ಯೂನಿಟ್ ಗಳವರೆಗೆ ಉಚಿತ ವಿದ್ಯುತ್ ಯೋಜನೆ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಸಮೀಪದ ವಿದ್ಯುತ್ ಕಚೇರಿಯನ್ನು ಸಂಪರ್ಕಿಸಬಹುದು. ಅಥವಾ ಸಹಾಯವಾಣಿ ಸಂಖ್ಯೆ 1912ಗೆ ಕರೆ ಮಾಡಿ ಪಡೆಯಬಹುದು. ಇದಲ್ಲದೆ ಮೊಬೈಲ್ ನಲ್ಲಿ ಸುಲಭವಾಗಿ ಅರ್ಜಿ…

Read More

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಿರು ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಶನಿವಾರದಂದು ನಡೆದಿದೆ. ಗಾಯಾಳುಗಳನ್ನು ಬೆಂಗಳೂರು ಆರ್.ಟಿ. ನಗರ ನಿವಾಸಿಗಳೆಂದು ಗುರುತಿಸಲಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದ ಎರಡು ವರ್ಷದ ಮಗುವೊಂದು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Read More