Author: main-admin

ಪುತ್ತೂರು : ಪುತ್ತಿಲ ಪರಿವಾರ ಕಚೇರಿ ಮುಂಭಾಗ ತಲವಾರು ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಶದಲ್ಲಿರುವ ಹಿಂದೂ ಜಾಗರಣ ವೇದಿಕೆಯ ದಿನೇಶ್ ಪಂಜಿಗ ಸೇರಿದಂತೆ 9 ಮಂದಿಗೆ ನವೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 10ರಂದು ಮಧ್ಯಾಹ್ನ ಪುತ್ತಿಲ ಪರಿವಾರದ ಕಚೇರಿ ಮುಂಭಾಗ ಕಾರಿನಲ್ಲಿ ಬಂದ ಜಾಗರಣ ವೇದಿಕೆಯ ದಿನೇಶ್ ಪಂಜಿಗ ಮತ್ತು ಅವರ ತಂಡ ತಲವಾರು ಪ್ರದರ್ಶಿಸಿ ಪುತ್ತಿಲ ಪರಿವಾರದ ಮನೀಶ್ ಕುಲಾಲ್ ಗೆ ಬೆದರಿಕೆ ಹಾಕಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಪೊಲೀಸರು ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ, ಭವಿತ್, ಮನ್ವಿತ್, ಜಯಪ್ರಕಾಶ್, ಚರಣ್, ಮನೀಶ್, ವಿನೀತ್ ಸೇರಿದಂತೆ ಇಬ್ಬರು ಅಪ್ರಾಪ್ತ ಬಾಲಕರ ಬಂಧಿಸಿದ್ದರು. ಇದೀಗ ನ್ಯಾಯಲಯ ಎಲ್ಲಾ ಆರೋಪಿಗಳಿಗೆ ನವೆಂಬರ್ 15 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Read More

ಕಾಸರಗೋಡು: ಕಾಸರಗೋಡು ಜಿಲ್ಲೆಯ ಅನಂತಪುರದ ಅನಂತಪದ್ಮನಾಭಸ್ವಾಮಿ ದೇವಸ್ಥಾನದಲ್ಲಿ ಬಬಿಯಾ ಮೊಸಳೆ ಸಾವನ್ನಪ್ಪಿದ ಒಂದು ವರ್ಷ ಒಂದು ತಿಂಗಳ ಬಳಿಕ ಮತ್ತೊಂದು ಮೊಸಳೆ ಪ್ರತ್ಯಕ್ಷಗೊಂಡಿದೆ. ದೇವಸ್ಥಾನದ ಕಲ್ಯಾಣಿಯಲ್ಲಿ ದೇವಮೊಸಳೆ ಅಂತಾನೆ ಇತಿಹಾಸ ಹೊಂದಿದ್ದ ಬಬಿಯಾ ಎನ್ನುವ ಮೊಸಳೆ 75 ವರ್ಷಗಳ ಕಾಲ ಪೂಜಿಸಲ್ಪಟ್ಟಿದ್ದು, 2022 ರ ಅಕ್ಟೋಬರ್ 9 ರಂದು ಮೃತಪಟ್ಟಿತ್ತು. ಇದೀಗ ಒಂದು ವರ್ಷ ಒಂದು ತಿಂಗಳ ಬಳಿಕ ಸದೃಢ ಮೊಸಳೆಯೊಂದು ಪ್ರತ್ಯಕ್ಷವಾಗಿರುವುದು ಭಕ್ತರಲ್ಲಿ ಭಾರೀ ಅಚ್ಚರಿಗೆ ಕಾರಣವಾಗಿದೆ. ಅನಂತಪದ್ಮನಾಭ ದೇವಸ್ಥಾನದಲ್ಲಿ ಮೊಸಳೆ ದೇವರ ಮೊಸಳೆಯಾಗಿದ್ದು, ಬಬಿಯಾ ಹೆಚ್ಚಿನ ಸಮಯವನ್ನು ದೇವಸ್ಥಾನದ ಎಡ ಭಾಗದಲ್ಲಿರುವ ಗುಹೆಯಲ್ಲಿ ನೆಲೆಸುತ್ತಿತ್ತು. ಮಧ್ಯಾಹ್ನದ ಪೂಜೆಯ ನಂತರ ನೈವೇದ್ಯ ಇಟ್ಟು ಮೊಸಳೆಯನ್ನು ಕರೆಯಲಾಗುತ್ತಿತ್ತು. ಹೀಗೆ 75 ವರ್ಷಗಳ ಕಾಲ ಪೂಜಿಸಲ್ಪಟ್ಟಿದ್ದ ಬಬಿಯಾ ಮೊಸಳೆ ಕಳೆದ ವರ್ಷ ಮೃತಪಟ್ಟಿತ್ತು.

