ಬೆಂಗಳೂರು;ನೂತನ ಸರಕಾರದಿಂದ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಲಾಗಿದೆ. ನೂತನ ಸಚಿವರಿಗೆ ಖಾತೆ ಹಂಚಿಕೆ ಬಳಿಕ ಉಸ್ತುವಾರಿ ಸ್ಥಾನಕ್ಕೆ ಸಚಿವರು ಲಾಬಿ ನಡೆಸಿದ್ದರು.ಇದೀಗ ಎಲ್ಲಾ ಪ್ರಕ್ರಿಯೆ ನಡೆದು ಉಸ್ತುವಾರಿ ಸಚಿವರ ನೇಮಕ ನಡೆದಿದೆ. ಬೆಂಗಳೂರು ನಗರ ಉಸ್ತುವಾರಿ ಸಚಿವರಾಗಿ ಡಿ.ಕೆ.ಶಿವಕುಮಾರ್ತುಮಕೂರು ಜಿಲ್ಲಾ ಉಸ್ತುವಾರಿ-ಡಾ.ಜಿ.ಪರಮೇಶ್ವರ್ಗದಗ ಜಿಲ್ಲಾ ಉಸ್ತುವಾರಿ ಸಚಿವರಾಗಿ ಹೆಚ್.ಕೆ.ಪಾಟೀಲ್ಬೆಂಗಳೂರು ಗ್ರಾಮಾಂತರ-ಕೆ.ಹೆಚ್.ಮುನಿಯಪ್ಪರಾಮಲಿಂಗಾರೆಡ್ಡಿ-ರಾಮನಗರ, ಕೆ.ಜೆ.ಜಾರ್ಜ್-ಚಿಕ್ಕಮಗಳೂರುಎಂ.ಬಿ.ಪಾಟೀಲ್-ವಿಜಯಪುರದಿನೇಶ್ ಗುಂಡೂರಾವ್-ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಲಿದ್ದಾರೆ. ಹೆಚ್.ಸಿ.ಮಹದೇವಪ್ಪ-ಮೈಸೂರು, ಸತೀಶ್ ಜಾರಕಿಹೊಳಿ-ಬೆಳಗಾವಿ,ಪ್ರಿಯಾಂಕ್ ಖರ್ಗೆ-ಕಲಬುರಗಿ, ಶಿವಾನಂದಪಾಟೀಲ್-ಹಾವೇರಿಜಮೀರ್ ಅಹ್ಮದ್ ಖಾನ್-ವಿಜಯನಗರಶರಣಬಸಪ್ಪ ದರ್ಶನಾಪುರ-ಯಾದಗಿರಿಈಶ್ವರ್ ಖಂಡ್ರೆ-ಬೀದರ್ ಜಿಲ್ಲೆಯ ಉಸ್ತುವಾರಿ ವಹಿಸಲಿದ್ದಾರೆ. ಚಲುವರಾಯಸ್ವಾಮಿ-ಮಂಡ್ಯಎಸ್.ಎಸ್.ಮಲ್ಲಿಕಾರ್ಜುನ್-ದಾವಣಗೆರೆಸಂತೋಷ್ ಲಾಡ್-ಧಾರವಾಡಶರಣಪ್ರಕಾಶ್ ಪಾಟೀಲ್-ರಾಯಚೂರುಆರ್.ಬಿ.ತಿಮ್ಮಾಪುರ-ಬಾಗಲಕೋಟೆಕೆ.ವೆಂಕಟೇಶ್-ಚಾಮರಾಜನಗರಕೊಪ್ಪಳ-ಶಿವರಾಜ್ ತಂಗಡಗಿ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ.
