Author: main-admin

ಒಡಿಶಾದ ಬಾಲಸೋರ್ ನಲ್ಲಿ ಭೀಕರ ರೈಲು ಅಪಘಾತ ಸಂಭವಿಸುವ ಕೆಲ ನಿಮಿಷಗಳ ಮೊದಲು ರೈಲು ತಪ್ಪಾದ ಟ್ರ್ಯಾಕ್ ನಲ್ಲಿ ಸಾಗಿದ್ದೇ ಕಾರಣವಿರಬಹುದೆಂದು ರೈಲ್ನೆ ಸಿಗ್ನಲಿಂಗ್ ಕಂಟ್ರೋಲ್ ರೂಂನ ಪ್ರಾಥಮಿಕ ವರದಿ ತಿಳಿಸಿದೆ. ಕೋರಮಂಡಲ್ ಎಕ್ಸ್ ಪ್ರೆಸ್ ರೈಲು ಅಫಘಾತದಲ್ಲಿ 238 ಮಂದಿ ಸಾವನ್ನಪ್ಪಿದ್ದು, 900 ಮಂದಿ ಗಾಯಗೊಳ್ಳಲು ಕಾರಣವಾದ ದುರಂತಕ್ಕೆ ಮಾನವ ದೋಷ (ಹ್ಯೂಮನ್ ಎರರ್) ಕಾರಣ ಎಂದು ತಿಳಿದುಬಂದಿದೆ. ಖಚಿತವಾಗಿ ಹೇಳುವುದಾದರೆ ಸಂಪೂರ್ಣ ಪರೀಕ್ಷೆಯ ನಂತರವೇ ಅಪಘಾತದ ಕಾರಣವನ್ನು ಗುರುತಿಸಲಾಗುತ್ತದೆ. ರೈಲ್ವೆಯ ಖರಗ್‌ಪುರ ವಿಭಾಗದ ಸಿಗ್ನಲಿಂಗ್ ಕಂಟ್ರೋಲ್ ರೂಮ್‌ನ ವೀಡಿಯೊ ಪ್ರಕಾರ, ಚೆನ್ನೈಗೆ ಹೋಗುವ ಕೋರಮಂಡಲ್ ಎಕ್ಸ್ ಪ್ರೆಸ್ ಶುಕ್ರವಾರ ಸಂಜೆ 6.55 ಕ್ಕೆ ಬಹಾನಗರ್ ಬಜಾರ್ ನಿಲ್ದಾಣವನ್ನು ದಾಟಿದ ನಂತರ ಮುಖ್ಯ ಮಾರ್ಗದ ಬದಲಿಗೆ ಗೂಡ್ಸ್ ರೈಲು ನಿಲುಗಡೆ ಮಾಡಿದ ಲೂಪ್ ಲೈನ್ ನಲ್ಲಿ ಸಾಗಿತು ಎಂದು ಹಿರಿಯ ರೈಲ್ವೆ ಅಧಿಕಾರಿ ಹೇಳಿದ್ದಾರೆ. ಗಂಟೆಗೆ ಸುಮಾರು 127 ಕಿಮೀ ವೇಗದಲ್ಲಿ ಚಲಿಸುತ್ತಿದ್ದ ಕೋರಮಂಡಲ್ ಎಕ್ಸ್ ಪ್ರೆಸ್ ಗೂಡ್ಸ್ ರೈಲಿಗೆ…

Read More

ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಬಲ್ನಾಡು ಬಂಗಾರಡ್ಕ ದಿ.ಕಮಲಾಕ್ಷ ಅವರ ಪುತ್ರಿ ವಂಶಿ ಬಿ.ಕೆ (17) ಮೃತಪಟ್ಟ ವಿದ್ಯಾರ್ಥಿನಿ. ಎಸ್.ಎಸ್.ಎಲ್.ಸಿ ಮುಗಿಸಿ ಮುಂದೆ ಪಿಯುಸಿ ಓದಲು ಕಾಲೇಜು ಸೇರುವ ಸಿದ್ಧತೆಯಲ್ಲಿದ್ದರು.ಈ ನಡುವೆ ಅವರು ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿಂದ ಚೇತರಿಸಿಕೊಂಡು ಮನೆಗೆ ಹೋಗಿದ್ದರು. ಈ ನಡುವೆ ಮತ್ತೆ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮೃತರು ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

