ಉಡುಪಿ: ಕ್ರೆಡಿಟ್ ಕಾರ್ಡ್ ಆಯಕ್ಟಿವೇಶನ್ ಮಾಡಿ ಕೊಡುವುದಾಗಿ ತಿಳಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂ. ವರ್ಗಾಯಿಸಿಕೊಂಡ ಘಟನೆ ನಡೆದಿದೆ. ಉಡುಪಿಯ ಅಬ್ದುಲ್ ಕರೀಮ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ತಾನು ಎಸ್‌ಬಿಐ ಕ್ರೆಡಿಟ್ ಕಾರ್ಡ್ ಆಯಕ್ಟಿವೇಶನ್ ಮಾಡುವುದಾಗಿ ಹೇಳಿ ಡೆಬಿಟ್ ಕಾರ್ಡ್ ಮಾಹಿತಿ ಹಾಗೂ ಒಟಿಪಿ ಪಡೆದು ಅವರ ಎಸ್.ಬಿ. ಖಾತೆಯಿಂದ 49,999 ರೂ.ಗಳನ್ನು ಕ್ರಮವಾಗಿ 10 ಸಲ ವರ್ಗಾವಣೆ ಮಾಡಿ ಒಟ್ಟು 4,99,990 ರೂ.ಗಳನ್ನು ವರ್ಗಾಯಿಸಿಕೊಂಡಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: main-admin
ಮಂಗಳೂರು: ಗಡಿಭಾಗದ ಕಾಸರಗೋಡು ಜಿಲ್ಲಾ ಸಹಾಯಕ ಜಿಲ್ಲಾಧಿಕಾರಿ ಸಂಚರಿಸುತ್ತಿದ್ದ ಬೊಲೆರೊ ವಾಹನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರಣ ಸಹಾಯಕ ಜಿಲ್ಲಾಧಿಕಾರಿ ಸೇರಿದಂತೆ ಇಬ್ಬರು ಗಾಯಗೊಂಡ ಘಟನೆ ಸೋಮವಾರ ಸಂಜೆ ಚೆಮ್ನಾಡ್‌ನಲ್ಲಿ ನಡೆದಿದೆ. ಸಹಾಯಕ ಜಿಲ್ಲಾಧಿಕಾರಿ ಕೆ.ದಿಲೀಪ್ ಕುಮಾರ್, ಗನ್ ಮ್ಯಾನ್ ರಂಜಿತ್ ಗಾಯಗೊಂಡವರು. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಜಿಲ್ಲೆಯ ಮೇಲ್ಪರಂಬದಿಂದ ಕಾಸರಗೋಡಿಗೆ ವಾಪಸಾಗುತ್ತಿದ್ದ ವೇಳೆ ಸಂಚರಿಸುತ್ತಿದ್ದ ಬೊಲೆರೊ ವಾಹನ ಒಳ ರಸ್ತೆ ಮೂಲಕ ಇನ್ನೊಂದು ವಾಹನ ಬಂದುದರಿಂದ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ದುರ್ಘಟನೆ ನಡೆದಿದೆ ಎನ್ನಲಾಗಿದೆ. ಪರಿಸರ ವಾಸಿಗಳು ಗಾಯಾಳುಗಳನ್ನು ಕೂಡಲೇ ಕಾಸರಗೋಡು ಜನರಲ್ ಆಸ್ಪತ್ರೆಗೆ ತಲಪಿಸಿದ್ದು, ಪ್ರಾಥಮಿಕ ಚಿಕಿತ್ಸೆ ನೀಡಿ ಗಾಯಾಳುಗಳನ್ನು ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು: ವ್ಯಕ್ತಿಯೋರ್ವ ಠಾಣೆಯಲ್ಲಿ ಪೊಲೀಸರ ಎದುರಿನಲ್ಲಿನಲ್ಲಿಯೇ ಒಂದೂವರೆ ವರ್ಷದ ಮಗುವನ್ನು ಕುತ್ತಿಗೆ ಹಿಡಿದು, ಮಗುವನ್ನು ಎತ್ತಿ ನೆಲಕ್ಕೆಸೆದು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ವ್ಯಾಸನಗರದ ನಿವಾಸಿ ಮಹೇಶ್ ಆರೋಪಿಯಾಗಿದ್ದಾನೆ. ಈತ ಹಲವು ಸಮಯದಿಂದ ಪತ್ನಿ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದ. ಈತನ ಪತ್ನಿ ” ತನ್ನ ಇಬ್ಬರು ಮಕ್ಕಳನ್ನು ಮತ್ತು ತನ್ನನ್ನು