ಬಂಟ್ವಾಳ : ಮನೆಯಿಂದ ನಾಪತ್ತೆಯಾಗಿದ್ದ ಬಂಟ್ವಾಳದ ನಿವಾಸಿ ನೇಹಾ ಇದೀಗ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ನಾಪತ್ತೆಯಾಗಿದ್ದ ನೇಹಾ ಕುರಿತಂತೆ ಬಂಟ್ವಾಳ ಠಾಣೆಯಲ್ಲಿ ಆಕೆಯ ಅಣ್ಣ ಮಿಸ್ಸಿಂಗ್ ಕೇಸ್ ದಾಖಲಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಬೈಪಾಸ್ ಬಿ.ಕಸಬಾ ಗ್ರಾಮದ ಲೆಕ್ಕಸಿರಿ ಪಾದೆ ನಿವಾಸಿ ದಿ.ರಮೇಶ್ ಸಾಲಿಯಾನ್ ಅವರ ಪುತ್ರಿ ಕುಮಾರಿ ನೇಹಾ ಅವರು ನಾಪತ್ತೆಯಾಗಿ ಇದೀಗ ಪತ್ತೆಯಾದ ಯುವತಿಯಾಗಿದ್ದಾಳೆ.ಆಕೆಯ ಅಣ್ಣ ನೀಡಿದ ದೂರಿನಂತೆ ನೇಹಾಗೆ ಮದುವೆ ಮಾಡುವ ಬಗ್ಗೆ ಸಂಬಂಧ ಹುಡುಕುವ ವೇಳೆ ನೇಹಾ ನಾನು ಸದ್ಯ ಮದುವೆ ಆಗುವುದಿಲ್ಲ ವಿದ್ಯಾಭ್ಯಾಸ ಮುಂದುವರಿಸುವ ಇಂಗಿತ ವ್ಯಕ್ತಪಡಿಸಿದ್ದಳು. ಈಕೆ ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು ಅಲ್ಲಿಗೆ ಎಂದು ಮನೆಯಿಂದ ಹೋದವಳು ಮನೆಗೆ ವಾಪಾಸು ಬರದೆ ನಾಪತ್ತೆಯಾಗಿದ್ದಳು. ಅದೇ ದಿನ ಈಕೆಯ ಚಿಕ್ಕಮ್ಮಳ ಮೊಬೈಲ್ ಗೆ ಮೆಸೇಜ್ ಮಾಡಿ ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ ನಾನು ಬೆಂಗಳೂರಿಗೆ ಹೋಗುವುದಾಗಿ ತಿಳಿಸಿದ್ದಳು. ಇದಾದ ಬಳಿಕ ಎರಡು…
Author: main-admin
ಮಂಗಳೂರು: ಪ್ರಯಾಣಿಕರಿಂದ ನಿಗದಿತ ದರಕ್ಕಿಂತ ಅಧಿಕ ದರ ವಸೂಲಿ ಮಾಡಿದ ಆರೋಪದ ಮೇರೆಗೆ ಆಟೋರಿಕ್ಷಾ ಚಾಲಕರ ವಿರುದ್ಧ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಕಳೆದ ವಾರ ವಿಶೇಷ ಕಾರ್ಯಾಚರಣೆ ನಡೆಸಿ ನಗರದಲ್ಲಿ 120ಕ್ಕೂ ಅಧಿಕ ಆಟೋರಿಕ್ಷಾಗಳನ್ನು ಪರಿಶೀಲಿಸಿದ್ದಾರೆ. ಅದರಲ್ಲಿ 7 ಆಟೋರಿಕ್ಷಾ ಚಾಲಕರು ಮೀಟರ್ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡಿರುವುದು ಕಂಡು ಬಂದಿದ್ದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ನಿರಂತರವಾಗಿ ನಡೆಯಲಿದೆ ಎಂದು ಪೊಲೀಸ್ ಆಯುಕ್ತ ಕುಲ್ ದೀಪ್ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ
ಬೆಂಗಳೂರು: ‘ಸೌದಿ ಅರೇಬಿಯಾದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿಯೊಬ್ಬರ ಪ್ರಕರಣದಲ್ಲಿ ತನಿಖೆಗೆ ಸೂಕ್ತ ಸಹಕಾರ ನೀಡುತ್ತಿಲ್ಲ ಎಂಬ ಮಂಗಳೂರು ಪೊಲೀಸರ ಆಕ್ಷೇಪವನ್ನು ಗಂಭೀರವಾಗಿ ಪರಿಗಣಿಸಬೇಕಾಗುತ್ತದೆ ಮತ್ತು ಭಾರತದಲ್ಲಿ ಫೇಸ್‌ಬುಕ್ ಕಾರ್ಯಚರಣೆ ಬಂದ್ ಮಾಡಲು ಆದೇಶ ಹೊರಡಿಸಬೇಕಾಗುತ್ತದೆ’ ಎಂದು ಹೈಕೋರ್ಟ್ ಕಠಿಣ ಎಚ್ಚರಿಕೆ ನೀಡಿದೆ. ಈ ಸಂಬಂಧ ಮಂಗಳೂರಿನ ಬಿಕರನಕಟ್ಟೆ ನಿವಾಸಿ ಶೈಲೇಶ್ ಕುಮಾರ ಪತ್ನಿ ಕವಿತಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು. ‘ಫೇಸ್‌ಬುಕ್ ಸಂಸ್ಥೆಯು ಒಂದು ವಾರದಲ್ಲಿ ಘಟನೆಯ ಕುರಿತು ಸೂಕ್ತ ಮಾಹಿತಿ ಒಳಗೊಂಡ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಭಾರತೀಯ ಪ್ರಜೆ ಸುಳ್ಳು ಪ್ರಕರಣದಲ್ಲಿ ವಿದೇಶದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಆತನ ಬಿಡುಗಡೆಗೆ ಯಾವೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂಬ ಬಗ್ಗೆ ಕೇಂದ್ರ ಸರ್ಕಾರ ಅಗತ್ಯ ಮಾಹಿತಿ ನೀಡಬೇಕು. ಮಂಗಳೂರು ಪೊಲೀಸರೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮರ್ಪಕ ತನಿಖೆ ಕೈಗೊಂಡು ವರದಿ ಸಲ್ಲಿಸಬೇಕು’ ಎಂದು ನ್ಯಾಯಪೀಠ ನಿರ್ದೇಶಿಸಿದೆ. ವಿಚಾರಣೆಯನ್ನು ಇದೇ 22ಕ್ಕೆ…
ಬಳ್ಳಾರಿ;ಕರ್ನಾಟಕದ ಬಳ್ಳಾರಿಯಲ್ಲಿ ನಕಲಿ ಗುರುತಿನಡಿಯಲ್ಲಿ ವಾಸಿಸುತ್ತಿದ್ದ 33 ವರ್ಷದ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಾಯಕನಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಬಂಧಿಸಿರುವ ಬಗ್ಗೆ ವರದಿಯಾಗಿದೆ. ಬಂಧಿತ ಆರೋಪಿ ನಿಜಾಮಾಬಾದ್ ನಲ್ಲಿ ಸಂಚು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದ್ದು ಕಳೆದ ವರ್ಷ ಸೆಪ್ಟೆಂಬರ್ ನಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಬಂಧನ ನಿಷೇಧಿತ ಸಂಘಟನೆಯಾದ PFI ಯ ನಾಯಕರು ಮತ್ತು ಕಾರ್ಯಕರ್ತರು ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲು ನಡೆಸಿದ ಕ್ರಿಮಿನಲ್ ಪಿತೂರಿಗೆ ಸಂಬಂಧಿಸಿದೆ ಎನ್ನಲಾಗಿದೆ. 