Author: main-admin
ಪೊಲೀಸರು ಕುಂಕುಮ, ವಿಭೂತಿ ಇಡುವಂತಿಲ್ಲ ಎಂದು ನಾನು ಹೇಳಿಲ್ಲ. ಬೊಟ್ಟು ಯಾರು ಬೇಕಾದರೂ ಇಟ್ಟುಕೊಳ್ಳಬಹುದು. ಪೊಲೀಸರಿಗೆ ನಿಯಮಗಳ ಪ್ರಕಾರ ವಸ್ತ್ರ ಸಂಹಿತೆ ಇರುತ್ತದೆ. ಅದನ್ನು ಪಾಲಿಸಲಷ್ಟೇ ತಿಳಿಸಿದ್ದೇನೆ. ಈ ವಿಚಾರದಲ್ಲಿ ಅಪಪ್ರಚಾರ ಬೇಡ’ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ ಸ್ಪಷ್ಟನೆ ನೀಡಿದ ಅವರು, ಅನಗತ್ಯ ವಿವಾದಗಳನ್ನು ಸೃಷ್ಟಿಮಾಡುವ ಅಗತ್ಯವಿಲ್ಲ. ನಾನು ಅಂತಹ ಯಾವುದೇ ಸೂಚನೆಯನ್ನು ನೀಡಿಲ್ಲ. ವಸ್ತ್ರ ಸಂಹಿತೆ ಪಾಲಿಸುವಂತೆ ಸೂಚಿಸಿದ್ದೇನೆ. ಬೊಟ್ಟು ಇಡಬೇಡಿ ಎಂದು ಯಾರಿಗೂ ಹೇಳಿಲ್ಲ. ಸುಳ್ಳು ಸುದ್ದಿ ಹಬ್ಬಿಸುವ ಪ್ರಯತ್ನ ಬೇಡ ಎಂದು ಸ್ಪಷ್ಟಪಡಿಸಿದರು. ಹಿಂದೂಗಳನ್ನು ಗುರಿ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಕೋಮುವಾದ ಒಂದು ಸಮುದಾಯಕ್ಕೆ ಸೀಮಿತವಲ್ಲ. ಯಾವುದೇ ಸಮುದಾಯದವರು ಕೋಮು ಪ್ರಚೋದನೆಗೆ ಯತ್ನಿಸಿದರೂ ಕ್ರಮ ಖಚಿತ ಎಂದು ಹೇಳಿದರು. ಎಲ್ಲಾ ಸಮುದಾಯದಲ್ಲೂ ಕೋಮುವಾದ ಇದೆ. ಕೋಮುವಾದ ತಡೆಗೆ ಪೊಲೀಸ್ ಇಲಾಖೆಯಲ್ಲಿ ಪ್ರತ್ಯೇಕ ವಿಂಗ್ ಮಾಡುತ್ತೇವೆ ಎಂದರು.
ಮಂಗಳೂರು: ದ.ಕ. ಜಿಲ್ಲಾಧಿಕಾರಿ ಕಚೇರಿಯ ವಾಹನ ಚಾಲಕರಾಗಿದ್ದ ಬಾಲಕೃಷ್ಣ (58) ಎಂಬವರು ಗುರುವಾರ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಂಗ್ರಕೂಳೂರು ಮಾಲಾಡಿ ಕೋರ್ಟ್ ಬಳಿ ನೆಲೆಸಿದ್ದ ಅವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ. ಗುರುವಾರ ತನ್ನ ಮನೆಯ ಮಹಡಿಗೆ ಹೋದವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅವರ ಪುತ್ರ ಚೇತನ್ ನೀಡಿದ ದೂರಿನಂತೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರು ಥೀಮ್ ಪಾರ್ಕ್ ಸಮೀಪ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಯುವಕನೊಬ್ಬ ದಾರುಣವಾಗಿ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಬೈಲೂರು ಕೆಳಪೇಟೆಯಲ್ಲಿ ಬಸ್ ಮತ್ತು ಸ್ಕೂಟಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಾರ್ಕಳ ನಿವಾಸಿ ಕಾರ್ತಿಕ್ (26) ಮೃತ ದುರ್ದೈವಿ. ಗುರುವಾರ ರಾತ್ರಿ ಕಾರ್ಕಳದಿಂದ ಉಡುಪಿಗೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಬೈಲೂರಿನಿಂದ ಜಾರ್ಕಳ ಕಡೆಗೆ ಸಾಗುತ್ತಿದ್ದ ಸ್ಕೂಟಿ ಮಧ್ಯೆ ಡಿಕ್ಕಿ ಹೊಡೆದಿದ್ದು, ಸವಾರ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಕೂಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಕೆಲಸ ಮುಗಿಸಿ ಮನೆಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಮೃತರು ಪತ್ನಿ ಮತ್ತು ಪುಟ್ಟ ಮಗುವನ್ನು ಅಗಲಿದ್ದಾರೆ.ಅಪಘಾತ ನಡೆದ ಸ್ಥಳದಲ್ಲಿ ಕೆಲಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತು. ಘಟನಾ ಸ್ಥಳಕ್ಕೆ ಕಾರ್ಕಳ ನಗರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.