Read More

ಮಂಗಳೂರು: ಬೈಕ್‌ನಲ್ಲಿ ಬಂದು ಇಬ್ಬರು ದುಷ್ಕರ್ಮಿಗಳು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ದೋಚಿ ಪರಾರಿಯಾಗಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ತಡಂಬೈಲ್‌ ಎಂಬಲ್ಲಿ ನಡೆದಿದೆ. ಪುಷ್ಪಾ (70) ಎಂಬವರು ನಿನ್ನೆ ಬೆಳಗ್ಗೆ ತಡಂಬೈಲ್‌ನ ತನ್ನ ಮನೆಯ ಕಂಪೌಂಡ್‌ ಒಳಭಾಗದಲ್ಲಿದ್ದ ಬಾವಿಯಿಂದ ನೀರು ಸೇದುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಅವರ ಕುತ್ತಿಗೆಯಲ್ಲಿದ್ದ ಅಂದಾಜು 1.25 ಲಕ್ಷ ರೂ. ಬೆಲೆಯ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದಾರೆ ಎಂದು ಅವರು ಸುರತ್ಕಲ್‌ ಪೊಲೀಸ್‌ ಠಾಣೆಗೆ ದೂರು ದಾಖಲಿಸಿದ್ದಾರೆ. ಸುರತ್ಕಲ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ .

Read More

ಒಡಿಶಾದಲ್ಲಿ ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಅಪಘಾತಕ್ಕೀಡಾಗಿದ್ದು, ಕನಿಷ್ಠ 233 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 900 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಕೋಲ್ಕತ್ತಾದಿಂದ ದಕ್ಷಿಣಕ್ಕೆ 250 ಕಿ.ಮೀ ಮತ್ತು ಭುವನೇಶ್ವರದಿಂದ ಉತ್ತರಕ್ಕೆ 170 ಕಿ.ಮೀ ದೂರದಲ್ಲಿರುವ ಬಾಲಸೋರ್ ಜಿಲ್ಲೆಯ ಬಹನಾಗ ಬಜಾರ್ ನಿಲ್ದಾಣದ ಬಳಿ ಶುಕ್ರವಾರ ಸಂಜೆ 7 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ.12864 ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ರೈಲಿನ ಹಲವು ಬೋಗಿಗಳು ಹಳಿತಪ್ಪಿ ಪಕ್ಕದ ಹಳಿಗಳ ಮೇಲೆ ಬಿದ್ದಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೋರಮಂಡಲ್ ಎಕ್ಸ್ಪ್ರೆಸ್ ರೈಲು ಮೊದಲು ಹಳಿ ತಪ್ಪಿತು ಮತ್ತು ಅದರ 10-12 ಬೋಗಿಗಳು ಬೆಂಗಳೂರು-ಹೌರಾ ಎಕ್ಸ್ಪ್ರೆಸ್ ಪ್ರಯಾಣಿಸುತ್ತಿದ್ದ ಮಾರ್ಗದಲ್ಲಿ ಬಿದ್ದವು ಎಂದು ರೈಲ್ವೆ ವಕ್ತಾರ ಅಮಿತಾಭ್ ಶರ್ಮಾ ಪಿಟಿಐಗೆ ತಿಳಿಸಿದ್ದಾರೆ.

Read More

ಮಂಗಳೂರು: ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರ ಕಚೇರಿ ಸಿಬ್ಬಂದಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಇದೀಗ ವರದಿಯಾಗಿದೆ.ಆತ್ಮಹತ್ಯೆ ಮಾಡಿಕೊಂಡವರನ್ನು ಪಡೀಲ್ ನಿವಾಸಿ, ಮೂಡ ಕಚೇರಿ ಸಿಬ್ಬಂದಿ ಕೀರ್ತನ್ ಅಳಪೆ (36) ಎಂದು ಗುರುತಿಸಲಾಗಿದೆ ಕೀರ್ತನ್ ತಮ್ಮ ಕಚೇರಿ ಸ್ಟೋರ್ ರೂಮ್ ನಲ್ಲೇ ನೇಣು ಬಿಗಿದುಕೊಂಡ‌ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ.ಉರ್ವ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Read More