33 ವರ್ಷದ ಆರೋಪಿ ನಂದ್ಯಾಲದ ನೊಸಾಮ್ ಮೊಹಮ್ಮದ್ ಯೂನಸ್ ಅಲಿಯಾಸ್ ಯೂನಸ್ ಬಂಧಿತ. ಈತ ತನ್ನ ಅಣ್ಣನ ಇನ್ವರ್ಟರ್ ವ್ಯವಹಾರದಲ್ಲಿ ಕೆಲಸ ಮಾಡುತ್ತಿದ್ದ. 2022 ರ ಸೆಪ್ಟೆಂಬರ್‌ನಲ್ಲಿ ಎನ್‌ಐಎ ಅಧಿಕಾರಿಗಳು ಅವರ ಮನೆಯನ್ನು ಶೋಧಿಸಿದಾಗ, ಅವನು ತನ್ನ ಹೆಂಡತಿಯೊಂದಿಗೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದನು. ಬಳಿಕ ಬಳ್ಳಾರಿಯಲ್ಲಿ ಎಡ್ರಸ್ ಬದಲಿಸಿ ವಾಸಿಸುತ್ತಿದ್ದ ಎನ್ನಲಾಗಿದೆ. ಆರೋಪಿ ಯೂನಸ್ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಪಿಎಫ್ ಐ ಸಂಘಟನೆಯ ಸದಸ್ಯರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದ್ದ.…
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರ್ ಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜಕೀಯ ಬ್ಯಾನರ್ ಗಳ ನಡುವೆ ಇದೀಗ ಯುವಕನೊಬ್ಬನ ಫಸ್ಟ್ ನೈಟ್ ಬ್ಯಾನರ್ ಕೂಡ ಎದ್ದು ನಿಂತಿದೆ. ಕದ್ರಿ ಪೊಲೀಸ್ ಠಾಣೆಯ ಕಂಪೌಂಡ್ ಗೋಡೆಗೆ ತಾಗಿಕೊಂಡಂತೆ ಈ ಬ್ಯಾನರ್ ಹಾಕಲಾಗಿದೆ. ಯುವಕನೊಬ್ಬನ ಮದುವೆಯ ಮೊದಲ ರಾತ್ರಿಯ ಸಂಭ್ರಮ ಎಂದು ಮತ್ತೊಂದು ಹೋರ್ಡಿಂಗ್ಸ್ ಹಾಕಲಾಗಿದೆ. ರಾತ್ರಿಯಿಡೀ ಹೋರಾಡಿ ಗೆದ್ದು ಬಾ ಎಂದು ಗೆಳೆಯರು ಹಾರೈಸಿ ಸರಕಾರಿ ಜಾಗದಲ್ಲಿ ದೊಡ್ಡ ಸಾಧನೆ ಎಂಬಂತೆ ಹೋರ್ಡಿಂಗ್ ಹಾಕಿದ್ದಾರೆ. ಸರಕಾರಿ ಜಾಗದಲ್ಲಿ ಯಾವುದೇ ಅನುಮತಿ ಇಲ್ಲದೆ ತಮಗೆ ಇಷ್ಟಬಂದಂತೆ ಅಶ್ಲೀಲ ಸಂದೇಶ ಸಾರುವ, ಮುಜುಗರ ತರುವ ಜಾಹೀರಾತು ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಜೊತೆಗೆ ಮಳೆಗೆ ಚಳಿಗೆ ಕಚೇರಿಯಲ್ಲಿ ಕುಳಿತಿರುವ ಅಧಿಕಾರಿಗಳು ಮೈಚಳಿ ಬಿಟ್ಟು ಇಂತಹ ಅನಧಿಕೃತ, ಮತ್ತು ಅಶ್ಲೀಲ ಬ್ಯಾನರ್‌ಗಳ ವಿರುದ್ದ ದಂಡ ಅಥವಾ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರಿನ ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.
