ಮಂಗಳೂರು: ಉದ್ಯಮಿಗಳಿಗೆ ಸಾಲ ಕೊಡಿಸುವುದಾಗಿ ನಂಬಿಸಿ ಕೋಟಿಗಟ್ಟಲೆ ರೂಪಾಯಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ರೋಷನ್ ಸಲ್ಡಾನನ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಮಂಗಳೂರು ಉಪವಲಯ ಕಚೇರಿ ಅಧಿಕಾರಿಗಳು ರೋಷನ್ ಸಲ್ಡಾನನ ಮನೆ ಮತ್ತು ಬ್ಯಾಂಕ್ ಖಾತೆ ಸೇರಿ 2.85 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿದ್ದಾರೆ. ರೋಷನ್ ಸಲ್ಡಾನ ಸಾಲ ಕೊಡಿಸುವ ಆಮಿಷವೊಡ್ಡಿ ಶ್ರೀಮಂತ ವ್ಯಕ್ತಿಗಳು ಹಾಗೂ ಉದ್ಯಮಿಗಳಿಗೆ 200 ಕೋಟಿ ರೂ.ಗೂ ಅಧಿಕ ಹಣ ವಂಚನೆ ಮಾಡಿದ್ದ. ಈ ಸಂಬಂಧ ರೋಷನ್ ಸಲ್ಡಾನ, ಆತನ ಪತ್ನಿ ಢಫ್ನಿನೀತು ಹಾಗೂ ಇತರರ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಇದರ ಆಧಾರದ ಮೇಲೆ ಇಡಿ ಅಧಿಕಾರಿಗಳು ತನಿಖೆ ನಡೆಸಿದ್ದರು. ಈ ಹಿಂದೆ ಸುಮಾರು 9.5 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಮಂಗಳೂರಿನಲ್ಲಿರುವ ಆತನ ಐಷಾರಾಮಿ ಬಂಗಲೆಯನ್ನು ಕಂಡು ಅಧಿಕಾರಿಗಳು ದಂಗಾಗಿದ್ದರು. ನೂರಾರು ಕೋಟಿ ಸಾಲ ಕೊಡಿಸುವುದಾಗಿ ಐದರಿಂದ ಹತ್ತು…
Author: main-admin
ಉಡುಪಿ: ಉಡುಪಿ ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ (ಡಿವೈಎಸ್ಪಿ) ರಾಗಿ ವಿ.ಎಸ್.ಹಾಲಮೂರ್ತಿ ರಾವ್ ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಉಡುಪಿ ಠಾಣೆಯಲ್ಲಿ ಕಳೆದ ಸುಮಾರು ಒಂದು ವರ್ಷದಿಂದ ಡಿವೈಎಸ್‌ಪಿ ಹುದ್ದೆ ಖಾಲಿ ಇತ್ತು. ಈವರೆಗೆ ಪ್ರಭಾರ ಡಿವೈಎಸ್ಪಿಯಾಗಿ ನಿರೀಕ್ಷಕ ಮಂಜುನಾಥ್ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಅಧಿಕಾರ ವಹಿಸಿಕೊಂಡಿರುವ ನೂತನ ಡಿವೈಎಸ್ಪಿ ಸಾರ್ವಜನಿಕರು ತಮ್ಮ ಯಾವುದೇ ದೂರುಗಳಿದ್ದಲ್ಲಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದ್ದಾರೆ.
ಉಳ್ಳಾಲ: ಅಪ್ರಾಪ್ತಯ ಮೇಲೆ ಮಲ ತಂದೆಯೇ ಅತ್ಯಾಚಾರಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿ ಅಮೀರ್ ನನ್ನು ಬಂಧನ ಮಾಡಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಇಂದು ಮಂಗಳೂರಿನ FTSC-2ನೇ ನ್ಯಾಯಾಲಯವು CR. Mis 1024/2025 ಆರೋಪಿ ಅಮೀರ್ ಅವರಿಗೆ ಜಾಮೀನು ನೀಡಿ ಆದೇಶ ಮಾಡಿದೆ. ಆರೋಪಿ ಪರ ಹಿರಿಯ ನ್ಯಾಯವಾದಿ ಶ್ರೀ. S. S.KHAZI ವಾದಿಸಿದ್ದರು.
ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಮೊಬೈಲ್ ಸಿಗ್ನಲ್ ಜಾಮರ್‌ನಿಂದ ಸುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಉಂಟಾಗಿರುವ ಕುರಿತು, ಸುತ್ತಮುತ್ತಲಿನ ಮೊಬೈಲ್ ನೆಟ್ವರ್ಕ್ ಸಾಮರ್ಥ್ಯವನ್ನು ಪರಿಶೀಲಿಸಿ ವರದಿ ಸಲ್ಲಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಸೂಚನೆ ನೀಡಿದೆ. ಮಂಗಳೂರು ವಕೀಲರ ಸಂಘವು ಕಳೆದ ಮಾರ್ಚ್‌ನಿಂದ ನ್ಯಾಯಾಲಯಗಳ ಸಂಕೀರ್ಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೊಬೈಲ್ ನೆಟ್‌ವರ್ಕ್ ಸಮಸ್ಯೆ ಎದುರಾಗಿರುವ ಬಗ್ಗೆ ಹೈಕೋರ್ಟ್‌ನಲ್ಲಿ ದಾವೆ ಹೂಡಿತ್ತು. ಈ ಅರ್ಜಿಯ ವಿಚಾರಣೆ ಮಂಗಳವಾರ ಆರಂಭಗೊಂಡಿತು. ಸಂಘದ ಪರವಾಗಿ ಹಿರಿಯ ನ್ಯಾಯವಾದಿ ಪಿ.ಪಿ. ಹೆಗ್ಡೆ ವಾದ ಮಂಡಿಸಿದರು. ಕೈದಿಗಳು ಕಾರಾಗೃಹದೊಳಗೆ ಮೊಬೈಲ್ ಬಳಸುವುದನ್ನು ತಡೆಯುವ ಉದ್ದೇಶದಿಂದ ಜಾಮರ್ ಅಳವಡಿಸಲಾಗಿದೆ. ಆದರೆ, ವಾಸ್ತವದಲ್ಲಿ ಕೈದಿಗಳಿಗೆ ಮೊಬೈಲ್ ನೆಟ್‌ವರ್ಕ್ ಇನ್ನೂ ಲಭ್ಯವಿದೆ ಎಂಬ ಮಾಹಿತಿ ಇದೆ. ಇದರ ಬದಲಿಗೆ, ಕಾರಾಗೃಹದ ಹೊರಗಡೆ ನ್ಯಾಯವಾದಿಗಳು ಹಾಗೂ ಸಾರ್ವಜನಿಕರಿಗೆ ನೆಟ್ವರ್ಕ್ ಸಮಸ್ಯೆಯಿಂದಾಗಿ ತೀವ್ರ ತೊಂದರೆಯಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ನ್ಯಾಯಾಲಯದ ಕಲಾಪಗಳಿಗೆ ಸಂಬಂಧಿಸಿದ ಕೆಲಸಗಳನ್ನು ಮಾಡುವಾಗಲೂ…
ಪುತ್ತೂರು : ಜೊತೆಗೆ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಅನಾರೋಗ್ಯ ಪೀಡಿತನಾದ ಕಾರಣ ಆತನನ್ನು ನೋಡಲು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳ ಗುಂಪಿನ ಮೇಲೆ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಉಪ್ಪಿನಂಗಡಿ ಸಮೀಪದ ಪೆರಿಯಡ್ಕ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬೈಕ್ ಸವಾರರಾದ ಮುಸ್ತಫಾ ಮತ್ತು ಸಹಸವಾರ ಮುಸ್ತಫಾ ಪೆರಿಯಡ್ಕ ಎಂದು ಗುರುತಿಸಲಾಗಿದೆ. ತಮ್ಮದೇ ಕಾಲೇಜಿನಲ್ಲಿ ಓದುತ್ತಿರುವ ಸಹಪಾಠಿ ವಿದ್ಯಾರ್ಥಿ ಇತ್ತೀಚೆಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆದು ಮನೆಯಲ್ಲಿದ್ದು, ಆತನ ಆರೋಗ್ಯ ವಿಚಾರಿಸುವ ಸಲುವಾಗಿ, ಕಾಲೇಜಿನ ಕೆಲವು ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಆತನ ಮನೆಗೆ ಗುರುವಾರ ನ.6 ರಂದು ಬೆಳಗ್ಗೆ ಕಾಲೇಜಿನಿಂದ ಹೊರಟು ಪೆರಿಯಡ್ಕ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ವಿದ್ಯಾರ್ಥಿಗಳ ಹೆಸರು, ಕಾಲೇಜ್ ಹಾಗೂ ಊರಿನ ಬಗ್ಗೆ ವಿಚಾರಿಸಿ ಬಳಿಕ ವಿಭಿನ್ನ ಕೋಮುಗಳ ವಿದ್ಯಾರ್ಥಿ /ವಿದ್ಯಾರ್ಥಿನಿಯರು ಜೊತೆಗೆ ತೆರಳುತ್ತಿರುವ ಬಗ್ಗೆ ತಕರಾರು ತೆಗೆದು,…
