Author: main-admin

ಕಾರ್ಕಳ: ಬೋಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಬರೆಬೈಲು ಎಂಬಲ್ಲಿ ರಬ್ಬರ್ ಸ್ಮೋಕ್ ಹೌಸ್‌ ಬೆಂಕಿ ಬಿದ್ದು ರಬ್ಬರ್ ಶೀಟ್ ಗಳಿಗೆ ಹಾನಿಯಾದ ಘಟನೆ ನಡೆದಿದೆ. ರಬ್ಬರ್ ಶೀಟ್ ಮಾಡಲು ಹಾಕಿದ್ದ ಬೆಂಕಿ ಕಟ್ಟಡಕ್ಕೆ ತಗುಲಿ ಈ ಅಗ್ನಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇದರ ಪರಿಣಾಮವಾಗಿ 50 ರಬ್ಬರ್ ಶೀಟ್, ಕಟ್ಟಡದ ಮೇಲ್ಬಾವಣಿಗೆ ಹಾಕಿದ್ದ ಶೀಟ್‌ ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ. ಅದೃಷ್ಟವಶಾತ್ ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣವೇ ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಣಾಧಿಕಾರಿ ಬಿ. ಎಂ. ಸಂಜೀವ್, ಸಿಬ್ಬಂದಿ ಸುರೇಶ್, ಜಯ ಮೂಲ್ಯ ಕೇಶವ್, ಸುಜಯ್, ವಿನಾಯಕ್ ಪಾಲ್ಗೊಂಡು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Read More

ಬೆಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ. ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ್‌ ಶಾಸ್ತ್ರಿ, ನ್ಯಾ. ಅನಿಲ್‌ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು ಪ್ರವೀಣ್‌ ನೆಟ್ಟಾರು ಹತ್ಯೆ ಸಂಬಂಧ ಸಂಚಿಗೆ ಸಂಬಂಧಿಸಿ ಕೆ.ಇಸ್ಮಾಯಿಲ್‌ ಶಫಿ, ಕೆ.ಮೊಹಮ್ಮದ್‌ ಇಕ್ಬಾಲ್ ಹಾಗೂ ಎಂ.ಶಾಹೀದ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಕಳೆದ ವರ್ಷ ಜು. 26 ರಂದು ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಹಲವರ ಬಂಧನ ನಡೆದಿತ್ತು.

Read More

ನವದೆಹಲಿ: ಕೆಲ ತಿಂಗಳ ಹಿಂದಷ್ಟೇ ಉಜ್ವಲ್ ಯೋಜನೆಯ ಎಲ್ ಪಿಜಿ ಸಿಲಿಂಡರ್ ಸಬ್ಸಿಡಿ ದರವನ್ನು 200ರೂ.ಗೆ ಕೇಂದ್ರ ಸರ್ಕಾರ ಹೆಚ್ಚಳ ಮಾಡಿ ಸಿಹಿಸುದ್ದಿ ನೀಡಿತ್ತು. ಇಂದು ಮತ್ತೆ 200 ರೂಗಳಿಂದ 300 ರೂ.ಗಳಿಗೆ ಹೆಚ್ಚಳ ಮಾಡಿ ಭರ್ಜರಿ ಗುಡ್ ನ್ಯೂಸ್ ಅನ್ನು ಉಜ್ವಲ್ ಯೋಜನೆ ಫಲಾನುಭವಿಗಳಿಗೆ ನೀಡಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ಸಬ್ಸಿಡಿ ಮೊತ್ತವನ್ನು ಪ್ರತಿ ಎಲ್ಪಿಜಿ ಸಿಲಿಂಡರ್ಗೆ 200 ರೂ.ಗಳಿಂದ 300 ರೂ.ಗೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಬುಧವಾರ ಕ್ಯಾಬಿನೆಟ್ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು. ರಕ್ಷಾ ಬಂಧನದ ಸಂದರ್ಭದಲ್ಲಿ, ಎಲ್ಪಿಜಿ ಬೆಲೆಯಲ್ಲಿ 200 ರೂ.ಗಳ ಕಡಿತವನ್ನು ಘೋಷಿಸಲಾಯಿತು, ಇದು ಎಲ್ಪಿಜಿ ದರವನ್ನು 1100 ರೂ.ಗಳಿಂದ 900 ರೂ.ಗೆ ಇಳಿಸಲು ಕಾರಣವಾಯಿತು. ಇಂದು, ಉಜ್ವಲ ಯೋಜನೆಯ ಫಲಾನುಭವಿಗಳು ಈಗ 200 ರೂ.ಗಳ ಬದಲು 300 ರೂ.ಗಳ ಸಬ್ಸಿಡಿಯನ್ನು ಪಡೆಯುವ ಹೊಸ ಘೋಷಣೆಯನ್ನು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

