Author: main-admin

ಪುತ್ತೂರು :  ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೊಲೀಸರು ಕಾರ್ಯಾಚರಣೆ ನಡೆಸಿ 4 ಅಡಿಕೆ ಕಳ್ಳರನ್ನು ಬಂಧಿಸಿದ್ದು ಕಾವು ಕೊಯ್ಲ ನಿವಾಸಿ ಶ್ರವಣ್ ಕೆ, ಜಯಚಂದ್ರ,ಅಶೋಕ, ಪುನೀತ್ ಬಂಧಿತ ಆರೋಪಿಗಳಾಗಿದ್ದಾರೆ. ಪುತ್ತೂರು ತಾಲೂಕು ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿರುವ ನವೀನ ಕುಮಾರ ರೈ ರವರ ಹಳೆಯ ಮನೆಯ ಕೊಟ್ಟಿಗೆಯ ಅಟ್ಟದಲ್ಲಿದ್ದ ಎನ್ ಕೆ ಆರ್ ಎಂದು ಮಾರ್ಕ್ ಮಾಡಿರುವ ಸುಮಾರು 23 ಗೋಣಿ ಸುಲಿಯದ ಅಡಿಕೆಯನ್ನು ಕಳವು ಮಾಡಿಕೊಂಡು ಹೋಗಿದ್ದು, ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣಾ ಅ ಕ್ರ 105/2023 ಕಲಂ:454, 457, 380 ಐಪಿಸಿಯಂತೆ ಪ್ರಕರಣ ದಾಖಲಾಗಿತ್ತು. ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಖಚಿತ ಮಾಹಿತಿ ಮೇರೆಗೆ ಪತ್ತೆ ಹಚ್ಚಿದ್ದು, ಆರೋಪಿಗಳನ್ನು ಬಂದಿಸಿ, ಸುಮಾರು ರೂ 1,55,925/- ಮೌಲ್ಯದ ಅಡಿಕೆ ಹಾಗೂ ಕಳವು ಮಾಡಲು ಉಪಯೋಗಿಸಿದ ಸ್ವಿಪ್ಟ್ ಕಾರು ಮತ್ತು ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿರುತ್ತಾರೆ. ವಶಪಡಿಸಿಕೊಂಡಿರುವ ಸೊತ್ತುಗಳ ಒಟ್ಟು ಮೌಲ್ಯ ಸುಮಾರು ರೂ 4,15,925/- ಆಗಿರುತ್ತದೆ.ಈ ಪ್ರಕರಣವನ್ನು…

Read More

ಮಂಗಳೂರು : ಮೂಡಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ. ಮೋಹನ್ ಆಳ್ವರ ತಂದೆ ಆನಂದ ಆಳ್ವ ಇಂದು ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. 106 ವರ್ಷ ಪ್ರಾಯದ ಆನಂದ ಆಳ್ವ ಇಳಿ ವಯಸ್ಸಿನಲ್ಲೂ ಅತ್ಯಂತ ಕ್ರೀಯಾಶೀಲರಾಗಿ ಗುರುತಿಸಿಕೊಂಡಿದ್ದರು. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಯುವ ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲೂ ಮುಂಚೂಣಿಯಲ್ಲಿ ಭಾಗವಹಿಸುವ ಕೆಲವೇ ಮಂದಿಗಳಲ್ಲಿ ಆನಂದ ಆಳ್ವರೂ ಒಬ್ಬರಾಗಿದ್ದಾರೆ. ಮಕ್ಕಳಾದ ಸೀತಾರಾಮ, ಬಾಲಕೃಷ್ಣ, ಡಾ.ಮೋಹನ್ ಆಳ್ವ, ಮೀನಾಕ್ಷಿ ಸೇರಿದಂತೆ ಅಸಂಖ್ಯಾತ ಬಂಧು-ಮಿತ್ರರನ್ನು ಅಗಲಿರುವ ಆನಂದ ಆಳ್ವ ನಿಧನಕ್ಕೆ ಗಣ್ಯರು ಕಂಬನಿ ಮಿಡಿದ್ದಾರೆ. ದೇವಸ್ಥಾನಗಳ ಜೀರ್ಣೋದ್ಧಾರ ಸೇರಿದಂತೆ ಹಲವು ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಆನಂದ ಆಳ್ವ ಮೂಡಬಿದಿರೆ ಪರಿಸರದಲ್ಲಿ ಜನಾನುರಾಗಿಯಾಗಿ ಗುರುತಿಸಿಕೊಂಡಿದ್ದರು. ಪ್ರಗತಿಪರ ರೈತರೂ ಆಗಿದ್ದ ಆನಂದ ಆಳ್ವ ಕಷ್ಟಗಳಿಗೆ ಯಾವಾಗಲೂ ವಿಚಲಿತರಾಗಿರಲಿಲ್ಲ 1974 ರಲ್ಲಿ ಜಾರಿಗೆ ಬಂದ ಭೂ ನ್ಯಾಯಮಂಡಳಿ ಕಾಯಿದೆಯು ಕೃಷಿ ಕೈಗಳ ತೀವ್ರ ಕೊರತೆಯನ್ನು ಉಂಟುಮಾಡಿತು. ಆ ಸಮಯದಲ್ಲಿ, ಅವರು 15 ಜೋಡಿ…