ಮಂಗಳೂರು: ನಿಷೇದಿತ ಮಾದಕ ವಸ್ತು ಎಂಡಿಎಂಎನ್ನು ಖರೀದಿಸಿ ಮಂಗಳೂರು ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಸರಬರಾಜು ಮಾಡುತ್ತಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಅವರುಗಳಿಂದ 24.57 ಗ್ರಾಂ ತೂಕದ MDMA ಮಾದಕ ವಸ್ತು ಎಂಡಿಎಂಎ ಅನ್ನು ವಶಪಡಿಸಿಕೊಂಡಿರುತ್ತಾರೆ. ನ.4ರಂದು ಮಂಗಳೂರು ನಗರದ ಬಂದರು ಮತ್ತು ದಕ್ಕೆಯ ಪರಿಸರದಲ್ಲಿ ಆಟೋ ರಿಕ್ಷಾದಲ್ಲಿ ಇದ್ದುಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು ಆಟೋ ಚಾಲಕ ಅಬ್ದುಲ್ ಸಲಾಮ್ ಪ್ರಾಯ 39 ವರ್ಷ ತಂದೆ; ಅಬ್ದುಲ್ ಹಮೀದ್ ವಾಸ; ಎಸ್.ಹೆಚ್. ನಗರ, ದಯಾಂಬು, ಅಡ್ಯಾರ್, ಕಣ್ಣೂರು, ಮಂಗಳೂರು. ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನಿಂದ ರೂ. 1,20,000/- ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಆಟೋ ರಿಕ್ಷಾ, ಮೊಬೈಲ್ ಪೋನ್, ತೂಕಮಾಪನ, ಖಾಲಿ ಜಿಪ್ ಲಾಕ್ ಕವರ, ಸಹಿತ ಒಟ್ಟು ರೂ. 2,30,500/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ…
ಧರ್ಮಸ್ಥಳ ಸುತ್ತಮುತ್ತ ನಡೆದಿರುವ ಮಹಿಳೆಯರು, ಯುವತಿಯರ ಅಸಹಜ ಹಾಗೂ ಅನುಮಾನಸ್ಪದ ಸಾವು, ಕೊಲೆ, ಅತ್ಯಾಚಾರ ಪ್ರಕರಣಗಳ ಕುರಿತು ವಿಶೇಷ ತನಿಖಾ ತಂಡವು ಸಮಗ್ರ ತನಿಖೆ ನಡೆಸುವಂತೆ ಕೋರಿ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಎಸ್‌ಐಟಿ ಮುಖ್ಯಸ್ಥರಿಗೆ ಪತ್ರ ಬರೆದಿದೆ. ಧರ್ಮಸ್ಥಳದಲ್ಲಿ ಕಳೆದ 20ಕ್ಕೂ ಹೆಚ್ಚು ವರ್ಷಗಳಿಂದ ಮಹಿಳಾ ದೌರ್ಜನ್ಯ, ಹತ್ಯೆ, ಅತ್ಯಾಚಾರ ಪ್ರಕರಣಗಳು ಕೇಳಿ ಬರುತ್ತಿವೆ. ಈ ಬಗ್ಗೆ ಎಸ್‌ಐಟಿ ತನಿಖೆಗೆ ಆಯೋಗದಿಂದ ಪತ್ರ ಬರೆದ ಬಳಿಕ ಎಸ್‌ಐಟಿ ರಚನೆಯಾಗಿದೆ. ಆದರೆ, ಈವರೆಗೆ ಎಸ್‌ಐಟಿ ಅಂತಹ ಪ್ರಕರಣಗಳನ್ನು ತನಿಖೆ ಮಾಡುತ್ತಿರುವ ಬಗ್ಗೆ ಮಾಹಿತಿ ಕಂಡುಬರುತ್ತಿಲ್ಲ ಎಂದು ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಪ್ರಕರಣಗಳಲ್ಲಿ ಸಮಗ್ರ ತನಿಖೆ ಕೈಗೊಳ್ಳುವಂತೆ ಅಥವಾ ಕೈಗೊಂಡಿದ್ದರೆ ಈ ಬಗ್ಗೆ ಮಾಹಿತಿಯನ್ನು ಆಯೋಗಕ್ಕೆ ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