ನವದೆಹಲಿ : ಜಗತ್ತು 21ನೇ ಶತಮಾನದಲ್ಲಿದ್ದು, ವ್ಯಾಪಾರ, ತಂತ್ರಜ್ಞಾನ, ಪ್ರಗತಿ ಉತ್ತುಂಗದಲ್ಲಿದೆ. ಆದರೆ ಈ ಸಮಯದಲ್ಲಿಯೂ, ಯಾರಾದರೂ ಆಹಾರ ಮತ್ತು ಚಿಕಿತ್ಸೆಯಿಲ್ಲದೆ ಸಾವನ್ನಪ್ಪಿದರೆ, ಅದು ಆ ದೇಶಕ್ಕೆ ಮತ್ತು ಜಗತ್ತಿಗೆ ನಾಚಿಕೆಗೇಡಿನ ವಿಷಯವಾಗಿದೆ. ಅಂತಹ ಒಂದು ನೈಜ ಘಟನೆಯನ್ನ ನಾವಿಂದು ಹೇಳಲಿದ್ದೇವೆ. ನಿಮ್ಮ ಕಣ್ಣುಗಳಲ್ಲಿ ಕಣ್ಣೀರು ಬರುತ್ತೆ, ನಿಮ್ಮ ನಿಮ್ಮ ಹೃದಯವು ನಡುಗುತ್ತದೆ. ಸುಡಾನ್’ನ ಅನಾಥಾಶ್ರಮವೊಂದರಲ್ಲಿ ಈ ಘಟನೆ ನಡೆದಿದ್ದು, ಆಹಾರ ಮತ್ತು ಚಿಕಿತ್ಸೆಯಿಲ್ಲದೆ 71 ಮಕ್ಕಳು ಸಾವನ್ನಪ್ಪಿದ್ದಾರೆ. ಹಸಿವು ಮತ್ತು ರೋಗದಿಂದ ಈ ಮಕ್ಕಳ ಸಾವು ಇಡೀ ಜಗತ್ತನ್ನು ಬೆಚ್ಚಿಬೀಳಿಸಿದೆ. ವರದಿಯ ಪ್ರಕಾರ, ಏಪ್ರಿಲ್ನಿಂದ ಸುಡಾನ್ನಲ್ಲಿ ಹಸಿವು ಮತ್ತು ಕಾಯಿಲೆಯಿಂದ 71 ಮಕ್ಕಳು ಸಾವನ್ನಪ್ಪಿದ್ದಾರೆ. ಘಟನೆಯ ನಂತರ ಕನಿಷ್ಠ 300 ಮಕ್ಕಳನ್ನ ಅನಾಥಾಶ್ರಮದಿಂದ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಸುಡಾನ್’ನ ಅಲ್-ಮಕುಮಾ ಅನಾಥಾಶ್ರಮದಲ್ಲಿ ಕಳೆದ ತಿಂಗಳು ಸೇನೆ ಮತ್ತು ಅರೆಸೈನಿಕ ರಾಪಿಡ್ ಸಪೋರ್ಟ್ ಫೋರ್ಸ್ ನಡುವೆ ನಡೆದ ಭೀಕರ ಹೋರಾಟದ ನಡುವೆ ಮಕ್ಕಳ ಸಾವು ಬೆಳಕಿಗೆ ಬಂದಿದೆ. ಖಾರ್ಟೂಮ್’ನ ಅಲ್ ಮಕುಮಾ…
ಬೆಂಗಳೂರು : ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿ ಚರ್ಚಿಸಿದರು. ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು. ಕುಂಟು ನೆಪ ನೀಡಿ ತಿರಸ್ಕರಿಸುವಂತಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದರು. ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್ ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಗೃಹ ಜ್ಯೋತಿ…
ಉಳ್ಳಾಲ: ನೂತನ ಮನೆ ಖರೀದಿಸಿದ ಯುವತಿಯೋರ್ವಳು ಅದ್ಧೂರಿ ಗೃಹ ಪ್ರವೇಶಗೈದ ಐದೇ ದಿವಸದಲ್ಲಿ ಅದೇ ಮನೆ ಕೋಣೆಯೊಳಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಮೂಲತಃ ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿಯಾಗಿದ್ದ ಅಶ್ವಿನಿ ಬಂಗೇರ(25) ಆತ್ಮಹತ್ಯೆಗೈದ ಯುವತಿ. ನಿನ್ನೆ ರಾತ್ರಿ ಅಶ್ವಿನಿ ತನ್ನ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಳು ಎನ್ನಲಾಗಿದ್ದು ಸ್ನೇಹಿತೆ ಬೆಳಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದು ಬೆಳಕಿಗೆ ಬಂದಿದೆ. ಅಶ್ವಿನಿ ಬರೆದ 24 ಪುಟಗಳ ಡೆತ್ ನೋಟ್ ಪೊಲೀಸರಿಗೆ ದೊರೆತಿದೆ. ಡೆತ್ ನೋಟಲ್ಲಿ ತಾನು ಮನೆ ಖರೀದಿಸಿ ಮೋಸ ಹೋಗಿದ್ದು ಬ್ಯಾಂಕ್ ಅಧಿಕಾರಿಗಳು ಬಂದು ಪೀಡಿಸುತ್ತಿರುವ ಬಗ್ಗೆ ಉಲ್ಲೇಖಿಸಲಾಗಿದೆಯಂತೆ. ಅಶ್ವಿನಿ ಸಾಮಾನ್ಯ ಕುಟುಂಬದವರಾಗಿದ್ದು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಒಂದೂವರೆ ತಿಂಗಳ ಹಿಂದೆ ಊರಿಗೆ ಬಂದಿದ್ದಳು. ಕುಂಪಲದ ಚಿತ್ರಾಂಜಲಿ ನಗರದಲ್ಲಿ ಸಂಗೀತಾ ಎಂಬವರಿಂದ ಅಶ್ವಿನಿಯೇ ಮನೆಯೊಂದನ್ನ ಖರೀದಿಸಿದ್ದು ಕಳೆದ ಜೂ.3 ರಂದು ಗೃಹ…
ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಸಣಾ ಶಿಬಿರ ಹೃದಯ ವೈಶಾಲ್ಯ ಯೋಜನೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಜಿಲ್ಲೆಯಲ್ಲಿ ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ಪ್ರಕಟಿಸಿದರು. ಅವರು ಜೂ.7ರ ಬುಧವಾರ ಮೂಡುಬಿದಿರೆ ಆರೋಗ್ಯ ಕೇಂದ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಕಾರ್ಡಿಯಾಲಜಿ ಡೋರ್‍ಸ್ಟೆಪ್ ಫೌಂಡೇಶನ್ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಹೃದಯ ತಜ್ಞ ಡಾ. ಪದ್ಮನಾಭ ಕಾಮತ್ ಹಾಗೂ ತಂಡದವರಿಂದ ಹೃದಯ ವೈಶಾಲ್ಯ ಯೋಜನೆ “ಹೃದಯ ತಜ್ಞ ಮನೆ ಬಾಗಿಲಿಗೆ” ಹೃದಯ ಸಂಬಂಧಿತ ಕಾಯಿಲೆಗಳ ಉಚಿತ ತಪಸಣಾ ಶಿಬಿರ ಹೃದಯ ವೈಶಾಲ್ಯ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು. ಈ ಯೋಜನೆಯನ್ನು ಮೊದಲ ಬಾರಿಗೆ ಜಾರಿಗೊಳಿಸಿರುವ ಬಗ್ಗೆ ರಾಜ್ಯದ ಪ್ರಧಾನ ಕಾರ್ಯದರ್ಶಿಯವರ ಗಮನಕ್ಕೆ ತರಲಾಗಿದೆ, ಹೃದಯ ವೈಶಾಲ್ಯ ಯೋಜನೆಯ ಸೂತ್ರಧಾರಿ ಹೃದಯ ತಜ್ಞ ಡಾ| ಪದ್ಮನಾಭ ಕಾಮತ್, ಅವರ ಚಿಂತನೆಯಲ್ಲಿ ಮೂಡಿ ಬಂದ…
