Author: main-admin

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ, ನಿಂದನೆ ಪೋಸ್ಟ್ ಹಾಕಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ್ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಿಂದನೆ ಪೋಸ್ಟ್ ಹಾಕಿದ್ರೆ ತಕ್ಷಣವೇ ಬಂಧಿಸಲಾಗುತ್ತದೆ. ಸೇವಾ ಸಂಸ್ಥೆಗಳ ಜೊತೆಗೆ ನಾವು ಸಂಪರ್ಕದಲ್ಲಿದ್ದೇವೆ. ನಿಂದನೆ, ಹೀಯಾಳಿಸುವುದು ಸೇರಿದಂತೆ ಕೋಮು ಪ್ರಚೋದನೆ ಪೋಸ್ಟ್ ಹಾಕಿದ್ರೆ ಸಹಿಸುವುದಿಲ್ಲ. ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದ ಗ್ರೂಪ್‌ಗಳಲ್ಲೂ ಪ್ರಚೋದನಕಾರಿ ಸಂದೇಶಗಳು ಹಾಗೂ ಸುಳ್ಳು ಸುದ್ದಿಗಳು ಹರಡಿದರೆ ಅಂತಹ ಗ್ರೂಪ್‌ ಅಡ್ಮಿನ್‌ಗಳ ವಿರುದ್ಧ ಕೋಮು ಸಾಮರಸ್ಯಕ್ಕೆ ದಕ್ಕೆ ತಂದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದ್ದಾರೆ.

Read More

ಮಂಗಳೂರು : ಪ್ರಕರಣವೊಂದರಲ್ಲಿ ಆರೋಪಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಅಸಾಮಿಯನ್ನು ಪೊಲೀಸರು ಬೆಳ್ತಂಗಡಿಯಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ಶಾಂತಿಗುಡ್ಡೆ ಮಹಮ್ಮದ್ ಅಶ್ರಫ್ ಬಂಧಿತ ಆರೋಪಿ. ಈತನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್‌ ಅಶ್ರಫ್ ಜಾಮೀನು ಪಡೆದಿದ್ದ. ಆ ಬಳಿಕ ಆತ ನ್ಯಾಯಾಲಯಕ್ಕೆ ಆತ ಹಾಜರಾಗಿರಲಿಲ್ಲ. ಹಲವು ಬಾರಿ ವಾರೆಂಟ್ ಹೊರಡಿಸಿದರು ಆರೋಪಿಯು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದೀಗ ಆತನನ್ನು ಪೊಲೀಸರು ಬೆಳ್ತಂಗಡಿಯಲ್ಲಿ ದಸ್ತಗಿರಿ ಮಾಡಿದ್ದಾರೆ. ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು.

Read More

ಉಡುಪಿ : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 15 ಸಾವಿರಕ್ಕೂ ಹೆಚ್ಚು ಪೊಲೀಸ್ ಸಬ್ ಇನ್ಸ್ ಪೆಕ್ಟರ್, ಕಾನ್ಸ್ ಟೇಬಲ್ ಹುದ್ದೆಗಳಿಗೆ ಹಂತ ಹಂತವಾಗಿ ನೇಮಕ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರತಿ ವರ್ಷವೂ 2 ಸಾವಿರ ಪೊಲೀಸರು ನಿವೃತ್ತರಾಗಿ ಹುದ್ದೆಗಳು ಖಾಲಿ ಬೀಳುತ್ತಿವೆ. ಪಿಎಸ್ ಐ ನೇಮಕ ಹಗರಣಕ್ಕೆ ಸಂಬಂಧಿಸಿ ಹೈಕೋರ್ಟ್ ನಲ್ಲಿರುವ ತಡೆಯಾಜ್ಞೆ ತೆರವು ಬಳಿಕ ಹಾಗೂ ಹಗರಣದಲ್ಲಿ ಸಿಲುಕದ 450 ಅಭ್ಯರ್ಥಿಗಳ ಭವಿಷ್ಯದ ಬಗ್ಗೆ ಕಾನೂನು ತಜ್ಞರ ಜೊತೆಗೆ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಇನ್ನು ಬಿಜೆಪಿ ಸರ್ಕಾರದ ಹಗರಣಗಳ ಸಾಧಕ, ಬಾಧಕವನ್ನು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು. ಹಿಜಾಬ್ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ತೀರ್ಪು ಬರುವವರೆಗೂ ಕಾಯೋಣ ಎಂದು ಹೇಳಿದ್ದಾರೆ.

