Author: main-admin

ಮಂಗಳೂರು:  ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕರ್ತವ್ಯಲೋಪ ಎಸಗಿದ ಆರೋಪದಡಿ ದ.ಕ. ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಯಣ್ಣ ಅವರನ್ನು ದ.ಕ. ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅಮಾನತುಗೊಳಿಸಿದ್ದಾರೆ.  ಜಿಲ್ಲಾ ಚುನಾವಣಾಧಿಕಾರಿ ಅವರಿಂದ ಅನುಮತಿ ಪಡೆಯದೆ ಬೆಂಗಳೂರಿಗೆ ತೆರಳಿ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪದಡಿಯಲ್ಲಿ  ಜಯಣ್ಣ ಅವರನ್ನು ದ.ಕ. ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅಮಾನತುಗೊಳಿಸಿದ್ದಾರೆ. ಮೇ 9ರಂದು ಜಿಲ್ಲಾ ಚುನಾವಣಾಧಿಕಾರಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಭಾಗವಹಿಸುವಂತೆ ಡಿಡಿಪಿಯು ಅವರಿಗೆ ಸೂಚನೆ ನೀಡಲಾಗಿತ್ತು. ಆದರೆ ಅವರು ಗೈರಾಗಿದ್ದರು. ಈ ಬಗ್ಗೆ ನೋಟೀಸ್‌ ನೀಡಲಾಗಿತ್ತು. ಅದಕ್ಕೆ ನೀಡಿದ ಉತ್ತರ ಸಮಾಧಾನ ತರಲಿಲ್ಲ ಎಂಬ ನೆಲೆಯಿಂದ ಡಿಡಿಪಿಯು ಅವರನ್ನು ಅಮಾನತುಗೊಳಿಸಲಾಗಿದೆ. ಕೊಕ್ಕಡ ಪಿಯು ಕಾಲೇಜು ಪ್ರಾಂಶುಪಾಲ ವೆಂಕಟೇಶಮೂರ್ತಿ ಅವರನ್ನು ಪ್ರಭಾರವಾಗಿ ನೇಮಕ ಮಾಡಲಾಗಿದೆ.ಮೇ 22ರಂದು ಜಯಣ್ಣ ಮತ್ತೆ ಲಿಖೀತ ಉತ್ತರ ನೀಡಿದ್ದು, ನನ್ನ ಮೇಲಿನ ಎಲ್ಲ ಆರೋಪಗಳನ್ನು ನಿರಾಕರಿಸುವುದಾಗಿ ಉಲ್ಲೇಖಿಸಿದ್ದಾರೆ.

Read More

ಬೆಂಗಳೂರು: 545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿಯಲ್ಲಿ ಅಕ್ರಮ ಕಾರಣದಿಂದ ಹಿಂದಿನ ಬಿಜೆಪಿ ಸರ್ಕಾರ ನೇಮಕಾತಿ ರದ್ದುಗೊಳಿಸಿತ್ತು. ಈಗ ನೂತನ ಕಾಂಗ್ರೆಸ್ ಸರ್ಕಾರ ಶೀಘ್ರವೇ ಅಕ್ರಮದ ಬಗ್ಗೆ ತನಿಖೆ ಕೈಗೊಂಡು, ಹೊಸ ನೇಮಕಾತಿಗೆ ಆದೇಶ ಹೊರಡಿಸುವಂತ ಸುಳಿವು ನೀಡಿದೆ. ಈ ಮೂಲಕ ಪಿಎಸ್‌ಐ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಪಿಎಸ್‌ಐ ನೇಮಕಾತಿ ಅಕ್ರಮ ಸಂಬಂಧ ತನಿಖೆ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಆ ಬಳಿಕ ಹೊಸ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದರು. ಪಿಎಸ್‌ಐ ನೇಮಕಾತಿ ಅಕ್ರಮ ವಿಚಾರ ಹೈಕೋರ್ಟ್ ನಲ್ಲಿದೆ. ನೇಮಕಾತಿಗೂ ಹೈಕೋರ್ಟ್ ತಡೆ ಇದೆ. ಈ ಸಂಬಂಧ ತಾರ್ಕಿಕ ಮತ್ತು ಕಾನೂನಾತ್ಮಕ ಅವಕಾಶಗಳ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಯಾವುದೇ ಅಭ್ಯರ್ಥಿಗೆ ಅನ್ಯಾಯವಾಗದಂತೆ ನ್ಯಾಯಸಮ್ಮತ ರೀತಿಯಲ್ಲಿ ಪಿಎಸ್‌ಐ ನೇಮಕಾತಿ ಸಂಬಂಧ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. ಅಂದಹಾಗೇ ಹೈಕೋರ್ಟ್ ನಲ್ಲಿ ಪಿಎಸ್‌ಐ ಹಗರಣದ ತನಿಖೆಗೆ ತಡೆಯಾಜ್ಞೆಯಿದೆ. ಆ ತಡೆಯಾಜ್ಞೆ…

Read More

ಕಣ್ಣೂರು: ಕಣ್ಣೂರು ಸ್ಟೇಷನ್‌ನಲ್ಲಿ ನಿಂತಿದ್ದ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿರುವುದು ವರದಿಯಾಗಿದೆ. ಗುರುವಾರ ಮುಂಜಾನೆ ರೈಲು ಕಣ್ಣೂರು ಸ್ಟೇಷನ್‌ ನಲ್ಲಿ ನಿಂತಿದ್ದ ವೇಳೆ ರೈಲಿನ ಒಂದು ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಮಾಹಿತಿ ತಿಳಿದ ಕೂಡಲೇ ರೈಲ್ವೆ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ಕಾಣಿಸಿಕೊಂಡ ರೈಲಿನ ಇತರ ಬೋಗಿಗಳನ್ನು ಬೇರ್ಪಡಿಸಿ ಬೆಂಕಿಯನ್ನು ಹತೋಟಿಗೆ ತಂದರು. ಆದರೆ, ಕೋಚ್ ಸಂಪೂರ್ಣ ಸುಟ್ಟು ಕರಕಲಾಗಿತ್ತು. ಆದರೆ ಯಾವುದೇ ಜೀವ ಅಪಾಯ ಸಂಭವಿಸಿರಲಿಲ್ಲಈ ಕುರಿತು ಪೊಲೀಸರು ಪಕ್ಕದಲ್ಲಿದ್ದ ಸಿಸಿಟಿವಿಯನ್ನು ಪರಿಶೀಲನೆ ಮಾಡಿದ್ದು, ಅಪರಿಚಿತ ವ್ಯಕ್ತಿಯೊಬ್ಬ ರೈಲಿನೊಳಗೆ ಪ್ರವೇಶಿಸಿದ ಬಳಿಕ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಹೀಗಾಗಿ ಹೆಚ್ಚಿನ ತನಿಖೆ ನಡೆಯುತ್ತಿದೆ.ಇದೇ ವರ್ಷ ಏ.2 ರಂದು ಕೋಝಿಕ್ಕೋಡ್ ಜಿಲ್ಲೆಯಲ್ಲಿ ಶಾರುಖ್ ಸೈಫಿ ಎಂಬಾತ ರೈಲಿಗೆ ಬೆಂಕಿ ಹಚ್ಚಿದ ಪರಿಣಾಮ ಒಂದು ಮಗು ಸೇರಿದಂತೆ ಮೂವರು ಸಾವನ್ನಪ್ಪಿ ಒಂಬತ್ತು ಮಂದಿ ಗಾಯಗೊಂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ಉನ್ನತಮಟ್ಟದಲ್ಲಿ ತನಿಖೆ ನಡೆಯುತ್ತಿದೆ.