ಕೊಲ್ಲುತ್ತೇನೆಂದು ಹಾಗೂ ಬೆಂಕಿ ಹಚ್ಚಿ ಸುಟ್ಟು ಹಾಕುತ್ತೇನೆಂದು ಬೆದರಿಸಿ ತನಗೆ ಹೊಡೆಯಲು ಬಂದಿದ್ದು ಆತನಿಂದ ತಪ್ಪಿಸಿಕೊಂಡು ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ಬಂದಿದ್ದು” ಮಕ್ಕಳನ್ನು ರಕ್ಷಿಸುವಂತೆ ಭಾನುವಾರವು ತಡರಾತ್ರಿ ಬಂದು ಕದ್ರಿ ಠಾಣೆಯ ಪೊಲೀಸರಲ್ಲಿ ಕೋರಿಕೊಂಡಿದ್ದರು. ಪೊಲೀಸರು ಆಕೆಯ ಮನೆಗೆ ಹೊರಡುತ್ತಿದ್ದಂತೆ ಆರೋಪಿ ಮಹೇಶ್ ತನ್ನ ೬ ವರ್ಷದ ಮತ್ತು ಒಂದೂವರೆ ವರ್ಷದ ಹೆಣ್ಣು ಮಗುವನ್ನು ಕರೆದುಕೊಂಡು ಠಾಣೆಗೆ ಬಂದಿದ್ದ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾಗ ” ನನ್ನ ಮಗುವಿಗೆ ಏನು ಬೇಕಾದರೂ ಮಾಡಬಹುದು ಅದನ್ನು ಕೇಳಲು ನೀವು ಯಾರು” ಎಂದು ಹೇಳಿ ಮಗುವಿನ ಕುತ್ತಿಗೆಯನ್ನು ತಿರುಗಿಸಿ ಎಳೆದಾಡಿ ಮಗುವನ್ನು ಎತ್ತಿ…
ಬೆಳ್ತಂಗಡಿ: ತಾಲೂಕಿನ ಪುಂಜಾಲಕಟ್ಟೆ ಸನಿಹದ ಕುಕ್ಕಳ ಗ್ರಾಮದ ಹೋಂಡಾ ಶೋರೂಂ ಬಳಿ ಆಟೋ ರಿಕ್ಷಾ ಪಲ್ಟಿ ಹೊಡೆದು ಸಂಭವಿಸಿದ ಅಪಘಾತದಲ್ಲಿ 3 ವರ್ಷದ ಬಾಲಕಿ ಗಂಭೀರ ಗಾಯಗೊಂಡ ಘಟನೆ ಸೆ. 24ರಂದು ನಡೆದಿದೆ. ಗಾಯಾಳು ಬಾಲಕಿಯನ್ನು ಮುಂಡಾಜೆ ಕಡಿರುದ್ಯಾವರ ನಿವಾಸಿ, ಪ್ರಸ್ತುತ ಉಜಿರೆಯಲ್ಲಿ ನೆಲೆಸಿರುವ ಅಶ್ರಫ್ ಇಸ್ಮಾಯಿಲ್ ಎಂಬವರ ಪುತ್ರಿ ಅಝ್ಮೀ ಎಂದು ಗುರುತಿಸಲಾಗಿದೆ. ಅಶ್ರಫ್ ಅವರ ಸಹೋದರ ಮುಸ್ತಫಾ ಅವರು ದುಡುಕುತನದಿಂದ ಆಟೋರಿಕ್ಷಾ ಚಲಾಯಿಸಿದುದರ ಪರಿಣಾಮ ರಿಕ್ಷಾ ಪಲ್ಟಿ ಹೊಡೆದಿದೆ. ಅಶ್ರಫ್ ಅವರು ತಮ್ಮಿಬ್ಬರು ಪುತ್ರಿಯರಾದ ಅಝ್ಮೀ ಮತ್ತು ಐಝಾ ಅವರ ಜತೆಗೂಡಿ ಮಂಗಳೂರು ಕಡೆಗೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಅಪಘಾತದಿಂದ ರಸ್ತೆಗೆಸೆಯಲ್ಪಟ್ಟು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿ ಅಝ್ಮೀ ಅವರನ್ನು ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು : ಯುವ ಜನರ ಬದುಕನ್ನೆ ಕಸಿಯುತ್ತಿರುವ ಸಾಮಾಜಿಕ ಪಿಡುಗಾಗಿರುವ ಡ್ರಗ್ಸ್ ಮಾಫಿಯಾದ ವಿರುದ್ದ ಮಂಗಳೂರು ಪೊಲೀಸರ ಸಮರ ಮುಂದುವರೆದಿದೆ. ಇಂದು ನಿಷೇಧಿತ ಮಾದಕ ಪದಾರ್ಥ ಹೊಂದಿದ್ದ ವ್ಯಕ್ತಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಗರದ ಕಾಲೋಜುವೊಂದರ ಪದವಿ ವಿದ್ಯಾರ್ಥಿಯಾಗಿರುವ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಲುಕುಮಾನುಲ್ ಹಕೀಂ (22) ಬಂಧಿತ ಆರೋಪಿಯಾಗಿದ್ದಾನೆ. ಈತನಿಂದ 1 ಲಕ್ಷ 25 ಸಾವಿರ ಮೌಲ್ಯದ 25 ಗ್ರಾಂಂ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ. ಇದರ ಜೊತೆಗೆ ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನ ಸೇರಿದಂತೆ ಒಟ್ಟು 1 ಲಕ್ಷ 60 ಸಾವಿರ ಮೌಲ್ಯದ ವಸ್ತುಗಳನ್ನು ಕೂಡ ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಧಿತನಿಂದ 1,25 ಲಕ್ಷ ರೂಪಾಯಿ ಮೌಲ್ಯದ 25 ಗ್ರಾಂ MDMA ಪದಾರ್ಥವನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದೆ.
ಮಂಗಳೂರು: ರೋಗಿಯೊಂದಿಗೆ ಆಸ್ಪತ್ರೆಗೆ ಬಂದಿದ್ದ ಯುವಕನೊಬ್ಬ ರಿಸೆಪ್ಯನಿಸ್ಟ್ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ, ಆಸ್ಪತ್ರೆ ಸೊತ್ತುಗಳನ್ನು ಹಾನಿಗೈದಿರುವ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕದ್ರಿ ವ್ಯಾಸನಗರ ನಿವಾಸಿ ಆಶಿಕ್ (32) ಬಂಧಿತ ಆರೋಪಿ. ಸೆ.25ರಂದು ಸಂಜೆ ಆಶಿಕ್ ತನ್ನ ತಾಯಿಯನ್ನು ತಪಾಸಣೆಗೆಂದು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದ. ಈ ವೇಳೆ ಆಸ್ಪತ್ರೆಯ ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ಮಹಿಳಾ ಸಿಬ್ಬಂದಿ ರೋಗಿಯ ವೈಯಕ್ತಿಕ ವಿವರ, ಪ್ರಾಯ, ವಿಳಾಸ ಇತ್ಯಾದಿ ಮಾಹಿತಿಗಳನ್ನು ಕೇಳಿದ್ದಾರೆ. ಇದರಿಂದ ಕೋಪಗೊಂಡ ಆರೋಪಿ ಆಶೀಕ್ ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ಅಲ್ಲದೆ, ಸ್ಥಳದಲ್ಲಿ ದಾಂಧಲೆ ನಡೆಸಿ ಮಹಿಳೆಯನ್ನು ದೂಡಿ ಮೈಕೈಯನ್ನು ಮುಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಜೊತೆಗೆ ಅಡಿಶನ್ ಡೆಸ್ಕ್ ನಲ್ಲಿದ್ದ ಆಸ್ಪತ್ರೆಯ ಟೇಬಲ್, ಕಂಪ್ಯೂಟರ್ ಇನ್ನಿತರ ಸೊತ್ತುಗಳನ್ನು ಹಾನಿ ಮಾಡಿದ್ದಾನೆ. ಈ ಬಗ್ಗೆ ಸಂತ್ರಸ್ತೆ ಕಂಕನಾಡಿ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಆರೋಪಿ ಕೆಲಸವಿಲ್ಲದೇ ಮನೆಯಲ್ಲೇ ಇದ್ದು, ಮಾನಸಿಕ…