Read More

ಉಡುಪಿ : ಅರಬ್ಬಿ ಸಮುದ್ರದಲ್ಲಿ ಸಂಭವಿಸಿದ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಿದ್ದು, ಇದರಿಂದ ರಾಜ್ಯದ ಪಶ್ಚಿಮದ ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಗಾಳಿ ಮಳೆ ಸುರಿಯಲಿದ್ದು ಸಮುದ್ರ ಪ್ರಕ್ಷುಬ್ಧವಾಗಿರಲಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾಮ್ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಿ ಪ್ರಕಟಣೆ ಹೊರಡಿಸಿದ್ದಾರೆ. ಚಂಡಮಾರುತದ ಚಲನೆಯ ಕಾರಣದಿಂದ ಸಮುದ್ರದಲ್ಲಿ ಬೃಹತ್ ಗಾತ್ರದ ಅಲೆಗಳು ಏಳುವ ಸಂಭವವಿದ್ದು, ಭಾರೀ ಮಳೆಯೂ ಸುರಿಯುವ ಸಾಧ್ಯತೆ ಇದೆ. ಆದುದರಿಂದ ಈ ಅವಧಿಯಲ್ಲಿ ಮೀನುಗಾರರು ಮೀನುಗಾರಿಕೆ ಗಾಗಿ ಸಮುದ್ರಕ್ಕೆ ತೆರಳುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಜಿಲ್ಲಾಡಳಿತದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಸಾರ್ವಜನಿಕ ರಿಗೆ ಕೆಲವು ಸೂಚನೆಗಳನ್ನು ನೀಡಿದ್ದು, ಅದನ್ನು ಪಾಲಿಸುವಂತೆ ತಿಳಿಸಲಾಗಿದೆ. ಸಾರ್ವಜನಿಕರು, ಪ್ರವಾಸಿಗರು ಸಮುದ್ರ, ನದಿ ತೀರ ಪ್ರದೇಶಗಳಲ್ಲಿ ನೀರಿಗೆ ಇಳಿಯದಂತೆ ಕಟ್ಟೆಚ್ಚರ ವಹಿಸು ವಂತೆ ತಿಳಿಸಲಾಗಿದೆ. ಈ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಕರು ಸಮುದ್ರ ತೀರ, ಅಪಾಯಕಾರಿ ವಿದ್ಯುತ್ಕಂಬ, ಕಟ್ಟಡ, ಮರಗಳ ಬಳಿ, ಕೆಳಗೆ ನಿಲ್ಲದಂತೆ ಎಚ್ಚರಿಸಲಾಗಿದೆ.…