Read More

ಮಂಗಳೂರು: ಮಂಗಳೂರಿನಿಂದ ಕೇರಳಕ್ಕೆ ಹೋಗುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಕಾಸರಗೋಡಿನಲ್ಲಿ ಪ್ರತೀ ದಿನ ಸರ್ವಿಸ್ ರೋಡ್ ಬಿಟ್ಟು ಪದೇ ಪದೇ ಹೈವೇ ಮುಖಾಂತರ ಹೋಗುತ್ತಿತ್ತು ಸಾಕಷ್ಟು ಬಾರೀ ಸರ್ವಿಸ್ ರೋಡ್ ನಲ್ಲೇ ಸಂಚರಿಸಿ ಪ್ರಯಾಣಿಕರಿಗೆ ತೊಂದರೆ ಆಗುತ್ತದೆ ಎಂದು ಹಸೈನಾರ್ ಮನವಿ ಮಾಡಿದ್ದರು. ಆದರೇ ಅವರ ಮನವಿಗೆ ಕ್ಯಾರೇ ಎನ್ನದೆ ಸರ್ವಿಸ್ ರೋಡ್ ಬಿಟ್ಟು ಪದೇ ಪದೇ ಹೈವೇ ಮುಖಾಂತರ ಹೋಗುತ್ತಿದ್ದ ಬಸ್ಸನ್ನು ಹಸೈನಾರ್ ಅವರು ಸಿನಿಮೀಯ  ರೀತಿಯಲ್ಲಿ ಬಸ್ ನ್ನ ಹೈವೇಯಿಂದಲೇ ವಾಪಸ್ ಕಳಿಸಿದ್ದಾರೆ. ಸ್ಥಳೀಯ ಉದ್ಯಮಿಯಾಗಿರುವ ಹಸೈನಾರ್ ರವರು ಹೈವೇ ನಡುವಲ್ಲೇ ಸ್ಟೂಲ್ ಇಟ್ಟು ಬಸ್ ನ್ನ ಹಿಂದಿರುಗಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದ್ದಾರೆ ಪ್ರತಿಭಟನೆ ಬಳಿಕ ಬಸ್ ಚಾಲಕ ಅರ್ಧ ಕಿಲೋಮೀಟರ್ ರಿವರ್ಸ್ ಹೋಗಿ ಬಳಿಕ ಸರ್ವಿಸ್ ರೋಡ್ ನಲ್ಲೇ ಸಂಚರಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ. ಇನ್ನ್ನು ಜೈಲರ್ ಸಿನಿಮಾ ಸ್ಟೈಲ್ ನಲ್ಲೇ ಹಸೈನಾರ್ ಪ್ರತಿಭಟನೆ ನಡೆಸಿದ್ದಾರೆ ಎಂದು ನೆಟ್ಟಿಗರು ಮೆಚ್ಚುಗೆ…

Read More

ಬೆಂಗಳೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಬಂಧಿತರಾಗಿದ್ದ ಚೈತ್ರಾ & ಗ್ಯಾಂಗ್ ನ ಅಭಿನವ ಹಾಲಶ್ರೀ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿದ್ದ ಅಭಿನವ ಹಾಲಶ್ರೀಗೆ ಹೈಕೋರ್ಟ್ ನಿಂದ ಜಾಮೀನು ಮಂಜೂರಾದ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅಭಿನವ ಹಾಲಶ್ರೀ ಜೈಲಿನಿಂದ ಹೊರ ಬರುತ್ತಿದ್ದಂತೆಯೇ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕೇಸರಿ ಶಾಲು ಹಾಕಿ ಸ್ವಾಗತಿಸಿದ್ದಾರೆ. ಉದ್ಯಮಿಗೆ ಬಿಜೆಪಿ ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ವಂಚನೆ ಮಾಡಿದ್ದ ಪ್ರಕರಣದಲ್ಲಿ ಚೈತ್ರಾ & ಗ್ಯಾಂಗ್ ಜೊತೆ ವಿಜಯನಗರ ಜಿಲ್ಲೆಯ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಕೂಡ ಜೈಲು ಸೇರಿದ್ದರು.