Read More

ಕಾರ್ಕಳ: ಹಿರಿಯ ಪತ್ರಕರ್ತ ,ಸಾಹಿತಿ ಶೇಖರ್ ಅಜೆಕಾರ್(54) ಅವರಿಂದು ಹೃದಯಾಘಾತದಿಂದ ನಿಧನರಾದರು. ಅವರು 22 ಪುಸ್ತಕಗಳನ್ನು ಬರೆದಿದ್ದಾರೆ. ಮಕ್ಕಳ ಸಾಹಿತ್ಯ ಸಮ್ಮೇಳನಗಳನ್ನು ಸಂಘಟಿಸಿ ಸಾಹಿತ್ಯ ಕ್ಷೇತ್ರಕ್ಕೆ ಕೊಡುಗೆ ನೀಡುತ್ತಿದ್ದರು. ಶೇಖರ್ ಅವರು ಕುಂದಪ್ರಭ ವಾರಪತ್ರಿಕೆಯಲ್ಲಿ ಬರಹಗಾರರಾಗಿ ತಮ್ಮ ಪ್ರಯಾಣ ಪ್ರಾರಂಭಿಸಿದರು. ಮುಂಬೈನ ‘ಕರ್ನಾಟಕ ಮಲ್ಲ’, ಜನವಾಹಿನಿ, ಡೈಜಿವರ್ಲ್ಡ್, ಕನ್ನಡಪ್ರಭ ಮತ್ತು ಉಷಾ ಕಿರಣಗಳಲ್ಲೂ ಸೇವೆ ಸಲ್ಲಿಸಿದ್ದಾರೆ. 10 ವರ್ಷಗಳ ಕಾಲ ಪತ್ರಕರ್ತರ ವೇದಿಕೆ ಬೆಂಗಳೂರಿನ ಉಡುಪಿ ಶಾಖೆಯ ಉಪಾಧ್ಯಕ್ಷರೂ ಆಗಿದ್ದರು. ಸಂಗೊಳ್ಳಿ ರಾಯಣ್ಣ ಪ್ರಶಸ್ತಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪ್ರಶಸ್ತಿ 2019, ವಿಶ್ವ ದರ್ಶನ ಸಾಹಿತ್ಯ ಪ್ರಶಸ್ತಿ 2019, ಶಿಖಾ ಭಾರತ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಪತ್ರಿಕೋದ್ಯಮಕ್ಕೆ ನೀಡಿದ ಕೊಡುಗೆಗಾಗಿ 1995 ರಲ್ಲಿ ಪ್ರಶಸ್ತಿ ಲಭಿಸಿದೆ.

