Author: main-admin

ಸುಳ್ಯ : ಯುವಕನೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಗುತ್ತಿಗಾರಿನಲ್ಲಿ ನಡೆದಿದೆ.ಸುಳ್ಯ ಗುತ್ತಿಗಾರಿನ ಆಚಳ್ಳಿಯ ಸಿರಿಯಾಕ್ ಮ್ಯಾಥ್ಯೂ ಎಂಬವರ ಮಗ ಸೈಬಿನ್ ಆತ್ಮಹತ್ಯೆಗೆ ಮಾಡಿಕೊಂಡ ಯುವಕ.ಸೈಬಿನ್ ನಿನ್ನೆ ಗುತ್ತಿಗಾರು ಪೇಟೆಗೆ ಆಗಮಿಸಿದ್ದು, ಎಲ್ಲರ ಜೊತೆ ಸಂತೋಷದಿಂದ ಮಾತನಾಡಿದ್ದ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಸೈಬಿನ್ ಆತ್ಮಹತ್ಯೆ ವಿಚಾರ ತಿಳಿಯುತ್ತಿದ್ದಂತೆ ಸ್ಥಳೀಯರು ಅವರ ಹಳೆ ಮನೆಯ ಪಕ್ಕ ಜಮಾಯಿಸಿದ್ದು, ಪೊಲೀಸರು ಆಗಮಿಸಿ ಜನರನ್ನು ಚದುರಿಸಿದರು ಎಂದು ವರದಿಯಾಗಿದೆ.

Read More

ಮಂಗಳೂರು: ಕುಂದಾಪುರದಿಂದ ಮೈಸೂರು- ಮಂಡ್ಯಕ್ಕೆ ತೆರಳುವ ಖಾಸಗಿ ಮೋಟಾಸ್೯ ಬಸ್ ಚಾಲಕನ ಧಾವಂತಕ್ಕೆ ಒಂದು ಹಸು ಸಾವನ್ನಪ್ಪಿ, ಇನ್ನೊಂದು ಗಂಭೀರ ಗಾಯಗೊಂಡಿರುವ ಘಟನೆ ಕೋಡಿಕಲ್ ಜಂಕ್ಷನ್‌ನಲ್ಲಿ ಶುಕ್ರವಾರ ತಡರಾತ್ರಿ ವೇಳೆ ಸಂಭವಿಸಿದೆ. ಅಪಘಾತ ನಡೆಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳೀಯರು ಹಾಗೂ ವಾಹನ ಸವಾರರು ಬಸ್ ತಡೆದು ಚಾಲಕನನ್ನು ತರಾಟೆಗೆತ್ತಿಕೊಂಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Read More

ಮಂಗಳೂರು : ದಶಕಗಳ ಬಳಿಕ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರ ಕನಸು ನನಸಾಗುತ್ತಿದೆ. ಇದುವರೆಗೆ ಬಾಡಿಗೆ ಕಟ್ಟಡಗಳಲ್ಲೇ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಠಾಣೆ ಇದೀಗ ಸ್ವಂತ ಕಟ್ಟಡಕ್ಕೆ ಸ್ಥಳಾಂತರವಾಗುತ್ತಿದೆ. ಮಂಗಳೂರು ಹೊರವಲಯದ ವಾಮಾಂಜೂರಿನಲ್ಲಿ ಸುಸಜ್ಜಿತ ಸ್ವಂತ ಕಟ್ಟಡ ನಿರ್ಮಾಣಗೊಂಡಿದ್ದು. ಇದೇ ಅಕ್ಟೋಬರ್ 29 ರಂದು ಭಾನುವಾರದಂದು ನೂತನ ಪೊಲೀಸ್ ಠಾಣಾ ಕಟ್ಟಡ ಲೋಕಾರ್ಪಣೆಗೊಳ್ಳಲಿದೆ, ರಾಜ್ಯ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್, ಜಿಲ್ಲಾ ಉಸ್ತುವರಿ ಸಚಿವರಾದ ದಿನೇಶ್ ಗುಂಡೂರಾವ್, ವಿಧಾನ ಸಭಾ ಸಭಾಪತಿ ಯು ಟಿ ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಾ,ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವೇದವ್ಯಾಸ್ ಕಾಮತ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಅಲೋಕ್ ಮೋಹನ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪಶ್ಚಿಮ ವಲಯ ಐಜಿಪಿ ಡಾ, ಚಂದ್ರಗುಪ್ತಾ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ , ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಸಹಿತ…

Read More

ಬೆಳ್ತಂಗಡಿ: ಬೆಳ್ಳಾರೆಯ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಸುಳಿವು ನೀಡಿದವರಿಗೆ ಎರಡು ಲಕ್ಷ ರೂಪಾಯಿ ಘೋಷಣೆ ಮಾಡಿ ಬೆಂಗಳೂರು ಎನ್.ಐ.ಎ ಅಧಿಕಾರಿಯಳು ಸಾರ್ವಜನಿಕ ಪ್ರಕಟಣೆ ಹೊರಡಿಸಿದೆ. 2022 ಜುಲೈ 26ರಂದು ಹತ್ಯೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ನಂಬರ್ 23 ಆಗಿರುವ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್(32) ಎಂಬಾತ ಕೊಲೆ ಮಾಡಿದ ಆರೋಪಿಗಳು ಪರಾರಿಯಾಗಲು ಸಹಕರಿಸಿದ ಹಿನ್ನೆಲೆಯಲ್ಲಿ ಎನ್.ಐ.ಎ ಅಧಿಕಾರಿಗಳು ಈ ಮೊದಲೇ ಪಡಂಗಡಿಯಲ್ಲಿರುವ ಮನೆಗೆ ದಾಳಿ ಮಾಡಿದ್ದರು.ಈ ವೇಳೆ ನೌಷದ್ ಪ್ರಕರಣ ನಡೆದ ಬಳಿಕ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿತ್ತು.ಎನ್.ಐ.ಎ ಅಧಿಕಾರಿಗಳು ನೋಟಿಸ್ ನೀಡಿ ಹೋಗಿದ್ದರು. ಇದೀಗ ಬೆಂಗಳೂರು ಎನ್.ಐ.ಎ ಅಧಿಕಾರಿಗಳು ನೌಷದ್ ಬಗ್ಗೆ ಸುಳಿವು ನೀಡಿದವರಿಗೆ ಎನ್.ಐ.ಎ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಲ್ಲಿ ಮಾಹಿತಿ ಗೌಪ್ಯವಾಗಿಟ್ಟು ಆ ವ್ಯಕ್ತಿಗೆ ಎರಡು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿರುವುದಾಗಿ ಎನ್.ಐ.ಎ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

Read More

ಚಿಕ್ಕಮಗಳೂರು: ರಾಜ್ಯದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಹುಲಿ ಉಗುರು ಕೇಸ್ ಬೆಳಕಿಗೆ ಬಂದ ನಂತ್ರ, ದಿನಕ್ಕೊಬ್ಬರಂತೆ ಹುಲಿ ಉಗುರು ಧರಿಸಿದ ಪ್ರಕರಣಗಳು ಹೊರ ಬರುತ್ತಿವೆ. ಇದೀಗ ಹುಲಿ ಉಗುರು ಪೆಂಡೆಂಟ್ ಧರಿಸಿದ್ದಂತ ಚಿಕ್ಕಮಗಳೂರಿನ ಕಳಸದ DRFO ದರ್ಶನ್ ಅನ್ನು ಸರ್ಕಾರ ಆಮಾನತುಗೊಳಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸದ ಉಪ ವಲಯ ಅರಣ್ಯಾಧಿಕಾರಿ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಂತ ದರ್ಶನ್ ಹುಲಿ ಉಗುರು ಧರಿಸಿದ್ದ ಪೋಟೋ ವೈರಲ್ ಆಗಿತ್ತು. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅರೆನೂರು ಗ್ರಾಮದ ಸುಪ್ರೀತ್, ಅಬ್ದುಲ್ ಎಂಬುವರು ಅರಣ್ಯ ಇಲಾಖೆಗೆ ಲಿಖಿತ ದೂರು ನೀಡಲಾಗಿತ್ತು. ಡಿ ಆರ್ ಎಫ್ ಓ ದರ್ಶನ್ ವಿರುದ್ಧದ ದೂರನ್ನು ಗಂಭೀರವಾಗಿ ಪರಿಗಣಿಸಿದಂತ ಕೊಪ್ಪ ಡಿಎಫ್‌ಓ ನಂದೀಶ್ ಅವರು, ಈ ಸಂಬಂಧ ತನಿಖೆ ನಡೆಸಿ, ಡಿಆರ್ ಎಫ್ ಓ ದರ್ಶನ್ ಹುಲಿ ಉಗುರು ಪೆಂಡೆಂಟ್ ಧರಿಸಿದ್ದು ಸಾಬೀತಾದ ಹಿನ್ನಲೆಯಲ್ಲಿ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.

