ವಿಟ್ಲ: ಪೇಟೆಯ ಮೂರು ಕಡೆ ಸರಣಿ ಕಳ್ಳತನ ನಡೆದ ಘಟನೆ ನಡೆದಿದೆ. ಬೊಬ್ಬೆಕೇರಿಯ ಕಾವೇರಿ ಬಾರ್, ಮೇಗಿನ ಪೇಟೆಯ ಬಿಗ್ ಬೇಕ್ಸ್ ಬೇಕರಿ ಹಾಗೂ ಮಂಗಳಪದವಿನಲ್ಲಿ ಅಂಗಡಿಯಲ್ಲಿ ಕಳ್ಳತನ ನಡೆದ ಘಟನೆ ಬೆಳಕಿಗೆ ಬಂದಿದೆ. ಕಾವೇರಿ ಬಾರ್‌ನಲ್ಲಿ ಸುಮಾರು 40,000 ರೂ. ನಗದು, ಸ್ಪೀಕರ್, ಮದ್ಯದ ಕೆಲವು ಬಾಟಲ್‌ಗಳನ್ನು ಕೊಂಡೊಯ್ದು ಕಳ್ಳರು, ಸ್ವಲ್ಪ ಮದ್ಯದ ಬಾಟಲಿಗಳನ್ನು ಹೊರಗೆ ಇಟ್ಟು ತೆರಳಿದ್ದಾರೆ. ಮೇಗಿನ ಪೇಟೆಯ ಬಿಗ್ ಬೇಕ್ಸ್ ಬೇಕರಿಯಲ್ಲಿ ಹರಕೆ ಡಬ್ಬಿ, ಚಾಕಲೇಟ್, ಮೊಬೈಲ್, ನಗದು ದೋಚಿದ್ದಾರೆ.
Author: main-admin
ಮಂಗಳೂರು: ಅನಧಿಕೃತ ಕೃಷಿ ಕೀಟನಾಶಕಗಳನ್ನು ಮಾರಾಟ ಮಾಡುತ್ತಿದ್ದ ಮುಲ್ಕಿ ಹೋಬಳಿಯ ಕಾರ್ನಾಡು ಗ್ರಾಮ ಸನ್ ಕೆಮಿಕಲ್ ಕಂಪೆನಿಯ ಮಳಿಗೆ ಮೇಲೆ ಇತ್ತೀಚೆಗೆ ಕೃಷಿ ಜಾರಿದಳದ ಮೈಸೂರು ವಿಭಾಗದ ಉಪ ಕೃಷಿ ನಿರ್ದೇಶಕ ನಾಗರಾಜ್ ರೆಡ್ಡಿ, ಮಂಗಳೂರು ತಾಲೂಕು ಹಾಗೂ ಜಾರಿದಳ ಸಹಾಯಕ ಕೃಷಿ ನಿರ್ದೇಶಕ ವೀಣಾ ಕೆ.ಆರ್., ಮೈಸೂರು ವಿಭಾಗದ ಕೃಷಿ ಅಧಿಕಾರಿ ದಿವಾಕರ್ ಹಾಗೂ ಷಣ್ಮುಖ ನೇತೃತ್ವದ ತಂಡ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ 1.19 ಲಕ್ಷ ರೂ. ಮೌಲ್ಯದ ಕಾಪರ್ ಸಲ್ಫೆ„ಡ್ ಹಾಗೂ ಮೈಲುತುತ್ತು ಕೀಟನಾಶಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೃಷಿ ಜಾರಿದಳ ಹಾಗೂ ಎಲ್ಲ ತಾಲೂಕಿನ ಗುಣ ನಿಯಂತ್ರಣ ಪರಿವೀಕ್ಷಕರ ದಳವು ಅನಧಿಕೃತವಾಗಿ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ಕೀಟನಾಶಕಗಳನ್ನು ದಾಸ್ತಾನು ಮತ್ತು ಮಾರಾಟ ಮಾಡುತ್ತಿರುವವರ ಬಗ್ಗೆ ಪತ್ತೆ ಹಚ್ಚಿ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಿದೆ ಎಂದು ಮಂಗಳೂರು ತಾಲೂಕು ಸಹಾಯಕ ಕೃಷಿ ನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು: ಸೋಲಾಪುರದ ಈರುಳ್ಳಿ ವ್ಯಾಪಾರಿಯೋರ್ವ ಮಂಗಳೂರಿನ ವ್ಯಾಪಾರಿಗೆ 75 ಲಕ್ಷ ರೂ. ವಂಚಿಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ಮಂಗಳೂರಿನ ಅಬ್ದುಲ್ ರಹಿಮಾನ್ ಬಾವಾ ವಂಚನೆಗೊಳಗಾದವರು. ಅವರಿಗೆ ಕೃಷಿ ಉತ್ಪನ್ನಗಳ ವ್ಯವಹಾರಗಳ ಮೂಲಕ 2021ರಲ್ಲಿ ಮಂಗಳೂರು ಮತ್ತು ಚೆನ್ನೈಯಲ್ಲಿ ಈರುಳ್ಳಿ ವ್ಯಾಪಾರ ಮಾಡುವ ಮಹಾರಾಷ್ಟ್ರ ಸೋಲಾಪುರದ ಕುಂಡಲಿಕ್ ಜುಂಬಾರ್ ಖಂಡಾಗಲೆ ಎಂಬಾತನ ಪರಿಚಯವಾಗಿ ಆತ್ಮೀಯರಾಗಿದ್ದರು. ಅನಂತರ ಕುಂಡಲಿಕ್ ಜುಂಬಾರ್ ಖಂಡಾಗಲೆ ವ್ಯವಹಾರದಲ್ಲಿ ಒಳ್ಳೆಯ ಹೂಡಿಕೆ ಅವಕಾಶ ಇದೆ ಎಂಬುದಾಗಿ ನಂಬಿಸಿ ಅಬ್ದುಲ್ ರಹಿಮಾನ್ ಬಾವಾ ಅವರಿಂದ 75 ಲ.ರೂ.ಗಳನ್ನು ವರ್ಗಾಯಿಸಿಕೊಂಡು ಅನಂತರ ವಾಪಸ್ ನೀಡದೆ ವಂಚಿಸಿದ್ದಾನೆ ಎಂದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಮೀನುಗಾರಿಕೆಗೆಂದು ತೆರಳಿದ್ದ ಆಂಧ್ರ ಪ್ರದೇಶ ಮೂಲದ ಕಾರ್ಮಿಕ ಮೈಲಾಪಿಳ್ಳೆ ನಲಂನಾಯ್ಡು (43) ನಾಪತ್ತೆಯಾಗಿದ್ದಾರೆ. ಉಳ್ಳಾಲ ಕೋಟೆಪುರದಲ್ಲಿ ವಾಸ ವಾಗಿದ್ದ ಅವರು ಸೆ. 23ರಂದು ಅಪರಾಹ್ನ 3 ಗಂಟೆಗೆ ಮಂಗಳೂರು ದಕ್ಷಿಣ ದಕ್ಕೆಯಿಂದ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಆಗ ಕಾಲು ಜಾರಿ ನೀರಿಗೆ ಬಿದ್ದಿದ್ದು ಉಳಿದ ಕೆಲಸಗಾರರು ನೀರಿಗೆ ಹಾರಿ ಹುಡುಕಾಟ ನಡೆಸಿದರು. ಅನಂತರ ಅಗ್ನಿಶಾಮಕ ದಳದವರು ಹುಡುಕಾಡಿದರೂ ಪ್ರಯೋಜನವಾಗಿಲ್ಲ. 5 ಅಡಿ ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು ಬಿಳಿ ಮತ್ತು ನೀಲಿಬಣ್ಣದ ಅಂಗಿ, ಕಪ್ಪು ಬಣ್ಣದ ಬರ್ಮುಡ ಧರಿಸಿದ್ದರು. ತೆಲುಗು ಭಾಷೆ ಮಾತನಾಡುತ್ತಾರೆ. ಮಾಹಿತಿ ದೊರೆತವರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ(0824-2220518) ಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಕಡಬ: ಶಾಲೆಯ ಬಳಿ ತಂಬಾಕು ಮಾರಾಟ ನಿಷೇದಿಸಿದ್ದರೂ ಅಂಗಡಿಯಲ್ಲಿ ನಿಯಮ ಮೀರಿ ಮಾರಾಟ ಮಾಡುತ್ತಿದ್ದ ಬಗ್ಗೆ ಬಿಳಿನೆಲೆ ಕೈಕಂಬ ಶಾಲಾ 3ನೇ ತರಗತಿ ವಿದ್ಯಾರ್ಥಿನಿ ಆಯೋರ ಎಂಬಾಕೆ ಪತ್ರಿಕೆಯೊಂದರ ಓದುಗರ ವಿಭಾಗಕ್ಕೆ ಬರೆದ ಪತ್ರವನ್ನು ಪತ್ರಿಕಾ ಕಛೇರಿಯವರು ಪತ್ರವನ್ನು ಮುಖ್ಯಮಂತ್ರಿ ಕಚೇರಿಗೆ ತಲುಪಿಸಿದ ಕೆಲವೇ ಸಮಯದಲ್ಲಿ ಬಿಳಿನೆಲೆ ಕೈಕಂಬ ಶಾಲಾ ಬಳಿ ತಂಬಾಕು ಮಾರಾಟ ಮಾಡುತ್ತಿದ್ದ ಅಂಗಡಿಗೆ ಕಡಬ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ ಘಟನೆ ನಡೆದಿದೆ. ಧಾರ್ಮಿಕ ಕೇಂದ್ರಗಳ ಬಳಿ ತಂಬಾಕು ನಿಷೇಧ ಮಾಡಿದ ವಿಚಾರ ಪತ್ರಿಕೆಯೊಂದರ ಮುಖಪುಟದಲ್ಲಿ ಪ್ರಕಟವಾಗಿತ್ತು. ಇದನ್ನು ಓದಿದ ಬಾಲಕಿ ಶಾಲೆಯಿಂದ 100 ಮೀಟರ್ ದೂರದವರೆಗೆ ತಂಬಾಕು ಮಾರಾಟ ಮಾಡಬಾರದೆಂದು ತಿಳಿದುಕೊಂಡಿದ್ದಾಳೆ. ಶಾಲೆಯ ಬಳಿ ತಂಬಾಕು ವಸ್ತುಗಳ ಪೊಟ್ಟಣ ಬಿದ್ದಿರುವುದನ್ನು ಪೋಷಕರಲ್ಲಿ ಹೇಳಿಕೊಂಡಿದ್ದಾಳೆ. ಈ ಸಂದರ್ಭದಲ್ಲಿ ಪೋಷಕರು ಹೇಳಿದಂತೆ ಬಾಲಕಿ ಪತ್ರಿಕಾ ಕಛೇರಿಗೆ ಪತ್ರ ಬರೆದಿದ್ದಾಳೆ. ಪತ್ರಿಕಾ ಕಛೇರಿಯವರು ಆ ಪತ್ರವನ್ನು ಸಿ.ಎಂ. ಕಛೇರಿಗೆ ಕಳಿಸಿದ್ದಾರೆ. ಪತ್ರ ತಲುಪಿದ ಕೆಲವೇ ತಾಸಿನಲ್ಲಿ ಅಂಗಡಿಗೆ ದಾಳಿ…
ಚಿಕ್ಕಮಗಳೂರು : ಮನೆಯಲ್ಲಿ ಬುದ್ದಿವಾದ ಹೇಳಿದ್ದಕ್ಕೆ ಪದವಿ ವಿಧ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ.ಮೃತ ಯುವತಿಯನ್ನು ಶೃಂಗೇರಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಸುರಕ್ಷಾ (19) ಎಂದು ಗುರುತಿಸಲಾಗಿದೆ. ಸುರಕ್ಷಾ ಗಣೇಶ ಹಬ್ಬಕ್ಕೆಂದು ಮನೆಗೆ ತೆರಳಿದ್ದಾಗ, ಪೋಷಕರು ಹಲವು ವಿಷಯದಲ್ಲಿ ಬುದ್ದಿವಾದ ಹೇಳಿದ್ದರು. ಇದರಿಂದ ಮನನೊಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಶೃಂಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಎ. ವ್ಯಾಸಂಗ ಮಾಡುತ್ತಿದ್ದ ಸುರಕ್ಷಾ ಸಚ್ಚಿದಾನಂದಪುರದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಉಳಿದು ಕಾಲೇಜಿಗೆ ತೆರಳುತ್ತಿದ್ದಳು. ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋದಾಗ ಪೋಷಕರು ಹಲವು ವಿಚಾರಗಳಲ್ಲಿ ಬುದ್ಧಿವಾದ ಹೇಳಿದ್ದರು. ಇದರಿಂದ ಮನನೊಂದ ಸುರಕ್ಷಾ ಮನೆಯಲ್ಲಿ ವಿಷ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಳು. ಕೂಡಲೇ ಆಕೆಯನ್ನು ಕೊಪ್ಪ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ…
ಸುರತ್ಕಲ್: ಫಾರ್ಚುನರ್ ಕಾರೊಂದು ಟಿಪ್ಪರ್ ಮತ್ತು ಮರಕ್ಕೆ ಡಿಕ್ಕಿ ಹೊಡೆದು ಸಂಪೂರ್ಣ ನಜ್ಜುಗುಜ್ಜಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹೊಸಬೆಟ್ಟುವಿನ ಜ್ಯೋತಿ ಸರ್ವಿಸ್ ಸ್ಟೇಷನ್ ಬಳಿ ನಡೆದಿದೆ. ತಮಿಳುನಾಡು ನೊಂದಣಿಯ ಕಾರು ಇದಾಗಿದ್ದು, ಪೊಲೀಸರ ಮತ್ತು ಸಾರ್ವಜನಿಕರು ಸಹಕಾರದಿಂದ ಎರಡು ಗಂಟೆಯ ಪರಿಶ್ರಮದಿಂದ ಕಾರಿನ ಒಳಗೆ ಇದ್ದ ಶವವನ್ನು ಹೊರತೆಗೆಯಲಾಯಿತು ಎಂದು ತಿಳಿದು ಬಂದಿದೆ. ಇನ್ನು ಕಾರಿನಲಿದ್ದ ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕಾಸರಗೋಡು: ದುಬೈ ನಿಂದ ಊರಿಗೆ ಹೊರಟಿದ್ದ ಬದಿಯಡ್ಕದ ಯುವಕನೋರ್ವ ನಾಪತ್ತೆಯಾದ ಬಗ್ಗೆ ಬದಿಯಡ್ಕ ಠಾಣಾ ಪೊಲೀಸರಿಗೆ ದೂರು ನೀಡಲಾಗಿದೆ.ವಿದ್ಯಾಗಿರಿ ಮುನಿಯೂರಿನ ಮುಹಮ್ಮದ್ ಸಿದ್ದೀಕ್ (28) ನಾಪತ್ತೆಯಾದವರು. ಸಿದ್ದೀಕ್ ಸೆ.25 ರಂದು ಊರಿಗೆ ತಲಪುವುದಾಗಿ ಮನೆಯವರಿಗೆ ತಿಳಿಸಿದ್ದರು. ಅಂದು ಕೋಜಿಕ್ಕೋಡ್ ವಿಮಾನ ನಿಲ್ದಾಣ ದಲ್ಲಿ ಬಂದಿಳಿದ ಸಿದ್ದೀಕ್ ಮನೆಗೆ ತಲಪಿಲ್ಲ. ಮೊಬೈಲ್ ಗೆ ಕರೆ ಮಾಡಿದಾಗ ಸ್ವಿಚ್ ಆಫ್ ಆಗಿರುವುದು ಕಂಡು ಬಂದಿದೆ. ಅಂದು ರಾತ್ರಿ ಸಿದ್ದೀಕ್ ನನ್ನು ವಿಚಾರಿಸಿ ತಂಡವೊಂದು ಮನೆಗೆ ಬಂದಿದ್ದು, ಕೋಜಿ ಕ್ಕೋಡ್ ವಿಮಾನ ನಿಲ್ದಾಣ ದಲ್ಲಿ ಬಳಿಕ ಯಾರಾದರೂ ಅಪಹರಿಸಿದ್ದಾರೆ ಅಥವಾ ಬೇರೆ ಎಲ್ಲಿಗಾದರೂ ತೆರಳಿರ ಬಹುದೇ ಎಂಬ ಸಂಶಯ ಉಂಟಾಗಿದೆ. ತಂದೆ ಯೂಸಫ್ ನೀಡಿ ದೂರಿನಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಬೆಂಗಳೂರು: ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದಾರೆ. ಅಲೋಕ್ ಕುಮಾರ್ ಅವರನ್ನು ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಲಾಗಿದೆ.ಕರ್ನಾಟಕ ಹೌಸಿಂಗ್ ಸೊಸೈಟಿಯ ಎಂಡಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ರಾವ್ ಅವರಿಗೆ ಮುಂಬಡ್ತಿ ಭಾಗ್ಯ ನೀಡಿದೆ. ರಾವ್ ಅವರನ್ನು ಡಿಜಿಪಿಯಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ಅಲೋಕ್ ಕುಮಾರ್ ಅವರನ್ನು ಮೂರು ತಿಂಗಳ ಹಿಂದೆಯಷ್ಟೇ ಕಾನೂನು ಮತ್ತು ಸುವ್ಯವಸ್ಥೆಯಿಂದ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಇದೀಗ ಮತ್ತೆ ವರ್ಗಾವಣೆ ಮಾಡಲಾಗಿದೆ.
ಉಳ್ಳಾಲ:(ಮಂಗಳೂರು) ಉಳ್ಳಾಲದ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ನಡೆಸಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನ ಉಳ್ಳಾಲ ಠಾಣಾಧಿಕಾರಿ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪರದ ಸಮೀರ್ ಬಂಧಿತರು. ಇಬ್ಬರು ಆರೋಪಿಗಳು ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ನಿಷೇಧಿತ 14 ಗ್ರಾಂ ತೂಕದ ಎಂಡಿಎಂಎ ಮಾರಾಟ ಮಾಡಲು ಯತ್ನಿಸುವ ಸಂದರ್ಭ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಎರಡು ದಿನಗಳ ಹಿಂದಷ್ಟೇ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಬಳಿಯಿಂದ ಓರ್ವ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದರು. ಬಂಧಿತರಿಂದ 14 ಗ್ರಾಂ ಎಂಡಿಎಂಎ ,ಮೊಬೈಲ್ ಫೋನ್‌ಗಳು ಸೇರಿದಂತೆ ಒಟ್ಟು ಒಂದು ಲಕ್ಷ ಹದಿನೆಂಟುವರೆ ಸಾವಿರ ಮೌಲ್ಯದ ಸೊತ್ತುಗಳನ್ನ ವಶಪಡಿಸಿ ಕೊಳ್ಳಲಾಗಿದೆ.ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ, ಪಿಎಸ್‌ಐ ಶೀತಲ್ ಹಾಗೂ ಸಿಬ್ಬಂದಿ ಅಕ್ಬರ್, ಅಶೋಕ್, ಮಂಜು, ವೆಂಕಟೇಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.