Read More

ಉಡುಪಿ: ಕರಾವಳಿಯ ಪ್ರಸಿದ್ಧ ‘ಆಭರಣ’ ಚಿನ್ನದ ಮಳಿಗೆಗಳ ಮೇಲೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಕರಾವಳಿಯ ಅನೇಕ ಭಾಗಗಳಲ್ಲಿ ತನ್ನ ಶೋರೂಮ್ ಹೊಂದಿರುವ ಪ್ರಸಿದ್ಧ ಚಿನ್ನದ ಮಳಿಗೆ ಇದಾಗಿದ್ದು ಹೊರ ಜಿಲ್ಲೆಗಳಲ್ಲೂ ಚಿನ್ನದ ಮಳಿಗೆಗಳನ್ನು ಹೊಂದಿದೆ.ಇಂದು ಬೆಳಿಗ್ಗೆ ಉಡುಪಿ, ಕಾರ್ಕಳ, ಕುಂದಾಪುರ, ಪುತ್ತೂರು, ಪಡುಬಿದ್ರಿ, ಬ್ರಹ್ಮಾವರ ಸೇರಿದಂತೆ ಹಲವೆಡೆ ದಾಳಿ ನಡೆಸಲಾಗಿದೆ.ಏಕಕಾಲದಲ್ಲಿ ಆಭರಣದ ಅನೇಕ ಮಳಿಗೆಗಳಿಗೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

Read More

ಬಂಟ್ವಾಳ: ಗ್ರಾಮ ಪಂಚಾಯತ್ ಗೆ ಯಾವುದೇ ಮಾಹಿತಿ ನೀಡದೆ ಗ್ರಾಮಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿದ್ದಲ್ಲದೆ,ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕಾಗಿ ಎಂಟು ಮಂದಿ ಗ್ರಾಮಪಂಚಾಯತ್ ಸದಸ್ಯರ ಮೇಲೆ ಕಾನೂನು ಕ್ರಮಕ್ಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯೊರ್ವರು ದೂರು ನೀಡಿದ ಘಟನೆ ಸಜೀಪ ಮುನ್ನೂರು ಎಂಬಲ್ಲಿ ನಡೆದಿದೆ. ಸಜೀಪಮುನ್ನೂರು ಗ್ರಾ.ಪಂ.ನ ಪಿಡಿಒ ಲಕ್ಷ್ಮಣ್ ಎಂಬವರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಇಲ್ಲಿನ ಎಸ್.ಡಿ.ಪಿ.ಈ ಐ.ಬೆಂಬಲಿತ ಎಂಟು ಮಂದಿ ಸದಸ್ಯರುಗಳು ಗ್ರಾಮಪಂಚಾಯತ್ ಗೆ ಯಾವುದೇ ಮುನ್ನೆಚ್ಚರಿಕೆ ನೀಡದೆ ಮುತ್ತಿಗೆ ಹಾಕಿದ್ದರು. ಅಲ್ಲದೆ ಪಂಚಾಯತ್ ಸಿಬ್ಬಂದಿಗಳಾದ ಮೀನಾಕ್ಷಿ, ಮಹಮ್ಮದ್ ಹಾರಿಶ್,ನಳಿನಿ,ಸುಮನಾ ರವರನ್ನು ಕಚೇರಿಯೊಳಗೆ ಹೋಗದಂತೆ ತಡೆ ಹಿಡಿದು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು.ಜೊತೆಗೆ ಕಚೇರಿಯ ಬೀಗದ ಕೀಯನ್ನು ಬಲವಂತವಾಗಿ ಕಸಿದುಕೊಂಡಿರುವುದಾಗಿಯೂ ದೂರಿನಲ್ಲಿ ತಿಳಿಸಿದ್ದಾರೆ.ಗ್ರಾಮ ಪಂಚಾಯತ್ ಸದಸ್ಯರಾದ ಅಬುಬಕ್ಕರ್ ಸಿದ್ದೀಕ್, ಜಮಾಲುದ್ದೀನ್, ಫಾತಿಮಾ ಸೌನ್,ಪೌಝಿಯಾ,ಸಬೀನಾ, ರಜಿಯಾ, ಸಾಜಿದ್, ವಹಿದಾಬಾನು ಎಂಬವರು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಎಲ್ಲರ ಮೇಲೆ ಕಾನೂನು ಕ್ರಮಕೈಗೊಳ್ಳುವಂತೆ ಪಿಡಿಒ ಲಕ್ಷ್ಮಣ್ ಅವರು ನಗರ ಪೋಲೀಸ್ ಠಾಣೆಗೆ ನೀಡಿದ ದೂರಿನಲ್ಲಿ…