Read More

ಮಂಗಳೂರು: ಇತ್ತೀಚೆಗೆ ಸೈಬರ್ ಫ್ರಾಡ್ ವಿವಿಧ ರೀತಿಯಲ್ಲಿ ನಡೆಯುತ್ತಿದೆ‌. ಜನರನ್ನು ವಂಚನೆಗೊಳಿಸಿ ಸುಲಭವಾಗಿ ದುಡ್ಡು ಮಾಡುತ್ತಿದ್ದ ಸೈಬರ್ ದಂಧೆಕೋರರು ಇದೀಗ ಮಂಗಳೂರು ಪೊಲೀಸ್ ಕಮಿಷನರ್ ಹೆಸರಲ್ಲಿಯೇ ನಕಲಿ ವಾಟ್ಸಾಪ್ ಸೃಷ್ಟಿಸಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ವಾಟ್ಸಾಪ್‌ನಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಫೋಟೋವನ್ನೇ ದುರ್ಬಳಕೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದಾರೆ. ಬಳಿಕ ಅನುಪಮ್ ಅಗರ್ವಾಲ್ ಹೆಸರಿನಲ್ಲಿ ಹಲವರಿಗೆ ವಾಟ್ಸಾಪ್ ಸಂದೇಶ ಕಳಿಸಿ, ತಾನು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್. ಆಸ್ಪತ್ರೆಯಲ್ಲಿದ್ದೇನೆ. ಯುಪಿಐ ಕೆಲಸ ಮಾಡುತ್ತಿಲ್ಲ, ಸ್ವಲ್ಪ ಹಣ ಇದ್ದರೆ ಕೊಡಿ, ಒಂದು ಗಂಟೆಯಲ್ಲಿ ವಾಪಾಸ್ ಕೊಡುತ್ತೇನೆ” ಎಂದು ವಾಟ್ಸಾಪ್ ಸಂದೇಶ ಕಳುಹಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ. ಮಂಗಳೂರಿನ ಹಲವರಿಗೆ ಕಮಿಷನರ್ ಹೆಸರಿನಲ್ಲಿ ಇದೇ ರೀತಿಯಲ್ಲಿ ಸಂದೇಶ ರವಾನೆಯಾಗಿದೆ. ಮಂಗಳೂರು ಕಮಿಷನರ್ ಅಧಿಕೃತ ವಾಟ್ಸಾಪ್ ಖಾತೆಯ ಫೋಟೋ ಬಳಸಿ ನಕಲಿ ಖಾತೆ ಸೃಷ್ಟಿಸಲಾಗಿದೆ. 8319051976 ಮೊಬೈಲ್ ಸಂಖ್ಯೆಯಲ್ಲಿ ಈ ನಕಲಿ ವಾಟ್ಸಾಪ್ ಖಾತೆ ಸೃಷ್ಟಿಯಾಗಿದೆ. ನಕಲಿ ಖಾತೆ ಸೃಷ್ಟಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ…