ಪುತ್ತೂರು: ಸರ್ಕಾರದ ಶಕ್ತಿ ಯೋಜನೆಯಲ್ಲಿ ಪ್ರಿಯಕರನನ್ನು ನೋಡಲು ಬಂದ ಪ್ರಿಯತಮೆ ಹುಬ್ಬಳಿಯಿಂದ ಪುತ್ತೂರಿಗೆ ಬಂದು ಪ್ರಿಯಕರನೊಂದಿಗೆ ನಾಪತ್ತೆಯಾದ ಘಟನೆ ನಡೆದಿದೆ. 11 ತಿಂಗಳ ಮಗವನ್ನು ಬಿಟ್ಟು ಪ್ರಿಯಕರನನ್ನ ನೋಡಲು ವಿವಾಹಿತೆ ಪುತ್ತೂರಿಗೆ ಬಂದಿದ್ದಾಳೆ. ಈ ಹಿಂದೆಯೇ ಇಬ್ಬರ ನಡುವೆ ಪ್ರೀತಿ ಶುರುವಾಗಿತ್ತು, ಆದರೆ ಯುವತಿಗೆ ಬೇರೆ ಯುವಕನ ಜೊತೆ ಮದುವೆಯಾಗಿದ್ದು, ಮದುವೆಯಾದ ಬಳಿಕವೂ ತನ್ನ ಪ್ರಿಯಕರನ ಜೊತೆ ಒಡನಾಟದಲ್ಲಿದ್ದಳು ಎನ್ನಲಾಗಿದೆ. ಕೋಡಿಂಬಾಡಿ ಸಮೀಪದಲ್ಲಿ ತೋಟದ ಕೆಲಸ ಮಾಡುತ್ತಿದ್ದು, ಗಂಡನಲ್ಲಿ ಆಧಾರ್ ಲಿಂಕ್ ಮಾಡಿ ಬರುತ್ತೇನೆಂದು ಮನೆಯಿಂದ ಮಹಿಳೆ ಎಸ್ಕೇಪ್ ಆಗಿದ್ದಾರೆ, ಆಧಾರ್ ಕಾರ್ಡ್ ಬಳಸಿ ಬಸ್ಸಿನಲ್ಲಿ ಫ್ರೀಯಾಗಿ ಪ್ರಯಾಣಿಸಿದ್ದಾಳೆ. ಈ ಘಟನೆ ತಿಳಿದ ಎರಡೂ ಮನೆಯವರು ಮಹಿಳೆ ಹಾಗೂ ಆಕೆಯ ಪ್ರಿಯಕರನಿಗಾಗಿ ಹುಡುಕಾಟ ಮಾಡಿದ್ದಾರೆ. ಇವರಿಬ್ಬರನ್ನ ಹುಡುಕಿಕೊಂಡು ಬಂದ ಕುಟುಂಬಸ್ಥರಿಗೆ ದೈರ್ಯ ಹೇಳಿದ ಗ್ರಾಮ ಪಂಚಾಯತ್ ಸದಸ್ಯ ಜಯಪ್ರಕಾಶ್ ಬದಿನಾರ್, ಪುತ್ತೂರಿಗೆ ಬಂದು ಪ್ರಿಯಕರನ ಜೊತೆ ಪರಾರಿಯಾದ ಮಹಿಳೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಟವರ್ ಲೊಕೇಶನ್ ಮೂಲಕ ಪತ್ತೆ ಹಚ್ಚಿದಾಗ ಪುತ್ತೂರಿನಿಂದ…
ಬಂಟ್ವಾಳ; ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ತಿಳಿಸಿದ ಯುವತಿಯೋರ್ವಳು ಅ ಬಳಿಕ ಯಾವುದೇ ಸುದ್ದಿಯಿಲ್ಲದೆ ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿ.ಮೂಡ ಕಸ್ಬಾ ಗ್ರಾಮದ ಲೆಕ್ಕಸಿರಿ ಪಾದೆ ನಿವಾಸಿ ರಮೇಶ್ ಸಾಲಿಯಾನ್ ಅವರ ಮಗಳು ನೇಹಾ (22) ಕಾಣೆಯಾದ ಯುವತಿ. ಮಂಗಳೂರಿನ ಸೇಪ್ಟಿ ಇನಸ್ಟುಮೆಂಟ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಯುವತಿಗೆ ಮನೆಯವರು ಮದುವೆ ಮಾಡುವ ಉದ್ದೇಶದಿಂದ ಸಂಬoಧ ನೋಡಲು ಮುಂದಾದಾಗ ಮದುವೆ ಸದ್ಯ ನನ್ನ ಒಪ್ಪಿಗೆ ಇಲ್ಲ ಎಂದು ಹೇಳಿದ್ದಲ್ಲದೆ,ನಾನು ಹೆಚ್ಚಿನ ವಿದ್ಯಾಭ್ಯಾಸ ಮಾಡಬೇಕಾಗಿದೆ ಹೇಳಿದ್ದಳು. ಅ ಬಳಿಕ ಮೇ.27 ರಂದು ನೇಹ ಎಂದಿನoತೆ ಮಂಗಳೂರಿಗೆ ಕೆಲಸಕ್ಕೆಂದು ಹೋದವಳು ಅದೇ ದಿನ ಸಂಜೆ 4 ಗಂಟೆಗೆ ನೇಹಾಳ ಚಿಕ್ಕಮ್ಮನ ಮೊಬೈಲ್ ಪೋನ್ ಗೆ ಮೆಸೇಜ್ ಮಾಡಿ ನಾನು ಬೆಂಗಳೂರಿಗೆ ಹೋಗುವುದಾಗಿ ಮೆಸೇಜ್ ಮಾಡಿ ಮೊಬೈಲ್ ಸ್ವಿಚ್ ಆಪ್ ಮಾಡಿದ್ದಳು. ಮೇ. 29 ರಂದು ಮತ್ತು ಜೂನ್ 6 ರಂದು ಒಟ್ಟು ಎರಡು ಪತ್ರ ಮನೆಯವರಿಗೆ ಬಂದಿದ್ದು…
