ಮಂಗಳೂರು : ಮಂಗಳೂರು ತಾಲೂಕಿನ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡೂರು ಗ್ರಾಮದ ನಂದ್ಯಾ ಎಂಬಲ್ಲಿ ಗುರುಪುರ ನದಿಯಿಂದ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಸ್ಥಳಕ್ಕೆ ಶನಿವಾರ ನಸುಕಿನ ವೇಳೆ ಬಜ್ಪೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿ ಸಂದರ್ಭ ಸ್ಥಳದಲ್ಲಿದ್ದ ಎರಡು ಟಿಪ್ಪರ್ ಲಾರಿಗಳ ಸಹಿತ 15 ದೋಣಿಗಳನ್ನು ವಶಕ್ಕೆ ಪಡೆದಿದ್ದಾರೆ. ಗುರುಪುರ ಫಲ್ಗುಣಿ ನದಿಯ ತಟದಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿ ಸಾಗಾಟ ಮಾಡುತ್ತಿರುವ ಕುರಿತು ಬಂದ ಖಚಿತ ಮಾಹಿತಿಯ ಮೇರೆಗೆ ಬಜ್ಪೆ ಪೊಲೀಸರು ಬೆಳಗ್ಗಿನ ಜಾವ 4 ಗಂಟೆಯ ಸುಮಾರಿಗೆ ಈ ಕಾರ್ಯಾಚರಣೆ ಕೈಗೊಂಡಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಐಪಿಎಸ್ ಅವರ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಸಿದ್ದಾರ್ಥ ಗೋಯೆಲ್ ಅವರ ನೇತ್ರತ್ವದಲ್ಲಿ ಬಜ್ಪೆ ಪೊಲೀಸ್ ನಿರೀಕ್ಷಕರು ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಕಾರ್ಯಾಚರಣೆಯ ವೇಳೆ ಸ್ಥಳದಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದು, ಸ್ಥಳದಲ್ಲಿದ್ದ ತಲಾ 5ಲಕ್ಷ ರೂ. ಮೌಲ್ಯದ ಎರಡು ಟಿಪ್ಪರ್ ಲಾರಿಗಳು, ತಲಾ 50 ಸಾವಿರ…
Author: main-admin
ಬೆಳ್ತಂಗಡಿ : ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಘಟನೆ ಸೋಣಂದೂರಿನಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಸೋಣಂದೂರು ಮುಂಡಾಡಿ ಮನೆ ನಿವಾಸಿ ಪ್ರಶಾಂತ್ ಮೃತ ಯುವಕ. ಅವರು ಸೆ 18ರಂದು ರಾತ್ರಿಯ ವೇಳೆ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.
ಮಂಗಳೂರು : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಇರುವ ಯುನಿಸೆಕ್ಸ್ ಸೆಲೂನ್ ಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿರುವ ಕೆಲವು ಯುನಿಸೆಕ್ಸ್ ಸೆಲೂನ್‌ಗಳು ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ನಗರದ 14 