ವಿಟ್ಲ : ಕೆಲಸಕ್ಕೆಂದು ತೆರಳಿದ ವಿಟ್ಲದ ಯುವತಿಯೊಬ್ಬಳು ನಾಪತ್ತೆಯಾಗಿರುವ ಪ್ರಕರಣ ನಡೆದಿದೆ. ಬಂಟ್ವಾಳ ತಾಲೂಕಿನ ವೀರಕಂಭ ಗ್ರಾಮದ ಮಜಿ ನಿವಾಸಿ ಬಾಲಕೃಷ್ಣ ಎಂಬವರ ಪುತ್ರಿ ಶ್ರೀದೇವಿ (23) ನಾಪತ್ತೆಯಾದವರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ವಲಯ ಸೇವಾ ಪ್ರತಿನಿಧಿಯಾಗಿರುವ ಶ್ರೀದೇವಿ ಜೂ.9 ರಂದು ಮನೆಯಿಂದ ಕೆಲಸಕ್ಕೆಂದು ತೆರಳಿದವರು ಸಂಜೆ ವರೆಗೂ ಬಾರದ ಹಿನ್ನಲೆಯಲ್ಲಿ ವಿಟ್ಲ ಪೇಟೆ, ಸಂಬಂಧಿಕರ ಮನೆ ಸಹಿತ ವಿವಿಧೆಡೆ ಹುಡುಕಾಟ ನಡೆಸಲಾಗಿತ್ತು. ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಎಲ್ಲೂ ಕಂಡುಬರದ ಹಿನ್ನಲೆಯಲ್ಲಿ ವಿಟ್ಲ ಠಾಣೆಗೆ ತಂದೆ ಬಾಲಕೃಷ್ಣ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪತ್ತೆ ಕಾರ್ಯ ನಡೆಯುತ್ತಿದೆ.
Author: main-admin
ಕಟಪಾಡಿ;ಬಸ್ – ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾಷ್ಟೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ನಡೆದಿದೆ. ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಮೃತರು ಎಂದು ಗುರುತಿಸಲಾಗಿದೆ. ಇಕ್ಬಾಲ್ ಹೂವಿನ ವ್ಯಾಪಾರವನ್ನು ಮಾಡುತ್ತಿದ್ದರು ಎನ್ನಲಾಗಿದೆ. ಬಸ್ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿದ್ದು, ಈ ವೇಳೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಮೃತದೇಹವನ್ನು ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ.ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಗುಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಎರ್ಟಿಗಾ ಕಾರು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ರಸ್ತೆ ಬದಿಯ ಹೊಳೆಗೆ ಉರುಳಿ ಬಿದ್ದ ಘಟನೆ ಭಾನುವಾರ ಬೆಳಗಿನ ಜಾವ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಹೊಸೂರು ನಿವಾಸಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುವನ್ನು ಅಶ್ವಿನಿ ಆಂಬ್ಯುಲೆನ್ಸ್ ಮೂಲಕ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ನೀರಿನಲ್ಲಿ ಮುಳುಗಿದೆ ಎಂದು ತಿಳಿದುಬಂದಿದೆ.
ಪುತ್ತೂರು: ಬರ್ತ್ ಡೇ ಪಾರ್ಟಿ ನಡೆಸುತ್ತಿದ್ದವರ ಮೇಲೆ ಮಾರಕಾಯುಧ ಹಿಡಿದು ದಾಳಿ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಪುತ್ತೂರಿನ ದರ್ಬೆ ಬಳಿ ಹೊಟೇಲ್ ಒಂದರಲ್ಲಿ ರಾತ್ರಿ ವೇಳೆ ಬರ್ತ್ ಡೇ ಪಾರ್ಟಿ ಆಯೋಜನೆಯಾಗಿದ್ದು, ಈ ಸಂದರ್ಭದಲ್ಲಿ ಯುವಕನೊಬ್ಬ ಮಾರಕಾಯುಧ ಹಿಡಿದು ದಾಳಿ ನಡೆಸಿದ್ದಾನೆ. ಇನ್ನು ದಾಳಿಯ ಸಂದರ್ಭದಲ್ಲಿ ಓರ್ವ ಯುವಕ ತಪ್ಪಿಸಿಕೊಳ್ಳುವ ಭರದಲ್ಲಿ ಸ್ಟೇರ್ ಕೇಸ್ ನಿಂದ ಜಾರಿ ಬಿದ್ದು ಗಾಯಗೊಂಡಿದ್ದಾನೆ. ಭೂಗತ ಪಾತಕಿಗಳ ಶಿಷ್ಯ ಎನ್ನಲಾದ ಪ್ರಜ್ವಲ್ ಎಂಬಾತ ಮಾರಕಾಯುಧ ಹಿಡಿದು ದಾಳಿ ನಡೆಸಿದ್ದಾನೆ ಎಂದು ಹೇಳಲಾಗಿದೆ.
ಬೆಂಗಳೂರು: ಸಿಎಂ ಸಿದ್ಧರಾಮಯ್ಯ 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ ಎಂಬುದಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಪ್ರಕರಣದಲ್ಲಿ ಅವರ ವಿರುದ್ಧ ದೂರು ಕೂಡ ದಾಖಲಾಗಿತ್ತು. ಈ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದ್ದು, ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನು ಒಳಗೊಂಡಂತ ನ್ಯಾಯಪೀಠವು, ಪೊಲೀಸರ ತನಿಖೆಗೆ ತಡೆ ನೀಡಿದೆ. ಅಂದಹಾಗೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 24 ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡಿಸಿದ್ದಾರೆ ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪುತ್ತೂರು, ಬೆಳ್ತಂಗಡಿ ಮತ್ತು ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಮೂರು ದೂರು ದಾಖಲಾಗಿದ್ದವು. ಈ ಪ್ರಕರಣದಲ್ಲಿ ಶಾಸಕ ಹರೀಶ್ ಪೂಂಜಾ ಪರವಾಗಿ ಹಿರಿಯ ವಕೀಲ ಪ್ರಭುಲಿಂಗ ನಾವದಗಿ…
ಮಣಿಪಾಲ: ವಿಧಾನಸೌಧದಲ್ಲಿ ಸರ್ಕಾರಿ ಹುದ್ದೆ ಕಾರ್ಯದರ್ಶಿ ಕೆಲಸ ಕೊಡಿಸುವುದಾಗಿ ಕುಂಜಿಬೆಟ್ಟು ಮನೋಳಿಗುಜ್ಜಿ ನಿವಾಸಿ ನವೀನ್ ರಾವ್ ಅವರಿಂದ ಹಣ ಪಡೆದು ವಂಚಿಸಲಾಗಿದೆ. ಬಾಸ್ಕರ್ ಭಟ್ ಎಂಬಾತ ಕೆಲಸ ಕೊಡಿಸುವುದಾಗಿ ಹಂತ ಹಂತವಾಗಿ ೪೦ ಸಾವಿರ ರೂ. ಪಡೆದು ಫೆ.20ರ ಒಳಗೆ ಉದ್ಯೋಗದ ಆದೇಶ ಬರುವುದಾಗಿ ಹೇಳಿದ್ದು, ನೇಮಕಾರಿ ಆದೇಶವು ಬಾರದೆ ವಂಚಿಸಿದ್ದಾರೆ. ನೀಡಿದ ಹಣವನ್ನು ವಾಪಾಸು ಕೊಡಲು ಹೇಳಿದಾಗ ಅವಾಚ್ಯ ಶಬ್ದದಿಂದ ಬೈದು, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿದ್ದಾರೆ.
ಬಂಟ್ವಾಳ: ಗ್ರಾಮ ಪಂಚಾಯತ್‌ನ ಕಟ್ಟಡ ಕಾಮಗಾರಿಗಾಗಿ ದಾಸ್ತಾನು ಇರಿಸಲಾಗಿದ್ದ ಕಬ್ಬಿಣದ ರಾಡ್ ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಎಸ್.ಐ.ರಾಮಕೃಷ್ಣ ನೇತೃತ್ವದ ತಂಡ ಬಂಧಿಸಿದೆ. ಸರಪಾಡಿ ಪೆರ್ಲ ದರ್ಖಾಸು ನಿವಾಸಿ ವಾಹನ ಚಾಲಕ ವಿನೋದ್ ಕುಮಾರ್, ಬೆಳ್ತಂಗಡಿ ತಾಲೂಕಿನ ಪುತ್ರಿಲ ನಿವಾಸಿ ಪುನೀತ್ , ಅಲ್ಲಿಪಾದೆ ಪುರುಷೋತ್ತಮ ಮೂವರು ಬಂಧಿತ ಆರೋಪಿಗಳು. ಆರೋಪಿಗಳು ಅಮ್ಟಾಡಿ ಗ್ರಾಮಪಂಚಾಯತ್ ನಲ್ಲಿ ನಡೆಯತ್ತಿದ್ದ ಕಟ್ಟಡ ಕಾಮಗಾರಿಗೆಂದು ತಂದು ದಾಸ್ತಾನು ಮಾಡಲಾಗಿದ್ದ ಕಬ್ಬಿಣದ ರಾಡ್ ಗಳನ್ನು ಮಾರ್ಚ್ ತಿಂಗಳಿನ 18 ರಂದು ಕಳವು ಮಾಡಿದ್ದರು. ಕಟ್ಟಡ ಕಾಮಗಾರಿ ನಡೆಸಲು ತಂದಿರಿಸಿದ ಕಬ್ಬಿಣದ ಸೊತ್ತುಗಳು ಕಳವಾದ ಬಗ್ಗೆ ಇಲ್ಲಿನ ಪಿಡಿಒ ರವಿ ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದರು. ಆ ಬಳಿಕ ಪೋಲಿಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದರು. ಎಸ್.ಐ.ರಾಮಕೃಷ್ಣ ಅವರು ಸಿಬ್ಬಂದಿಗಳೊಂದಿಗೆ ಮೊಡಂಕಾಪು ಎಂಬಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಸಂಶಯಾಸ್ಪದ ವಾಹನವನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಸಮರ್ಪಕವಾಗಿ ಉತ್ತರ…
ಬೆಂಗಳೂರು : ರಾಜ್ಯದ ಜನತೆಗೆ ಜುಲೈ ತಿಂಗಳಿನಿಂದ ಉಚಿತ ವಿದ್ಯುತ್ ನೀಡುತ್ತೇವೆ. ಆಗಸ್ಟ್ 1 ರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ ತಿಂಗಳಿನಿಂದ ಉಚಿತ ವಿದ್ಯುತ್ ನೀಡಲಾಗುತ್ತದೆ. ಈ ತಿಂಗಳು ಮಾತ್ರ ಗ್ರಾಹಕರು ಕರೆಂಟ್ ಬಿಲ್ ಕಟ್ಟಬೇಕು. ಮನೆಯ ಅಗ್ರಿಮೆಂಟ್ ಪತ್ರ ಇದ್ದರೂ ಉಚಿತ ವಿದ್ಯುತ್ ನೀಡುತ್ತೇವೆ.ಆರ್ ಆರ್ ನಂಬರ್ ಇದ್ದೋರಿಗೂ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡಲಾಗುವುದು ಎಂದು ಹೇಳಿದ್ದಾರೆ. ಬಾಡಿಗೆ ಮನೆಯಲ್ಲಿರುವವರು, ಹೊಸದಾಗಿ ಮನೆ ನಿರ್ಮಾಣ ಮಾಡಿದವರು, ಮನೆ ಶಿಫ್ಟ್ ಮಾಡಿದವರಿಗೂ ಉಚಿತ ವಿದ್ಯುತ್ ನೀಡಲಾಗುತ್ತದೆ. ಆಗಸ್ಟ್ 1 ರಂದು ಕಲಬುರಗಿಯಲ್ಲಿ ಗೃಹಜ್ಯೋತಿ ಯೋಜನೆಗೆ ಚಾಲನೆ ನೀಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಜನರಿಗೆ ಸರಳವಾಗಿ ಯೋಜನೆ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ. ಈ ಬಗ್ಗೆ ಸೋಮವಾರ ಮತ್ತೊಮ್ಮೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಎಲ್ಲಾ ಗೊಂದಲಗಳಿಗೂ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಆಡಳಿತಾವಧಿಯಲ್ಲಿ ಜಾರಿಗೆ ತಂದಿರುವ ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ’ ಯನ್ನು ಕಾಂಗ್ರೆಸ್ ಸರಕಾರ ವಾಪಸ್ ಪಡೆಯುವ ಸಿದ್ಧತೆಯಲ್ಲಿದ್ದು, ಇದರಿಂದ ಶಾಂತಿಯುತವಾಗಿದ್ದ ರಾಜ್ಯದಲ್ಲಿ ಮತ್ತೆ ಕೋಮು ಸಂಘರ್ಷ ವಾತಾವರಣ ಸೃಷ್ಟಿಯಾಗುವ ಭೀತಿ ಇದೆ ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಆತಂಕ ವ್ಯಕ್ತಪಡಿಸಿದ್ದಾರೆ. ಹಿಂದೂ ಸಂಸ್ಕೃತಿಯಲ್ಲಿ ಗೋವುಗಳಿಗೆ ಪೂಜ್ಯ ಸ್ಥಾನ ಇದೆ. ಗೋ ತಳಿಗಳನ್ನು ಸಂರಕ್ಷಿಸುವ ಮತ್ತು ಭಾವನಾತ್ಮಕ ವಿಚಾರಗಳ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಅಧಿಕಾರಾವಧಿಯಲ್ಲಿ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯಿದೆಯನ್ನು ಜಾರಿಗೆ ತರಲಾಗಿತ್ತು. ಈ ಕಾನೂನು ಜಾರಿಗೆ ಬಂದ ಬಳಿಕ ರಾಜ್ಯದಲ್ಲಿ ಗೋ ಕಳ್ಳತನ, ಅಕ್ರಮ ಖಸಾಯಿಕಾನೆಗಳಿಗೆ ಕಡಿವಾಣ ಬಿದ್ದಿತ್ತು. ಇದರಿಂದ ಕೋಮು ಸಂಘರ್ಷವೂ ಕಡಿಮೆಯಾಗಿತ್ತು. ಇದೀಗ ರಾಜ್ಯ ಸರಕಾರ ಈ ಕಾನೂನನ್ನು ವಾಪಸ್ ಪಡೆದರೆ ಮುಖ್ಯವಾಗಿ ಕರಾವಳಿ ಭಾಗದಲ್ಲಿ ಮನೆಗೆ ನುಗ್ಗಿ ಗೋ ಕಳವು ಮಾಡುವ ಪ್ರಕರಣ ಹೆಚ್ಚಾಗಲಿದೆ. ರೈತಾಪಿ ವರ್ಗದವರಿಗೆ ಇದರಿಂದಾಗಿ ತುಂಬಲಾರದ ನಷ್ಟ ಉಂಟಾಗಲಿದೆ. ವೋಟ್ ಬ್ಯಾಂಕ್…
ಬಂಟ್ವಾಳ: ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಯುವಕನೋರ್ವ ಮೃತಪಟ್ಟ ಘಟನೆ ಬಂಟ್ವಾಳದ ಮಲಾಯಿಬೆಟ್ಟು ಎಂಬಲ್ಲಿ ನಡೆದಿದೆ. ಬೋಳಿಯಾರು ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಶಾಫಿ ಮೃತ ಯುವಕ. ಸಜೀಪ ಮುನ್ನೂರು ಗ್ರಾಮದ ಮೂಸಬ್ಬ ಅವರ ತೋಟದಲ್ಲಿ ಅಡಿಕೆ ತೆಗೆಯುತ್ತಿದ್ದಾಗ ಘಟನೆ ನಡೆದಿದೆ. ರಸ್ತೆಯ ಬದಿಯಲ್ಲಿ ಹಾದು ಹೋಗಿದ್ದ ಎಲ್.ಟಿ. ವಯರಿಗೆ ಫೈಬರ್ ದೋಟಿ ತಾಗಿ, ವಿದ್ಯುತ್ ಶಾಕ್ ಹೊಡೆದಿದೆ ಎಂದು ಹೇಳಲಾಗಿದೆ. ಅಡಿಕೆ ವ್ಯಾಪಾರಿಯಾಗಿರುವ ಶಾಫಿ, ಗಿಡದಿಂದಲೇ ಅಡಿಕೆಯನ್ನು ಕ್ರಯಕ್ಕೆ ಪಡೆದುಕೊಳ್ಳುತ್ತಿದ್ದರು. ನಂತರ ಅಡಿಕೆಯನ್ನು ತೆಗೆದು, ಮಾರಾಟ ಮಾಡುತ್ತಿದ್ದರು. ಈ ಬಾರಿ ಫೈಬರ್ ಸಲಾಕೆಯನ್ನು ಖರೀದಿ ಮಾಡಿದ್ದರು ಎನ್ನಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.