Read More

ಮಂಗಳೂರು: ಕಾಮುಕನೊಬ್ಬ ಹೆಂಚು ತೆಗೆದು ಬೆಡ್ ರೂಂ ಗೆ ನುಗ್ಗಿ ಮಂಚದಡಿಯಲ್ಲಿ ಅಡಗಿ ಕುಳಿತು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಮಂಗಳೂರಿನ ಕೋಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಹರೇಕಳ ನಿವಾಸಿ ನೌಫಾಲ್ (38) ನನ್ನು ಬಂಧಿಸಲಾಗಿದೆ. ನಿನ್ನೆ ರಾತ್ರಿ ಮನೆಯೊಂದರ ಹಂಚು ತೆಗೆದು ಮನೆಯ ಬೆಡ್ ರೂಂಗೆ ನುಗ್ಗಿದ ನೌಫಾಲ್ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಹೆಂಚು ತೆಗೆದು ಒಳಗೆ ನುಗ್ಗಿದ ನೌಫಾಲ್ ಮಂಚದ ಅಡಿಯಲ್ಲಿ ಮಲಗಿದ್ದ. ರಾತ್ರಿ 10 ರ ಸುಮಾರಿಗೆ ತನ್ನ ಮಕ್ಕಳಿಬ್ಬರ ಜೊತೆ ಮಹಿಳೆ ಮಲಗಿದ್ದರು.ರಾತ್ರಿ 12.10 ರ ಸುಮಾರಿಗೆ ಮಹಿಳೆಗೆ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಮಹಿಳೆ ಕಿರುಚುತ್ತಾ ಲೈಟ್ ಹಾಕಿದಾಗ ಮೊಬೈಲ್ ಬಿಟ್ಟು ನೌಫಾಲ್ ಪರಾರಿಯಾಗಿದ್ದಾನೆ. ಮೊಬೈಲ್ ಆಧಾರದ ಮೇಲೆ ಬಂದಿದ್ದು ನೌಫಾಲ್ ಅಂತಾ ಗೊತ್ತಾಗಿದೆ. ಬಳಿಕ ಆತನನ್ನು ಬಂಧಿಸಲಾಗಿದೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Read More

ಮಂಗಳೂರು: ಬಿಗ್ ಬಾಸ್ ಸ್ಪರ್ಧಿಯೊಬ್ಬರು ಹುಲಿ ಉಗುರಿನ ಪೆಂಡೆಂಟ್ ಹಾಕಿಕೊಂಡು ಅರೆಸ್ಟ ಆದ ಬಳಿಕ ಇದೀಗ ಅರಣ್ಯ ಸಂರಕ್ಷಣಾ ಕಾಯಿದೆಯ ಬಗ್ಗೆ ಜನರಿಗೆ ಕುತೂಹಲ ಮೂಡಲಾರಂಭಿಸಿದೆ. ಈ ಬಗ್ಗೆ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರು ಕೂಡ ಜನರಿಗೆ ಅರಣ್ಯ ಕಾಯಿದೆ ಬಗ್ಗೆ ಅರಿವು ಮೂಡಿಸುವ ಅಗತ್ಯ ಇದೆ ಎಂದು ಹೇಳಿದ್ದಾರೆ. ಈ ನಡುವೆ ಹುಲಿ ಉಗುರು ಅಲ್ಲದೆ ಮನೆಯಲ್ಲಿ ನವೀಲು ಗರಿ ಇಟ್ಟುಕೊಳ್ಳುವುದು ಕೂಡ ಅರಣ್ಯ ಸಂರಕ್ಷಣಾ ಕಾಯಿದೆ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದೆ. ಒಂದು ಹುಲಿ ಉಗುರಿನ ಪೆಂಡೆಂಟ್ ಇದೀಗ ರಾಜ್ಯದಲ್ಲಿ ಭಾರೀ ಸದ್ದನ್ನು ಮಾಡಿದ್ದು, ಬಿಗ್ ಬಾಸ್ ಸ್ಪರ್ಧಿ ಅರೆಸ್ಟ್ ಆದ ಬೆನ್ನಲ್ಲೇ ಇದೀಗ ಹಲವು ನಟರು ರಾಜಕರಾಣಿಗಳಿಗೆ ಸಂಕಷ್ಟ ತಂದೊಡ್ಡಿದೆ. ಹಾಗೆಯೇ ವನ್ಯಜೀವಿ ನವಿಲು ಸಾಕುವುದೂ ಅಪರಾಧ. ನವಿಲಿನ ಗರಿಯನ್ನೂ ಇಟ್ಟುಕೊಳ್ಳುವಂತಿಲ್ಲ. ಅರಣ್ಯದಂಚಿನ ಗ್ರಾಮದಲ್ಲಿದ್ದು, ನವಿಲು ಜನರ ಮನೆಯ ಆವರಣಕ್ಕೆ ಸ್ವ ಇಚ್ಛೆಯಿಂದ ಬಂದರೆ ಅಡ್ಡಿಯಿಲ್ಲ. ಆದರೆ, ಅದನ್ನು ಜನ ಸಾಕುವಂತಿಲ್ಲ . 1972ರ ವನ್ಯಜೀವಿ ಕಾಯ್ದೆ…