Read More

ಕರ್ನಾಟಕ ರಾಜ್ಯದ ಗ್ರಾಮೀಣ ಭಾಗಗಳ ಜನತೆಗೆ ಹೆಚ್ಚಿನ ಅನುಕೂಲ ಒದಗಿಸುವ ನಿಟ್ಟಿನಲ್ಲಿ ನಾಡಕಚೇರಿಗಳಲ್ಲಿ, ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ 44 ಸರ್ಕಾರಿ ಸೇವೆಗಳು ಇನ್ನು ಮುಂದೆ ಗ್ರಾಮ ಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಲಭ್ಯವಾಗಲಿದೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸೇವೆಗಳ ಜೊತೆಯಲ್ಲಿ ಇನ್ನು ಮುಂದೆ ಸಾರ್ವಜನಿಕರು ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಸೇವೆಗಳ ಜೊತೆಗೆ ಆದಾಯ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ಹಾಗೂ ಆಧಾರ್ ಸೇವೆಗಳ ಸೌಲಭ್ಯವನ್ನು ಬಾಪೂಜಿ ಸೇವಾ ಕೇಂದ್ರಗಳಲ್ಲಿ ರಾಜ್ಯದ ಜನ ಪಡೆಯಬಹುದಾಗಿದೆʼ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. ʼಬಹುತೇಕ ಸರ್ಕಾರಿ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗುವುದರಿಂದ ಬೇರೆ ಬೇರೆ ಇಲಾಖೆಗಳ ಸರ್ಕಾರಿ ಕಚೇರಿಗಳಿಗೆ ಹೋಗುವ ಅವಶ್ಯಕತೆ ಕಡಿಮೆಯಾಗಲಿದೆ. ಜನಪರವಾಗಿ ಜನರಿಗೆ ಸುಲಲಿತವಾಗಿ ಸೇವೆಗಳನ್ನು ಒದಗಿಸಲು ನಮ್ಮ ಪ್ರಾಮಾಣಿಕ ಪ್ರಯತ್ನ…

Read More

ಬೆಳ್ತಂಗಡಿ: ಬೆಳ್ತಂಗಡಿಯ ನೆರಿಯ ಗ್ರಾಮ ಪಂಚಾಯತ್ ನ ದ್ವಿತೀಯ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯಲ್ಲಿ ಪಕ್ಷದ ಆದೇಶವನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ನೆರಿಯ ಗ್ರಾಮ ಪಂಚಾಯತ್ ಮೂವರು ಸದಸ್ಯರನ್ನ ಅಮಾನತು ಮಾಡಲಾಗಿದೆ. ಬಿಜೆಪಿ ಪಕ್ಷದ ಜವಾಬ್ದಾರಿಯನ್ನು ಹೊಂದಿರುವ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ವಸಂತಿ ಕಡ್ಡಿಬಾಗಿಲು ಮನೆ( ನೆರಿಯ ಗ್ರಾಮ ಪಂಚಾಯತ್ ಹಾಲಿ ಅಧ್ಯಕ್ಷೆ), ನೆರಿಯ ಗ್ರಾಮದ ಬೂತ್ ಸಮಿತಿ ಅಧ್ಯಕ್ಷರಾದ ಕುಶಾಲ ಕಡ್ಡಿಬಾಗಿಲು ಮನೆ( ಹಾಲಿ ನೆರಿಯ ಗ್ರಾಮ ಪಂಚಾಯತ್ ಸದಸ್ಯೆ), ನೆರಿಯ ಗ್ರಾಮ ಬೂತ್ ಸಮಿತಿ ಅಧ್ಯಕ್ಷರಾದ ಸಚಿನ್ ಅಣಿಯೂರು ಕುಲೆನಾಡಿ ಮನೆ(ಹಾಲಿ ನೆರಿಯ ಗ್ರಾಮ ಪಂಚಾಯತ್ ಸದಸ್ಯ) ಇವರನ್ನು ತಕ್ಷಣದಿಂದ ಅನ್ವಯವಾಗುವಂತೆ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಹುದ್ದೆ ಹಾಗೂ ಜವಾಬ್ದಾರಿಗಳಿಂದ ಮುಕ್ತಗೊಳಿಸಿರುವುದಾಗಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದೆ.