ಬೆಂಗಳೂರು: ಜುಲೈ ತಿಂಗಳಿನಿಂದ 200 ಯೂನಿಟ್ ವರೆಗೆ ವಿದ್ಯುತ್ ಉಚಿತ, ಆಗಸ್ಟ್ 15ರಂದು ಗೃಹ ಲಕ್ಷ್ಮೀ ಯೋಜನೆಯ ಅಡಿಯಲ್ಲಿ ಮನೆಯ ಒಡತಿಗೆ ಪ್ರತಿ ತಿಂಗಳು ರೂ.2,000 ಹಣ ಖಾತೆಗೆ ಜಮಾ. ಜುಲೈ.1ರಿಂದ ಬಿಪಿಎಲ್, ಎಪಿಎಲ್ ಕಾರ್ಡ್ ನ ಪ್ರತಿ ಕುಟುಂಬದ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡಲಾಗುತ್ತದೆ. ಜೂನ್ 11ರಿಂದ ಎಸಿ, ಸ್ಲೀಪರ್ ಹಾಗೂ ಐಷಾರಾಮಿ ಬಸ್ಸುಗಳನ್ನು ಹೊರತುಪಡಿಸಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುತ್ತಿದೆ. ಯುವನಿಧಿ ಯೋಜನೆಯ ಅಡಿಯಲ್ಲಿ ಪದವೀಧರರಿಗೆ ರೂ.3000, ಡಿಪ್ಲೋಮಾದವರಿಗೆ ರೂ.1,500 ಮುಂದಿನ 24 ತಿಂಗಳವರೆಗೆ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಡಿಸಿಎಂ ಡಿ.ಕೆ ಶಿವಕುಮಾರ್, ಇವತ್ತು ಇಡೀ ದೇಶಕ್ಕೆ ಜನರು ನಮ್ಮ ಮೇಲೆ ವಿಶ್ವಾಸವಿಟ್ಟು, ಈ ರಾಜ್ಯವನ್ನು, ಕರ್ನಾಟಕವನ್ನು ನಮಗೆ ಅಪಾರವಾದಂತ ನಂಬಿಕೆ ಇಟ್ಟು ಅವಕಾಶ ಕೊಟ್ಟಿದ್ದಾರೆ. ನುಡಿದಂತೆ ನಡೆಯುವವರು ನಾವು. ನಾವು ಅಧಿಕಾರ ತೆಗೆದುಕೊಂಡ ಮೊದಲ ದಿನದಿಂದ…

Read More

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್ , ತಲಪಾಡಿ ನಿವಾಸಿ ಮೋಕ್ಷಿತ್, ಸುಹಾನ್ ವಶಕ್ಕೆ ಪಡೆದುಕೊಂಡ ಆರೋಪಿಗಳಾಗಿದ್ದಾರೆ.ಕೇರಳ ಚೆರ್ಕಳದ ಜಾಫರ್ ಶರೀಫ್ ಹಾಗೂ ಮಂಜೇಶ್ವರ ಮೂಲದ ಮುಜೀಬ್ , ಆಶಿಕ್ಹಲ್ಲೆಗೊಳಗಾದವರು. ಮಂಗಳೂರಿನ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಸೋಮೇಶ್ವರ ಸಮುದ್ರ ತೀರಕ್ಕೆ ನಿನ್ನೆ ಸಂಜೆ ಆಗಮಿಸಿದ್ದರು. ಮೂವರು ಯುವಕರು ಮುಸ್ಲಿಂ ಸಮುದಾಯಕ್ಕೆ ಸೇರಿದವರೆಂದು ತಂಡವೊಂದು ಹಿಂಬಾಲಿಸಿತ್ತು. ಹಿಂದೂ ವಿದ್ಯಾರ್ಥಿನಿಯರ ಜೊತೆ ಬಂದಿದ್ದ ಕಾರಣಕ್ಕೆ ತಂಡ ನೈತಿಕ ಪೊಲೀಸ್ ಗಿರಿ ನಡೆಸಿತ್ತು.ಪ್ರಕರಣದ ವಿಚಾರಣೆಗಾಗಿ ಎರಡು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದೆ. ಇದೀಗ ತಂಡ ನಾಲ್ವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದೆ. ಗಾಯಗೊಂಡ ಯುವಕರ ಜತೆಗಿದ್ದ ಮೂವರು ವಿದ್ಯಾರ್ಥಿನಿಯರು ಕೇರಳಕ್ಕೆ ತೆರಳಿರುವ ಮಾಹಿತಿಯಿದೆ.