Read More

ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಉಳ್ಳಾಲ ನೇತ್ರಾವತಿ ಸೇತುವೆಯಲ್ಲಿ ಅನಾಥ ಕಾರೊಂದು ಪತ್ತೆಯಾಗಿದ್ದು, ಕಾರನ್ನು ಚಲಾಯಿಸಿಕೊಂಡು ಬಂದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಕಾರನ್ನು ಪರಿಶೀಲಿಸಿದಾಗ ಚಿಕ್ಕಮಗಳೂರು ಜಿಲ್ಲೆಯ ವ್ಯಕ್ತಿಯೊಬ್ಬರ ಕೆಲವು ಗುರುತಿನ ಕಾರ್ಡ್‌ಗಳು ಕಂಡು ಬಂದಿವೆ. ಚಿಕ್ಕಮಗಳೂರಿನ ಮುಗುಳಬಳ್ಳಿಗೋಕುಲ್ ಫಾರ್ಮ್ ನಿವಾಸಿ ಬಿ.ಎಸ್ ಶಂಕರಗೌಡ ಎಂಬವರ ಪುತ್ರ ಪ್ರಸನ್ನ (37) ಎಂಬವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ . ಸೋಮವಾರ ಮಧ್ಯಾಹ್ನ ವೇಳೆ ತೊಕ್ಕೊಟ್ಟು ಕಡೆಯಿಂದ ಬಂದು ರಾ.ಹೆ.66 ರ ಬಳಿ ಕಾರು ನಿಲ್ಲಿಸಿ ತಡೆಬೇಲಿಯ ಬದಿಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.ಘಟನೆಯನ್ನು ಪ್ರತ್ಯಕ್ಷ ಕಂಡವರು ತಕ್ಷಣ ರಕ್ಷಣೆಗೆ ಓಡಿದರೂ ಅದಾಗಲೇ ನೀರುಪಾಲಾಗಿದ್ದರು ಎಂದು ಹೇಳಲಾಗಿದೆ ಘಟನಾ ಸ್ಥಳದಲ್ಲಿ ಕುತೂಹಲಿಗರು ಜಮಾಯಿಸಿದ್ದರಿಂದ ರಸ್ತೆ ಸಂಚಾರದಲ್ಲಿ ಕೆಲಕಾಲ ಅಡಚಣೆಯುಂಟಾಯಿತು.ಮನೆ ಮಂದಿ ಬಂದ ಬಳಿಕ ವಾಸ್ತವಾಂಶ ತಿಳಿಯಬಹುದಾಗಿದೆ ಎಂದು ಕಂಕನಾಡಿ ನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