Read More

ಕುಂದಾಪುರ: ಹತ್ತನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ನೀಡಿದ ಆರೋಪದಲ್ಲಿ ಪ್ರೌಢಶಾಲಾ ಶಿಕ್ಷಕರೊಬ್ಬರ ವಿರುದ್ಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಬಿಜೂರು ಪ್ರೌಢ ಶಾಲೆಯ ಶಿಕ್ಷಕ ಸುಬ್ರಹ್ಮಣ್ಯ ಮದ್ದೋಡಿ ವಿರುದ್ದ ಪ್ರಕರಣ ದಾಖಲಾಗಿದೆ. ಸೆ. 26ರಂದು ವಿದ್ಯಾರ್ಥಿನಿ ಶಾಲೆಗೆ ಹೋಗಿ ಮನೆಗೆ ಬಂದವಳು ಇನ್ನು ಶಾಲೆಗೆ ಹೋಗುವುದಿಲ್ಲ ಎಂದಿದ್ದಾಳೆ. ಮನೆಯವರು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಶಿಕ್ಷಕ ಸುಬ್ರಹ್ಮಣ್ಯ ಮದ್ದೋಡಿ ಕೊಠಡಿಗೆ ಕರೆಸಿಕೊಂಡು ಟ್ಯೂಷನ್‌ಗೆ ಯಾಕೆ ಹೋಗುತ್ತೀಯಾ? ನಾನು ಹೇಳಿ ಕೊಟ್ಟಷ್ಟು ಹೇಳಿ ಕೊಡ್ತಾರಾ? ಅವರ ಮನೆಯ ಪಾತ್ರೆ ತೊಳೆಯಲಿಕ್ಕೆ ಹೋಗುವುದಾ ಎಂದು ಕೇಳಿದ್ದಲ್ಲದೇ ಅವಾಚ್ಯ ಪದ ಬಳಸಿ ಅವಮಾನಿಸಿದ್ದಾರೆ ಎಂದಿದ್ದಾಳೆ. ರಾತ್ರಿ ಮತ್ತೆ ವಿಚಾರಿಸಿದಾಗ, ಶಿಕ್ಷಕ ಸುಬ್ರಹ್ಮಣ್ಯ ಮದ್ದೋಡಿ ತನ್ನ ಮೈಕೈ ಗಲ್ಲ ಮುಟ್ಟಿ ಯಾರಿಗೂ ಹೇಳಬೇಡ. ನಿನಗೆ ನಾನು ಬೇಕಾ? ನಿನ್ನ ತಂದೆ ತಾಯಿ ಬೇಕಾ? ಎಂದು ಲೈಂಗಿಕ ಕಿರುಕುಳ ನೀಡಿರುವುದಾಗಿ ಮನೆಯವರಲ್ಲಿ ತಿಳಿಸಿದ್ದಾಳೆ. ಬಳಿಕ ಊರವರು ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದು,…

Read More

ರಾಜ್ಯಾದ್ಯಂತ ಇಂದು (ನ.11) ಕೂಡ ಭಾರಿ ಮಳೆಯಾಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಲಿದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಸೇರಿದಂತೆ ಹಲವೆಡೆ ಮಳೆಯಾಗುವ ಸಂಭವವಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳದಲ್ಲಿ ವರುಣ ಧರೆಗೆ ಇಳಿಯಲಿದ್ದಾನೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು, ಶಿವಮೊಗ್ಗ, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಇನ್ನು ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಗುಡುಗು,…

Read More

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹುದ್ದೆಗೆ ಬಿ.ವೈ.ವಿಜಯೇಂದ್ರ ಅವರನ್ನು ನಿಯೋಜಿಸಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಆದೇಶಿಸಿದ್ದಾರೆ. ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರಾಗಿ ಪಕ್ಷವನ್ನು ನಡೆಯಲಿದ್ದಾರೆ. ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳಿನಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಇದೀಗ ಕೊನೆಗೂ ನೇಮಕವಾಗಿದೆ