Read More

ವಿಟ್ಲ: ಮಾರ್ಬಲ್‌ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಒಡಿಯೂರು ಸಮೀಪ ನಡೆದಿದೆ. ಲಾರಿ ಪಲ್ಟಿಯಾಗಿ ಕಾರ್ಮಿಕರ ಕೈ-ಕಾಲು ಗಂಭೀರ ಗಾಯಗೊಂಡ ಗಾಯಾಳುಗಳನ್ನು ನಾಲ್ಕು ಆಂಬ್ಯುಲೆನ್ಸ್‌ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ ನಡೆಸುತ್ತಿದ್ದಾರೆ. ಮಾರ್ಬಲ್ ಅನ್ ಲೋಡ್ ಗಾಗಿ ಲಾರಿಯನ್ನು ರಿವರ್ಸ್ ತೆಗೆಯುವ ವೇಳೆ ಬ್ರೇಕ್ ಫೈಲ್ ಆಗಿ ಲಾರಿ ಪಲ್ಟಿಯಾಗಿ ನೀರಿನ ತೊಟ್ಟಿಗೆ ಬಿದ್ದು ಲಾರಿಯಲ್ಲಿದ್ದ ಉತ್ತರ ಭಾರತದ ಮೂಲದ ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ

Read More

ಮಂಗಳೂರು: ಮನೆಯಲ್ಲಿದ್ದ ಇಬ್ಬರು ಹಿರಿಯ ಮಹಿಳೆಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ನಿನ್ನೆ ಸಂಜೆ ನಡೆದಿದೆ. ಮೃತರನ್ನು ಸುಂದರಿ ಶೆಟ್ಟಿ (80), ಲತಾ ಭಂಡಾರಿ (70) ಎಂದು ಗುರುತಿಸಲಾಗಿದೆ. ಘಟನೆ ವಿವರ ಮೃತ ಲತಾ ಭಂಡಾರಿಯ ಪತಿ ಜಗನ್ನಾಥ್ ಭಂಡಾರಿ ಹಾಗೂ ಅಕ್ಕ ಸುಂದರಿ ಶೆಟ್ಟಿಯ ಜೊತೆ ವಾಸವಾಗಿದ್ದರು. ಎಂದಿನಂತೆ ನಿನ್ನೆಯೂ ಜಗನ್ನಾಥ್ ಭಂಡಾರಿ ಕೆಲಸದ ನಿಮಿತ್ತ ಹೊರ ಹೋಗಿದ್ದರು. ಸಂಜೆ ವೇಳೆ ಮನೆಗೆ ಬಂದಾಗ ಬಾಗಿಲು ಮುಚ್ಚಿಕೊಂಡಿತ್ತು. ಅನುಮಾನಗೊಂಡ ಅವರು ಕಿಟಕಿಯಿಂದ ನೋಡಿದಾಗ ಇಬ್ಬರೂ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇಬ್ಬರೂ ಒಂದೇ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಅನುಮಾನ ಕಾಡುತ್ತಿದ್ದು, ಪ್ರಾಥಮಿಕ ಮೂಲಗಳ ಪ್ರಕಾರ ಕೌಟುಂಬಿಕ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು : ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ. ಉದ್ಯಮಿಗಳ ನಿವಾಸ ಹಾಗೂ ಸಂಸ್ಥೆಗಳು, ಮನೆ, ಕಛೇರಿ, ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಮನೆ ಕಛೇರಿಯಲ್ಲಿರುವ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.