Read More

ಉಜಿರೆ : ಅಪ್ಪ ಮತ್ತು ಮಗನ ನಡುವೆ ನಡೆದ ಗಲಾಟೆ ಅಪ್ಪ ಮಗನನ್ನು ಚೂರಿ ಇರಿದು ಕೊಲೆ ಮಾಡಿದ ಘಟನೆ ಉಜಿರೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಮೃತರನ್ನು ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರ್(75) ಅವರ ಪುತ್ರ ಜಗದೀಶ್(30) ಎಂದು ಗುರುತಿಸಲಾಗಿದ್ದು,ಕೊಲೆ ಮಾಡಿದ ಆರೋಪಿ ಕಷ್ಣಯ್ಯ ಆಚಾರ್. ಯಾವುದೋ ವಿಚಾರಕ್ಕೆ ತಂದೆ-ಮಗನ ನಡುವೆ ಜಗಳ ನಡೆದಿದ್ದು, ಈ ಜಗಳ ವಿಕೋಪಕ್ಕೆ ತೆರಳಿ ಕೃಷ್ಣಯ್ಯ ಆಚಾರ್ ಮನೆಯ ಕೋಣೆಯೊಳಗೆ ಹೋಗಿ ಚಿಲಕ ಹಾಕಿದ್ದಾರೆ ಮಗ ಜಗದೀಶ ಕಾಲಿನಿಂದ ತುಳಿದು ಬಾಗಿಲು ತೆಗೆಯಲು ಪ್ರಯತ್ನಿಸಿದ್ದಾನೆ. ಇದರಿಂದ ಸಿಟ್ಟಿಗೆದ್ದ ಕೃಷ್ಣಯ್ಯ ಆಚಾರ್ ಅಲ್ಲೇ ಕಪಾಟಿನಲ್ಲಿದ್ದ ಚೂರಿಯನ್ನು ತೆಗೆದು ಹೊರಬಂದು ಜಗದೀಶನಿಗೆ ಎಡ ಭುಜಕ್ಕೆ ಹಾಗೂ ಎಡ ಎದೆ ಭಾಗಕ್ಕೆ ಚೂರಿಯಿಂದ ಇರಿದಿದ್ದಾರೆ. ಇರಿತಕ್ಕೆ ಒಳಗಾಗಿ ಕುಸಿದು ಬಿದ್ದು ಜಗದೀಶ್ ಮೃತಪಟ್ಟಿದ್ದಾರೆನ್ನಲಾಗಿದೆ.<br>ಈ ಬಗ್ಗೆ ಜಗದೀಶನ ಅಣ್ಣ ಗಣೇಶ್ ನೀಡಿರುವ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಉಡುಪಿ: ವಾಣಿಜ್ಯ ತೆರಿಗೆ ಅಧಿಕಾರಿಯ ಕುಂದಾಪುರದ ಮನೆ ಮೇಲೆ ಇಂದು(ಅ.30) ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ. ಕುಂದಾಪುರದ ಎಲ್.ಐ.ಸಿ. ರಸ್ತೆಯಲ್ಲಿರುವ ವಾಣಿಜ್ಯ ತೆರಿಗೆ ಸಹಾಯಕ ಅಭಿಯಂತರ ಅಧಿಕಾರಿ ರಾಜೇಶ್ ಬೆಳಕೇರಿ ಎಂಬುವರ ಮನೆಗೆ ನಸುಕಿನಲ್ಲಿಯೇ ದಾಳಿ ನಡೆಸಿರುವ ಲೋಕಾ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆ ಅಂಕೋಲದ ರಾಜೇಶ್ ಬೆಳ್ಕೆರೆಯವರಾಗಿತುವ ರಾಜೇಶ್ ಕುಂದಾಪುರದ ಎಲ್.ಐ.ಸಿ. ರಸ್ತೆಯ ವಡೇರಹೋಬಳ ಅಡ್ಡರಸ್ತೆಯಲ್ಲಿ ಜಾಗ ಖರೀದಿಸಿ ಬೃಹತ್ ಮನೆ ನಿರ್ಮಿಸಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಒಟ್ಟು ಎರಡು ಕಡೆ ಏಕಕಾಲದಲ್ಲಿ ದಾಳಿ ನಡೆಸಿದ್ದು, ಅಂಕೋಲದ ಬೇಳ್ಕೆರೆಯಲ್ಲಿಯೂ ದಾಳಿ ನಡೆಸಿದ್ದಾರೆ.