Read More

ಬೆಂಗೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯ ಆರ್ಭಟ ಜೋರಾಗಿದೆ. ಇಂದು ಕೂಡಾ ರಾಜ್ಯದಲ್ಲಿ ಗುಡುಗು ಮಿಂಚಿನ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳು ಸೇರಿ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಎರಡು ದಿನ ದಕ್ಷಿಣ ಕನ್ನಡ, ಉತ್ತರ ಕನ್ನಡ, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ

Read More

ಮಂಗಳೂರು: ಮಂಗಳೂರು ನಗರಕ್ಕೆ ಮನಪಾದಿಂದ ಸರಬರಾಜಾಗುವ ನೀರು ಎರಡು ದಿನಗಳ ಕಾಲ ಸ್ಥಗಿತವಾಗಲಿದೆ. ಜೂನ್‌ 2ರ ಬೆಳಗ್ಗೆ 6ರಿಂದ ಜೂನ್‌ 4ರ ಬೆಳಗ್ಗೆ 6ರವರೆಗೆ ನಗರದ ಹಲವು ಕಡೆಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ತುಂಬೆ – ಬೆಂದೂರ್‌ವೆಲ್‌ ಪಣಂಬೂರು 1000 ಎಂಎಂ ವ್ಯಾಸ ಕೊಳವೆಯನ್ನು ಅಡ್ಯಾರ್‌ ಕಟ್ಟೆಯ ಬಳಿ ಬಲಪಡಿಸುವ ಕಾಮಗಾರಿ ನಡೆಯಲಿದೆ. ಅದೇ ರೀತಿ ಕೊಟ್ಟಾರಚೌಕಿ ಬಳಿ ಕೆಯುಐಡಿಎಫ್‌ಸಿ ವತಿಯಿಂದ 900 ಎಂಎಂ ವ್ಯಾಸ ಕೊಳವೆ ಮರುಜೋಡಣೆ ಕಾಮಗಾರಿ ಇರುವುದರಿಂದ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ನಗರದ ಬೆಂದೂರ್‌ವೆಲ್‌ ಲೋ ಲೆವೆಲ್‌ ಪ್ರದೇಶಗಳಾದ ಪಿವಿಎಸ್‌, ಲೇಡಿಹಿಲ್‌, ಬಂದರು, ಬಿಜೈ, ಸೂಟರ್‌ಪೇಟೆ, ಮೇರಿಹಿಲ್‌, ಪಚ್ಚನಾಡಿ, ಅಶೋಕನಗರ, ದೇರೆಬೈಲ್‌, ಕೊಡಿಯಾಲಬೈಲು, ಕದ್ರಿ, ನಾಗುರಿ, ಸುರತ್ಕಲ್‌, ಕಾಟಿಪಳ್ಳ, ಕೂಳೂರು, ಜಲ್ಲಿಗುಡ್ಡೆ, ಕೋಡಿಕಲ್‌ ಭಾಗಶಃ, ಕಾನ, ಬಾಳಾ, ಕುಳಾಯಿ, ಮುಕ್ಕ, ಪಂಬೂರು ಮುಂತಾದ ಪ್ರದೇಶಗಳಲ್ಲಿ ಸಂಪೂರ್ಣವಾಗಿ ನೀರು ಸರಬರಾಜು ನಿಲ್ಲಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Read More

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ. ಅಳಕೆಮಜಲು ನಿವಾಸಿ ಧೀರಜ್ (30) ಮೃತಪಟ್ಟ ವ್ಯಕ್ತಿ. ಧೀರಜ್ ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Read More

ಪುತ್ತೂರು: ಬೆಳ್ಳಂಬೆಳಿಗ್ಗೆ ದಕ್ಷಿಣಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಕಾ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಳೆದ ವರ್ಷ ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಇಂದು ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ದಿಢೀರ್ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಈ ದಾಳಿಯಲ್ಲಿ ಪುತ್ತೂರಿನ ನಾಲ್ವರನ್ನು ಎನ್ಐಎ ಅಧಿಕಾರಿಗಳು ಬಂಧಿಸಿ ಕರೆದೊಯ್ದಿದ್ದಾರೆ. ಮಹಮ್ಮದ್ ಹ್ಯಾರೀಸ್ ಕುಂಬ್ರ (32), ಸಜ್ಜದ್ ಹುಸೈನ್, ಕೋಡಿಂಬಾಡಿ (37), ಫೈಜಲ್ ಅಹಮ್ಮದ್, ತಾರಿಗುಡ್ಡೆ, ಸಂಶುದ್ಧೀನ್ ಕೂರ್ನಡ್ಕ ಬಂಧಿತ ಆರೋಪಿಗಳಾಗಿದ್ದು, ಆರೋಪಿಗಳಿಗೆ ಪಿಎಫ್ಐ ಲಿಂಕ್ ಸಾಧ್ಯತೆ ಇದೆ ಎನ್ನಲಾಗಿದೆ.