ಕಡಬ: 14 ವರ್ಷದ ಬಾಲಕನೊಬ್ಬ ನಿಗೂಢ ಕಾರಣಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಗುರುವಾರ ರಾತ್ರಿ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಖಂಡಿಗ ಮನೆಯ ಗಗನ್(14) ಎಂದು ಗುರುತಿಸಲಾಗಿದೆ. ಗುರುವಾರ ಎಂದಿನಂತೆ ಶಾಲೆಗೆ ತೆರಳಿದ್ದ ಗಗನ್ ಶಾಲೆಯಿಂದ ಮನೆಗೆ ಬಂದು ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪುತ್ತೂರಿನಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪುತ್ತೂರಿನ ಪೆರಿಯಡ್ಕ ಬಳಿ ನೈತಿಕ ಪೊಲೀಸ್ ಗಿರಿ ನಡೆದಿತ್ತು. ಮುಸ್ತಾಫ್ ಮತ್ತು ಮುಸ್ತಾಫ್ ಪೆರಿಯಡ್ಕ ಎನ್ನುವ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸಹಪಾಠಿಯ ಆರೋಗ್ಯ ವಿಚಾರಿಸಲು ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಆಗಮಿಸಿ ಇಬ್ಬರು ಆಕ್ಷೇಪ ವ್ಯಕ್ತಪಡಿಸಿದ್ದು ವಿದ್ಯಾರ್ಥಿನಿಯರು ಒಟ್ಟಿಗೆ ಹೊರಟಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಅನ್ಯ ಕೋಮಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಹೊರಟಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಕೋಮು ದ್ವೇಷದಿಂದ ಅವಾಚ್ಯ ಶಬ್ದಗಳಿಂದ ವಿದ್ಯಾರ್ಥಿಗಳಿಗೆ ನಿಂದಿಸಿದ್ದಾರೆ. ಓರ್ವ ವಿದ್ಯಾರ್ಥಿಗೆ ಇಬ್ಬರು ಆರೋಪಿಗಳು ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಠಾಣೆಗೆ ವಿದ್ಯಾರ್ಥಿಗಳು ದೂರು ನೀಡಿದ್ದಾರೆ. ಬಳಿಕ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ
ಬಜ್ಪೆ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆದರಿಕೆ ಹಾಕಿ ಬಲವಂತದಿಂದ ಪಟಾಕಿ ಲೂಟಿ ಮಾಡಿದ ಮೂವರು ಆರೋಪಿಗಳ ವಿರುದ್ಧ ಬಜ್ಪೆ ಪೊಲೀಸರು ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ. ಬಂಧಿತರನ್ನು ರೌಡಿ ಶೀಟರ್ ಪ್ರಶಾಂತ್ ಕಳವಾರು ಯಾನೆ ಪಚ್ಚು, ಗಣೇಶ್ ಮತ್ತು ಅಶ್ವಿತ್ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸಂಘಪರಿವಾರದ ಕಾರ್ಯಕರ್ತನೂ ಆಗಿರುವ ಪ್ರಶಾಂತ್ ಕಳವಾರು ವಿರುದ್ಧ ಕೊಲೆ ಮತ್ತು ನಾಲ್ಕು ಕೊಲೆಯತ್ನ ಪ್ರಕರಣಗಳು ಸೇರಿದಂತೆ ತನಿಖೆ ಮತ್ತು ವಿಚಾರಣೆಯ ವಿವಿಧ ಹಂತದ 14 ಪ್ರಕರಣಗಳಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗಣೇಶ್ ವಿರುದ್ಧ 4 ಪ್ರಕರಣಗಳಿವೆ, ಇದರಲ್ಲಿ ಎರಡು ಕೊಲೆಯತ್ನ ಪ್ರಕರಣಗಳು ತನಿಖೆ ಮತ್ತು ವಿಚಾರಣೆಯ ವಿವಿಧ ಹಂತದಲ್ಲಿವೆ. ಅಶ್ವಿತ್ ವಿರುದ್ಧ ಒಂದು ಪ್ರಕರಣವಿದ್ದು, ಅದನ್ನು ಖುಲಾಸೆಗೊಳಿಸಲಾಗಿದೆ.