Read More

ಮೂಡುಬಿದಿರೆ: ಉತ್ತರ ಕನ್ನಡ ಮುರುಡೇಶ್ವರ ಠಾಣಾ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡದ ಮೂಡುಬಿದಿರೆಯಿಂದ ಬೈಕ್‌ ಕಳವು ಮಾಡಿರುವ ಅಂತರ್‌ ಜಿಲ್ಲಾ ಚೋರರನ್ನು ಮೂಡುಬಿದಿರೆ ಪೊಲೀಸ್‌ ನಿರೀಕ್ಷಕ ಸಂದೇಶ್‌ ಪಿ.ಜಿ. ನೇತೃತ್ವದ ಪೊಲೀಸರ ತಂಡ ಬಂಧಿಸಿದೆ. ಆರೋಪಿಗಳಿಂದ ಕಳವು ಮಾಡಿದ 2 ಬೈಕುಗಳು ಸೇರಿ ಒಟ್ಟು 1.80 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ತುಮಕೂರು ಜಿಲ್ಲೆಯ ಆಕಾಶ್‌ ಕಲ್ಕಿ ಹಾಗೂ ವೀರೇಂದ್ರ ಬಂಧಿತ ಆರೋಪಿಗಳಾಗಿದ್ದಾರೆ. ಮಹಾವೀರ ಕಾಲೇಜಿನ ಎದುರು ವಾಹನ ತಪಾಸಣೆ ನಡೆಸುತ್ತಿರುವ ಸಂದರ್ಭ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಇಬ್ಬರನ್ನು ನಿಲ್ಲಿಸಲು ಹೇಳಿದಾಗ ನಿಲ್ಲಿಸದೇ ಮರಳಿ ಹೋಗುವ ಯತ್ನದ ವೇಳೆ ಪೊಲೀಸ್‌ ನಿರೀಕ್ಷಕ ಸಂದೇಶ್‌ ಹಾಗೂ ಸಿಬಂದಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಆಗ ಮುರುಡೇಶ್ವರ ಮತ್ತು ಜೈನ್‌ ಪಿ.ಯು. ಕಾಲೇಜಿನ ಎದುರು ನಿಲ್ಲಿಸಿದ ಮೋಟಾರು ಬೈಕ್‌ ಕಳ್ಳತನ ಮಾಡಿರುವುದು ಬೆಳಕಿಗೆ ಬಂತು. ಈ ಎರಡು ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್ವಾಲ್‌ ಇವರ ಮಾರ್ಗದರ್ಶನದಂತೆ,…

Read More

ಬ್ರಹ್ಮಾವರ: ದಿಢೀರ್ ಬಂದ ಬಾರೀ ಸಿಡಿಲು ಮಳೆ ಸಂದರ್ಭ ಸಿಡಿಲು ಬಡಿದು ಯುವಕನೋರ್ವ ಮೃತಪಟ್ಟ ಘಟನೆ ಆವರ್ಸೆ ಸಮೀಪ ಕಿರಾಡಿಯಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಸ್ಥಳೀಯ ಕಿರಾಡಿ ಹಂಚಿನಮನೆ ನಿವಾಸಿ, ಬಾಬಣ್ಣ ಶೆಟ್ಟಿ ಹಾಗೂ ಬೇಬಿ ಶೆಡ್ತಿಯವರ ಪುತ್ರ ಪ್ರಮೋದ್ ಶೆಟ್ಟಿ ( 24) ಮೃತ ಯುವಕ. ಈತ ಮನೆಯ ಹೊರೆಗೆ ಮೊಬೈಲ್‌ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಸಿಡಿಲು ಬಡಿದು ಗಂಭೀರವಾಗಿ ಗಾಯಗೊಂಡಿದ್ದು, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಯುವಕ ಬ್ರಹ್ಮಾವರದ ಬಟ್ಟೆ ಯಂಗಡಿಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸೌಮ್ಯ ಸ್ವಭಾವದ ನಾಗಿದ್ದ ಈತ ವಾಲಿಬಾಲ್ ಮುಂತಾದ ಕ್ರೀಡೆಯಲ್ಲಿ ಆಸಕ್ತಿಯಿಂದ ಭಾಗವಹಿಸುತ್ತಿದ್ದ. ಇಬ್ಬರು ಸಹೋದರರನ್ನು ಅಗಲಿದ್ದಾನೆ.

Read More