ಸೆಲೂನ್‌ಗಳಿಗೆ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಲಾಗಿದೆ. ಸೆಲೂನ್ ಮಾಲಕರು ತಮ್ಮ ಕೆಲಸಗಾರರ ಬಗ್ಗೆ ಪೊಲೀಸ್ ದೃಢೀಕರಣ ಪಡೆಯಬೇಕು. ಎಲ್ಲ ಗ್ರಾಹಕರ ಮಾಹಿತಿ ದಾಖಲಿಸಿಕೊಳ್ಳಬೇಕು. ಇಲ್ಲವಾದರಲ್ಲಿ ಕಾನೂನು ಪ್ರಕಾರ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಂಗಳೂರು: ಅಪರಾಧ ಪ್ರಕರಣಗಳ ಬೆನ್ನು ಬಿದ್ದು ಅಪರಾಧಿಗಳನ್ನು ಬಂಧಿಸುವಲ್ಲಿ ನಿಷ್ಣಾತನಾಗಿದ್ದ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಚಂದ್ರ ಕೆ. ಅಡೂರು(49) ಶನಿವಾರ ನಿಧನ ಹೊಂದಿದ್ದಾರೆ. ಅಲ್ಪ ಕಾಲದ ಅಸೌಖ್ಯದ ಬಳಿಕ ಮಂಗಳೂರು ಖಾಸಾಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಚಂದ್ರ ಅವರು ಕೆಲ ದಿನಗಳ ಹಿಂದೆ ಅನಾರೋಗ್ಯ ಉಂಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎನ್ನಲಾಗಿದೆ. ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿಯ ಕರ್ತವ್ಯದಲ್ಲಿದ್ದ ಅವರು ಬಳಿಕ ಏಕಾಏಕಿ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದರು ಆದ್ರೆ ಶನಿವಾರ ಮುಂಜಾನೆ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ. ಚಂದ್ರ ಅಡೂರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದು ಅಂತ್ಯ ಕ್ರೀಯೆ ಹುಟ್ಟೂರು ಕಾಸರಗೋಡಿನ ಅಡೂರುನಲ್ಲಿ ನಡೆಯಲಿದೆ. ಚಂದ್ರ ಕೆ ಅಡೂರು ಅವರ ನಿಧನಕ್ಕೆ ಹಿರಿಯ ಮತ್ತು ಕಿರಿಯ ಪೊಲೀಸ್ ಅಧಿಕಾರಿಗಳು, ಅವರ ಸಹೊದ್ಯೋಗಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಂಗಳೂರು : ಪಾರ್ಕ್ ಮಾಡಲಾಗಿದ್ದ ಟೆಂಪೋ ಟ್ರ್ಯಾವೆಲರ್‌ನ್ನೇ ಕಳ್ಳತನ ಮಾಡಿದ್ದ ಮೂವರು ಖದೀಮರನ್ನು ಉರ್ವ ಠಾಣಾ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಟೆಂಪೊ ಟ್ರ್ಯಾವೆಲರ್ ಅನ್ನು ವಶಪಡಿಸಿಕೊಂಡಿದ್ದಾರೆ. ಅರೀಫ್ ಉಲ್ಲಾಖಾನ್ ಅಲಿಯಾಸ್ ಅರೀಫ್, ಅಮಿತ್ ಬಾಹುಬಲಿ ಪಂಚೋಡಿ ಅಲಿಯಾಸ್ ಬೇಬಿ, ಸುರೇಂದ್ರ ಕುಮಾರ್ ಬಂಧಿತ ಆರೋಪಿಗಳು. ಉರ್ವ ಠಾಣಾ ವ್ಯಾಪ್ತಿಯ ಕುಂಟಿಕಾನ ಫ್ಲೈ ಓವರ್ ಬಳಿ ಟೆಂಪೋ ಟ್ರಾವೆಲರ್ ವಾಹನವನ್ನು