ಮಂಗಳೂರು; ಗೆಳತಿಯ ಖಾಸಗಿ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಯುವಕನ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ರಂಜಿತ್ ಶೆಟ್ಟಿ ಎಂಬಾತನ ವಿರುದ್ಧ ದೂರು ದಾಖಲಾಗಿದೆ. ಈತ ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಎಂಬಾಕೆಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದ. ಇವರ ನಡುವೆ ಸ್ನೇಹ ಬೆಳೆದು, ಅನೋನ್ಯತೆಯಿಂದ ಇದ್ದರು.ಈ ವೇಳೆ ಯುವತಿಯ ಮೊಬೈಲ್‌ನಿಂದ ಖಾಸಗಿ ಫೋಟೋ, ವೀಡಿಯೋವನ್ನು ರಂಜಿತ್ ತನ್ನ ಮೊಬೈಲ್‌ಗೆ ಕಳುಹಿಸಿದ್ದನು. ಈ ವಿಚಾರ ತಿಳಿದ ಯುವತಿ ರಂಜಿತ್‌ನಿಂದ ದೂರವಾಗುತ್ತಿದ್ದಂತೆ ಆಕೆಯ ಖಾಸಗಿ ಪೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾನೆ. ಜೊತೆಗೆ ಅವಾಚ್ಯ ಶಬ್ದಗಳಿಂದ ಬೈದು, ಆಕೆಯಿಂದ ಪ್ರತಿ ತಿಂಗಳು 20,000 ರೂ.ನಂತೆ ಹಣ ಪಡೆದುಕೊಂಡಿದ್ದ. ಜೊತೆಗೆ ಆಕೆ ನಿರ್ವಹಿಸುತ್ತಿದ್ದ ಸಂಸ್ಥೆಯ ಇ-ಮೇಲ್ ಹಾಗೂ ಆಕೆಯ ಸಹೋದ್ಯೋಗಿಗಳ ಮೊಬೈಲ್‌ಗೆ ಖಾಸಗಿ ಪೋಟೋ ಮತ್ತು ವಿಡೀಯೋಗಳನ್ನು ಕಳುಹಿಸಿ ಮಾನಸಿಕ ಹಿಂಸೆಯನ್ನು ನೀಡಿದ್ದಾನೆ. ಹಾಗೂ ಆಕೆಯ ತಾಯಿ ಮನೆಗೆ ತೆರಳಿ “ನಿಮ್ಮ ಮಗಳಿಗೆ…
ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಮತ್ತೊಂದು ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಆರೋಪಿ ಶಾರೀಕ್ ಗೆ ಪಾಕಿಸ್ತಾನದ ಉಗ್ರ ಸಂಘಟನೆಗಳ ಜೊತೆಗೆ ಸಂಪರ್ಕ ಹೊಂದಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ಕುಕ್ಕರ್ ಬಾಂಬ್ ಪ್ರಕರಣ ಬಗ್ಗೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮಹತ್ವದ ಮಾಹಿತಿಯೊಂದು ಸಿಕ್ಕಿದ್ದು, ಒಡಿಸ್ಸಾದ ಟಾಸ್ಕ್ ಪೋರ್ಸ್ ನಿಂದ ಪ್ರೀತಂಕಾರ್ ಬಂಧನದ ಬೆನ್ನಲ್ಲೇ ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಶಾರೀಕ್ ಗೆ ಐಸೀಸ್ ಏಜೆಂಟ್ ಗಳ ಜೊತೆಗೆ ನಂಟು ಹೊಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಒಡಿಸ್ಸಾ ಮೂಲದ ಪ್ರೀತಂಕಾರ್ ಎಂಬಾತ ಶಾರೀಕ್ ಗೆ ಸಿಮ್ ಪೂರೈಕೆ ಮಾಡಿದ್ದ. ಮಾಹಿತಿ ತಿಳಿದ ಒಡಿಸ್ಸಾದ ಸ್ಪೆಷಲ್ ಟಾಸ್ಕ್ ಪೋರ್ಸ್ ಪ್ರೀತಂಕಾರ್ ನನ್ನು ಬಂಧಿಸಿ ತೀವ್ರ ವಿಚಾರಣೆ ಕೈಗೊಂಡಿದ್ದರು. ಈ ವೇಳೆ ಪಾಕಿಸ್ತಾನದ ಐಎಸ್ ಐ ಏಜೆಂಟ್ ಒಬ್ಬನಿಗೆ ಪ್ರೀತಂಕಾರ್ ಸಿಮ್ ಕಾರ್ಡ್ ಹಾಗೂ ಡೆಬಿಟ್ ಕಾರ್ಡ್ ಪೂರೈಸಿದ್ದ ಎನ್ನುವ ವಿಚಾರ ತಿಳಿದುಬಂದಿದೆ.
ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಟಿತ ಐಟಿಬಿಟಿ ಕಂಪನಿಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಕಂಪನಿ ಸೇರಿದಂತೆ ಪೊಲೀಸರಿಗೆ ಆತಂಕ ಸೃಷ್ಟಿಸಿದೆ. ಬೆಂಗಳೂರಿನ ಇಕೋ ಸ್ಪೇಸ್‌ನ ಐಬಿಡಿಓ ಕಂಪನಿಗೆ ಬಾಂಬ್ ಹಾಕುವುದಾಗಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದಾನೆ. ನಿಮ್ಮ ಕಂಪನಿಯಲ್ಲಿ ಬಾಂಬ್ ಇಟ್ಟಿದ್ದೀವಿ. ಸ್ವಲ್ಪ ಸಮಯದಲ್ಲೇ ಬ್ಲಾಸ್ಟ್ ಆಗುತ್ತೆ ಅಂತಾ ಹೆದರಿಸಿದ್ದಾನೆ. ಕೂಡಲೇ ಕಂಪನಿಯಿಂದ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಬೆಳ್ಳಂದೂರು ಪೊಲೀಸರು, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯದಳ ಸ್ಥಳಕ್ಕೆ ಸ್ಥಳಕ್ಕೆ ದೌಡಾಯಿಸಿದ್ದಾರೆ. ಐಎಸ್‌ಡಿ ಅಧಿಕಾರಿಗಳ ತಂಡವೂ ಸ್ಥಳಕ್ಕೆ ಧಾವಿಸಿದ್ದು, ತಪಾಸಣೆ ನಡೆಸಲಾಗ್ತಿದೆ. ಹಳೆ ಉದ್ಯೋಗಿಯಿಂದಲೇ ಬೆದರಿಕೆ ಕರೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಬೆಂಗಳೂರಿನ ಇಕೋ ಸ್ಪೇಸ್‌ನ ಐಬಿಡಿಓ ಹಳೆ ಉದ್ಯೋಗಿಯಿಂದಲೇ ಅನ್ನೋದು ಗೊತ್ತಾಗಿದೆ. ಕೆಲವೇ ದಿನಗಳ ಹಿಂದೆ ಕೆಲಸ ಬಿಟ್ಟಿದ್ದ ವ್ಯಕ್ತಿಯಿಂದ ಹುಸಿ ಬಾಂಬ್ ಕರೆ ಮಾಡಿರುವುದು ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಪೊಲೀಸರು ಕಂಪೆನಿಯ ಮಾಜಿ ಉದ್ಯೋಗಿಗಾಗಿ ಹುಡುಕಾಟ ನಡೆಸಿದ್ದಾರೆ.