Read More

ಬೆಂಗಳೂರು: ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಹಿಂದಿನ ಬಿಜೆಪಿ ಸರ್ಕಾರದಲ್ಲಿ ಪರಿಷ್ಕರಿಸಿದ್ದ ಕೆಲವೊಂದು ಅಧ್ಯಾಯಗಳನ್ನು ಕೈಬಿಡಲು ನಿರ್ಧರಿಸಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಈ ಸಾಲಿನ ಮಟ್ಟಿಗೆ ವಿವಾದಿತ ಹಾಗೂ ಆಕ್ಷೇಪಣೆಗಳಿರುವ ಪಠ್ಯಗಳನ್ನು ಬೋಧನೆ, ಪರೀಕ್ಷೆ ಮತ್ತು ಮೌಲ್ಯಮಾಪನ ಪ್ರಕ್ರಿಯೆಯಿಂದ ಕೈಬಿಡಲು ತೀರ್ಮಾನಿಸಲಾಗಿದೆ.ಈ ಸಭೆಯಲ್ಲಿ ಈಗಾಗಲೇ ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಪಠ್ಯಪುಸ್ತಕ ಪರಿಷ್ಕರಣೆ ವಿಚಾರದಲ್ಲಿ ಯಾವುದೇ ಆತುರದ ನಿರ್ಧಾರ ತೆಗೆದುಕೊಳ್ಳಬಾರದು ಎಂದು ತಜ್ಞರು , ಸಾಹಿತಿಗಳು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.ಹೀಗಾಗಿ ಮುಂದಿನ ಸಂಪುಟದಲ್ಲಿ ಮತ್ತೊಮ್ಮೆ ಈ ವಿಷಯ ಚರ್ಚಿಸಿ ಘೋಷಣೆ ಮಾಡುವುದಾಗಿ ಸಿಎಂ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ಇಂದು 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಇಂದು ಅಧಿಸೂಚನೆಯನ್ನು ಹೊರಡಿಸಿದ್ದು, 1990ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಕಪಿಲ್ ಮೋಹನ್ ಅವರನ್ನು ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಿದೆ. ಐಎಎಸ್ ಧಿಕಾರಿ ಉಮಾಶಂಕರ್ ಎಸ್ ಆರ್ ಅವರನ್ನು ಸಹಕಾರ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹುದ್ದೆಯಿಂದ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ನೇಮಿಸಿ ಆದೇಶಿಸಿದೆ. ಹುದ್ದೆಯ ನಿರೀಕ್ಷೆಯಲ್ಲಿದ್ದಂತ ಮಂಜುನಾಥ್ ಪ್ರಸಾದ್ ಅವರನ್ನು ಸಹಕಾರ ಇಲಾಖೆಯ ಪ್ರಿನ್ಸಿಪಲ್ ಸೆಕ್ರೇಟರಿಯಾಗಿ ನೇಮಿಸಿದೆ. ವಿ ಅನ್ಬುಕುಮಾರ್ ಅವರನ್ನು ಕೆ ಎಸ್ ಆರ್ ಟಿಸಿ ಎಂ.ಡಿ ಹುದ್ದೆಯಿಂದ ವರ್ಗಾವಣೆ ಮಾಡಿ, ಕೃಷಿಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ. ಐಎಎಸ್ ಅಧಿಕಾರಿ ಮೋಹನ್ ರಾಜ್ ಕೆ.ಪಿ ಅವರನ್ನು ಆರ್ಟಿಕಲ್ಚರ್ ಮತ್ತು ಸಿರಿಕಲ್ಚರ್ ಇಲಾಖೆಯ ಸೆಕ್ರೇಟರಿಯಾಗಿ, ಡಾ.ರಿಚರ್ಡ್ ವಿನ್ಸನ್ ಡಿಸೋಜಾ ಅವರನ್ನು ಎಂಎಸ್‌ಎಂಇ ಮತ್ತು ಮೈನ್ ಇಲಾಖೆಯ ಕಾರ್ಯದರ್ಶಿಯಾಗಿ ನಿಯೋಜಿಸಿದೆ. ಕೆಐಎಡಿಬಿಯ ಸಿಇಓ…