ಸೆಪ್ಟೆಂಬರ್ 14ರ ರಾತ್ರಿ 8.30 ವೇಳೆಗೆ ಪಾರ್ಕ್ ಮಾಡಲಾಗಿತ್ತು. ಆದರೆ, ಸೆಪ್ಟೆಂಬರ್ 15ರಂದು ಬೆಳಗ್ಗೆ ಬಂದು ನೋಡಿದಾಗ ವಾಹನ ಕಳುವಾಗಿತ್ತು. ಆದ್ದರಿಂದ, ವಾಹನದ ವಾರಸುದಾರರು ಉರ್ವ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ವಾಹನ ಕಳ್ಳತನ ಮಾಡಿದ್ದ ಆರೋಪಿಗಳನ್ನು ವಾರದೊಳಗೆ ಪತ್ತೆಹಚ್ಚಿ ಬಂಧಿಸಿದ್ದಾರೆ. ಬಂಧಿತರಿಂದ ಟೆಂಪೋ ಟ್ರಾವೆಲರ್ ಉಳಿದ ಸೊತ್ತನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ನಗರದ ಉಳ್ಳಾಲಬೈಲ್ ಪರಿಸರದಲ್ಲಿ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕದ್ರವ್ಯ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲದ ಸುಭಾಷ್ ನಗರ ನಿವಾಸಿ ಜಾಕೀರ್(29), ಬಂಟ್ವಾಳ ತಾಲೂಕಿನ ಫರಂಗಿಪೇಟೆ, ಅರ್ಕುಳ ಗ್ರಾಮದ ನಿವಾಸಿ ಕಾರ್ತಿಕ್ ಸುವರ್ಣ(27) ಬಂಧಿತ ಆರೋಪಿಗಳು. ಬಂಧಿತರಿಂದ ಒಟ್ಟು 20ಗ್ರಾಂ ತೂಕದ 1,00,000 ರೂ. ಮೌಲ್ಯದ ಎಂಡಿಎಂಎಯನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ ಹೊಂಡಾ ಆ್ಯಕ್ಟಿವಾ ಸ್ಕೂಟರ್, ಎರಡು ಮೊಬೈಲ್ ಫೋನ್ ಗಳು, 3300 ರೂ. ನಗದು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 2,15,000 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
ಮಂಗಳೂರು : ಮಂಗಳೂರು ನಗರದ ನಂತೂರು ಜಂಕ್ಷನ್‌ನಲ್ಲಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಉಂಟು ಮಾಡುತ್ತಿದ್ದ ಹೊಂಡ ಗುಂಡಿಗಳನ್ನು ಮಂಗಳೂರು ನಗರದ ಪೊಲೀಸ್ ಅಧಿಕಾರಿಗಳು ಸ್ವತಃ ಮುಚ್ಚುವ ಕಾರ್ಯ ಮಾಡಿ ಸಾರ್ವಜನಿಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಮಂಗಳೂರು ದಕ್ಷಿಣ ವಿಭಾಗದ ಸಂಚಾರಿ ಠಾಣೆಯ ಸಭ್ ಇನ್ಸ್ ಪೆಕ್ಟರ್ ಈಶ್ವರ ಸ್ವಾಮಿ , ಎಎಸ್‌ಐ ವಿಶ್ವನಾಥ ರೈ ಅವರು ಹಾರೆ, ಗುದ್ದಲಿ ಹಿಡಿದು ಈ ದುರಸ್ತಿ ಕಾರ್ಯವನ್ನು ಮಾಡಿದ್ದಾರೆ. ಪ್ರಮುಖ ಅಪಘಾತ ವಲಯವೆಂದೇ ಗುರುತ್ತಿಲ್ಪಡುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಬರುವ ಈ ಮುಖ್ಯ ಭಾಗದ ತಿರುವಿನ ರಸ್ತೆ ಕಳೆದ ಕೆಲವು ತಿಂಗಳುಗಳಿಂದ ಹೊಂಡ ಗುಂಡಿಗಳಿಂದ ನಾದುರಸ್ತಿಯಲ್ಲಿತ್ತು. ಒಂದೆರಡು ಬಾರಿ ಇಲ್ಲಿ ತೇಪೆ ಹಾಕುವ ಕಾರ್ಯ ಮಾತ್ರ ನಡೆದಿದ್ದು ಮತ್ತೆ ಯಾಥಾ ಸ್ಥಿತಿ ಮುಂದುವರೆದು ವಾಹನ ಸವಾರರು ಅದರಲ್ಲೂ ದ್ವಿಚಕ್ರ ಸವಾರರು ಜೀವ ಕೈಯಲ್ಲಿ ಹಿಡಿದೇ ವಾಹನ ಚಲಾಯಿಸಬೇಕಿತ್ತು. ನಗರ ರಸ್ತೆಗಳೊಂದಿಗೆ 2 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಕೂಡ…
ಕಾಪು: ಆಗಸ್ಟ್ ತಿಂಗಳಲ್ಲಿ ಆಗುಂಬೆಯಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿಯ ವಿಡಿಯೋ ಇದೀಗ ವೈರಲ್ ಆಗಿದ್ದು, ಈ ಸಂಬಂಧ ಯುವತಿಯ ಸಹೋದರ ನೀಡಿರುವ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಪು ಪೊಲೀಸ್ ಠಾಣೆ ವ್ಯಾಪ್ತಿಯ ಕಾಲೇಜಿನ ವಿದ್ಯಾರ್ಥಿಗಳಿಬ್ಬರು ಒಂದು ತಿಂಗಳ ಹಿಂದೆ ಬೈಕ್ ನಲ್ಲಿ ಆಗುಂಬೆಯ ಫಾಲ್ಸ್ ಗೆ ತೆರಳಿದ್ದರು. ಅಲ್ಲಿಂದ ವಾಪಾಸ್ ಬರುತ್ತಿದ್ದ ವಿದ್ಯಾರ್ಥಿಗಳ ಬೈಕ್ ಅನ್ನು ತಡೆದ ಸ್ಥಳೀಯ ಸಂಘ ಪರಿವಾರದ ಕಾರ್ಯಕರ್ತರು ಅನೈತಿಕ ಪೊಲೀಸ್ ಗಿರಿ ನಡೆಸಿದ್ದಾರೆಂದು ದೂರಲಾಗಿದೆ. ಇದೇ ವೇಳೆ ಸಂಘ ಪರಿವಾರದ ಕಾರ್ಯಕರ್ತರು ವಿದ್ಯಾರ್ಥಿ, ವಿದ್ಯಾರ್ಥಿನಿಯ ವಿಡಿಯೋವನ್ನು ತಮ್ಮ ಮೊಬೈಲ್ ಗಳಲ್ಲಿ ಚಿತ್ರೀಕರಣ ಮಾಡಿದ್ದರು. ಇದೀಗ ಈ ವಿಡಿಯೋವನ್ನು ತಿಂಗಳ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದು ಸಾಕಷ್ಟು ವೈರಲ್ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯ ಸಹೋದರ ಕಾಪು ಪೊಲೀಸ್ ಠಾಣೆಗೆ ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು…
ಮಂಗಳೂರು: ಕೇರಳದಲ್ಲಿ ನಿಫಾ ಆತಂಕದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ ಮುಂದುವರಿಸಲಾಗಿದೆ. ಕೇರಳದ ವಡಗರ, ಕೋಯಿಕ್ಕೋಡ್‌ನಿಂದ ಆಗಮಿಸಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸುವ ವಾಹನಗಳನ್ನು ವಿಶೇಷವಾಗಿ ತಪಾಸಣೆ ನಡೆಸಲಾಗುತ್ತಿದೆ. ಮಂಗಳೂರಿನ ತಲಪಾಡಿ, ಸುಳ್ಯ ತಾಲೂಕಿನ ಮೂರೂರು, ಜಾಲ್ಸೂರು, ಬಡ್ಡಡ್ಕ, ಕನ್ನಡಿತೋಡು, ಪುತ್ತೂರು ತಾಲೂಕಿನ ಗಡಿಭಾಗಗಳಾದ ಸ್ವರ್ಗ, ಮೆನಾಲ, ಸುಳ್ಯಪದವು, ಬಂಟ್ವಾಳ ತಾಲೂಕಿನ ಸಾರಡ್ಕ, ಸಾಲೆತ್ತೂರು, ಕನ್ಯಾನ, ಬೆರಿಪದವಿನಲ್ಲಿ ತಪಾಸಣೆ ಮಾಡಿ ಜ್ವರ ಸಮೀಕ್ಷೆ ನಡೆಸಲಾಗುತ್ತಿದೆ. ಈವರೆಗೆ ಯಾವುದೇ ನಿಫಾ ಶಂಕಿತ ಪ್ರಕರಣ ಕಂಡುಬಂದಿಲ್ಲ. ಒಂದು ವೇಳೆ ಜಿಲ್ಲೆಯಲ್ಲಿ ಅಂತಹ ರೋಗ ಲಕ್ಷಣ ಪತ್ತೆಯಾದರೆ ಅವರ ಚಿಕಿತ್ಸೆಗಾಗಿ ವೆನಾÉಕ್ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ನಿಗಾ ಕೊಠಡಿ (ಐಸೋಲೇಶನ್ ವಾರ್ಡ್)ಗಳನ್ನು ಸನ್ನದ್ಧವಾಗಿಡಲಾಗಿದೆ. ಅ. 10ರ ವರೆಗೆ ಸ್ಕ್ರೀನಿಂಗ್ ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಯ ಗಡಿ ಭಾಗಗಳಲ್ಲಿ ಅ. 10ರ ವರೆಗೆ ನಿಗಾ ಇಡಲು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜ್ವರ ತಪಾಸಣೆಯನ್ನು ಮುಂದುವರಿಸಬೇಕು,…
ನವದೆಹಲಿ: ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಉಪ ಪೊಲೀಸ್ ಆಯುಕ್ತರೊಬ್ಬರನ್ನು ಬಂಧಿಸಲಾಗಿದೆ. ಬಂಧಿತ ಅಧಿಕಾರಿಯನ್ನು ಶೇಖ್ ಆದಿಲ್ ಮುಸ್ತಾಕ್ ಎಂದು ಗುರುತಿಸಲಾಗಿದೆ. ಬಂಧನದಿಂದ ತಪ್ಪಿಸಿಕೊಳ್ಳಲು ಉಗ್ರನಿಗೆ ಸಹಾಯ ಮಾಡಿದ ಮತ್ತು ಉಗ್ರನ ವಿರುದ್ಧ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯನ್ನೇ ಪ್ರಕರಣದಲ್ಲಿ ಸಿಲುಕಿಸಲು ಯತ್ನಿಸಿದ ಆರೋಪ ಶೇಖ್ ಆದಿಲ್ ಮುಸ್ತಾಕ್ ವಿರುದ್ಧ ಕೇಳಿಬಂದಿದೆ. ಇದಿಷ್ಟೇ ಅಲ್ಲದೆ, ಭ್ರಷ್ಟಾಚಾರ ಸೇರಿದಂತೆ ಹಲವು ಪ್ರಕರಣಗಳಲ್ಲಿ ಈ ಅಧಿಕಾರಿ ಭಾಗಿಯಾಗಿದ್ದಾರೆ. ಅಧಿಕಾರಿಯನ್ನು ಶ್ರೀನಗರದ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದ್ದು, ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಜುಲೈನಲ್ಲಿ ಬಂಧನಕ್ಕೆ ಒಳಗಾದ ಉಗ್ರನ ಮೊಬೈಲ್ ಫೋನ್ ಅನ್ನು ವಿಶ್ಲೇಷಿಸಿದಾಗ ಆತ ಆದಿಲ್ ಮುಷ್ತಾಕ್ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಎಂಬುದು ತಿಳಿದುಬಂದಿದೆ. ಈ ಅಧಿಕಾರಿ, ಕಾನೂನಿನ ಕಣ್ಣು ತಪ್ಪಿಸುವುದು ಹೇಗೆ ಎಂದು ಉಗ್ರನಿಗೆ ಮಾರ್ಗದರ್ಶನ ನೀಡುತ್ತಿದ್ದರು. ಹಿರಿಯ ಅಧಿಕಾರಿಯೊಬ್ಬರ ಪ್ರಕಾರ, ಆದಿಲ್ ಮುಷ್ತಾಕ್ ಟೆಲಿಗ್ರಾಂ ಆಯಪ್‌ನಲ್ಲಿ ಆರೋಪಿಯೊಂದಿಗೆ ಮಾತನಾಡುತ್ತಿದ್ದರು. ಉಗ್ರ ಮತ್ತು ಉಪ ಅಧೀಕ್ಷಕರ…