Read More

ಪುತ್ತೂರು : ಪುತ್ತಿಲ ಪರಿವಾರದ ಕಚೇರಿಗೆ ತಲ್ವಾರ್ ಹಿಡಿದು ನುಗ್ಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತರು ಸೇರಿದಂತೆ 9 ಮಂದಿ ವಿರುದ್ದ ಪುತ್ತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 9 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.ಬಂಧಿತರನ್ನು ದಿನೇಶ್ ಪಂಜಿಗಣ, ಭವಿತ್,ಮನ್ವಿತ್,ಜಯಪ್ರಕಾಶ್,ಚರಣ್,ಮನೀಶ್, ವಿನೀತ್ ಮತ್ತು ಇಬ್ಬರು ಅಪ್ರಾಪ್ತ ಬಾಲಕರು ಎಂದು ಗುರುತಿಸಲಾಗಿದೆ. ದಿನೇಶ್ ಪಂಜಿಗ ಎಂಬಾತ ತಂಡದೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿದ್ದು, ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗ ಮನೀಶ್ ಕುಲಾಲ್ ಬನ್ನೂರು ಎಂಬವರನ್ನು ಗುರಿಯಾಗಿಟ್ಟುಗೊಂಡು ಬಂದಿದ್ದರು ಎಂದು ಆರೋಪಿಸಲಾಗಿದೆ. ಈ ವೇಳೆ ಪುತ್ತಿಲ ಕಚೇರಿಯಲ್ಲಿ ಕೃಷ್ಣಪ್ರಸಾದ್ ಶೆಟ್ಟಿ ಮತ್ತಿತರರು ಇದ್ದರು. ಮನೀಶ್ ಕುಲಾಲ್ ಕಚೇರಿಯಲ್ಲಿ ಇರಲಿಲ್ಲ. ಮಾಹಿತಿ ತಿಳಿದ ಮನೀಶ್ ಕುಲಾಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ: 108/2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Read More

ಮಂಗಳೂರು: ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಉತ್ತರ ಪೋಲಿಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕುತ್ತಾರ್‍ ಮೊಹಮ್ಮದ್ ಹನೀಪ್ ಯಾನೆ ಗುಜರಿ ಹನೀಫ್ ಎಂದು ಗುರುತಿಸಲಾಗಿದೆ.ನಗರದ ಬಂದರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದ ಈತ ನ್ಯಾಯಾಲಯಕ್ಕೆ ಹಾಜರಾಗದೇ ಹಾಗೂ ಪೊಲೀಸರ ಕೈಗೆ ಸಿಗದೇ ಕಳೆದ13 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ.ನ್ಯಾಯಾಲಯವು LPC ಪ್ರಕರಣವೆಂದು ಪರಿಗಣಿಸಿ ವಾರೆಂಟ್ ಹೊರಡಿಸಿತ್ತು.ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Read More

ಉಪ್ಪಿನಂಗಡಿ : ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪ್ರೀತಿಸುವಂತೆ ಒತ್ತಾಯಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನ ವಿರುದ್ಧ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪೊಕೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಮುಝಮ್ಮಿಲ್ (19) ಎಂದು ಗುರುತಿಸಲಾಗಿದೆ. ಈತ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಶಾಲೆಯೊಂದರ ವಿದ್ಯಾರ್ಥಿನಿಯ ಮೊಬೈಲ್‌ ಪೋನ್‌ಗೆ ಸಂದೇಶ ಕಳುಹಿಸಿ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಅಲ್ಲದೇ ಅಕ್ಟೋಬರ್ 10ರಂದು ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿದನಲ್ಲದೇ ಹಾಗೂ ನವೆಂಬರ್ 6ರಂದು ವಿದ್ಯಾರ್ಥಿನಿಗೆ ಪುನ: ಮೊಬೈಲ್ ಸಂದೇಶ ಕಳುಹಿಸಿ ಹಿಂಸಿಸುತ್ತಿದ್ದ. ಇದರಿಂದ ವಿದ್ಯಾರ್ಥಿನಿಯು ಮಾನಸಿಕವಾಗಿ ಕುಗ್ಗಿ ಹೋಗಿರುತ್ತಾಳೆಂದು ಆಕೆಯ ತಾಯಿ ಉಪ್ಪಿನಂಗಡಿಗೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Read More