Read More

ವಿಟ್ಲ: ಸಾರಡ್ಕ-ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ರಿಕ್ಷಾಕ್ಕೆ ದನ ಅಡ್ಡ ಬಂದ ಹಿನ್ನಲೆ ರಿಕ್ಷಾವೊಂದು ಮಗುಚಿ ಬಿದ್ದು ಜಖಂಗೊಂಡ ಘಟನೆ ನಡೆದಿದೆ. ಆಜೇರು ನಿವಾಸಿ ಶಾಂತಾರಾಮ ರಾವ್ ಅವರು ರಿಕ್ಷಾದಲ್ಲಿ ಮಂಗಳವಾರ ಬೆಳಗ್ಗೆ ತೋರಣಕಟ್ಟೆಯಿಂದ ಪರಿಯಲ್ತಡ್ಕಕ್ಕೆ ಹಾಲು ಸಾಗಾಟ ಮಾಡುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಘಟನೆಯಿಂದ ರಿಕ್ಷಾದಲ್ಲಿ ಇದ್ದ ಸುಮಾರು 50ಲೀಟರ್ ಹಾಲು ರಸ್ತೆಗೆ ಚೆಲ್ಲಲ್ಪಟ್ಟಿದೆ. ರಿಕ್ಷಾ ಚಾಲನೆ ಮಾಡುತ್ತಿದ್ದ ಶಾಂತಾರಾಮ ಅವರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಇಳಿಜಾರು ಪ್ರದೇಶದಲ್ಲಿ ರಸ್ತೆಗೆ ಏಕಾಏಕಿ ದನ ಅಡ್ಡ ಬಂದಿದ್ದು, ತಪ್ಪಿಸಲು ಹೋಗುವ ಸಂದರ್ಭ ರಿಕ್ಷಾ ರಸ್ತೆಯ ಪಕ್ಕಕ್ಕೆ ಮಗುಚಿದೆ ಎಂದು ಹೇಳಲಾಗಿದೆ.

Read More

ಮಂಗಳೂರು: ಅಕ್ರಮ ಜಾನುವಾರು ಸಾಗಾಟ ಪ್ರಕರಣದಲ್ಲಿ ಭಾಗಿಯಾಗಿ ಪರಾರಿಯಾಗಿದ್ದ ನಾಲ್ವರನ್ನು ಜೂನ್ 5ರ ಸೋಮವಾರ ತಡ ರಾತ್ರಿ ಕಾಲಾಪು ಬಳಿ ಬಂಧಿಸಲಾಗಿದೆ. ಬಂಧಿತರನ್ನು ಉಳ್ಳಾಲ ಮೂಲದ ಅಹಮ್ಮದ್ ಇರ್ಷಾದ್, ಜಾಫರ್ ಸಾದಿಕ್ , ಫಯಾಝ್ ಮತ್ತು ಮಂಜೇಶ್ವರದ ಖಾಲಿದ್ ಬಿಎಂ ಎಂದು ಗುರುತಿಸಲಾಗಿದೆ. ಆರೋಪಿಗಳು ಅಮಲಮೊಗರು ಎಂಬಲ್ಲಿ ವೃದ್ಧೆಯೊಬ್ಬರಿಂದ ನಾಲ್ಕು ಹಸುಗಳನ್ನು ಖರೀದಿಸಿ ಕೇರಳ ನೋಂದಾಯಿತ ಸಂಖ್ಯೆಯ ಮಿನಿ ಗೂಡ್ಸ್ ವಾಹನದಲ್ಲಿ ಉಳ್ಳಾಲದ ಅಲೇಕಲಕ್ಕೆ ವಧೆ ಮಾಡಲು ಸಾಗಿಸುತ್ತಿದ್ದರು. ದ್ವಿಚಕ್ರ ವಾಹನವೊಂದು ವಾಹನವನ್ನು ಹಿಂಬಾಲಿಸುತ್ತಿತ್ತು. ಈ ವೇಳೆ ವಾಹನ ಕೆಟ್ಟು ರಸ್ತೆಯ ಮೇಲೆ ಏರಲು ಸಾಧ್ಯವಾಗದಿದ್ದಾಗ, ಈ ಮೂವರು ವಾಹನ ತಳ್ಳಲು ಪ್ರಾರಂಭಿಸಿದರು. ಸ್ಥಳೀಯ ನಿವಾಸಿಗಳು ವಾಹನವನ್ನು ತಳ್ಳಿ ಸಹಾಯ ಮಾಡಲು ಹೋದಾಗ ನಾಲ್ಕು ಹಸುಗಳನ್ನು ಕಟ್ಟಿ ಹಾಕಿ ಟಾರ್ಪಲ್ ಹಾಕಿರುವುದು ಗಮನಕ್ಕೆ ಬಂದಿತ್ತು.ವಿಚಾರಣೆ ನಡೆಸಿದಾಗ ಆರೋಪಿಗಳು ಸರಕು ಸಾಗಣೆ ವಾಹನ, ಹಸುಗಳು ಹಾಗೂ ದ್ವಿಚಕ್ರ ವಾಹನವನ್ನು ಬಿಟ್ಟು ಓಡಿ ಹೋಗಿದ್ದರು.