ಬೆಂಗಳೂರು: ರಾಜ್ಯ ಸರಕಾರವು ಅಲೋಕ್ ಕುಮಾರ್ ಸೇರಿ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಅಲೋಕ್ ಕುಮಾರ್ ಅವರನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಉಮೇಶ್ ಕುಮಾರ್ ಅವರನ್ನು ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಅಪರಾಧಗಳು ಮತ್ತು ತಾಂತ್ರಿಕ ಸೇವೆಗಳ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಆರ್. ಹಿತೇಂದ್ರ ಅವರನ್ನು ಕಾನೂನು ಮತ್ತು ಸುವ್ಯವಸ್ಥೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ನಿಯೋಜಿಸಲಾಗಿದೆ. ಪೊಲೀಸ್ ಕಂಪ್ಯೂಟರ್ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಸೌಮೇಂದು ಮುಖರ್ಜಿ ಅವರನ್ನು ಆಡಳಿತ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ. ಇವರುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಮಂಗಳೂರು: ಮಳೆಯ ಅಭಾವದಿಂದ ದಕ್ಷಿಣ ಕನ್ನಡದ ಹಲವೆಡೆ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈ ಬಗ್ಗೆ ದ.ಕ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ಪ್ರತಿಕ್ರಿಯೆ ನೀಡಿದ್ದಾರೆ. ದ.ಕ ಜಿಲ್ಲೆಯಲ್ಲಿ ಪ್ರತೀ ವರ್ಷ ಜೂನ್ ತಿಂಗಳಲ್ಲಿ ಮಳೆ ಬರಬೇಕಿತ್ತು. ತಡವಾದ ಕಾರಣ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಆದರೂ ಜಿಲ್ಲಾಡಳಿತ ಶಾಲಾ, ಕಾಲೇಜು ಸೇರಿ ಎಲ್ಲಾ ಕಡೆ ನೀರು ಪೂರೈಸಲು ವ್ಯವಸ್ಥೆ ಮಾಡಿದೆ. ಸದ್ಯ ತುಂಬೆ ಡ್ಯಾಂನಲ್ಲಿ 1.86 ಮೀ. ಮಟ್ಟಕ್ಕೆ ನೀರು ಇಳಿದಿದೆ. ಇದರಿಂದ ಮಂಗಳೂರು ನಗರಕ್ಕೆ ನೀರಿನ ಸಮಸ್ಯೆ ಇದೆ ಅಂತ ಪಾಲಿಕೆ ಕಮಿಷನರ್ ಹೇಳಿದ್ದರು. ಹೀಗಾಗಿ ಎಎಂಆರ್ ಡ್ಯಾ ನಿಂದ ಈಗಾಗಲೇ ನೀರು ಬಿಡಲಾಗಿದೆ. ಇವತ್ತು ಸಂಜೆಯೊಳಗೆ ಆ ನೀರು ತುಂಬೆ ಡ್ಯಾಂ ಬಂದು ಸೇರಲಿದೆ. ತುಂಬೆ ಡ್ಯಾಂನಲ್ಲಿ 4 ಮೀ ನೀರು ತುಂಬಲಿದೆ ಎಂದರು. ಕಳೆದ ಎರಡು ದಿನ ಪೈಪ್ ಲೈನ್ ಹಾಗೂ ಮೋಟಾರ್ ರಿಪೇರಿ ಕೆಲಸ ಇತ್ತು. ಹೀಗಾಗಿ ಎರಡು ದಿನ ನಗರದಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಪೈಪ್…