ಬೆಂಗಳೂರು: ಸ್ಯಾಂಡಲ್ ವುಡ್ ಸಿನಿ ರಂಗದಲ್ಲಿ ಪೋಷಕ ನಟರಾಗಿ ತಮ್ಮದೇ ಆದಂತ ಛಾಪು ಮೂಡಿಸಿದ್ದವರು ಬ್ಯಾಂಕ್ ಜನಾರ್ಧನ್. ಇಂತಹ ಕನ್ನಡ ಚಿತ್ರರಂಗದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ಹೃದಯಾಘಾತವಾಗಿರೋದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆಂದನವನದ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರ ತಮ್ಮ ನಿವಾಸದಲ್ಲಿ ಇದ್ದಂತ ವೇಳೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಅವರನ್ನು ಕೂಡಲೇ ಕುಟುಂಬಸ್ಥರು ಸಮೀಪದ ವಿಕ್ರಮ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿರೋದಾಗಿ ತಿಳಿದು ಬಂದಿದೆ. ಇದೀಗ ವಿಕ್ರಂ ಆಸ್ಪತ್ರೆಯಲ್ಲಿ ಹಿರಿಯ ನಟ ಬ್ಯಾಂಕ್ ಜನಾರ್ಧನ್ ಅವರಿಗೆ ವೈದ್ಯರು ಚಿಕಿತ್ಸೆ ನಡೆಸುತ್ತಿದ್ದಾರೆ. ವಿವಿಧ ಪರೀಕ್ಷೆಯ ಜೊತೆಗೆ ಚಿಕಿತ್ಸೆಯನ್ನು ನೀಡುತ್ತಿರೋದಾಗಿ ಹೇಳಲಾಗುತ್ತಿದೆ. ಅಂದಹಾಗೇ ಸ್ಯಾಂಡಲ್ ವುಡ್ ನಟ ಬ್ಯಾಂಕ್ ಜನಾರ್ಧನ್ ಕಳೆದ 40 ವರ್ಷಗಳಿಗಿಂತಲೂ ಹೆಚ್ಚು ಕಾಲ ಚಿತ್ರರಂಗದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅವರ ನಟನೆಯ ಚಿತ್ರಗಳು 500ಕ್ಕೂ ಹೆಚ್ಚು. ನಟ, ಪೋಷಕ ನಟ, ಖಳನಾಯಕ ಸೇರಿದಂತೆ ಹಲವು ರೋಲ್ ಗಳಲ್ಲಿ ಸಿನಿ…
ಪುತ್ತೂರು: ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಕುದ್ಕಾಡಿ ತೋಟದಮೂಲೆಯ ಕಸ್ತೂರಿ ರೈ ಹಾಗೂ ಅವರ ಪುತ್ರ ಗುರುಪ್ರಸಾದ್ ರೈ ಎಂಬುವರನ್ನು ಮನೆಯೊಳಗೆ ಕಟ್ಟಿಹಾಕಿ, ಬಂದೂಕು ತೋರಿಸಿ 15 ಪವನ್ ಚಿನ್ನ, 50 ಸಾವಿರ ರೂ. ಹಾಗೂ ಸಾಮಗ್ರಿ ದೋಚಿದ ಪ್ರಕರಣಕ್ಕೆ ಸಂಬಂಧಿಸಿ ಬಾಡೂರು ನಿವಾಸಿಯೊಬ್ಬನನ್ನು ಅಲ್ಲಿನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಟ್ಲ ಠಾಣಾ ವ್ಯಾಪ್ತಿಯಿಂದಲೂ ಓರ್ವನನ್ನು ವಶಕ್ಕೆ ಪಡೆದಿದ್ದು ಪ್ರಕರಣದಲ್ಲಿ ಐದಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕಾಸರಗೋಡು ಜಿಲ್ಲೆಯ ಸೀತಾಂಗೋಳಿ ಸಮೀಪ ಬಾಡೂರಿನ ಕ್ಲಬ್ ಒಂದರಲ್ಲಿ ಆಟವಾಡುತ್ತಿದ್ದ ಆರೋಪಿಯನ್ನು ಮಪ್ತಿಯಲ್ಲಿದ್ದ ಕರ್ನಾಟಕ ಪೊಲೀಸರು ಕ್ಲಬ್ ಕಟ್ಟಡಕ್ಕೆ ಸುತ್ತುವರಿದು ವಶಕ್ಕೆ ತೆಗೆದುಕೊಂಡಿದ್ದಾರೆ. ಗಾಂಜಾ ಮಾರಾಟ ಸೇರಿದಂತೆ ಕೆಲವೊಂದು ಕ್ರಿಮಿನಲ್ ಕೃತ್ಯಗಳಲ್ಲಿ ಶಾಮೀಲಾಗಿರುವ ಆತನ ವಿರುದ್ಧ ಬದಿಯಡ್ಕ ಪೊಲೀಸ್ ಠಾಣೆಯಲ್ಲೂ ಕೇಸು ದಾಖಲಾಗಿದೆ. ಪ್ರಕರಣದ ಆರಂಭದಿಂದಲೂ ಕಾಸರಗೋಡಿನ ವ್ಯಕ್ತಿಯೊಬ್ಬನ ಕೈವಾಡವಿರುವ ಬಗ್ಗೆ ಪೊಲೀಸರು ಸಂಶಯ ವ್ಯಕ್ತಪಡಿಸಿದ್ದರು. ಈ ನಿಟ್ಟಿನಲ್ಲಿ ತನಿಖೆಯನ್ನು ಕಾಸರಗೋಡಿಗೆ ವಿಸ್ತರಿಸಿದ್ದರು. ಪುತ್ತೂರಿನ ತೋಟದಮೂಲೆ ನಿವಾಸಿ ಕಸ್ತೂರಿ ರೈ…