Read More

ಮಂಗಳೂರು: ಬಹುಮಾನ ಗೆದ್ದಿರುವುದಾಗಿ ಕರೆ ಮಾಡಿದ್ದ ವ್ಯಕ್ತಿ, ವೈದ್ಯಕೀಯ ವಿದ್ಯಾರ್ಥಿನಿಗೆ ವಂಚಿಸಿರುವ ಬಗ್ಗೆ ಮಂಗಳೂರು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜೂ.3ರಂದು ಅಪರಿಚಿತನೊಬ್ಬ ಕರೆ ಮಾಡಿ ‘ನೀವು ಐ ಫೋನ್ ಪ್ರೊ-12 ಗೆದ್ದಿದ್ದೀರಿ. ಅದನ್ನು ಕಳುಹಿಸಿಕೊಡಲು ಜಿಎಸ್‌ಟಿ ಪಾವತಿಸಬೇಕು’ ಎಂದು ಹೇಳಿದ. ಅದನ್ನು ನಂಬಿದ ತಾನು ಗೂಗಲ್‌ಪೇ ಮೂಲಕ ಹಂತ ಹಂತವಾಗಿ 98,972 ರೂ. ಕಳುಹಿಸಿದ್ದೆ. ಬಳಿಕ ಅಪರಿಚಿತ ವ್ಯಕ್ತಿ ಮತ್ತಷ್ಟು ಹಣವನ್ನು ಕಳುಹಿಸುವಂತೆ ಸೂಚಿಸಿದ ಎಂದು ವಿದ್ಯಾರ್ಥಿನಿ ದೂರಿನಲ್ಲಿ ತಿಳಿಸಿದ್ದಾರೆ.

Read More

ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ಮೇಲೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೂಚನೆ ನೀಡಿದರು. ಅವರು ಸೋಮವಾರ ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದರು. ಜನ ಬದಲಾವಣೆ ಬಯಸಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸದೇ ಉಡಾಫೆ, ಅಸಡ್ಡೆ ಮಾಡುವ ಅಧಿಕಾರಿಗಳಿಗೆ ಜಾಗವಿಲ್ಲ, ಅವರ ಮೇಲೆ ಯಾರದೂ ಮುಲಾಜಿಲ್ಲದೇ ನಿರ್ಧಾಕ್ಷೀಣ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲಾ ರಕ್ಷಣಾಧಿಕಾರಿಯವರು ಕ್ರಮ ಕೈಗೊಳ್ಳಬೇಕು. ಸಮಾಜದಲ್ಲಿ ಅಶಾಂತಿ ಉಂಟು ಮಾಡುವವರ ಮೇಲೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಯಾವುದೇ ದೂರು ಬಾರದಂತೆ ನೋಡಿಕೊಳ್ಳಬೇಕು. ಆದರೆ ಯಾವುದೇ ನೈತಿಕ ಪೊಲೀಸ್‍ಗಿರಿಗೆ ಅವಕಾಶ ಇರಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ದೂರುಗಳಿಗೆ ಪ್ರತಿಕ್ರಿಯಿಸಿ; ಪತ್ರಿಕೆಗಳು, ಟಿ.ವಿ.ಗಳಲ್ಲಿ ಮತ್ತು ಸಾರ್ವಜನಿಕರಿಂದ ಬರುವ ದೂರುಗಳಿಗೆ ತಕ್ಷಣ ಸ್ಪಂದಿಸುವ ಕೆಲಸ ಮಾಡಬೇಕು. ಅನೇಕ ಅಧಿಕಾರಿಗಳು ಕ್ಷೇತ್ರಗಳಿಗೆ ಹೋಗದೆ ಹವಾನಿಯಂತ್ರಿತ ಕೊಠಡಿಗಳಲ್ಲಿ ಕೂತು ಹೋಗುತ್ತಾರೆ. ಸರ್ಕಾರ ವಾಹನ…

Read More