Read More

ಬಂಟ್ವಾಳ: ಕಾರು ಚಾಲಕನೋರ್ವನ ಅಜಾಗರೂಕತೆಯ ಚಾಲನೆಯಿಂದ ಬೈಕ್ ಸವಾರನೊರ್ವನಿಗೆ ಡಿಕ್ಕಿಯಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನ ಕೈಕಂಬ ತಲಪಾಡಿ ಎಂಬಲ್ಲಿ ಅ.2 ರಂದು ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನಡೆದಿದೆ. ಬೈಕ್ ಸವಾರ ಶಿವಪ್ರಸಾದ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಶಿವಪ್ರಸಾದ್ ಮತ್ತು ಸಹಸವಾರ ತಿಲಕ್ ಪ್ರಸಾದ್ ಅವರು ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬಿಸಿರೋಡು ಕಡೆಯಿಂದ ಬರುತ್ತಿದ್ದ ಕಾರು ಬಿಸಿರೋಡು ತಲಪಾಡಿ ಕೆಎಸ್.ಆರ್.ಟಿ.ಸಿ‌.ಡಿಪೋ ಎದುರುಗಡೆ ಡಿಕ್ಕಿ ಹೊಡೆದಿದೆ.ಕಾರಿನ ಚಾಲಕ ಜಾಕೀರ್ ಹುಸೈನ್ ಅವರು ಅಜಾಗರೂಕತೆಯಿಂದ ಬಲಬದಿ ಅಂದರೆ ಮತ್ತೆ ವಾಪಸು ಬಿಸಿರೋಡು ಕಡೆಗೆ ಹೋಗುವ ಉದ್ದೇಶದಿಂದ ತಲಪಾಡಿ ಡಿವೈಡರ್ ನಲ್ಲಿ ಬಲಬದಿಗೆ ತಿರುಗಿಸಿದಾಗ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ರಸ್ತೆಗೆ ಪಲ್ಟಿಯಾಗಿದೆ, ಸವಾರ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದು, ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಮಂಗಳೂರು : ಮಂಗಳೂರು ನಗರ ಶಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬಂದಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸೋಮನ ಗೌಡ ಚೌದರಿ (31) ಮೃತ ದುರ್ದೈವಿಯಾಗಿದ್ದಾರೆ. ವಯರ್ ಲೆಸ್ ಇನ್ಸ್‌ಪೆಕ್ಟರ್ ವಾಹಕ್ಕೆ ಚಾಲಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸೋಮನ ಗೌಡ ಮೂಲತಾ ಬಿಜಾಪುರ ಜಿಲ್ಲೆಯವರಾಗಿದ್ದಾರೆ. ಇನ್ಸ್‌ಪೆಕ್ಟರ್‌ ಗೆ ಡೆಂಗ್ಯೂ ಜ್ವರ ಭಾದಿಸಿದ್ದರಿಂದ ನಗರದ ಫಳ್ನಿರ್‌ ನಲ್ಲಿರುವ ಖಾಸಗಿ ಆಸ್ಪತ್ರೆಗೆ ಮಂಗಳವಾರ ಬೆಳಿಗ್ಗೆ ಕರೆದುಕೊಂಡು ಹೋಗಿದ್ದರು. ಅಧಿಕಾರಿಯನ್ನು ಆಸ್ಪತ್ರೆ ಬಳಿ ಇಳಿಸಿ ವಾಹನ ಪಾರ್ಕ್ ಮಾಡಲು ಹೋದ ಸಂದರ್ಭ ಸೋಮನಗೌಡ ಏಕಾಎಕಿ ಕುಸಿದು ಬಿದ್ದಿದ್ದಾರೆ ಕೂಡಲೇ ಸ್ಥಳೀಯರು ಧಾವಿಸಿ 112 ಗೆ ಕರೆ ಮಾಡಿ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲು ಕೊಂಡುಹೋಗುವಾಗ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ವಿವಾಹಿತರಾಗಿರುವ ಸೋಮನಗೌಡ ಕಳೆದ 7 ವರ್ಷಗಳಿಂದ ನಗರ ಶಶಸ್ತ್ರ ದಳದಲ್ಲಿ ಸೇವೆ ಸಲಿಸುತ್ತಿದ್ದಾರೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಮಂಗಳೂರು ನಗರ ಪೊಲೀಸ್ ಇಲಾಖೆಯಲ್ಲಿ ಸಿಬಂದಿ ಇತ್ತಿಚಿನ ದಿನಗಳಲ್ಲಿ ಅಕಾಲಿಕಾ ಮರಣಕ್ಕೆ…

Read More