ಮಂಗಳೂರು: ನಗರದ ಕಣ್ಣೂರು ಬೆಂಝ್ ಶೋ ರೂಮ್‌ನ ಹಿಂಭಾಗದ ನೇತ್ರಾವತಿ ನದಿ ಕಿನಾರೆಯಿಂದ ಅಕ್ರಮವಾಗಿ ಮರಳು ತುಂಬಿಸಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ ಮಂಗಳೂರು ಸಿಸಿಬಿ ಪೊಲೀಸರು ಸೋಮವಾರ ಮಧ್ಯರಾತ್ರಿ ಸುಮಾರಿಗೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಆರೋಪಿಗಳು ಓಡಿ ಹೋಗಿದ್ದಾರೆ. 5 ಟಿಪ್ಪರ್ ಲಾರಿಗಳು, ದೋಣಿ, ಮರಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 25.45 ಲ.ರೂ. ಮೌಲ್ಯ ಆಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಬಿ ಘಟಕದ ಎಎಸ್‌ಐ ಮೋಹನ್ ಮತ್ತು ಸಿಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.
ಕಾಸರಗೋಡು: ಶಾಲಾ ಬಸ್ ಮತ್ತು ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮಹಿಳೆಯರು ಸೇರಿದಂತೆ ಐವರು ಮೃತಪಟ್ಟ ದಾರುಣ ಘಟನೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ. ಮೃತಪಟ್ಟ ನಾಲ್ವರು ಮಹಿಳೆಯರು ಒಂದೇ ಕುಟುಂಬದವಾರಾಗಿದ್ದು, ಮೃತಪಟ್ಟವರನ್ನು ಮೊಗ್ರಾಲ್ ಪುತ್ತೂರು ನಿವಾಸಿ ಆಟೋ ಚಾಲಕ ಅಬ್ದುಲ್ ರೌಫ್ (48), ಉಸ್ಮಾನ್ ರವರ ಪತ್ನಿ ಬೀಫಾತಿಮ್ಮ (50), ಬೀಫಾತಿಮ್ಮ ( 60), ಇಸ್ಮಾಯಿಲ್ ರವರ ಪತ್ನಿ ಉಮ್ಮು ಫಲಿಮಾ, ಬೆಳ್ಳೂರಿನ ಅಬ್ಬಾಸ್ ರವರ ಪತ್ನಿ ನಫೀಸಾ ಎಂದು ಗುರುತಿಸಲಾಗಿದೆ. ಅಪಘಾತದ ತೀವ್ರತೆಗೆ ನಾಲ್ವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟರೆ. ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ರೌಫ್ ಕಾಸರಗೋಡಿನ ಆಸ್ಪತ್ರೆಯಲ್ಲಿ ಮೃತಪಟ್ಟರು. ಪೆರ್ಲ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾ ಹಾಗೂ ವಿದ್ಯಾರ್ಥಿಗಳನ್ನು ಇಳಿಸಿ ಮರಳುತ್ತಿದ್ದ ಖಾಸಗಿ ಶಾಲಾ ಬಸ್ ನಡುವೆ ಅಪಘಾತ ನಡೆದಿದೆ. ಮೃತದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸ್ಥಳಕ್ಕೆ ಬದಿಯಡ್ಕ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.