Read More

ಮಂಗಳೂರು: ದುಬೈಯ ಸಲಾವುದ್ದೀನ್ ಎಂಬಲ್ಲಿ ಕರಾವಳಿ ಮೂಲದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ. ಮೃತರನ್ನು ಕೂಳೂರು ಪಂಜಿಮೊಗರು ವಿದ್ಯಾನಗರ ನಿವಾಸಿ ಮುಹಮ್ಮದ್ ಎಂಬವರು ಪುತ್ರ ಅಖ್ತರ್(27) ಎಂದು ಗುರುತಿಸಲಾಗಿದೆ. ಅಖ್ತರ್ ಕಳೆದ 7 ತಿಂಗಳಿನಿಂದ ದುಬೈಯಲ್ಲಿ ದುಡಿಯುತ್ತಿದ್ದರು.ಭಾನುವಾರ ಕರ್ತವ್ಯ ಮುಗಿಸಿ ರೂಮಿನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅಖ್ತರ್ ಏಳದಿದ್ದಾಗ ಸಂಗಡಿಗರು ಪರಿಶೀಲಿಸಿದಾದ ಅವರು ನಿಧನರಾಗಿದ್ದರು ಎಂದು ತಿಳಿದುಬಂದಿದೆ.ಮೃತದೇಹವನ್ನು ಊರಿಗೆ ತರುವ ನಿಟ್ಟಿನಲ್ಲಿ ಕೆಸಿಎಫ್ ಸಂಘಟನೆಯ ಪದಾಧಿಕಾರಿಗಳು, ಸೌದಿಯಲ್ಲಿರುವ ಮೃತರ ಸಹೋದರ ಇರ್ಫಾನ್ ಸ್ಥಳಕ್ಕೆ ಆಗಮಿಸಿದ್ದು ಕ್ರಮ ಕೈಗೊಂಡಿದ್ದಾರೆ. ಮೃತರು ತಂದೆ, ತಾಯಿ, ಇಬ್ಬರು ಸಹೋದರರು, ಇಬ್ಬರು ಸಹೋದರಿಯರು ಹಾಗೂ ಬಂಧುವರ್ಗದವರನ್ನು ಅಗಲಿದ್ದಾರೆ.

Read More

ಕಾಪು: ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಪಾಡಿ ಮೂಡಬೆಟ್ಟು ಗ್ರಾಮದ ಕಲ್ಲಟ್ಟ ಎಂಬಲ್ಲಿ ಸಂಭವಿಸಿದೆ. ಕಲ್ಲಟ್ಟ ನಿವಾಸಿ ಆನಂದ ಪೂಜಾರಿ ಅವರ ಪುತ್ರಿ ಅನನ್ಯಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಶಂಕರಪುರ ಸೈಂಟ್ ಜೋನ್ ಪ.ಪೂ. ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಈಕೆ ರಾತ್ರಿ ತಂದೆ ತಾಯಿ ಮತ್ತು ಸಹೋದರನೊಂದಿಗೆ ಒಂದೇ ಕೋಣೆಯಲ್ಲಿ ಮಲಗಿದ್ದು, ಬಳಿಕ ಪಕ್ಕದ ಕೋಣೆಗೆ ಹೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಓದಿನಲ್ಲಿ ಚುರುಕಾಗಿದ್ದ ಅನನ್ಯ ಎಲ್ಲರೊಂದಿಗೂ ಅನ್ನೋನ್ಯವಾಗಿದ್ದು ಆತ್ಮಹತ್ಯೆಗೆ ನಿಖರ ಕಾರಣಗಳು ತಿಳಿದು ಬಂದಿಲ್ಲ. ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾಳೆ. ಕಾಪು ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Read More