Read More

ಮಂಗಳೂರು: ಹಣಕಾಸು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಉದ್ಯಮಿ ಕಳತ್ತೂರು ವಿಶ್ವನಾಥ ಶೆಟ್ಟಿ ಅವರನ್ನು ಮಂಗಳೂರು ಸೆನ್ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಕಟ್ಟಡ ನಿರ್ಮಾಣ ಸಂಸ್ಥೆ ರೋಹನ್ ಕಾರ್ಪೊರೇಷನ್‌ನ ಆಡಳಿತ ನಿರ್ದೇಶಕ ರೋಹನ್ ಮೊಂತೆರೋ ಮತ್ತು ತೊಕ್ಕೊಟ್ಟಿನ ಫೈನಾನ್ಸ್ ಮಾಲಕ ಹರೀಶ್ ಅವರಿಗೆ ವಿಶ್ವನಾಥ ಶೆಟ್ಟಿ 1.15 ಕೋಟಿ ರೂಪಾಯಿಗಳನ್ನು ವಂಚಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಟ್ಟಡ ನಿರ್ಮಾಣ ಸಂಸ್ಥೆಗೆ 300 ಕೋಟಿ ರೂಪಾಯಿ ಸಾಲ ತೆಗೆಸಿಕೊಡುವುದಾಗಿ ನಂಬಿಸಿ ವಿಶ್ವನಾಥ್ ಶೆಟ್ಟಿ ಮತ್ತು ಮುಂಬಯಿಯ ಕದಂ ಅವರು ಸೇರಿ ರೋಹನ್ ಮತ್ತು ಹರೀಶ್ ಅವರಿಂದ 1.15 ಕೋಟಿ ರೂಪಾಯಿಗಳನ್ನು ಮುಂಗಡ ಪಡೆದು ಬಳಿಕ ಹಣಕಾಸು ನೆರವು ಒದಗಿಸದೆ ವಂಚನೆ ಮಾಡಿದ್ದಾರೆ ಎಂದು ದೂರು ದಾಖಲಾಗಿತ್ತು.

Read More

ಬೆಳ್ತಂಗಡಿ:ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಉಜಿರೆ ಎಸ್.ಡಿ.ಎಂ.ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್(24) ಪ್ರತಿಭಾನ್ವಿತೆಯಾಗಿದ್ದರು.ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿಗೆ ಇವರು ವಿವಾಹವಾಗಿ ಒಂದು ವರ್ಷದಿಂದ ಚಿಕ್ಕಮಗಳೂರಿನ ಪತಿ ಮನೆಯಲ್ಲಿದ್ದರು. ಎದೆನೋವಿನಿಂದ ಮೊದಲು ಅವರಿಗೆ ಬನ್ಕಲ್ ನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.ಅಲ್ಲಿ ಹೃದಯಾಘಾತ ದೃಢಪಟ್ಟ ಹಿನ್ನೆಲೆ ನಿನ್ನೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಸಾಲಿಯತ್ ನಿಧನದಿಂದ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ. ಸಾಲಿಯತ್ ಅವರು ಉತ್ತರಪ್ರದೇಶದಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಗೆಲ್ಲುವಲ್ಲಿ ಪಾತ್ರ ವಹಿಸಿದ್ದರು.

Read More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆ ಹಲವರ ಮನೆ, ಕಚೇರಿಗಳ ಮೇಲೆ ದಾಳಿಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದರು ಎಂಬ ಆರೋಪದ ಮೇಲೆ NIA ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಹವಾಲಾ ಫಂಡಿಂಗ್, ಭಯೋತ್ಪಾದಕ ಕೃತ್ಯಕ್ಕೆ ಗಲ್ಪ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ ಎನ್ನಲಾಗಿದೆ.ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.ಇತ್ತೀಚಗೆ ಹವಾಲಾ ವಿಚಾರದಲ್ಲಿ ಹಲವರ ಬಂಧನ ನಡೆದಿತ್ತು.

Read More