Read More

ಉಡುಪಿ : ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ಬಲ್ಲಾಡಿಯ ಗುಡಾಲಬೆಟ್ಟು ನಿವಾಸಿ ಲಕ್ಷ್ಮೀ (22) ಎಂಬ 6 ತಿಂಗಳ ಗರ್ಭಿಣಿಯು ಮೇ 25 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5:30 ಗಂಟೆಯ ಮಧ್ಯಾವಧಿಯಲ್ಲಿ ಯಾರಿಗೂ ಹೇಳದೇ ಮನೆಯಿಂದ ಹೊರಟು ಕಾಣೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಸಪೂರ ಶರೀರ, ಗೋಧಿ ಮೈ ಬಣ್ಣ, ಎರಡು ಹುಬ್ಬುಗಳ ಮದ್ಯೆ ಎಳ್ಳಾಕಾರದ ಮಚ್ಚೆ ಹೊಂದಿದ್ದು, ಕನ್ನಡ ಮತ್ತು ಕೊಂಕಣಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂ.08253-251116, ಪಿ.ಎಸ್.ಐ ಮೊ.ಸಂ.9480805463, ಕಾರ್ಕಳ ವೃತ್ತ ನಿರೀಕ್ಷಕರ ದೂ.ಸಂ.08258-231083, .ಮೊ.ಸಂ.9480805435 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕಡಬದಲ್ಲಿ ಕಾಡಾನೆಯೊಂದು ಇಬ್ಬರನ್ನ ಬಲಿಪಡೆದ ಪ್ರಕರಣ ಮಾಸುವ ಮುನ್ನವೇ ಪದೇ ಪದೇ ಕಾಡಾನೆಗಳ ದಾಳಿ ನಡೆಯುತ್ತಲೆ ಇದೆ. ಮೂರ್ನಾಲ್ಕು ದಿನಗಳ ಹಿಂದೆ ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಕಾಡಾನೆ ದಾಳಿ ಮಾಡಿತ್ತು. ಇದೀಗ ಅದರ ಬೆನ್ನಲ್ಲೇ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಸ್ಲೀಪರ್ ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದು ಬಸ್ ಗೆ ಹಾನಿ ಮಾಡಿದೆ.  ಗುರುವಾರ ತಡರಾತ್ರಿ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದಲ್ಲಿ ಈ ಘಟನೆ ನಡೆದಿದೆ. ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕ ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ತಪ್ಪಿಸಲು ಯತ್ನಿಸಿದ್ದರು.ಆದರೂ ಆನೆಯು ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ. ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬಸ್ಸಿಗೆ ಹಾನಿಯಾಗಿದೆ‌. ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ.

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ( IAS Officer Transfer ) ಮಾಡಿ ಆದೇಶಿಸಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಿದ್ದು, ಆರ್ಟಿಕಲ್ಚರ್ ಮತ್ತು ಸಿರಿಕಲ್ಟರ್ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದಂತ ರಾಜೇಂದ್ರ ಕುಮಾರ್ ಕಠಾರಿಯ ಅವರನ್ನು ವರ್ಗಾವಣೆ ಮಾಡಿ, ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ. 2000 ಸಾಲಿನ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ಅವರನ್ನು ಎಂಸ್‌ಎಂಇ ಮತ್ತು ಮೈನ್ಸ್ ಕಾರ್ಯದರ್ಶಿಯ ಹುದ್ದೆಯಿಂದ ವರ್ಗಾವಣೆ ಮಾಡಿ, ಕೆಪಿಟಿಸಿಎಲ್ ಎಂ.ಡಿಯಾಗಿ ನೇಮಕ ಮಾಡಲಾಗಿದೆ. ಕೆಪಿಟಿಸಿಎಲ್ ಎಂಡಿಯಾಗಿದ್ದಂತ ಡಾ.ಮಂಜುಳಾ ಎನ್ ಅವರನ್ನು ವರ್ಗಾವಣೆ ಮಾಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಯುವಜನ ಸಬಲೀಕರಣ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ. ಕೃಷಿ ಇಲಾಖೆಯ ಕಮೀಷನರ್ ಆಗಿದ್ದಂತ ಶರತ್ ಬಿ ಅವರನ್ನು ವರ್ಗಾವಣೆ ಮಾಡಿ, ಕರ್ನಾಟಕ ಅರ್ಬನ್ ವಾಟರ್ ಸಪ್ಲೈ ಮತ್ತು ಡ್ರೈನೇಜ್ ಬೋರ್ಡ್…

Read More